Author: admin

ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌಧರಿ ಗ್ರಾಮದಲ್ಲಿ ನವರಾತ್ರಿ ಅಂಗವಾಗಿ ಭವಾನಿ ದೇವಿಮೂತಿ೯ ಪ್ರತಿಷ್ಠಾಪಿಸಿ ಒಂಬತ್ತು ದಿನಗಳ ಕಾಲ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪೂಜೆಯ ಕೊನೆಯ ದಿನ ಗ್ರಾಮದ ಕೊಲಾಟಾ ಮಾದಿಗ ಓಣಿಯಿಂದ ಬಸವೇಶ್ವರ ವೃತ್ತ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ದೇವಿಯ ಭವ್ಯ ಮೆರವಣಿಗೆ ನಡೆಸಲಾಯಿತು. ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಚಿಕ್ಕ ಮಕ್ಕಳ ಕೋಲಾಟಾ ನೃತ್ಯ ಅದ್ದೂರಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಪಂಚಾಯತ್ ಅಧ್ಯಕ್ಷರಾದ ದೇವಿದಾಸ ಧೆೋಳೆ ಹಾಗೂ ಮಾಜಿ ಉಪಾಧ್ಯಕ್ಷರಾದ ಬಂಡೆಪ್ಪಾ ಮತ್ತಿತರರಿದ್ದರು. ವರದಿ: ಅರವಿಂದ ಮಲ್ಲಿಗೆ

Read More

ಬೆಂಗಳೂರು: ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಸವಾಲು ಹಾಕಿರುವ ಮಾಗಡಿ ಶಾಸಕ ಬಾಲಕೃಷ್ಣ ಅವರಿಗೆ ತಿರುಗೇಟು ಕೊಟ್ಟ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು; ಸಿಎಂ, ಡಿಸಿಎಂ ಸೇರಿ ಎಲ್ಲಾ ‌‌ಸಚಿವರು ನಾವು ವರ್ಗಾವಣೆಯಲ್ಲಿ ‌ಕಳೆದ 5 ತಿಂಗಳ ಸರ್ಕಾರದಲ್ಲಿ‌ ಹಣ ತೆಗೆದುಕೊಂಡಿಲ್ಲ ಅಂತ‌ ಆಣೆ ಮಾಡಲಿ ಎಂದು ಆಹ್ವಾನ ನೀಡಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಅವರು ಇಂದು ಮಾಧ್ಯಮಗಳ ಜತೆ ಮಾತನಾಡಿದರು. ಶಾಸಕ ಬಾಲಕೃಷ್ಣ ಅವರ ಸವಾಲ್ ನಾನು ಸ್ವೀಕಾರ ಮಾಡುತ್ತೇನೆ. ಅದರಂತೆ ನನ್ನ ಸವಾಲನ್ನು ಅವರು ಸ್ವೀಕಾರ ಮಾಡಲಿ. ನಾನು,‌ ನನ್ನ ಕುಟುಂಬ ಸರ್ಕಾರದ ಹಣವನ್ನು ಲೂಟಿ ಮಾಡಿಲ್ಲ. ಅಧಿಕಾರಿಗಳ ನಿಯೋಜನೆಯಲ್ಲಿ ಹಣಕ್ಕೆ ಅವಕಾಶ ನೀಡಿಲ್ಲ. ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿ, ತಾಯಿ ಚಾಮುಂಡೇಶ್ವರಿ ಸನ್ನಿದಿ‌ ಎಲ್ಲೇ ಆದರೂ ನಾನು ಆಣೆ‌‌‌‌ ಮಾಡಲು ಸಿದ್ಧ ಎಂದರು ಅವರು. ಚುನಾವಣೆ ವೇಳೆ ನಮ್ಮ ಮನೆ ಹಣ ಖರ್ಚು ಮಾಡಿಲ್ಲ ಎಂದು ಅನೇಕ ಸಲ ಹೇಳಿದ್ದೇನೆ. ಸದನದಲ್ಲಿಯೇ ಈ ಮಾತನ್ನು…

Read More

ವರದಿಗಳ ಪ್ರಕಾರ ಕೇವಲ ಹುಲಿ ಉಗುರಲ್ಲದೇ ಆನೆ ಬಾಲದ ಕೂದಲನ್ನ ಸಂಗ್ರಹ ಮಾಡಿರುವ ಬಗ್ಗೆಯೂ ಶೋಧಕ್ಕೆ ಮುಂದಾಗಿದ್ದಾರೆ. ಸ್ಮಗ್ಲಿಂಗ್ ಮೂಲಕ ಹುಲಿ ಉಗುರು ಹಾಗೂ ಆನೆ ಬಾಲದ ಕೂದಲನ್ನು ಸಂಗ್ರಹ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ದೊಡ್ಡ ದೊಡ್ಡ ಆಭರಣದ ಶೋ ರೂಂ ಗಳ ಮೇಲೆ ದಾಳಿ ನಡೆಸಲು ಅರಣ್ಯಾಧಿಕಾರಿಗಳು ಪ್ಲಾನ್ ಮಾಡಿದ್ದಾರೆ. ಹುಲಿ ಉಗುರಿನ ಲಾಕೆಟ್ ಧರಿಸಿದ್ದರಿಂದ ಹಳ್ಳಿಕಾರ್ ಸಂತೋಷ್ ಬಂಧನವಾದ ನಂತರ ಅರಣ್ಯಾಧಿಕಾರಿಗಳು ಹುಲಿ ಉಗುರು ಲಾಕೆಟ್ ಧರಿಸಿದ ಸೆಲೆಬ್ರೆಟಿಗಳಿಗೆ ನೋಟಿಸ್ ಜಾರಿ ಮಾಡಿದರು. ಇದೀಗ ಅರಣ್ಯಾಧಿಕಾರಿಗಳು ಮತ್ತೊಂದು ರೇಡ್ ಗೆ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ. ಹುಲಿ ಉಗುರಿಗೆ ಪೆಂಡೆಂಟ್ ಮಾಡಿಕೊಡುವ ಆಭರಣ ಅಂಗಡಿಗಳ ಮಾಲೀಕರು ಎಲ್ಲಿಂದ ಹುಲಿ ಉಗುರು ತರ್ತಾರೆ ಎಂಬ ಮಾಹಿತಿ ಕಲೆ ಹಾಕಲು ಅಧಿಕಾರಿಗಳು ಮುಂದಾಗಿದ್ದಾರೆ. ಈಗಾಗಲೇ ಸಿಐಡಿ, ಬಿಬಿಎಂಪಿ ಫಾರೆಸ್ಟ್ ಸೆಲ್ ಅಧಿಕಾರಿಗಳು ಹುಲಿ ಉಗುರು ಮಾರಾಟದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ.

Read More

ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಪ್ಯಾರಾ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ ಲಭಿಸಿದೆ. ಸಿಮ್ರಾನ್ ವಾಟ್ಸ್ ಏಷ್ಯನ್ ಪ್ಯಾರಾ ಗೇಮ್ಸ್ 2023 ರಲ್ಲಿ ಮಹಿಳೆಯರ 200m T12 ಫೈನಲ್ ‌ನಲ್ಲಿ ಬೆಳ್ಳಿ ಪದಕವನ್ನು ಗೆದ್ದರು. ಅವರು ಪೋಡಿಯಂ ಫಿನಿಶ್ ಮಾಡಲು 26.12 ಸೆಕೆಂಡ್‌ಗಳಲ್ಲಿ ಸಮಯವನ್ನು ಗಳಿಸಿದರು. ಇದು ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಆಕೆಯ ಎರಡನೇ ಪದಕವಾಗಿದೆ. ಮಹಿಳೆಯರ 100 ಮೀಟರ್ ಟಿ 12 ಸ್ಪರ್ಧೆಯಲ್ಲಿ ಮೊದಲನೆಯದು.

Read More

ಅಹ್ಮದನಗರ: ಪ್ರಧಾನಿ ನರೇಂದ್ರ ಮೋದಿ ಇಂದು ಮಹಾರಾಷ್ಟ್ರದ ಶಿರಡಿಯಲ್ಲಿರುವ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲಿ ಅವರು ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯಪಾಲ ರಮೇಶ್ ಬೈಸ್, ಮುಖ್ಯಮಂತ್ರಿ ಏಕನಾಥ ಶಿಂದೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಉಪಸ್ಥಿತರಿದ್ದರು. ಪ್ರಧಾನಿ ಮೋದಿ ಅವರು ನೀಲವಾಂಡೆ ಅಣೆಕಟ್ಟಿನ “ಜಲಪೂಜೆ” ನೆರವೇರಿಸಿದರು ಮತ್ತು ಅಣೆಕಟ್ಟಿನ ಕಾಲುವೆ ಜಾಲವನ್ನು ದೇಶಕ್ಕೆ ಸಮರ್ಪಿಸಿದರು, ನಂತರ ಶಿರಡಿಯಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಸುಮಾರು 7,500 ಕೋಟಿ ರೂಪಾಯಿಗಳ ಆರೋಗ್ಯದಂತಹ ಕ್ಷೇತ್ರಗಳಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ಆರೋಗ್ಯ, ರೈಲು, ರಸ್ತೆ, ತೈಲ ಮತ್ತು ಅನಿಲ ಕ್ಷೇತ್ರ ಸೇರಿದಂತೆ ಸುಮಾರು ₹7,500 ಕೋಟಿಗಳ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.

Read More

ನವದೆಹಲಿ: ಸದನದಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿಯೊಬ್ಬರಿಂದ ಲಂಚ ಪಡೆದ ಆರೋಪ ಎದುರಿಸುತ್ತಿರುವ ತೃಣಮೂಲ ಕಾಂಗ್ರೆಸ್‌ ಪಕ್ಷದ ಸಂಸದೆ ಮಹುವಾ ಮೋಯಿತ್ರಾ ಅವರಿಗೆ ಅಕ್ಟೋಬರ್ 31ರಂದು ವಿಚಾರಣೆಗೆ ಹಾಜರಾಗುವಂತೆ ಲೋಕಸಭೆಯ ನೀತಿ ನಿಯಮ ಸಮಿತಿ ಸೂಚಿಸಿದೆ. ಸಮಿತಿಯ ಸಭೆ ಇಂದು ನಡೆದಿದೆ. ಸಮಿತಿಯು ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ವಿನೋದ್‌ ಕುಮಾರ್‌ ಸೊಂಕರ್‌ ಅವರು, ತನಿಖೆಗೆ ನೆರವಾಗುವಂತೆ ಗೃಹ ವ್ಯವಹಾರಗಳ ಸಚಿವಾಲಯ ಮತ್ತು ಐಟಿ ಸಚಿವಾಲಯವನ್ನು ಕೋರಿದ್ದಾರೆ. ಅಕ್ಟೋಬರ್‌ 31ರಂದು ವಿಚಾರಣೆಗೆ ಹಾಜರಾಗುವಂತೆ ಮೋಯಿತ್ರಾ ಅವರಿಗೆ ಸೂಚಿಸಲಾಗಿದೆ ಎಂದೂ ಅವರು ಹೇಳಿದ್ದಾರೆ. ಪಶ್ಚಿಮ ಬಂಗಾಳದ ಕೃಷ್ಣನಗರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಮೊಯಿತ್ರಾ ಅವರು ಸದನದಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿಯೊಬ್ಬರಿಂದ ಲಂಚ ಪಡೆದಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್‌ ದುಬೇ ಅವರು ಆರೋಪಿಸಿದ್ದರು. ಅಲ್ಲದೆ ಈ ಬಗ್ಗೆ ತನಿಖಾ ಸಮಿತಿ ರಚನೆ ಮಾಡಬೇಕು ಎಂದು ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಮನವಿ ಮಾಡಿದ್ದರು.

Read More

ರಾಜ್ಯದಲ್ಲಿ ಸದ್ಯ ಸದ್ದು ಮಾಡುತ್ತಿರುವ ಹುಲಿಯ ಉಗುರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಅವರ ಪುತ್ರ ಶಾಶ್ವತ ಗೌಡ ಪಾಟೀಲ್ ನಿಂದ ಹುಲಿ ಉಗುರಿನ ಪೆಂಡೆಂಟ್ ಅನ್ನು ಅರಣ್ಯ ಅಧಿಕಾರಿಗಳು ವಶಪಡೆದಿದ್ದಾರೆ. ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್  ಪುತ್ರ ಹುಲಿ ಉಗುರು ಧರಿಸಿದ ಆರೋಪ ಕೇಳಿಬಂದಿತ್ತು. ಇದಕ್ಕೆ ಸಾಕ್ಷಿವೆಂಬಂತೆ ಕೆಲ ಫೋಟೋಗಳು ವೈರಲ್​​​ ಆಗಿದ್ದವು. ಬಳಿಕ ಅವರು ಅದು ನಕಲಿ ಹುಲಿ ಉಗುರು, ಬೇಕಾದರೆ ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ಮಾಡಲಿ ಎಂದಿದ್ದರು. ಇದರ ಬೆನ್ನಲ್ಲೇ ಇಂದು ನಗರದಲ್ಲಿರುವ ವಿಜುಗೌಡ ಪಾಟೀಲ್ ಮನೆಯಲ್ಲಿ ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ ಮಾಡಿದ್ದು, ಹುಲಿ ಉಗುರಿನ ಪೆಂಡೆಂಟ್ ವಶಕ್ಕೆ ಪಡೆದುಕೊಂಡಿದ್ದಾರೆ. ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್​ ಪುತ್ರನ ಕೊರಳಲ್ಲಿ ಹುಲಿ ಉಗುರಿನ ಮಾದರಿಯ ಹುಲಿ ಉಗುರಿನ ಪೆಂಡೆಂಟ್ ಹಾಕಿರುವ ಫೋಟೋ ವೈರಲ್ ಆಗಿತ್ತು. ಹುಲಿ ಉಗುರಿನ ಪೆಂಡೆಂಟ್ ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಈ ವಿಷಯಕ್ಕೆ ಸಂಬಂಧಪಟ್ಟಂತೆ…

Read More

ಜಮ್ಮ-ಕಾಶ್ಮೀರ: ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಹತರಾಗಿರುವ ಘಟನೆ ಜಮ್ಮು-ಕಾಶ್ಮೀರದ ಶೋಪಿಯಾನ್ ನಲ್ಲಿ ಶನಿವಾರ ಬೆಳಗ್ಗೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಪ್ವಾರಾ ಪೊಲೀಸರು, ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ನೀಡಿದ್ದರು, ಅದರ ಅಧಾರದ ಮೇಲೆ ಭಾರತೀಯ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಬೋನ್ ಬಝಾರ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಗೆ ಇಳಿದಿದ್ದವು. ಈ ಸಂದರ್ಭದಲ್ಲಿ ಉಗ್ರರು ದಾಳಿ ನಡೆಸಿದಾಗ ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿಯಾಗಿರುವುದಾಗಿ ವರದಿ ವಿವರಿಸಿದೆ. ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಕಾಶ್ಮೀರ ಪೊಲೀಸರು ಎಕ್ಸ್ ‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Read More

ರಾಜಸ್ಥಾನದಲ್ಲಿ ಯುವಕನೊಬ್ಬ ಟ್ರ್ಯಾಕ್ಟರ್‌ ಗೆ ಸಿಲುಕಿ ಸಾವನ್ನಪ್ಪಿದ್ದಾನೆ. ರಾಜಸ್ಥಾನದ ಭರತ್‌ಪುರದಲ್ಲಿ ಈ ದಾರುಣ ಘಟನೆ ನಡೆದಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಯುವಕನೊಬ್ಬ ಟ್ರ್ಯಾಕ್ಟರ್‌ ಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಬಯಾನ ಪ್ರದೇಶದ ಅಡ್ಡಾ ಗ್ರಾಮದಲ್ಲಿ ಬುಧವಾರ ಈ ಘಟನೆ ನಡೆದಿದೆ. ಬಹದ್ದೂರ್ ಅತಾರ್ ಸಿಂಗ್ ಅವರ ಕುಟುಂಬಗಳ ನಡುವೆ ದೀರ್ಘಕಾಲದ ಭೂ ವಿವಾದ ನಡೆಯಿತು. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಎರಡೂ ಕಡೆಯವರು ಸದರ್ ಪೊಲೀಸ್‌ನಲ್ಲಿ ಪರಸ್ಪರ ದೂರು ದಾಖಲಿಸಿಕೊಂಡಿದ್ದರು. ಬಹದ್ದೂರ್ ಸಿಂಗ್ ಅವರ ಕುಟುಂಬ ಬುಧವಾರ ಟ್ರ್ಯಾಕ್ಟರ್‌ನೊಂದಿಗೆ ವಿವಾದಿತ ಭೂಮಿಯನ್ನು ತಲುಪಿದೆ. ಇದನ್ನು ವಿರೋಧಿಸಿ ಅತಾರ್ ಸಿಂಗ್ ಕುಟುಂಬದವರೊಂದಿಗೆ ವಾಗ್ವಾದ ನಡೆಸಿದ್ದರು. ಇದೇ ವೇಳೆ ಯುವಕನೊಬ್ಬ ಮೈದಾನಕ್ಕೆ ನುಗ್ಗಿ ಪ್ರತಿಭಟನೆ ನಡೆಸಿದ್ದಾನೆ. ಟ್ರ್ಯಾಕ್ಟರ್ ಅವರ ಮೇಲೆ ಹರಿದಾಡುತ್ತಿತ್ತು. ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

Read More

ಬೆಂಗಳೂರು: ಹೆಬ್ಬಾಳದ ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣದ ಸಮಗ್ರ ತನಿಖೆಗೆ ಶಿಫಾರಸು ಮಾಡುವಂತೆ ಬಿಜೆಪಿ ನಿಯೋಗವು ಚುನಾವಣಾ ಆಯೋಗವನ್ನು ಕೋರಿದೆ. ಈ ಸಂಬಂಧ ಬಿಜೆಪಿ ನಿಯೋಗವು ಇಂದು ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಎಂಎಸ್‍ಎಲ್ ಟೆಕ್ನೊ ಸೊಲ್ಯೂಶನ್ಸ್ ‍ನಲ್ಲಿ ಮತದಾರರ ನಕಲಿ ಗುರುತುಚೀಟಿ ಸಿದ್ಧಪಡಿಸಿ ನೀಡಲಾಗುತ್ತಿತ್ತು. ಇದು ರಾಷ್ಟ್ರೀಯ ಭದ್ರತೆ ಸಂಬಂಧಿಸಿ ಆತಂಕಕಾರಿ ವಿಚಾರ ಎಂದು ಮನವಿ ತಿಳಿಸಿದೆ. ನಕಲಿ ಮತದಾರರ ಚೀಟಿ ಜಾಲದ ವ್ಯಾಪ್ತಿಯ ವಿಚಾರಣೆ ಆಗಬೇಕಿದ್ದು, ಎನ್ ‍ಐಎ ಅಥವಾ ಸಿಬಿಐಗೆ ಇದನ್ನು ಒಪ್ಪಿಸಲು ಶಿಫಾರಸು ಮಾಡುವಂತೆ ಮನವಿ ಮಾಡಲಾಯಿತು. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಎಫ್ ‍ಐಆರ್ ಪ್ರಕಾರ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಪೊಲೀಸ್ ಇನ್‍ಸ್ಪೆಕ್ಟರ್ ಅವರು ಇದೇ 19ರಂದು ಆರ್‍ಟಿ ನಗರದ ಸುಲ್ತಾನ ಪಾಳ್ಯ ಬನಶಂಕರಿ ಕಾಂಪ್ಲೆಕ್ಸ್‍ ನ ಎಂಎಸ್ ‍ಎಲ್ ಟೆಕ್ನೊ ಸೊಲ್ಯೂಶನ್ಸ್‍ ನಲ್ಲಿ ಗುರುತಿನ ಚೀಟಿಗಳನ್ನು ಸಿದ್ಧಪಡಿಸಲಾಗುತ್ತಿತ್ತು ಎಂದು ತಿಳಿಸಿದ್ದಾರೆ. ಇವರು ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಾನ್…

Read More