Author: admin

ಚಿಕ್ಕಮಗಳೂರು.ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಮುಂದುವರೆದಿದ್ದು, ಕಾಡಾನೆ ದಾಳಿಗೆ ತೋಟದಲ್ಲಿ ಮೇಯಲು ಕಟ್ಟಿದ್ದ ಹಸು ಸ್ಥಳದಲ್ಲೇ ಸಾವನ್ನಪ್ಪಿದೆ. ಮೂಡಿಗೆರೆ ತಾಲೂಕಿನ ಕೂವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕೂಡಿಗೆ ಗ್ರಾಮದ ಬೋಬೇಗೌಡ ಅವರ ತೋಟದಲ್ಲಿ ಹಾಡುಹಗಲೇ ಕಾಡಾನೆ ದಾಳಿ ಮಾಡಿದೆ. ತೋಟದಲ್ಲಿದ್ದ ಬಾಳೆಗಿಡವನ್ನ ಸಂಪೂರ್ಣ ನಾಶ ಮಾಡಿದೆ. ಇನ್ನು ಅಡಿಕೆ ಹಾಗೂ ತೆಂಗಿನ ಮರಗಳನ್ನ ಬುಡಸಮೇತ ಕಿತ್ತು ಹಾಕಿದೆ. ತೋಟದಲ್ಲಿ ಮೇಯಲು ಕಟ್ಟಿಹಾಕಿದ್ದ ಹಸುವಿನ ಮೇಲೂ ಕಾಡಾನೆ ದಾಳಿ ಮಾಡಿದ್ದು ಹಸು ಕೂಡ ಸ್ಥಳದಲ್ಲೇ ಸಾವನ್ನಪ್ಪಿದೆ. ಆನೆ ಬಂದ ಕೂಡಲೇ ಹಸು ಓಡಿ ಹೋಗ್ತಿತ್ತು. ಆದರೆ, ತೋಟದ ಮಾಲೀಕ ಹಸುವನ್ನ ಕಟ್ಟಿಹಾಕಿದ್ದ ಪರಿಣಾಮ ಹಸು ಓಡಿಹೋಗಲು ಸಾಧ್ಯವಾಗಿಲ್ಲ. ಇದರಿಂದ ಹಸು ಕೂಡ ಸ್ಥಳದಲ್ಲೇ ಸಾವನ್ನಪ್ಪಿದೆ. ತೋಟದಲ್ಲಿ ಆನೆಯನ್ನ ಕಂಡ ಕೂಡಲೇ ತೋಟದ ಮಾಲೀಕ ಹಾಗೂ ಅಕ್ಕಪಕ್ಕದ ಸ್ಥಳಿಯರು ಕೂಗಾಡಿ ಆನೆಯನ್ನ ಓಡಿಸಿದ್ದಾರೆ. ಸ್ಥಳಕ್ಕೆ ಪಶುವೈದ್ಯರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ…

Read More

ಬೆಂಗಳೂರು: ವಿವಾಹವಾಗುವುದಾಗಿ ನಂಬಿಸಿ ಕರೆತಂದ ಪ್ರಿಯಕರ ತನ್ನ ಸ್ನೇಹಿತರ ಜೊತೆ ಸೇರಿ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಅಸ್ಸಾಂ ಮೂಲದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರೇಮಿ ತನ್ನನ್ನು ವಿವಾಹವಾಗುವುದಾಗಿ ಭರವಸೆ ನೀಡಿದ್ದ ಹಿನ್ನೆಲೆಯಲ್ಲಿ ತಾನು ಬೆಂಗಳೂರಿಗೆ ಬಂದಿದ್ದಾಗಿ ಆಕೆ ಹೇಳಿದ್ದಾಳೆ. ದೊಡ್ಡನಾಗಮಂಗಲದಲ್ಲಿನ ರೂಮ್ ನಲ್ಲಿ ಆರೋಪಿ ಈ ಕೃತ್ಯ ಎಸಗಿರುವುದಾಗಿ ಸಂತ್ರಸ್ತೆ ಹೇಳಿದ್ದು, ತನ್ನ ಮೇಲೆ ಅತ್ಯಾಚಾರವೆಸಗಲು ಇನ್ನೂ ನಾಲ್ವರು ವ್ಯಕ್ತಿಗಳನ್ನು ಕಳಿಸಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ  ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ನಟ ಸುದೀಪ್ ವಂಚಿಸಿದ್ದಾರೆ ಎಂದು ಆರೋಪ ಮಾಡಿದ್ದ  ನಿರ್ಮಾಪಕರಾದ ಎನ್.​ಎಂ. ಕುಮಾರ್ ಹಾಗೂ ಸುರೇಶ್ ವಿರುದ್ಧ ಜೆಎಂಎಫ್​ ಸಿ ನ್ಯಾಯಾಲಯದಲ್ಲಿ ಕಿಚ್ಚ ಸುದೀಪ್ ಮೊಕದ್ದಮೆ ದಾಖಲಿಸಿದ್ದಾರೆ. ಜೆಎಂಎಫ್​ಸಿ ಕೋರ್ಟ್ ಗೆ ಇಂದು ಖುದ್ದಾಗಿ ಆಗಮಿಸಿ ಕಿಚ್ಚ ಸುದೀಪ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ಸ್ವೀಕರಿಸಿದ ನ್ಯಾಯಾಲಯವು ವಿಚಾರಣೆಯನ್ನು ಆಗಸ್ಟ್ 17ಕ್ಕೆ ಮುಂದೂಡಿದೆ. ಅರ್ಜಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುದೀಪ್ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘಗಳ ಮೇಲೆ ನನಗೆ ಗೌರವವಿದೆ. ಇನ್ನು ವೈಯಕ್ತಿಕ ಹಿತಾಸಕ್ತಿಗೆ ಅವುಗಳನ್ನು ಬಳಸಲಾರೆ. ಹೀಗಾಗಿ ನಾನು ನೇರವಾಗಿ ನ್ಯಾಯಾಲಯಕ್ಕೆ ಬಂದಿದ್ದೇನೆ. ನನ್ನ ವಿರುದ್ಧ ಯಾರೇ ಏನೇ ಆರೋಪ ಮಾಡಿದ್ದರು ನ್ಯಾಯಾಲಯದಿಂದ ಸರಿ ಉತ್ತರ ಸಿಗುತ್ತದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ತುರುವೇಕೆರೆ: ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೂತನ ತಾಲ್ಲೂಕು ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಾಲೂಕು ಅಧ್ಯಕ್ಷ ನಾಗೇಂದ್ರ ತಿಳಿಸಿದರು. ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ರೈತ ಭವನದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದೇವೆ ಎಂದ ಅವರು,  ಪ್ರಧಾನ ಕಾರ್ಯದರ್ಶಿಯಾಗಿ ವಿಜಯಕುಮಾರ್ ಗೌರವಾಧ್ಯಕ್ಷರಾಗಿ ಬಸವರಾಜು ಅಬಕನಹಳ್ಳಿ ಉಪಾಧ್ಯಕ್ಷರಾಗಿ ಗಂಗಾಧರಯ್ಯ ಕಾರ್ಯದರ್ಶಿಯಾಗಿ ಗೋವಿಂದರಾಜು ಸಹಕಾರ್ಯದರ್ಶಿಯಾಗಿ ಆನಂದ್ ಕಾನೂನು ಸಲಹೆಗಾರರಾಗಿ ವಕೀಲ ಮಂಜುನಾಥ್ ಪತ್ರಿಕಾ ಪ್ರತಿನಿಧಿಯಾಗಿ ಸತ್ಯನಾರಾಯಣ್ ಅಲ್ಪಸಂಖ್ಯಾತ ನಗರ ಘಟಕದ ಅಧ್ಯಕ್ಷರಾಗಿ ಕಲಂದರ್ ಹಾಗೂ ಸಂಘಟನಾ ಸಂಚಾಲಕರಾಗಿ ಶಂಕರಲಿಂಗಪ್ಪ ಲಕ್ಕಸಂದ್ರ ಇವರುಗಳನ್ನು ನೇಮಕ ಮಾಡಲಾಗಿದೆ ಎಂದು ಅವರು ತಿಳಿಸಿದರು. ನಂತರ ಮಾತನಾಡಿದ ಅವರು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸರ್ಕಾರಕ್ಕೆ ಕೊಬ್ಬರಿ ಬೆಂಬಲ ಬೆಲೆ ವಿಚಾರದಲ್ಲಿ ಮನವಿ ಸಲ್ಲಿಸಲಾಗಿದೆ ರಾಜ್ಯ ಸರ್ಕಾರವು ನಿಗದಿ ಮಾಡಿರುವಂತ ಪ್ರೋತ್ಸಾಹ ಧನ 1,250ರೂಗಳು ಹೊಸ ಖರೀದಿಗೆ ಮಾತ್ರ ಅನ್ವಯಿಸುತ್ತದೆ ಎಂದು ತೀರ್ಮಾನ ಮಾಡಿರುವುದು ರೈತರಿಗೆ ಮಾಡಿರುವ ದೊಡ್ಡ ಮೋಸ ಇದನ್ನು…

Read More

ಕೆ.ಆರ್.ಪೇಟೆ: ತಾಲ್ಲೂಕಿನ ಅಕ್ಕಿಹೆಬ್ಬಾಳನಲ್ಲಿ  ಪ್ರಾಥಮಿಕ ಕೃಷಿ ಪತ್ತಿನ  ಸಹಕಾರ ಸಂಘ.ನಿ.ಇವರು  ನೂತನವಾಗಿ ನಿರ್ಮಿಸಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡವನ್ನು ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರುರಾದ ಎನ್.ಚಲುವರಾಯಸ್ವಾಮಿಯವರು ಮತ್ತು ತಾಲ್ಲೂಕಿನ ಶಾಸಕರಾದ ಎಚ್.ಟಿ.ಮಂಜು ರವರು ಉದ್ಘಾಟನೆ ಮಾಡಿದರು. ಸಚಿವರಿಗೆ ಮತ್ತು ಶಾಸಕರಿಗೆ ಅಕ್ಕಿಹೆಬ್ಬಾಳು ಹೋಬಳಿಯ ಜನತೆ ಪಟಾಕಿ ಸಿಡಿಸಿ ವಾದ್ಯಮೇಳದೊಂದಿಗೆ ಅದ್ದೂರಿ ಸ್ವಾಗತ ಕೋರಿದ್ದರು. ಕಟ್ಟಡದ ಉದ್ಘಾಟನೆ ನಂತರ ನಡೆದ ಸಭಾ ಕಾರ್ಯಕ್ರಮವನ್ನು ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷರಾದ  ಎಸ್.ಆರ್.ನವೀನ್ ಕುಮಾರ್  ಇವರ ಅಧ್ಯಕ್ಷತೆಯಲ್ಲಿ ಶಾಸಕ ಎಚ್.ಟಿ.ಮಂಜು ರವರು ಜ್ಯೋತಿ  ಬೆಳಗಿಸುವ ಮೂಲಕ ಸಚಿವ ಎನ್. ಚಲುವರಾಯಸ್ವಾಮಿಯವರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಸಹಕಾರ ಸಂಘದ ಪದಾಧಿಕಾರಿಗಳು.ಹೋಬಳಿಯ ಸುತ್ತ ಮುತ್ತ ಸಾರ್ವಜನಿಕರುಉಪಸ್ಥಿತರಿದ್ದರು. ವರದಿ: ಮಂಜು ಶ್ರವಣೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ:…

Read More

ಬೆಂಗಳೂರು ಹೊರವಲಯದಲ್ಲಿ ಚಡ್ಡಿ ಗ್ಯಾಂಗ್ ಮತ್ತೆ ಕಾಣಿಸಿಕೊಂಡಿದೆ. ಈ ಗ್ಯಾಂಗ್ ಕೈಯಲ್ಲಿ ಆಯುಧಗಳನ್ನು ಹಿಡಿದು ಸರ್ಜಾಪುರ ರಸ್ತೆ ಸುತ್ತಮುತ್ತ ಕಳ್ಳತನದ ಕೆಲಸಕ್ಕೆ ಇಳಿದಿದೆ. ಸದ್ಯ ಈ ಚಡ್ಡಿ ಗ್ಯಾಂಗ್ ನ ಐವರು ಕಳ್ಳರ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸರ್ಜಾಪುರ ರಸ್ತೆಯ ಗುಟ್ಟಹಳ್ಳಿ, ದೊಡ್ಡ ತಿಮ್ಮಸಂದ್ರದ ವಿಲ್ಲಾಗಳಲ್ಲಿ ರಾತ್ರಿ ವೇಳೆ ಕಳ್ಳತನಕ್ಕೆ ಈ ಚಡ್ಡಿ ಗ್ಯಾಂಗ್ ಪ್ರಯತ್ನಿಸಿರುವುದು ಸಿಸಿ ಟಿವಿಯಿಂದ ಬಯಲಾಗಿದೆ. ಮುಖಕ್ಕೆ ಕರ್ಚೀಫ್ ಕಟ್ಟಿಕೊಂಡು ಕಳ್ಳತನಕ್ಕೆ ಇಳಿಯುತ್ತಿರುವ ಈ ಚಡ್ಡಿ ಗ್ಯಾಂಗ್ ಹರಿತವಾದ ಆಯುಧಗಳನ್ನು ಇಟ್ಟುಕೊಂಡು ಓಡಾಡುತ್ತಿದ್ದಾರೆ. ಈ ಬಗ್ಗೆ ಸ್ಥಳೀಯ ನಿವಾಸಿಗಳು ಸರ್ಜಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಜ್ಯದಲ್ಲಿರುವ ಕ್ಲಬ್‌ಗಳ ಕಾರ್ಯವೈಖರಿ ಮತ್ತು ಚಟುವಟಿಕೆಗಳನ್ನು ಪರಿಶೀಲಿಸಲು ರಚಿಸಲಾಗಿರುವ ವಿಧಾನಪರಿಷತ್ತಿನ ವಿಶೇಷ ಸದನ ಸಮಿತಿಯು ‘ಬೆಂಗಳೂರು ಟರ್ಫ್ ಕ್ಲಬ್’ ಅನ್ನು ಶಾಶ್ವತವಾಗಿ ಸ್ಥಳಾಂತರಿಸುವಂತೆ ಶಿಫಾರಸು ಮಾಡಲು ಮುಂದಾಗಿದೆ. ಬಿಜೆಪಿಯ ಎನ್. ರವಿಕುಮಾರ್ ನೇತೃತ್ವದ ಸಮಿತಿಯು ಮುಂದಿನ ವಿಧಾನಮಂಡಲ ಅಧಿವೇಶನಕ್ಕೂ ಮೊದಲು ವರದಿ ಸಿದ್ಧಪಡಿಸಲು ತೀರ್ಮಾನಿಸಿದೆ. ಈ ಸಮಿತಿಯು ನಗರದ ಹೃದಯಭಾಗದಲ್ಲಿರುವ ಟರ್ಫ್ ಕ್ಲಬ್ ಅನ್ನು ನಗರದ ಹೊರವಲಯದಲ್ಲಿ ಚಿಕ್ಕಜಾಲ ಬಳಿ ಒದಗಿಸಿದ ಜಮೀನಿಗೆ ಸ್ಥಳಾಂತರಿಸುವಂತೆ ಶಿಫಾರಸು ಮಾಡಲು ನಿರ್ಧರಿಸಿದೆ. ವಿಧಾನ ಪರಿಷತ್ತಿನಲ್ಲಿ ಹಲವು ಸದಸ್ಯರು ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿದ ರವಿಕುಮಾರ್, ‘ವರದಿ ಅಂತಿಮಗೊಳಿಸಲು ಇನ್ನೂ ಎರಡು ಸಭೆಗಳನ್ನು ನಡೆಸಬೇಕಿದೆ. ಮುಂದಿನ ಅಧಿವೇಶನದ ವೇಳೆಗೆ ವರದಿಯನ್ನು ಸದನಕ್ಕೆ ಸಲ್ಲಿಸಲಾಗುವುದು’ ಎಂದರು. ವಸ್ತ್ರಸಂಹಿತೆ ಮತ್ತು ಇತರ ನಿರ್ಬಂಧಗಳನ್ನು ವಿಧಿಸಿರುವ ಕ್ಲಬ್‌ಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಮತ್ತು ಅಂತಹ ನಿರ್ಬಂಧಗಳನ್ನು ತೆಗೆದುಹಾಕುವ ಬಗ್ಗೆಯೂ ಸಮಿತಿ ಚರ್ಚೆ ನಡೆಸಿದೆ. ಇದೇ ವೇಳೆ ಕಾಂಗ್ರೆಸ್‌ನ ಯು. ಬಿ. ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರ ಪ್ರಶ್ನೆಗೆ ಉತ್ತರಿಸಿದ ಉಪ…

Read More

ಚಿಕ್ಕೋಡಿ: ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಹಿನ್ನೆಲೆಯಲ್ಲಿ ಹಿರೇಕೊಡಿ ಗ್ರಾಮದ ನಂದಿ ಪರ್ವತ ಆಶ್ರಮಕ್ಕೆ ಇಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಭೇಟಿ ನೀಡಿ, ಭಕ್ತಾದಿಗಳಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯಿಂದ ಆಘಾತವಾದ ಸಮಸ್ತ ಜೈನ ಸಮುದಾಯದ ಬಂಧುಗಳ, ಅಪಾರ ಸಂಖ್ಯೆಯ ಭಕ್ತರ ನೋವಿನಲ್ಲಿ ನಾವೆಲ್ಲ ಭಾಗಿಯಾಗಿದ್ದೇವೆ. ಆರೋಪಿಗಳಿಗೆ ಕಠಿಣ ಕ್ರಮ ವಿಧಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈಗಾಗಲೇ ಗೃಹ ಸಚಿವರು ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಹಿರೇಕೊಡಿ ಗ್ರಾಮದ ನಂದಿ ಪರ್ವತ ಆಶ್ರಮಕ್ಕೆ ಭೇಟಿ ನೀಡಿದ್ದಾರೆ. ಸರ್ಕಾರ ಈ ಬಗ್ಗೆ ಸಾಕಷ್ಟು ಗಮನ ಹರಿಸಿದೆ. ಪ್ರಕರಣ ಭೇದಿಸುವಲ್ಲಿ ಪೊಲೀಸರು ತತಕ್ಷಣವೇ ಯಶಸ್ವಿಯಾಗಿದ್ದಾರೆ. ಇಂತಹ ಅಹಿಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು. ಸ್ವಾಮೀಜಿಗಳ ಹತ್ಯೆಯನ್ನು ಎಲ್ಲ ಪಕ್ಷಗಳು ಖಂಡನೆ ಮಾಡಿವೆ.…

Read More

ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಬಿ ಖಾತೆನೀಡುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿಧಾನಸಭೆಯಲ್ಲಿ ತಿಳಿಸಿದರು. ಇಂದು ಪ್ರಶೋತ್ತರ ವೇಳೆಯಲ್ಲಿ ಜೆಡಿಎಸ್ ಶಾಸಕ ಜಿ. ಡಿ ಹರೀಶ್‌ ಗೌಡ ಅವರ ಪ್ರಶ್ನೆಗೆ ಪೌರಾಡಳಿತ ಸಚಿವ ರಹಿಂಖಾನ್ ಉತ್ತರಿಸುತ್ತಿದ್ದ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಸಚಿವ ಸುರೇಶ್, ಬೆಂಗಳೂರಿನಲ್ಲಿ ಭೂ ಪರಿವರ್ತನೆಯಾದ ನಿವೇಶನ ಮತ್ತು ಕಟ್ಟಡಗಳಿಗೆ ಎ ಖಾತೆ, ಭೂ ಪರಿವರ್ತನೆಯಾಗದ ಸ್ವತ್ತುಗಳಿಗೆ ಬಿ ಖಾತೆ ನೀಡಲಾಗುತ್ತಿದೆ. ಅದೇ ರೀತಿ ರಾಜ್ಯದ ಎಲ್ಲ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಿ ಖಾತೆಗೆ ಅವಕಾಶ ಕಲ್ಪಿಸಿದರೆ ಸರ್ಕಾರಕ್ಕೂ ಎರಡು ಸಾವಿರ ಕೋಟಿ ಆದಾಯ ಬರಲಿದೆ ಎಂದರು. ಸಂಬಂಧ ಪೌರಾಡಳಿತ ಸಚಿವರ ಜತೆ ಚರ್ಚಿಸಿ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಖಾತೆ ಬಿಕ್ಕಟ್ಟು ಬಹಳಷ್ಟು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇರುವುದರಿಂದ ಕುಡಿಯುವ ನೀರು, ರಸ್ತೆ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಿದರೂ ಆದಾಯ ಬರುತ್ತಿಲ್ಲ ಎಂದು ಹೇಳಿದರು.…

Read More

ಹಾರ್ನ್ ಮಾಡಿ ದಾರಿ ಕೇಳಿದ್ದಕ್ಕೆ ಕಾರು ಅಡ್ಡಗಟ್ಟಿ ಗಾಜು ಪುಡಿಪುಡಿ ಮಾಡಿ ಪುಂಡಾಟ ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ವ್ಯಕ್ತಿಯೊಬ್ಬರಿಗೆ ವರ್ತೂರು ಬಳಿ ಕಾರಿನಲ್ಲಿ ಹೋಗುವಾಗ ಘಟನೆ ನಡೆದಿದೆ. ಕಾರಿನಲ್ಲಿ ಹೋಗುತ್ತಿದ್ದಾಗ ಮುಂದುಗಡೆ ಅಡ್ಡಾದಿಡ್ಡಿಯಾಗಿ ಬೈಕ್ ಚಾಲನೆ ಮಾಡುತ್ತಿದ್ದ ಆರೋಪಿಗಳಿಗೆ ಕಾರು ಚಾಲಕ ದಾರಿ ಬಿಡುವಂತೆ ಹಾರ್ನ್ ಮಾಡಿದ್ದರು. ಇದರಿಂದ ಸಿಟ್ಟಿಗೆದ್ದ ಆರೋಪಿಗಳು ಕೆಲ ದೂರ ಹೋದ ಬಳಿಕ ಕಾರನ್ನು ಅಡ್ಡಗಟ್ಟಿದ್ದಾರೆ. ಅಪಾಯದ ಮೂನ್ಸೂಚನೆ ಅರಿತ ಕಾರು ಚಾಲಕ ತಕ್ಷಣವೇ ಕಾರನ್ನು ತಾನು ಬಂದ ದಾರಿಯಲ್ಲೇ ರಿವರ್ಸ್ ತೆಗೆದುಕೊಂಡು ತಪ್ಪಿಸಿಕೊಂಡು ಹೋಗಿದ್ದರು. ಆದರೆ, ಆರೋಪಿಗಳು ಕಾರನ್ನು ಫಾಲೋ ಮಾಡಿಕೊಂಡು ಬಂದು ಗುಂಜೂರು ಬಳಿ ಅಪಾರ್ಟ್‌ಮೆಂಟ್ ಸಮೀಪ ಬಂದು ಗಲಾಟೆ ಮಾಡಿದ್ದರು. ಎಂಟ್ರಿ ಗೇಟ್ ಬಳಿ ಕಾರು ಅಡ್ಡಗಟ್ಟಿ ಗಾಜುಗಳನ್ನು ಒಡೆದು ದಾಂಧಲೆ ಮಾಡಿದ್ದರು. ಆರೋಪಿಗಳು ದುಷ್ಕೃತ್ಯ ಹಾಗೂ ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಈ ಬಗ್ಗೆ ಟ್ವಿಟರ್ ಮೂಲಕ ಕಾರಿನ ಮಾಲೀಕ ಪೊಲೀಸರಿಗೆ…

Read More