Subscribe to Updates
Get the latest creative news from FooBar about art, design and business.
- ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
- ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ: ನಗನಗದು ದೋಚಿ ಪರಾರಿ
- ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
- ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
- ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
- ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
- ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
- ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Author: admin
ಬೆಂಗಳೂರು: ಸಮಾನ ಅವಕಾಶಗಳಿಂದ ನೆಮ್ಮದಿ ಶಾಂತಿಯಿಂದ, ಸರ್ವಜನಾಂಗದ ಶಾಂತಿಯ ತೋಟವನ್ನು ಸೃಷ್ಟಿಸುವ ಮೂಲಕ ರಾಜ್ಯದಲ್ಲಿ ಕಟ್ಟುತ್ತೇವೆಂಬ ನಂಬಿಕೆಯಿಂದ ಜನರು ಕಾಂಗ್ರೆಸ್ ನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುತ್ತಾ ಮಾತನಾಡಿ, ರಾಜ್ಯದ ಜನರು ಯಾವತ್ತು ಬಿಜೆಪಿಯವರಿಗೆ ಆರ್ಶೀವಾದ ಮಾಡಿಲ್ಲ. ಅವರು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದು, ಮ್ಯಾಂಡೇಟ್ ಇಲ್ಲದೆ ಆಡಳಿತ ನಡೆಸಿದ್ದಾರೆ ಎಂದರು. ಜಾತ್ಯತೀತೆಯ ಸಿದ್ಧಾಂತಕ್ಕೆ ಕಾಂಗ್ರೆಸ್ ಬದ್ಧ : ಎಲ್ಲ ಧರ್ಮ, ಜಾತಿ, ಆಚಾರಗಳನ್ನು ಗೌರವಿಸುತ್ತೇವೆ. ಮನುಷ್ಯ ಜಾತಿ ತಾನೊಂದೆ ವಲಂ ಎಂದು ಆದಿಕವಿ ಪಂಪ ಹೇಳಿದರು. ನಾವೆಲ್ಲರೂ ಮಾನವತಾವಾದಿಗಳು. ಇದೇ ನಮ್ಮ ಸಂವಿಧಾನದಲ್ಲಿರುವದರಿಂದ , ಸಂವಿಧಾನದ ಹೊರತಾಗಿ ಬೇರೆ ಯಾವುದಕ್ಕೂ ತಲೆಬಾಗುವುದಿಲ್ಲ. ಈ ಸಿದ್ದಾಂತಕ್ಕೆ ಕಾಂಗ್ರೆಸ್ ಪಕ್ಷ ಬದ್ಧತೆಯಾಗಿದೆ. ಇದನ್ನೇ ಜಾತ್ಯಾತೀತೆ ಎಂದು ಸಂವಿಧಾನ ತಿಳಿಸಿದೆ. ಭಾರತ ದೇಶದಲ್ಲಿ 142 ಕೋಟಿ ಜನತೆ ಇದೆ. ಅಷ್ಟು ಜನರೆಲ್ಲರೂ ಒಂದೇ , ನಾವೆಲ್ಲಾ ಭಾರತೀಯರೇ…
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಮಹತ್ವಾಕಾಂಕ್ಷೆಯ ಚಂದ್ರಯಾನ-3 ಉಡಾವಣೆ ಯಶಸ್ವಿಯಾಯಿತು. ಇಸ್ರೋ ಸಾಧನೆಗೆ ದೇಶದ ಅನೇಕ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಚಂದ್ರಯಾನ-3 ಯಶಸ್ವಿ ಉಡಾವಣೆಯಿಂದ ಇಸ್ರೋ ವಿಜ್ಞಾನಿಗಳಲ್ಲಿ ಸಂಭ್ರಮ ಮನೆ ಮಾಡಿತ್ತು. ಇಸ್ರೋ ವಿಜ್ಞಾನಿಗಳ ಪರಿಶ್ರಮ ಮತ್ತು ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಭಾರತವು ಇಂದು ಚಂದ್ರಯಾನ-3 ರ ಯಶಸ್ವಿ ಉಡಾವಣೆಯೊಂದಿಗೆ ತನ್ನ ಐತಿಹಾಸಿಕ ಬಾಹ್ಯಾಕಾಶ ಪ್ರಯಾಣವನ್ನು ಆರಂಭಿಸಿದೆ. ಇಸ್ರೋ ವಿಜ್ಞಾನಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಅವರ ದಣಿವರಿಯದ ಅನ್ವೇಷಣೆಯು ಭಾರತದ ಮುಂದಿನ ತಲೆಮಾರುಗಳಿಗೆ ಪ್ರೇರಕ ಶಕ್ತಿಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ಶಾಟ್ವೀಟ್ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ, ಚಂದ್ರಯಾನ-3 ಮಿಷನ್ ಯಶಸ್ವಿ ಉಡಾವಣೆಗಾಗಿ ಇಸ್ರೋಗೆ ಅಭಿನಂದನೆಗಳು. ಇದು ಭಾರತಕ್ಕೆ ಹೆಮ್ಮೆಯ ಕ್ಷಣ ಮತ್ತು ಭಾರತದ ಬಾಹ್ಯಾಕಾಶ ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಹೊಸ ಮೈಲಿಗಲ್ಲು. ಈ ಸಾಧನೆಯು ಭಾರತದ ಯುವ ಮನಸ್ಸುಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಪ್ರೇರೇಪಿಸುತ್ತದೆ…
ಪ್ರಧಾನಿ ನರೇಂದ್ರ ಮೋದಿಯವರನ್ನು ಕರೆಸಿ ರೋಡ್ ಶೋ ಮಾಡಿಸುವುದು ಮತ್ತು ನಡ್ಡಾರವರು ನರೇಂದ್ರ ಮೋದಿಯವರನ್ನು ನೋಡಿ ಮತ ನೀಡಿ ಎಂದರೂ ಜನ ಮತ ನೀಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುತ್ತಾ ಮಾತನಾಡಿದ ಅವರು, ಇನ್ನು ಮುಂದೆ ಪ್ರಧಾನಿ ಮೋದಿಯವರ ಮೇಲೆ ಅವಲಂಬಿತರಾಗಬೇಡಿ. ಅವರು ಬಂದ ಕಡೆಯಲೆಲ್ಲಾ ಬಿಜೆಪಿ ಸೋತಿದೆ. 1980 ರಲ್ಲಿ ಜನತಾ ಲೋಕದಳದಿಂದ ಲೋಕಸಭಾ ಸ್ಪರ್ಧಿಯಾಗಿದ್ದೆ. ಆ ಸಂದರ್ಭದಲ್ಲಿ ಮಂಜುನಾಥ್ ಎಂದು ಕಾಂಗ್ರೆಸ್ ಅವರ ಅಭ್ಯರ್ಥಿಯಾಗಿದ್ದಾಗ, ಇಂದಿರಾ ಗಾಂಧಿ ಹೆಸರು ಹೇಳಿ, ಚುನಾವಣೆ ಗೆಲ್ಲುತ್ತೀರಿ ಎಂದು ಅವರಿಗೆ ಹೇಳಿದರು. ಆ ಕಾಲದಲ್ಲಿಯೂ ಕಾಂಗ್ರೆಸ್ ನವರಿಗೆ ಅಲ್ಲ, ಇಂದಿರಾಗಾಂಧಿ ಹಸರು ಹೇಳಿದರೆ ಚುನಾವಣೆ ಗೆಲ್ಲುತ್ತಿದ್ದರು. ಅಂತೆಯೇ, ಮೋದಿಯವರಿಗೂ ಹೆಸರು ಇತ್ತು. ಆದರೆ ಈಗ ಅದು ಮಂಕಾಗುತ್ತಿದೆ. ಪ್ರಧಾನಿ ಮೋದಿಯವರು ಜನಪ್ರಿಯ ನಾಯಕ ಎಂಬುದರಲ್ಲಿ ಸಂಶಯವಿಲ್ಲ. ಆದರೆ ಈಗ ಮಂಕಾಗುತ್ತಿದೆ. ಮೇಲಿದ್ದವರು ಕೆಳಗೆ , ಕೆಳಗಿದ್ದವರು ಮೇಲೆ ಬರಬೇಕು. ಕರ್ನಾಟಕದಿಂದಲೇ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾಲದಲ್ಲಿ ಯಾವುದೇ ಭ್ರಷ್ಟಾಚಾರ ನಡದೇ ಇಲ್ಲ ಅಂತ ಹೇಳಿದ್ದಾರೆ. ಅವರ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರ ನಡೆಯದಿದ್ದರೆ 2013 ರಿಂದ ಎಲ್ಲ ಪ್ರಕರಣಗಳ ಬಗ್ಗೆ ತನಿಖೆ ನಡೆಸಲಿ ಎಂದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ. ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಕಾಲದಲ್ಲಿ ಭ್ರಷ್ಟಾಚಾರ ನಡೆದಿರದಿದ್ದರೆ ನ್ಯಾಯಾಂಗ ಆಯೋಗ ಯಾಕೆ ರಚನೆ ಆಯಿತು. ಎಸಿಬಿ ಮಾಡಿದ್ದೇ ಭ್ರಷ್ಟಾಚಾರ ಮುಚ್ಚಿ ಹಾಕಲು. ಇದು ಇಡಿ ಜಗತ್ತಿಗೆ ಗೊತ್ತು ಎಂದು ಹೇಳಿದರು. ಸಣ್ಣ ನೀರಾವರಿ, ದೊಡ್ಡ ನೀರಾವರಿ ಎಲ್ಲದರಲ್ಲೂ ಭ್ರಷ್ಟಾಚಾರ ನಡೆದಿದೆ. ಅವರಿಗೆ ಭಯ ಇಲ್ಲದಿದ್ದರೆ 2013 ರಿಂದ ಎಲ್ಲ ಪ್ರಕರಣಗಳನ್ನು ತನಿಖೆಗೆ ವಹಿಸಲಿ, ಅವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಸಿಲುಕಿಕೊಳ್ಳುವ ಭಯ ಇದೆ. ಯಡಿಯೂರಪ್ಪ ಅವರು ತಮ್ಮ ಕಾಲದ ಅವಧಿಯ ಅಕ್ರಮ ಗಣಿಗಾರಿಕೆಯ ಪ್ರಕರಣಗಳನ್ನು ತನಿಖೆಗೆ ನೀಡಿದ್ದರು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ಜೈನ ಸಾಧು, ಸಂತರು ಕಾಲು ನಡಿಗೆಯಲ್ಲಿ ವಿಹಾರ ಕೈಗೊಂಡಾಗ ಅವರಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಬೇಕು’ ಎಂದು ಅಖಿಲ ಭಾರತ ಜೈನ್ ಯೂಥ್ ಫೆಡರೇಷನ್ ಮಹಾವೀರ್ ಲಿಂಬ್ ಸೆಂಟರ್ ಆಗ್ರಹಿಸಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು. ‘ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿಯ ಕಾಮಕುಮಾರ ನಂದಿ ಮಹರಾಜರ ಹತ್ಯೆಯನ್ನು ಜೈನ ಸಮಾಜವು ಬಲವಾಗಿ ಖಂಡಿಸುತ್ತದೆ. ಈ ಘಟನೆಯಿಂದ ನಮ್ಮ ಸಮಾಜವು ಅಸುರಕ್ಷತೆಯಿಂದ ಭಯಭೀತವಾಗಿದೆ. ಸರ್ವರ ಹಿತವನ್ನು ಬಯಸುವ, ಶಾಂತಿ, ಅಹಿಂಸೆ, ಪ್ರೇಮದ ಭಾವನೆಯನ್ನು ನಾಡಿಗೆ ಸಾರುತ್ತಿರುವ ಜೈನ ಸಮಾಜದ ಮೇಲೆ, ಸಾಧುಗಳ ಮೇಲೆ ನಡೆದಿರುವ ಈ ಆಕ್ರಮಣ ಖಂಡನೀಯ, ದೇಶ ವಿದೇಶದಲ್ಲಿರುವ ಜೈನ ಸಮುದಾಯವು ಸಾಧು, ಸಾದ್ವಿಗಳ ಅಭದ್ರತೆಯ ಕುರಿತು ಭಯದಿಂದ ತತ್ತರಿಸಿದೆ’ ಎಂದು ಕೇಂದ್ರದ ಅಧ್ಯಕ್ಷ ಮಹೇಂದ್ರ ಸಿಂಘಿ ಕಳವಳ ವ್ಯಕ್ತಪಡಿಸಿದ್ದಾರೆ. ‘ಜೈನ ಸಾಧುಗಳ ವಿಹಾರ ಸಂದರ್ಭದಲ್ಲಿ ಅವರ ವಾಸ್ತವ್ಯಕ್ಕಾಗಿ ರಾತ್ರಿ ತಂಗಲು ಶಾಲೆ-ಕಾಲೇಜು ಅಥವಾ ಸರ್ಕಾರಿ ಪ್ರವಾಸಿ ಕೇಂದ್ರಗಳಲ್ಲಿ ವಸತಿ ವ್ಯವಸ್ಥೆ ಕಲ್ಪಿಸಬೇಕು. ಜೈನ ತೀರ್ಥ ಸ್ಥಳಗಳು,…
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಯಾಗಿದೆ. ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು ಮಧ್ಯಾಹ್ನ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಹೊತ್ತ ಜಿಎಸ್‌ಎಲ್‌ವಿ ಮಾರ್ಕ್ 3 ‘ಬಾಹುಬಲಿ ರಾಕೆಟ್’ ಉಡಾವಣೆಯಾಗಿದೆ. ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಉಪಗ್ರಹವನ್ನು ಚಂದ್ರನ ಮೇಲ್ಮೈಯಲ್ಲಿ ಸುಲಭವಾಗಿ ಇಳಿಸುವ 6 ವಾರಗಳ ಮಿಷನ್ ಗೆ ಅಧಿಕೃತ ಚಾಲನೆ ಸಿಕ್ಕಿದೆ. ಪ್ರಧಾನಿ ಮೋದಿ ಪ್ರತಿಕ್ರಿಯೆ: ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜುಲೈ 14, 2023 ಯಾವಾಗಲೂ ಸುವರ್ಣಾಕ್ಷರಗಳಲ್ಲಿ ಕೆತ್ತಿ ಬರೆದಿರುವ ದಿನವಾಗಿರುತ್ತದೆ. ಚಂದ್ರಯಾನ-3, ನಮ್ಮ ಮೂರನೇ ಚಂದ್ರನ ಕಾರ್ಯಾಚರಣೆಯನ್ನು ಇಂದು ಪ್ರಾರಂಭಿಸುತ್ತದೆ. ಈ ಗಮನಾರ್ಹ ಮಿಷನ್ ನಮ್ಮ ರಾಷ್ಟ್ರದ ಭರವಸೆಗಳು ಮತ್ತು ಕನಸುಗಳನ್ನು ಹೊತ್ತೊಯ್ಯುತ್ತದೆ. ಚಂದ್ರಯಾನ-3ಯನ್ನು ಕಕ್ಷೆಯನ್ನು ಹೆಚ್ಚಿಸುವ ಕುಶಲತೆಯ ನಂತರ ಚಂದ್ರನ ವರ್ಗಾವಣೆ ಪಥಕ್ಕೆ ಸೇರಿಸಲಾಗುತ್ತದೆ. 300,000 ಕಿ.ಮೀ.ಗೂ ಹೆಚ್ಚು…
ತುರುವೇಕೆರೆ : ಬೆಳಗಾವಿ ಜಿಲ್ಲೆ ಚಿಕ್ಕೋಡಿ ಹೀರೆಕೋಡಿ ನಂದಿ ಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜ್ ಜೈನ ಮುನಿಗಳ ಬರ್ಬರ ಹತ್ಯೆ ಖಂಡಿಸಿ ತಾಲೂಕು ಜೈನ ಸಮಾಜದಿಂದ, ಜೈನ ಮುನಿಗಳಿಗೆ ಹಾಗೂ ಸಂತರಿಗೆ ರಕ್ಷಣೆ ಕೋರಿ ತಹಶೀಲ್ದಾರ್ ರವರ ಅನುಪಸ್ಥಿತಿಯಲ್ಲಿ ಗ್ರೇಡ್ 2 ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು. ಮಾಯಸಂದ್ರ ಹಾಗೂ ತಂಡಗ ಗ್ರಾಮಗಳಲ್ಲಿನ ಜೈನ ಸಮಾಜದ ಬಂಧುಗಳು ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನ್ಯಾಯ ದೊರಕಿಸಿ ಕೊಡುವಂತೆ ಮತ್ತು ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಾಗೂ ಜೈನ ಮುನಿಗಳಿಗೆ ರಕ್ಷಣೆ ನೀಡಬೇಕೆಂದು ಸರ್ಕಾರವನ್ನು ಆಗ್ರಹಿಸಿ, ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿ. ದಂಡಾಧಿಕಾರಿಗಳವರ ಕಚೇರಿಯ ಬಳಿ ಆಗಮಿಸಿದರು. ಈ ವೇಳೆ ಮಾತನಾಡಿದ ಮಾಯಸಂದ್ರ ಜೈನ ಸಮಾಜದ ಮುಖಂಡ ವಿಪುಲ್ ಜೈನ್, ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕು ಹಿರೇಕೋಡಿ ಗ್ರಾಮದ ನಂದಿ ಪರ್ವತದಲ್ಲಿ ಜೈನ ಕ್ಷೇತ್ರದಲ್ಲಿ ವಾಸ್ತವ್ಯ ಮಾಡಿದ್ದ ಜೈನ ಮುನಿಗಳಾದ ಶ್ರೀ ಕಾಮಕುಮಾರ ನಂದಿ ಮಹಾರಾಜರವರನ್ನು…
ಬೆಂಗಳೂರು: ರಾಜಧಾನಿಯ ವಿಧಾನಸೌಧದಲ್ಲಿ ಪ್ರವೇಶ ಪಡೆಯುವುದಕ್ಕೆ ನಕಲಿ ಪಾಸ್‌ಗಳ ಬಳಕೆಯಾಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ನಕಲಿ ಪಾಸ್‌ಗಳನ್ನ ಬಳಸಿ ವಿಧಾನಸೌಧದಲ್ಲೇ ವ್ಯವಹಾರ ನಡೆಸಲಾಗುತ್ತಿದೆ. ಕಳೆದ ಕೆಲವು ದಿನಗಳಿಂದ 300 ಕ್ಕೂ ನಕಲಿ ಪಾಸ್‌ಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ತಿಪ್ಪೇರುದ್ರಪ್ಪ ಕೇಸ್ ಬಳಿಕ ಭದ್ರತಾ ಸಿಬ್ಬಂದಿ ಎಚ್ಚೆತ್ತುಕೊಂಡಿದ್ದಾರೆ. ಸಿಸಿಬಿ ಮುಖ್ಯಸ್ಥರಾಗಿದ್ದ ಡಾ.ಶರಣಪ್ಪ ವಿಧಾನಸೌಧ ಭದ್ರತೆ ನೇತೃತ್ವ ವಹಿಸಿದ್ದಾರೆ. ಎಂಎಲ್‌ಎ, ಎಂಎಲ್‌ಸಿಗಳಿಗೆ ನೀಡಿರುವ ಪಾಸ್‌ಗಳನ್ನು ಕಲರ್ ಜೆರಾಕ್ಸ್ ಮಾಡಿ ವಿಧಾನಸೌಧ ಬರುತ್ತಿದ್ದರು. ನಕಲಿ ಪಾಸ್‌ಗಳನ್ನ ಬಳಸಿ ಒಳ ಪ್ರವೇಶಿಸುವವರ ನಿಯಂತ್ರಣಕ್ಕೆ ವಿಧಾನಸೌಧಕ್ಕೆ ಪ್ರವೇಶ ನೀಡುವ ಎಲ್ಲಾ ಗೇಟ್‌ಗಳಲ್ಲಿ ಪ್ರತಿಯೊಬ್ಬರ ಪರಿಶೀಲನೆ ನಡೆಸಲಾಗುತ್ತಿದೆ. ಅವಧಿ ಮುಗಿದಿರುವ ಪಾಸ್, ಕಲರ್ ಜೆರಾಕ್ಸ್ ಪಾಸ್‌ಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಹಲವು ರಾಜಕಾರಣಿಗಳ ಬೆಂಬಲಿಗರಿಂದ ನಕಲಿ ಪಾಸ್‌ಗಳ ಬಳಕೆಯಾಗುತ್ತಿದೆ ಎನ್ನಲಾಗಿದೆ. ಸದ್ಯ ನಕಲಿ ಪಾಸ್ ಬಳಸುತ್ತಿದ್ದ ಎಲ್ಲರ ಮಾಹಿತಿಯನ್ನು ಪೊಲೀಸರು ಸಂಗ್ರಹಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಹಾಸನ: ಜಿಲ್ಲೆಯಲ್ಲಿ ಟೊಮೆಟೊ ಚಿನ್ನದ ಬೆಳೆಯಾಗಿದೆ. ಒಂದು ಎಕರೆಯಲ್ಲಿ ಟೊಮೆಟೊ ಬೆಳೆದು ರೈತ 20 ಲಕ್ಷಕ್ಕೂ ಅಧಿಕ ಲಾಭ ಪಡೆದಿದ್ದಾನೆ. ಬೇಲೂರು ತಾಲ್ಲೂಕಿನ ಹಳೆಬೀಡು ಸಮೀಪದ ಬಸ್ತಿಹಳ್ಳಿಯ ಯುವ ರೈತ ಭೈರೇಶ್ ಪೊಲೀಸ್ ಕರ್ತವ್ಯದ ಜೊತೆ ಕೃಷಿಯಲ್ಲಿ ತೊಡಗಿ ಸಾಕಷ್ಟು ಲಾಭ ಗಳಿಸಿದ್ದಾರೆ. ಇದುವರೆಗೆ ಒಟ್ಟು ಏಳು ಬೀಡು ಕಟಾವು ಮಾಡಿ 1000 ಬಾಕ್ಸ್ ಟೊಮೆಟೊ ಕೊಯ್ದಿರುವ ರೈತ ಇದುವರೆಗೆ 16 ಲಕ್ಣಕ್ಕೂ ಅಧಿಕ ಪ್ರಮಾಣದ ಲಾಭಗಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರಿನಲ್ಲಿ 28 ವಿಧಾನಸಭಾ ಕ್ಷೇತ್ರಗಳಿವೆ. ಕಳೆದ 15 ದಿನದಲ್ಲಿ 30 ಜನ ಅಧಿಕಾರಿಗಳು ಅಮಾನತ್ತಾಗಿದ್ದಾರೆ. ಅಧಿಕಾರಿಗಳು ಕೆಲಸ ಮಾಡಲು ಹೆದರುತ್ತಿದ್ದಾರೆ ಎಂದು ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಆರೋಪ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಜೊತೆ ಚರ್ಚೆಗೆ ಅವಕಾಶ ಕೇಳಿದ್ದೇನೆ. ನನ್ನ ಮೇಲೆ ಟಾರ್ಗೆಟ್ ಯಾಕೆ ಅನ್ನೋ ವಿಚಾರವನ್ನು ಅವರು ಸಮಯ ಕೊಟ್ಟಾಗ ಮಾತಾಡ್ತೀನಿ. ಒಂದು ವಿಕೆಟ್ ಮಿಸ್ ಆಗಿದೆ ಅದನ್ನ ತೆಗೆಯಬೇಕು ಎಂದು ಅವರೇ ಹೇಳಿದ್ದಾರೆ. ಅವರು ಕ್ರಿಕೆಟ್ ಪ್ಲೇಯರ್ ಆಡಲಿ ನೋಡೋಣ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy