Author: admin

ಚಿಕ್ಕಮಗಳೂರು: ವಿರೋಧದ ನಡುವೆ ಚಿಕ್ಕಮಗಳೂರಿನಲ್ಲಿ ಮಹಿಷ ದಸರಾ ಆಚರಣೆಗೆ ಸಿದ್ದತೆ ಮಾಡಲಾಗಿದೆ. ಹೌದು, ಜಿಲ್ಲೆಯಾದ್ಯಂತ ತೀವ್ರ ವಿರೋಧ, ನಿಷೇಧಾಜ್ಞೆ ನಡುವೆಯೇ ಮಹಿಷ ದಸರಾಕ್ಕೆ ಸಿದ್ದತೆ ಮಾಡಿಕೊಂಡಿದೆ. ಹನುಮಂತಪ್ಪ ಸರ್ಕಲ್ನಿಂದ ಪ್ರಮುಖ ರಸ್ತೆಗಳಲ್ಲಿ ಮಹಿಷ ಮೆರವಣಿಗೆ ಜೊತೆಗೆ ಆಝಾದ್ ಪಾರ್ಕ್ ಬಳಿ ಬಹಿರಂಗ ಸಮಾವೇಶಕ್ಕೆ ಸಿದ್ದತೆ ನಡೆದಿದೆ. ಮಹಿಷ ದಸರಾಕ್ಕೆ ಚಿಕ್ಕಮಗಳೂರು ಜಿಲ್ಲಾಡಳಿತ ಅನುಮತಿ ನಿರಾಕರಣೆ ಮಾಡಿತ್ತು. ಈ ಹಿನ್ನಲೆ ಅ.19 ರಿಂದ 24 ರ ವರೆಗೂ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Read More

ಬೆಂಗಳೂರು : ಮಲಬಾರ್ ಗ್ರೂಪ್ ವತಿಯಿಂದ ನಿರ್ಗತಿಕ ಮಹಿಳೆಯರಿಗಾಗಿ ನಿರ್ಮಿಸಲಾಗಿರುವ ‘ಅಜ್ಜಿ ಮನೆ’ ಯೋಜನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಶುಕ್ರವಾರ ಚಾಲನೆ ನೀಡಿದರು. ಕತ್ರಿಗುಪ್ಪೆಯಲ್ಲಿ ನಿರ್ಮಿಸಲಾಗಿರುವ ‘ಅಜ್ಜಿ ಮನೆ’ಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಸಂಸ್ಥೆಯ ಕಾರ್ಯ ನಿಜಕ್ಕೂ ಶ್ಲಾಘನೀಯ. ದೇಶ, ವಿದೇಶಗಳಲ್ಲಿ ಚಿನ್ನಾಭರಣ ಸಂಸ್ಥೆಗಳನ್ನು ಹೊಂದಿರುವ ಮಲಬಾರ್, ಇದೀಗ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಎಲ್ಲರಿಗೂ ಮಾದರಿಯಾಗಿದೆ. ನಿರ್ಗತಿಕ ಮಹಿಳೆಯರಿಗಾಗಿ ಮಲಬಾರ್ ಅತ್ಯುತ್ತಮ ಕೆಲಸ ನಿರ್ವಹಿಸುತ್ತಿದೆ. ಇದು ದೇವರ ಕೆಲಸ, ಸಿಎಸ್ ಆರ್ ಫಂಡ್ ಮೂಲಕ ವಿದ್ಯಾರ್ಥಿಗಳಿಗೂ ಸಂಸ್ಥೆ ಅನುಕೂಲ ಮಾಡುತ್ತಿದೆ ಎಂದು ಸಚಿವರು ತಿಳಿಸಿದರು. ಈ ವೇಳೆ ಮಲಬಾರ್ ಸಂಸ್ಥೆಯ ಚೇರ್ಮನ್ ಎಂ.ಪಿ.ಅಹಮದ್, ಎಂಡಿ ಅಶೆರ್, ಐಡ್ರೆಸ್.ವಿ, ಎ.ಕೆ.ಮೊಹಮದ್ ಮುಷ್ತಾಫ, ಕೆ.ಎಚ್.ಫಾರೂಕ್, ಫಿಲ್ಸೂರ್ ಬಾಬು ಉಪಸ್ಥಿತರಿದ್ದರು.

Read More

ತುಮಕೂರು:  ರಾಜ್ಯದಲ್ಲಿ ಬರದ ಛಾಯೆ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್,  ಈಗಾಗಲೇ ಕೇಂದ್ರ ಸರ್ಕಾರಕ್ಕೆ ವರದಿಯನ್ನ ಸಲ್ಲಿಸಿದ್ದೇವೆ. ಈಗ ಮತ್ತೊಂದು ವರದಿ ಲೇಟೆಸ್ಟ್ ರೆಡಿ ಮಾಡಿ, ಕೇಂದ್ರ ಸರ್ಕಾರಕ್ಕೆ ವರದಿಯನ್ನ ಸಲ್ಲಿಸಿದ್ದೇವೆ ಎಂದರು. 20 ರಿಂದ 25 ತಾಲೂಕುಗಳನ್ನ ಬಿಟ್ರೆ,  ಉಳಿದೆಲ್ಲಾ ತಾಲೂಕುಗಳನ್ನ ಬರಪೀಡಿತ ಪ್ರದೇಶ ಅಂತ ಈಗಾಗಲೇ ಘೋಷಣೆ ಆಗಿದೆ. ಈಗ ಬೇಸಿಗೆ ಕಾಲ ಆರಂಭವಾಗ್ತಿದೆ. ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನಲ್ಲಿ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಆ ಸಮಸ್ಯೆ ಎದುರಾಗದಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ನಮ್ಮ ಸರ್ಕಾರ, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ಕೊಟ್ಟಿದೆ. ಅದಕ್ಕೆ ಬೇಕಾದ ಸಹಕಾರಬೇಕು, ಹಣಬೇಕು ಅದನ್ನ ಈಗಾಗಲೇ ಜಿಲ್ಲಾಧಿಕಾರಿಗಳ ಪಿಡಿ ಅಕೌಂಟ್ ಗೆ ಹಣ ಇಡಲಾಗಿದೆ. ಅದು ಅವರವರ ಹಂತದಲ್ಲಿ ಪರಿಶೀಲನೆ ಮಾಡಿ ಹಣ ಬಿಡುಗಡೆ ಮಾಡಿಕೊಳ್ಳುವ ಅವಕಾಶ ಇದೆ ಎಂದರು. ಇದಕ್ಕೆ ಉದಾಹರಣೆಗೆ ನಮ್ಮ ತುಮಕೂರು ಜಿಲ್ಲೆಗೆ 19 ಕೋಟಿ ಇಡಲಾಗಿದೆ. ರಾಜ್ಯದಲ್ಲಿ ಸುಮಾರು 400, 500…

Read More

ಕೊರಟಗೆರೆ : ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ದಿನಾಂಕ 28 ರಂದು ನಡೆಯುವ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯನ್ನ ಏರ್ಪಡಿಸಲಾಗಿತ್ತು. ಸಭೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಗೈರು ಹಾಜರಿಯನ್ನ ಕಂಡು ಹೈರಾಣಾದ ಸಮುದಾಯದ ಮುಖಂಡರುಗಳು. ಕೊರಟಗೆರೆ ಪಟ್ಟಣದಲ್ಲಿ ಸುಮಾರು 10 ವರ್ಷಗಳಿಂದ ಹಳ್ಳ ಹಿಡಿದಿರುವ 1 ಕೋಟಿ ವೆಚ್ಚದ ವಾಲ್ಮೀಕಿ ಭವನ ನಿರ್ಮಾಣ ಕಾಮಗಾರಿಯು  2011-12 ನೇ ಸಾಲಿನಲ್ಲಿ ಅನುಮೋದನೆಗೊಂಡ ಒಂದು ಕೋಟಿ ಅನುದಾನದ ಕಾಮಗಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಳ್ಳ ಹಿಡಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಭೆಗೆ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಜರಾಗದೇ ಸಮುದಾಯವನ್ನು ಅವಮಾನಿಸುತ್ತಿದ್ದಾರೆ ಹಾಗೂ ಅಧಿಕಾರಿಗಳು ಸಭೆಗೆ ಹಾಜರಾಗದೆ ತಮ್ಮ ಅಧೀನದಲ್ಲಿರುವ ಸಿಬ್ಬಂದಿಗಳನ್ನು ಸಭೆಗೆ ಕಳಿಸುತ್ತಾರೆ ಎಂದು ಸಭೆಯನ್ನು ಮೊಟುಕುಗೊಳಿಸಿ ಹೊರ ನಡೆದ ಘಟನೆಯು ಸಹ ನಡೆಯಿತು. ಕೊರಟಗೆರೆ ವಿಧಾನಸಭಾ ಕ್ಷೇತ್ರವು ಮೀಸಲು ಕ್ಷೇತ್ರವಾಗಿದ್ದು, ಇಂತಹ ಮೀಸಲು ಕ್ಷೇತ್ರದಲ್ಲಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಸಮುದಾಯವನ್ನು ಗೃಹ ಸಚಿವರ ಕ್ಷೇತ್ರದಲ್ಲೇ ಕಡೆಗಣಿಸುತ್ತಿರುವ…

Read More

ತುರುವೇಕೆರೆ: ಕಾಂಗ್ರೆಸ್ ಪಕ್ಷದಲ್ಲಿ ಈಗಿರುವ ಕಾಂಗ್ರೆಸ್ ಎಸ್‌ ಸಿ– ಎಸ್ಟಿ ಕಾರ್ಯಕರ್ತರು ಮೊದಲು ನಮ್ಮ ಪಕ್ಷದಲ್ಲೇ ತಿಂದು ಉಂಡು ಹೋಗಿರೋದು ಅದನ್ನ ಮರೆತು ನಮ್ಮ ಹಾಲಿ ಶಾಸಕರ ಬಗ್ಗೆ ಹಗುರವಾಗಿ ಪತ್ರಿಕಾ ಹೇಳಿಕೆ ಕೊಟ್ಟಿದ್ದಾರೆ ಅದನ್ನು ನಾವು ಸಹ ಖಂಡಿಸುತ್ತೇವೆ ಎಂದು  ಜೆಡಿಎಸ್ ನ ದಲಿತ ಮುಖಂಡರಾದ ಬೀಚನಹಳ್ಳಿ ರಾಮಣ್ಣ ಅವರು ಕಿಡಿಕಾರಿದರು. ಇತ್ತೀಚೆಗೆ ತುರುವೇಕೆರೆ ಪಟ್ಟಣದ ಕಾಂಗ್ರೆಸ್ ಪಕ್ಷದ ಬೆಮೆಲ್ ಕಾಂತರಾಜು ಅವರ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಲಿ ಶಾಸಕ ಎಂ.ಟಿ.ಕೃಷ್ಣಪ್ಪ ವಿರುದ್ಧ ನಡೆಸಿದ ವಾಗ್ದಾಳಿಗೆ ಇಂದು ಪಟ್ಟಣದ ಪ್ರವಾಸಿ ಮಂದಿರ  ಪತ್ರಿಕಾಗೋಷ್ಠಿಯಲ್ಲಿ ರಾಮಣ್ಣ ತಿರುಗೇಟು ನೀಡಿದರು. ಮೊಟ್ಟಮೊದಲ ಬಾರಿಗೆ ಎಸ್ ಸಿ ಎಸ್ ಟಿ ಕಾಲೋನಿಗಳಿಗೆ ಸಿಮೆಂಟ್ ರಸ್ತೆ, ಅಂಬೇಡ್ಕರ್ ಭವನಗಳ ನಿರ್ಮಾಣ ಮಾಡಿದ್ದೇ ಇದೆ ಎಂ.ಟಿ.ಕೃಷ್ಣಪ್ಪನವರು ಶಾಸಕರಾಗಿದ್ದಾಗ  ಅದನ್ನ ನೆನಪಿಸಿಕೊಳ್ಳಬೇಕು ಎಂದು ಅವರು ಹೇಳಿದರು. ದಲಿತ ಮುಖಂಡರಾದ ಮುನಿಯೂರು ರಂಗಸ್ವಾಮಿ ಮಾತನಾಡಿ, ಬೆಮೆಲ್ ಕಾಂತರಾಜು ತುರುವೇಕೆರೆ ಕ್ಷೇತ್ರದಲ್ಲಿ 30,000 ಮತಗಳನ್ನು ಪಡೆದುಕೊಂಡು, ನಾನು ನೆಲಮಂಗಲವನ್ನು ಚಿನ್ನದ ಮಂಗಲ…

Read More

ತುರುವೇಕೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ಆದಿ ಜಾಂಬವ ಕ್ಷೇಮಾಭಿವೃದ್ಧಿ ಸೇವಾ ಸಮಿತಿ ಇವರ ವತಿಯಿಂದ ,ಪತ್ರಿಕಾಗೋಷ್ಠಿ ನಡೆಸಲಾಯಿತು, ಆದಿ ಜಾಂಬವ ಕ್ಷೇಮಾಭಿವೃದ್ಧಿ ಸೇವಾ ಸಮಿತಿ ಸಂಸ್ಥಾಪಕರಾದ ಮೂರ್ತಿ ಸಿ.ಎಸ್. ಮಾತನಾಡಿ, ತುರುವೇಕೆರೆ ತಾಲೂಕಿನಲ್ಲಿ ಇರುವ ಎಲ್ಲಾ ಸಮುದಾಯದ, ಎಲ್ಲಾ ಪ್ರಗತಿಪರ ಸಂಘಟನೆಗಳು ಒಗ್ಗೂಡಿ ಏಕತಾ, ಸಮಾನತೆ, ಮಾನವೀಯತೆ, ದೃಷ್ಟಿಯಿಂದ ಪಟ್ಟಣದಲ್ಲಿ ನವಂಬರ್ 26ರಂದು  ಅದ್ದೂರಿ ಭೀಮೋತ್ಸವ ಸೋದರತ್ವ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ,  ಇದರ ಹಿನ್ನೆಲೆಯಲ್ಲಿ ಇದೇ ತಿಂಗಳು 26 ನೇ ತಾರೀಕು ಪಟ್ಟಣದಿಂದ ಭೀಮಾ ಜ್ಯೋತಿ ಹೊತ್ತು, ಭೀಮರಥ ಸುಮಾರು 15 ದಿನಗಳ ಕಾಲ ತುರುವೇಕೆರೆ ತಾಲೂಕಿನ ಎಲ್ಲಾ ಗ್ರಾಮಗಳಿಗೂ ಸಂಚರಿಸಲಾಗುವುದು ಎಂದು ತಿಳಿಸಿದರು. ಮನುವಾದಿಗಳ ಕೈಗೆ ಆಡಳಿತ ಸಿಕ್ಕಿ ಸಂವಿಧಾನವು ಅಪಾಯದ ಅಂಚಿನಲ್ಲಿದೆ, ಈ ನಿಟ್ಟಿನಲ್ಲಿ ಯೋಚಿಸಿ, ಸಂವಿಧಾನವನ್ನು ರಕ್ಷಿಸಿಕೊಳ್ಳುವುದು ಪ್ರತಿಯೊಬ್ಬ ಶೋಷಿತ ಹಾಗೂ ಶೂದ್ರ ಭಾರತೀಯ ಪ್ರಜೆ ಕರ್ತವ್ಯವಾಗಿದೆ. ಹಾಗಾಗಿ ಪ್ರತಿಯೊಂದು ಹಳ್ಳಿಗೆ ಬರುವ ಭೀಮ ಜ್ಯೋತಿ ರಥದಲ್ಲಿರುವ ದೀಪಕ್ಕೆ ತಮ್ಮ ಮನೆಯ ಎಣ್ಣೆ ಬತ್ತಿಯನ್ನು ಹಾಕಿ ಅದು…

Read More

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಚಾಮರಾಜನಗರದಲ್ಲಿ ಕನ್ನಡಪರ ಹೋರಾಟಗಾರರು 37 ನೇ ದಿನದ ಪ್ರತಿಭಟನೆ ನಡೆಸಿದರು. ಚಾಮರಾಜೇಶ್ವರ ದೇಗುಲದಿಂದ ಭುವನೇಶ್ವರಿ ವೃತ್ತದ ತನಕ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಹಾರೆ, ಪಿಕಾಸಿ, ಎಲ್ಕೊಟ್ಟು, ಬಾಂಡ್ಲಿ ಹಿಡಿದು ಸರ್ಕಾರಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ರೈತ ಸಮುದಾಯದ ಸಂಕೇತಗಳನ್ನ ಹಿಡಿದು ಪ್ರತಿಭಟನೆ ನಡೆಸಿದ ಹೋರಾಟಗಾರರು; ಕೃಷಿ ಕಾಯಕಕ್ಕೆ ನೀರಿಲ್ಲ,ಗುದ್ದಲಿ, ಪಿಕಾಸಿ, ಸಲಿಕೆಗಳು ನಿಷ್ಪ್ರಯೋಜಕ ಆಗಿವೆ, ನಮ್ಮ ನೀರು ತಮಿಳುನಾಡಿಗೆ ಹರಿಯುತ್ತಿರುವುದರಿಂದ ರೈತರಿಗೆ ಕೆಲಸವಿಲ್ಲವಾಗಿದೆ ಎಂದು ಆಕ್ರೋಶ ಹೊರಹಾಕಿದರು‌. ಇದೇ ರೀತಿ ನೀರು ಹರಿಸುತ್ತಿದ್ದರೇ ಮುಂದಿನ ದಿನಗಳಲ್ಲಿ ರೈತರು ಗುಳೆ ಹೋಗಿ ಕೂಲಿ ಕೆಲಸ ಮಾಡಬೇಕಾಗುತ್ತದೆ, ರೈತರ ಹಿತವನ್ನು ರಾಜ್ಯ ಸರ್ಕಾರ ಬಲಿ ಕೊಡುತ್ತಿದೆ, ಕೇಂದ್ರ ಸರ್ಕಾರ ಮಾತನಾಡದೇ ಮೌನವಹಿಸಿ ನಾಟಕ ಆಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು‌. ರಾಷ್ಟ್ರೀಯ ಹೆದ್ದಾರಿಯನ್ನು ತಡೆದಿದ್ದರಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕಳೆದ 37 ದಿನಗಳಿಂದ ಚಾಮರಾಜನಗರದಲ್ಲಿ ನಿರಂತರವಾಗಿ…

Read More

ಬೆಂಗಳೂರು : ದ್ವಿಚಕ್ರ ವಾಹನಗಳು ಹಾಗೂ ಕಾರು ಕದ್ದು, ಅವುಗಳಲ್ಲಿ ಸುತ್ತಾಡಿ ಸುಲಿಗೆ ಮಾಡುತ್ತಿದ್ದ ಆರೋಪದಡಿ 6 ಜನರನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ಹಲವು ಕಡೆಗಳಲ್ಲಿ ವಾಹನ ಕಳವು ಹಾಗೂ ಸುಲಿಗೆ ಬಗ್ಗೆ ಪ್ರಕರಣಗಳು ದಾಖಲಾಗಿದ್ದವು. ಆರೋಪಿಗಳಾದ ಕೋಲಾರ ಜಿಲ್ಲೆಯ ನ್ಯಾಮತ್ ಉಲ್ಲಾ (22), ಗೋವಿಂದಪುರದ ಅಸ್ರಾನ್ ಅಹಮ್ಮದ್ (25), ಸೈಯದ್ ಅಬ್ದುಲ್ ಫರ್ಜಾನ್ (20), ಸೈಯದ್ ಸಫಿ (24), ಸೈಪ್ ಉಲ್ಲಾ ಖಾನ್ (23) ಸೇರಿ ಆರು ಮಂದಿಯನ್ನು ಸೆರೆ ಹಿಡಿಯಲಾಗಿದೆ’ ಎಂದು ಪೊಲೀಸರು ಹೇಳಿದರು.

Read More

ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಬ್ರ್ಯಾಂಡ್ ಸಿಎಂ, ಬ್ರ್ಯಾಂಡ್ ಡಿಸಿಎಂ ಹೇಗೆ ಮಾಡಬೇಕೆಂಬುದಕ್ಕೆ ಇವತ್ತು ರಾಜ್ಯದಲ್ಲಿ ನಡೆಯುತ್ತಿರುವ ಎಟಿಎಂ ಸರಕಾರದ ಆಡಳಿತವೇ ಒಂದು ಉದಾಹರಣೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡ ಅವರು ವಿಶ್ಲೇಷಣೆ ಮಾಡಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ‘ಎಟಿಎಂ ಸರಕಾರದ ಕಲೆಕ್ಷನ್ ಟ್ರೀ’ ಸಂಬಂಧ ಪೋಸ್ಟರ್ ಬಿಡುಗಡೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಲೆಕ್ಷನ್ ಸರಕಾರವಿದೆ. ಅದನ್ನು ಸಾಮಾನ್ಯ ಜನರೂ ತಿಳಿದುಕೊಂಡು ಅದನ್ನು ಅನುಭವಿಸುವಂತಾಗಿದೆ. ಅಭಿವೃದ್ಧಿ ಇಲ್ಲದೆ, ರಸ್ತೆಯ ಹೊಂಡ ಗುಂಡಿಗಳನ್ನೂ ತುಂಬಿಸಲಾಗದ ದುಸ್ಥಿತಿ ರಾಜ್ಯದ್ದು ಎಂದು ಟೀಕಿಸಿದರು. ದೆಹಲಿ ಕಲೆಕ್ಷನ್ ಕೇಂದ್ರ ಬಿಂದು. ರಾಹುಲ್ ಗಾಂಧಿ ಇದರ ಪೂರ್ಣ ಜವಾಬ್ದಾರಿ ಹೊತ್ತಿದ್ದಾರೆ. ಕಲೆಕ್ಷನ್‍ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸಿಎಂ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂಗಿಂತ ಹೆಚ್ಚು ಕಲೆಕ್ಷನ್‍ಗೆ ಇಳಿದಿದ್ದಾರೆ. ಸಿಎಂ ಕುರ್ಚಿ ಎಳೆದುಕೊಳ್ಳಲು ಹೆಚ್ಚು ಹಣ ಸಂಗ್ರಹಕ್ಕೆ ಮುಂದಾಗಿದ್ದಾರೆ ಎಂದು…

Read More

ಬೆಂಗಳೂರು: ಪೂರ್ಣಿಮಾ ಮತ್ತು ಶ್ರೀನಿವಾಸ್ ಸಾಮಾಜಿಕ ನ್ಯಾಯದ ಪರವಾಗಿರುವವರು. ಒಲ್ಲದ ಮನಸ್ಸಿನಿಂದ ಬಿಜೆಪಿ ಯಲ್ಲಿದ್ದರು. ಈಗ ಕಾಂಗ್ರೆಸ್ ಗೆ ಬಂದಿದ್ದಾರೆ. ಇವರಿಗೆ ರಾಜಕೀಯವಾಗಿ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅಭಯ ನೀಡಿದರು. ಅತ್ಯಂತ ಹಿಂದುಳಿದ ವರ್ಗ ಗೊಲ್ಲ ಸಮುದಾಯದ ಹಿರಿಯ ಕಾಂಗ್ರೆಸ್ ಮುಖಂಡರಾದ ದಿವಂಗತ ಎ.ಕೃಷ್ಣಪ್ಪ ಅವರ ಪುತ್ರಿ ಪೂರ್ಣಿಮಾ ಕೃಷ್ಣಪ್ಪ ಮತ್ತು ಕೃಷ್ಣಪ್ಪ ಅವರ ಅಳಿಯ ಶ್ರೀನಿವಾಸ್, ಕೆ.ನರಸಿಂಹನಾಯಕ್ ಸೇರಿದಂತೆ 750 ಕ್ಕೂ ಹೆಚ್ಚು ಬಿಜೆಪಿಯ ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮಾತನಾಡಿದರು. ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳ ಪರವಾಗಿರುವ ಏಕೈಕ ರಾಷ್ಟ್ರೀಯ ಪಕ್ಷ ನಮ್ಮ ಕಾಂಗ್ರೆಸ್ . ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಧ್ವನಿಯಾಗಿ ಎ.ಕೃಷ್ಣಪ್ಪ, ಪೂರ್ಣಿಮಾ ಮತ್ತು ಶ್ರೀನಿವಾಸ್ ಮೊದಲಿನಿಂದಲೂ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಬಿಜೆಪಿ ಜಾತಿ ತಾರತಮ್ಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಎಲ್ಲಾ ಜಾತಿಯ ಬಡವರು ಮತ್ತು ಶೂದ್ರ ಸಮುದಾಯದವರು ಇದನ್ನು ಸರಿಯಾಗಿ…

Read More