Subscribe to Updates
Get the latest creative news from FooBar about art, design and business.
- ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
- ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ: ನಗನಗದು ದೋಚಿ ಪರಾರಿ
- ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
- ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
- ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
- ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
- ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
- ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Author: admin
ಬೆಂಗಳೂರಿನಲ್ಲಿ ತ್ಯಾಜ್ಯ ವಿಲೇವಾರಿ ಘಟಕಗಳು ಹಾಗೂ ಇಂದಿರಾ ಕ್ಯಾಂಟಿನ್ ಗಳ ಕಾರ್ಯವೈಖರಿ ಪರಿಶೀಲನೆಗೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭಾನುವಾರ ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿದರು. ಬಳಿಕ ಮಾತನಾಡಿದ ಅವರು, ಇಂದು ಅಧಿಕಾರಿಗಳಿಗೆ ಮಾಹಿತಿ ನೀಡದೇ ಇಂದಿರಾ ಕ್ಯಾಂಟೀನ್, ಘನತ್ಯಾಜ್ಯ ಸಂಸ್ಕರಣ ಘಟಕಗಳಿಗೆ ಭೇಟಿ ನೀಡಿದ್ದೇನೆ. ಇಂದಿರಾ ಕ್ಯಾಂಟೀನ್ ನಲ್ಲಿ ಕೆಲವು ವ್ಯವಸ್ಥೆಗಳನ್ನು ಗಮನಿಸಿದ್ದೇನೆ. ಜೊತೆಗೆ ಘನತ್ಯಾಜ್ಯ ಘಟಕಗಳಲ್ಲಿ ಪರಿಶೀಲನೆ ಮಾಡಿದ್ದು, ಅಲ್ಲಿನ ಕಾರ್ಯವೈಖರಿ ತೃಪ್ತಿದಾಯಕವಾಗಿಲ್ಲ. ಮೊದಲು ಸರ್ಕಾರದ ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದೇನೆ. ನಂತರ ಕಸ ವಿಲೇವಾರಿ ಸ್ಥಳಕ್ಕೆ ಭೇಟಿ ನೀಡುತ್ತೇನೆ. ಈ ಎಲ್ಲ ಸಂಸ್ಥೆಗಳ ಕಾರ್ಯ ವೈಖರಿ ಸರಿಯಾದ ರೀತಿಗೆ ತರುವ ಕೆಲಸವನ್ನು ಮೊದಲು ಮಾಡುತ್ತೇವೆ ಎಂದು ಹೇಳಿದರು. ಕಸದಿಂದ ಇಂಧನ ಉತ್ಪಾದನೆ ಮಾಡುವುದಾಗಿ ಹೇಳಿ ಜವಾಬ್ದಾರಿ ವಹಿಸಿಕೊಂಡವರು ಇಂಧನ ಉತ್ಪಾದನೆ ಮಾಡುತ್ತಿಲ್ಲ. ಈ ಘಟಕಗಳ ಕಾರ್ಯವೈಖರಿ ಬಗ್ಗೆ ಅಧಿಕಾರಿಗಳೂ ಪರಿಶೀಲನೆ ಮಾಡ್ತಿಲ್ಲ. ಬೆಂಗಳೂರು ನಗರ ಸ್ವಚ್ಛವಾಗಿಡಬೇಕು. ಆದ್ರೆ ರಸ್ತೆ ಮಧ್ಯದಲ್ಲಿ ಕಸದ ರಾಶಿ ಇರುವ…
ಕುಡಿದ ಜ್ಯೂಸ್ ಬೀಲ್ ಕೇಳಿದ್ದಕ್ಕೆ ಬೇಕರಿ ಮಾಲೀಕರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ನಿನ್ನೆ ರಾತ್ರಿ 11: 00 ಗಂಟೆಗೆ ನಗರದ ಕೆ ಪಿ ಅಗ್ರಹಾರದ ಬೇಕರಿಯಲ್ಲಿ ಪುಡಿ ರೌಡಿ ಅಟ್ಟಹಾಸ ಮೆರೆದಿದ್ದಾನೆ. ಸ್ವಾಮೀಗೌಡ ಎಂಬುವರಿಗೆ ಸೇರಿದ ಬೇಕರಿಯಲ್ಲಿ ಕುಡಿದ ಜ್ಯೂಸಿಗೆ ಬಿಲ್ಲು ಕೇಳಿದ್ದಕ್ಕೆ ಮಾಲೀಕರ ಮೇಲೆ ಹಲ್ಲೆಗೆ ಯತ್ನ ಮಾಡಿದ್ದಾನೆ. ಮಾಮೂಲಿಗಾಗಿ ಬೇಡಿಕೆ ಇಟ್ಟು ಬೆದರಿಕೆ ಹಾಕುತ್ತಿದ್ದರೆಂಬ ಆರೋಪ ಕೇಳಿಬಂದಿದ್ದು, ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬೇಕರಿಗೆ ಬರೋದು ಏನು ಬೇಕು ಅದೆ ತಿಂದು ಹಣ ಕೊಡದೆ ಹೋಗೋದೇ ಪುಡಿ ರೌಡಿಯ ಕೆಲಸವಾಗಿದ್ದು, ನಿನ್ನೆ ರಾತ್ರಿ ಕೂಡ ಬೇಕರಿಗೆ ಹೋಗಿದ್ದನು. ಈ ವೇಳೆ ಬೇಕರಿಯಲ್ಲಿ ಬೇಕಾದದ್ದನ್ನ ಆರ್ಡರ್ ಮಾಡಿ ತಿಂದಿದ್ದಾನೆ. ನಂತರ ಹಣ ಕೇಳಿದ ಬೇಕರಿ ಮಾಲೀಕರಿಗೆ ಡ್ರಾಗರ್ ತೋರಿಸಿ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ್ದಾನೆ. ಸದ್ಯ ಘಟನೆ ಸಂಬಂಧ ಕೆ. ಪಿ ಅಗ್ರಹಾರ ಠಾಣೆಗೆ ಬೇಕರಿ ಮಾಲೀಕ ದೂರು ನೀಡಿದ್ದಾರೆ. ಕೆ.…
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಜೈನ ಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಈ ಹತ್ಯೆಯ ಸಮಗ್ರ ತನಿಖೆ ನಡೆಸಬೇಕು. ಕೊಲೆಗಡುಕರನ್ನು ಶೀಘ್ರವೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ. ಮುನಿಗಳ ಹತ್ಯೆ ಮನಸ್ಸಿಗೆ ಅತ್ಯಂತ ಅಘಾತ ತಂದಿದೆ ಎಂದು ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಾಡಿನ ಸಾಧು ಸಂತರಿಗೆ ರಕ್ಷಣೆ ಒದಗಿಸುವಂತೆ ಅವರು ಆಗ್ರಹಿಸಿದ್ದಾರೆ. ರಾಜ್ಯ ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಕೊಲೆಗಡುಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಸಾಧು, ಸಂತರು ಶಾಂತಿಪ್ರಿಯರು. ದೇಶದ ಒಳಿತು, ಸಂಸ್ಕಾರ, ಸನಾತನ ಧರ್ಮದ ವಿಚಾರವಾಗಿ ಮಾರ್ಗದರ್ಶನ ನೀಡುವವರು. ಅಂತಹ ಸಂತರನ್ನು ಹೇಯವಾಗಿ ಕೊಲೆ ಮಾಡಿರುವುದನ್ನು ಸಮಾಜ ಒಪ್ಪಲು ಸಾಧ್ಯವೇ ಇಲ್ಲ ಎಂದು ನಳಿನ್ ಕುಮಾರ್ ಕಟೀಲ್ ಅವರು ಅಭಿಪ್ರಾಯಪಟ್ಟಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಬೆಂಗಳೂರು: ನಗರದಲ್ಲಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲು ಹಾಗೂ ಸಂಚಾರ ಸಂಬಂಧಿತ ಸಮಸ್ಯೆಗಳನ್ನು ಆಲಿಸಲು ಪೊಲೀಸ್ ಠಾಣೆಗಳಲ್ಲಿ ಶನಿವಾರ ಜನಸಂಪರ್ಕ ಸಭೆ ನಡೆಸಲಾಯಿತು. ನಗರದ ಸಂಚಾರ ಪೊಲೀಸ್ ಠಾಣೆಗಳಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಜರುಗಿದ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು. ಎಸಿಪಿ ಹಾಗೂ ಇನ್‌ಸ್ಪೆಕ್ಟರ್‌ಗಳು, ಠಾಣೆಯಲ್ಲಿ ಹಾಜರಿದ್ದು ಜನರ ಸಮಸ್ಯೆಗಳನ್ನು ಆಲಿಸಿದರು. ಠಾಣೆವಾರು ಸಭೆಗಳನ್ನು ಆಯೋಜಿಸಿದ್ದರಿಂದ, ಆಯಾ ಠಾಣೆ ವ್ಯಾಪ್ತಿಯಲ್ಲಿ ವಾಸವಿರುವ ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ‘ಪಾದಚಾರಿ ಮಾರ್ಗಗಳು ಸೂಕ್ತವಾಗಿಲ್ಲ. ಇದರಿಂದ ಜನರ ಓಡಾಟಕ್ಕೆ ತೊಂದರೆಯಾಗುತ್ತಿದೆ. ಕೆಲ ರಸ್ತೆಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಿದ್ದು, ಇದರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ’ ಎಂದು ಜನರು ಒತ್ತಾಯಿಸಿದರು. ‘ರಸ್ತೆಗಳಲ್ಲಿ ಅಪಾಯಕಾರಿ ರೀತಿಯಲ್ಲಿ ವೀಲೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಬಾಲಕರು ಇಂಥ ಕೃತ್ಯಗಳಲ್ಲಿ ತೊಡಗುತ್ತಿದ್ದಾರೆ. ಅಂಥವರನ್ನು ಪತ್ತೆ ಮಾಡಿ ಬಾಲಕರ ಜೊತೆ ಪೋಷಕರ ವಿರುದ್ಧವೂ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು. ಸಮಸ್ಯೆಗಳನ್ನು ಆಲಿಸಿದ ಪೊಲೀಸರು, ‘ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು. ಸಾರ್ವಜನಿಕರೂ ಪೊಲೀಸರ ಕೆಲಸಕ್ಕೆ ಸಹಕಾರ…
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 16ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ತುಮಕೂರು, ವಿಜಯಪುರದಲ್ಲಿ ಮಳೆಯಾಗಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಅನ್ನಭಾಗ್ಯದ ಹೆಚ್ಚುವರಿ ಅಕ್ಕಿ ಬದಲಿಗೆ 170 ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಆಗಲಿದ್ದು ಇಂದು ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಲಿದ್ದಾರೆ. ಇಂದು ಸಂಜೆ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂಜೆ 5 ಗಂಟೆಗೆ ಯೋಜನೆಗೆ ಚಾಲನೆ ಸಿಗಲಿದೆ. ಡಿಬಿಟಿ ಮೂಲಕ ಬಿಪಿಎಲ್ ಕುಟುಂಬದ ಪ್ರತಿ ವ್ಯಕ್ತಿಗೆ 170 ರೂ. ನಂತೆ ಹಣ, ಕುಟುಂಬದ ಮುಖ್ಯಸ್ಥನ ಖಾತೆಗೆ ನೇರವಾಗಿ ವರ್ಗಾವಣೆ ಆಗಲಿದೆ. ಈ ಗ್ಯಾರಂಟಿ ಯೋಜನೆಗೆ ಒಟ್ಟು 1, 28, 16, 253 ಮಂದಿ ಫಲಾನುಭವಿಗಳಿದ್ದು ಈ ಪೈಕಿ ಶೇಕಡಾ 82% ಮಂದಿ ತಕ್ಷಣ ಯೋಜನೆ ಪಡೆಯಲು ಅರ್ಹರಾಗಿದ್ದಾರೆ ಎನ್ನಲಾಗಿದೆ. ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿದ್ದರೆ ಮಾತ್ರವೇ ಹಣ ವರ್ಗಾವಣೆ ಆಗುವುದಾಗಿ ಹೇಳಲಾಗಿದೆ. ಸದ್ಯ 1. 2 ಕೋಟಿ ಮಂದಿ ಬ್ಯಾಂಕ್ ಖಾತೆ ಹಾಗೂ ಆಧಾರ್ ಲಿಂಕ್ ಮಾಡಿಸಿದ್ದು ಇನ್ನು ಉಳಿದ 22 ಲಕ್ಷ ಕಾರ್ಡ್‌ದಾರರು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿದ ಬಳಿಕವೇ ಹಣ…
ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಸಿಡಿದ್ದೆದ್ದಿದ್ದಾರೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಪ್ರತಿಭಟನೆ ನಡೆಸಲು ಸಿದ್ಧರಾಗಿದ್ದಾರೆ. ಬೇಡಿಕೆ ಈಡೇರುವವರೆಗೂ ಧರಣಿ ಮಾಡೋದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರ ನೀಡಿದ್ದ ಮೊಬೈಲ್ ಗಳನ್ನ ವಾಪಸ್ ಮಾಡುವ ಮೂಲಕ ಪ್ರತಿಭಟನೆ ಮಾಡಲು ಮುಂದಾಗಿರೋ ಕಾರ್ಯಕರ್ತೆಯರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ತೀರ್ಮಾನ ಕೈಗೊಂಡಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಸಂಘ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿಕ್ಕೋಡಿ: ಹತ್ಯೆಯಾದ ಜೈನ ಮುನಿ ಕಾಮಕುಮಾರನಂದಿ ಮಹಾರಾಜರ ಅಂತ್ಯಸಂಸ್ಕಾರ ಇಂದು ಭಕ್ತರ ಕಂಬನಿಯ ನಡುವೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಬಳಿ ಇರುವ ನಂದಿಪರ್ವತ ಆಶ್ರಮದ ಪಕ್ಕದ ಜಮೀನಿನಲ್ಲಿ ನೆರವೇರಿತು. ಜೈನಮುನಿಗಳ ಚಿತೆಗೆ ಕಾಮಕುಮಾರನಂದಿ ಮಹಾರಾಜರ ಪೂರ್ವಾಶ್ರಮದ ಅಣ್ಣನ ಮಗ ಭೀಮಗೊಂಡ ಉಗಾರೆ ಅವರು ಅಗ್ನಿಸ್ಪರ್ಶ ಮಾಡಿದರು. ಕಾಮಕುಮಾರನಂದಿ ಮಹಾರಾಜರ ಚಿತೆಗೆ ಅಗ್ನಿಸ್ಪರ್ಶ ಮಾಡುತ್ತಿದ್ದಂತೆ ಕೆಲ ಕ್ಷಣಗಳ ಕಾಲ ಜಿಟಿಜಿಟಿ ಮಳೆಯಾಗಿದೆ. ಬೆಳಗ್ಗೆ 8 ಗಂಟೆಗೆ ರಕ್ಷಾ ವಿಸರ್ಜನಕ್ಕೆ ಬರುವಂತೆ ಭಕ್ತಾದಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಹತ್ಯೆ ಖಂಡಿಸಿ 10 ಗಂಟೆಗೆ ಚಿಕ್ಕೋಡಿಯ ಆರ್ಡಿ ಕಾಲೇಜಿನಿಂದ ಮೌನ ಪ್ರತಿಭಟನಾ ಮೆರವಣಿಕೆ ಹಮ್ಮಿಕೊಳ್ಳಲಾಗಿದ್ದು, ಭಕ್ತರು ಆಗಮಿಸುವಂತೆ ಸೂಚನೆ ನೀಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವಿಜಯಪುರ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲವಾರು ಕಾಮಗಾರಿಯಲ್ಲಿ ನಿಗದಿತ ಮೊತ್ತಕ್ಕಿಂತ ಹೆಚ್ಚಿನ ಮೊತ್ತ ಮಾಡಿದ್ದಾರೆ. ಸಿ ಸಿ ಪಾಟೀಲರು ತಮ್ಮ ಬಜೆಟ್ ಗಿಂತ ನಾಲ್ಕೈದು ಸಾವಿರ ಕೋಟಿ ಜಾಸ್ತಿ ಖರ್ಚು ಮಾಡಿದ್ದಾರೆ. ಯಾಕೆ ಹೆಚ್ಚು ಖರ್ಚು ಮಾಡಿದರು ಗೊತ್ತಲ್ಲ, ಎಂದು ಸಚಿವ ಎಂ ಬಿ ಪಾಟೀಲ್ ಟಾಂಗ್ ಕೊಟ್ಟರು. ನೀರಾವರಿ ಇಲಾಖೆಯಲ್ಲಿ 10-15 ಸಾವಿರ ಕೋಟಿ ಹೆಚ್ಚು ಖರ್ಚು ಮಾಡಿದ್ದಾರೆ. ಬಜೆಟ್ ಗಿಂತ ಹೆಚ್ಚು ಯಾಕೆ ಖರ್ಚು ಮಾಡಿದ್ದೀರಿ ಜನರನ್ನ ಯಾಕೆ ಮರಳು ಮಾಡಿದ್ದೀರಿ ಎಂದು ಪ್ರಶ್ನಿಸಿದ ಅವರು, ಇದರ ಹಿಂದಿನ ಉದ್ದೇಶ ಏನು ಹಾಗಿದ್ದರೆ? ಬಿಬಿಎಂಪಿಯಲ್ಲೂ ಭ್ರಷ್ಟಾಚಾರ ಮಾಡಿದ್ದಾರೆ. ಲೂಟಿ ಹೊಡೆಯಲು ಬಜೆಟ್ ಗಿಂತ ಹೆಚ್ಚಿನ ಅನುದಾನ ಖರ್ಚು ಮಾಡಿದ್ದೀರೆ. ಬಜೆಟ್ ಗಿಂತ ಹೆಚ್ಚು ಖರ್ಚು ಮಾಡುವಾಗ ನಿಮ್ಮ ಶಿಸ್ತು ಎಲ್ಲಿತ್ತು? ನೀವು ಮಾಡಿದ ಅಕ್ರಮಗಳನ್ನ, ಅಶಿಸ್ತನ್ನ ಎಳೆ-ಎಳೆಯಾಗಿ ನಮ್ಮ ಸಿಎಂ ಬಜೆಟ್ ಪುಸ್ತಕದಲ್ಲಿಯೆ ಹೇಳಿ ಬಿಟ್ಟಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ತಿಪಟೂರು: 2023 –24 ನೇ ಸಾಲಿನ ರೋಟರಿ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ಅಧ್ಯಕ್ಷರಾಗಿ ಕೃಷ್ಣಕುಮಾರ್ ಮತ್ತು ಕಾರ್ಯದರ್ಶಿಯಾಗಿ ಅರುಣ್ ಕುಮಾರ್ ಅವರಿಗೆ ರೋಟರಿ ಡಿಸ್ಟ್ರಿಕ್ಟ್ ಗವರ್ನರ್ ಶ್ರೀನಿವಾಸರವರು ಪದಗ್ರಹಣ ಮಾಡಿದರು. ಗೆಸ್ಟ್ ಆಗಿ. ಫಾಸ್ಟ್ ಡಿಸ್ಟ್ರಿಕ್ಟ್ ಗವರ್ನರ್ ನಾಗೇಂದ್ರ ಪ್ರಸಾದ್, ಡಿಸ್ಟ್ರಿಕ್ಟ್ ಸೆಕ್ರೆಟರಿ ಗಣೇಶ್, ಜೋನ್ ಗೌರ್ನರ್ ಉಮೇಶ್ ಅಸಿಸ್ಟೆಂಟ್ ಗೌರ್ನರ್ ರಾಜಶೇಖರ್, ಜೋನ್ ಸೆಕ್ರೆಟರಿ ವಾಸಿಮ್, ಸಹಯೋಗ ಡೈರೆಕ್ಟರ್ ಬಿಳಿಗೆರೆ ಶಿವಕುಮಾರ್ ಮತ್ತು ತಿಪಟೂರಿನ ಎಲ್ಲ ರೋಟೋರಿಎನ್ ಹಾಜರಿದ್ದರು. ಈ ವೇಳೆ ಕೃಷ್ಣಪ್ರಸಾದ್ ಮತ್ತು ಅರುಣ್ ಕುಮಾರ್ ಮಾತನಾಡಿ, ಮುಂದಿನ ವರ್ಷದ ಸಮಾಜಮುಖಿ ಚಟುವಟಿಕೆಗಳನ್ನು ಹುಡುಕಿ ಶಾಲೆಗಳಿಂದ ಹೊರಹೊಳಿದ ಮಕ್ಕಳನ್ನು ಹುಡುಕಿ ಶಿಕ್ಷಣಕ್ಕೆ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ಕೊಡುವುದು ತಿಪಟೂರು ರೋಟೋರಿಯ ಮುಖ್ಯ ಉದ್ದೇಶ ಎಂದು ತಿಳಿಸಿದರು. ವರದಿ: ಆನಂದ್, ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್…