Subscribe to Updates
Get the latest creative news from FooBar about art, design and business.
- ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದೆ: ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಕರೆ
- 175 ನೇರ ಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ: ತುಮಕೂರನ್ನು ದೇಶಕ್ಕೆ ಮಾದರಿ ನಗರವನ್ನಾಗಿಸೋಣ: ಡಿಸಿಎಂ ಡಾ.ಜಿ. ಪರಮೇಶ್ವರ
- ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ
- ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ
- ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ
- ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ
- ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ
- ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!
Author: admin
ಚಾಮರಾಜನಗರ: ಚಾಮರಾಜನಗರ ದಸರಾ ಈ ಬಾರಿ ಮಂಕಾಗಿದ್ದು ಜನರನ್ನು ಸೆಳೆಯಲು ವಿವಿಧ ಕಾರ್ಯಕ್ರಮಗಳು ಸೋತು ಹೋಗಿದ್ದು, ಹಲವು ಕಾರ್ಯಕ್ರಮಗಳಲ್ಲಿ ಆಯೋಜನೆ ಎಡವಟ್ಟಿನಿಂದ ಅವ್ಯವಸ್ಥೆ ಎದ್ದು ಕಾಣುತ್ತಿದೆ. ಹೌದು…,ಅಪಾರ ನಿರೀಕ್ಷೆ ಹೊತ್ತು ಸಂಭ್ರಮದಿಂದ ಕಳೆದ 17 ರಂದು ಚಾಮರಾಜನಗರ ದಸರಾಗೆ ಚಾಲನೆ ಕೊಡಲಾಗಿತ್ತು , ಇಂದು ಶುಕ್ರವಾರ ಕೊನೆ ದಿನವಾಗಿದ್ದು ಇಷ್ಟೂ ದಿನವೂ ಹಗಲಿನ ಕಾರ್ಯಕ್ರಮಗಳಿಗತ್ತ ಜನರು ಸುಳಿಯುತ್ತಿಲ್ಲ. ಪ್ರಧಾನ ವೇದಿಕೆ, ಡಾ.ರಾಜ್ ಕುಮಾರ್ ರಂಗ ಮಂದಿರ, ಮಹಿಳಾ ಉತ್ಪನ್ನ ಮಾರಾಟ ಮೇಳದತ್ತ ಅಂದುಕೊಂಡಷ್ಟರ ಮಟ್ಟಿಗೆ ಜನರ ಭೇಟಿ ಈ ಬಾರಿ ಇಲ್ಲಾ. 2013ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ಯಾಬಿನೆಟ್ ನಲ್ಲಿ ಮಂತ್ರಿಯಾಗಿದ್ದ ಹೆಚ್.ಎಸ್ ಮಹದೇವಪ್ರಸಾದ್ ದಶಕದ ಹಿಂದೆ ಚಾಮರಾಜನಗರದಲ್ಲೂ ದಸರಾ ಆಚರಣೆ ಮಾಡಲು ಪ್ರಾರಂಭಿಸಿದರು. ಅವರ ಕಾಲದಲ್ಲಿ ಸ್ಥಳೀಯ ಕಲಾವಿದರ ಜೊತೆಗೆ ರಾಷ್ಟ್ರ ಹಾಗು ರಾಜ್ಯ ಮಟ್ಟದಲ್ಲಿ ಖ್ಯಾತಿ ಗಳಿಸಿದ ಕಲಾವಿದರನ್ನು ಕರೆಸಿ ಅದ್ದೂರಿಯಾಗಿ ದಸರಾ ಆಚರಣೆ ಮಾಡುವ ಮೂಲಕ ಈ ಭಾಗದ ಜನರಿಗೂ ದಸರಾ ಸಂಭ್ರಮವನ್ನು ಕಣ್ತುಂಬಿಕೊಳ್ಳುವ ಅವಕಾಶ ಕಲ್ಪಿಸಿದರು.…
ಬೆಂಗಳೂರು:“ರಾಜಕೀಯ ಉದ್ದೇಶಕ್ಕಾಗಿಯೇ ಯಡಿಯೂರಪ್ಪ ಅವರು ನನ್ನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದೆ. ಬಿಜೆಪಿ ಪಕ್ಷದ ಶಾಸಕರ ವಿರುದ್ಧವೂ ಬೇಕಾದಷ್ಟು ಪ್ರಕರಣಗಳಿವೆ. ಬೇರೆಯವರದ್ದನ್ನು ತನಿಖೆಗೆ ನೀಡದೆ ನನ್ನದನ್ನು ಮಾತ್ರ ನೀಡಿದರು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಕುಮಾರಕೃಪ ಅತಿಥಿಗೃಹದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಈ ರೀತಿ ಉತ್ತರಿಸಿದರು. “ಅಡ್ವೋಕೇಟ್ ಜನರಲ್ ಅವರೇ ಈ ಪ್ರಕರಣದ ಸಿಬಿಐ ತನಿಖೆಗೆ ಅನುಮತಿ ನೀಡಲು ಬರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು. ಆದರೆ ಈ ವಿಚಾರವನ್ನು ಸ್ಪೀಕರ್ ಬಳಿಯೂ ತೆಗೆದುಕೊಂಡು ಹೋಗದೆ ಯಡಿಯೂರಪ್ಪ ಅವರು ಸೀದಾ ಸಿಬಿಐ ತನಿಖೆಗೆ ಅನುಮತಿ ನೀಡಿದರು. ಸಿಬಿಐ ಅವರು ಶೇ 90 ರಷ್ಟು ತನಿಖೆ ಮುಗಿದಿದೆ ಎಂದು ಹೇಳಿದ್ದಾರೆ. ನನ್ನ ಬಳಿ ಯಾವ ವಿಚಾರಣಾಧಿಕಾರಿಯೂ ಬಂದಿಲ್ಲ. ವಿವರವನ್ನೂ ಪಡೆದಿಲ್ಲ. ನೋಡೋಣ ಏನು ಮಾಡುತ್ತಾರೋ. ನಾನು ನನ್ನ ವಕೀಲರ ಬಳಿ ಚರ್ಚೆ ಮಾಡುತ್ತೇನೆ” ಎಂದರು. ವಿರೋಧ ಪಕ್ಷಗಳ ಟೀಕೆ ಬಗ್ಗೆ ಕೇಳಿದಾಗ, “ಹಾದಿ- ಬೀದಿಯಲ್ಲಿ ಹೋಗುವವರಿಗೆಲ್ಲಾ ಉತ್ತರ…
ಬೆಳಗಾವಿ: ಜಿಲ್ಲಾ ಪ್ರವಾಸಕ್ಕೆಂದು ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಲು ಜಿಲ್ಲೆಯ ಯಾವೊಬ್ಬ ಕಾಂಗ್ರೆಸ್ ಶಾಸಕನೂ ಆಗಮಿಸಿಲ್ಲ. ಈ ಬಗ್ಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಶಿವಕುಮಾರ್ ಅವರದ್ದು ಖಾಸಗಿ ಕಾರ್ಯಕ್ರಮವಾಗಿತ್ತು. ನಾನು ಜಿಲ್ಲೆಯಲ್ಲಿ ಇರುವುದಿಲ್ಲ ಎಂದು ಮೊದಲೇ ಹೇಳಿದ್ದೆ. ಬಹಳ ಮಂದಿ ಪ್ರವಾಸಕ್ಕೆ ಹೋಗಿದ್ದರು. ಜಿಲ್ಲಾಧ್ಯಕ್ಷರು ಕೂಡ ಪ್ರವಾಸ ಹೋಗಿದ್ದರು. ಹೀಗಾಗಿ ಅದಕ್ಕೆ ವಿಶೇಷ ಕಲ್ಪನೆ ಅರ್ಥ ಕೊಡುವ ಅಗತ್ಯವಿಲ್ಲ ಎಂದರು.
ಅರಣ್ಯ ಭೂಮಿಯನ್ನು ಪರಿವರ್ತನೆ ಮಾಡಿದ ಇಬ್ಬರು ಹಿರಿಯ ಕೆಎಎಸ್ ಅಧಿಕಾರಿಗಳ ವಿರುದ್ಧ ಇದೇ ಮೊದಲ ಬಾರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದಾರೆ. ಅಕ್ಟೋಬರ್ 17 ರಂದು ಸಹಾಯಕ ಕಮಿಷನರ್ (ಎಸಿ) ಎಂ. ಜಿ. ಶಿವಣ್ಣ ಮತ್ತು ತಹಶೀಲ್ದಾರ್ ಅಜಿತ್ ಕುಮಾರ್ ರೈ ವಿರುದ್ಧ ಅರಣ್ಯಾಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದಾರೆಂದು ತಿಳಿದುಬಂದಿದೆ. ಕೊತ್ತನೂರು ಗ್ರಾಮದಲ್ಲಿ 500 ಕೋಟಿ ಮೌಲ್ಯದ 17. 34 ಎಕರೆ ಅರಣ್ಯ ಭೂಮಿಯನ್ನು ಕಂದಾಯ ಭೂಮಿಯಾಗಿ ಮಾರ್ಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರಿನಲ್ಲಿ ಸಾರ್ವಜನಿಕರಿಗೆ ಬಿಎಂಟಿಸಿ ಸಿಹಿ ಸುದ್ದಿ ನೀಡಿದೆ. ಏಕದಿನ ವಿಶ್ವಕಪ್ ಅಂಗವಾಗಿ ಬೆಂಗಳೂರಿನಲ್ಲಿ ನಡೆಯುವ ಪಂದ್ಯಗಳನ್ನು ವೀಕ್ಷಣೆ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಕ್ರಿಕೆಟ್ ಪ್ರೇಮಿಗಳು ಆಗಮಿಸಲಿದ್ದಾರೆ. ಹೀಗಾಗಿ, ಅವರಿಗೆಲ್ಲ ಬಿಎಂಟಿ ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಿದೆ. ಇಂದು(ಅಕ್ಟೋಬರ್ 20), ಅ.26, ನವೆಂಬರ್ 4, ನ.9, ಮತ್ತು ನವೆಂಬರ 12ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಶ್ವಕಪ್ ಪಂದ್ಯಗಳು ನಡೆಯಲಿವೆ. ಈ ದಿನಗಳಂದು ಚಿನ್ನಸ್ವಾಮಿ ಕ್ರೀಡಾಂಗಣದಿಂದ ನಗರದ ವಿವಿಧ ಏರಿಯಾಗಳಿಗೆ ಹೆಚ್ಚುವರಿ ಬಸ್ ಗಳು ಓಡಾಡಲಿವೆ. ಏಕದಿನ ವಿಶ್ವಕಪ್ ನಲ್ಲಿ ಪಾಕಿಸ್ತಾನ ಹಾಗೂ ಅಸ್ಟ್ರೇಲಿಯಾ ನಡುವಿನ ಪಂದ್ಯ ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಹಿನ್ನೆಲೆ, ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಹಾಗೂ ಕೇಂದ್ರ ವಿಭಾಗ ಡಿಸಿಪಿ ಟಿ.ಹೆಚ್ ಶೇಖರ್ ನೇತೃತ್ವದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಹೌದು, ಶ್ವಾನದಳ ಮತ್ತು ಬಾಂಬ್ ಡಿಡೆಕ್ಟರ್‌ರಿಂದ ಭಧ್ರತಾ ಪರಿಶೀಲನೆ ನಡೆಸಲಾಗಿದೆ. ಕ್ರೀಡಾಂಗಣದಲ್ಲಿ ಒಟ್ಟು 623 ಜನ ಪೊಲೀಸರ ನಿಯೋಜನೆ…
ತಮಿಳುನಾಡು: ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿರುವ ಓಂ ಶಕ್ತಿ ದೇಗುಲದ ಪೀಠಾಧಿಪತಿ ಬಂಗಾರು ಅಡಿಗಳಾರ್ (82) ಅವರು ಸಂಜೆ ವಿಧಿವಶರಾಗಿದ್ದಾರೆ. ಅಡಿಗಳಾರ್ ಅವರನ್ನು ಭಕ್ತರು ‘ಓಂ ಶಕ್ತಿ ಅಮ್ಮ’ ಎಂದು ಕರೆಯುತ್ತಿದ್ದರು. ಎಲ್ಲ ದಿನಗಳಲ್ಲೂ ದೇವಸ್ಥಾನದಲ್ಲಿ ಮಹಿಳೆಯರಿಗೆ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿ ಅವರು ಕ್ರಾಂತಿ ಮಾಡಿದ್ದರು. ಅಡಿಗಳಾರ್ ಅವರ ಆಧ್ಯಾತ್ಮಿಕ ಸೇವೆಗೆ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಒಲಿದುಬಂದಿತ್ತು. ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ. ವರದಿ : ಆಂಟೋನಿ ಬೇಗೂರು
ಬೆಳಗಾವಿ: ಈ ವರ್ಷ ರಾಜ್ಯದಲ್ಲಿ ಮಳೆ ಅಭಾವ ಆಗಿದೆ ಎಂದು ಹೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್, ಒಂದು ದಿನ ಮಳೆ ಆಗದಿದ್ದರೆ ಸರ್ಕಾರಕ್ಕೆ 1 ಸಾವಿರ ಕೋಟಿ ರೂ. ನಷ್ಟವಾಗುತ್ತದೆ ವಿದ್ಯುತ್ ಉತ್ಪಾದನೆ ಹೆಚ್ಚಳಕ್ಕೆ ಸರ್ಕಾರ ಮುತುವರ್ಜಿ ವಹಿಸಿದೆ. ಸಚಿವ ಕೆ.ಜೆ.ಜಾರ್ಜ್ ಜೊತೆಗೆ ಪಾವಗಡಕ್ಕೆ ಹೋಗಿ ವಿವರಣೆ ನೀಡಿದ್ದೇವೆ. ಮೊದಲು ರೈತರಿಗೆ 6 ಗಂಟೆ ವಿದ್ಯುತ್ ವಿತರಣೆ ಮಾಡಲಾಗುತ್ತಿತ್ತು. ಸಿಎಂ ಜೊತೆ ಚರ್ಚಿಸಿ ನಮ್ಮ ಸರ್ಕಾರ 7 ಗಂಟೆ ವಿದ್ಯುತ್ ನೀಡುತ್ತಿತ್ತು. ಈಗ ರೈತರಿಗೆ ಸ್ವಲ್ಪ ಕಷ್ಟವಾಗುತ್ತಿದೆ. ನೀರು ಕಳ್ಳತನ ಆಗುತ್ತಿರುವುದಕ್ಕೆ ಸರ್ಕಾರಕ್ಕೆ ದೊಡ್ಡ ಭಾರ ಆಗುತ್ತಿದೆ. ಮೈಸೂರು ಭಾಗದ ಜನರನ್ನು ದೇವರೇ ಕಾಪಾಡಬೇಕು ಎಂದರು.
ಯೂಟ್ಯೂಬ್ ನಲ್ಲಿ ಲೈಕ್ಸ್ ಕೊಟ್ಟರೆ ಹಣ ಸಿಗುತ್ತದೆ ಎಂದು ನಂಬಿಸಿ ಸೈಬರ್ ಕ್ರಿಮಿನಲ್ ಗಳು ವ್ಯಕ್ತಿಯೊಬ್ಬನಿಂದ 77 ಲಕ್ಷ ರೂ. ಸುಲಿಗೆ ಮಾಡಿದ್ದಾರೆ. ಈ ಘಟನೆ ನಾಗುರದಲ್ಲಿ ನಡೆದಿದೆ. ಸರಿಕೊಂಡ ರಾಜು ಅವರ ನೆಚ್ಚಿನ ಯೂಟ್ಯೂಬ್ ಚಾನೆಲ್ ಗೆ ಲೈಕ್ ಕೊಟ್ಟು ಅದರ ಸ್ಟೀನ್‌ಶಾಟ್‌ಗಳನ್ನು ಕಳುಹಿಸುವಂತೆ ಕೇಳಲಾಗಿದೆ. ನಂತರ ಅವರೊಂದಿಗೆ ಬ್ಯಾಂಕ್ ಖಾತೆಯ ವಿವರಗಳನ್ನು ರಾಜು ಹಂಚಿಕೊಂಡಿದ್ದಾರೆ. ತಕ್ಷಣ ಸೈಬರ್ ಕ್ರಿಮಿನಲ್ ಗಳು ರಾಜು ಅವರ ಬ್ಯಾಂಕ್ ಖಾತೆಯಿಂದ 77 ಲಕ್ಷ ರೂ. ದೋಚಿದ್ದಾರೆ.
ಅಕ್ಟೋಬರ್ ತಿಂಗಳು ಕೊನೆಗೊಳ್ಳಲು ಇನ್ನು 11 ದಿನ ಮಾತ್ರ ಉಳಿದಿದೆ. ಆದರೆ, ಈ ಹನ್ನೊಂದು ದಿನಗಲ್ಲಿ ಐದು ದಿನಗಳ ಕಾಲ ಬ್ಯಾಂಕ್ ರಜೆ ಇರಲಿವೆ. ಆರು ದಿನ ಮಾತ್ರ ಬ್ಯಾಂಕ್ ಗಳು ಕಾರ್ಯ ನಿರ್ವಹಿಸಲಿವೆ. ಮಹಾನವಮಿ, ವಿಜಯ ದಶಮಿ, ಭಾನುವಾರ ಹಾಗೂ ನಾಲ್ಕನೇ ಶನಿವಾರ ರಜೆ ಇರಲಿವೆ. ಹೀಗಾಗಿ ಈ ತಿಂಗಳ ಒಳಗಾಗಿ ಮುಗಿಸಬೇಕಾದ ಬ್ಯಾಂಕ್ ಕೆಲಸಗಳಿದ್ದಲ್ಲಿ ಬೇಗನೆ ಮುಗಿಸಿಕೊಳ್ಳುವುದು ಒಳಿತು. ಬ್ಯಾಂಕ್ ಗಳು ಶಾಖೆಗಳನ್ನು ಮುಚ್ಚಿದ್ದರೂ ಆನೈನ್ ಮೂಲಕ ಬ್ಯಾಂಕಿಂಗ್ ವಹಿವಾಟು ನಡೆಸಬಹುದಾಗಿದೆ.
ಬಿಹಾರದ ಸಮಸ್ತಿಪುರದ ಮಂಜು ದೇವಿ (48) ಕಳೆದ 23 ವರ್ಷಗಳಿಂದ ಪೋಸ್ಟ್ ಮಾರ್ಟಂ ಕರ್ತವ್ಯದಲ್ಲಿ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಲ್ಲಿಯವರೆಗೆ ಅವರು 20 ಸಾವಿರಕ್ಕೂ ಹೆಚ್ಚು ಶವಪರೀಕ್ಷೆಗಳನ್ನು ಮಾಡಿದ್ದಾರೆ. ಮೃತರ ದೇಹದ ಭಾಗಗಳನ್ನು ಕತ್ತರಿಸಿ ವೈದ್ಯರು ಸೂಚಿಸಿದಂತೆ ಮತ್ತೆ ಮೃತದೇಹಗಳಿಗೆ ಹೊಲಿಗೆ ಹಾಕುವುದೇ ಇವರ ಕೆಲಸವಾಗಿದೆ.