Subscribe to Updates
Get the latest creative news from FooBar about art, design and business.
- ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
- ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ: ನಗನಗದು ದೋಚಿ ಪರಾರಿ
- ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
- ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
- ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
- ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
- ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
- ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Author: admin
ಅಲ್ಪಸಂಖ್ಯಾತರ ಸಮುದಾಯದ ಶಾದಿ ಮಹಲ್ ಹಾಗೂ ಟೆಂಡರ್ ಕಾಮಗಾರಿಗಳಲ್ಲಿ ಮೀಸಲಾತಿ ಕುರಿತಂತೆ ಕೆಲವು ಮಹತ್ವದ ವಿಷಯಗಳ ಕುರಿತು ವಿಕಾಸ್ ಸೌದ್ ದಲ್ಲಿ ಜೇವರ್ಗಿ ಶಾಸಕರಾದ ಡಾಕ್ಟರ್ ಅಜಯ್ ಸಿಂಗ್ ರವರು ವಸತಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಜೆಡ್ ಎಮ್ ಜಮೀರ್ ಅಹ್ಮದ್ ಖಾನ್ ರವರ ಜೊತೆಯಲ್ಲಿ ಚರ್ಚೆ ನಡೆಸಿದರು. ಚರ್ಚೆಯಲ್ಲಿ ಶಾಸಕರಾದ ಶ್ರೀ ಎಮ್ ಎ ಹ್ಯಾರಿಸ್ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯ ಸಂಚಾಲಕರಾದ ಶ್ರೀ. ಶೌಕತ್ ಅಲಿ ಆಲೂರು ನಾನು ಸೇರಿದಂತೆ ಹಿರಿಯ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಮುಖಂಡರು ಭಾಗವಹಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶಕ್ಕೆ ಆಂತರಿಕ ಅಂಕ ಪರಿಗಣಿಸುವ ಸರ್ಕಾರದ ನಿರ್ಧಾರಕ್ಕೆ ಎಐಡಿಎಸ್‌ಒ ಆಕ್ಷೇಪ ವ್ಯಕ್ತಪಡಿಸಿದೆ. ಯಾವುದೇ ಹೊಸ ನಿರ್ಧಾರವನ್ನು ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ತೆಗೆದುಕೊಳ್ಳಬೇಕು. ಪರೀಕ್ಷೆಯ ರೂಪುರೇಷೆಯನ್ನು ಶಿಕ್ಷಣ ತಜ್ಞರನ್ನು ಒಳಗೊಂಡು ಪ್ರಜಾತಾಂತ್ರಿಕ ಪ್ರಕ್ರಿಯೆಯ ಮೂಲಕ ರೂಪಿಸಬೇಕು. ಆದರೆ, ಈ ನಿರ್ಧಾರವು ಶೈಕ್ಷಣಿಕ ವರ್ಷ ಆರಂಭಗೊಂಡ ಬಳಿಕ ಬಂದಿದೆ. ಯಾವುದೇ ಚರ್ಚೆಗಳು ಇಲ್ಲದೆ, ಅಪ್ರಜಾತಾಂತ್ರಿಕವಾಗಿ ಅನುಷ್ಠಾನಕ್ಕೆ ತರಲಾಗಿದೆ ಎಂದು ಎಐಡಿಎಸ್ ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಆರೋಪಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಪ್ರಾಯೋಗಿಕ ವಿಷಯಕ್ಕೆ ಪರೀಕ್ಷೆಯ ಅಗತ್ಯವಿದೆ. ಹಾಗಾಗಿ ಅದಕ್ಕೆ 30 ಅಂಕಗಳನ್ನು ನಿಗದಿ ಪಡಿಸಿರುವುದು ಸರಿ. ಪ್ರಾಯೋಗಿಕ ವಿಷಯಗಳು ಇಲ್ಲದ ಕಲಾ ಮತ್ತು ವಾಣಿಜ್ಯ ವಿಭಾಗಕ್ಕೆ ಮಾಡುವ ಅಗತ್ಯವಿಲ್ಲ. ಈಗ ಆಂತರಿಕ ಅಂಕ ನಿಗದಿ ಮಾಡಿರುವುದರಿಂದ ವಿದ್ಯಾರ್ಥಿಗಳ 20 ಅಂಕಗಳು ಶಿಕ್ಷಕರ ಹಿಡಿತಕ್ಕೆ ಬರುತ್ತದೆ. ಶಿಕ್ಷಣದ ವ್ಯಾಪಾರೀಕರಣ ಉದ್ದೇಶ ಹೊಂದಿರುವ ಖಾಸಗಿ ಕಾಲೇಜುಗಳು ಇದನ್ನು ದುರುಪಯೋಗ ಪಡಿಸಿಕೊಂಡು ವಿದ್ಯಾರ್ಥಿಗಳನ್ನು ಕಿರುಕುಳಕ್ಕೆ ಒಳಪಡಿಸುವ ಸಾಧ್ಯತೆ ಇದೆ…
ರಾಜ್ಯದಲ್ಲಿ ಆಪರೇಷನ್ ಹಸ್ತ ಸಿದ್ದರಾಮಯ್ಯ ಅವರಿಂದಲೇ ಆರಂಭವಾಗಿದ್ದು, 2007 ರಲ್ಲಿ ನೀವು ಜೆಡಿಎಸ್ ತೊರೆದು ರಾಜಿನಾಮೆ ಕೊಟ್ಟು ಕಾಂಗ್ರೆಸ್ ಸೇರಿ ಚುನಾವಣೆ ಗೆದ್ದು ಬಂದಿದ್ದಿರಿ, ಅದೇ ರೀತಿ ಅವರೂ ಮಾಡಿದ್ದಾರೆ. ಅವರಿಗೂ ನಿಮಗೂ ಏನು ವ್ಯತ್ಯಾಸ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಪಕ್ಷ 80 ರ ನಂತರ ಒಮ್ಮೆ ಅಧಿಕಾರಕ್ಕೆ ಬಂದ ಮೇಲೆ ಮತ್ತೆ ಅಧಿಕಾರಕ್ಕೆ ಬಂದಿಲ್ಲ. ನಿಮ್ಮ ಪರಿಸ್ಥಿತಿಯೂ ಹಾಗೇ ಇದೇ. 2013 ರಲ್ಲಿ ಅಧಿಕಾರ ನಡೆಸಿ ಎಲ್ಲ ಭಾಗ್ಯಗಳನ್ನು ಕೊಟ್ಟರೂ ನೀವು ಯಾಕೆ ಸೋತಿರಿ, ನಿಮ್ಮನ್ನೂ ಜನರು ತಿರಸ್ಕರಿಸಿದ್ದರು ಎಂದರು. 2004 ರಲ್ಲಿ ಕಾಂಗ್ರೆಸ್ 65 ಸೀಟು ಬಂದಿತ್ತು, ಆಗೇನು ಬಹುಮತ ಇತ್ತಾ ಇವರಿಗೆ, 2018 ರಲ್ಲಿ ಇವರಿಗೆ ಬಹುಮತ ಇತ್ತಾ? ಯಾರಿಗೆ ಬಹುಮತದ ಪಾಠ ಹೇಳಿಕೊಳ್ಳುತ್ತಾರೆ ಇವರು. 1983 ರಲ್ಲೂ ಜನತಾ ಪಕ್ಷಕ್ಕೆ ಬಹುಮತ ಇರಲಿಲ್ಲ ಆಗಲೂ ಸರ್ಕಾರ ಮಾಡಿದ್ದರು. ಆಗಿನಿಂದಲೂ ಮೈತ್ರಿ ಸರ್ಕಾರ ಆರಂಭವಾಗಿದೆ ಎಂದು…
ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 11ರಿಂದ ಕಾರ್ಯಾಚರಣೆಗೊಳ್ಳುವ ಸಾಧ್ಯತೆ ಇದ್ದು, ಇದಕ್ಕೆ ಮುಂಚಿತವಾಗಿ ಜುಲೈ 20ರೊಳಗೆ ಬೇಕಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ ಗುರುವಾರ ಹೇಳಿದ್ದಾರೆ. ರಾಜ್ಯದ ಹೊಸ ವಿಮಾನ ನಿಲ್ದಾಣಗಳ ಕಾಮಗಾರಿ ಪ್ರಗತಿ ಮತ್ತಿತರ ವಿಷಯಗಳ ಬಗ್ಗೆ ಸಭೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ ಸಂದರ್ಭದಲ್ಲಿ ಅವರು ಹೀಗೆ ಹೇಳಿದರು. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಂಬುಲೆನ್ಸ್ ಮತ್ತು ಇತರೆ ಅಗತ್ಯ ವಾಹನಗಳನ್ನು ನಿಯೋಜಿಸುವ ಕೆಲಸ ಆಗಬೇಕಾಗಿದೆ. ಕಾಫಿ ಕೆಫೆ ಆರಂಭಿಸುವ ಸಂಬಂಧದ ಕೆಲಸವೂ ಆಗಬೇಕಿದೆ. ಜೊತೆಗೆ, ಕೆಲವು ತಾಂತ್ರಿಕ ಮತ್ತು ತಾಂತ್ರಿಕೇತರ ಸಿಬ್ಬಂದಿ ನೇಮಕ ನಡೆಯಬೇಕಿದೆ. ಇವೆಲ್ಲವನ್ನೂ ಜುಲೈ 20ರ ಹೊತ್ತಿಗೆ ಪೂರೈಸಿ ವಿಮಾನ ನಿಲ್ದಾಣವನ್ನು ಕಾರ್ಯಾಚರಣೆಗೆ ಸಜ್ಜುಗೊಳಿಸಲಾಗುವುದು ಎಂದು ವಿವರಿಸಿದರು. ಕೇಂದ್ರ ನಾಗರಿಕ ವಿಮಾನ ನಿರ್ದೇಶನಾಲಯವು ಇಲ್ಲಿನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆಎಸ್‌ಐಐಡಿಸಿ) ವಹಿಸಿದೆ.…
ಹಿಂದಿನ ಸರ್ಕಾರದ ಆರೋಪ ಬಗ್ಗೆಯೂ ತನಿಖೆ ಮಾಡಿಸುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 2013ರಿಂದಲೂ ತನಿಖೆ ಮಾಡಿಸಿ ಎಂದು ಬೊಮ್ಮಾಯಿ ಹೇಳಿದ್ದಾರೆ. ನೀವು ಅಧಿಕಾರದಲ್ಲಿ ಇದ್ದಾಗ ತನಿಖೆ ಮಾಡಿಸಬಹುದಿತ್ತಲ್ಲಾ? ನಾವೇನು ಅಡ್ಡ ಬರುತ್ತಾ ಇರಲಿಲ್ಲ, ನೀವು ಯಾಕೆ ತನಿಖೆ ಮಾಡಿಸಲಿಲ್ಲ? ನೀವು ಅಧಿಕಾರಲ್ಲಿದ್ದಾಗ ತನಿಖೆ ಮಾಡಿಸಲಿಲ್ಲ ಅಂದರೆ, ನಮ್ಮ ವಿರುದ್ಧ ಯಾವುದೇ ದಾಖಲಾತಿಗಳೂ ಇರಲಿಲ್ಲ ಎಂದರ್ಥ ಎಂದರು. 1983ರಲ್ಲಿ ನಾನು ಶಾಸಕನಾದೆ, 1984ರಲ್ಲಿ ನಾನು ಮಂತ್ರಿ ಆದೆ. ಆಮೇಲೆ ಡಿಸಿಎಂ, ವಿರೋಧ ಪಕ್ಷದ ನಾಯಕ, ಸಿಎಂ ಆಗಿದ್ದೇನೆ. ಇದೇ ಮೊದಲಲ್ಲ ಸಿಎಂ ಆಗಿರುವುದು, 2ನೇ ಬಾರಿ ಸಿಎಂ ಆಗಿದ್ದೇನೆ. ದೇವರಾಜ ಅರಸು ಬಿಟ್ಟರೆ ಪೂರ್ಣಾವಧಿ ಸಿಕ್ಕಿರುವುದು ನನಗೇನೆ. ಸುದೀರ್ಘ ರಾಜಕಾರಣದಲ್ಲಿ ಕಳಂಕವೂ ಇಲ್ಲ, ಹಗರಣವೂ ಇಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ಯಲ್ಲಮ್ಮನ ಗುಡ್ಡದಲ್ಲಿರುವ ರೇಣುಕಾ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ ಅಪಾರ ಕಾಣಿಕೆ ಸಂಗ್ರಹವಾಗಿದೆ. ಮೇ 17ರಿಂದ ಜೂನ್ 30ರ ಅವಧಿಯಲ್ಲಿ ಅಂದ್ರೆ 45 ದಿನಗಳಲ್ಲಿ ದೇವಸ್ಥಾನದಲ್ಲಿ 1.37 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. 1 ಕೋಟಿ 30 ಲಕ್ಷ 42 ಸಾವಿರ ನಗದು, 4.44 ಲಕ್ಷ ಮೌಲ್ಯದ ಚಿನ್ನ, 2.29 ಲಕ್ಷ ಮೌಲ್ಯದ ಬೆಳ್ಳಿ ಆಭರಣ ದೇಗುಲದ ಹುಂಡಿಯಲ್ಲಿ ಸಂಗ್ರಹವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಲವ್ ಜಿಹಾದ್ ಆರೋಪದ ವಿಚಾರವಾಗಿ ಮಾತನಾಡಿದ ಮಾಜಿ ಸಚಿವ ಆರ್ ಅಶೋಕ, ಕಾಂಗ್ರೆಸ್ ಬಂದ ಮೇಲೆ ಲವ್ ಜಿಹಾದ್, ಪಾಕಿಸ್ತಾನ ಜಿಂದಾಬಾದ್ ಎನ್ನುವುದಲ್ಲೆ ಹರದಾರಿಯಾಗಿದೆ. ಕಾಂಗ್ರೆಸ್ನವರು ಒಂದು ರೀತಿ ಅನುಮತಿ ಕೊಟ್ಟಿದ್ದಾರೆ. ದೇಶ ವಿರೋಧಿ ಚಟುವಟಿಕೆ ಮಾಡುವ ಪಿಎಫ್ಐ ಕೇಸ್ ಗಳನ್ನು ವಾಪಸ್ ಪಡೆದರು, ಮುಂದೇನು ಅದೇ ರೀತಿ ಆಗುತ್ತದೆ. ಟಿಪ್ಪು ಸಿದ್ದಾಂತ ಇಟ್ಟುಕೊಂಡು ಬಂದವರು ಕಾಂಗ್ರೆಸ್ನವರು. ಬಜೆಟ್ ನಲ್ಲಿ ಹಿಂದೂ ಮಠಗಳಿಗೆ ಹಣ ಕೊಟ್ಟಿಲ್ಲ, ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ಹಿಂದೂ ವಿರೋಧಿ ಸರ್ಕಾರವಿದು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ತೋಟದಲ್ಲಿ ಆಡವಾಡುತ್ತಿದ್ದ ವೇಳೆ ಬಾವಿಗೆ ಬಿದ್ದ ತಮ್ಮನನ್ನು 8 ವರ್ಷದ ಬಾಲಕಿ ಬಾವಿಗೆ ಹಾರಿ ರಕ್ಷಿಸಿದ ಘಟನೆ ತುಮಕೂರು ತಾಲ್ಲೂಕು ಕುಚ್ಚಂಗಿಯಲ್ಲಿ ನಡೆದಿದೆ. ತುಮಕೂರು ತಾಲ್ಲೂಕು ಕುಚ್ಚಂಗಿಯ ತೋಟದ ಮನೆಯಲ್ಲಿ ಕೆಲಸಕ್ಕೆ ಇದ್ದ ಉತ್ತರ ಪ್ರದೇಶ ಮೂಲದ ಜೀತೇಂದ್ರ- ರಾಜಕುಮಾರಿ ದಂಪತಿಯ ಮಕ್ಕಳಾದ 8 ವರ್ಷದ ಶಾಲೂ, 7 ವರ್ಷದ ಹಿಮಾಂಶೂ, 3 ವರ್ಷದ ರಾಶಿ, 2 ವರ್ಷದ ಕಪಿಲ್ ತೋಟದ ಬಾವಿಯ ಬಳಿಯಲ್ಲಿ ಆಟವಾಡುತ್ತಿದ್ದರು. ಈ ವೇಳೆ ಬಾಲ್ ತೆಗೆಯಲು ಹೋಗಿದ್ದ ಹಿಮಾಂಶೂ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಾನೆ. ತಮ್ಮ ಬಾವಿಗೆ ಬಿದ್ದಿರುವುದನ್ನು ಕಂಡ ಶಾಲೂ ತಕ್ಷಣವೇ ಮನೆಯಲ್ಲಿದ್ದ ಲೈಫ್ ಜಾಕೀಟ್ ಧರಿಸಿ ಬಾವಿ ಹಾರಿದ್ದಾಳೆ, ಇದೇ ವೇಳೆ ಅಕ್ಕ ಪಕ್ಕದ ಜನರು ಶಾಲೂ ಸಹಾಯಕ್ಕೆ ಬಂದಿದ್ದು, ಇಬ್ಬರನ್ನೂ ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಬಾವಿಯಲ್ಲಿ ಬಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಹಿಮಾಂಶುವನ್ನು ಕೊನೆಗೂ ಶಾಲೂ ರಕ್ಷಿಸಿದ್ದಾಳೆ. ಈಕೆ ಕಳೆದ ಮೂರ್ನಾಲ್ಕು ತಿಂಗಳಿಂದ ಈಜು ಕಲಿಯುತ್ತಿದ್ದಳು. ಬಾಡಿಗೆ ಮನೆ ಮಾಲೀಕ ಧನಂಜಯ್ಯ ಅವರ…
ಸರ್ಕಾರಿ ಪ್ರೌಢಶಾಲೆ ಕತ್ರಿದಡ್ಡಿ ಶಾಲಾವಿದ್ಯಾರ್ಥಿಗಳು ಕತ್ತಲದಿಂದ ವಿದ್ಯಾಭ್ಯಾಸಕ್ಕೆ ಆಗುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ತಾವೇ ಹೊಸ ಸಂಶೋಧನೆ ಮಾಡಿ ತಮ್ಮ ಸಮಸ್ಯೆಗಳಿಗೆ ತಾವೇ ಪರಿಹಾರ ಕಂಡುಕೊಳ್ಳುವುದರ ಮೂಲಕ ಸರಕಾರಿ ಶಾಲೆ ಮಕ್ಕಳು ಎಲ್ಲದಕ್ಕೂ ಸೈ ಎನ್ನುವುದನ್ನು ಮತ್ತೆ ಸಾಬೀತು ಪಡಿಸಿದ್ದಾರೆ. ಆರು ಜನ ವಿದ್ಯಾರ್ಥಿಗಳಾದ ಸುದೀಪ್ ಹತ್ತಿ , ಸುನಿಲ ಮಾಶೇಕರ್, ಗಂಗಪ್ಪ ಈಗಣಿ, ಸುದೀಪ್ ತೋಪು ಕಾಣಿ, ಪ್ರೇಮ್ ಕುಮಾರ್ ಮಾರುತಿ ಹಟ್ಟಿ ಹೋಳಿ, ಮಹಾದೇವ್ ದವ್ದಾಡ, 9ನೇ ತರಗತಿಯ ವಿದ್ಯಾರ್ಥಿಗಳು ಲೈಟ್ ಬೆಳಕಿನ ಮೂಲವನ್ನು ಬಳಸಿಕೊಂಡು ನೂತನ ಮಾದರಿಯ ಪೆನ್ನನ್ನು ರಚಿಸಿದ್ದಾರೆ. ತಮ್ಮ ಗ್ರಾಮದಲ್ಲಿ ಆಗಾಗ ವಿದ್ಯುತ್ ಕಡಿತದಿಂದಾಗುವ ಸಮಸ್ಯೆಗೆ, ವಿದ್ಯಾಭ್ಯಾಸಕ್ಕೆ ಆಗುವ ತೊಂದರೆಗಳಿಗೆ ತಾವೇ ಪರಿಹಾರ ಹುಡುಕಿಕೊಂಡಿದ್ದಾರೆ. ತಮ್ಮ ಶಾಲಾ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಲೈಫ್ ಸ್ಟಾರ್ ಪೆನ್ನಿಗೆ ಜೋಡಿಸಿ ಬೆಳಕಿನ ಮೂಲವನ್ನು ಕಂಡುಹಿಡಿದಿದ್ದಾರೆ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw
ಬೆಂಗಳೂರು: ಸ್ನೇಹಿತನೇ ನನ್ನ ಪತ್ನಿಯ ತಲೆ ಕೆಡಿಸಿ ಲವ್ ಜಿಹಾದ್ ಮಾಡಿದ್ದಾನೆ ಎಂದು ವ್ಯಕ್ತಿಯೊಬ್ಬರು ಆರೋಪಿಸಿರುವ ವಿಚಿತ್ರ ಘಟನೆ ನಡೆದಿದೆ. ನಗರದ ಖಾಸಗಿ ಕಾರ್ಖನೆಯೊಂದರಲ್ಲಿ ಕಾರ್ಮಿಕನಾಗಿರುವ ಅಜಿತ್ ತನ್ನ ಪತ್ನಿ ಲವ್ ಜಿಹಾದ್ ಗೆ ಬಲಿಯಾಗಿದ್ದಾಳೆ ಎಂದು ಆರೋಪಿಸಿದ್ದಾನೆ. ಕಳೆದ ಮೂರು ವರ್ಷಗಳ ಹಿಂದೆ ಇವರಿಬ್ಬರೂ ಮದುವೆಯಾಗಿದ್ದರು. ತನ್ನ ಹಾಗೂ ಹೆಂಡತಿ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಲು ಮಧ್ಯ ಪ್ರವೇಶಿಸಿದ್ದ ಕುಟುಂಬದ ಸ್ನೇಹಿತ ಸಲ್ಮಾನ್ ರಹಸ್ಯವಾಗಿ ಆಕೆಯ ತಲೆಕೆಡಿಸಿದ್ದು, ಆಕೆಯ ಜೊತೆಗೆ ಸಂಬಂಧ ಬೆಳೆಸಿದ್ದಾನೆ ಎಂದು ಅಜಿತ್ ಆರೋಪಿಸಿದ್ದಾನೆ. ಸಲ್ಮಾನ್ ಹಾಗೂ ಪತ್ನಿಯ ಖಾಸಗಿ ಫೋಟೋಗಳು ಸಿಕ್ಕ ನಂತರ ಅವರಿಬ್ಬರ ನಡುವಿನ ಅಕ್ರಮ ಸಂಬಂಧ ದೃಢಪಟ್ಟಿದ್ದು, ಹೊಸಗುಡ್ಜದಹಳ್ಳಿಯ ನಿವಾಸಿ ಅಜಿತ್ ಶಾಕ್ ಆಗಿದ್ದಾರೆ. ಪೋಷಕರ ತೀವ್ರ ವಿರೋಧದ ನಡುವೆಯೇ ಆಗಸ್ಟ್ 2020 ರಲ್ಲಿ ಸಬ್-ರಿಜಿಸ್ಟ್ರಾರ್ ಕಚೇರಿಯಲ್ಲಿ ಇವರಿಬ್ಬರೂ ವಿವಾಹವಾಗಿದ್ದರು. ಸಲ್ಮಾನ್ ಬಾಲ್ಯದಿಂದಲೂ ಅಜಿತ್ ಗೆ ಪರಿಚಿತನಾಗಿದ್ದು, ಇಬ್ಬರೂ ಸ್ನೇಹಿತರಾಗಿದ್ದರು. ಅಲ್ಲದೇ ಕಾರ್ಖಾನೆಯೊಂದರಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ತಮಿಳುನಾಡಿಗೆ ಹೋಗಿದ್ದಾಗ ತನ್ನ ಮೊಬೈಲ್ ಬಳಸಿ…