Subscribe to Updates
Get the latest creative news from FooBar about art, design and business.
- ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!
- ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
- ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ
- ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ
- ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದೆ: ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಕರೆ
- 175 ನೇರ ಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ: ತುಮಕೂರನ್ನು ದೇಶಕ್ಕೆ ಮಾದರಿ ನಗರವನ್ನಾಗಿಸೋಣ: ಡಿಸಿಎಂ ಡಾ.ಜಿ. ಪರಮೇಶ್ವರ
- ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ
- ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ
Author: admin
ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಪ್ರಾದೇಶಿಕ ನ್ಯಾಯ ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕನ್ನಡದ ಪರವಾಗಿ ಕಾರ್ಯನಿರ್ವಹಿಸಿರುವ ಸಂಘ ಸಂಸ್ಥೆಗಳಿಗೆ ಒಟ್ಟಾರೆ 10 ಪ್ರಶಸ್ತಿಗಳನ್ನು ನೀಡಬೇಕು ಎಂದು ಆಯ್ಕೆ ಸಮಿತಿ ಸದಸ್ಯರು ಅಭಿಪ್ರಾಯ ಪಟ್ಟರು. ಈ ಬಾರಿ 68 ರಾಜ್ಯೋತ್ಸವ ಪ್ರಶಸ್ತಿಗಳನ್ನು ನೀಡಬೇಕಿದ್ದು, ಕರ್ನಾಟಕ ಸಂಭ್ರಮದ ಪ್ರಯುಕ್ತ ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿಗಳನ್ನು ನೀಡಲು ಸಭೆಯಲ್ಲಿ ತೀರ್ಮಾನ ಮಾಡಲಾಯಿತು. ಅರ್ಜಿ ಕೊಡುವವವರು ಹೆಚ್ಚಿದ್ದ ಕಾರಣ, ಅದಕ್ಕೆ ಕಡಿವಾಣ ಹಾಕಲು ಏಕೀಕರಣ ಆಗಿ ಎಷ್ಟು ವರ್ಷಗಳಾಯಿತೋ, ಅಷ್ಟು ಪ್ರಶಸ್ತಿ ಗಳನ್ನು ನೀಡಲು ಹಿಂದೆ ನಮ್ಮ ಸರ್ಕಾರವೇ ತೀರ್ಮಾನ ಕೈಗೊಂಡಿತ್ತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರು ನಗರದ ಅಂತಾರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ ಹಾಗೂ ಚನ್ನಪಟ್ಟಣ ತಾಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನನ್ನ ಚಿಂತನೆಯೂ ಕೂಡ ಆಗಿದೆ ಎಂದು ತಿಳಿಸಿದ್ದಾರೆ. ಡಿಸಿಎಂ ಡಿಕೆಶಿ, ಈ ಹಿಂದೆ ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು. ತದನಂತರ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಡಲಾಯಿತು. ನಂತರ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಂತರ ಜಿಲ್ಲೆಯನ್ನಾಗಿ ಮಾಡಿ, ಬೆಂಗಳೂರು ಗ್ರಾಮಾಂತರ…
ಜೆಡಿಎಸ್ ಪಕ್ಷದ ಸಾವಿರಾರು ಕಾರ್ಯಕರ್ತರನ್ನು ಪಕ್ಷಕ್ಕೆ ಬರ ಮಾಡಿಕೊಳ್ಳಲು ಮೈಸೂರಿನಿಂದ ಓಡೋಡಿ ಬಂದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಜೆಡಿಎಸ್ ಪಕ್ಷದ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾಲನ ಓಟದಲ್ಲಿ ಯಾವುದೂ ಶಾಶ್ವತವಲ್ಲ, ಬಿಜೆಪಿ- ಜೆಡಿಎಸ್ ಗೆಳೆಯರಿಗೆ ಈ ಮಾತನ್ನು ಹೇಳುತ್ತಿದ್ದೇನೆ. ಜನರ ಸೇವೆಯೇ ಜನಾರ್ದನ ಸೇವೆ ಎಂದು ನಾವೆಲ್ಲಾ ಕೆಲಸ ಮಾಡಬೇಕಿದೆ ಎಂದರು. ಜೆಡಿಎಸ್ ನ ಹಲವು ಮುಖಂಡರು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಮ್ಮುಖದಲ್ಲಿ ಶಿವಮೊಗ್ಗದ ಜೆಡಿಎಸ್ ಮುಖಂಡ ಶ್ರೀಕಾಂತ್, ತುಮಕೂರಿನ ಮಾಜಿ ಶಾಸಕ ಶಫಿ ಅಹ್ಮದ್, ಮಾಜಿ ಮೇಯರ್ ನಾಗರಾಜ್, ಪಾಲಾಕ್ಷ, ಫಾರ್ಜಾನ ತಮ್ಮ ಬೆಂಬಲಿಗರ ಜತೆ ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯ ಇಂದಿರಾ ಭವನದಲ್ಲಿ ನಡೆದ ಕಿಕ್ಕಿರದ ಸಮಾರಂಭದಲ್ಲಿ ಮುಖಂಡರನ್ನು ಪಕ್ಷದ ಬಾವುಟ ನೀಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಡಿ. ಕೆ. ಶಿವಕುಮಾರ್ ಸ್ವಾಗತಿಸಿದರು. ಪಕ್ಷದ ಸಿದ್ಧಾಂತ ಒಪ್ಪಿ ಬರುವವರಿಗೆ ಸ್ವಾಗತ ಎಂದರು.
ಹಳ್ಳಿಕಾರ್ ವರ್ತೂರು ಸಂತೋಷ್ ಬಂಧನ ಖಂಡಿಸಿ ರಾಜ್ಯ ವಕ್ನಿಕುಲ ಕ್ಷತ್ರಿಯ ಸಂಘಟನೆಯ ಕಾರ್ಯಕರ್ತರು ಹಾಗೂ ಸಂತೋಷ್ ಅಭಿಮಾನಿಗಳು, ಗ್ರಾಮಸ್ಥರು ವರ್ತೂರಿನ ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಅರಣ್ಯಾಧಿಕಾರಿಗಳ ವಿರುದ್ಧ, ಕಪ್ಪು ಪಟ್ಟಿ ಧರಿಸಿ ಆಕ್ರೋಶ ವ್ಯಕ್ತಪಡಿಸಿದರು. ಹಳ್ಳಿಕಾರ್ ರಾಸುಗಳ ಸಂರಕ್ಷಣೆಯ ಮೂಲಕ ಗುರುತಿಸಿಕೊಂಡಿರುವ ಸಂತೋಷ್ ಅವರನ್ನು ಬಂಧಿಸಿರುವುದು ರೈತರಿಗೆ ಮಾಡುತ್ತಿರುವ ಅಪಮಾನ. ಎಫ್ ಎಸ್ ಎಲ್ ವರದಿ ಬಂದ ನಂತರ ಕ್ರಮ ಕೈಗೊಳಬೇಕು ಎಂದು ಆಗ್ರಹಿಸಿದರು.
ಬಿಎಂಟಿಸಿಎ ಶೇ. 40-50 ರಷ್ಟು ಚಾಲಕರು ಹೃದ್ರೋಗದ ಅಪಾಯದಲ್ಲಿದ್ದಾರೆ. ಅವರು ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ಹೇಳಿದರು. ಕಳೆದ 12 ರಿಂದ 13 ತಿಂಗಳಲ್ಲಿ ನಮ್ಮ ಆಸ್ಪತ್ರೆಯು 8,200 ಬಿಎಂಟಿಸಿ ಚಾಲಕರಿಗೆ ಹೃದಯ ಸಂಬಂಧಿ ಕಾಯಿಲೆಗಳ ತಪಾಸಣೆ ಮಾಡಿದೆ. ಹೃದಯ ಸಂಬಂಧಿ ಸಮಸ್ಯೆಗಳಿಗಾಗಿ ಚಾಲಕರ ತಪಾಸಣೆ ನಡೆಸಲು ಆಸ್ಪತ್ರೆಯು ಆಗಸ್ಟ್ 2022ರಲ್ಲಿ ಒಪ್ಪಂದವೊಂದಕ್ಕೆ ಸಹಿ ಹಾಕಿತ್ತು ಎಂದು ತಿಳಿಸಿದ್ದಾರೆ. ಬಿಎಂಟಿಸಿ ಚಾಲಕರು ಅನಿಯಮಿತ ಕೆಲಸದ ಸಮಯ, ಅಸಮರ್ಪಕ ಆಹಾರ ಸೇವನೆ, ವ್ಯಾಯಾಮದ ಕೊರತೆ ಮತ್ತು ದೂರದ ಪ್ರಯಾಣದ ಸಮಯದಲ್ಲಿ ನಿರಂತರವಾಗಿ ಕುಳಿತುಕೊಳ್ಳುವುದರಿಂದ ಆಯಾಸದಿಂದ ಹೃದಯ ಸಂಬಂಧಿ ಕಾಯಿಲೆಗಳಿಗೆ ಗುರಿಯಾಗುತ್ತಿದ್ದಾರೆ ಎಂದು ಡಾ. ಸಿ. ಎನ್. ಮಂಜುನಾಥ್ ತಿಳಿಸಿದರು. ಇದೇ ರೀತಿಯ ಸಮಗ್ರ ಆರೋಗ್ಯ ತಪಾಸಣೆಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಪೊಲೀಸ್ ಸಿಬ್ಬಂದಿಗಳಿಗೂ ನಡೆಸುವ ಪ್ರಸ್ತಾಪ ಮಾಡಲಾಗಿದೆ. ಏಕೆಂದರೆ ಅವರು ಹೃದಯ ಸಂಬಂಧಿ ಸಮಸ್ಯೆಗಳ ಅಪಾಯದಲ್ಲಿದ್ದಾರೆ ಎಂದರು.
ಹುಲಿ ಉಗುರು ಪೆಂಡೆಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಾಲೇಂಜಿಂಗ್ ಸ್ಟಾರ್ ದರ್ಶನ್, ನಟ ಹಾಗೂ ಸಂಸದ ಜಗ್ಗೇಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಿವಾಸಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ನಟ ದರ್ಶನ್ ನಿವಾಸದಲ್ಲಿ ಅರಣ್ಯಾಧಿಕಾರಿಗಳು ಶೋಧ ನಡೆಸಿದ್ದಾರೆ. ನಟ ದರ್ಶನ್ ನಿವಾಸದಲ್ಲಿ ಎರಡು ತಂಡದಿಂದ ಪರಿಶೀಲನೆ ನಡೆಸಲಾಗಿದೆ ಎನ್ನಲಾಗಿದೆ. ಹಾಗೆಯೇ ಉಗುರು ಪೆಂಡೆಂಟ್ ಕೇಸ್ ನಟ ಜಗ್ಗೇಶ್ ಗೂ ಸಂಕಷ್ಟ ಎದುರಾಗಿದ್ದು, ನಟ ಜಗ್ಗೇಶ್ ನಿವಾಸದಲ್ಲಿ ಶೋಧ ನಡೆಸಿದ್ದಾರೆ. ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ರಾಕ್ ಲೈನ್ ವೆಂಕಟೇಶ್ ನಿವಾಸದಲ್ಲಿ ಅರಣ್ಯಾಧಿಕಾರಿಗಳು ಶೋಧ ನಡೆಸಿದ್ದಾರೆ.ಸದ್ಯ ರಾಕ್ ಲೈನ್ ವೆಂಕಟೇಶ್ ವಿದೇಶ ಪ್ರವಾಸದಲ್ಲಿದ್ದಾರೆ. ರಾಕ್ ಲೈನ್ ವೆಂಕಟೇಶ್ ಪುತ್ರನಿಗೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ರಾಜಾಜಿನಗರದಲ್ಲಿನ ನಿವಾಸದಲ್ಲಿ ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ನೋಟಿಸ್ ಜಾರಿಗೊಳಿಸಲಾಗಿದೆ ಎನ್ನಲಾಗಿದೆ.
ತಮಿಳುನಾಡು ರಾಜ್ಯಪಾಲರ ಅಧಿಕೃತ ನಿವಾಸ ರಾಜಭವನದ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ. ರಾಜಭವನದ ಮುಖ್ಯ ಗೇಟ್ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಯಿತು. ಘಟನೆಯಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ವಿನೋದ್ ಬಂಧಿತ ಆರೋಪಿ. ಸೈದಾಪೇಟ್ ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಿದ್ದ ಮೋಟಾರ್ ಸೈಕಲ್ ನಿಂದ ಪೆಟ್ರೋಲ್ ಕದ್ದು ಎರಡು ಬಾಟಲಿಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ರಾಜಭವನದ ಮುಖ್ಯ ಗೇಟ್‌ಗೆ ವಿನೋದ್ ಎಸೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ವಿರುದ್ಧ ಘೋಷಣೆ ಕೂಗಿದರು. ನೀಟ್ ವಿರೋಧಿ ಮಸೂದೆಗೆ ಸಹಿ ಹಾಕದಿರುವುದನ್ನು ವಿರೋಧಿಸಿದ್ದೇ ಹಲ್ಲೆಗೆ ಕಾರಣ ಎಂದು ವಿನೋದ್ ಪೊಲೀಸರಿಗೆ ತಿಳಿಸಿದ್ದಾರೆ. ಮುಖ್ಯ ಗೇಟ್ ನಲ್ಲಿ ನಿಂತಿದ್ದ ಪೊಲೀಸ್ ತಂಡವು ಎರಡು ಪೆಟ್ರೋಲ್ ಬಾಂಬ್ ಗಳನ್ನು ಎಸೆಯುವ ಮೊದಲು ಅವರನ್ನು ತಡೆದರು. ರಾಜಭವನದ ಮೇಲೆ ನಡೆದ ಬಾಂಬ್ ಸ್ಫೋಟಕ್ಕೆ ಡಿಎಂಕೆ ಸರ್ಕಾರ ಪ್ರಾಯೋಜಕತ್ವ ನೀಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಆರೋಪಿಸಿದ್ದಾರೆ. 2022 ರಲ್ಲಿ, ಚೆನ್ನೈನ ಬಿಜೆಪಿ ಕಚೇರಿಗೆ ಪೆಟ್ರೋಲ್…
ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆ ಶ್ರೀರಾಮ ಮಂದಿರವನ್ನು ಜನವರಿ 22, 2024 ರಂದು ಮಧ್ಯಾಹ್ನ 12:30 ಕ್ಕೆ ಉದ್ಘಾಟಿಸಲಿದ್ದಾರೆ. ಈ ಕುರಿತು ಶ್ರೀರಾಮ ಜನ್ಮಭೂಮಿ ತೀರ್ಥ ದೇವಸ್ಥಾನ ಟ್ರಸ್ಟ್ ಸದಸ್ಯರು ತಿಳಿಸಿದ್ದಾರೆ. ಜನವರಿ 24 ರಂದು ದೇವಾಲಯವನ್ನು ಸಾರ್ವಜನಿಕರಿಗೆ ತೆರೆಯಲಾಗುವುದು. ಟ್ರಸ್ಟ್ ನ ಸದಸ್ಯರು ಪ್ರಧಾನಿಯವರನ್ನು ಭೇಟಿಯಾಗಿ ಆಹ್ವಾನ ನೀಡಿದರು. ಟ್ರಸ್ಟ್ ನ ಆಹ್ವಾನವನ್ನು ಸ್ವೀಕರಿಸಿದ್ದೇನೆ ಮತ್ತು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ನಾನು ಅದೃಷ್ಟಶಾಲಿ ಎಂದು ಭಾವಿಸುತ್ತೇನೆ ಎಂದು ಪ್ರಧಾನ ಮಂತ್ರಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನ ಪ್ರಾಣಪ್ರತಿಷ್ಠೆ ಮಾಡಲಿದ್ದಾರೆ ಎಂದು ಟ್ರಸ್ಟ್ ತಿಳಿಸಿದೆ. ರಾಮ ಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು ಈ ಹಿಂದೆ ಮೂರು ಅಂತಸ್ತಿನ ದೇವಾಲಯದ ಸಂಕೀರ್ಣದ ನೆಲ ಅಂತಸ್ತಿನ ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಘೋಷಿಸಿದ್ದರು. ಆಗಸ್ಟ್ 5, 2020 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇವಾಲಯದ ಶಂಕುಸ್ಥಾಪನೆ ಸಮಾರಂಭವನ್ನು ನೆರವೇರಿಸಿದರು. 2019 ರಲ್ಲಿ,…
ಗ್ಲೆನ್ ಮ್ಯಾಕ್ಸ್ ವೆಲ್ ಏಕದಿನ ಕ್ರಿಕೆಟ್ ವಿಶ್ವಕಪ್ ನಲ್ಲಿ ವೇಗದ ಶತಕ ನೆದರ್ಲೆಂಡ್ಸ್ ವಿರುದ್ಧ ಮ್ಯಾಕ್ಸ್ವೆಲ್ ಬ್ಯಾಟಿಂಗ್ ಬಂದಿತು. ಅವರು 40 ಎಸೆತಗಳಲ್ಲಿ ಶತಕ ಪೂರೈಸಿದರು. ಆಸ್ಟ್ರೇಲಿಯ 50 ಓವರ್ ಗಳಲ್ಲಿ ಎಂಟು ವಿಕೆಟ್ ಗಳ ನಷ್ಟಕ್ಕೆ 399 ರನ್ ಗಳಿಸಿತು. ಈ ವಿಶ್ವಕಪ್ ನಲ್ಲಿ 49 ಎಸೆತಗಳಲ್ಲಿ ಶತಕ ಸಿಡಿಸಿದ ಏಡೆನ್ ಮೆಕ್ರಂ ಅವರ ದಾಖಲೆಯನ್ನು ಮ್ಯಾಕ್ಸ್ ವೆಲ್ ಹಿಂದಿಕ್ಕಿದ್ದಾರೆ. ಮ್ಯಾಕ್ಸ್ ವೆಲ್ 44 ಎಸೆತಗಳಲ್ಲಿ ಎಂಟು ಸಿಕ್ಸರ್ ಹಾಗೂ 9 ಬೌಂಡರಿಗಳ ನೆರವಿನಿಂದ 106 ರನ್ ಗಳಿಸಿದರು. ಮ್ಯಾಕ್ಸ್ ವೆಲ್ ಅವರ ಬ್ಯಾಟಿಂಗ್ ಪ್ರದರ್ಶನವು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ನಾಲ್ಕನೇ ವೇಗದ ಶತಕವಾಗಿದೆ. ದಕ್ಷಿಣ ಆಫ್ರಿಕಾದ ಡಿವಿಲಿಯರ್ಸ್ ಅವರ 31 ಎಸೆತಗಳ ಶತಕ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ವೇಗದ ಶತಕವಾಗಿದೆ. ಗ್ಲೆನ್ ಮ್ಯಾಕ್ಸ್ ವೆಲ್ (106) ಮತ್ತು ಡೇವಿಡ್ ವಾರ್ನರ್ (104) ಆಸ್ಟ್ರೇಲಿಯಾದ ಅಭಿಮಾನಿಗಳು ಪಟಾಕಿ ಸಿಡಿಸಿದ್ದರು. ಅಂತಿಮ ಓವರ್‌ಗಳಲ್ಲಿ ಮ್ಯಾಕ್ಸ್‌ವೆಲ್ ದಾಳಿ ನಡೆಸಿದರು. ಇದು ಆಸ್ಟ್ರೇಲಿಯಾದ ಅತ್ಯುತ್ತಮ…
ಅಮೋಲ್ ಮಜುಂದಾರ್ ಭಾರತ ಮಹಿಳಾ ತಂಡದ ಕೋಚ್ ಆಗಿ ನೇಮಕಗೊಂಡಿದ್ದಾರೆ. ಮುಂಬೈ, ಅಸ್ಸಾಂ ಮತ್ತು ಆಂಧ್ರಪ್ರದೇಶದಂತಹ ತಂಡಗಳಿಗೆ ದೇಶೀಯ ಪಂದ್ಯಗಳನ್ನು ಆಡಿರುವ ಮಜುಂದಾರ್ ಅವರನ್ನು ಸಲಹಾ ಸಮಿತಿಯು ಕೋಚ್ ಆಗಿ ನೇಮಿಸಿದೆ. ರಮೇಶ್ ಪೊವಾರ್ ಅವರ ಅಧಿಕಾರಾವಧಿ ಮುಗಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ. ಅವರು ಈ ಹಿಂದೆ ಭಾರತ ಅಂಡರ್-19 ಮತ್ತು ಅಂಡರ್-23 ತಂಡಗಳಿಗೆ ತರಬೇತುದಾರರಾಗಿದ್ದರು ಮತ್ತು ನೆದರ್ಲ್ಯಾಂಡ್ಸ್, ದಕ್ಷಿಣ ಆಫ್ರಿಕಾ ಮತ್ತು ರಾಜಸ್ಥಾನ ತಂಡಗಳಿಗೆ ಬ್ಯಾಟಿಂಗ್ ಕೋಚ್ ಆಗಿಯೂ ಕೆಲಸ ಮಾಡಿದ್ದಾರೆ. ಕೋಚ್ ಆಗಿ ಮಜುಂದಾರ್ ಅವರ ಮೊದಲ ಸರಣಿ ಇಂಗ್ಲೆಂಡ್ ವಿರುದ್ಧ ಟಿ20, ಏಕದಿನ ಮತ್ತು ಟೆಸ್ಟ್ ಸರಣಿಗಳನ್ನು ಆಡಲು ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಭಾರತಕ್ಕೆ ಬರಲಿವೆ. ಇನ್ನು ಕೆಲವೇ ತಿಂಗಳುಗಳಲ್ಲಿ ಭಾರತ ಎರಡು ಟೆಸ್ಟ್ ಸೇರಿದಂತೆ 11 ಪಂದ್ಯಗಳನ್ನು ಆಡಲಿದೆ. ಇಂಗ್ಲೆಂಡ್ ಮೂರು ಟ್ವೆಂಟಿ-20 ಮತ್ತು ಒಂದು ಟೆಸ್ಟ್ ಆಡಲಿದ್ದು, ಆಸ್ಟ್ರೇಲಿಯಾ ಒಂದು ಟೆಸ್ಟ್, ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನು ಆಡಲಿದೆ.…