Author: admin

ಕತಾರ್ ನಲ್ಲಿ ಒಬ್ಬ ಮಲಯಾಳಿ ಸೇರಿದಂತೆ ಎಂಟು ಭಾರತೀಯರಿಗೆ ಮರಣದಂಡನೆ ವಿಧಿಸಲಾಯಿತು. ವ್ಯಾಪಾರ ಉದ್ದೇಶಕ್ಕಾಗಿ ಕತಾರ್‌ ಗೆ ಬಂದಿದ್ದ ನೌಕಾಪಡೆಯ ಮಾಜಿ ಅಧಿಕಾರಿಗಳಿಗೆ ಶಿಕ್ಷೆ ವಿಧಿಸಲಾಗಿದೆ. ಜನವರಿ 14 ರಂದು ಅವರನ್ನು ಬಂಧಿಸಲಾಯಿತು ಮತ್ತು ಇಲ್ಲಿಯವರೆಗೆ ಏಕಾಂತ ಸೆರೆಮನೆಯಲ್ಲಿ ಇರಿಸಲಾಗಿತ್ತು. ದೋಹಾದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಸೆಪ್ಟೆಂಬರ್ ತಿಂಗಳಿನಲ್ಲಿ ಅವರ ಬಂಧನದ ಬಗ್ಗೆ ತಿಳಿಯಿತು. ತಮ್ಮ ವಿರುದ್ಧದ ಅಪರಾಧವನ್ನು ಕತಾರ್ ಅಧಿಕೃತವಾಗಿ ಬಹಿರಂಗಪಡಿಸಿಲ್ಲ. ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಬೀರೇಂದ್ರ ಕುಮಾರ್ ವರ್ಮಾ, ಕ್ಯಾಪ್ಟನ್ ಸೌರಭ್ ವಸಿಷ್ಟ್, ಸಿಡಿಆರ್ ಅಮಿತ್ ನಾಗ್ಪಾಲ್, ಸಿಡಿಆರ್ ಪೂರ್ಣೇಂದು ತಿವಾರಿ, ಸಿಡಿಆರ್ ಸುಗುಣಾಕರ್ ಪಕಾಲ ಮತ್ತು ಸಿಡಿಆರ್ ಸಂಜೀವ್ ಗುಪ್ತಾ ಜೊತೆಗೆ ನಾವಿಕ ರಾಕೇಶ್ ಅವರಿಗೆ ಶಿಕ್ಷೆ ವಿಧಿಸಲಾಗಿದೆ. ಅವರು ಕತಾರ್‌ ನ ಸಶಸ್ತ್ರ ಪಡೆಗಳಿಗೆ ತರಬೇತಿ ಮತ್ತು ಸಂಬಂಧಿತ ಸೇವೆಗಳನ್ನು ಒದಗಿಸುವ ಖಾಸಗಿ ಸಂಸ್ಥೆಯಾದ ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಮತ್ತು ಕನ್ಸಲ್ಟೆನ್ಸಿ ಸರ್ವಿಸಸ್‌ಗಾಗಿ ಕೆಲಸ ಮಾಡುತ್ತಿದ್ದರು. ಜಲಾಂತರ್ಗಾಮಿ ನೌಕೆಗೆ ಸಂಬಂಧಿಸಿದ ಮಾಹಿತಿಯನ್ನು ಇಸ್ರೇಲ್‌ಗೆ…

Read More

ಬೆಂಗಳೂರು: ಅರಣ್ಯ ಕಾಯ್ದೆ ಹಾಗೂ ವನ್ಯಜೀವಿ ಕಾಯ್ದೆ ಸೇರಿದಂತೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಇತರೆ ಕಾನೂನುಗಳ ಕುರಿತು  ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ವ್ಯಾಪಕ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅರಣ್ಯ ಇಲಾಖೆಯಿಂದ   ಕ್ರಮವಹಿಸಲಾಗುವುದು ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು. ವಿಕಾಸ ಸೌಧದ ಕೊಠಡಿ ಸಂಖ್ಯೆ 422 ರಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು  ಅರಣ್ಯ ಇಲಾಖೆಯ ಕಾನೂನಿನ ಬಗ್ಗೆ ಮಾಹಿತಿಯ ಕೊರತೆ ಇರುವ ಕಾರಣ, ಕಾಯ್ದೆ ಸೇರಿದಂತೆ ಇತರೆ ಕಾನೂನಿನ ಉಲ್ಲಂಘನೆ ಸಾರ್ವಜನಿಕ ವಲಯದಲ್ಲಿ ಕಂಡುಬರುತ್ತಿದೆ ಎಂದರು. ಕನ್ನಡ ರಿಯಾಲಿಟಿ ಶೋ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಸ್ಪರ್ಧಿಯಾದ ವರ್ತೂರು ಸಂತೋಷ ಅವರ ಹುಲಿ ಉಗುರು ಧಾರಣೆಯ ಪ್ರಕರಣದ ನಂತರ ಇಲ್ಲಿಯವರೆಗೆ 8 ದೂರುಗಳು ಸಾರ್ವಜನಿಕರ ಕಡೆಯಿಂದ ಬಂದಿದೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನಾ ಕಾರ್ಯ ನಡೆಯುತ್ತಿದ್ದು, ಕಾನೂನಿನ ಪ್ರಕಾರ ಕ್ರಮವಹಿಸಲಾಗುವುದು  ಎಂದರು. ಈ ನೆಲದ ಕಾನೂನು ಎಲ್ಲರಿಗೂ ಒಂದೇ. ವನ್ಯಜೀವಿ ಸಂರಕ್ಷಣಾ ಕಾಯ್ದೆಯ…

Read More

ಬೆಂಗಳೂರು: “ನಾನು ಏನು ಮಾಡಿದ್ದೇನೆ, ಕುಮಾರಸ್ವಾಮಿ ಏನು ಮಾಡಿದ್ದಾರೆ ಎಂದು ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ. ಅಧಿವೇಶನದಲ್ಲಿ ದಾಖಲೆ ಸಮೇತ ಚರ್ಚೆ ಮಾಡೋಣ, ಅವರ ಸವಾಲು ಸ್ವೀಕರಿಸಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸ ಹಾಗೂ ಸಿಎಂ ಗೃಹಕಚೇರಿ ಕೃಷ್ಣಾ ಬಳಿ, ಕುಮಾರಸ್ವಾಮಿ ಅವರು ತಮ್ಮ ಸವಾಲು ಸ್ವೀಕರಿಸಿರುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. “ಕುಮಾರಸ್ವಾಮಿ ನನ್ನ ಸವಾಲು ಸ್ವೀಕಾರ ಮಾಡಿರುವುದು ಬಹಳ ಸಂತೋಷ. ಅವರ ಪ್ರತಿ ಸವಾಲನ್ನು ನಾನು ಸ್ವೀಕರಿಸುವೆ. ನಮ್ಮ ಚರ್ಚೆ ಯಾವೊದೋ ಒಂದು ಚಾನೆಲ್ ನಲ್ಲಿ ಆಗೋದು ಬೇಡ. ಎಲ್ಲಾ ಸುದ್ದಿ ವಾಹಿನಿಗಳಿಗೂ ಸಿಗುವಂತೆ ಅಧಿವೇಶನದಲ್ಲೇ ಚರ್ಚೆ ಮಾಡೋಣ. ಯಾರು ಏನೇನು ಮಾಡಿದ್ದಾರೆ ಎಂದು ಎಲ್ಲವನ್ನೂ ಅಧಿವೇಶನದಲ್ಲಿ ಬಿಚ್ಚಿಡೋಣ. ಅವರ ಬಳಿ ಇರುವ ಸರಕುಗಳನ್ನು ತಂದು ಅವರು ಮಾತನಾಡಲಿ. ನನ್ನ ಬಳಿ ಇರುವ ದಾಖಲೆಗಳನ್ನು ಮುಂದಿಟ್ಟು ನಾನು ಮಾತನಾಡುತ್ತೇನೆ. ಈ ಹಿಂದೆಯೂ ನಾನು ಇಂತಹ ಬಹಿರಂಗ ಚರ್ಚೆ ಸವಾಲು ಸ್ವೀಕರಿಸಿ,…

Read More

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ. ಈ ವರೆಗೆ ಕೇಂದ್ರದಿಂದ ನಯಾಪೈಸೆ ಪರಿಹಾರದ ಹಣ ಬಿಡುಗಡೆಯಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರೇ,ಜಗತ್ತಿನ ಕಷ್ಟ – ದು:ಖಕ್ಕೆಲ್ಲ ಮಿಡಿಯುವ ನಿಮ್ಮ ‘ವಿಶಾಲ ಹೃದಯ’ ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ? ನಿಮ್ಮ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ #ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ ? #AnswerMadiMod ಎಂದು ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಶ್ನಿಸಿದ್ದಾರೆ.

Read More

ಬೆಂಗಳೂರು: 4 ಸಾವಿರ ನಗದು ಶ್ಯೂರಿಟಿ ಅಥವಾ ಒಬ್ಬ ವ್ಯಕ್ತಿಯ ಶ್ಯೂರಿಟಿ, ತನಿಖಾಧಿಕಾರಿಗಳು ಸೂಚಿಸಿದಾಗ ವಿಚಾರಣೆಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿ ಹುಲಿ ಉಗುರು ಲಾಕೆಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ತೂರು ಸಂತೋಷ್‌ಗೆ 2ನೇ ಎಸಿಜೆಎಂ ನ್ಯಾಯಾಲಯ ಜಮೀನು ಮಂಜೂರು ಮಾಡಿದೆ. ಹಳ್ಳಿಕಾರ್‌ ರಾಸುಗಳ ರಕ್ಷಣೆಯ ಮೂಲಕ ಗುರುತಿಸಿಕೊಂಡಿದ್ದ ಸಂತೋಷ್‌ ಅವರು 10ನೇ ಅವೃತ್ತಿಯ ಬಿಗ್‌ ಬಾಸ್‌ ಮನೆಗೆ ಸ್ಪರ್ಧಿಯಾಗಿ ಪ್ರವೇಶ ಮಾಡಿದ್ದರು. ಕುತ್ತಿಗೆಯಲ್ಲಿ ಸಂತೋಷ್‌ ಹುಲಿಯ ಉಗುರು ಇರುವ ಲಾಕೆಟ್ ಹಾಕಿಕೊಂಡಿದ್ದರು. ಈ ಕಾರಣಕ್ಕೆ ಬಿಗ್ ಬಾಸ್ ಮನೆಯಿಂದ ಹೊರ ಕರೆತಂದು ರಾಮೋಹಳ್ಳಿ ಅರಣ್ಯಾಧಿಕಾರಿಗಳು ಸಂತೋಷ್‌ ಅವರನ್ನು ಬಂಧಿಸಿದ್ದರು. ವರ್ತೂರು ಸಂತೋಷ್ ಅವರು ಹಲವು ಪ್ರಾಣಿಗಳನ್ನು ಸಾಕಿದ್ದು, ಹಳ್ಳಿಕಾರ್ ರಾಸು ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದರು. ಅಷ್ಟೇ ಅಲ್ಲದೇ ಅಖಿಲ ಭಾರತ ಹಳ್ಳಿಕಾರ್‌ ತಳಿ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿದ್ದಾರೆ.ಜಾಮೀನು ಸಿಕ್ಕಿದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಸಂತೋಷ್‌ ಇಂದು ಸಂಜೆ 7 ಗಂಟೆ ಬಳಿಕ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

Read More

ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಸಿಬ್ಬಂದಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಂತರಾಷ್ಟ್ರೀಯ ಡ್ರಗ್‌ಪ್ಲಡ್ಜರ್‌ಗಳನ್ನು ಒಳಗೊಂಡಂತೆ ಒಟ್ಟು 10 ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 5,04,30,000/-ರೂ ಮೌಲ್ಯದ ವಿವಿಧ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ನಗರ ಸಿಸಿಬಿ ಮಾದಕ ದವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಡಗ್ ಪೆಡ್ಲರ್‌ ಗಳ ವಿರುದ್ಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಕಳೆದ 15 ದಿನಗಳಲ್ಲಿ ಕಾಡುಗೋಡಿ, ಕೆ.ಆರ್.ಪುರ, ಸೋಲದೇವನಹಳ್ಳಿ, ಹೆಚ್.ಎಸ್‌.ಆರ್ ಲೇಔಟ್, ವೈಟ್‌ ಫೀಲ್ಡ್, ಬಾಣಸವಾಡಿ, ಪರಪನ್ನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕ್ಷಿಪ್ರ ಕಾರ್ಯಾಚರಣೆಯನ್ನು ನಡೆಸಿ ದಾಖಲು ಮಾಡಿರುವ 7 ಪ್ರಕರಣಗಳಲ್ಲಿ 8 ಜನ ವಿದೇಶಿ ಪ್ರಜೆಗಳು ಸೇರಿದಂತೆ ಒಟ್ಟು 10 ಜನ ಡ್ರಗ್‌ ಪೆಡ್ಲರ್‌ ಗಳನ್ನು ಬಂಧಿಸಿದ್ದು, ಇವರುಗಳ ವಶದಿಂದ ಅಂದಾಜು 5,04,30,000/-ರೂ. ಮೌಲ್ಯದ ನಿಷೇಧಿತ ಮಾದಕ ವಸ್ತುಗಳಾದ ಎಂ.ಡಿ.ಎಂ.ಎ ಕಿಸೆಲ್ 3.806 ಕೆಜಿ, ಕೋಕೇನ್-50 ಗ್ರಾಂ, ಎಕ್ಸ್‌ ಟಿಸಿ ಪಿಲ್ಸ್ 25, ಎಲ್.ಎಸ್‌.ಡಿ ಸಿಪ್ಸ್-50, 5.100 8.…

Read More

ಬೆಂಗಳೂರು: ಹಾರ್ನ್ ಮಾಡಿದ ವ್ಯಕ್ತಿಯ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಯಲಹಂಕದಲ್ಲಿ ನಡೆದಿದೆ. ಫ್ಯಾಶನ್ ಡಿಸೈನರ್ ಪ್ರಸಾದ್ ಬಿದ್ದಪ್ಪನ ಪುತ್ರ ಆಡಂ ಬಿದ್ದಪ್ಪ ಮತ್ತಿನಲ್ಲಿ ವೇಗವಾಗಿ ಕಾರು ಚಲಾಯಿಸಿದ್ದು,ಯಲಹಂಕ ಸಂಚಾರಿ ಪೊಲೀಸರ ಜೊತೆಗೂ ಆಡಂ ವಾಗ್ವಾದ ಮಾಡಿದ್ದಾನೆ. ಬಳಿಕ ಅವಿವಾ ಬಿದ್ದಪ್ಪಗೆ ಕರೆ ಮಾಡಿ ಪೊಲೀಸರೊಂದಿಗೆ ಮಾತಾಡುವಂತೆ ಹೇಳಿದ್ದಾನೆ. ಈ ವೇಳೆ ಪೊಲೀಸರು ನೀನು ಯಾರಿಗಾದರೂ ಕರೆ ಮಾಡು ಎಂದು ಹೇಳಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮೀ ಪ್ರಸಾದ್, ಆಡಂ ಕುಡಿದ ಮತ್ತಿನಲ್ಲಿ ಪೊಲೀಸರು ಹಾಗೂ ವ್ಯಕ್ತಿಯೊಬ್ಬರ ಜೊತೆ ಗಲಾಟೆ ಮಾಡಿದ್ದಾನೆ. ನಾನು ಪ್ರಭಾವಿ ಆಗಿದ್ದೇನೆ ನನ್ನನ್ನೇ ಪ್ರಶ್ನೆ ಮಾಡುತ್ತೀರಾ ಎಂದು ಬೆದರಿಕೆ ಹಾಕಿದ್ದಾನೆ. ಯಲಹಂಕ ಸಂಚಾರಿ ಪೊಲೀಸರು ಆತನ ಕಾರನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಮೆಡಿಕಲ್ ಟೆಸ್ಟ್ ಮಾಡಿಸಿ ಆತನನ್ನು ಬಿಟ್ಟು ಕಳುಹಿಸಿದ್ದಾರೆ. ಈ ಸಂಬಂಧ ಕಾರು ಚಾಲಕ ರಾಹುಲ್, ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Read More

ಬೆಂಗಳೂರು: ಕೈಗಾರಿಕೆಗಳು ವಿದ್ಯಾರ್ಥಿಗಳ ಪಠ್ಯಪುಸ್ತಕದ ಪಾಂಡಿತ್ಯಕ್ಕಿಂತ ಕೌಶಲ್ಯ ಶಿಕ್ಷಣ ಕಲಿತವರನ್ನು ಎದುರು ನೋಡುತ್ತಿರುವುದರಿಂದ ಕಾಲೇಜುಗಳು ವಿದ್ಯಾರ್ಥಿಗಳಿಗೆ `ಇಂಡಸ್ಟ್ರಿ ರೆಡಿನೆಸ್’ ನಂತಹ ಶಿಕ್ಷಣ ಪದ್ಧತಿಯನ್ನು ಕಲಿಸಬೇಕೆಂದು ಇನ್ಫೋಸಿಸ್‌ನ L & D ವಿಭಾಗದ ಜಾಗತಿಕ ಮುಖ್ಯಸ್ಥ ಶರತ್ ಚಂದ್ರ ಹೇಳಿದರು. ಬನ್ನೇರುಘಟ್ಟದಲ್ಲಿರುವ ಎಎಂಸಿ ಕಾಲೇಜು ಆಯೋಜಿಸಿದ್ದ `ಅಮೃತ ಮಹೋತ್ಸವದ ವಿಕಸಿತ್ ಭಾರತ್ @2047′ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇದು ಪ್ರಧಾನ ಮಂತ್ರಿಗಳ ಯೋಜನೆಯಾಗಿದ್ದು, ಶಿಕ್ಷಣ ಸಂಸ್ಥೆಗಳನ್ನು ಕೈಗಾರಿಕೆಗಳ ನಡುವಿನ ಸಂಪರ್ಕ ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಸ್ವಾಂತಂತ್ರ‍್ಯ ಬಂದು 75 ವರ್ಷ ಕಳೆದಿದೆ. ಮುಂದಿನ 25 ವರ್ಷಕ್ಕೆ ಶತಮಾನೋತ್ಸವಕ್ಕೆ ನಾವು ಹೆಜ್ಜೆಹಿಡಲಿದ್ದು, ಸಾಕಷ್ಟು ಸವಾಲುಗಳನ್ನು ಎದುರಿಸಲು ಸಿದ್ಧರಾಗಬೇಕಿದೆ. ವಿದ್ಯಾರ್ಥಿಗಳು ಕಲಿಕಾ ವೇದಿಕೆಗಳಾದ ಎಐ, ಎಂಎಲ್‌ಗಳನ್ನು ಬಳಕೆ ಮಾಡಿಕೊಂಡು ಉತ್ಕೃಷ್ಟವಾಗಿ ಕಲಿಯಬೇಕು ಎಂದರು. ಎಎಂಸಿ ಶಿಕ್ಷಣ ಸಂಸ್ಥೆಯ ಕಾರ್ಯಕಾರಿ ಉಪಾಧ್ಯಕ್ಷ ರಾಹುಲ್ ಕಲ್ಲೂರಿ ಮಾತನಾಡಿ, ಭಾರತವು ಆರ್ಥಿಕವಾಗಿ ಮತ್ತಷ್ಟು ಸಧೃಡವಾಗಲು ಮುಂದಿನ 25 ವರ್ಷ ಬಹಳ ಮಹತ್ವವಾಗಿದೆ. ನಾವು ಬೆಳೆಯಬೇಕಾದಲ್ಲಿ, ಕೈಗಾರಿಕೆ ಮತ್ತು…

Read More

ಬೆಂಗಳೂರು: ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ಸುವರ್ಣ ಮಹೋತ್ಸವದ ಅಂಗವಾಗಿ ಪ್ರತಿಷ್ಠಾನ ಸಪ್ತಾಹವನ್ನು ಉದ್ಘಾಟಿಸಲು ಸಲುವಾಗಿ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು  ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಗೌರವಾನ್ವಿತ ರಾಷ್ಟ್ರಪತಿಗಳನ್ನು ರಾಜ್ಯದ ರಾಜ್ಯಪಾಲರಾದ‌ ಥಾವರಚಂದ್ ಗೆಹ್ಲೋಟ್ ಹಾಗೂ ಮುಖ್ಯ.ಮಂತ್ರಿಗಳಾದ  ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ವಂದಿತ ಶರ್ಮ, ರಾಜ್ಯ‌ ಪೊಲೀಸ್‌ ಮಹಾನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾದ ಬಿ. ದಯಾನಂದ‌ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕೆ.ಎ. ದಯಾನಂದ‌ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.

Read More

ಬೆಂಗಳೂರು: ಹೌದು, ನಾನು ಸಿದ್ದರಾಮಯ್ಯಗೆ ರಾಜಕೀಯವಾಗಿ ವಿಲನ್. ಇಲ್ಲ ಎಂದವರು ಯಾರು? ಅವರಿಗೆ ನಾನು ವಿಲನ್ ಆಗದೇ ಸ್ನೇಹಿತ ಆಗಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಮಾತುಗಳಲ್ಲಿ ಹೇಳಿದರು. ಅವರು ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು. ತಾಜ್ ನಲ್ಲಿ ಇದ್ದೆ ಅಂತ ಪದೇ ಪದೇ ಹೇಳ್ತಾರೆ. ತಾಜ್ ನಲ್ಲಿ ನಾನು ಮೋಜು ಮಸ್ತಿ ಮಾಡ್ತಿರಲಿಲ್ಲ. ಅಭಿವೃದ್ಧಿ ಕೆಲಸದ ಚರ್ಚೆ ಮಾಡ್ತಿದ್ದೆ. ನನ್ನ ಬಳಿ ಎಲ್ಲಾ ದಾಖಲಾತಿ ಇದೆ ಎಂದು ಅವರು ಟಾಂಗ್ ನೀಡಿದರು. ನನ್ನನ್ನು ಕಾಂಗ್ರೆಸ್ ನಾಯಕರು ಸಿಎಂ ಎನ್ನುವ ಗೌರವ ಇಲ್ಲದೆ ಪಪೇಟ್ ರೀತಿಯಲ್ಲಿ ನಡೆಸಿಕೊಂಡು ಅಪಮಾನ ಮಾಡಿದರು. ನಾನು ಸಿಎಂ ಆದಾಗ ಕಾಂಗ್ರೆಸ್ ಶಾಸಕರು ಇಸ್ಪೀಟ್ ಎಲೆ ಎಸೆದ ಹಾಗೆ ಅವರ ಅಹವಾಲುಗಳನ್ನು ನನ್ನ ಟೇಬಲ್ ಮೇಲೆ ಎಸೆಯುತ್ತಿದ್ದರು. ಅಂತಹವರು ನನ್ನ ಬಗ್ಗೆ ವಿಲನ್ ಎಂದು ಹೇಳುತ್ತಿದ್ದಾರೆ ಎಂದು ತಿರುಗೇಟು ಕೊಟ್ಟರು ಕುಮಾರಸ್ವಾಮಿ. ಸರಕಾರ ಬೀಳಿಸಿದ್ದ ಸಿದ್ದರಾಮಯ್ಯ: ನನ್ನ…

Read More