Subscribe to Updates
Get the latest creative news from FooBar about art, design and business.
- ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
- ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ: ನಗನಗದು ದೋಚಿ ಪರಾರಿ
- ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
- ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
- ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
- ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
- ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
- ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Author: admin
ರೌಡಿ ಶೀಟರ್ ಕಪೀಲ್ ಮರ್ಡರ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆ ಸಿಕ್ಕಿವೆ. ಡಿಜೆ ಹಳ್ಳಿಯಲ್ಲಿ ಫೈನಾನ್ಸ್ ಹಾಗೂ ರಿಯಲ್ ಎಸ್ಟೇಟ್ ವ್ಯವಹಾರ ಮಾಡ್ತಿದ್ದ ರೌಡಿ ಶೀಟರ್ ಕಪಿಲ್ ನನ್ನು ಜುಲೈ 12 ರಂದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹಂತಕರು ಆತನನ್ನು ಅಟ್ಟಾಡಿಸಿ ಕೊಂದಿದ್ದಾರೆ. ಈ ಡೆಡ್ಲಿ ಅಟ್ಯಾಕ್ ಸಿಸಿಟಿವಿ ದೃಶ್ಯ ಈಗ ವೈರಲ್ ಆಗುತ್ತಿದೆ. ಮುಖಕ್ಕೆ ಮಾಸ್ಕ್, ಹೆಲ್ಮಟ್ ಧರಿಸಿದ್ದ ಆರೋಪಿಗಳು ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕಪಿಲ್ ಮೇಲೆ ಹಲ್ಲೆ ಮಾಡಿದ್ದರು. ಜೀವವನ್ನು ಉಳಿಸಿಕೊಳ್ಳಲು ಕಪಿಲ್ ಕೊನೆ ಹಂತದವರೆಗೂ ಯತ್ನಿಸಿದ್ದರು. ಅದರೆ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಸುಮಾರು ನೂರು ಮೀಟರ್ ಅಟ್ಟಾಡಿಸಿಕೊಂಡು ಹೋಗಿ ಮನಸೋ ಇಚ್ಚೆ ಕತ್ತರಿಸಿ ಹಾಕಿದ್ದಾರೆ. ಸದ್ಯ ಪ್ರಕರಣ ಸಂಬಂಧ ಏಳು ಜನ ಆರೋಪಿಗಳನ್ನು ಡಿ ಜೆ ಹಳ್ಳಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
‘ಮೆಟ್ರೊ ನಿಲ್ದಾಣಗಳಿಂದ ಶೀಘದ್ರಲ್ಲೇ ಮೀಟರ್ ಚಾಲಿತ ಆ್ಯಪ್ ಆಧಾರಿತ ಆಟೊ ಸೇವೆಗೆ ಚಾಲನೆ ನೀಡಲಾಗುವುದು’ ಎಂದು ಆಟೊ ರಿಕ್ಷಾ ಚಾಲಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ ತಿಳಿಸಿದರು. ನಗರದಲ್ಲಿ ಗುರುವಾರ ಬಿ. ಪ್ಯಾಕ್ ಮತ್ತು ಡಬ್ಲ್ಯೂಆರ್‌ಐ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ‘ಪರ್ಸನಲ್ ಟು ಪಬ್ಲಿಕ್ ಅಭಿಯಾನ’ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಅಗಸ್ಟ್ 15ರಂದು ಮೆಟ್ರೊಮಿತ್ರಾ ಎಂಬ ಆ್ಯಪ್ ಆಧಾರಿತ ಸೇವೆಯನ್ನು ಪ್ರಾಯೋಗಿಕವಾಗಿ ಚಾಲನೆ ನೀಡಲಾಗುವುದು. ಚಾಲಕರನ್ನು ವೃತ್ತಿಪರರನ್ನಾಗಿ ಮಾಡಲು ಈಗಾಗಲೇ ತರಬೇತಿ ನೀಡುತ್ತಿದ್ದೇವೆ. ತಂತ್ರಜ್ಞಾನ ಮತ್ತು ಪ್ರಯಾಣಿಕರನ್ನು ಕರೆದುಕೊಂಡು ಹೋಗುವ ವೆಚ್ಚ ಸರಿದೂಗಿಸಲು ಮೀಟರ್ ಶುಲ್ಕದ ಜತೆಗೆ 110 ಹೆಚ್ಚುವರಿಯಾಗಿ ನೀಡಬೇಕು’ ಎಂದು ಹೇಳಿದರು. ಬಿ. ಪ್ಯಾಕ್ ಮುಖ್ಯಸ್ಥೆ ರೇವತಿ ಅಶೋಕ್, ‘ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸುವ ಸಲುವಾಗಿ ಸಂಚಾರ ದಟ್ಟಣೆಗೆ ಕಡಿವಾಣ ಹಾಕಲು ನಗರದ ಜನ ವಾರದಲ್ಲಿ ಎರಡು ದಿನ ಸಾರ್ವಜನಿಕ ಸಾರಿಗೆಗಳನ್ನು ಬಳಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ವೈಟ್ ಫೀಲ್ಡ್ ಮತ್ತು ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಮಾರ್ಗ ಕಾರ್ಯಾರಂಭ ಮಾಡಲಿದೆ. ಈ…
ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ಸ್ಪಂದಿಸಬೇಕಾದ ಕೇಂದ್ರ ಸರ್ಕಾರ ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ. ಹೆಚ್ ಮುನಿಯಪ್ಪ ಗುಡುಗಿದ್ದಾರೆ. ಇಂದು ವಿಧಾನಪರಿಷತ್ ಕಲಾಪದಲ್ಲಿ ಮಾತನಾಡಿದ ಸಚಿವ ಕೆ. ಹೆಚ್. ಮುನಿಯಪ್ಪ, ನಾವು ಕೇಂದ್ರ ಸರ್ಕಾರದ ಮುಂದೆ ಪರಿಪರಿಯಾಗಿ ಬೇಡಿಕೊಂಡಿದ್ದೇವೆ. ಆಹಾರ ಭದ್ರತಾ ಕಾಯಿದೆ ಹೇಗೆ ಕಾರ್ಯನಿರ್ವಹಣೆ ಮಾಡುತ್ತದೆ? ಎಂಬುದು ನಮಗೂ ಗೊತ್ತಿದೆ. ಅವರ ಬಳಿ ಅಕ್ಕಿ ಇದೆ. ನಾವು ಪುಕ್ಕಟ್ಟೆ ಅಕ್ಕಿ ಕೇಳುತ್ತಿಲ್ಲ. ಅದಕ್ಕೆ ಹಣ ನೀಡುತ್ತೇವೆ ಎಂದರೂ, ಕೇಂದ್ರ ಸರ್ಕಾರ ಅಕ್ಕಿ ನೀಡಲಿಲ್ಲ. ಕೇಂದ್ರ ಸರ್ಕಾರ ರಾಜ್ಯದ ಪಾಲಿಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಕಿಡಿಕಾರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮೈಸೂರು: ಮಂಡ್ಯ ನಂತರ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ದ್ವೇಷದ ರಾಜಕಾರಣದ ಆರೋಪ ಕೇಳಿಬಂದಿದೆ. K.R.ನಗರ ಶಾಸಕ ಡಿ.ರವಿಶಂಕರ್ ಮೇಲೆ ಈ ಆರೋಪ ಕೇಳಿ ಬಂದಿದೆ. ಅರಕೆರೆ ಗ್ರಾಮದ ಮೊರಾರ್ಜಿ ವಸತಿ ಶಾಲೆಯ ಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆಯುವಂತೆ ಒತ್ತಡ ಹಾಕುತ್ತಿದ್ದು, ಕೆಲಸ ಬಿಡುವಂತೆ ಹೇಳುತ್ತಿರುವ ಪ್ರಿನ್ಸಿಪಾಲ್ ಸ್ವಾಮಿ ನೌಕರರಿಗೆ ಸೂಚಿಸುತ್ತಿದ್ದಾರೆ. ಕೆಲಸ ಬಿಡಿ ಇಲ್ಲ ಅಂದರೆ ಶಾಸಕ, ಶಾಸಕರ ಪಿಎರನ್ನು ಭೇಟಿ ಮಾಡಿ, ನಿಮ್ಮ ಸಮಸ್ಯೆ ಸರಿಪಡಿಸಿಕೊಂಡು ಬನ್ನಿ ಎಂದು ಹೇಳುತ್ತಿದ್ದು, ಮನನೊಂದ ನೌಕರ ಚಲುವರಾಜು ಅವರು ಕಣ್ಣೀರಿಟ್ಟಿದ್ದಾರೆ. ಚಲುವರಾಜು ಅವರಿಗೆ ಹೊರ ಗುತ್ತಿಗೆ ಆಧಾರದಲ್ಲಿ ಸಾ.ರಾ.ಮಹೇಶ್ ಅವರು ಕೆಲಸ ಕೊಡಿಸಿದ್ದರು. ಅದರಂತೆ 15 ವರ್ಷದಿಂದ ಮುಖ್ಯ ಅಡುಗೆ ಕೆಲಸಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಜೆಡಿಎಸ್ ಬೆಂಬಲಿತ ಎಂಬ ಕಾರಣಕ್ಕೆ ಕೆಲಸದಿಂದ ತೆಗೆಯುತ್ತಿರುವ ಆರೋಪ ಕೇಳಿಬಂದಿದೆ. ಇಷ್ಟು ದಿನ ಕೆಲಸ ಮಾಡಿದ್ದೀರಿ, ಈಗ ನಮ್ಮ ಬೆಂಬಲಿಗರಿಗೆ ಕೆಲಸ ಕೊಡಬೇಕು ಎಂದು ನೇರವಾಗಿ ಶಾಸಕ ಡಿ.ರವಿಶಂಕರ್ ಖಾಸಗಿ ಪಿಎ…
ಬೆಂಗಳೂರು ನಗರದಲ್ಲಿ ನಿನ್ನೆ ಸಂಜೆ ವೇಳೆ ಸುರಿದ ಸಾಧಾರಣ ಮಳೆಗೆ ಬೃಹತ್ ಮರವೊಂದು ಧರೆಗುರುಳಿ ಅನಾಹುತ ಸೃಷ್ಟಿಸಿದ ಘಟನೆ ನಡೆದಿದೆ. ಕನ್ನಿಂಗ್ ಹ್ಯಾಮ್ ರಸ್ತೆಯ ಚಂದ್ರಿಕಾ ಹೋಟೆಲ್ ಕಾರ್ನರ್ ಬಳಿ ಸಂಜೆ 7: 30ರ ಸುಮಾರಿಗೆ ಘಟನೆ ನಡೆದಿದ್ದು, ರಾಜಶೇಖರ (18) ಎಂಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಗಾಯಾಳುವನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮರ ಬಿದ್ದ ರಭಸಕ್ಕೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಹಾಗೂ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಏಳೆಂಟು ಕಾರುಗಳು ಜಖಂಗೊಂಡಿವೆ. ಘಟನೆಯಿಂದ ಕೂದಲೆಳೆ ಅಂತರದಲ್ಲಿ ಹಲವರು ಪಾರಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇನ್ನೂ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮರ ಬಿದ್ದ ಹಿನ್ನೆಲೆಯಲ್ಲಿ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಸಂಚಾರ ದಟ್ಟಣೆವುಂಟಾಗಿದ್ದು, ಸ್ಥಳಕ್ಕೆ ಹೈಗೌಂಡ್ಸ್ ಸಂಚಾರಿ ಪೊಲೀಸರು ದೌಡಾಯಿಸಿದ್ದಾರೆ. ವಿದ್ಯುತ್ ಸಂಪರ್ಕ ಸಹ ಕಡಿತಗೊಂಡಿದ್ದು, ಸ್ಥಳಕ್ಕೆ ಆಗಮಿಸಿರುವ ಬಿಬಿಎಂಪಿ ಹಾಗೂ ಬೆಸ್ಕಾಂ ಸಿಬ್ಬಂದಿ ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ಬೆಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಗಂಡ-ಹೆಂಡತಿ ನಡುವೆ ಜಗಳ ಶುರುವಾಗಿ, ಕೋಪಗೊಂಡ ಹೆಂಡತಿ ಸ್ಟೇರಿಂಗ್ ಎಳೆದಿದ್ದರಿಂದ ಕಾರು ಉರುಳಿಬಿದ್ದು ಅಪಘಾತ ಸಂಭವಿಸಿದೆ. ಕೆ. ಆರ್. ಮಾರುಕಟ್ಟೆ ಕಡೆಯಿಂದ ಹಲ್ಸನ್ ವೃತ್ತದ ಮಾರ್ಗವಾಗಿ ಕೆಂಪೇಗೌಡ ರಸ್ತೆಯತ್ತ ಐ-20 ಕಾರು ಹೊರಟಿತ್ತು. ಮಾರ್ಗ ಮಧ್ಯೆಯೇ ಕಾರು ಉರುಳಿ ಬಿದ್ದಿದ್ದು, ಕಾರಿನಲ್ಲಿದ್ದ ದಂಪತಿ ಗಾಯಗೊಂಡಿದ್ದಾರೆ ಎಂದು ಹಲಸೂರು ಗೇಟ್ ಸಂಚಾರ ಪೊಲೀಸರು ತಿಳಿಸಿದರು. ‘ಕಾರಿನಲ್ಲಿ ಗಂಡ-ಹೆಂಡತಿ ಹೊರಟಿದ್ದರು. ಗಂಡ ಕಾರು ಚಲಾಯಿಸುತ್ತಿದ್ದ. ಇದೇ ಸಂದರ್ಭದಲ್ಲಿ ಇಬ್ಬರ ನಡುವೆ ಗಲಾಟೆ ಶುರುವಾಗಿದೆ. ಸಿಟ್ಟಾದ ಹೆಂಡತಿ, ಸ್ಟೇರಿಂಗ್ ಎಳೆದಿದ್ದರಿಂದ ಕಾರು ಉರುಳಿ ಬಿದ್ದಿರುವುದಾಗಿ ಗೊತ್ತಾಗಿದೆ. ಕಾರಿನಲ್ಲಿ ಸಿಲುಕಿದ್ದ ದಂಪತಿಯನ್ನು ಸ್ಥಳೀಯರು ರಕ್ಷಿಸಿ ಹೊರಗೆ ಕರೆತಂದಿದ್ದಾರೆ. ಇಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ’ ಎಂದರು. ‘ಗಂಡ ಪಾನಮತ್ತನಾಗಿ ಕಾರು ಚಲಾಯಿಸುತ್ತಿದ್ದ ಮಾಹಿತಿ ಇದ್ದು, ವೈದ್ಯಕೀಯ ವರದಿ ಬರಬೇಕಿದೆ. ಇಬ್ಬರಿಂದಲೂ ಹೇಳಿಕೆ ಪಡೆಯಬೇಕಿದೆ’ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ. ಬಿ. ಜಯಚಂದ್ರ ವಿಧಾನಸಭೆಗೆ ಅತ್ಯಂತ ಹಿರಿಯ ಸದಸ್ಯರು, ಅವರನ್ನು ದೆಹಲಿ ಪ್ರತಿನಿಧಿ ಮಾಡಿ ದೆಹಲಿಗೆ ಕಳುಹಿಸುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ವಿಧಾನ ಸಭೆಯಲ್ಲಿ ಕರ್ನಾಟಕ ವಿಧಾನ ಮಂಡಳಿ ಅನರ್ಹತಾ ನಿವಾರಣಾ ವಿಧೇಯಕದ ಕುರಿತು ಮಾತನಾಡಿದ ಅವರು, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಹಾಗೂ ಮುಖ್ಯಮಂತ್ರಿ ಗಳ ಕಾನೂನು ಸಲಹೆಗಾರರ ನೇಮಕ ಈಗಾಗಲೇ ಆಗಿದೆ. ನೇಮಕ ಮಾಡಿ ಈಗ ವಿನಾಯ್ತಿ ಕೊಡಲು ಕಾಯ್ದೆ ತಿದ್ದುಪಡಿ ಮಾಡುವುದು ಸರಿಯಲ್ಲ ಸರ್ಕಾರಕ್ಕೆ ಸಲಹೆ ನೀಡಿದರು. ಟಿ. ಬಿ. ಜಯಚಂದ್ರ ಅವರು ಅತ್ಯಂತ ಹಿರಿಯ ಸದಸ್ಯರು. ಅವರು 1978 ನಲ್ಲಿ ಸದನಕ್ಕೆ ಬಂದಿದ್ದಾರೆ. ಸಿದ್ದರಾಮಯ್ಯ ಅವರು ತಾವೇ ಸದನಕ್ಕೆ ಹಿರಿಯರು ಅಂತ ಹೇಳಿದ್ದಾರೆ. ಆದರೆ, ಜಯಚಂದ್ರ ಈ ಸದನದಲ್ಲಿ ಎಲ್ಲರಿಗಿಂತಲೂ ಹಿರಿಯರು ಅಂತಹ ಹಿರಿಯರನ್ನು ದೆಹಲಿಗೆ ಕಳುಹಿಸಿ ಚಳಿಯಲ್ಲಿ ನಡುಗಿಸುವುದು ಸರಿಯಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ನಗರದಲ್ಲಿ ಶುಕ್ರವಾರ ಸಂಜೆ ವೇಳೆ ಭಾರೀ ಮಳೆ ಸುರಿದಿದೆ. ಭಾರೀ ಮಳೆಯಿಂದಾಗಿ ಹೈಗೌಂಡ್ಸ್ ಪೊಲೀಸ್ ಠಾಣೆ ಬಳಿ ಬೃಹತ್ ಮರವೊಂದು ರಸ್ತೆಗುರುಳಿದೆ. ಮರ ಮೂರು ಕಾರುಗಳ ಮೇಲೆ ಬಿದ್ದಿದ್ದು, ಮರ ಮುಖ್ಯ ರಸ್ತೆ ಮೇಲೆಯೇ ಬಿದ್ದಿರುವ ಹಿನ್ನೆಲೆ ಹೈಗೌಂಡ್ಸ್ ಠಾಣೆ ಸುತ್ತಾ ಮುತ್ತ ಟ್ರಾಫಿಕ್ ಜಾಂ ಉಂಟಾಗಿದೆ. ಕಾರುಗಳು ಸಂಪೂರ್ಣ ಜಖಂ ಆಗಿವೆ. ಕಾರಿನಲ್ಲಿ ಇದ್ದೋರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಬಿಬಿಎಂಪಿ ಸಿಬ್ಬಂದಿಯಿಂದ ಮರ ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಜ್ಯದಲ್ಲಿ ಸಮಾನತೆ, ಸಾಮರಸ್ಯ ಇರಬೇಕು. ಉತ್ತರ ಯೂರೋಪ್ ದೇಶಗಳಲ್ಲಿ Universal basic income ನ್ನು ಪಾಲಿಸುತ್ತಿದ್ದಾರೆ. ಅದಕ್ಕೆ ನಾವು ಜನರ ಜೇಬಿಗೆ ದುಡ್ಡು ಹಾಕುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಶುಕ್ರವಾರ ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುತ್ತಾ ಮಾತನಾಡಿದರು. ಪಂಚ ಗ್ಯಾರೆಂಟಿಗಳ ಮೂಲಕ ಎಲ್ಲರಿಗೂ 5000 ರೂ. ಸಿಗುತ್ತದೆ. ಬಿಜೆಪಿಯವರು, ಅಕ್ಕಿ ಗೋಧಿ ಮೇಲೆ, ಹಾಲು ಮೊಸರು, ಪೆನ್ನು ಪೆನ್ಸಿಲ್ ಮೇಲೆ ಜಿಎಸ್ ಟಿ ಹಾಕುವ ಮೂಲಕ ಜೇಬಿನಿಂದ ಹಣ ಕಿತ್ತರು. ನಾವು ನೀಡುವ ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಅನ್ನಭಾಗ್ಯ, ಶಕ್ತಿ, ಯುವನಿಧಿ ಗಳ ಮೂಲಕ ವರ್ಷಕ್ಕೆ ಸುಮಾರು 52, 000 ಕೋಟಿಗೂ ಹೆಚ್ಚು ಖರ್ಚಾಗುತ್ತದೆ. ಜನರಿಗೆ ಮಾಹೆಯಾನ ಸುಮಾರು 5 ಸಾವಿರ ನೀಡಲಾಗುತ್ತವೆ. ಜನರ ಕೈಯಲ್ಲಿ ದುಡ್ಡು ಇದ್ದರೆ, ವ್ಯಾಪಾರ, ವಹಿವಾಟು ನಡೆಯುತ್ತದೆ. ಕೊರೋನಾ ಸಂದರ್ಭದಲ್ಲಿ ಜನರ ಕೈಯಲ್ಲಿ ದುಡ್ಡು ಇರದೇ ತೊಂದರೆ ಅನುಭವಿಸಿದರು. ಗ್ಯಾರೆಂಟಿಗಳಿಂದ ರಾಜ್ಯದಿವಾಳಿಯಾಗುತ್ತದೆ ಎಂದು ಪ್ರಧಾನಿಗಳೇ…
ತುಮಕೂರು: ಹೆತ್ತ ತಾಯಿಯೇ ನನ್ನ ಆರು ವರ್ಷದ ಮಗಳನ್ನ ಕೊಲೆ ಮಾಡಿರುವ ಭಯಾನಕ ಘಟನೆ ತುಮಕೂರಿನ ಶಾಂತಿ ನಗರದಲ್ಲಿ ನಡೆದಿದೆ. ತುಮಕೂರಿನ ಶಾಂತಿನಗರದಲ್ಲಿ ವಾಸವಾಗಿರುವ ಹೇಮಲತಾ ಎಂಬಾಕೆಯೇ ಕೊಲೆ ಮಾಡಿದ ದುಷ್ಟ ತಾಯಿ, ಆಕೆ ತನ್ನ ಆರು ವರ್ಷದ ಮಗಳು ತನ್ವಿತಾಳನ್ನು ಭೀಕರವಾಗಿ ಕೊಲೆ ಮಾಡಿದ್ದಾಳೆ. ಶುಕ್ರವಾರ ಮನೆಯಲ್ಲಿದ್ದ ವೇಳೆ ಒಮ್ಮಿಂದೊಮ್ಮೆಗೆ ರೊಚ್ಚಿಗೆದ್ದ ಹೇಮಲತಾ ಮಗಳನ್ನು ಕೊರಳು ಕಟ್ಟಿಸಿ ಕೊಂದು ಹಾಕಿದ್ದಾಳೆ. ಮಗುವಿನ ಆರ್ತನಾದವನ್ನು ಕೇಳಿ ಅಕ್ಕಪಕ್ಕದವರು ಓಡಿ ಬಂದು ಆಕೆಯ ಕೈಯಿಂದ ಮಗುವನ್ನು ಬಿಡಿಸಿದಾಗ ತನ್ವಿತಾ ಪ್ರಾಣವನ್ನೇ ಕಳೆದುಕೊಂಡಿದ್ದಳು. ತಾಯಿ ಹೇಮಲತಾಗೆ ಮಾನಸಿಕ ಅಸ್ವಸ್ಥತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ, ಇದು ಕೊಲ್ಲುವಷ್ಟರ ಮಟ್ಟಿಗೆ ಏರಿದ್ದು ಹೇಗೆ? ಇಷ್ಟೆಲ್ಲ ಜೋರಾದ ಅಸ್ವಸ್ಥತೆ ಇದ್ದರೆ ಆಕೆಯ ಜತೆ ಈ ಪುಟ್ಟ ಮಗಳನ್ನು ಬಿಟ್ಟು ಹೋಗಿದ್ದು ಯಾಕೆ ಎಂಬೆಲ್ಲ ಪ್ರಶ್ನೆಗಳು ಹುಟ್ಟಿಕೊಂಡಿವೆ. ತುಮಕೂರಿನ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಯಿ…