Author: admin

ಹಿರಿಯ ರಾಜಕೀಯ ಮುತ್ಸದ್ದಿ ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನನಗೆ ಅತ್ಯಂತ ಆತ್ಮೀಯರಾಗಿದ್ದ ಉಮ್ಮನ್ ಚಾಂಡಿಯವರ ನಿಧನದ ಸುದ್ದಿ ಆಘಾತಕಾರಿ. ಕೇರಳ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ್ಥಾನದಲ್ಲಿ ಇರಿಸಲು ಕಾರಣರಾದ ಮುಖ್ಯಮಂತ್ರಿಗಳಲ್ಲಿ ಉಮ್ಮನ್ ಚಾಂಡಿ ಕೂಡ ಒಬ್ಬರಾಗಿದ್ದರು. ಎರಡು ಬಾರಿ ಕೇರಳ ರಾಜ್ಯದ ಮುಖ್ಯಮಂತ್ರಿಗಳಾಗಿ ಅಪಾರ ಸಾಧನೆ ಮಾಡಿದವರಾಗಿದ್ದರು. 2004 ರಿಂದ 2006 ಮತ್ತು 2011 ರಿಂದ 2016 ರವರೆಗೆ ಕೇರಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯಪಾಲರಾಗಿ, ಕೇರಳ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ನಿರಂತರವಾಗಿ ಸಂವಿಧಾನದ ಆಶಯಗಳ, ಮೌಲ್ಯಗಳ ರಕ್ಷಣೆಗೆ ಶ್ರಮಿಸಿ ಹೋರಾಟ ರಾಜಕಾರಣದ ಪರಂಪರೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುತ್ತಿದ್ದರು. 1970 ರಿಂದ ಕೇರಳ ರಾಜ್ಯ ವಿಧಾನಸಭೆಗೆ ನಿರಂತರವಾಗಿ ಆಯ್ಕೆಯಾಗುತ್ತಾ ಅತ್ಯಂತ ದೀರ್ಘಾವಧಿ ಶಾಸಕರಾಗಿ ಪುದುಪ್ಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಬಂದಿದ್ದರು. ವಿಶ್ವಸಂಸ್ಥೆಯಿಂದ ಸಾರ್ವಜನಿಕ ಸೇವೆಗಾಗಿ ಪ್ರಶಸ್ತಿಯನ್ನು ಗಳಿಸಿದ ಏಕೈಕ ಭಾರತೀಯ…

Read More

ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ರೈತರ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರವನ್ನು ಕುಟುಕಿದ್ದಾರೆ. ಮುಂಗಾರು ವಿಫಲವಾಗಿ ರೈತರು ಬಿತ್ತಿರುವ ಬೆಳೆ ಮೊಳಕೆಯೊಡೆಯದೇ ವಿಫಲವಾಗಿದೆ. ಹಲವಾರು ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ವರದಿಗಳು ಬರುತ್ತಿವೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದೇ, ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ, ಈ ಹಿಂದೆ 2013-18 ರಲ್ಲಿ ಅತಿ ಹೆಚ್ಚು ರೈತರ ಆತ್ಮಹತ್ಯೆಯಾಗಿರುವುದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ಅದು ಮರುಕಳಿಸುವಂತೆ ಕಾಣಿಸುತ್ತಿದೆ. ನಾನು ಇದನ್ನು ಖಂಡಿಸುತ್ತೇನೆ. ಸರ್ಕಾರ ಕೂಡಲೇ ಎಲ್ಲ ಕ್ರಮ ಕೈಗೊಳ್ಳಲು ನಾನು ಆಗ್ರಹಿಸುತ್ತೇನೆ. ಮುಂಗಾರು ಮಳೆ ವೈಫಲ್ಯವಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಹಾಗೂ ಅವರ ಸಚಿವ ಸಂಪುಟ ವಿರೋಧ ಪಕ್ಷಗಳ ಸಭೆ ನಡೆಸುವುದರಲ್ಲಿ ಎಲ್ಲ ಸಮಯ ತೊಡಗಿಸಿದ್ದಾರೆ. ಅವರಿಗೆ ರೈತರ ಜೀವಕ್ಕಿಂತ ರಾಜಕೀಯವೇ ಮುಖ್ಯವಾಗಿದೆ. ಇದೊಂದು ರೈತ ವಿರೋಧಿ ಸರ್ಕಾರ ಎಂದು…

Read More

ರಾಯಚೂರು: ಇನ್ಸ್ಟಾಗ್ರಾಂನಲ್ಲಿ ಅನ್ಯಕೋಮಿನ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಕ್ಕೆ ಎರಡು ಕೋಮಿನ ನಡುವೆ ಗಲಾಟೆ ನಡೆದಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಆರ್ಹೆಚ್ ಕ್ಯಾಂಪ್ ಎರಡರಲ್ಲಿ ನಡೆದಿದೆ. ಹಿಂದೂ ಯುವಕರ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ 20ಕ್ಕೂ ಹೆಚ್ಚು ಜನರ ವಿರುದ್ಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಬರ್, ಶಾಮೀದ್, ತಾಜುದ್ದೀನ್, ಸಮೀರ್ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿ ಹೆಸರಿನ ಖಾತೆ ಮೂಲಕ ಇನ್ಸ್ಟಾಗ್ರಾಂನಲ್ಲಿ ಅನ್ಯಕೋಮಿನ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಲಾಗಿತ್ತು. ನಂತರ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ಅಲ್ಲದೇ ಈ ಪೋಸ್ಟ್ ಸ್ಥಳೀಯ ವಾಟ್ಸಾಪ್ ಗ್ರೂಪ್ ಳಲ್ಲೂ ಹರಿದಾಡಿದೆ. ಹೀಗಾಗಿ ಈ ಪೋಸ್ಟ್ ಯಾರು ಹಾಕಿದ್ದಾರೆ ಎಂದು ಅನ್ಯಕೋಮಿನ ಯುವಕರು ವಿಚಾರಿಸಲೆಂದು ಆರ್ಹೆಚ್ ಕ್ಯಾಂಪ್ ಗೆ ಆಗಮಿಸಿದ್ದಾರೆ. ವಿಚಾರಿಸಲೆಂದು ಬಂದ ಅನ್ಯಕೋಮಿನ ಯುವಕರಲ್ಲಿ ಓರ್ವ ಆರ್ಹೆಚ್ ಕ್ಯಾಂಪ್ ಎರಡರ ದುರ್ಗಾದೇವಿ ದೇವಸ್ಥಾನದಲ್ಲಿ ಮಲಗಿ ಹೈಡ್ರಾಮಾ ಸೃಷ್ಟಿಸಿದ್ದಾನೆ.…

Read More

ಮೊಬೈಲ್ ನಂಬರ್ ಕೊಡಲಿಲ್ಲವೆಂಬ ಕಾರಣಕ್ಕೆ ಮಹಿಳೆಯೊಬ್ಬರ ಕಾರಿನ ಗಾಜು ಒಡೆದು ಬೆದರಿಕೆಯೊಡ್ಡಲಾಗಿದ್ದು, ಈ ಸಂಬಂಧ ಪೀಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳೀಯ ನಿವಾಸಿಯಾಗಿರುವ ಮಹಿಳೆ, ಕಂಪನಿಯೊಂದರ ಉದ್ಯೋಗಿ, ಶನಿವಾರ ರಾತ್ರಿ ನಡೆದಿರುವ ಘಟನೆ ಸಂಬಂಧ ದೂರು ಪಡೆದು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ಮೊಬೈಲ್ ನಂಬರ್ ವಿಚಾರವಾಗಿ ಮಹಿಳೆ ಹಾಗೂ ಪಕ್ಕದ ಮನೆಯವರ ನಡುವೆ ಜಗಳ ಶುರುವಾಗಿತ್ತು. ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಆರೋಪಿ, ಕಾರಿನ ಗಾಜು ಒಡೆದು ಬೆದರಿಕೆ ಹಾಕಿರುವುದಾಗಿ ಗೊತ್ತಾಗಿದೆ. ಘಟನೆಗೆ ಪ್ರಮುಖ ಕಾರಣವೇನು ಎಂಬುಂದು ತನಿಖೆಯಿಂದ ತಿಳಿಯಬೇಕಿದೆ’ ಎಂದು ತಿಳಿಸಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿ ಮಾಡಿಕೊಂಡಿದ್ದ  4.5 ಕೋಟಿ ಮೌಲ್ಯದ ಸರ್ಕಾರಿ ಜಮೀನನ್ನು ಜಿಲ್ಲಾಡಳಿತ ವಶಕ್ಕೆ ಪಡೆದಿದೆ. ‘ನಗರ ಜಿಲ್ಲೆಯ 5 ತಾಲ್ಲೂಕುಗಳಲ್ಲಿ ಕೆರೆ, ಕುಂಟೆ, ಗೋಮಾಳ, ಸ್ಮಶಾನ ಹಾಗೂ ರಾಜಕಾಲುವೆ ಒತ್ತುವರಿ ಆಗಿತ್ತು. ಒಟ್ಟು 1 ಎಕರೆ 13 ಗುಂಟೆ ಒತ್ತುವರಿ ತೆರವು ಮಾಡಲಾಗಿದೆ’ ಎಂದು ಜಿಲ್ಲಾಧಿಕಾರಿ ಕೆ. ಎ. ದಯಾನಂದ ಮಾಹಿತಿ ನೀಡಿದ್ದಾರೆ. ಯಲಹಂಕ ತಾಲ್ಲೂಕಿನಲ್ಲಿ ಸರ್ಕಾರಿ ಗೋಮಾಳ, ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ಬೀಳು ಜಮೀನು, ಬೆಂಗಳೂರು ಉತ್ತರ, ಆನೇಕಲ್ ತಾಲ್ಲೂಕಿನಲ್ಲಿ ಖರಾಬು ಜಮೀನು, ಯಲಹಂಕ ಹಾಗೂ ಆನೇಕಲ್‌ ನಲ್ಲಿ ಸ್ಮಶಾನ ಜಮೀನು ಒತ್ತುವರಿ ಆಗಿತ್ತು ಎಂದು ವಿವರಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕನ್ನಡೇತರ ಅಧಿಕಾರಿಗಳು, ನೌಕರರಿಗೆ ಕನ್ನಡ ಕಲಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ನಗರದಲ್ಲಿ ಕನ್ನಡ ಕಲಿಕಾ ಶಿಬಿರವನ್ನು ಪ್ರಾರಂಭಿಸಿದೆ. ರಾಜಾಜಿ ನಗರದಲ್ಲಿರುವ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಸಂಸ್ಥೆಯಲ್ಲಿ ನಡೆಸಲಾದ ಶಿಬಿರವನ್ನು ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ ಉದ್ಘಾಟಿಸಿದರು. ಶಿಬಿರದಲ್ಲಿ ಅಲ್ಲಿನ ಅಧಿಕಾರಿಗಳು ಹಾಗೂ ನೌಕರರಿಗೆ ಕನ್ನಡ ಕಲಿಸಲಾಯಿತು. ‘ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಕಾರ್ಖಾನೆಗಳು, ಬ್ಯಾಂಕ್‌ ಗಳು, ಅಪಾರ್ಟ್‌ಮೆಂಟ್‌ ಗಳು, ಸರ್ಕಾರೇತರ ಸಂಸ್ಥೆಗಳು ಹಾಗೂ ಕನ್ನಡೇತರರು ವಾಸಿಸುವ ಪ್ರದೇಶಗಳಲ್ಲಿ ಕನ್ನಡ ಕಲಿಕಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತದೆ’ ಎಂದು ಸಂತೋಷ ಹಾನಗಲ್ಲ ತಿಳಿಸಿದರು. ‘ಕನ್ನಡ ಕಲಿಕಾ ತರಗತಿಗಳನ್ನು ಪ್ರಾರಂಭಿಸಲು ಹಾಗೂ ಎಲ್ಲ ಕ್ಷೇತ್ರಗಳಲ್ಲಿಯೂ ಕನ್ನಡವನ್ನು ಕಡ್ಡಾಯಗೊಳಿಸಲು ಸರ್ಕಾರ ಬದ್ಧವಾಗಿದೆ. ಕನ್ನಡ ಸಮಗ್ರ ಭಾಷಾ ಅಭಿವೃದ್ಧಿ ಮಸೂದೆ-2022 ಅನುಮೋದನೆಗೊಂಡಿದೆ. ಕನ್ನಡ ಬಳಕೆಗೆ ನಿರಾಕರಿಸಿದಲ್ಲಿ ಶಿಕ್ಷೆಗೆ ಅವಕಾಶವಿದೆ’ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಜ್ಯದಲ್ಲಿನ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿನ ದೇವಾಲಯಗಳಲ್ಲಿ ಇನ್ನು ಮೊಬೈಲ್ ನಿಷಿದ್ಧ ಎಂಬ ಆದೇಶವನ್ನು ಸರ್ಕಾರ ಹೊರಡಿಸಿದೆ. ಈಗಾಗಲೇ ದೇವಾಲಯಕ್ಕೆ ಬರುವ ಭಕ್ತರು ಮೊಬೈಲ್‌ ಗಳನ್ನು ದೇವಾಲಯದ ಪ್ರಾಂಗಣಕ್ಕೆ ತಂದು, ಇತರೆ ಭಕ್ತಾಧಿಗಳಿಗೂ ತೊಂದರೆ ಉಂಟು ಮಾಡುತ್ತಿದ್ದಾರೆ. ಅಷ್ಟು ಮಾತ್ರವಲ್ಲದೆ, ದೇವಾಲಯದಲ್ಲಿ ಭಕ್ತಿಗಿಂತ ಹೆಚ್ಚು ಮೊಬೈಲ್‌ ಗಳ ರಿಂಗ್ ಗಳೇ ಕೇಳುತ್ತಿರುವ ಕಾರಣ, ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ದೇವಾಲಯಗಳಲ್ಲಿ ಮೊಬೈಲ್ ನಿಷಿದ್ಧ ಎಂಬ ಆದೇಶ ಹೊರಡಿಸಿದೆ. ಇನ್ನು ಆದೇಶದಲ್ಲಿ ಇರುವ ವಿಚಾರವಾದ್ರೂ ಏನು? ಎಂಬುದನ್ನು ನೋಡುವುದಾದ್ರೆ, ದೇವಾಲಯಗಳಲ್ಲಿ ಮೊಬೈಲ್‌ ಗಳು ಹೆಚ್ಚು ಸದ್ದು ಮಾಡುತ್ತಿರುವ ಕಾರಣ, ಯಾವುದೇ ಭಕ್ತಾಧಿಗಳು ದೇವಾಲಯ ಪ್ರವೇಶ ಮಾಡಿದ್ರೂ, ಅವರು ತಮ್ಮ ತಮ್ಮ ಮೊಬೈಲ್‌ ಗಳನ್ನು ಸ್ವಿಚ್ ಆಫ್ ಮಾಡಿರಬೇಕು. ಇಲ್ಲವಾದ್ರೆ, ದೇವಾಲಯಕ್ಕೆ ಮೊಬೈಲ್‌ ಗಳನ್ನು ತರಬಾರದು. ಇದು ಕೇವಲ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ದೇವಾಲಯಕ್ಕೆ ಮಾತ್ರ ಎಂದು ಆದೇಶದಲ್ಲಿ ಸರ್ಕಾರ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಯುಪಿಎ ಹಾಗೂ ಅವುಗಳ ಮಿತ್ರ ಪಕ್ಷಗಳ ಮಹಾಘಟಬಂಧನ್ ಸಭೆಗೆ ಈಗಾಗಲೇ ಬೆಂಗಳೂರು ಸಿದ್ಧವಾಗಿದ್ದು, ಇಂದು ಬೆಳಿಗ್ಗೆ 11 ಘಂಟೆಗೆ ಖಾಸಗಿ ಹೊಟೇಲ್‌ ನಲ್ಲಿ ಸಭೆ ಆರಂಭವಾಗಲಿದೆ. ಈ ನಿಟ್ಟಿನಲ್ಲಿ ದೇಶದ ವಿವಿಧ ರಾಜ್ಯಗಳ ನಾಯಕರುಗಳನ್ನು ಸ್ವಾಗತಿಸಲು ಬೆಂಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಪ್ಲೆಕ್ಸ್, ಬ್ಯಾನರ್‌ ಗಳು ರಾರಾಜಿಸುತ್ತಿದ್ದು, ಇತ್ತ ಬೆಂಗಳೂರಿಗೆ ಆಗಮಿಸಿರುವ ನಿತೀಶ್‌ ಕುಮಾರ್ ವಿರುದ್ಧ ಕೆಲ ಕಿಡಿಗೇಡಿಗಳು ಬ್ಯಾನರ್‌ ಗಳನ್ನು ಆಳವಡಿಸಿದ್ದಾರೆ. ಬ್ರಿಡ್ಜ್‌ ಗಳನ್ನೇ ಸರಿಯಾಗಿ ನಿರ್ಮಿಸಲು ಸಾಧ್ಯವಾಗದ ಮುಖ್ಯಮಂತ್ರಿ ಈಗ ಪ್ರಧಾನಿ ಹುದ್ದೆಯ ರೇಸ್‌ ನಲ್ಲಿ ಬಂದಿದ್ದಾರೆ ಎಂದು ಅವಹೇಳನ ಮಾಡುವಂತಹ ಪೋಸ್ಟರ್‌ ಗಳನ್ನು ರಾತ್ರೋರಾತ್ರಿ ಆಳವಡಿಕೆ ಮಾಡಿದ್ದು, ಬೆಂಗಳೂರಿನ ಕಾವೇರಿ ಜಂಕ್ಷನ್‌ ನಿಂದ ತಾಜ್ ವೆಸ್ಟೆಂಡ್ ಹೋಟೆಲ್ ಹಾಗೂ ಚಾಲುಕ್ಯ ಸರ್ಕಲ್‌ ನಲ್ಲಿ ಪೋಸ್ಟರ್ ಆಳವಡಿಕೆ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನಗರದ ಜೋಗುಪಾಳ್ಯದಲ್ಲಿ ನೇಣು ಬಿಗಿದುಕೊಂಡು ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 30 ವರ್ಷದ ದಿವ್ಯಾ ಆತ್ಮಹತ್ಯೆಗೆ ಶರಣಾದ ಟೆಕ್ಕಿ. 2014 ರಲ್ಲಿ ಅರವಿಂದ್ ಎಂಬ ಟೆಕ್ಕಿಯನ್ನ ಮೃತ ದಿವ್ಯ ವಿವಾಹವಾಗಿದ್ದರು. ಮದುವೆಯ ನಂತರ ಗಂಡನ ಕುಟುಂಬಸ್ಥರಿಂದ ಮಾನಸಿಕ ಕಿರುಕುಳ ಆರೋಪ ಕೇಳಿ ಬಂದಿತ್ತು. ದಿವ್ಯಾ ಡೋರ್ ಲಾಕ್ ಮಾಡಿಕೊಂಡಿದ್ದಾಳೆಂದು ಅತ್ತೆ ಮನೆಯವರಿಗೆ ಪತಿ ಅರವಿಂದ್ ಕರೆ ಮಾಡಿದ್ದಾರೆ. ದಿವ್ಯ ಕುಟುಂಬಸ್ಥರು ಬಂದು ನೋಡಿದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ದಿವ್ಯ ಸಾವನ್ನಪ್ಪಿದ್ದಾರೆ. ಹೀಗಾಗಿ ಪತಿ ಹಾಗೂ ಆತನ ಕುಟುಂಬಸ್ಥರ ವಿರುದ್ಧ ಮೃತ ದಿವ್ಯಾ ಪೋಷಕರು ಕೊಲೆ ಆರೋಪ ಮಾಡಿದ್ದು, ಹಲಸೂರು ಪೊಲೀಸರಿಂದ ಆರೋಪಿ ಪತಿ ಅರವಿಂದ್ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಅಮಾವಾಸ್ಯೆ ಎಂದು ದೇವಸ್ಥಾನಕ್ಕೆ ಹೋದ ಸಂದರ್ಭ, ಪತ್ನಿಯ ಎದುರೇ ಗಂಡನ ಬರ್ಬರ ಹತ್ಯೆ ಮಾಡಿರುವ ಘಟನೆ ಮೂಡಲಗಿ ತಾಲೂಕಿನ ಬನಸಿದ್ದೇಶ್ವರ ದೇವಸ್ಥಾನ ಮುಂದೆ ನಡೆದಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಟ್ಟಿ ಬನಸಿದ್ದೇಶ್ವರ ದೇವಸ್ಥಾನದ ಮುಂದೆ ಹೆಂಡತಿಯ ಕಣ್ಣೆದುರೇ ಗಂಡನ ಮೇಲೆ ಮಚ್ಚು ಲಾಂಗುಗಳಿಂದ ಹಲ್ಲೆ ಮಾಡಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಘಟನೆಯಲ್ಲಿ ಶಂಕರ್ ಸಿದ್ದಪ್ಪ ಜಗಮುತ್ತಿ(25) ಮೃತಪಟ್ಟಿದ್ದಾರೆ. ಮೃತ ಶಂಕರ್ ಕಳೆದ ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಅಮಾವಾಸ್ಯೆ ಹಿನ್ನೆಲೆ ಇಂದು ಪತ್ನಿ ಪ್ರಿಯಾಂಕಾ ಜೊತೆಗೆ ದೇವಸ್ಥಾನಕ್ಕೆಂದು ಬಂದಿದ್ದರು. ವಡೇರಟ್ಟಿ ಗ್ರಾಮದ ಬನಸಿದ್ದೇಶ್ವರ ದೇವಸ್ಥಾನಕ್ಕೆ ಬಂದ ವೇಳೆ ಘಟನೆ ನಡೆದಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಮೂಡಲಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More