Subscribe to Updates
Get the latest creative news from FooBar about art, design and business.
- ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
- ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ: ನಗನಗದು ದೋಚಿ ಪರಾರಿ
- ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
- ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
- ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
- ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
- ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
- ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Author: admin
ಬೆಂಗಳೂರು: ತಾಯಿಯೊಬ್ಬಳು ತನ್ನ ಮಗನ ಮೇಲೆಯೇ ಪೆಟ್ರೋಲ್ ಎರಚಿ ಸುಟ್ಟು ಹಾಕಿದ ಪ್ರಸಂಗವೊಂದು ರಾಜ್ಯ ರಾಜಧಾನಿಯಲ್ಲಿ ನಡೆದಿದೆ. ಚಾಂದ್ ಪಾಷಾ (40) ಕೊಲೆಯಾದ ವ್ಯಕ್ತಿ. ಈತ ಪ್ರತಿನಿತ್ಯ ಕುಡಿದು ಬಂದು ಮನೆಯವರ ಮೇಲೆ ಹಲ್ಲೆ ಮಾಡುತ್ತಿದ್ದನು. ಈತನ ರ್ವನೆಯಿಂದ ಬೇಸತ್ತ ಪತ್ನಿ ಬಿಟ್ಟು ಹೋಗಿದ್ದಳು. ಹೀಗಾಗಿ ಪಾಷಾ ತನ್ನ ತಾಯಿ ಜೊತೆ ವಾಸವಾಗಿದ್ದನು. ಸೋಮವಾರವೂ ಕುಡಿದುಕೊಂಡು ಬಂದು ತಾಯಿ ಜೊತೆ ಗಲಾಟೆ ಮಾಡಿದ್ದನು. ಬಳಿಕ ಸಂಜೆ 4:45 ರ ಸುಮಾರಿಗೆ ಮತ್ತೆ ಕಂಠಪೂರ್ತಿ ಕುಡಿದು ಬಂದು ಮನೆಯ ಹೊರಗಡೆ ಕುಳಿತಿದ್ದನು. ಈ ವೇಳೆ ತಾಯಿ ಆತನ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಕೊಟ್ಟಿದ್ದಾರೆ. ಘಟನೆ ಸಂಬಂಧ ಆರೋಪಿ ತಾಯಿ ಸೂಫಿಯಾಳನ್ನ ಪೊಲೀಸರು ಬಂಧಿಸಿದ್ದು, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಶಿವಮೊಗ್ಗ: ಭೀಮನ ಅಮವಾಸ್ಯೆಯ ದಿನವೇ ಪತಿಯೇ ಪತ್ನಿಯನ್ನು ಅಪಹರಿಸಿರುವ ಘಟನೆ ಶಿವಮೊಗ್ಗದ ಬಸ್ ನಿಲ್ದಾಣದ ಬಳಿ ನಡೆದಿದೆ. ಅಪಹರಣವಾದ ಗೃಹಿಣಿಯನ್ನು ದಿವ್ಯ (23) ಎಂದು ಗುರುತಿಸಲಾಗಿದೆ. ಶಿವಮೊಗ್ಗ ತಾಲೂಕಿನ ಗಾಜನೂರಿನ ರವಿ ಹಾಗೂ ಶಿವಮೊಗ್ಗದ ಹೊಸಮನೆ ಬಡಾವಣೆ ನಿವಾಸಿ ದಿವ್ಯ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಕುಟುಂಬಸ್ಥರ ವಿರೋಧ ಇತ್ತು. ವಿರೋಧದ ನಡುವೆಯೂ ಇಬ್ಬರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿ ಮಾಡಿಸಿ ಮದುವೆಯಾಗಿದ್ದರು. ಆದರೆ ಕಳೆದ ಕೆಲವು ದಿನಗಳ ಹಿಂದೆ ದಿವ್ಯಾಳನ್ನು ಆಕೆಯ ಪೋಷಕರು ಮನೆಗೆ ಕರೆದುಕೊಂಡು ಹೋಗಿದ್ದರು. ಇಂದು ಬಸ್ ನಿಲ್ದಾಣದ ಬಳಿ ಯುವತಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರಿನಲ್ಲಿ ಬಂದ ಆಕೆಯ ಪತಿ ರವಿ ಹಾಗೂ ಆತನ ಸ್ನೇಹಿತರು ದಿವ್ಯಾಳನ್ನು ಅಪಹರಿಸಿಕೊಂಡು ಹೋಗಿದ್ದಾರೆ. ಅಪಹರಣದ ನಂತರ ಕುಟುಂಬಸ್ಥರ ರೋಧನೆ ಮುಗಿಲು ಮುಟ್ಟಿದೆ. ನಮ್ಮ ಮಗಳನ್ನು ಗಾಜನೂರಿನ ರವಿಯೇ ಅಪಹರಿಸಿಕೊಂಡು ಹೋಗಿದ್ದಾನೆ ಎಂದು ದಿವ್ಯಾ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ಕುರಿತು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ…
ಬೆಳಗಾವಿ: ಭೀಮನ ಅಮಾವಾಸ್ಯೆ ದಿನದಂದು ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದ ಬನಸಿದ್ದೇಶ್ವರ ದೇವಸ್ಥಾನದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಭೀಮನ ಅಮಾವಾಸ್ಯೆಯಂದು ದೀರ್ಘಾಯುಷ್ಯಕ್ಕಾಗಿ ಪಾದಪೂಜೆ ಮಾಡಿದ ಬಳಿಕ ಪತ್ನಿಯೇ ಕಟ್ಟಿಕೊಂಡ ಗಂಡನನ್ನೇ ಕೊಲೆ ಮಾಡಿಸಿದ್ದಾಳೆ. ಕೇವಲ ಐದು ತಿಂಗಳ ಹಿಂದೆ ಅಷ್ಟೇ ಸಪ್ತಪದಿ ತುಳಿದಿದ್ದ ಶಂಕರ್ ಜಗಮುತ್ತಿ(25) ಎನ್ನುವಾತನನ್ನು ಪತ್ನಿ ಕಣ್ಣೆದುರಲ್ಲೇ ವಡೇರಹಟ್ಟಿ ಬಳಿ ದೇವಸ್ಥಾನದ ಆವರಣದಲ್ಲಿ ನಿನ್ನೆ(ಜುಲೈ 17) ಭೀಕರ ಹತ್ಯೆ ಮಾಡಲಾಗಿತ್ತು. ಆದ್ರೆ, ಗಂಡನ ಕೊಲೆ ಹಿಂದಿನ ಸೂತ್ರಧಾರಿಯೇ ಪತ್ನಿ ಪ್ರಿಯಾಂಕಾ ಎಂದು ಬಯಲಾಗಿದೆ. ಸದ್ಯ ದೇಗುಲಕ್ಕೆ ಕರೆದೊಯ್ದು ಪತಿಯನ್ನೇ ಕೊಲ್ಲಿಸಿದ್ದ ಪತ್ನಿ ಪ್ರಿಯಾಂಕ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಐದು ತಿಂಗಳ ಹಿಂದೆ ಅಷ್ಟೇ ಶಂಕರ್ ನನ್ನು ಮದುವೆಯಾಗಿದ್ದ ಪ್ರಿಯಾಂಕಾ ನಿನ್ನೆ ಭೀಮನ ಅಮಾವಾಸ್ಯೆ ಹಿನ್ನೆಲೆ ಗಂಡನ ಪಾದ ಪೂಜೆ ಮಾಡಿದ್ದಳು. ಬಳಿಕ ಬನಸಿದ್ದೇಶ್ವರ ದೇವಸ್ಥಾನಕ್ಕೆ ಶಂಕರ್ ನನ್ನು ಕರೆದೊಯ್ದಿದ್ದಳು. ಆದ್ರೆ, ಮನೆ ಬಿಡುವಾಗ ಪ್ರಿಯಕರ ಶ್ರೀಧರ್ ಗೆ…
ಆನೇಕಲ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದ ರಾಮನಾಯಕನ ಹಳ್ಳಿಯಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ರಾಮನಾಯಕನಹಳ್ಳಿ ಗ್ರಾಮದ ವೀರಾಂಜನೇಯ ಸ್ವಾಮಿ ದೇವಾಲಯದ ಬಾಗಿಲಿನಲ್ಲಿ ಕೋತಿ ಪ್ರಾಣ ಬಿಟ್ಟಿದೆ. ವಿಶೇಷ ಅಂದರೆ ಕೋತಿಯ ನಡೆ ವಿಸ್ಮಯ ಹಾಗೂ ಪವಾಡಕ್ಕೆ ಸಾಕ್ಷಿಯಾಗಿದೆ. ಕೋತಿ ದಿನನಿತ್ಯ ದೇವಾಲಯದ ಬಳಿಯೇ ಓಡಾಡಿಕೊಂಡಿತ್ತು. ಭೀಮನ ಅಮಾವಾಸೆ ಹಿನ್ನೆಲೆ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಾಯಂಕಾಲ ದೇವಾಲಯ ಬಾಗಿಲು ಹಾಕಿಕೊಂಡು ಅರ್ಚಕ ರಾಮಕೃಷ್ಣಯ್ಯ ಮನೆ ಹೋಗಿದ್ದಾರೆ. ಮರುದಿನ ಅರ್ಚಕರು ದೇವಸ್ಥಾನಕ್ಕೆ ಬಂದಾಗ ಕೋತಿ ಬಾಗಿಲ ಬಳಿ ಮಲಗಿತ್ತು. ಹತ್ತಿರ ಬಂದು ನೋಡಿದಾಗ ಕೈಮುಗಿದ ರೀತಿಯಲ್ಲಿ ಕೋತಿ ಪ್ರಾಣ ಬಿಟ್ಟಿತ್ತು. ಕೋತಿ ದೇವಾಲಯದ ಮುಖ್ಯದ್ವಾರದ ಬಳಿ ತಲೆ ಇಟ್ಟು ಆಂಜನೇಯನಿಗೆ ನಮಿಸಿ ಕೊನೆಯುಸಿರು ಎಳೆದಿದೆ. ವಿಷಯ ತಿಳಿದು ಗ್ರಾಮಸ್ಥರು ದೇವಾಲಯದ ಬಳಿ ಜಮಾಯಿಸಿದ್ದಾರೆ. ನಂತರ ಕೋತಿಗೆ ಪೂಜೆ ಮಾಡಿ ದೇವಾಲಯದ ಬಲ ಭಾಗದಲ್ಲಿ ಅಂತಿಮಸಂಸ್ಕಾರ ನೆರವೇರಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ಗೃಹಲಕ್ಷ್ಮಿ ಯೋಜನೆಯ ಉಚಿತ ಲಾಭ ಪಡೆದುಕೊಳ್ಳಲು ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಲಾಗಿದೆ. ಯಾವುದೇ ಮಧ್ಯವರ್ತಿಗಳ ಮೊರೆ ಹೋಗುವ ಅಗತ್ಯತೆ ಇಲ್ಲ. ಪಡಿತರ ಚೀಟಿಯ ಸಂಖ್ಯೆಯನ್ನ 8147500500 ಈ ಸಂಖ್ಯೆ ಎಸ್ ಎಂ ಎಸ್ ಮಾಡಬಹುದು. ಕೂಡಲೇ ಮುಖ್ಯಸ್ಥೆಗೆ ಸ್ಥಳ, ಗೊತ್ತುಪಡಿಸಿದ ದಿನಾಂಕ, ಸಮಯ ಸಂದೇಶ ಹೋಗುತ್ತೆ. ಹೀಗಾಗಿ ಯೋಜನೆಯಲ್ಲಿ ಯಾವುದೇ ಗೊಂದಲ ಇಲ್ಲ. ಯಾವ ಕೇಂದ್ರ, ದಿನಾಂಕ, ಸಮಯ ಎಲ್ಲ ಮಾಹಿತಿಯೂ ಫಲಾನುಭವಿ ಮಹಿಳೆಗೆ ಹೋಗಲಿದೆ. ಇನ್ನೂ ಗೊಂದಲವಿದ್ದರೆ ಇಲಾಖೆ 1902 ನಂಬರ್ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು. ಬೇರೆ ಯೋಜನೆಗಳಲ್ಲಿ ತೊಂದರೆ ಆದ ಕಾರಣ, ಈ ಯೋಜನೆಯನ್ನ ಆರಂಭದಲ್ಲೇ ಸರಳವಾಗಿ ಮಾಡಿದ್ದೀವಿ. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾಂಗ್ರೆಸ್ನ ಮೇಕೆದಾಟು ಹೋರಾಟ ಬರೀ ನಾಟಕ ಎಂದು ವಿಧಾನಸೌಧದಲ್ಲಿ ಮಾಜಿ ಸಚಿವ ಆರ್.ಅಶೋಕ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ಸ್ಟಾಲಿನ್ ವಿರೋಧಿಸಿದ್ದಾರೆ. ಈಗ ಸಿಎಂ ಸ್ಟಾಲಿನ್ ಗೆ ಬೊಕ್ಕೆ ನೀಡಿ ಕಾಂಗ್ರೆಸ್ ಸ್ವಾಗತ ಮಾಡಿದೆ. ಹಿಂದೆ ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ಮಾಡಿತ್ತು. ನೀರಿಗಾಗಿ ನಾವು ಹೋರಾಟ ಮಾಡಿದ್ದೇವೆಂದು ಬೊಗಳೆ ಬಿಟ್ಟಿತ್ತು. ಆದರೆ ಸಿಎಂ ಸ್ಟಾಲಿನ್ ಮೇಕೆದಾಟು ಯೋಜನೆಗೆ ವಿರೋಧ ಮಾಡಿದ್ದಾರೆ. ನಮ್ಮ ಯೋಜನೆಗೆ ವಿರೋಧ ಮಾಡಿದವರನ್ನು ಕಾಂಗ್ರೆಸ್ ಸ್ವಾಗತಿಸಿದೆ. ಕಾಂಗ್ರೆಸ್ ನವರಿಗೆ ನಾಚಿಕೆ ಆಗಬೇಕೆಂದು ಆರ್.ಅಶೋಕ್ ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ಊರ ಹೊರಗಿನ ಗುಡಿಸಿಲಿನಲ್ಲಿ ಬಾಣಂತಿ ಮಗು ಏಕಾಂಕಿಯಾಗಿ ವಾಸ ಮಾಡುತ್ತಿದ್ದು ಕಾಡುಗೊಲ್ಲ ಸಮುದಾಯದ ಮೌಢ್ಯಾಚರಣೆಗೆ ಸಾಕ್ಷಿಯಾಗಿರುವ ಘಟನೆ ತುಮಕೂರು ಸಮೀಪದ ಮಲ್ಲೇನಹಳ್ಳಿ ಗೊಲ್ಲರಹಟ್ಟಿಯಲ್ಲಿ ಇಂದಿಗೂ ನಡೆಯುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಊರ ಹೊರಗಿನ ಗುಡಿಸಿಲಿನಲ್ಲೇ ವಾಸ ಮಾಡುತ್ತೀರೋ ವಸಂತ ಎಂಬ ಬಾಣಂತಿಯದ್ದ ಅರಣ್ಯರೋಧನವಾಗಿದೆ. ತುಂತುರು ಮಳೆ ಚಳಿ ಗಾಳಿ ನಡುವೆ ಗುಡಿಸಿಲಿನಲ್ಲಿ ಆಕೆ ಜೀವನ ಸಾಗಿಸುತ್ತಿದ್ದಾಳೆ. 5 ದಿನಗಳ ಹಿಂದೆ ಅವಳಿ ಶಿಶುವಿಗೆ ಜನ್ಮನೀಡಿದ ವಸಂತ ಎಂಬಾಕೆಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆ ಆಗಿತ್ತು. ಹೆರಿಗೆ ಮುಗಿಸಿ ವಾಪಸ್ ಗ್ರಾಮಕ್ಕೆ ಬಂದ ವಸಂತ ಎಂಬವರನ್ನು ಆಕೆಯ ಪೋಷಕರು ಮನೆಗೆ ಸೇರಿಸಿಕೊಂಡಿಲ್ಲ ಬದಲಾಗಿ ಊರ ಹೊರಗಿನ ಗುಡಿಸಿಲಿಗೆ ಕಳುಹಿಸಿದ್ದಾರೆ. ಸಣ್ಣ ಗುಡಿಸಲು ಮಾಡಿ ಅದರಲ್ಲಿ ಬಾಣಂತಿ ಮತ್ತು ಮಗುವನ್ನು ಇಟ್ಟಿರುವ ಇರಿಸಲಾಗಿದೆ. ನಮ್ಮ ದೇವರಿಗೆ ಸೂತಕ ಆಗಲ್ಲ ಹಾಗಾಗಿ ನಾವು ಒಳಗೆ ಬಿಟ್ಟುಕೊಳ್ಳುವುದಿಲ್ಲ ಎನ್ನುತ್ತಿರುವ ಗೊಲ್ಲ ಸಮುದಾಯದವರು. ಸೂತಕದ ಬಾಣಂತಿ ಊರಿಗೆ ಬಂದರೆ ಕೇಡು. ಜುಂಜಪ್ಪ ಹಾಗೂ ಯತ್ತಪ್ಪ ದೇವರಿಗೆ ಆಗಲ್ಲ ಎಂಬುದು…
ದೇಶದ ಹಿತಾಸಕ್ತಿ ಕಾಯಲು ವಿರೋಧ ಪಕ್ಷಗಳು ಒಂದುಗೂಡುತ್ತಿರುವುದು ಉತ್ತಮ ಆರಂಭ ಎಂದು ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಜತೆಗೂಡುವುದು ಆರಂಭ, ಜತೆಗೂಡಿ ಆಲೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು. ದೇಶದ ಭವಿಷ್ಯವನ್ನು ಹೇಗೆ ರೂಪಿಸಬೇಕು ಎಂಬುದರ ಬಗ್ಗೆ ನಾಳೆ ದೊಡ್ಡ ಮಟ್ಟದ ಸಭೆ ನಡೆಯಲಿದೆ. ಇದು ಕೇವಲ ಒಂದು ಪಕ್ಷದ ಸಭೆಯಲ್ಲ. ದೇಶದ 140 ಕೋಟಿ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಪರಿಹಾರ ನೀಡಲು ಈ ಸಭೆಯಲ್ಲಿ ಚರ್ಚೆ ಮಾಡಲಾಗುವುದು. ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಆಯೋಜಿಸುತ್ತಿರುವ ಈ ಸಭೆಗೆ ಕೆಪಿಸಿಸಿ ಪರವಾಗಿ ಎಲ್ಲರಿಗೂ ಸ್ವಾಗತ ಕೋರುತ್ತೇನೆ. ಈ ಒಗ್ಗಟ್ಟನ್ನು ಮುಂದಿನ ದಿನಗಳಲ್ಲಿ ಮುಂದುವರಿಸಿಕೊಂಡು ಕರ್ನಾಟಕ ರಾಜ್ಯದಲ್ಲಿ ಪಡೆದ ಫಲಿತಾಂಶವನ್ನೇ 2024ರ ಚುನಾವಣೆಯಲ್ಲಿ ಪಡೆಯಲು ಕೆಲಸ ಮಾಡಲಾಗುವುದು. ಇನ್ನು ಈ ಸಭೆಗೆ ಹೆಚ್ಚಿನ ಭದ್ರತೆ ನೀಡಲಾಗಿದ್ದು, ನಿಯೋಜಿತ ನಾಯಕರ ಹೊರತಾಗಿ ಬೇರೆ ಯಾವುದೇ ನಾಯಕರು ಸಭೆ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನ್ನಡ ಭಾಷೆಯ ಪರಿಜ್ಞಾನ ಇದೆ ಎಂದು ಭಾವಿಸಿದ್ದೆ. ಆದರೆ, ಅದು ಸುಳ್ಳು ಎನ್ನುವುದು ಈಚೆಗೆ ವಿಧಾನ ಪರಿಷತ್ ನಲ್ಲಿ ಅವರು ರಾಜ್ಯಪಾಲರ ಭಾಷಣದ ಮೇಲೆ ಉತ್ತರ ಕೊಟ್ಟಾಗ ನನಗೆ ಗೊತ್ತಾಯಿತು ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಕುಟುಕಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, 123 ಕ್ಷೇತ್ರ ಗೆಲ್ಲದಿದ್ದರೆ ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡುವುದಾಗಿ ಕುಮಾರಸ್ವಾಮಿ ಹೇಳಿದ್ದರು. ಈಗೆಲ್ಲಿ ವಿಸರ್ಜನೆ ಮಾಡಿದ್ದಾರೆ? ಎಂದು ನನ್ನನ್ನು ಪ್ರಶ್ನೆ ಮಾಡಿದ್ದಾರೆ. ಆದರೆ, ಅವರ ಅಜ್ಞಾನಕ್ಕೆ ನನ್ನ ಮರುಕವಿದೆ ಎಂದರು. ನಾನು ಚುನಾವಣೆ ಪ್ರಚಾರ ಹಾಗೂ ಪಂಚರತ್ನ ರಥಯಾತ್ರೆಯಲ್ಲಿ ನೂರಾರು ಕಡೆ ಭಾಷಣ ಮಾಡಿದ್ದೇನೆ. ಪತ್ರಿಕೆಗಳ ವರದಿಗಳನ್ನು ನೋಡಲಿ, ವಿದ್ಯುನ್ಮಾನ ಮಾಧ್ಯಮಗಳ ವೀಡಿಯೊಗಳನ್ನು ವೀಕ್ಷಿಸಲಿ. ಆಮೇಲೆ ಈ ಬಗ್ಗೆ ಮುಖ್ಯಮಂತ್ರಿ ಮಾತನಾಡಲಿ ಎಂದು ಕುಮಾರಸ್ವಾಮಿ ಅವರು ಸಿಎಂಗೆ ಟಾಂಗ್ ನೀಡಿದರು. ನಾನು ಜನರನ್ನ ಕೇಳಿದ್ದು ಇಷ್ಟೇ. ನನಗೆ 123 ಸೀಟು ಕೊಡಿ. ಅಷ್ಟು ಸೀಟು ಕೊಟ್ಟ ಮೇಲೆ…
ರಾಜ್ಯದ ಅರ್ಧ ಕೋಟಿಗೂ ಕುಟುಂಬಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಮೂರು ಜ್ಯೋತಿ ಯೋಜನೆಗಳನ್ನು ಗೃಹ ಜ್ಯೋತಿ ಯೋಜನೆಯಲ್ಲಿ ವಿಲೀನ ಮಾಡಿದೆ ಇದರೊಂದಿಗೆ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಗೃಹಜೋತಿಯ ಲಾಭ ದಕ್ಕಲಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಂದ ಮೇಲೆ ಕೊಟ್ಟ ಮಾತಿನಂತೆ ಗೃಹ ಜ್ಯೋತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಗೃಹ ಜ್ಯೋತಿ ಯೋಜನೆ ಅಡಿ ಪ್ರತಿ ಕುಟುಂಬಕ್ಕೆ 200 ಯೂನಿಟ್ ವಿದ್ಯುತ್ ಫ್ರೀ ನೀಡಲಾಗುತ್ತಿದೆ. ಜುಲೈ 1ರಿಂದಲೇ ಈ ಯೋಜನೆ ಜಾರಿಗೆ ಬಂದಿದೆ. ಆದರೆ ಈಗಾಗಲೇ ಜಾರಿಯಲ್ಲಿರುವ ಭಾಗ್ಯಜ್ಯೋತಿ ಕುಟೀರ ಜ್ಯೋತಿ ಅಮೃತ ಜ್ಯೋತಿ ಯೋಜನೆಗಳ ಭವಿಷ್ಯವೇನು? ಇದರ ಫಲಾನುಭವಿಗಳಿಗೆ ಏನಾಗುತ್ತೆ? ಎನ್ನುವ ಗೊಂದಲ ಕಾಡುತ್ತಿತ್ತು. ಇದೀಗ ಇಂಧನ ಸಚಿವ ಕೆಜೆ ಜಾರ್ಜ್ ವಿಶೇಷ ಕಾಳಜಿ ವಹಿಸಿ ಹೊಸ ಮಾರ್ಗಸೂಚಿಯನ್ನು ಹೊರಡಿಸುವ ಮೂಲಕ ಈ ಎಲ್ಲಾ ಫಲಾನುಭವಿಗಳಿಗೆ ಖುಷಿ ಸುದ್ದಿ ಕೊಟ್ಟಿದ್ದಾರೆ ಭಾಗ್ಯ ಜ್ಯೋತಿ ಕುಟುಂಬ ಜ್ಯೋತಿಗೆ ಈವರೆಗೆ 40 ಯೂನಿಟ್ ಫ್ರೀ…