Author: admin

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಅನ್ನು ‘ನಾನೊಬ್ಬನೇ’ ಅಧಿಕಾರಕ್ಕೆ ತಂದಿದ್ದೇನೆ ಎಂದು ನಾನು ಎಂದಿಗೂ ಹೇಳಿಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಡಿ.ಕೆ.ಶಿವಕುಮಾರ್ ಮಾತ್ರ ಪಕ್ಷವನ್ನು ಅಧಿಕಾರಕ್ಕೆ ತಂದಿಲ್ಲ ಎಂಬ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಶನಿವಾರ ಪ್ರತಿಕ್ರಿಯಿಸಿದ ಅವರು,  ರಾಜ್ಯದಲ್ಲಿ ಪಕ್ಷವನ್ನು  ಏಕಾಂಗಿಯಾಗಿ ಅಧಿಕಾರಕ್ಕೆ ತಂದಿದ್ದೇನೆ ಎಂದು ನಾನೆಂದಿಗೂ ಹೇಳಿಕೊಂಡಿಲ್ಲ. ಭವಿಷ್ಯದಲ್ಲಿಯೂ ಹಾಗೆ ಹೇಳುವುದಿಲ್ಲ ಎಂದು ಅವರು ಹೇಳಿದರು. ಪಕ್ಷದ ಕಾರ್ಯಕರ್ತರು ಮತ್ತು ಜನರು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ’ ಎಂದ ಅವರು, ಪಕ್ಷದ ಕಾರ್ಯಕರ್ತರು, ನಾವು, ನೀವು (ಸತೀಶ್ ಜಾರಕಿಹೊಳಿ), ರಾಜ್ಯದ ಜನರು, ಪ್ರತಿಯೊಬ್ಬ ಗ್ರಾಮಸ್ಥರು ನಮ್ಮ ಗೆಲುವಿಗೆ ಹೋರಾಡಿದ್ದಾರೆ. ಶಿವಕುಮಾರ್ ಮಾತ್ರ ಪಕ್ಷವನ್ನು ಅಧಿಕಾರಕ್ಕೆ ತಂದಿರುವುದು ಎಂದು ನಾನು ಹೇಳುವುದಿಲ್ಲ’ ಎಂದು ಪುನರುಚ್ಚರಿಸಿದರು.

Read More

ರಾಜ್ಯದಲ್ಲಿ ವಿದ್ಯುತ್ ನ ಕೃತಕ ಅಭಾವವನ್ನು ಸರ್ಕಾರ ಸೃಷ್ಟಿಸಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ರಾಜ್ಯದಲ್ಲಿ ಬರ ಇರುವುದು ನಿಜ. ಅದರ ನಡುವೆಯೂ ಸಾಮರ್ಥ್ಯಕ್ಕೆ ತಕ್ಕಷ್ಟು ವಿದ್ಯುತ್ ಉತ್ಪಾದನೆ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ’ ಎಂದು ವಾಗ್ದಾಳಿ ನಡೆಸಿದರು. ವಿದ್ಯುತ್​​ ಕೊರತೆ ವಿಚಾರವಾಗಿ ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು,  ಸರ್ಕಾರದ ಹೇಳಿಕೆ ಪ್ರಕಾರವೇ ಕೊರತೆ ಇರುವುದು 3 ಕೋಟಿ ಯುನಿಟ್ ಅಷ್ಟೇ. ಕೃತಕ ಅಭಾವ ಸೃಷ್ಟಿ ಮಾಡಿರುವುದು ಸರ್ಕಾರ. ವಿದ್ಯುತ್ ಉತ್ಪಾದನೆ ಬಗ್ಗೆ ಗಮನವನ್ನೇ ಕೊಡಲಿಲ್ಲ ಎಂದು ಆರೋಪಿಸಿದ್ದಾರೆ. ನಾನು ಎರಡು ಬಾರಿ ಸಿಎಂ ಆಗಿದ್ದೆ , ನನ್ನ ಕಾಲದಲ್ಲಿ ಕೃತಕ ಅಭಾವ ಸೃಷ್ಟಿ ಮಾಡಿದ್ದೀವಾ? ದಾಖಲೆ ತೆಗೆಯಿರಿ ಎಂದು ಅವರು ಸವಾಲೆಸೆದರು. ನವರಾತ್ರಿಯ ಸಮಯದಲ್ಲಿ ನಾನು ಹೇಳುತ್ತಿದ್ದೇನೆ, ನನ್ನ ಕಾಲದಲ್ಲಿ ಯಾವುದೇ ಕೆಲಸಕ್ಕೆ ನಾನು ಪರ್ಸಂಟೇಜ್ ಫಿಕ್ಸ್ ಮಾಡಿರಲಿಲ್ಲ, ಮುಂದೆಯೂ…

Read More

ಬೆಂಗಳೂರು: ಸರ್ಕಾರ ನೀಡುವ ಪ್ರಶಸ್ತಿಗಳಿಗೆ ಅರ್ಜಿ ಹಾಕುವ ಪದ್ಧತಿ ನಿಲ್ಲಿಸಿ, ಪರಿಣಿತರ ಸಮಿತಿ ಮೂಲಕ ಆಯ್ಕೆ ಮಾಡುವ ವಿಧಾನದ ಬಗ್ಗೆ  ಚಿಂತನೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ನಗರದ ಗಾಂಧಿಭವನದಲ್ಲಿ ಶವಿವಾರ ನಡೆದ ಸಂಸ್ಕೃತಿ ಸಂಗಮ- 23  ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಪ್ರಶಸ್ತಿ ಆಯ್ಕೆಗೆ  ಹೊಸ ವ್ಯವಸ್ಥೆ ಜಾರಿಗೆ ತರಬೇಕಿದೆ. ಯಾವುದೇ ಪ್ರಶಸ್ತಿಯಾದರೂ ಅದಕ್ಕೆ ಗೌರವ ಇರಬೇಕು. ಯಾವುದೇ ಒತ್ತಡಕ್ಕೆ ಒಳಗಾಗಿ ಪ್ರಶಸ್ತಿ ನೀಡಬಾರದು. ರಾಜ್ಯೋತ್ಸವದಷ್ಟೇ ವರ್ಷದ ಸಂಖ್ಯೆಯ  ಪ್ರಶಸ್ತಿ ನೀಡುವ ಆಲೋಚನೆಯಿದೆ ಎಂದು ತಿಳಿಸಿದರು. ನಾವೀಗ ಒಂದು ಸಂಕಷ್ಟದಲ್ಲಿ ಸಿಕ್ಕಿಹಾಕಿಕೊಂಡಿದ್ದೇವೆ. ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆನ್ಲೈನ್ ಅರ್ಜಿ ಕರೆದಿದ್ದೆವು. ಸುಮಾರು ಎರಡೂವರೆ ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಜಾತಿ, ಜಿಲ್ಲಾವಾರು ಮತ್ತು ಎಲ್ಲಾ ಕ್ಷೇತ್ರಗಳಿಗೆ ಆದ್ಯತೆ ನೀಡಬೇಕು. ಎಲ್ಲವನ್ನು ಲೆಕ್ಕ ಹಾಕುವಾಗ, ಯಾರನ್ನು ಆಯ್ಕೆ ಮಾಡುವುದು, ಯಾರನ್ನು ಬಿಡುವುದು ಎನ್ನುವ ಸವಾಲು ನಮ್ಮ ಮುಂದಿದೆ ಎಂದರು.

Read More

ಬೆಂಗಳೂರು: ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸ್ ಸಿಬ್ಬಂದಿಯ ಗುಂಪು ವಿಮೆ ಮೊತ್ತವನ್ನು 20 ಲಕ್ಷ ರೂಪಾಯಿಗಳಿಂದ 50 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಶನಿವಾರ ಬೆಂಗಳೂರಿನ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಪೊಲೀಸ್ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಪೊಲೀಸ್ ವ್ಯವಸ್ಥೆಯು ರಾಜ್ಯ ಮತ್ತು ಸರ್ಕಾರದ ಘನತೆ ಹೆಚ್ಚಿಸುವ ಕೆಲಸ ಮಾಡುತ್ತದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆ ನಡುವೆ ನೇರ ಸಂಬಂಧವಿದೆ.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದ್ದಾಗ ಹೆಚ್ಚಿನ ಬಂಡವಾಳ ಹೂಡಿಕೆಯಾಗುತ್ತದೆ ಎಂದು ಹೇಳಿದರು. ಇದು ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸುತ್ತದೆ ಮತ್ತು ಅಭಿವೃದ್ಧಿಯನ್ನು ವೇಗಗೊಳಿಸುತ್ತದೆ. ಪರಿಣಾಮವಾಗಿ, ದೇಶದ ಜನರ ತಲಾ ಆದಾಯವೂ ಹೆಚ್ಚಾಗುತ್ತದೆ. ದೇಶದ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟುನಿಟ್ಟಾಗಿ ಕಾಪಾಡಬೇಕು ಎಂದು ಕರೆ ನೀಡಿದರು.

Read More

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಛೇರಿ: ದಸರಾ ಹಬ್ಬದ ಪ್ರಯುಕ್ತ ಇಂದು ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಆಯುಧ ಪೂಜಾ ಸಮಾರಂಭ . ಭಾನುವಾರ, ಸೋಮವಾರ ಹಾಗೂ ಮಂಗಳವಾರ ರಜಾ ದಿನ ಇರುವುದರಿಂದ ಇಂದೇ ಪೂಜೆ ಮಾಡಿದರು. ಕೇಂದ್ರ ಕಛೇರಿಯಲ್ಲಿ ಇರುವ ಸಾರ್ವಜನಿಕರ ಸಂಪರ್ಕ ಕಛೇರಿ, ಪ್ರಧಾನ ಅಭಯಂತರ, ಮುಖ್ಯ ಅಭಿಯಂತರ ಹಾಗೂ ಎಂ.ಪಿ.ಇ.ಡಿ. ಹಾಗೂ ನಗರ ಯೋಜನೆ, ಅರಣ್ಯ ಘಟಕ, ಕೌನ್ಸಿಲ್ ಕಾರ್ಯಾಲಯ, ಹಣಕಾಸು ವಿಭಾಗದಲ್ಲಿ ಪೂಜಾ ಸಮಾರಂಭ ಏರ್ಪಡಿಸಲಾಗಿತ್ತು. ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಪೂಜಾ ಸಮಾರಂಭ ನಡೆಯುತ್ತಿರುವ ಕಛೇರಿಗೆ ತೆರಳಿ, ತಾಯಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ,  ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ದಸರಾ ಹಬ್ಬದ ಶುಭಾಶಯ ಕೋರಿ, ಪೂಜೆ ಸಲ್ಲಿಸಿದರು. ನಾಡದೇವಿ ಚಾಮುಂಡೇಶ್ವರಿ ದೇವಿ ನವರಾತ್ರಿ ದಿನದಲ್ಲಿ 9ದಿನಗಳ ಕಾಲ ವಿವಿಧ ರೂಪದಲ್ಲಿ ದೇವಿಯ ದರ್ಶನ ನೀಡುವಳು. ದಸರಾ ಹಬ್ಬ ನಾಡಿನಲ್ಲೆಡೆ ಸಂಭ್ರಮವಿದೆ. ದಸರಾ ಪ್ರಯುಕ್ತ ಇಂದು ನಮ್ಮ ಅಧಿಕಾರಿ ಸಿಬ್ಬಂದಿಗಳು ಸಂಭ್ರಮದ್ಲಿ ಆಯುಧ ಪೂಜೆ ಮಾಡಿದ್ದಾರೆ ಬೆಂಗಳೂರುನಗರ…

Read More

ನಕಲಿ ವೋಟರ್ ಐಡಿ  ತಯಾರಿಸುತ್ತಿದ್ದ ಸಚಿವ ಭೈರತಿ ಸುರೇಶ್ ಆಪ್ತನನ್ನು ಸಿಸಿಬಿ  ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೈರತಿ ಸುರೇಶ್  ಆಪ್ತನಾದ ಮೌನೇಶ್ ಕುಮಾರ್‌ ನನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಈತನ ಜೊತೆಗೆ ಶಾಮೀಲಾಗಿದ್ದ ಭಗತ್ ಹಾಗೂ ರಾಘವೇಂದ್ರ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳು ಹಣ ಕೊಟ್ಟರೆ ನಕಲಿ ವೋಟರ್ ಐಡಿ, ಆಧಾರ್ ಕಾರ್ಡ್ ಹಾಗೂ ಡಿಎಲ್‍ನ್ನು ಮಾಡಿಕೊಡುತ್ತಿದ್ದರು ಎಂದು ಆರೋಪಿಸಲಾಗಿದೆ.

Read More

ಬಿಟ್ ಕಾಯಿನ್ ನೆಪದಲ್ಲಿ ಹಣ ಡಬಲ್ ಮಾಡುತ್ತೇವೆ ಎಂದು ಜನರಿಂದ ಲಕ್ಷಾಂತರ ರೂ. ಹಣ ಪಡೆದು ಮೋಸ ಮಾಡುತ್ತಿದ್ದ ಅಪ್ಪ-ಮಗನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ತಂದೆ ಸತೀಶ್, ಮಗ ಶ್ರೀಕಾಂತ್ ಬಂಧಿತ ಆರೋಪಿಗಳು. ಇನ್ನು ಸತೀಶ್, ಬೆಂಗಳೂರಿನ ಗಾಂಧಿಬಜಾರ್, ಅವೆನ್ಯೂ ರೋಡ್, ಬಳೆ ಪೇಟೆ ಹಾಗೂ ಬಸವನಗುಡಿ ಸೇರಿ ಒಟ್ಟು 4 ಕಡೆ ಇರುವ ಪಂಚ ಐಶ್ವರ್ಯ ಕೋ ಆಪರೇಟಿವ್ ಸೊಸೈಟಿ ಪಾಲುದಾರರಾಗಿದ್ದಾರೆ. ಸಾರ್ವಜನಿಕರಿಂದ ನಿಮ್ಮ ಹಣ ಡಬಲ್ ಮಾಡುತ್ತೀವಿ ಎಂದು ಹಣ ಪೀಕುತ್ತಿದ್ದವರು ಈಗ ಅಂದರ್ ಆಗಿದ್ದಾರೆ.

Read More

ಬೆಂಗಳೂರು:  ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಅನೇಕ ಬಾರಿ ಅಪಾಯ ಎದುರಿಸುತ್ತಾರೆ ಮತ್ತು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಅವರಿಗೆ ಸಹಾಯ ಮತ್ತು ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಹುತಾತ್ಮ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲು ತೀರ್ಮಾನಿಸಿ ಇಂದು ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಕಳೆದ ವರ್ಷದ ಸೆಪ್ಟೆಂಬರ್ ನಿಂದ ಈ ವರ್ಷದ ಆಗಸ್ಟ್ ವರೆಗೆ 16 ಜನ  ಹಾಗೂ ದೇಶದಲ್ಲಿ 180 ಜನ ರಕ್ಷಣಾ ಸಿಬ್ಬಂದಿ ಹುತ್ಮಾತರಾಗಿದ್ದು, ಅವರೆಲ್ಲರನ್ನು ಸ್ಮರಿಸಿ ನಮನ ಸಲ್ಲಿಸಲಾಗಿದೆ. ಹುತಾತ್ಮರಾದ ಪೊಲೀಸ್ ಸಿಬ್ಬಂದಿಗಳ ಕುಟುಂಬದವರಿಗೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡುತ್ತದೆ ಎಂದು ತಿಳಿಸಿದರು.

Read More

ಬೆಂಗಳೂರು: ನೂತನ 33 ಸಚಿವರಿಗಾಗಿ ಇನ್ನೋವಾ ಹೈಬ್ರೀಡ್ ಕಾರುಗಳನ್ನು ರಾಜ್ಯ ಸರ್ಕಾರ ಖರೀದಿಸಿದೆ. ಬರಗಾಲದ ಕಾರಣಕ್ಕೆ ಅನುತ್ಪಾದಕ ವೆಚ್ಚ ಕಡಿತ ಅಂತಿರುವ ಸರ್ಕಾರದಿಂದಲೇ ಕಾರು ಖರೀದಿಯಾಗಿರುವುದು ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ಬರೋಬ್ಬರಿ 9 ಕೋಟಿ 90 ಲಕ್ಷ ರೂ ವೆಚ್ಚದಲ್ಲಿ ಹೈಬ್ರೀಡ್ ಕಾರ್ ಖರೀದಿಸಲಾಗಿದೆ. ಆಗಸ್ಟ್ ತಿಂಗಳ 17 ರಂದೇ 33 ಕಾರು ಇನ್ನೋವಾ ಕಾರು ಖರೀದಿಗಾಗಿ ಹಣ ಬಿಡುಗಡೆ ಮಾಡಲಾಗಿತ್ತು. ದಸರಾ ಆರಂಭವಾಗ್ತಿದ್ದಂತೆ ಎಲ್ಲಾ ಸಚಿವರ ನಿವಾಸಕ್ಕೆ ಕಾರುಗಳು ಬಂದಿವೆ.

Read More

ರಾಯಚೂರು: ಲೋಕಸಭೆ ವೇಳೆ ಕಾಂಗ್ರೆಸ್ ಸರ್ಕಾರ ಬಿದ್ದುಹೋಗತ್ತೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು ‘ದೇಶದಲ್ಲೇ ಕಾಂಗ್ರೆಸ್ನವ್ರಿಗೆ ಅಧಿಕಾರ ಇರ್ಲಿಲ್ಲ, ರಾಜ್ಯದಲ್ಲಿ ಈಗ ಗ್ಯಾರಂಟಿ ಅದು, ಇದು ಮೋಸ ಮಾಡಿ ಹೇಳಿ ಅಧಿಕಾರಕ್ಕೆ ಬಂದಿದ್ದಾರೆ. ಈಗ ಡಿಕೆಶಿ ಕೇಸ್ ಬಂದಿದೆ. ಸತೀಶ್ ಜಾರಕಿಹೋಳಿ ಎಷ್ಟು ಜನರನ್ನ ಕರೆದೊಯ್ತಾರೊ ಗೊತ್ತಿಲ್ಲ. ಸರ್ಕಾರ ಬಿದ್ದೊಗತ್ತೆ ಅನ್ನೊದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.

Read More