Subscribe to Updates
Get the latest creative news from FooBar about art, design and business.
- ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
- ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ: ನಗನಗದು ದೋಚಿ ಪರಾರಿ
- ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
- ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
- ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
- ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
- ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
- ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Author: admin
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷಕ್ಕೆ ಹೋಗಿ ಮೆರೆಯುತ್ತಿದ್ದಾರೆ. ಅವರಿಗೆ ತಾಕತ್ತಿದ್ದರೆ ಕಾಂಗ್ರೆಸ್ ನಿಂದ ಹೊರಬಂದು ಒಂದು ಪಕ್ಷ ಕಟ್ಟಿ 5 ಸ್ಥಾನ ಗೆದ್ದು ತೋರಿಸಲಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಬಹಿರಂಗ ಸವಾಲ್ ಹಾಕಿದ್ದಾರೆ. ವಿಧಾನ ಪರಿಷತ್‌ನಲ್ಲಿ ಜೆಡಿಎಸ್ ವಿರುದ್ಧ ಮಾತನಾಡಿದ್ದಾರೆ. 123 ಸೀಟು ಬಂದ್ರೆ ಪಕ್ಷ ವಿಸರ್ಜನೆ ಮಾಡೋದಾಗಿ ಹೇಳಿದ್ರು. ಇನ್ನೂ ಮಾಡಿಲ್ಲ ಅಂತ ಮಾತಾಡಿದ್ದಾರೆ. ಕನ್ನಡದ ಬಗ್ಗೆ ಪಾಠ ಮಾಡೋ ಸಿದ್ದರಾಮಯ್ಯ ಅವರಿಗೆ ಕನ್ನಡ ಗೊತ್ತಿದೆಯಾ? ವಿಧಾನಸಭೆಯಲ್ಲಿ ಮಾತಾಡಿದ್ರೆ ಆಗ ಉತ್ತರ ಕೊಡ್ತಿದ್ದೆ ಎಂದು ತಿರುಗೇಟು ನೀಡಿದ್ದಾರೆ. ನಾನು ಸ್ಪಷ್ಟವಾಗಿ ಹೇಳಿದ್ದೇನೆ. 123 ಸ್ಥಾನ ಕೊಟ್ಟು ಪಂಚರತ್ನ ಯೋಜನೆ ಜಾರಿ ಮಾಡದೇ ಹೋದ್ರೆ ಪಕ್ಷ ವಿಸರ್ಜನೆ ಮಾಡ್ತೀನಿ ಅಂತಾ ಹೇಳಿದ್ದೆ. 123 ಬಂದಿಲ್ಲ ವಿಸರ್ಜನೆ ಮಾಡಿಲ್ಲ ಅಂತ ಅಲ್ಲಿ ಟೇಂಕಾರದ ಮಾತು ಆಡ್ತಾರೆ. ಇದೇ ಮನುಷ್ಯ 58 ಸ್ಥಾನ ನನ್ನಿಂದ ಬಂತು ಅಂತಾ ಹೇಳಿದ್ದರು. 1999ರಲ್ಲಿ ಇದೇ ಮನುಷ್ಯ ಜೆಡಿಎಸ್ ಅಧ್ಯಕ್ಷ ಆಗಿದ್ದಾಗ 10…
ಜೈಪುರ್: ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಗೆಳೆಯನ ಮುಂದೆಯೇ ಸಾಮೂಹಿಕ ಅತ್ಯಾಚಾರವೆಸಗಿದ್ದ ಮೂವರು ಆರೋಪಿಗಳನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಹಾಗೂ ಆಕೆಯ ಗೆಳೆಯ ಶನಿವಾರ ಅಜ್ಮೀರ್‍ನಿಂದ ರಾತ್ರಿ 10:30 ರ ಸುಮಾರಿಗೆ ಬಸ್ ನಲ್ಲಿ ಜೋಧ್ ಪುರಕ್ಕೆ ಬಂದಿದ್ದಾರೆ. ಬಳಿಕ ಉಳಿದುಕೊಳ್ಳಲು ರೂಮ್ ಪಡೆಯಲು ಅತಿಥಿ ಗೃಹಕ್ಕೆ ತೆರಳಿದ್ದರು. ಆದರೆ ಅಲ್ಲಿನ ಅತಿಥಿ ಗೃಹದ ಸಿಬ್ಬಂದಿ ಹುಡುಗಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ನಂತರ ಅಲ್ಲಿಂದ ಇಬ್ಬರೂ ತೆರಳಿದ್ದಾರೆ. ಅತಿಥಿ ಗೃಹದ ಹೊರಗೆ ನಿಂತಿದ್ದ ಇಬ್ಬರನ್ನೂ ಮಾತಾಡಿಸಿದ ಆರೋಪಿಗಳು ಉಳಿದುಕೊಳ್ಳಲು ವ್ಯವಸ್ಥೆ ಮಾಡುವ ಭರವಸೆ ನೀಡಿದ್ದಾರೆ. ಬಳಿಕ ರೈಲ್ವೇ ನಿಲ್ದಾಣಕ್ಕೆ ಕರೆದೊಯ್ಯುತ್ತಿರುವುದಾಗಿ ನಂಬಿಸಿ ಜೆಎನ್ ವಿಯು ಕ್ಯಾಂಪಸ್ ಬಳಿಯ ಕ್ರೀಡಾಂಗಣಕ್ಕೆ ಕಳುಹಿಸಿದ್ದಾರೆ. ಅಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿ ಬಾಲಕಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಅತಿಥಿಗೃಹದ ಮೇಲ್ವಿಚಾರಕನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬೆಳಗ್ಗಿನ ಜಾವ ಮೈದಾನಕ್ಕೆ ಜನ ವಾಕಿಂಗ್ ಗೆ ಬರುತ್ತಿದ್ದಂತೆ ಆರೋಪಿಗಳು…
ಚಿಕ್ಕೋಡಿ: ಹಿರೇಕೋಡಿ ನಂದಿ ಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಜುಲೈ 21 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಎ1 ಆರೋಪಿ ನಾರಾಯಣ ಮಾಳಿ, ಎ2 ಆರೋಪಿ ಹಸನ್ ದಲಾಯತ್ ಗೆ ನ್ಯಾಯಾಂಗ ಬಂಧನ ವಿಧಿಸಿ ಚಿಕ್ಕೋಡಿ ಪ್ರಧಾನ ದಿವಾಣಿ ನ್ಯಾಯಾಲಯ ನ್ಯಾಯಾಧೀಶ ಚಿದಾನಂದ ಬಡಿಗೇರ ಆದೇಶ ಹೊರಡಿಸಿದ್ದಾರೆ. 7 ದಿನಗಳ ಪೊಲೀಸ್ ಕಸ್ಟಡಿ ಅವಧಿ ಅಂತ್ಯ ಹಿನ್ನೆಲೆಯಲ್ಲಿ ಇಬ್ಬರೂ ಆರೋಪಿಗಳನ್ನು ಸೋಮವಾರ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಿದ್ದರು. ಚಿಕ್ಕೋಡಿ ಪ್ರಧಾನ ದಿವಾಣಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದ ಪೊಲೀಸರು, ಬಳಿಕ ಇಬ್ಬರು ಆರೋಪಿಗಳನ್ನು ಹಿಂಡಲಗಾ ಜೈಲಿಗೆ ರವಾನೆ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನಮ್ಮತುಮಕೂರು: ಜಿಲ್ಲೆಯಲ್ಲಿ 19,000 ಪಡಿತರ ಚೀಟಿಗಳು ಆಕ್ಟೀವ್ ಆಗಿಲ್ಲ, ಇನ್ನು 50 ಸಾವಿರ ಕಾರ್ಡ್ ದಾರರು ಬ್ಯಾಂಕ್ ಖಾತೆಯನ್ನೆ ಹೊಂದಿಲ್ಲ ಎಂದು ಜಿಲ್ಲಾಧಿಕಾರಿ ಶ್ರೀನಿವಾಸ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಪಡಿತರ ಚೀಟಿದಾರರ ಬ್ಯಾಂಕ್ ಖಾತೆಗಳನ್ನು ಆಕ್ಟೀವ್ ಮಾಡಲು ಸೂಚನೆ ನೀಡಲಾಗಿದೆ ಎಂದರು. ಅನ್ನ ಭಾಗ್ಯ ಯೋಜನೆಗೆ 30 ಕೋಟಿ ಹಣ ಬಿಡುಗಡೆ ಆಗಿದ್ದು ಅನ್ನಭಾಗ್ಯ ಯೋಜನೆ ಯಶಸ್ವಿಗೆ ಜಿಲ್ಲಾಢಳಿತ ಅವಿರತ ಪ್ರಯತ್ನ ನಡೆಸಲಾಗಿದೆ ಎಂದರು. ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ವಿಚಾರ. ತುಮಕೂರು ಜಿಲ್ಲೆಯಲ್ಲಿ 6,61,625 ಪಡಿತರ ಚೀಟಿಗಳಿವೆ. ಇದರಲ್ಲಿ 5,29,000 ಫಲನುಭವಿಗಳಿಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುವುದು ಎಂದರು. ನೇರ ಹಣ ಪಾವತಿ ಮೂಲಕ(DBT) ಖಾತೆಗಳಿಗೆ ಹಣವನ್ನು ಎರಡು ಮೂರು ದಿನಗಳಲ್ಲಿ ಜಮೆ ಮಾಡಲಾಗುವುದು. ಗ್ರಾಮದ ಅಂಚೆ ಇಲಾಖೆಯಲ್ಲೇ ಬ್ಯಾಂಕ್ ಖಾತೆ ತೆರೆಯಲು ಯೋಜನೆ ರೂಪಿಸಿದ್ದೇವೆ ಎಂದರು. ಪಡಿತರ ಅಂಗಡಿಯಲ್ಲಿ ಸಾರಯುಕ್ತ ಮಿಶ್ರಿತ ಅಕ್ಕಿ ವಿತರಣೆ: ಗೊಂದಲ ಪಡಿತರ ಅಂಗಡಿಗಳಲ್ಲಿ ನೀಡಲಾಗುತ್ತಿರುವ ಸಾರಯುಕ್ತ…
ತುಮಕೂರು: ವಿದ್ಯುತ್ ಪ್ರವಹಿಸಿ 19 ಕುರಿಗಳು ಸಾವನ್ನಪ್ಪಿದ ಘಟನೆ ಪಾವಗಡ ತಾಲ್ಲೂಕಿನ ಶ್ರೀರಂಗಾಪುರ ಗ್ರಾಮದಲ್ಲಿ ನಡೆದಿದೆ. ರೈತ ಮಂಜುನಾಥ್ ಎಂಬುವರಿಗೆ ಸೇರಿದ 19 ಕುರಿಗಳು ಸಾವನ್ನಪ್ಪಿದ್ದು, ರಾತ್ರಿ ಸುರಿದ ಮಳೆಯ ವೇಳೆ ಕುರಿ ಶೆಡ್ ಬಳಿ ಇದ್ದ ಕಂಬಕ್ಕೆ ವಿದ್ಯುತ್ ಪ್ರವಹಿಸಿದ್ದು, ಪರಿಣಾಮವಾಗಿ ಶೆಡ್ ನೊಳಗಿದ್ದ ಕುರಿಗಳು ಸಾವನ್ನಪ್ಪಿವೆ. ಕುರಿಗಳ ಸಾವಿನಿಂದಾಗಿ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದು, ರೈತ ಕಂಗಾಲಾಗಿದ್ದಾನೆ. ತಿರುಮಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು: ಭೂಮಿ ವಸತಿ ಹಕ್ಕು ವಂಚಿತ ಹೋರಾಟ ಸಮಿತಿ ಹಮ್ಮಿ ಕೊಂಡಿದ್ದ ಸಾಂಕೇತಿಕ ಪ್ರತಿಭಟನೆ ಯಶಸ್ವಿಯಾಯಿತು. ಈ ವೇಳೆ 500ಕ್ಕೂ ಹೆಚ್ಚು ಜಿಲ್ಲೆಯ ಭೂಮಿ ವಸತಿ ರಹಿತರು ಈ ಪ್ರತಿಭಟನೆಗೆ ಭಾಗವಹಿಸಿ ನಗರದ ಟಾನ್ ಹಾಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಮೂಲಕ ತೆರಳಿ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿಗಳು ತುರ್ತಾಗಿ ಸಮಸ್ಯೆಗಳನ್ನು ಬಗೆಹರಿಸಿ ಕೊಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಭೂಮಿ ಮತ್ತು ವಸತಿ ಹಕ್ಕು ಹೋರಾಟ ಸಮಿತಿಯ ರಾಜ್ಯ ಸಂಚಾಲಕರದ ಕುಮಾರ್ ಸಮತಳ ಹಾಗೂ ಬೆಂಗಳೂರಿನ ಮರಿಯಪ್ಪ, ಹೈಕೋರ್ಟ್ ವಕೀಲರಾದ ಉಮಾಪತಿ C, ಮತ್ತು ಸುಧಾ ಕಟ್ವ ಹಾಗೂ ಬೆಂಗಳೂರಿನ ಹಿರಿಯ ಹೋರಾಟಗಾರರದ ನರಸಿಂಹ ಮೂರ್ತಿ, ಮಹಿಳಾ ಹೋರಾಟಗಾರ್ತಿ ಲೀಲಾವತಿ ಹಾಗೂ ತುಮಕೂರಿನ ಸಮಾನಮನಸ್ಕ ವಕೀರಾದ M.S. ಗಣೇಶ್, ಶಿವಕುಮಾರ್ ಮೇಸ್ಟ್ರುಮನೆ, ಪದ್ಮನಾಭ, ಶೇಖರ್, ಚಿನ್ಮಯ್, ಮೋಹನ್, ಶಿವಕುಮಾರ್, ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಭದ್ರೆ ಗೌಡ್ರು, ಸಮಿತಿಯ ಸರಸ್ವತಿಪುರಂನ ಮಂಜುನಾಥ್,…
ಬೆಂಗಳೂರು: ದೇವನಹಳ್ಳಿಯ ಐಟಿಐಆರ್ ವಲಯದಲ್ಲಿ ಫಾಕ್ಸ್ ಕಾನ್ ಕಂಪನಿಯು ಸ್ಥಾಪಿಸಲು ಉದ್ದೇಶಿಸಿರುವ ಐಫೋನ್ ತಯಾರಿಕಾ ಘಟಕಕ್ಕೆ ಪೂರಕವಾಗಿ ತುಮಕೂರಿನಲ್ಲಿ ಮತ್ತೊಂದು ಘಟಕ ಸ್ಥಾಪಿಸುವ ಪ್ರಸ್ತಾವನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಂಪನಿಯ ಸಿಇಓ ಬ್ರ್ಯಾಂಡ್ ಚೆಂಗ್ ನೇತೃತ್ವದ ಎಫ್ಐಐ ನಿಯೋಗದ ಜೊತೆ ಉನ್ನತ ಮಟ್ಟದ ಸಭೆ ವಿಧಾನಸೌಧ ಸಮಿತಿ ಕೊಠಡಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆಗೆ ಅನುಕೂಲವಾಗುವಂತಹ ಉತ್ತಮ ಪರಿಸರ ಇದೆ. ಶೈಕ್ಷಣಿಕ ಹಾಗೂ ಉದ್ಯಮ ವಲಯದ ನಡುವೆ ನಿರಂತರ ಸಂಪರ್ಕ ಮತ್ತು ಸಮನ್ವಯತೆ ಇದೆ. ಜೊತೆಗೆ ಕೌಶಲ್ಯಯುಕ್ತ ಸಿಬ್ಬಂದಿಯೂ ಲಭ್ಯವಿದ್ದಾರೆ ಎಂದು ವಿವರಿಸಿದರು. ಫಾಕ್ಸ್ ಕಾನ್ ಸಂಸ್ಥೆಯು ತನ್ನ ಉದ್ಯಮ ಸ್ಥಾಪಿಸಲು ರಾಜ್ಯ ಸರ್ಕಾರವು ಎಲ್ಲ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.ಫಾಕ್ಸ್ ಕಾನ್ ಕಂಪನಿಯ ಅಂಗಸಂಸ್ಥೆ ಫಾಕ್ಸ್ ಕಾನ್ ಇಂಡಸ್ಟ್ರಿಯಲ್ ಇಂಟರ್ನೆಟ್ (ಎಫ್ಐಟಿ) ಇದಕ್ಕಾಗಿ 8,800 ಕೋಟಿ ರೂ. ಹೂಡಿಕೆ ಮಾಡುವ ಯೋಜನೆ ಹೊಂದಿದೆ. ಇದು 14,000 ಉದ್ಯೋಗ ಸೃಷ್ಟಿಸಲಿದ್ದು ಘಟಕ…
ತುಮಕೂರು ವಿಶೇಷ ವರದಿ: ಪಡಿತರ ಅಂಗಡಿಗಳಲ್ಲಿ ನೀಡಲಾಗುತ್ತಿರುವ ಸಾರಾಯುಕ್ತ ಅಕ್ಕಿಯನ್ನು ಮಾಹಿತಿಯ ಕೊರತೆಯಿಂದಾಗಿ ಸಾರ್ವಜನಿಕರು ಬೇರ್ಪಡಿಸಿ ಉಪಯೋಗಿಸುತ್ತಿರುವ ಘಟನೆ ನಡೆದಿದೆ. ಪಡಿತರ ಅಂಗಡಿಯಲ್ಲಿ ಪಡೆದ ಅಕ್ಕಿಯಲ್ಲಿನ ಸಾರಯುಕ್ತ ಅಕ್ಕಿಯನ್ನು ಬೇರ್ಪಡಿಸಿ ಸಾರ್ವಜನಿಕರು ಉಪಯೋಗಿಸುತ್ತಿದ್ದಾರೆ. ಇದು ಪ್ಲಾಸ್ಟಿಕ್ ಅಕ್ಕಿ ಎಂಬ ಅನುಮಾನ ಸಾರ್ವಜನಿಕರಿಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಈ ಬಗ್ಗೆ ಸರಿಯಾದ ಮಾಹಿತಿಯನ್ನು ನೀಡಬೇಕಿತ್ತು. ಆದ್ರೆ ಅಧಿಕಾರಿಗಳು ಈ ಬಗ್ಗೆ ತುಟಿ ತೆರೆಯದ ಹಿನ್ನೆಲೆಯಲ್ಲಿ ಸಾರ್ವಜನಿಕರು ತಪ್ಪು ತಿಳುವಳಿಕೆಯನ್ನೇ ಸತ್ಯ ಎಂದು ನಂಬುವಂತಾಗಿದೆ. ಅಧಿಕಾರಿಗಳು ಈ ಅಕ್ಕಿಯ ವಿಚಾರದಲ್ಲಿ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡಬೇಕು. ಇನ್ನೂ ಕೂಡ ಸರಿಯಾದ ಮಾಹಿತಿ ನೀಡಲು ಮುಂದಾಗದಿದ್ದರೆ, ವಾಟ್ಸಾಪ್, ಫೇಸ್ ಬುಕ್ ಗಳಲ್ಲಿ ಹರಿದಾಡುತ್ತಿರುವ ವದಂತಿಗಳನ್ನೇ ಜನರು ಸತ್ಯ ಎಂದು ನಂಬುವಂತಾಗುತ್ತದೆ ಎನ್ನುವ ಮಾತುಗಳು ಕೇಳಿ ಬಂದಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಟ್ರಾನ್ಸಫರ್ ನಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದನ್ನು ತಾವು ಲಂಚ ಪಡೆದಿಲ್ಲ ಎಂದ ಸಿಎಂ ಸಿದ್ದರಾಮಯ್ಯ, ಬೇರೆ ಸಚಿವರು ಲಂಚ ಪಡೆಯುತ್ತಿರುವದರ ಬಗ್ಗೆ ಹೇಳಿ ಜಾರಿಕೊಳ್ಳುತ್ತಿದ್ದಾರೆ ಎಂದು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಶ್ಯಾಡೊ ಸಿಎಂ ವಿಚಾರದ ಕುರಿತು ಈಗಾಗಲೇ ವಿಧಾನಸಭೆಯಲ್ಲಿ ಹಲವು ವಿಚಾರ ಎತ್ತಿದ್ದೇವೆ. ಸಿಎಂ ಆಫೀಸ್ ನಿಂದ ಹಿಡಿದು ಎಲ್ಲಾ ಕಡೆಗೂ ಹೊರಗಿನವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ಟ್ರಾನ್ಸ್ ಫರ್ ನಲ್ಲಿ ನಾನು ಯಾವುದಕ್ಕೂ ಹಣ ತಗೊಂಡಿಲ್ಲಾ ಅಂತ ಸಿಎಂ ಹೇಳ್ತಾರೆ. ಸಿಎಂ ಸ್ವಂತಕ್ಕೆ ಹಣ ತಗೊಂಡಿಲ್ಲಾ ಅಂತಾ ಜಾರಿಕೊಳ್ಳುತ್ತಿದ್ದಾರೆ. ಇಡೀ ಅವರ ಸರ್ಕಾರ ಮಂತ್ರಿಮಂಡಳದ ಸದಸ್ಯರು, ಭಂಟರು ಲಂಚ ತೆಗೆದುಕೊಳ್ಳುತ್ತಿರುವುದು ಸ್ಪಷ್ಟವಾಗಿದೆ. ಅಧಿಕಾರಗಳ ವಲಯದಲ್ಲಿ ಬಹಳ ದೊಡ್ಡ ಚರ್ಚೆ ಆಗುತ್ತಿದೆ. ಅದನ್ನು ಮುಚ್ಚಿ ಹಾಕುವ ಸಲುವಾಗಿ ನಾನು ಲಂಚ ತೆಗೆದುಕೊಂಡಿಲ್ಲಾ. ಲಂಚ ತೆಗೆದುಕೊಂಡಿದ್ದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಅಂತ ಹೇಳುತ್ತಿದ್ದಾರೆ. ಅಂದರೆ ಅದರ ಅರ್ಥ ಸರ್ಕಾರದಲ್ಲಿ ಬೇರೆಯವರು ತಗೊಂಡ್ರೆ ಮುಖ್ಯಮಂತ್ರಿಗಳ ಜವಾಬ್ದಾರಿ…
ಐಸಿಐಸಿಐ ಬ್ಯಾಂಕ್ ಎಟಿಎಂ ಘಟಕದ ಯಂತ್ರಗಳಿಗೆ ತುಂಬಬೇಕಿದ್ದ 24. 17 ಲಕ್ಷ ಸಮೇತ ಪರಾರಿಯಾಗಿದ್ದ ಕಸ್ಟೋಡಿಯನ್ ಸೇರಿ ಐವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಕ್ಯಾಶ್ ಮ್ಯಾನೇಜ್‌ಮೆಂಟ್ ಆ್ಯಂಡ್ ಪೇಮೆಂಟ್ ಸಲ್ಯೂಷನ್ಸ್ (ಸಿ. ಎಂ. ಎಸ್) ಕಂಪನಿ ವ್ಯವಸ್ಥಾಪಕ ಸಿದ್ದರಾಜು ಕಳ್ಳತನ ಸಂಬಂಧ ದೂರು ನೀಡಿದ್ದರು. ಬಂಧಿತರಿಂದ ಸುಮಾರು 121 ಲಕ್ಷ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು. ಮಾಜಿ ಉದ್ಯೋಗಿಯ ಸಂಚು ‘ಸಿ. ಎಂ. ಎಸ್ ಕಂಪನಿಯಲ್ಲಿದ್ದ ಪ್ರಮುಖ ಆರೋಪಿ, ಕೆಲ ತಿಂಗಳ ಹಿಂದೆಯಷ್ಟೇ ಕೆಲಸ ಬಿಟ್ಟಿದ್ದ. ಎಟಿಎಂ ಘಟಕಗಳಿಗೆ ಹಣ ತುಂಬುವ ವಿಷಯ ಆತನಿಗೆ ಗೊತ್ತಿತ್ತು. ಕಡಿಮೆ ಸಮಯದಲ್ಲಿ ಹೆಚ್ಚು ಹಣ ಸಂಪಾದಿಸಬೇಕೆಂದು ತೀರ್ಮಾಸಿದ್ದ ಈತ, ಹಾಲಿ ಉದ್ಯೋಗಿಗಳ ಜೊತೆ ಸೇರಿ ಸಂಚು ರೂಪಿಸಿ ಕೃತ್ಯ ಎಸಗಿದ್ದ’ ಎಂದು ಅಧಿಕಾರಿ ತಿಳಿಸಿದರು. ‘ವಿವಿಧ ಬ್ಯಾಂಕ್ ಗಳ ಎಟಿಎಂ ಘಟಕಗಳಿಗೆ ಹಣ ತುಂಬುವ ಜವಾಬ್ದಾರಿಯನ್ನು ಸಿ. ಎಂ. ಎಸ್ ಕಂಪನಿ ವಹಿಸಿಕೊಂಡಿದೆ. ಕಸ್ಟೋಡಿಯನ್ ಹಾಗೂ ಇತರರು,…