Author: admin

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ  ಕೆ. ಸೆಟ್ ಅನ್ನು ಇನ್ನು ಮುಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ನಡೆಸಲು ಶೀಘ್ರವೇ ಕ್ರಮ ಕೈಗೊಳ್ಳಲಾಗುವುದೆಂದು ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಮಂಗಳವಾರ ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಮಧು ಜಿ. ಮಾದೇಗೌಡ ಇವರ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಾದ ಕೆ. ಸೆಟ್ ಕಳೆದ ಎರಡು ವರ್ಷಗಳಿಂದ ನಡೆಯದಿರುವ ಬಗ್ಗೆ ಸರ್ಕಾರದ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಉನ್ನತ ಶಿಕ್ಷಣ ಸಚಿವರು, ಅರ್ಹತೆ ಹೊಂದಿರುವ ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕೆ. ಸೆಟ್ ಪರೀಕ್ಷೆಯನ್ನು ಕೆಇಎ ಮೂಲಕ ನಡೆಸಲು ಸರ್ಕಾರ ಕ್ರಮ ಕೈಗೊಂಡಿದೆ. ಯುಜಿಸಿಯ ಸಾಮಾನ್ಯ ಪ್ರಕ್ರಿಯೆ ಪೂರ್ಣಗೊಂಡ ನಂತರ ಪರೀಕ್ಷೆ ನಡೆಸಲಾಗುವುದು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವಿಶ್ವಕರ್ಮ ಸಮಾಜದವರಿಗೆ ಸಹ ದೇವಸ್ಥಾನಗಳ ಆಡಳಿತ ಮಂಡಳಿಯಲ್ಲಿ ಅವಕಾಶ ಕಲ್ಪಿಸಲು, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿಗಳ ಅಧಿನಿಯಮ 1997ಕ್ಕೆ ತಿದ್ದುಪಡಿ ಮಾಡಲಾಗುವುದೆಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಕೆ. ಪಿ. ನಂಜುಂಡಿ ಅವರು ವಿಶ್ವಕರ್ಮ ಸಮುದಾಯದವರಿಗೆ ದೇವಸ್ಥಾನದ ಆಡಳಿತ ಮಂಡಳಿಯಲ್ಲಿ ಅವಕಾಶ ಮಾಡಿಕೊಡುವ ಕುರಿತ ಗಮನ ಸೆಳೆಯುವ ಉತ್ತರಿಸಿದ ಸಾರಿಗೆ ಸಚಿವರು, ಅಧಿನಿಯಮದಲ್ಲಿ ಸಾಮಾನ್ಯ ವರ್ಗಕ್ಕೆ ಸೇರಿದ ನಾಲ್ಕು ಸದಸ್ಯರನ್ನು ಆಡಳಿತ ಮಂಡಳಿಯಲ್ಲಿ ಸೇರಿಸಿಕೊಳ್ಳಲು ಅವಕಾಶವಿದ್ದು, ಅದರಲ್ಲಿ ವಿಶ್ವಕರ್ಮ ಸಮುದಾಯದವರನ್ನೂ ಪರಿಗಣಿಸಲಾಗುವುದೆಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಸಿಲಿಕಾನ್ ಸಿಟಿಯಲ್ಲಿ ಹಾಡ ಹಗಲೇ ಡಬಲ್ ಮರ್ಡರ್ ಆಗಿದೆ. ಏರೊನಿಕ್ಸ್ ಇಂಟರ್ನೆಟ್ ಕಂಪನಿಯ ಎಂಡಿ ಮತ್ತು ಸಿಇಒ ಬರ್ಬರ ಕೊಲೆ ಮಾಡಲಾಗಿದ್ದು ಇಡಿ ಸಿಲಿಕಾನ್ ಸಿಟಿ ಬೆಚ್ಚಿ ಬಿದ್ದಿದೆ. ಎಂಡಿ ಫಣೀಂದ್ರ ಸುಬ್ರಮಣ್ಯ ಹಾಗೂ ಸೀಒ ವಿನು ಕುಮಾರ್ ಕೊಲೆಯಾದ ದುರ್ದೈವಿಗಳು. ಬೆಂಗಳೂರಿನ ಅಮೃತಹಳ್ಳಿಯಲ್ಲಿ ಘಟನೆ ನಡೆದಿದ್ದು, ಮಾಜಿ ಉದ್ಯೋಗಿ ಫೆಲಿಕ್ಸ್ ಎಂಬಾತನಿಂದ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು ದೌಡಾಯಿಸಿದ್ದಾರೆ. ಫೆಲಿಕ್ಸ್, ಏರೋನಿಕ್ಸ್ ಸಂಸ್ಥೆಯ ಹಳೆ ಉದ್ಯೋಗಿಯಾಗಿದ್ದು, ಕಂಪನಿ ಬಿಟ್ಟು ಸ್ವಂತ ಕಂಪನಿ ಸ್ಥಾಪಿಸಿದ್ದ. ಫಿಲಿಪ್ಸ್ ಉದ್ಯಮಕ್ಕೆ ಫಣೀಂದ್ರ ಎದುರಾಳಿಯಾಗಿದ್ದರಿಂದ ಫಣೀಂದ್ರ ಕೊಲೆಗೆ ಸಂಚು ರೂಪಿಸಿದ್ದ. ಪೂರ್ವ ಯೋಜನೆಯಂತೆ ಇಂದು ನಾಲ್ಕು ಗಂಟೆ ಸುಮಾರಿಗೆ ಕಂಪನಿಗೆ ತಲ್ವಾ‌ ಮತ್ತು ಮಚ್ಚಿನ ಸಮೇತ ಬಂದ ಫಿಲಿಪ್ಸ್ ಫಣೀಂದ್ರ ಹಾಗೂ ವಿನುಕುಮಾರ್ ಮೇಲೆ ದಾಳಿ ಮಾಡಿದ್ದಾನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ದೇವರಚಿಕ್ಕನಹಳ್ಳಿಯಲ್ಲಿ ಕಾಂಪೌಂಡ್ ಅನ್ನು ಬಿಡಿಎ ಸೋಮವಾರ ತೆರವುಗೊಳಿಸಿದೆ. ದೇವರಚಿಕ್ಕನಹಳ್ಳಿ ಗ್ರಾಮದ ಸರ್ವೆ ನಂ. 40/1ರಲ್ಲಿನ ಒಂದು ಎಕರೆ 12 ಗುಂಟೆ ಜಮೀನು ಬಿಟಿಎಂ 4ನೇ ಹಂತ 2ನೇ ಬ್ಲಾಕ್ ಬಡಾವಣೆಗೆ 1990ರಲ್ಲಿ ಅಂತಿಮ ಅಧಿಸೂಚನೆಯಾಗಿತ್ತು. ಈ ಪ್ರದೇಶದಲ್ಲಿ 26 ಗುಂಟೆ ಕೃಷ್ಣಾರೆಡ್ಡಿ ಮತ್ತು 26 ಗುಂಟೆಗೆ ಹುಚ್ಚಮ್ಮ ಭೂಮಾಲೀಕರಾಗಿದ್ದರು. 2022ರ ಜ. 28ರಂದು ಹುಚ್ಚಮ್ಮ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸುಪ್ರೀಂ ಕೋರ್ಟ್ 26 ಗುಂಟೆ ಪ್ರದೇಶಕ್ಕೆ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲು ಆದೇಶ ನೀಡಿತ್ತು. ಆದರೆ, ನ್ಯಾಯಾಲಯ ಆದೇಶ ಉಲ್ಲಂಘಿಸಿ ಕಾಂಪೌಂಡ್ ನಿರ್ಮಿಸುತ್ತಿದ್ದರು. ಇದನ್ನು ತೆರವುಗೊಳಿಸಲಾಗಿದೆ ಎಂದು ಬಿಡಿಎ ಅಧಿಕಾರಿಗಳು ತಿಳಿಸಿದ್ದಾರೆ. ಕೃಷ್ಣಾರೆಡ್ಡಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಡುಡಿ ಪ್ರಕರಣದಲ್ಲಿ ಹೈಕೋರ್ಟ್, ಬಿಡಿಎ ವಿರುದ್ಧ ತೀರ್ಪು ನೀಡಿತ್ತು. ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲಾಗಿ, 2022ರ ಸೆ. 27ರಂದು ‘ಫಾರ್ ನಾನ್ ಪ್ರಾಸಿಕ್ಯೂಷನ್’ ಎಂದು ತೀರ್ಪನ್ನು ನೀಡಲಾಗಿದೆ. ನಂತರ ಬಿಡಿಎ ಅಧಿಕಾರಿಗಳು ಈ ಪ್ರದೇಶದಲ್ಲಿ ನಿರ್ಮಾಣ ಕಾಮಗಾರಿಯನ್ನು…

Read More

ರಾಜ್ಯದಲ್ಲಿ ವಿವಿಧೆಡೆ ಸ್ಥಳೀಯವಾಗಿ ಪ್ರಸಿದ್ಧವಾಗಿರುವ ಕ್ರೀಡೆಗಳನ್ನು ಗುರುತಿಸಿ ಅವುಗಳಲ್ಲಿ ತೊಡಗಿಸಿಕೊಂಡಿರುವ ಕ್ರೀಡಾಪಟುಗಳನ್ನು ಗುರುತಿಸಿ, ಸೂಕ್ತ ತರಬೇತಿ ನೀಡಿ ಸಶಕ್ತಗೊಳಿಸುವ ನಿಟ್ಟಿನಲ್ಲಿ “ಒಂದು ಜಿಲ್ಲೆ ಒಂದು ಕ್ರೀಡೆ” ಯೋಜನೆ ಜಾರಿಗೊಳಿಸಲು ಚಿಂತನೆ ನಡೆಸಲಾಗಿದ್ದು, ಶೀಘ್ರ ಜಾರಿಗೊಳಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಬಿ. ನಾಗೇಂದ್ರ ಅವರು ಹೇಳಿದರು. ವಿಧಾನಸೌಧದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಈ ವಿಷಯ ತಿಳಿಸಿದರು. ಒಂದೊಂದು ಪ್ರದೇಶದಲ್ಲಿ ಒಂದೊಂದು ಕ್ರೀಡೆಗಳು ಹೆಸರುವಾಸಿ. ವಿಜಯನಗರದಲ್ಲಿ ಕುಸ್ತಿ, ವಿಜಯಪುರದಲ್ಲಿ ಸೈಕ್ಲಿಂಗ್ ನಂತೆ ಎಲ್ಲ ಜಿಲ್ಲೆಗಳಲ್ಲಿಯೂ ಒಂದೊಂದು ಕ್ರೀಡೆಗಳು ಹೆಸರುವಾಸಿಯಾಗಿದ್ದು, ಆ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿರುವ ಪ್ರತಿಭಾವಂತ ಕ್ರೀಡಾಪಟುಗಳನ್ನು ಹೋಬಳಿಮಟ್ಟದಿಂದ ಜಿಲ್ಲಾಮಟ್ಟದವರೆಗೆ ಗುರುತಿಸಿ ಅವರಿಗೆ ಸೂಕ್ತ ತರಬೇತಿ ನೀಡಿ ಸನ್ನದ್ಧಗೊಳಿಸಲಾಗುವುದು ಎಂದು ಅವರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ನೀಡಲು ನಿರ್ಧರಿಸಲಾಗಿದೆ. ವಾರಕ್ಕೆ 2 ಮೊಟ್ಟೆ ಕೊಡುವ ಬಗ್ಗೆ ಮುಖ್ಯಮಂತ್ರಿಗೆ ಮನವಿ ಮಾಡಿಕೊಂಡಿದ್ದೆ. ಸಿಎಂ ಒಪ್ಪಿಗೆ ನೀಡಿ ವಾರಕ್ಕೆ 2 ಮೊಟ್ಟೆ ನೀಡಲು ಅನುಮೋದಿಸಿದ್ದಾರೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: “ಬಿಜೆಪಿಯವರಿಗೆ ಮೊದಲಿನಿಂದಲೂ ಅಧಿಕಾರಿಗಳ ವರ್ಗಾವಣೆ, ಸರ್ಕಾರಿ ಹುದ್ದೆಗಳ ಮಾರಾಟ ಮಾಡಿಕೊಂಡು ಅಭ್ಯಾಸವಿದೆ. ಇದನ್ನು ಸ್ವತಃ ಯತ್ನಾಳ್ ಅವರೇ ಹೇಳಿದ್ದಾರೆ. ಆದರೆ ಅವರು ನಮ್ಮ ಬಗ್ಗೆ ಮಾತನಾಡುವಾಗ ನಾಲಿಗೆ ಮೇಲೆ ನಿಯಂತ್ರಣ ಇಟ್ಟುಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆ ಕಲಾಪದ ಶೂನ್ಯ ವೇಳೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಅಧಿಕಾರಿಗಳ ವರ್ಗಾವಣೆಯಲ್ಲಿ ವ್ಯವಹಾರ ಮಾಡಿಕೊಂಡಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಯತ್ನಾಳ್ ಹಾಗೂ ಸಚಿವ ಭೈರತಿ ಸುರೇಶ್ ಮಧ್ಯೆ ಮಾತಿನ ಚಕಮಕಿ ಏರ್ಪಟ್ಟಿತು. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಯತ್ನಾಳ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು ಹೀಗೆ: “ಬಿಜೆಪಿಯವರಿಗೆ ಮೊದಲಿನಿಂದಲೂ ಈ ರೀತಿ ವ್ಯವಹಾರ ಮಾಡಿಕೊಂಡು ಬಂದಿರುವ ಅಭ್ಯಾಸ ಇದೆ. ಮುಖ್ಯಮಂತ್ರಿ ಹುದ್ದೆಯನ್ನು ₹2500 ಕೋಟಿ, ಮಂತ್ರಿ ಹುದ್ದೆಯನ್ನು ₹100 ಕೋಟಿಗೆ ಮಾರಾಟ ಮಾಡಲಾಗಿದೆ ಎಂದು ಯತ್ನಾಳ್ ಅವರೇ ಆರೋಪಿಸಿದ್ದಾರೆ” ಎಂದರು. ಆಗ ಯತ್ನಾಳ್ ಅವರು ಮಧ್ಯ ಪ್ರವೇಶ ಮಾಡಲು…

Read More

ಬೆಂಗಳೂರು: ಇಂದಿರಾ ಕ್ಯಾಂಟಿನ್ನ ಅಭಿವೃದ್ಧಿಗಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ ನಲ್ಲಿ 100 ಕೋಟಿ ಬಿಡುಗಡೆ ಮಾಡಿದ್ದಾರೆ. ಆದ್ರೆ ಇಲ್ಲಿ ಊಟ, ತಿಂಡಿಗೆ ಹೆಚ್ಚಿನ ಹಣ ಪಡೆಯಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ ಸರಿಪಡಿಸಲು ಬಿಬಿಎಂಪಿ ಮುಂದಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರ ಭೇಟಿ ವೇಳೆ ಇಂದಿರಾ ಕ್ಯಾಂಟೀನ್ ನಲ್ಲಿ ಹಚ್ಚಿನ ಹಣ ಪಡೆಯುತ್ತಿರುವ ಪ್ರಕರಣ ಬೆಳಕಿಗೆ ಬಂದಿತ್ತು. ಈ ಹಿನ್ನಲೆ ಈಗ ಪ್ರತಿ ಇಂದಿರಾ ಕ್ಯಾಂಟೀನ್ಗೆ ಪಾಲಿಕೆ ಅಧಿಕಾರಿ ನೇಮಕ ಮಾಡಲು ಬಿಬಿಎಂಪಿ ತೀರ್ಮಾನಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಜೈನ ಮುನಿಗಳ ಕೊಲೆ ಸೇರಿದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ನಾಳೆ ಮನವಿ ಸಲ್ಲಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೈನ ಮುನಿಗಳನ್ನು ಅಮಾನವೀಯ ರೀತಿಯಲ್ಲಿ ‌ಕೊಲೆ ಮಾಡಿದ್ದು, ಇಷ್ಡೆಲ್ಲ ನಡೆದರೂ ಕೂಡ ರಾಜ್ಯ ಸರ್ಕಾರ ಹಗುರವಾಗಿ ತೆಗೆದುಕೊಂಡಿದ್ದಾರೆ. ಸಾರ್ವಜನಿಕರ ವಲಯದಲ್ಲಿ ಈ ಪ್ರಕರಣ ಸಿಬಿಐಗೆ ಕೊಡಬೇಕೆಂಬ ಆಗ್ರಹ ಇದೆ‌. ನಾವು ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಅಗ್ರಹಿಸಿದ್ದೇವೆ ಎಂದರು. ಟಿ ನರಸೀಪುರದಲ್ಲಿಯೂ ಹಿಂದು ಕಾರ್ಯಕರ್ತನ ಹತ್ಯೆಯಾಗಿದೆ. ಸಕಲೇಶಪುರದಲ್ಲೂ ಹತ್ಯೆಯಾಗಿದೆ. ಕಲಬುರ್ಗಿಯಲ್ಲಿ ಹೆಡ್ ಕಾನ್ ಸ್ಟೇಬಲ್ ಅಕ್ರಮ ಮರಳು ದಂಧೆ ಮಾಡುವುದನ್ನು ತಡೆಯಲು ತೆರಳಿದವನ ಕೊಲೆ ಮಾಡುತ್ತಾರೆ. ಹಪ್ತಾ ವಸೂಲಿಗೆ ಹಿರಿಯ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ. ಈ ಸರ್ಕಾರದಲ್ಲಿ ಸಮಾಜ ಘಾತುಕರಿಗೆ ಯಾರೂ ಏನೂ ಮಾಡಲು ಆಗುವುದಿಲ್ಲ ಎಂಬ ಧೈರ್ಯ ಬಂದಿದೆ. ಈ ಸರ್ಕಾರ…

Read More

ಬೆಂಗಳೂರು: ವಿಶ್ವಕರ್ಮ ಸಮಾಜದವರಿಗೆ ಸಹ   ದೇವಸ್ಥಾನಗಳ ಆಡಳಿತ ‌ಮಂಡಳಿಯಲ್ಲಿ  ಅವಕಾಶ ಕಲ್ಪಿಸಲು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿಗಳ ಅಧಿನಿಯಮ‌ 1997ಕ್ಕೆ ತಿದ್ದುಪಡಿ ಮಾಡಲಾಗುವುದೆಂದು  ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ  ಅವರು ವಿಶ್ವಕರ್ಮ  ಸಮುದಾಯದವರಿಗೆ ದೇವಸ್ಥಾನದ ಆಡಳಿತ ಮಂಡಳಿಯಲ್ಲಿ ಆವಕಾಶ ಮಾಡಕೊಡುವ ಕುರಿತ ಗಮನ ಸೆಳೆಯುವ  ಉತ್ತರಿಸಿದ ಸಾರಿಗೆ ಸಚಿವರು,  ಅಧಿನಿಯಮದಲ್ಲಿ‌ ಸಾಮಾನ್ಯ ವರ್ಗಕ್ಕೆ ಸೇರಿದ ನಾಲ್ಕು ಸದಸ್ಯರನ್ನು ಆಡಳಿತ ಮಂಡಳಿಯಲ್ಲಿ ಸೇರಿಸಿಕೊಳ್ಳಲು ಅವಕಾಶವಿದ್ದು, ಅದರಲ್ಲಿ ವಿಶ್ವಕರ್ಮ ಸಮುದಾಯದವರನ್ನೂ ಪರಿಗಣಿಸಲಾಗುವುದೆಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More