Author: admin

ಬೆಂಗಳೂರು: ಇಂದು(ಜು.19) ಬೆಂಗಳೂರಿನಲ್ಲಿ ಐವರು ಶಂಕಿತ ಭಯೋತ್ಪಾದಕರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ಹಾಕಿ ಬಿಡಬಾರದು, ತನಿಖೆಯನ್ನು NIA ಗೆ ಕೊಡಬೇಕು ಮಾಜಿ ಗೃಹ ಸಚಿವ  ಜ್ಞಾನೇಂದ್ರ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಂಗಳೂರು ಸ್ಫೋಟ ಪ್ರಕರಣ ಕೂಡ ಕೂಲಂಕಷವಾಗಿ ತನಿಖೆ ಆಗಿತ್ತು. ಜನರಿಗೆ ಸುರಕ್ಷಿತವಾಗಿದ್ದೇವೆ ಎಂಬ ಭಾವನೆ ಬರಬೇಕು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ದೇಶವನ್ನು 60 ವರ್ಷ ಲೂಟಿ ಮಾಡಿದವರು ಇದೀಗ ಒಂದಾಗಿದ್ದಾರೆ. ಈ ಈಸ್ಟ್ ಇಂಡಿಯಾ ಕಂಪನಿಗೆ ಪ್ರಧಾನಿ ನರೇಂದ್ರ ಮೋದಿಯೇ ಟಾರ್ಗೆಟ್ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ವಿರೋಧ ಪಕ್ಷಗಳು ನಡೆಸಿದ ಸಭೆ ವಿಚಾರದ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯಿಸಿದ ಅವರು, ಕಳೆದ ಬಾರಿಯಂತೆ ಮತ್ತೆ ಬಿರುಸಿನ ಪ್ರಚಾರ ಶುರು ಮಾಡಿದ್ದಾರೆ. ತಮ್ಮ ಒಕ್ಕೂಟಕ್ಕೆ ಇಂಡಿಯಾ ಎಂಬ ಹೆಸರು ಇಟ್ಟುಕೊಂಡಿದ್ದಾರೆ. ಇದು ಭಾರತ ವರ್ಸಸ್ ಈಸ್ಟ್ ಇಂಡಿಯಾ ಕಂಪನಿ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ದೇಶದ ಜನ ಬಿಜೆಪಿಯವರಿಗೆ ಚಿಪ್ಪು ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಲೇವಡಿ ಮಾಡಿದ್ದಾರೆ. ಇಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷ. ರಾಜ್ಯದಲ್ಲಿ ನಾಲ್ಕು ವರ್ಷಗಳ ಬಿಜೆಪಿ ದುರಾಡಳಿತದಿಂದ ಜನ ಬೇಸತ್ತು, ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಬಿಜೆಪಿಯವರು ನಾಲ್ಕು ವರ್ಷ ಜನತೆಗೆ ಚಿಪ್ಪು ನೀಡಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಜನ ಆ ಪಕ್ಷಕ್ಕೆ ಚಿಪ್ಪು ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಗೆ ಜನ ಚಿಪ್ಪು ನೀಡುವುದು ಗ್ಯಾರಂಟಿ ಎಂದು ಛೇಡಿಸಿದರು. 9 ವರ್ಷದ ಹಿಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸವನ್ನು ಮಾಡಿಲ್ಲ. ವಿದೇಶದಿಂದ ಕಪ್ಪು ಹಣ ತರುತ್ತೇವೆ. ಉದ್ಯೋಗ ಸೃಷ್ಟಿ ಹಾಗೂ ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಸುಳ್ಳು ಆಶ್ವಾಸನೆ ನೀಡುತ್ತಾ ಜನತೆಗೆ ಮೋಸ ಮಾಡಿದ್ದಾರೆ. ದೇಶದಲ್ಲಿ ಹರಾಜುಕತೆ ಸೃಷ್ಟಿಯಾಗಿದ್ದು, ಆರ್ಥಿಕ…

Read More

ಮಂಗಳೂರು: ಮಂಗಳೂರಿನ ಸುರತ್ಕಲ್ ಬೀಚ್ ನಲ್ಲಿ ಅಪರೂಪದ ಮೀನು ಪತ್ತೆಯಾಗಿದೆ. ಸ್ಪಾಟೆಡ್ ಮೊರೈ ಈಲ್ಸ್ ಹೆಸರಿನ ಅಪರೂಪದ ಮೀನು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಪ್ಪು ಚುಕ್ಕೆಗಳಿಂದ ಆಕರ್ಷಣೀಯವಾಗಿ ಕಾಣುವ ಈ ಮೀನು, ದ್ವೀಪದ ಬಳಿಯ ಹವಳ ದಿಬ್ಬದಂತಹ ಸ್ಥಳಗಳಲ್ಲಿ ವಾಸ ಮಾಡುತ್ತದೆ. ಪ್ರಕ್ಷುಬ್ಧವಾದ ಕಡಲಿನ ಅಬ್ಬರದಿಂದ ತೀರಕ್ಕೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯವಾಗಿ ಆರೋಳಿ ಎಂದು ಕರೆಯಲ್ಪಡುವ ಈ ಮೀನನ್ನು ಸ್ಥಳೀಯರು ತಿನ್ನಲ್ಲ ಎಂದು ಮೀನುಗಾರರು ಮಾಹಿತಿ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷಗಳ ಸಭೆಯಲ್ಲಿ ಬಳಕೆ ಮಾಡಿಕೊಳ್ಳುತ್ತಿರುವ ಸರ್ಕಾರದ ಐಎಎಸ್, ಐಪಿಎಸ್ ಅಧಿಕಾರಿಗಳನ್ನ ವಿತ್ ಡ್ರಾ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ಬೆಂಗಳೂರಿನ ಕೆಂಗಲ್ ಗೇಟ್ ಬಳಿ ಮಾತನಾಡಿದ ಅವರು, ಇಷ್ಟು ದೊಡ್ಡ ಪ್ರಮಾಣದಲ್ಲಿ ವೆಚ್ಚ ಮಾಡ್ತಿರೋದು ಸರ್ಕಾರದ ವೆಚ್ಚ ಎಂದು ಆರೋಪಿಸಿದರು. ಬೇರೆ ರಾಜ್ಯದ ಸಿಎಂ ಬಂದಾಗ ಪ್ರೊಟೋಕಾಲ್ ಇರುತ್ತೆ, ಮಾಜಿ ಸಿಎಂಗಳಿಗೆ ಬೇರೆ, ಪಕ್ಷದ ನಾಯಕರಿಗೆ ಬೇರೆ ಇರುತ್ತದೆ. ಆದರೆ ಸರ್ಕಾರದ ಐಎಎಸ್, ಐಪಿಎಸ್ ಅಧಿಕಾರಿಗಳು ಎಸ್ಕಾರ್ಟ್ ಮಾಡ್ತಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ. ಅವರನ್ನೆಲ್ಲ ವಿತ್ ಡ್ರಾ ಮಾಡಬೇಕು ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಇಂದು ಹೆ. ದೇ. ಕೋಟೆ ತಾಲ್ಲೂಕಿನ ತಹಶೀಲ್ದಾರ್ ಕಛೇರಿಯಲ್ಲಿ ರೈತರ ಹಲವಾರು ಸಮಸ್ಯೆಗಳ ಕುರಿತು ತಹಶೀಲ್ದಾರ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ರೈತ ಮುಖಂಡರು ಚರ್ಚಿಸುತ್ತಾ, ಕೃಷಿ ಇಲಾಖೆಯಿಂದ ಸರಿಯಾದ ಸಮಯದಲ್ಲಿ ಬಿತ್ತನೆ ಬೀಜ ಸಿಗುತ್ತಿಲ್ಲ. ತಾರಕ ನೀರಾವರಿ ಇಲಾಖೆಯಿಂದ ಕಾಲುವೆಗಳನ್ನು ಹೂಳೆತ್ತಿಸಿ ಸಮರ್ಪಕವಾಗಿ ನೀರು ಹರಿಸುತ್ತಿಲ್ಲ. ಕಂದಾಯ ಇಲಾಖೆಯಿಂದ ಕೆರೆ ಒತ್ತುವರಿ ತೆರವುಗೊಳಿಸಿ ಕೊಡಬೇಕು. ಗೊಬ್ಬರದ ಅಂಗಡಿಗಳಲ್ಲಿ ಕದ್ದು ಮುಚ್ಚಿ ರಸಗೊಬ್ಬರವನ್ನು ಮಾರಾಟ ಮಾಡುತ್ತಿದ್ದಾರೆ. ಕೆಲವು ಇಲಾಖೆಗಳಿಂದ ರೈತರನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ತಹಶೀಲ್ದಾರ ಸಣ್ಣರಾಮಪ್ಪ ತಾಲೂಕು ಮಟ್ಟದ ಅಧಿಕಾರಿಗಳಿಗೆ ತಾಕೀತು ಮಾಡಿ ಇನ್ನೂ ಮುಂದೆ ಈಗಾಗದಂತೆ ನೋಡಿಕೊಳ್ಳಲು ಸೂಚನೆ ನೀಡಿದರು. ಹಾಗೇ ಮುಂದಿನ ಸಭೆಯೊಳಗೆ ರೈತ ಮುಖಂಡರು ಪ್ರಸ್ತಾಪಿಸಿರುವ ಸಮಸ್ಯೆಗಳನ್ನು ಬಗೆಹರಿಸಿ ಮುಂದಿನ ಸಭೆಗೆ ಪ್ರಗತಿಯ ಬಗ್ಗೆ ತಿಳಿಸಲಾಗುವುದು ಎಂದರು. ಸಭೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ರೈತ ಮುಖಂಡರು, ಸಂಘ ಸಂಸ್ಥೆಯ ಪದಾಧಿಕಾರಿಗಳು, ಇಲಾಖಾವಾರು ಅಧಿಕಾರಿಗಳು ಭಾಗವಹಿಸಿದರು. ವರದಿ: ಮಲಾರ ಮಹದೇವಸ್ವಾಮಿ…

Read More

ತುರುವೇಕೆರೆ: ಬಾಣಸಂದ್ರ ರಸ್ತೆಯಲ್ಲಿರುವ ಶ್ರೀಶಾರದಾ ಹಾರ್ಡ್ ವೇರ್ ಮತ್ತು ಎಲೆಕ್ಟ್ರಿಕ್ ಅಂಗಡಿಯಲ್ಲಿ ಕಳ್ಳರು ಶಟರ್ ಬೀಗ ಮುರಿದು ಲಕ್ಷಾಂತರ ಮೌಲ್ಯದ ಕೇಬಲ್ ವಯರ್ ಮತ್ತು ನಗದು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಪಟ್ಟಣದ ಹೃದಯಬಾಗದಲ್ಲಿರುವ ಬೀದರ್ ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ 150 ಎ ನ ಪೋಸ್ಟ್ ಆಫೀಸ್ ಗೆ ಹೊಂದಿಕೊಂಡಂತಿರುವ ಅಂಗಡಿಗೆ ತಡರಾತ್ರಿ ಕಳ್ಳರು ನುಗ್ಗಿ ಸುಮಾರು 3 ಲಕ್ಷ ಮೌಲ್ಯದ ವಿದ್ಯುತ್ ಉಪಕರಣ ಹಾಗೂ 35 ಸಾವಿರ ನಗದನ್ನು ಮತ್ತು ಸಿ.ಸಿ. ಟಿವಿ ಕ್ಯಾಮೆರಾದ ಡಿವಿಆರ್ ಹೊತ್ತೊಯ್ದಿದ್ದಾರೆ. ಅಂಗಡಿಯ ಮಾಲೀಕ ಮಾಧುರಾಂ ಎಂದಿನಂತೆ ರಾತ್ರಿ 10 ಘಂಟೆಗೆ ಬೀಗ ಹಾಕಿ ಮನೆಗೆ ತೆರಳಿದ್ದಾರೆ. ತಡರಾತ್ರಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ, ಬೆಳಗ್ಗೆ ಮಾಲೀಕ ಅಂಗಡಿಯನ್ನು ತೆರೆಯಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಡಿ. ವೈ. ಎಸ್. ಪಿ ಲಕ್ಷ್ಮಿಕಾಂತ್ , ಎಸ್.ಐ. ಗಳಾದ ಗಣೇಶ್, ರಾಮಚಂದ್ರಪ್ಪ ಮತ್ತು ಶ್ವಾನ ದಳ ಹಾಗೂ…

Read More

ತುರುವೇಕೆರೆ: ತಾಲೂಕಿನ ಸೊರವನಹಳ್ಳಿ ಗ್ರಾಮ ಪಂಚಾಯಿತಿಯ ಚುನಾವಣೆ ಪೊಲೀಸ್ ಸರ್ಪಗಾವಲಿನಲ್ಲಿ ನಡೆದ ಎರಡನೇ ಅವಧಿಯ ಚುನಾವಣೆಯಲ್ಲಿ ಮೊದಲನೇ ಅವಧಿಯಲ್ಲಿಯೂ ಕೂಡ ಮೊದಲಿಗರಾಗಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದ ಇಂದಿರಾ ಕೃಷ್ಣಸ್ವಾಮಿಯವರು, ಎರಡನೆಯ ಅವಧಿಯ ಚುನಾವಣೆಯಲ್ಲಿಯೂ ಕೂಡ ಮೊದಲಿಗರಾಗಿ ಸ್ಥಾನಕ್ಕೆ ಆಯ್ಕೆಯಾಗಿದ್ದು, ನೂತನವಾಗಿ ಉಪಾಧ್ಯಕ್ಷರಾಗಿ ಮಂಜುನಾಥ್ (ತೂಬಿನಕಟ್ಟೆ)ಆಯ್ಕೆಯಾಗಿದ್ದಾರೆ. ಇನ್ನೂ 16 ಸದಸ್ಯ ಬಲವುಳ್ಳ ಈ ಪಂಚಾಯಿತಿಯಲ್ಲಿ, ಇಂದು ನಡೆದ ಎರಡನೆಯ ಅವಧಿ ಚುನಾವಣೆಗೆ ಅಧ್ಯಕ್ಷ ಸ್ಥಾನಕ್ಕೆ ಇಂದಿರ ಕೃಷ್ಣಸ್ವಾಮಿ, ಮತ್ತು ಗೀತಾ ಅರುಣ್, ಶಶಿಕಲಾ ಎಂಬುವರು ನಾಮಪತ್ರ ಸಲ್ಲಿಸಿ, ಕೊನೆ ಕ್ಷಣದಲ್ಲಿ ಶಶಿಕಲಾ ಅವರು ನಾಮಪತ್ರ ವಾಪಸ್ ಪಡೆದಿದ್ದರು, ಇನ್ನುಳಿದ ಇಬ್ಬರು ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿ ಗೀತಾ ಅರುಣಾ ಅವರು (6) ಮತಗಳನ್ನು ಪಡೆದು ಪರಾಭವ ಗೊಂಡರೆ ಇಂದಿರಾ ಕೃಷ್ಣಸ್ವಾಮಿ ಅವರು (9 )ಮತಗಳನ್ನು ಪಡೆದು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ, ಒಟ್ಟು ಹದಿನಾರು ಮತಗಳನ್ನು ಹೊಂದಿರುವ ಈ ಚುನಾವಣೆಯಲ್ಲಿ ಒಂದು ಮತ ತಿರಸ್ಕೃತ ಗೊಂಡಿರುತ್ತದೆ. ಇನ್ನು ಉಪಾಧ್ಯಕ್ಷರ ಸ್ಥಾನಕ್ಕೆ ಮಂಜುನಾಥ್ ಮತ್ತು ಬಾಲಾಜಿ ಎಂಬುವರು…

Read More

ಮಧುಗಿರಿ: ಜೆಡಿಎಸ್ ಪಕ್ಷ ತೊರೆದ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಮಹೇಶ್ ರವರಿಗೆ ಗಂಜಲಗುಂಟೆ ಪಂಚಾಯತ್ ಅಧ್ಯಕ್ಷ ಸ್ಥಾನ ಒಲಿಯಿತು. ಪಂಚಾಯತ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಮಹೇಶ್ ಮಾತನಾಡಿ, ಈ ದಿನ ನಾನು ಜೆಡಿಎಸ್ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ, ಸಹಕಾರ ಸಚಿವರ ಸಹಕಾರದಿಂದ ಗಂಜನಗುಂಟೆ ಪಂಚಾಯತ್ ಅಧ್ಯಕ್ಷ ಸ್ಥಾನದ ಗದ್ದುಗೆ ಏರಿದ್ದೇನೆ, ಪಂಚಾಯತ್ ಅಭಿವೃದ್ಧಿಗಾಗಿ ಸದಾ ಸದಸ್ಯರ ಜೊತೆಗೂಡಿ ಹಾಗೂ ಸಚಿವರ ನಿರ್ದೇಶನದಂತೆ ಪಕ್ಷ ಸಂಘಟನೆ ಕೆಲಸ ಮಾಡುವೆ ಎಂದು ತಿಳಿಸಿದರು. ಪುರಸಭೆ ಸದಸ್ಯ ಲಾಲಾ ಪೇಟೆ ಮಂಜುನಾಥ ಮಾತನಾಡಿ, ಕ್ಷೇತ್ರ ಜನಪ್ರಿಯ ಶಾಸಕರು ಹಾಗೂ ಸಚಿವರಾದ ಕೆ ಎನ್ ರಾಜಣ್ಣ ರವರ ನಿರ್ದೇಶನದಂತೆ ಬಹಳ ಸುಲಲಿತವಾಗಿ ಗಂಜಲಗುಂಟೆ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ನಡೆಯಿತು. ಪಂಚಾಯಿತಿ ಅಧ್ಯಕ್ಷನಾಗಿ ಮಹೇಶ್, ಉಪಾಧ್ಯಕ್ಷರಾಗಿ ನಾಗಭೂಷಣ್  ಅವಿರೋಧವಾಗಿ ಆಯ್ಕೆಯಾಗಿದ್ದು ತುಂಬಾ ಸಂತೋಷ ತಂದಿದೆ, ಇವರು ಮುಂದಿನ ದಿನಗಳಲ್ಲಿ ಪಂಚಾಯತಿ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಒತು ನೀಡಿ ಕೆಲಸ ಮಾಡಲಿ ಹಾಗೂ ಕಾಂಗ್ರೆಸ್…

Read More

ಬೆಳಗಾವಿ: ಕಾಂಗ್ರೆಸ್ ಮಾಡಿರುವ ಮುಸ್ಲಿಂ ತೃಷ್ಟಿಕರಣದಿಂದ ಸಮಾನ ನಾಗರಿಕ ಕಾನೂನು ಜಾರಿಗೆ ತರಲು ಸಾಧ್ಯವಾಗಲಿಲ್ಲ. ಇದನ್ನು ಜಾರಿಗೆ ತರುವಂತೆ 5 ಲಕ್ಷ ಸಹಿ ಸಂಗ್ರಹ ಅಭಿಯಾನ ನಡೆಸಲಾಗುತ್ತಿದೆ. ಇದನ್ನು ಕೇಂದ್ರ ಸರಕಾರಕ್ಕೆ ಕಳುಹಿಸಲಾಗುವುದು ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದರು. ಮಂಗಳವಾರ ನಗರದ ಪ್ರವಾಸಿ ಮಂದಿರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಸಮಾನ ನಾಗರಿಕ ಕಾನೂನು ಜಾರಿಗೆ ತರುವುದಕ್ಕೆ ಮುಸ್ಲಿಂ ಸಂಘಟನೆಗಳು ವಿರೋಧ ಮಾಡುತ್ತಿವೆ. ಕಾಂಗ್ರೆಸ್ ಈ‌‌ ಹಿಂದೆ ಅಧಿಕಾರದಲ್ಲಿದ್ದಾಗ ಸಮಾನ ನಾಗರಿಕ ಕಾನೂನು ಜಾರಿಗೆ ತರುವ ಅವಕಾಶ ಇದ್ದರೂ ಅದು, ಮುಸ್ಲಿಂರ ರಕ್ಷಣೆಗಾಗಿ ಅದನ್ನು ಜಾರಿಗೆ ತರಲು ಸಾಧ್ಯವಾಗಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗೋವಾದಲ್ಲಿ ಸಮಾನ ಕಾನೂನು ಜಾರಿಯಲ್ಲಿದೆ. ಕಳೆದ 1961ರಿಂದ ಈ ಕಾಯ್ದೆ ಇದೆ. ಅಲ್ಲಿ ತಲಾಖ್, ಬಹು ಪತ್ನಿತ್ವ ನಡೆಯುವುದಿಲ್ಲ. ಎಲ್ಲ ಕಡೆ ಕಾನೂನು ಜಾರಿಯಾಗಬೇಕೆಂದು ಒತ್ತಾಯಿಸಿದರು. ಕಾಂಗ್ರೆಸ್ ಸರಕಾರ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನದಲ್ಲಿ ಮೊಬೈಲ್ ನಿಷೇಧ ಮಾಡಿರುವುದು ಸ್ವಾಗತಾರ್ಹ.…

Read More