Author: admin

ಕಿವಿ, ಮೂಗು ಮತ್ತು ಗಂಟಲು ವೈದ್ಯರ ಅಧಿಕೃತ ಶಾಖೆಯಾದ ಮಲ್ನಾಡ್ ಎಒಐ ವತಿಯಿಂದ ಕಿವಿ, ಮೂಗು ಮತ್ತು ಗಂಟಲು ಕ್ಷೇತ್ರದಲ್ಲಿ ಶೈಕ್ಷಣಿಕವಾಗಿ ಕೊಡುಗೆ ನೀಡುವ ಸಲುವಾಗಿ ರೂ. 15 ಲಕ್ಷ ವೆಚ್ಚದ ಟೆಂಪೊರಲ್ ಬೋನ್ ಡಿಸೆಕ್ಷನ್ ಯುನಿಟ್ ಮತ್ತು ಎಫ್‌ ಇಎಸ್ಎಸ್ ಕ್ಯಾಡವೆರಿಕ್ ಡೆಸೆಕ್ಷನ್ ಯುನಿಟ್‌ ಗಳನ್ನು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಇಎನ್‌ ಟಿ ವಿಭಾಗಕ್ಕೆ ಕೊಡುಗೆಯಾಗಿ ಇಂದು ನೀಡಲಾಯಿತು. ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ಡಾ. ವಿ. ವಿರೂಪಾಕ್ಷಪ್ಪನವರು ಮಲ್ನಾಡ್ ಎಒಐ ಶಾಖೆಯಿಂದ ಸ್ವೀಕರಿಸಲಾದ ಉಪಕರಣಗಳಿಗೆ ಚಾಲನೆ ನೀಡಿದರು. ಈ ವೇಳೆ ಡಾ. ಗಂಗಾಧರ್ ಮಾತನಾಡಿ, 2015 ರಲ್ಲಿ ಪ್ರಾರಂಭವಾದ ಮಲ್ನಾಡ್ ಎಒಐ ಶಾಖೆ ಲೈವ್ ಸರ್ಜರಿ ವರ್ಕ್ ಶಾಪ್, ಸಿಎಂಇ ಗಳು ಸೇರಿದಂತೆ ಅನೇಕ ಶೈಕ್ಷಣಿಕ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಈ ಉಪಕರಣಗಳು ಕಿವಿ ಮತ್ತು ಮೂಗಿನ ಶಸ್ತ್ರಚಿಕಿತ್ಸೆಗಳನ್ನು ಅಭ್ಯಸಿಸಲು ಅತ್ಯಂತ ಪ್ರಯೋಜನಕಾರಿಯಾಗಿದ್ದು, ಇಎನ್‌ ಟಿ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮತ್ತು ಕಿರಿಯ ಇಎನ್‌ ಟಿ…

Read More

ಬರ್ಬರವಾಗಿ ಹತ್ಯೆಯಾದ ಬೆಳಗಾವಿ ಜಿಲ್ಲೆಯ ಜೈನಮುನಿ ಕಾಮಕುಮಾರನಂದಿ ಮಹಾರಾಜ ಅವರ ಪಾರ್ಥಿವ ಶರೀರವನ್ನು ತುಂಡು ತುಂಡು ಮಾಡಿ ಕೊಳವೆ ಬಾವಿಗೆ ಎಸೆಯಲಾಗಿತ್ತು. ಈ ಹೃದಯ ವಿದ್ರಾವಕ ಘಟನೆಯ ಬಗ್ಗೆ ಸೂಕ್ತ ತನಿಖೆಯಾಗಬೇಕು ಹಾಗೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕೆಂದು ವಿಧಾನಮಂಡಲದ ಅಧಿವೇಶನದಲ್ಲಿ ಸಚಿವರಾದ ಎಚ್.ಕೆ ಪಾಟೀಲ್ ಅವರಿಗೆ ವಿಧಾನಪರಿಷತ್ ಶಾಸಕರಾದ ಡಾ. ಟಿ. ಎ. ಶರವಣ ಅವರು ಮನವಿ ಮಾಡಿದರು. ಗೌರವಯುತ ಸ್ಥಾನದಲ್ಲಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಪ್ರಕರಣದ ಬಗ್ಗೆ ನಿರ್ಲಕ್ಷ್ಯದ ಹೇಳಿಕೆ ನೀಡಿ ಪ್ರಕರಣದ ದಿಕ್ಕು ತಪ್ಪಿಸಬಾರದು, ಈ ರೀತಿಯ ಹೇಳಿಕೆಯಿಂದ ಕಾರ್ಯನಿರ್ವಹಿಸುತ್ತಿರುವ ಪೊಲೀಸರಿಗೆ ಕೈ ಕಟ್ಟಿದಂತಾಗುತ್ತದೆ ಎಂದು ತಿಳಿಸಿದರು. ಜೈನ ಮುನಿ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೆ ನಿಷ್ಪಕ್ಷಪಾತವಾದ ತನಿಖೆ ನಡೆದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಈ ವೇಳೆ ಬತ್ತಾಯಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ಯಲಹಂಕ ವಲಯ ಕೆಂಪೇಗೌಡ ವಾರ್ಡ್ ವ್ಯಾಪ್ತಿಯಲ್ಲಿ ಇಂದು ರೈತರ ಸಂತೆಯಿಂದ ಜಕ್ಕೂರು ಮುಖ್ಯ ರಸ್ತೆಯವರೆಗೆ ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವು ಕಾರ್ಯವನ್ನು ನಡೆಸಲಾಯಿತು. ವಲಯ ಜಂಟಿ ಆಯುಕ್ತರಾದ ಪೂರ್ಣಿಮಾ ರವರ ನೇತೃತ್ವದಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಪಾದಚಾರಿ ಮಾರ್ಗಗಳಲ್ಲಿ ಇಟ್ಟಿದ್ದ ಅಂಗಡಿ ಮುಂಗಟ್ಟುಗಳು, ಅನುಪಯುಕ್ತ ತಳ್ಳುವ ಗಾಡಿಗಳು, ಹಣ್ಣಿನ ಬಾಕ್ಸ್ ಗಳನ್ನು ತೆರವುಗೊಳಿಸಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಅನುವು ಮಾಡಲಾಗಿದೆ. ಮುಂದುವರಿದು, ಪಾದಾಚರಿ ಮಾರ್ಗಗಳಲ್ಲಿದ್ದ ಬ್ಯಾನರ್‌ ಗಳು, ಬಂಟಿಂಗ್ಸ್ ಗಳು, ಅಂಗಡಿ ಮುಂಭಾಗದಲ್ಲಿ ಬಿಟ್ಟಿರುವ ಶೀಟ್ ಗಳನ್ನು ತೆರವುಗೊಳಿಸಲಾಗಿದೆ. ಜೊತೆಗೆ ಪಾದಚಾರಿ ಮಾರ್ಗದಲ್ಲಿರುವ ಗಿಡ/ಮರಗಳ ರೆಂಬೆಗಳ ಕಟಾವು ಮಾಡಿ ಪಾದಚಾರಿಗಳ ಸುಗಮ ಓಡಾಟಕ್ಕೆ ಅನುವು ಮಾಡಲಾಗಿದೆ. ಒತ್ತುವರಿ ತೆರವು ಕಾರ್ಯಾಚರಣೆಯ ವೇಳೆ ಜೆ. ಸಿ. ಬಿ, ಗ್ಯಾಂಗ್ ಮ್ಯಾನ್‌ ಗಳನ್ನು ಬಳಸಿಕೊಂಡು ಸ್ವಚ್ಚತಾ ಕಾರ್ಯ ನಡೆಸಲಾಗಿದ್ದು, ಟ್ರ್ಯಾಕ್ಟರ್ ಹಾಗೂ ಕಾಂಪ್ಯಾಕ್ಟರ್ ನಲ್ಲಿ ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಪಾದಚಾರಿ ಮಾರ್ಗವನ್ನು ಒತ್ತವರಿ ಮಾಡಿಕೊಂಡು ವ್ಯಾಪಾರ ಮಾಡುತ್ತಿದ್ದವರಿಗೆ ಇನ್ನು ಮುಂದೆ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡದಂತೆ ಎಚ್ಚರಿಕೆ ನೀಡಬೇಕು. ಅಲ್ಲದೆ, ಇದೇ ರೀತಿ ಎಲ್ಲಾ ವಾರ್ಡ್ ಗಳಲ್ಲೂ ಪಾದಚಾರಿ ಮಾರ್ಗಗಳ ಒತ್ತುವರಿ ಸೇರಿದಂತೆ ಪಾದಚಾರಿ ಮಾರ್ಗಗಳಲ್ಲಿ ಸಂಪೂರ್ಣ ಸ್ವಚ್ಛತೆ ಕಾಪಾಡುವ ಜೊತೆಗೆ ಹಾಳಾಗಿರುವ ಫ್ಲ್ಯಾಬ್ ಗಳು ಹಾಗೂ ಕಿತ್ತು ಬಂದಿರುವ ಕರ್ಬ್ ಸ್ಟೋನ್ ಗಳನ್ನು ಕೂಡಲೇ ಸರಿಪಡಿಸಲು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಒತ್ತುವರಿ ತೆರವು ಕಾರ್ಯಾಚರಣೆ ಸ್ಥಳಕ್ಕೆ ಭೇಟಿ ನೀಡಿ ಅವರು ಪರಿಶೀಲಿಸಿದರು. ಈ ವೇಳೆ ಅಧೀಕ್ಷಕ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು, ಪೊಲೀಸ್ ಸಿಬ್ಬಂದಿ, ಪ್ರಹಾರಿ ವಾಹನ ಮತ್ತು ಸಿಬ್ಬಂದಿಗಳು, ಮಾರ್ಷಲ್‌ ಗಳು, ಪೌರಕಾರ್ಮಿಕಾರು ಪಾಲ್ಗೊಂಡಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಅಂತಾ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ತಿಳಿಸಿದರು. ವಿಧಾನ ಪರಿಷತ್ ಪ್ರಶೋತ್ತರ ಕಲಾಪದಲ್ಲಿ ಶಾಸಕ ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದರು. ಆಶಾ ಕಾರ್ಯಕರ್ತೆಯರ ಸಂಬಳ ಜಾಸ್ತಿ ಮಾಡಬೇಕು. ಅವರಿಗೂ ಪಿಂಚಣಿ ಕೊಡಬೇಕು. ಹೊಸ ಸ್ಮಾರ್ಟ್‌ಫೋನ್‌ಗಳನ್ನ ನೀಡಬೇಕು ಅಂತಾ ಆಗ್ರಹಿಸಿದರು. ಇದಕ್ಕೆ ಉತ್ತರ ನೀಡಿದ ಸಚಿವ ದಿನೇಶ್ ಗುಂಡೂರಾವ್, ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ರಾಜ್ಯ ಸರ್ಕಾರದಿಂದ ಈಗಾಗಲೇ 5 ಸಾವಿರ ಗೌರವ ಧನ ನೀಡಲಾಗ್ತಿದೆ. ಕೇಂದ್ರದಿಂದ 5-8 ಸಾವಿರ ಗೌರವ ಧನ ಸಿಗುತ್ತಿದೆ. ಒಟ್ಟಾರೆ 10-13 ಸಾವಿರ ಗೌರವ ಧನ ಸಿಗುತ್ತಿದೆ. ಸದ್ಯ ಅವರ ಗೌರವ ಧನ ಹೆಚ್ಚಳ ಸಾಧ್ಯವಿಲ್ಲ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌  ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾಗುತ್ತಾರಾ? ಎಂಬ ಚರ್ಚೆಗಳು ಆರಂಭವಾಗಿದೆ. ಇತ್ತೀಚೆಗೆ ಕುಮಾರಸ್ವಾಮಿ ಬಿಜೆಪಿ ಬಗ್ಗೆ ಬಹಳ ಸಾಫ್ಟ್ ಕಾರ್ನರ್ ಆಗಿ ಮಾತುಗಳನ್ನು ಆಡುತ್ತಿದ್ದು, ಲೋಕಸಭಾ ಚುನಾವಣೆಗೆ ನಮ್ಮ ಕುಟುಂಬದಿಂದ ಯಾರು ಸ್ಪರ್ಧೆ ಮಾಡುವುದಿಲ್ಲ ಎಂಬುದನ್ನು ಹೇಳುವ ಮೂಲಕ ಈ ವಿಚಾರಕ್ಕೆ ಪುಷ್ಟಿ ನೀಡುತ್ತಿದ್ದಾರೆ. ಇನ್ನು ಕೇಂದ್ರ ಸಚಿವರಾಗುವ ಮೂಲಕ ರಾಜ್ಯದಲ್ಲಿ ತಮ್ಮ ಪಕ್ಷವನ್ನು ಸದೃಢಗೊಳಿಸಿಕೊಳ್ಳಬಹುದು. ತಮ್ಮ ಪುತ್ರನಿಗೂ ರಾಜಕೀಯ ನೆಲೆ ಕಲ್ಪಿಸಬಹುದು. ಜೊತೆಗೆ ಮುಂದಿನ 5 ವರ್ಷಗಳ ಕಾಲ ಆ್ಯಕ್ಟಿವ್ ರಾಜಕಾರಣದಲ್ಲಿ ಗುರುತಿಸಿಕೊಳ್ಳಬಹುದು ಎಂಬ ಕಾರಣವನ್ನು ಮುಂದಿಟ್ಟುಕೊಂಡು ಕೇಂದ್ರ ಸಚಿವರಾಗುತ್ತಾರೆ ಎಂಬ ಚರ್ಚೆಗಳು ಆರಂಭವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯನಗರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕ್ಯಾಸಲ್ ರಾಕ್, ಕೊಲ್ಲೂರು, ಕಾರ್ಕಳ, ಕೋಟ, ಸಿದ್ದಾಪುರ, ಕುಮಟಾ, ಕಾರವಾರ, ಶಿರಾಲಿ, ಗೇರುಸೊಪ್ಪ, ಧರ್ಮಸ್ಥಳ, ಸುಬ್ರಹ್ಮಣ್ಯ, ಬೆಳ್ತಂಗಡಿ, ಕೊಟ್ಟಿಗೆಹಾರ, ಜಾನ್ಮನೆ, ಸಿದ್ದಾಪುರ, ಮಂಕಿ, ಹೊನ್ನಾವರ, ಗೋಕರ್ಣ, ಕುಂದಾಪುರ, ಅಕ್ಕಿಆಲೂರು, ಕಿರವತ್ತಿ, ಮುಲ್ಕಿ, ಮಾಣಿ, ಗುಬ್ಬಿ, ಕಮ್ಮರಡಿ, ಎನ್ಆರ್ಪುರ, ಜಯಪುರ, ಸಕಲೇಶಪುರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ಬಾಗಲಕೋಟೆ: ಜ್ಞಾನವು ಭಾಷೆಗಿಂತ ದೊಡ್ಡದಾಗಿದ್ದು ನಿರಂತರ ಅದ್ಯಯನದಿಂದ ಭಾಷಾ ಸಾಮರ್ಥ್ಯವನ್ನು ಅರಿತುಕೊಳ್ಳಲು ಸಾಧ್ಯ. ಓದುವ, ಗ್ರಹಿಸುವ ಮತ್ತು ಕಲ್ಪನಾ ಪ್ರವೃತ್ತಿ ಬೆಳಸಿಕೊಳ್ಳಲು ಬರವಣಿಗೆಯು ಉತ್ತಮ ಮಾದ್ಯಮ ಎಂದು ವಿಶ್ರಾಂತ ಪ್ರಾಚಾರ್ಯರಾದ ಡಾ. ವ್ಹಿ.ಎಸ್ ಕಟಗಿಹಳ್ಳಿಮಠ ಹೇಳಿದರು. ಬಿವಿವಿ ಸಂಘದ ಬಸವೇಶ್ವರ ಕಲಾ ಮಾಹಾವಿದ್ಯಾಲಯದಲ್ಲಿ ಕರ್ನಾಟಕ ಸಾಹಿತ್ಯ ಸಂಘ ಹಾಗೂ ಐಕ್ಯೂ ಎಸಿ ಘಟಕದ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಳ್ಳಲಾದ ಕನ್ನಡ ಬರವಣಿಗೆಯ ಕೌಶಲ್ಯ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟನಾ ಸಮಾರಂಭವನ್ನು ಕಪ್ಪೆ ಅರೆಭಟ್ಟನ ಶಾಸನದ ಮೊದಲ ಕನ್ನಡ ತ್ರಿಪದಿಯನ್ನು ಓದುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಾವಿರಾರು ವರ್ಷಗಳಿಂದ ಭಾಷೆಗಳು ಸರಳೀಕರಣವಾಗುತ್ತ ಸುಲಭ ಭಾಷೆಗಳಾಗಿ ಬಂದಿದ್ದು ಇದಕ್ಕೆ ಬರವಣಿಗೆಯು ಮೂಲವಾಗಿದೆ ಎಂದರು. ಎಲ್ಲರೂ ಮಾತಗಳನ್ನಾಡಬಹುದು ಆದರೆ ಮೆಚ್ಚುಗೆಯಾಗುವ ಬರವಣಿಗೆ ಬರೆಯಬೇಕಾದರೆ ಕೌಶಲ್ಯ ಮುಖ್ಯ. ಬರವಣಿಗೆಗೂ ತನ್ನದೆಯಾದ ಭಾಷೆಯಿದೆ. ಹಿರಿಯ ದರ್ಜೆಯ ಸ್ಪರ್ಧಾತ್ಮಕ ಪರೀಕ್ಷೆಗಳು ಪರಿಣಾಮಕಾರಿ ಬರವಣಿಗೆಯನ್ನು ನಿರೀಕ್ಷಿಸುವುದರಿಂದ ಪರೀಕ್ಷೆಗಳನ್ನು ಎದುರಿಸುವ ಕ್ರಮ ಗೊತ್ತಿದ್ದರೆ ಐಎಸ್, ಕೆಎಸ್ ಪರೀಕ್ಷೆಗಳನ್ನು ಎದುರಿಸುವುದು ಸುಲಭ ಎಂದರು. ಸಂಕ್ಷಿಪ್ತ ಬರವಣಿಗೆಯಲ್ಲಿ…

Read More

ಬಳ್ಳಾರಿ: ಕರ್ನಾಟಕ ಸರ್ಕಾರ ಗೃಹ ಜ್ಯೋತಿ ಯೋಜನೆ ಅಡಿ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್‌ ನೀಡಲು ನಿರ್ಧರಿಸಿದೆ. ಯೋಜನೆಗೆ ಈಗಾಗಲೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಆದರೆ ಇತ್ತ ಎಸ್ಕಾಂ ಗ್ರಾಹಕರಿಗೆ ವಿದ್ಯುತ್ ಬಿಲ್ ದರ ಏರಿಕೆ ಬಿಸಿ ತಟ್ಟಿದೆ. ಹೆಚ್ಚಿನ ವಿದ್ಯುತ್ ಬಿಲ್ ಬರುತ್ತಿದ್ದು ಗ್ರಾಹಕರು ಕಂಗಾಲ ಆಗಿದ್ದಾರೆ. ಜೆಸ್ಕಾಂ ಸಿಬ್ಬಂದಿ ಓರ್ವ ಗ್ರಾಹಕರಿಗೆ ನಾಲ್ಕು ಲಕ್ಷಕ್ಕೂ ಅಧಿಕ ವಿದ್ಯುತ್ ಬಿಲ್ ನೀಡಿದ್ದಾರೆ. ಹೌದು ಬಳ್ಳಾರಿಯ ಇಂದಿರಾ ನಗರ ನಿವಾಸಿಯಾಗಿರುವ ಮಹೇಶ್ ಅವರ ಸಿಂಗಲ್ ಬೆಡ್‌ ರೂಮ್ ಮನೆಗೆ ಈ ತಿಂಗಳು 4,25,852 ರೂ. ಬಿಲ್ ಬಂದಿದೆ. ಇದನ್ನು ಕಂಡ ಗ್ರಾಹಕ ಮಹೇಶ್ ಹೌಹಾರಿದ್ದಾರೆ. ಈ ಬಗ್ಗೆ ಮಾತನಾಡಿದ ಮಹೇಶ್ ಶನಿವಾರ ಚೆಸ್ಕಾಂ ಸಿಬ್ಬಂದಿ ಮನಗೆ ಬಂದು ಬಿಲ್ ಕೊಟ್ಟು ಹೋಗಿದ್ದಾರೆ. ಪ್ರತಿ ತಿಂಗಳು ನಮ್ಮಮನೆಗೆ 1,700 ರೂ. ರೂ ಬರುತ್ತಿತ್ತು. ಆದರೆ ಈ ಬಾರಿ ಇಷ್ಟೊಂದು ಬಿಲ್ ಬಂದಿದೆ ಎಂದು ಗಾಬರಿಯಾಗಿದ್ದಾರೆ. ಇನ್ನು ಇಷ್ಟೊಂದು ವಿದ್ಯುತ್ ಬಿಲ್…

Read More

ಹುಬ್ಬಳ್ಳಿಯ ಆನಂದನಗರದ ಬ್ಯಾಹಟ್ಟಿ ಪ್ರದೇಶದಲ್ಲಿ ಪತ್ನಿ ತಲೆಗೆ ಕೊಡಲಿಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಮಂಜುಳಾ ಕೊಲೆಯಾದ ಮಹಿಳೆ. ಪತ್ನಿ ಕೊಂದು ಪತಿ ಭೀಮಪ್ಪ ಮುತ್ತಲಗಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಕೊಂದು ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ದಕ್ಷಿಣ ಉಪ ವಿಭಾಗದ ಎಸಿಪಿ ಆರ್.ಕೆ.ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More