Author: admin

ಬೆಳಗಾವಿ: ಜಿಲ್ಲಾ ಪ್ರವಾಸಕ್ಕೆಂದು ಆಗಮಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಸ್ವಾಗತಿಸಲು ಜಿಲ್ಲೆಯ ಯಾವೊಬ್ಬ ಕಾಂಗ್ರೆಸ್ ಶಾಸಕನೂ ಆಗಮಿಸಿಲ್ಲ. ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಶಿವಕುಮಾರ್ ಅವರದ್ದು ಖಾಸಗಿ ಕಾರ್ಯಕ್ರಮವಾಗಿತ್ತು. ನಾನು ಜಿಲ್ಲೆಯಲ್ಲಿ ಇರುವುದಿಲ್ಲ ಎಂದು ಮೊದಲೇ ಹೇಳಿದ್ದೆ ಎಂದು ಅವರು ತಿಳಿಸಿದ್ದಾರೆ. ಬಹಳ ಮಂದಿ ಪ್ರವಾಸಕ್ಕೆ ಹೋಗಿದ್ದರು. ಜಿಲ್ಲಾಧ್ಯಕ್ಷರು ಕೂಡ ಪ್ರವಾಸ ಹೋಗಿದ್ದರು. ಹೀಗಾಗಿ ಅದಕ್ಕೆ ವಿಶೇಷ ಕಲ್ಪನೆ ಅರ್ಥ ಕೊಡುವ ಅಗತ್ಯವಿಲ್ಲ ಎಂದು ಅವರು ಚರ್ಚೆಗೆ ತೆರೆ ಎಳೆದರು.

Read More

ಬೆಳಗಾವಿ: ಈ ವರ್ಷ ರಾಜ್ಯದಲ್ಲಿ ಮಳೆ ಅಭಾವ ಆಗಿದೆ ಎಂದು ಹೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್, ಒಂದು ದಿನ ಮಳೆ ಆಗದಿದ್ದರೆ ಸರ್ಕಾರಕ್ಕೆ 1 ಸಾವಿರ ಕೋಟಿ ರೂ. ನಷ್ಟವಾಗುತ್ತದೆ. ವಿದ್ಯುತ್ ಉತ್ಪಾದನೆ ಹೆಚ್ಚಳಕ್ಕೆ ಸರ್ಕಾರ ಮುತುವರ್ಜಿ ವಹಿಸಿದೆ ಎಂದು ತಿಳಿಸಿದರು. ಸಚಿವ ಕೆ.ಜೆ.ಜಾರ್ಜ್ ಜೊತೆಗೆ ಪಾವಗಡಕ್ಕೆ ಹೋಗಿ ವಿವರಣೆ ನೀಡಿದ್ದೇವೆ. ಮೊದಲು ರೈತರಿಗೆ 6 ಗಂಟೆ ವಿದ್ಯುತ್ ವಿತರಣೆ ‌ಮಾಡಲಾಗುತ್ತಿತ್ತು. ಸಿಎಂ ಜೊತೆ ಚರ್ಚಿಸಿ ನಮ್ಮ ಸರ್ಕಾರ 7 ಗಂಟೆ ವಿದ್ಯುತ್ ‌ನೀಡುತ್ತಿತ್ತು. ಈಗ ರೈತರಿಗೆ ಸ್ವಲ್ಪ ಕಷ್ಟವಾಗುತ್ತಿದೆ. ನೀರು ಕಳ್ಳತನ ‌ಆಗುತ್ತಿರುವುದಕ್ಕೆ ಸರ್ಕಾರಕ್ಕೆ ದೊಡ್ಡ ಭಾರ ಆಗುತ್ತಿದೆ. ಮೈಸೂರು ಭಾಗದ ಜನರನ್ನು ದೇವರೇ ಕಾಪಾಡಬೇಕು ಎಂದರು.

Read More

ಬೆಂಗಳೂರು:”ನಾನು ಮತ್ತು ನನ್ನ ದಾಖಲೆಗಳು ಎರಡೂ ಕ್ಲೀನ್ ಇವೆ. ಬಿಜೆಪಿಯ ಯಾವುದೇ ಕುತಂತ್ರಗಳು ಫಲ ನೀಡುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಅಕ್ರಮ ಆಸ್ತಿ ಗಳಿಕೆ ಪ್ರಕರಣಲ್ಲಿ ಸಿಬಿಐ ವಿಚಾರಣೆಗೆ ಹೈಕೋರ್ಟ್ ಹಸಿರು ನಿಶಾನೆ ನೀಡಿರುವ ಬಗ್ಗೆ ದೇವನಹಳ್ಳಿ ವಿಮಾನ ನಿಲ್ದಾಣ ಹಾಗೂ ಕೇರಳದ ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಗುರುವಾರ ಅವರು ಈ ರೀತಿ ಪ್ರತಿಕ್ರಿಯಿಸಿದರು; “ಬಿಜೆಪಿಯ ಕುತಂತ್ರದಿಂದ ಅಕ್ರಮ ಆಸ್ತಿ ಗಳಿಕೆಯ ಪ್ರಕರಣವನ್ನ ಬಲವಂತವಾಗಿ ನನ್ನ ಮೇಲೆ ಹಾಕಲಾಗಿದೆ. ಯಡಿಯೂರಪ್ಪ ಅವರ ಸರ್ಕಾರದಲ್ಲಿ ಇದ್ದ ಅಡ್ವೋಕೇಟ್ ಜನರಲ್ ಅವರೇ ‘ಇದು ಸಿಬಿಐ’ಗೆ ನೀಡುವಂತಹ ಪ್ರಕರಣವಲ್ಲ ಎಂದು ಅಭಿಪ್ರಾಯಪಟ್ಟಿದ್ದರು. ಆದರೂ ಕಾನೂನು ಬಾಹಿರವಾಗಿ ಸಿಬಿಐಗೆ ಪ್ರಕರಣ ವಹಿಸಿ, ನನ್ನ ಮೇಲೆ ದ್ವೇಷ ರಾಜಕಾರಣ ಮಾಡಲಾಗುತ್ತಿದೆ. ನಾವು ನ್ಯಾಯಾಲಯಕ್ಕೆ ಸಿಬಿಐ ದಾಖಲಿಸಿರುವ ಎಫ್‌ಐಆರ್ ಸರಿ ಇಲ್ಲ ಎಂದು ಮೇಲ್ಮನವಿ ಸಲ್ಲಿಸಿದ್ದೆವು'” ಎಂದರು. “ಶೇ.90 ರಷ್ಟು ತನಿಖೆ ನಡೆಸಿದ್ದೇವೆ ಎಂದು ಸಿಬಿಐ ನ್ಯಾಯಾಲಯದ ಮುಂದೆ ಹೇಳಿದೆ. ನಾನು, ನನ್ನ ಹೆಂಡತಿ ಹಾಗೂ…

Read More

ದಸರಾ ಹಬ್ಬದ ಪ್ರಯುಕ್ತ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಖ್ಯ ರಸ್ತೆಗಳಲ್ಲಿ ಅಲಂಕಾರಿಕ ವಿದ್ಯುತ್ ದೀಪಗಳನ್ನು ಆಳವಡಿಸಲಾಗಿದೆ. ಹಲವಾರು ಸ್ಥಳಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಂಘ ಸಂಸ್ಥೆಗಳು ತಮ್ಮ ಅನಧಿಕೃತ ಫ್ಲೆಕ್ಸ್ ಮತ್ತು ಬಾನರ್ ಗಳನ್ನು ಆಳವಡಿಸಿದ್ದು, ಫ್ಲೆಕ್ಸ್ ಮತ್ತು ಬ್ಯಾನರ್ ಗಳಿಗೆ ಅಲಂಕಾರಿಕ ದೀಪಗಳು ಆಳವಡಿಸಲು ಪಾಲಿಕೆಯಿಂದ ಆಳವಡಿಸಿರುವ ಕಂಬ ಮತ್ತು ವಿದ್ಯುತ್ ದೀಪಗಳ ಸಂಪರ್ಕದಿಂದ ಅತಿಕ್ರಮಣವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದು ಕಂಡುಬಂದಿದೆ. ಇಂತಹ ಅತಿಕ್ರಮಣ ಸಂಪರ್ಕಗಳಿಗೆ ಕಾನೂನು ಕ್ರಮ ಕೈಗೊಂಡು ದಂಡ ವಿಧಿಸಲಾಗುವುದು ಹಾಗೂ ಯಾವುದೇ ರೀತಿ ಅವಘಡಗಳು ಸಂಭವಿಸಿದರೆ ನೇರ ಹೊಣೆಗಾರನಾಗಿ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು: ರೇಸ್‍ಕೋರ್ಸ್ ರಸ್ತೆಯ ಖನಿಜ ಭವನದ 2ನೇ ಮಹಡಿಯಲ್ಲಿ ಇಂದು ಕರ್ನಾಟಕ ಸರ್ಕಾರದ 5ನೇ ರಾಜ್ಯ ಹಣಕಾಸು ಆಯೋಗದ ಕಾರ್ಯಾಲಯದ ಉದ್ಘಾಟನೆ ಮಾಡಲಾಯಿತು. ಸಮಾರಂಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಆಹಾರ ಮತ್ತು ನಾಗರೀಕ ಪೂರೈಕೆ ಸಚಿವರಾದ ಕೆ.ಹೆಚ್.ಮುನಿಯಪ್ಪ, ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ್ ಪಾಟೀಲ್, ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಮಾಜಿ ಲೋಕಸಭಾ ಸದಸ್ಯರಾದ ಸಿ.ನಾರಾಯಣಸ್ವಾಮಿ, ರಾಜ್ಯ 5ನೇ ಹಣಕಾಸು ಆಯೋಗದ ಸದಸ್ಯರಾದ ಮೊಹಮ್ಮದ್ ಸನಾವುಲ್ಲಾ, ರಾಜ್ಯ ಲೆಕ್ಕ ಪತ್ರ ಇಲಾಖೆ ನಿವೃತ್ತ ನಿಯಂತ್ರಕರು ಹಾಗೂ ಸದಸ್ಯರಾದ ಎಸ್.ಆರ್.ಪೋಂಡೆ, ರಾಜ್ಯ ಹಣಕಾಸು ಆಯೋಗದ ಕಾರ್ಯದರ್ಶಿಗಳಾದ ಉಜ್ವಲ್‍ಕುಮಾರ್ ಘೋಷ್ ಹಾಗೂ ಹಿರಿಯ ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ತಮ್ಮ ಕಛೇರಿಯ ಅಧಿಕಾರ ಸ್ವೀಕರಿಸಿದರು.

Read More

ಬೆಂಗಳೂರು : ಪ್ರವಾಹ, ಅಗ್ನಿ ದುರಂತ, ಕೋಮು ಗಲಭೆ ಹಾಗೂ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾಗುವ ಕುಟುಂಬಗಳಿಗೆ ನೇರವಾಗಲು ‘ಸಾಂತ್ವನ ‘ ಯೋಜನೆ ಆರಂಭಿಸಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ದಲ್ಲಿ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ನೂತನ ಯೋಜನೆಗೆ ಚಾಲನೆ ನೀಡಿ, ಪ್ರಕೃತಿ ವಿಕೋಪ ಹಾಗೂ ಕೋಮು ಗಲಭೆ ಯಲ್ಲಿ ಸಂತ್ರಸ್ತರಾಗಿ ಮನೆ ಹಾಗೂ ಅಂಗಡಿ ಕಳೆದುಕೊಳ್ಳುವ ಕುಟುಂಬ ಗಳಿಗೆ ಐದು ಲಕ್ಷ ರೂ. ವರೆಗೆ ಸಾಲ ನೀಡುವ ಯೋಜನೆ ಇದಾಗಿದೆ ಎಂದು ಹೇಳಿದರು. ಐದು ಲಕ್ಷ ರೂ. ಪೈಕಿ ಶೇ.50 ರಷ್ಟು ಅಂದರೆ 2.50 ಲಕ್ಷ ರೂ. ಸಾಲ, ಉಳಿದ 2.50 ಲಕ್ಷ ಸಬ್ಸಿಡಿ ದೊರೆಯಲಿದ್ದು ಸಾಲಕ್ಕೆ ಶೇ.3 ರಷ್ಟು ಬಡ್ಡಿ ವಿಧಿಸಲಾಗುವುದು. ಈ ಮೊತ್ತದಲ್ಲಿ ಸಂತ್ರಸ್ತ ಕುಟುಂಬಗಳು ವ್ಯಾಪಾರ ಅಥವಾ ಇತರೆ ಉದ್ಯೋಗದಲ್ಲಿ ತೊಡಗಬಹುದುಎಂದು ತಿಳಿಸಿದರು.

Read More

ಬೆಂಗಳೂರು: ನಗರದಲ್ಲಿ ಹುಕ್ಕಾ ಬಾರ್ ಹೆಸರಿನಲ್ಲಿ ಗಾಂಜಾ ಮಾರಾಟ ನಡೆಯುತ್ತಿದೆ. ಹದಿ ಹರೆಯದ ಯುವಕರಿಂದ ವಯಸ್ಸಾದವರೂ ಕೂಡ ಈ ಚಟಕ್ಕೆ ಬಲಿಯಾಗುತ್ತಿದ್ದು, ತಕ್ಷಣವೇ ಹುಕ್ಕಾ ಬಾರ್‌ಗಳನ್ನು ನಿಲ್ಲಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ವಕೀಲರಾದ ಲೋಹಿತ್ ಒತ್ತಾಯಿಸಿದರು. ನಗರದ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಇರುವ ಹುಕ್ಕಾಬಾರ್‌ಗಳನ್ನು ನಿಲ್ಲಿಸುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ ಒಂದು ತಿಂಗಳ ನಂತರ, ನಗರದ ಹುಕ್ಕಾಬಾರ್‌ವೊಂದರಲ್ಲಿ ಬೆಂಕಿ ದುರಂತ ಸಂಭವಿಸಿದೆ, ಸಚಿವರು ಬರಿ ಹೇಳಿಕೆ ನೀಡುತ್ತಿದ್ದಾರೆ, ಆದರೆ ಇವು ಆದೇಶಗಳಾಗಿ ಬದಲಾಗುತ್ತಿಲ್ಲ ಎಂದರು. ಗಾಂಜಾ ವಿಚಾರದಲ್ಲಿ ರಾಜ್ಯದಲ್ಲಿ ಪ್ರತಿ ದಿನ 100 ರಿಂದ 150 ಪ್ರಕರಣ ದಾಖಲಾಗುತ್ತಿವೆ. ಈ ಗಾಂಜಾ ಸೇವನೆಗೆ ಹುಕ್ಕಾ ಬಾರ್ ಸುರಕ್ಷಿತ ತಾಣಗಳಾಗಿವೆ. ಗಾಂಜಾ ಮಿಶ್ರಣ ಮಾಡಿ ಹುಕ್ಕಾ ಸೇವನೆ ಮಾಡಲಾಗುತ್ತಿದೆ. ಮಧ್ಯರಾತ್ರಿ 2-3 ಗಂಟೆವರೆಗೂ ಇವು ತೆರೆದಿರುತ್ತವೆ, ಇದಕ್ಕೆ ಪೊಲೀಸರು ಕೂಡ ಕೈಜೋಡಿಸಿದ್ದಾರೆ. ಇಂದು…

Read More

ಉಡುಪಿ: ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ವರ್ಷಗಳ ಹಿಂದೆ ನಡೆದ ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ 30 ವರ್ಷಗಳ ಕಠಿನ ಜೈಲು ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ನ್ಯಾಯಾಲಯವು ಬುಧವಾರ ಆದೇಶಿಸಿದೆ. ಬೈಂದೂರು ತಾಲೂಕಿನ‌ ಹೆರಂಜಾಲು ಗ್ರಾಮದ ಗಿರೀಶ್(24) ಶಿಕ್ಷೆಗೆ ಗುರಿಯಾದ ಆರೋಪಿ. 15 ವರ್ಷ ವಯಸ್ಸಿನ ನೊಂದ ಬಾಲಕಿ ತನ್ನ ಚಿಕ್ಕಮ್ಮನ ಮನೆಯಲ್ಲಿ ವಾಸಮಾಡಿಕೊಂಡಿದ್ದು, ತನ್ನ ತಾಯಿ ಮನೆಗೆ ಹೋಗಿ ಬರುತ್ತಿರುವ ವೇಳೆ ನೆರೆಮನೆಯ ಗಿರೀಶ್ ನೊಂದ ಬಾಲಕಿಯನ್ನು ಪರಿಚಯ ಮಾಡಿಕೊಂಡು ಪ್ರೀತಿಸುತ್ತೇನೆಂದು ತಿಳಿಸಿದ್ದನು. 2021ರ ಆಗಸ್ಟ್ ತಿಂಗಳಲ್ಲಿ ಬೈಕ್‌ನಲ್ಲಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋದ ಆತ, ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದನು. ಇದರ ಪರಿಣಾಮ ಆಕೆ ಗರ್ಭ ಧರಿಸಿದ್ದರು. ಆಕೆಯ ದೇಹದ ಬದಲಾವಣೆಯನ್ನು ಗಮನಿಸಿದ ಆಕೆಯ ಚಿಕ್ಕಮ್ಮ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷಿಸಿದಾಗ ಆಕೆ ಗರ್ಭಿಣಿಯಾಗಿರುವ ವಿಚಾರ ತಿಳಿದುಬಂತು.…

Read More

ಮಂಜುಸ್ವಾಮಿ ಎಂ.ಎನ್. ಕೊರಟಗೆರೆ. ಕೊರಟಗೆರೆ : ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಬುಕ್ಕಪಟ್ಟಣ ಗ್ರಾಮದಿಂದ ಸುಮಾರು ಅರ್ಧ ಮೈಲಿ ದೂರದಲ್ಲಿ ಕೊರಟಗೆರೆಗೆ ಮಾರ್ಗವಾಗಿದ್ದ ಪ್ಯಾಟೇದಾರಿಯ ಎಡ ಭಾಗದಲ್ಲಿ ಹತ್ತಿಮರದ ಬಳಿ ಜಯರಾಮಯ್ಯನವರ ಜಮೀನಿನಲ್ಲಿ ಶಿಲ್ಪ ನೆಡಲಾಗಿದೆ. ಬ್ರಿಟೀಷ್ ಸರ್ವೆ ದಾಖಲೆಯ ಪ್ರಕಾರ ಇದು ಹಿಂದೆ ದೇಗುಲವಾಗಿತ್ತು ಎಂದು ತಿಳಿದುಬರುತ್ತದೆ. ಆದರೆ ಇಂದು ದೇಗುಲ ಪಾಳು ಬಿದ್ದಿದ್ದು ಬಳಸಿದ್ದ ಕಲ್ಲುಕಂಬಗಳು, ತೊಲೆಗಳು ಮತ್ತು ಚಪ್ಪಡಿಗಳು ಅಲ್ಲೇ ಬಿದ್ದಿವೆ. ಶಿಲ್ಪವು ಸುಮಾರು ಮೂರು ಅಡಿ ಎತ್ತರ ಮತ್ತು ಐದು ಅಡಿ ಅಗಲದ ಕಲ್ಲಿನಿಂದ ಮಾಡಲ್ಪಟ್ಟಿದೆ.  ಮೇಲ್ಭಾಗದ ಇಕ್ಕೆಲದಲ್ಲಿ ಸೂರ್ಯಚಂದ್ರರ ಜೊತೆಗೆ ಎರಡು ರಂಧ್ರಗಳಿದ್ದು ವಿಜಯನಗರ ಕಾಲಘಟ್ಟ ಎಂದು ತಿಳಿಯಬಹುದು. ಶಿಲ್ಪದಲ್ಲಿ ವ್ಯಕ್ತಿಯೋರ್ವ ಅಶ್ವಾರೂಢನಾಗಿದ್ದು ಬಲಗೈನಲ್ಲಿ ಭರ್ಜಿಯನ್ನು ಎಡಗೈನಲ್ಲಿ ಕುದುರೆಯ ಲಗಾಮನ್ನು ಹಿಡಿದಿದ್ದಾನೆ. ನೀಳಮುಡಿಯಿದ್ದು ಕರ್ಣಕುಂಡಲ, ಕಂಠಿಹಾರ, ತೋಳ್ಬಂದಿ, ಕೈಕಡಗ, ಕಾಲೊಂದಿಗೆ ಮುಂತಾದ ಆಭರಣಗಳಿಂದ ಅಲಂಕೃತಗೊಳಿಸಲಾಗಿದೆ. ಕುದುರೆ ಸವಾರನ ಮುಂದೆ ನಾಟ್ಯ ಭಂಗಿಯ ನರ್ತಕಿಯ ಶಿಲ್ಪವಿದೆ. ಭರತನಾಟ್ಯ ಶೈಲಿಯ ವಸ್ತ್ರವನ್ನು ಧರಿಸಿದ್ದಾಳೆ. ಒಂದು ಕೈಯಲ್ಲಿ ಕನ್ನಡಿಯನ್ನು ಹಿಡಿದಿದ್ದು…

Read More

ಬೆಂಗಳೂರು : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ‌ ಇಲ್ಲ, ಜಿಲ್ಲೆಯಲ್ಲಿ ಪಕ್ಷದ ಎಲ್ಲಾ ಶಾಸಕರು ಒಗ್ಗಟ್ಟಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮದವರ ಪ್ರಶ್ನೆಗೆ ಗುರುವಾರ ಉತ್ತರಿಸಿದ ಸಚಿವರು, ನನಗೆ ಬಹಳ ಒಳ್ಳೆ ಖಾತೆ ಕೊಟ್ಟಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ವಹಿಸಿದ್ದಾರೆ. ಸತೀಶ ಜಾರಕಿಹೊಳಿ ಅವರು ಆರು ಬಾರಿ ಶಾಸಕರು, ನಾನು ಎರಡು ಬಾರಿ ಶಾಸಕಿಯಾಗಿ, ಮೊದಲ ಬಾರಿ ಸಚಿವೆ ಆಗಿರುವೆ, ಸತೀಶಣ್ಣ ಬಹಳ ಅನುಭವ ಇರುವವರು, ಅವರ ನೇತೃತ್ವದಲ್ಲಿ ನಾವೆಲ್ಲ ಒಂದಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಸಚಿವರು ತಿಳಿಸಿದರು. ಜಿಲ್ಲೆಗೆ ಯಾವುದೇ ಅಧಿಕಾರಿಯನ್ನು ಸತೀಶ್ ಜಾರಕಿಹೊಳಿ ಅವರು ಹಾಕಿದಾಗ ನಾನು ಎಸ್ ಎನ್ನುತ್ತೇನೆ. ನಾನು ಯಾವುದೇ ಅಧಿಕಾರಿ ಹಾಕಿದಾಗ ಅವರು ಎಸ್ ಎನ್ನುತ್ತಾರೆ. ಅದೇ ಕಾಂಪ್ರಮೈಸ್ ಅಷ್ಟೇ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರ…

Read More