Author: admin

ಚಾಮರಾಜನಗರ:  ಖಾಸಗಿ ಬಸ್​ ಚಾಲಕ ಹೃದಯಾಘಾತದಿಂದ  ಮೃತಪಟ್ಟ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಖಾಸಗಿ ಬಸ್ ಚಾಲಕ ಹೃದಯಾಘಾತದಿಂದ ಮೃತಪಟ್ಟ ಪ್ರಕರಣ ಜಿಲ್ಲೆಯಲ್ಲಿ ಇದು ಎರಡನೆಯದಾಗಿದೆ.  ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯ ಗುರುಸಿದ್ದು(55) ಮೃತ ಬಸ್ ಚಾಲಕರಾಗಿದ್ದಾರೆ. ಯಳಂದೂರಿನಿಂದ ಗುಂಡ್ಲುಪೇಟೆಗೆ ತೆರಳುವ ಆರ್ ​ಪಿಕೆ ಎಂಬ ಖಾಸಗಿ ಬಸ್​​​ ಚಾಲಕರಾಗಿದ್ದ ಗುರುಸಿದ್ದು ಅವರಿಗೆ ಬಸ್​​ ಚಾಲನೆ ವೇಳೆಯೇ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಬಸ್​ನ ಸಿಬ್ಬಂದಿ ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಪ್ರಾಥಮಿಕ ಚಿಕಿತ್ಸೆ ಫಲಿಸದೇ ಅಸುನೀಗಿದ್ದಾರೆ. ಜಿಲ್ಲೆಯಲ್ಲಿ ಖಾಸಗಿ ಬಸ್ ಚಾಲಕ ಹೃದಯಾಘಾತದಿಂದ ಮೃತಪಟ್ಟ ಎರಡನೇ ಪ್ರಕರಣ ಇದಾಗಿದೆ. ಹನೂರು ತಾಲೂಕಿನ ಮಿಣ್ಯಂ ಗ್ರಾಮದ ಖಾಸಗಿ ಬಸ್​ ಚಾಲಕ ರಮೇಶ್​ (47) ಹನೂರು ಪಟ್ಟಣದಿಂದ ಕೊಳ್ಳೇಗಾಲಕ್ಕೆ ಖಾಸಗಿ ಬಸ್​ ಚಾಲನೆ ಮಾಡಿಕೊಂಡು ತೆರಳುತ್ತಿದ್ದಾಗ ಮಧುವನಹಳ್ಳಿ ಗ್ರಾಮದ ಬಳಿಎದೆ ನೋವು ಕಾಣಿಸಿಕೊಂಡು ಮೃತಪಟ್ಟಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಬೆಂಗಳೂರು:  ಮೂರು ಮರಿಗಳಿಗೆ ಹುಲಿಯೊಂದು ಜನ್ಮ ನೀಡಿ ಬಿಟ್ಟು ಹೋಗಿದ್ದು, ಪರಿಣಾಮವಾಗಿ ಮರಿಗಳು ಸಾವನ್ನಪ್ಪಿರುವ ಗಟನೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನಡೆದಿದೆ. ಹಿಮಾದಾಸ್ ಹುಲಿಯು ಜುಲೈ 7 ರಂದು ಮೂರು ಮರಿಗಳಿಗೆ ಜನ್ಮ ನೀಡಿತು. ಆದರೆ, ಅದು ತನ್ನ ಮರಿಗಳನ್ನು ನೋಡಿಕೊಳ್ಳಲಿಲ್ಲ. ತಾಯಿ ಹುಲಿಯ ನಿರ್ಲಕ್ಷ್ಯದ ಪರಿಣಾಮವಾಗಿ, ಮೂರು ಮರಿಗಳು ಗಾಯಗೊಂಡಿದ್ದವು ಎಂದು ಅವರು ಹೇಳಿದರು. ಬಿಬಿಪಿ ಪ್ರಕಾರ, ಮರಿಗಳನ್ನು ತೀವ್ರ ನಿಗಾ ಮತ್ತು ಕೈ ಆರೈಕೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ವೈದ್ಯರ ಪ್ರಯತ್ನಗಳ ಹೊರತಾಗಿಯೂ, ಮರಿಗಳು ಸಾವಿಗೀಡಾಗಿವೆ. ಜುಲೈ 8 ರಂದು ಒಂದು ಗಂಡು ಮರಿ ಸಾವಿಗೀಡಾಯಿತು ಮತ್ತು ಜುಲೈ 9 ರಂದು ಮತ್ತೊಂದು ಗಂಡು ಮರಿ ಮತ್ತು ಒಂದು ಹೆಣ್ಣು ಮರಿ ಮೃತಪಟ್ಟಿತು. ಪಶುವೈದ್ಯಕೀಯ ತಂಡವು ಮರಣೋತ್ತರ ಪರೀಕ್ಷೆ ನಡೆಸಿತುಒಂದು ಗಂಡು ಮರಿ ತುಳಿದ ಕಾರಣ ಗರ್ಭಕಂಠದ ಗಾಯದಿಂದ ಸಾವಿಗೀಡಾಗಿದ್ದು, ಮತ್ತೊಂದು ಗಂಡು ಮರಿ ತಾಯಿ ಹುಲಿಯು ಅದರ ತಲೆಯನ್ನು ಕಚ್ಚಿದ ಪರಿಣಾಮವಾಗಿ ಮೆದುಳಿನ ಗಾಯಗಳು ಮತ್ತು ಆಂತರಿಕ ರಕ್ತಸ್ರಾವದಿಂದ…

Read More

ಸರಗೂರು:   ಸಿಗಂದೂರು ಸೇತುವೆಗೆ ಯಾವುದೇ ರಾಜಕೀಯ ವ್ಯಕ್ತಿಗಳ ಹೆಸರು ಇಡುವಬದಲು ಚೌಡೇಶ್ವರಿ ದೇವಿ ಹಾಗೂ ಶರಾವತಿ ನದಿ ಎರಡು ಹೆಸರು ಇಡಬೇಕು ಎಂದು ಸರಗೂರು ತಾಲೂಕು ಆರ್ಯ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು ಒತ್ತಾಯಿಸಿದರು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಹಿನ್ನೀರಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸೇತುವೆಗೆ  ಯಾವುದೇ ರಾಜಕೀಯ ಪಕ್ಷವನ್ನು ಬೆರಸಬೇಡಿ. ಏಕೆಂದರೆ ಯಾವುದೇ ಸರ್ಕಾರ ಬಂದರೂ ಅವರು ಕೆಲಸ ಮಾಡಬೇಕು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅವಧಿಯಲ್ಲಿ ಕಾಮಗಾರಿ ಮಾಡಿಬಹುದು. ಆದರೆ ಅವರ ಹೆಸರಿಡುವಂತೆ ನಿರ್ದೇಶನ ನೀಡಬೇಕು ಎನ್ನುವುದು ಯಾವ ಮಟ್ಟಕ್ಕೆ ಸರಿ ಎಂದು ಅವರು ಪ್ರಶ್ನಿಸಿದ್ದಾರೆ. ನಮ್ಮ ರಾಜ್ಯದಲ್ಲಿ ಶಿವಮೊಗ್ಗದಲ್ಲಿ ನದಿಗಳು ಇವೆ ಹಾಗೂ ಪ್ರಸಿದ್ಧ ದೇವಾಲಯಗಳು ಇವೆ. ಅವುಗಳ ಹೆಸರುಗಳನ್ನು ಇಟ್ಟರೆ ಶಿವಮೊಗ್ಗ ಜಿಲ್ಲೆಯ ಜನರಿಗೆ ವೈ ಮನಸು ಬರುವುದಿಲ್ಲ ಎಂದು ನಾಗರಾಜು ಸಲಹೆ ನೀಡಿದ್ದಾರೆ. ಇಲ್ಲಿ ನಾವುಗಳು ಎಲ್ಲಾ ಒಂದೇ ಏಕೆಂದರೆ ಯಾರೇ ಸರ್ಕಾರದಲ್ಲಿ ಮುಖ್ಯಮಂತ್ರಿಗಳು ಆದರೂ ರಾಜ್ಯದ ಅಭಿವೃದ್ಧಿಗಳ…

Read More

ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಜೆಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿಗೆ ಸದಸ್ಯರ ಒಪ್ಪಿಗೆಯಂತೆ ಸಿ.ಡಿ.ಪ್ರಭಾಕರ್ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಅಧ್ಯಕ್ಷೆ ಪುಷ್ಪ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಚುನಾವಣಾಧಿಕಾರಿಯಾಗಿ ತಾ.ಪಂ. ಇ ಓ ಅಪೂರ್ವ ಕಾರ್ಯನಿರ್ವಹಿಸಿದ್ದು ಸರ್ವ ಸದಸ್ಯರ ಒಪ್ಪಿಗೆಯಂತೆ ಸಿ.ಡಿ.ಪ್ರಭಾಕರ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕೃತ ಘೋಷಣೆ ಮಾಡಿದ್ದು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ನೂತನ ಅಧ್ಯಕ್ಷರಿಗೆ ಶುಭಕೋರಿದರು. ನೂತನ ಅಧ್ಯಕ್ಷ ಸಿ.ಡಿ ಪ್ರಭಾಕರ್ ಮಾತನಾಡಿ, ಗೃಹ ಸಚಿವರ ಆಶೀರ್ವಾದದಿಂದ ಅಧ್ಯಕ್ಷ ಸ್ಥಾನಕ್ಕೆ ಸರ್ವ ಸದಸ್ಯರು ಒಪ್ಪಿಗೆ ಸೂಚಿಸಿ ಆಯ್ಕೆ ಮಾಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸವಲತ್ತುಗಳನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರಿಗೆ ಸಿಗುವಂತೆ ಮಾಡುವುದರ ಜೊತೆಗೆ ಗ್ರಾಮಗಳನ್ನು ಅಭಿವೃದ್ಧಿ ಪಡಿಸಿ ಮಾದರಿ ಗ್ರಾ.ಪಂಯನ್ನಾಗಿ ಮಾಡುವುದೇ ನನ್ನ ಪ್ರಮುಖ ಗುರಿ. ಆಯ್ಕೆ ಮಾಡಿದ ಸದಸ್ಯರಿಗೂ ಹಾಗೂ ಅಭಿನಂದನೆ ಸಲ್ಲಿಸಿದ…

Read More

ತುಮಕೂರು:  ಅಕ್ರಮ ಭೂ ಕಬಳಿಕೆಗೆ ಕಾರಣವಾಗಿದ್ದಾರೆ ಎಂಬ ಆರೋಪ ಹೊತ್ತಿರುವ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಗೆ ನಾಗರಿಕ ಸನ್ಮಾನವನ್ನು ಶುಕ್ರವಾರ ಕೆಆರ್‌ ಎಸ್ ಪಕ್ಷದ ವತಿಯಿಂದ ನಗರದ ಟೌನ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಅಕ್ರಮ ಭೂ ಕಬಳಿಕೆ ಮತ್ತು ಅಕ್ರಮ ಗಣಿಗಾರಿಕೆಗೆ ಪ್ರೋತ್ಸಾಹ ನೀಡಿ, ಜಿಲ್ಲೆಯಲ್ಲಿ  ಜಿಲ್ಲಾಧಿಕಾರಿಗಳು ಭ್ರಷ್ಟಾಚಾರ ಹೆಚ್ಚಾಗಲು ಶ್ರಮಿಸುತ್ತಿದ್ದಾರೆ ಎಂದು ಆರೋಪಿಸಿ ತುಮಕೂರು ಜಿಲ್ಲಾಧಿಕಾರಿಗೆ ಶಾಲು, ಪೇಟ, ರೇಷ್ಮೆ ಸೀರೆ ನೀಡಿ ಸನ್ಮಾನ ಮಾಡಲು ಟೌನ್‌ ಹಾಲ್ ನಿಂದ ಡಿಸಿ ಕಚೇರಿ ಕಡೆಗೆ ಹೊರಟಿದ್ದ ಕೆಆರ್‌ ಎಸ್ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಸನ್ಮಾನ ಕಾರ್ಯಕ್ರಮಕ್ಕೂ ಮುನ್ನ ಟೌನ್‌ ಹಾಲ್ ನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರು ಪೊಲೀಸರ ಸರ್ಪಗಾವಲಿನ ನಡುವೆಯೂ ಸಭೆ ಸೇರಿದ್ದರು.  ಈ ವೇಳೆ ಪೊಲೀಸರು ಮತ್ತು ಪಕ್ಷದ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಜಿಲ್ಲಾಧಿಕಾರಿಗಳಿಗೆ ಸನ್ಮಾನ ಮಾಡಲು ಅವಕಾಶ ಕೊಡದ ಪೊಲೀಸರ ವರ್ತನೆ ಖಂಡಿಸಿ ಕೆಆರ್‌ ಎಸ್ ಪಕ್ಷದ ಕಾರ್ಯಕರ್ತರು …

Read More

ಸರಗೂರು:  ಎಚ್.ಡಿ.ಕೋಟೆ ತಾಲೂಕಿನಲ್ಲಿ ಶಾಸಕರ ಅಭಿವೃದ್ಧಿ ಕೆಲಸಗಳನ್ನು ಸಹಿಸದ ಕೆಲ ವಿರೋಧಿಗಳು ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣಗಳ ಮೂಲಕ ಅಪಪ್ರಚಾರ ನಡೆಸಲಾಗುತ್ತಿದ್ದು, ಅವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಜರುಗಿಸುವಂತೆ ಪೊಲೀಸ್ ಇಲಾಖೆಗೆ ದೂರು ನೀಡಲು ತೀರ್ಮಾನಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ತೀರ್ಮಾನಿಸಲಾಯಿತು. ಪುರಸಭೆ ಸದಸ್ಯ ಎಚ್.ಸಿ. ನರಸಿಂಹಮೂರ್ತಿ, ವಿಧಾನಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು, ಜಿ.ಪಂ ಮಾಜಿ ಸದಸ್ಯ ಸದಸ್ಯ ಎಚ್.ಸಿ. ಮಂಜುನಾಥ್, ಹಿರೇಹಳ್ಳಿ ಸೋಮೇಶ್, ನರಸಿಪುರ ರವಿ ಮಾತನಾಡಿ, ಶಾಸಕ ಅನಿಲ್ ಚಿಕ್ಕಮಾದು ತಾಲೂಕಿಗೆ ಕೋಟ್ಯಂತರ ರೂ.ಗಳ ಅನುದಾನ ತಂದಿದ್ದಾರೆ. ಹಲವು ಇಲಾಖೆಗಳ ಮೂಲಕ ಕಾಮಗಾರಿಗಳು ಪ್ರಗತಿಯಲ್ಲಿವೆ. ಇವುಗಳನ್ನು ಸಹಿಸದ ಕೆಲವರು ತಾಲೂಕು ಅಭಿವೃದ್ಧಿಯಲ್ಲಿ ಹಿಂದೆ ಉಳಿದಿದೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು. ಮುಖ್ಯಮಂತ್ರಿಗಳು ಹಾಗೂ ವಿವಿಧ ಇಲಾಖೆಗಳ  ಸಚಿವರ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ಶಾಸಕರು ಅತಿ ಹೆಚ್ಚಿನ ಅನುದಾನ ತಂದಿದ್ದಾರೆ. ಇತ್ತೀಚೆಗೆ…

Read More

ಸರಗೂರು:  ವಾಹನ ಚಾಲಕರು ವಾಹನಗಳನ್ನು ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಿಲ್ಲಿಸಿಕೊಂಡು ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಕ್ರಮ ವಹಿಸಬೇಕು ಎಂದು ಸರಗೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆರ್. ಕಿರಣ್ ತಿಳಿಸಿದರು. ಪಟ್ಟಣದ ಬಸ್ ನಿಲ್ದಾಣದ ಬಳಿ ಇರುವ ಗೂಡ್ಸ್ ವಾಹನ ಚಾಲಕರ ಸಂಘದ ವತಿಯಿಂದ 3ನೇ ವರ್ಷದ ಆಷಾಡಮಾಸದ ಶುಕ್ರವಾರದಂದು ಚಾಮುಂಡೇಶ್ವರಿ ಪೋಟೋ ಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು. ತಾಯಿ ಚಾಮುಂಡೇಶ್ವರಿ ಹಾಗೂ ಚಿಕ್ಕದೇವಮ್ಮ ಒಳ್ಳೆಯದು ಮಾಡಲಿ. ಅದರಂತೆ ಸಂಘದವರು ಪ್ರತಿ ವರ್ಷ ಆಷಾಢ ಶುಕ್ರವಾರದಂದು ಚಾಮುಂಡೇಶ್ವರಿ ಪೂಜೆ ಸಲ್ಲಿಸಿಕೊಂಡು ಬರುತ್ತಿದ್ದಾರೆ ಎಂದರು. ದೇವಾಲಯದಲ್ಲಿ ಆಷಾಢ ಶುಕ್ರವಾರವೂ ತುಂಬಾನೇ ವಿಶೇಷವಾಗಿರುತ್ತದೆ. ಯಾಕೆಂದರೆ ಆಷಾಢ ಮಾಸದ ಬರುವ ಶುಕ್ರವಾರದಲ್ಲಿ ಒಂದು ಶುಕ್ರವಾರದಂದು ಚಾಮುಂಡಿ ತಾಯಿಯ ಜಯಂತಿ ಅಂದರೆ ಚಾಮುಂಡಿ ತಾಯಿಯ ಜನ್ಮ ದಿನ ಎಂದರು. ಸಂಘದ ವತಿಯಿಂದ ಅನ್ನದಾನ ಏರ್ಪಡಿಸಲಾಗಿತ್ತು.  ಈ ಸಂದರ್ಭದಲ್ಲಿ ಶ್ರೀ ಸಂಘದ ಅಧ್ಯಕ್ಷ ಬೀರ್ವಾಳು ಚಿಕ್ಕಣ್ಣ,   ಉಪಾಧ್ಯಕ್ಷ ಕಾಳನಾಯಕ,  ನಾಗರಾಜು ವಿ., ಅಭಿ, ನಾಗೇಶ, ಲೋಕಿ, ನಿಂಗಪ್ಪ,…

Read More

ಸರಗೂರು:  ಕೆಎಸ್‌ ಆರ್‌ ಟಿಸಿ ಬಸ್‌ ನಿಯಂತ್ರಣ ತಪ್ಪಿ  ದೊಡ್ಡ ಕೆರೆಗೆ ಉರುಳಿಬಿದ್ದು, ಬಸ್‌ ನಲ್ಲಿ ಪ್ರಯಾಣಿಸುತ್ತಿದ್ದ 25 ಮಂದಿಯಲ್ಲಿ 21 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ ಆರು ಮಂದಿ ಸ್ಥಿತಿ ಗಂಭೀರವಾಗಿದೆ. ಪಟ್ಟಣದಿಂದ ಯಡಿಯಾಲ ಮಾರ್ಗವಾಗಿ ಕಾಡು ಬೇಗೂರಿಗೆ ತೆರಳುತ್ತಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ಚಾಲಕ ನಿಯಂತ್ರಣದಿಂದ   ಬೊಂತೇಗಾಲದ ಕೆರೆಗೆ ಉರುಳಿ ಬಿದ್ದಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಸರಗೂರಿನಿಂದ ಕಾಡುಬೇಗೂರು–ಕುರ್ಣೆಗಾಲಕ್ಕೆ ಗುರುವಾರ ರಾತ್ರಿ ತೆರಳುತ್ತಿದ್ದ ಬಸ್(ಕೆಎ11ಎ- 0333)ನಲ್ಲಿ 25 ಮಂದಿ ತೆರಳುತ್ತಿದ್ದರು. ಇದರಲ್ಲಿ ನಾಲ್ಕು ಮಂದಿಗೆ ಗಂಭೀರ ಗಾಯವಾಗಿದೆ. ಚಾಲಕ ರವೀಶ್, ಕಂಡಕ್ಟರ್ ಗಣೇಶ್ ಸೇರಿದಂತೆ ಉಳಿದವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸರಗೂರಿನ ಸರ್ಕಾರಿ ಆಸ್ಪತ್ರೆ, ಎಚ್.ಡಿ.ಕೋಟೆ ಹಾಗೂ ಮೈಸೂರಿಗೆ ಸ್ಥಳಾಂತರಿಸಲಾಗಿದೆ. ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿಗಳ ನೆರವಿನಿಂದ ಗಾಯಗಳನ್ನು ಬಸ್‌ ನಿಂದ ಹೊರ ತೆಗೆದು ಆಸ್ಪತ್ರೆಗೆ ಕಳುಹಿಸಲಾಗಿದೆ. ಸ್ಥಳಕ್ಕೆ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಶರತ್, ಬಿ.ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಚಂದ್ರಶೇಖರ್ ಭೇಟಿ ನೀಡಿ…

Read More

ಬೆಂಗಳೂರು:  ಕಿರುತೆರೆ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿಗೆ ಪತಿಯೇ ಚಾಕು ಇರಿದ ಘಟನೆ ನಡೆದಿದೆ. ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್‌ನಲ್ಲಿ ಈ ಘಟನೆ ಜುಲೈ 4ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶ್ರುತಿ ಚಿಕಿತ್ಸೆ ಪಡೆಯುತ್ತಿದ್ದಾರೆ.  20 ವರ್ಷದ ಹಿಂದೆ ಅಂಬರೀಶ್ ಎಂಬಾತನ ಪ್ರೀತಿಸಿ ಶ್ರುತಿ ಮದುವೆಯಾಗಿದ್ದರು. ಮದುವೆಯಾಗಿ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇತ್ತೀಚೆಗೆ ವಿವಿಧ ವಿಚಾರಕ್ಕೆ ಸಂಬಂಧಿಸಿದಂತೆ ಪತಿ ಪತ್ನಿಯ ನಡುವೆ ಜಗಳ ನಡೆಯುತ್ತಿತ್ತು ಎಂದು ಹೇಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಳಗಾವಿ: ಇನ್ಸ್ಟಾಗ್ರಾಮ್‌ ನಲ್ಲಿ ಪತ್ನಿಗೆ ಅಶ್ಲೀಲ ಫೋಟೋ ಕಳುಹಿಸಿದ್ದ ಯುವಕನಿಗೆ ಹಾಸ್ಯನಟ ಸಂಜು ಬಸಯ್ಯ ತಕ್ಕಪಾಠ ಕಲಿಸಿದ್ದಾರೆ. ಸಂಜು ಬಸಯ್ಯ ಅವರ ಪತ್ನಿ ನಟಿ ಪಲ್ಲವಿ ಸಂಜು ಬಸಯ್ಯ  ಅವರಿಗೆ ವಿಜಯನಗರ ಮೂಲದ ಮನೋಜ್ ಎಂಬ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಯುವಕ ಇನ್ಸ್ಟಾಗ್ರಾಮ್‌ ಮೂಲಕ ಅಶ್ಲೀಲ ಸಂದೇಶ ಕಳುಹಿಸಿದ್ದ. ಇದು ಗಮನಕ್ಕೆ ಬಂದ ತಕ್ಷಣವೇ ಸಂಜು ಬಸಯ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ತಕ್ಷಣವೇ ಪೊಲೀಸರು  ಕಿಡಿಗೇಡಿ ಯುವಕನನ್ನು ಪತ್ತೆ ಮಾಡಿ ಠಾಣೆಗೆ ಕರೆತಂದು ಸರಿಯಾದ ಬುದ್ಧಿ ಕಲಿಸಿದ್ದಾರೆ. ಬಳಿಕ ಯುವಕನ ಭವಿಷ್ಯ ಹಾಳಾಗಬಾರದು ಎನ್ನುವ ಕಾರಣಕ್ಕೆ  ಯುವಕನಿಗೆ ಬುದ್ಧಿ ಹೇಳಿ ಕಳುಹಿಸಿಕೊಟ್ಟಿದ್ದಾರೆ. ಈ ಘಟನೆಯ ಬೆನ್ನಲ್ಲೇ  ಕ್ಷಮೆ ಯಾಚಿಸಿದ ಆರೋಪಿ ಮನೋಜ್ ನಾನು ಬಹಳ ದಿವಸದಿಂದ ಇನ್‌ ಸ್ಟಾಗ್ರಾಂ ಬಳಸುತ್ತಿದ್ದೆ. ಪಲ್ಲು ಸಂಜು ಅಫಿಷಿಯಲ್ ಖಾತೆಗೆ ಕೆಟ್ಟ ಕಾಮೆಂಟ್ ಹಾಗೂ ಅಶ್ಲೀಲ ವಿಡಿಯೋ ಕಳುಹಿಸಿದ್ದೆ. ಈ ಬಗ್ಗೆ ಸಂಜು ಬಸಯ್ಯ ಅವರು ಬೈಲಹೊಂಗಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ನನ್ನನ್ನ ಕರೆಸಿ,…

Read More