Subscribe to Updates
Get the latest creative news from FooBar about art, design and business.
- ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!
- ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
- ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ
- ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ
- ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದೆ: ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಕರೆ
- 175 ನೇರ ಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ: ತುಮಕೂರನ್ನು ದೇಶಕ್ಕೆ ಮಾದರಿ ನಗರವನ್ನಾಗಿಸೋಣ: ಡಿಸಿಎಂ ಡಾ.ಜಿ. ಪರಮೇಶ್ವರ
- ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ
- ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ
Author: admin
ದೆಹಲಿಯಲ್ಲಿ ವಾಯು ಮಾಲಿನ್ಯ ತೀವ್ರವಾಗಿದೆ. ಚಳಿಗಾಲ ಆರಂಭವಾಗುತ್ತಿದ್ದಂತೆ ವಾಯು ಮಾಲಿನ್ಯ ತೀವ್ರಗೊಂಡಿದೆ. ಗಾಳಿಯ ಗುಣಮಟ್ಟ ತುಂಬಾ ಕಳಪೆಯಾಗಿದೆ ಎಂದು ವರದಿಯಾಗಿದೆ. ವಾಯು ಗುಣಮಟ್ಟ ಸೂಚ್ಯಂಕ 266ಕ್ಕಿಂತ ಹೆಚ್ಚಿದೆ. ಸಾರ್ವಜನಿಕ ಸ್ಥಳಗಳಲ್ಲಿ ನೀರು ಸಿಂಪಡಿಸುವಂತೆ ದೆಹಲಿ ಸರ್ಕಾರ ಸೂಚನೆ ನೀಡಿದೆ. ಇನ್ನೂ ಎಂಟು ಸ್ಥಳಗಳನ್ನು ಹೊಸ ವಾಯುಮಾಲಿನ್ಯ ಹಾಟ್ ಸ್ಪಾಟ್‌ಗಳಲ್ಲಿ ಸೇರಿಸಲಾಗಿದೆ. ದೆಹಲಿಯ ನೆರೆಯ ರಾಜ್ಯಗಳಲ್ಲಿ ಕೃಷಿ ಅವಶೇಷಗಳನ್ನು ಸುಡುವುದರಿಂದ ವಾಯು ಮಾಲಿನ್ಯ ಉಂಟಾಗುತ್ತಿದೆ. ಪಂಜಾಬ್ ಮತ್ತು ಹಿಮಾಲ್ ನಂತಹ ರಾಜ್ಯಗಳಲ್ಲಿ ಕೃಷಿ ಅವಶೇಷಗಳ ದಹನ ಮುಂದುವರಿದಿರುವುದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಡುವ ಸಾಧ್ಯತೆಯಿದೆ. ವಾಯು ಮಾಲಿನ್ಯವನ್ನು ತಡೆಯಲು ಸರ್ಕಾರ ತುರ್ತು ಕ್ರಮಗಳನ್ನು ಪ್ರಾರಂಭಿಸಿದೆ. ಎಲ್ಲರೂ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸುವುದು ಮುಂತಾದ ಪ್ರಸ್ತಾವನೆಗಳನ್ನು ಸರ್ಕಾರ ಮುಂದಿಡುವ ಸಾಧ್ಯತೆ ಇದೆ.
ಬೆಂಗಳೂರು: ವಿದ್ಯಾರ್ಥಿಗಳು ಎಂದಿಗೂ ತಾವು ಬೆಳೆದು ಬಂದ ಹಾಗೂ ಬೆಳೆಯುವ ದಾರಿ ಮರೆಯಬಾರದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಿವಿಮಾತು ಹೇಳಿದರು. ನಗರದ ಯಲಹಂಕದಲ್ಲಿರುವ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಆವರಣದಲ್ಲಿ ಡಾ. ರಾಮದಾಸ್ ಎಂ ಪೈ ಸಮ್ಮೇಳನ ಸಭಾಂಗಣ ಹಾಗೂ ಫುಡ್ ಕೋರ್ಟ್ ಉದ್ಘಾಟಿಸಿ ಮಾತನಾಡಿದ ಅವರು ಹೇಳಿದ್ದಿಷ್ಟು , “ಜೀವನದಲ್ಲಿ ಶಿಸ್ತು, ಸಂಯಮ, ಶ್ರದ್ಧೆ ಮೈಗೂಡಿಸಿಕೊಂಡರೆ ಯಾವುದೇ ಕೆಲಸಗಳು ಕಠಿಣವಲ್ಲ. ಸುಲಭವಾಗಿ ಗುರಿ ಮುಟ್ಟಬಹುದು. ಕೇವಲ ಧನಾತ್ಮಕ ಚಿಂತನೆಗಳ ಬಗ್ಗೆ ಯೋಚಿಸಬೇಕೆ ಹೊರತು, ನಕಾರಾತ್ಮಕ ಚಿಂತನೆಗಳ ಕುರಿತು ಒಂದು ಕ್ಷಣವೂ ಯೋಚಿಸಬಾರದು. ಮಹಾತ್ಮ ಗಾಂಧಿ ಅವರು ಹೇಳುತ್ತಾರೆ, “ನೀವು ನಿಮ್ಮನ್ನು ನಿಯಂತ್ರಣ ಮಾಡಿಕೊಳ್ಳಲು ನಿಮ್ಮ ಮೆದುಳನ್ನು ಬಳಸಿ, ಇತರರನ್ನು ನಿಯಂತ್ರಿಸಲು ಹೃದಯವನ್ನು ಬಳಸಿ” ಎಂದು. ಯಾವುದೇ ಕಾರಣಕ್ಕೂ ಇತರೇ ವಿಚಾರಗಳಿಂದ ಕಲುಷಿತರಾಗಬೇಡಿ, ಸ್ವಂತ ಆಲೋಚನೆ ಬೆಳೆಸಿಕೊಳ್ಳಿ. ಈ ದೇಶದಲ್ಲಿ ಹುಟ್ಟಿರುವುದು ನಮ್ಮೆಲ್ಲರ ಪುಣ್ಯ. ಶುಭಂ ಕರೋತಿ ಕಲ್ಯಾಣಂ ಆರೋಗ್ಯಂ ಧನ ಸಂಪದಂ. ಶತ್ರುಬುದ್ಧಿವಿನಾಶಾಯ ದೀಪಜ್ಯೋತಿ ನಮೋಸ್ತುತೇ ಎನ್ನುವ…
ಮೈಸೂರು: ರಾಜ್ಯ ಸರ್ಕಾರದ ಐದು ಯೋಜನೆಗಳ ಸಂದೇಶ ಸಾರುವ ಸ್ತಬ್ಧ ಚಿತ್ರಗಳು ಕೂಡ ಜಂಬೂ ಸವಾರಿ ಮೆರವಣಿಗೆಯಲ್ಲಿ ಸಾಗಲಿವೆ. ಶಕ್ತಿ ಯೋಜನೆ, ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆ, ಯುವನಿಧಿ ಯೋಜನೆಯ ಸ್ಥಬ್ಧ ಚಿತ್ರಗಳನ್ನು ನಿರ್ಮಾಣ ಮಾಡಲಾಗಿದೆ. ಜಂಬೂ ಸವಾರಿ ಮುನ್ನ ವಿಶೇಷ ಟ್ಯಾಬ್ಲೊಗಳು ಸಾಗಲಿವೆ. ಅರಮನೆಯಿಂದ ಬನ್ನಿ ಮಂಟಪದವರೆಗೂ ಸ್ಥಬ್ಧ ಚಿತ್ರಗಳು ಸಾಗಲಿವೆ. ರಾಜ್ಯದ ವಿವಿಧ ಭಾಗಗಳಿಂದ ಟ್ಯಾಬ್ಲೊಗಳು ಆಗಮಿಸಿವೆ.
ಮಧ್ಯಪ್ರದೇಶದಲ್ಲಿ ಬಿಜೆಪಿಯ ಹಿರಿಯ ನಾಯಕ ಹಾಗೂ ಮಧ್ಯಪ್ರದೇಶದ ಮಾಜಿ ಸಚಿವ ರುಸ್ತಮ್ ಸಿಂಗ್ ಪಕ್ಷ ತೊರೆದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಷ್ಣು ದತ್ ಶರ್ಮಾ ಅವರಿಗೆ ಪತ್ರ ಬರೆದಿರುವ ಅವರು, ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಮತ್ತು ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಮುಂದಿನ ತಿಂಗಳು ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವರ ರಾಜೀನಾಮೆ ನೀಡಲಾಗಿದೆ. ರುಸ್ತಮ್ ಸಿಂಗ್ ಅವರ ಪುತ್ರ ರಾಕೇಶ್ ಸಿಂಗ್ ಮೊರೆನಾ ಕ್ಷೇತ್ರದಿಂದ ಬಿಎಸ್ ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ರುಸ್ತಮ್ ಸಿಂಗ್ ಗ್ವಾಲಿಯರ್-ಚಂಬಲ್ ಪ್ರದೇಶದ ಗುರ್ಜರ್ ನಾಯಕ. 2003ರಲ್ಲಿ ಐಪಿಎಸ್ ಹುದ್ದೆ ತ್ಯಜಿಸಿ ಬಿಜೆಪಿ ಸೇರಿದರು. 2003-2008 ಮತ್ತು 2013-2018ರ ಅವಧಿಯಲ್ಲಿ ಶಾಸಕರಾಗಿದ್ದರು. ಅವರು 2003 ರಿಂದ 2008 ರವರೆಗೆ ಮತ್ತು 2015 ರಿಂದ 2018 ರವರೆಗೆ ಎರಡು ಬಾರಿ ಸಚಿವರಾಗಿದ್ದರು. ಮೊರೆನಾದಲ್ಲಿ ತಮ್ಮ ಮಗನ ಪರ ಪ್ರಚಾರ ಮಾಡಲು ಅವರು ಬಿಜೆಪಿ ತೊರೆಯುತ್ತಾರೆ ಎಂಬ ವದಂತಿಗಳು ಈ ಹಿಂದೆ ಇದ್ದವು.
ಲಂಡನ್ ನ ನ್ಯಾಚುರಲ್ ಹಿಸ್ಟರಿ ಮ್ಯೂಸಿಯಂ ಆಯೋಜಿಸುವ ಜಾಗತಿಕ ಅತ್ಯುತ್ತಮ ವನ್ಯಜೀವಿ ಛಾಯಾಚಿತ್ರಗಳ ಪ್ರದರ್ಶನದಲ್ಲಿ ಬೆಂಗಳೂರುಮೂಲದ ವಿಹಾನ್ ತಾಳ್ಯ ವಿಕಾಸ್ ಗೆ ವನ್ಯಜೀವಿ ಛಾಯಾಗ್ರಾಹಕ ಪ್ರಶಸ್ತಿ ಲಭಿಸಿದೆ. ಜೇಡದ ಜೊತೆಗೆ ಕೃಷ್ಣನ ಕೆತ್ತನೆಯಿರುವ ಕಲ್ಲಿನ ಫೋಟೋ ಕ್ಲಿಕ್ ಗೆ ಪ್ರಶಸ್ತಿ ಸಿಕ್ಕಿದೆ. ಪುರಾತನ ದೇವಸ್ಥಾನದ ಗೋಡೆ ಮೇಲೆ ಮರದ ಕಾಂಡದ ಜೇಡವು ತನ್ನ ಬೇಟೆ ತಪ್ಪಿಸಿಕೊಳ್ಳದಂತೆ ತಡೆಯುವ ಚಿತ್ರವನ್ನು ಸೆರೆ ಹಿಡಿದಿದ್ದ. ಹಾಗೇ ಕೃಷ್ಣನ ಕೆತ್ತನೆಯಿರುವ ಕಲ್ಲಿನ ಫೋಟೋ ಕ್ಲಿಕ್ಕಿಸಿದ್ದ.
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ – ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಪಂದ್ಯದ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ಊಟ ಸರಬರಾಜು ಮಾಡಿದ್ದ ಕೇಟರರ್ಸ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಬ್ಬಂದಿಗಳಿಗೆ ಊಟದ ವ್ಯವಸ್ಥೆಯನ್ನು ಈ ಇವೆಂಟ್ ಮ್ಯಾನೇಜೆಂಟ್ ಗಾಯತ್ರಿ ವಿಹಾರದಲ್ಲಿರುವ ಶಾರದಾ ಕೇಟರರರ್ಸ್‌ಗೆ ಊಟ ಸರಬರಾಜು ವಹಿಸಲಾಗಿತ್ತು. ಆದರೆ ಪೂರೈಸಲಾದ ಊಟದ ಪೈಕಿ ಮೊಸರನ್ನದಲ್ಲಿ ಹುಳು ಪತ್ತೆಯಾಗಿತ್ತು.
ಕೋಲಾರದಿಂದ ರಾತ್ರಿ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಬೆಂಗಳೂರಿಗೆ ಬಂದು ದ್ವಿಚಕ್ರ ವಾಹನ ಕಳವು ಮಾಡಿಕೊಂಡು ಪರಾರಿಯಾಗುತ್ತಿದ್ದ ಮೂವರು ಆರೋಪಿಗಳನ್ನು ಕಾಟನ್ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರದ ಜಿಲ್ಲೆ ಮುಳಬಾಗಿಲು ತಾಲೂಕಿನ ನವಕ್ಕಲ್ ಬಂಡೆ ನಿವಾಸಿ ಮಹಮ್ಮದ್ ಆಸೀಫ್ (27), ಮಹಮ್ಮದ್ ವಾಸೀಂ(22) ಹಾಗೂ ಸೈಯದ್ ಆಸೀಫ್(25) ಬಂಧಿತರು. ಆರೋಪಿಗಳಿಂದ 122.30 ಲಕ್ಷ ಮೌಲ್ಯದ ವಿವಿಧ ಕಂಪನಿಗಳ 31 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ.
ಸಿಲಿಕಾನ್ ಸಿಟಿಯಲ್ಲಿ ಮತ್ತೆ ರಸ್ತೆ ಗುಂಡಿಗಳು ಪ್ರತ್ಯಕ್ಷವಾಗಿದ್ದು, ಕೋಟಿ ಕೋಟಿ ಸುರಿದ್ರೂ ಗುಂಡಿ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಬೆಂಗಳೂರಿನಲ್ಲಿ ವಿಧಾನಸಭಾ ಕ್ಷೇತ್ರವಾರು ಗುಂಡಿ ಮುಚ್ಚಲು ಪಾಲಿಕೆ 33 ಕೋಟಿ ಟೆಂಡರ್ ಕರೆದಿದೆ. ಕಳೆದ ವರ್ಷ ರಸ್ತೆ ಗುಂಡಿ ಮುಚ್ಚಲು 50 ಕೋಟಿ ಖರ್ಚು ಮಾಡಲಾಗಿತ್ತು. ಈ ವರ್ಷ ರಸ್ತೆ ಗುಂಡಿ ಮುಚ್ಚಲು 33 ಕೋಟಿ ನಿಗದಿ ಮಾಡಲಾಗಿದೆ. ಮೊದಲ ಹಂತದಲ್ಲಿ 14 ವಿಧಾನಸಭಾ ಕ್ಷೇತ್ರಗಳಲ್ಲಿ ಗುಂಡಿ ಮುಚ್ಚಲು ಹಣ ನಿಗದಿ ಮಾಡಲಾಗಿದೆ. ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಗುಂಡಿ ಮುಚ್ಚಲು 3.6 ಕೋಟಿ ನಿಗದಿ ಮಾಡಲಾಗಿದೆ.
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿವಿಧ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ಸಿಎಂ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಬೆಂಗಳೂರಿನಿಂದ ರಸ್ತೆ ಮೂಲಕ ಪ್ರಯಾಣ ಆರಂಭಿಸಿ ಮೈಸೂರಿಗೆ ತಲುಪಲಿದ್ದಾರೆ. ಮಹಾರಾಣಿ ವಿಜ್ಞಾನ ಕಾಲೇಜಿನ ಹಾಸ್ಟೆಲ್ಗೆ ಭೇಟಿ ನೀಡಲಿದ್ದಾರೆ. ನಂತರ ಇಂದು ಸಂಜೆ 4 ಗಂಟೆಗೆ ನಡೆಯುವ ವೈಮಾನಿಕ ಪ್ರದರ್ಶನ ವೀಕ್ಷಣೆ ಮಾಡಲಿದ್ದಾರೆ. ಮಂಗಳವಾರ ಬೆಳಗ್ಗೆ 8.30ಕ್ಕೆ ಸುತ್ತೂರು ಶಾಖಾ ಮಠಕ್ಕೆ ತೆರಳಲಿದ್ದಾರೆ. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡಿಬೆಟ್ಟಕ್ಕೆ ತೆರಳಲಿದ್ದಾರೆ. ಅ.24 ಮಧ್ಯಾಹ್ನ 1.46ಕ್ಕೆ ನಂದಿ ಧ್ವಜಕ್ಕೆ ಪೂಜೆ ನೆರವೇರಿಸಲಿದ್ದಾರೆ. ಸಂಜೆ 4.40ಕ್ಕೆ ವಿಜಯದಶಮಿ ಮೆರವಣಿಗೆ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ. ರಾತ್ರಿ 7.30ಕ್ಕೆ ಪಂಜಿನ ಕವಾಯತು ವೀಕ್ಷಿಸಲಿದ್ದಾರೆ. ಅ.25ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ, ಅ.25ರಂದು ಸಂಜೆ ಮೈಸೂರಿನಿಂದ ಬೆಂಗಳೂರಿಗೆ ವಾಪಸಾಗಲಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಗುಜರಾತ್ ನಲ್ಲಿ ನವರಾತ್ರಿ ಆಚರಣೆ ವೇಳೆ ಗರ್ಬಾ ನೃತ್ಯ ಮಾಡುವಾಗ ಹೃದಯಾಘಾತದಿಂದ 10 ಮಂದಿ ಸಾವನ್ನಪ್ಪಿದ್ದಾರೆ. ಬಲಿಪಶುಗಳಲ್ಲಿ ಹದಿಹರೆಯದವರಿಂದ ಮಧ್ಯವಯಸ್ಕ ಜನರು ಇದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಮೃತರಲ್ಲಿ 13 ವರ್ಷದ ಬಾಲಕ ಮತ್ತು 17 ವರ್ಷದ ಬಾಲಕ ಸೇರಿದ್ದಾರೆ. ನವರಾತ್ರಿ ಆಚರಣೆಯ ಮೊದಲ ಆರು ದಿನಗಳಲ್ಲಿ ಹೃದಯ ಸಂಬಂಧಿ ಸಮಸ್ಯೆಯಿಂದಾಗಿ 108 ತುರ್ತು ಆಂಬ್ಯುಲೆನ್ಸ್ ಸೇವೆಗೆ 521 ಕರೆಗಳನ್ನು ಮಾಡಲಾಗಿದೆ. ಉಸಿರಾಡಲು ಸಾಧ್ಯವಾಗುತ್ತಿಲ್ಲ ಎಂದು 609 ಕರೆಗಳು ಬಂದಿವೆ. ಈ ಕರೆಗಳು ಸಂಜೆ 6 ರಿಂದ 2 ಗಂಟೆಯ ನಡುವೆ ಬಂದಿವೆ. ಗರ್ಬಾ ಆಚರಣೆಗೂ ಮುನ್ನ ತುರ್ತು ಪರಿಸ್ಥಿತಿ ಎದುರಿಸಲು ಸಜ್ಜಾಗುವಂತೆ ಸಮೀಪದ ಸರ್ಕಾರಿ ಆಸ್ಪತ್ರೆಗಳಿಗೆ ಸರ್ಕಾರ ಸೂಚಿಸಿದೆ. ಗರ್ಬಾ ಆಚರಣೆಗಳು ನಡೆಯುವ ಸ್ಥಳಗಳಲ್ಲಿ ವೈದ್ಯರು ಮತ್ತು ಆಂಬ್ಯುಲೆನ್ಸ್‌ಗಳ ಸೇವೆಯನ್ನು ಖಚಿತಪಡಿಸಿಕೊಳ್ಳಲು ಸೂಚನೆಗಳನ್ನು ನೀಡಲಾಗಿದೆ.