Author: admin

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ತಕ್ಷಣ ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಿಬಿಐ ತನಿಖೆ ಮುಂದುವರೆಯುವ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಅವರು ತಡಮಾಡದೆ ರಾಜೀನಾಮೆ ಸಲ್ಲಿಸಬೇಕು. ಸಿಬಿಐ ತನಿಖೆ ನಡೆಯಲಿದೆ. ಉನ್ನತ ಹುದ್ದೆಯಲ್ಲಿರುವ ಡಿ.ಕೆ.ಶಿವಕುಮಾರರು ಸಾಕ್ಷ್ಯಾಧಾರಗಳನ್ನು ಮುಚ್ಚಿ ಹಾಕುವ ಎಲ್ಲ ಸಾಧ್ಯತೆ- ಸಂದರ್ಭಗಳಿವೆ. ಅವರು ಪ್ರಭಾವಿ ವ್ಯಕ್ತಿಯಾದ ಕಾರಣ ಸಾಕ್ಷಿ ನಾಶ ಮಾಡುವ ಸಾಧ್ಯತೆ ಎದ್ದು ಕಾಣುತ್ತದೆ ಎಂದು ನುಡಿದರು. ಶಿವಕುಮಾರ್ ಅವರು ರಾಜೀನಾಮೆ ಕೊಡದಿದ್ದರೆ ಸಿಎಂ ಅವರ ರಾಜೀನಾಮೆ ಪಡೆಯಲಿ. ಇಲ್ಲವಾದರೆ ನಾವು ರಾಜ್ಯಪಾಲರನ್ನೂ ಭೇಟಿ ಮಾಡುತ್ತೇವೆ. ಇವತ್ತಿನ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಕೊಡದಿದ್ದರೆ ನಾವು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಕೊಟ್ಟು ಒತ್ತಾಯಿಸಲಿದ್ದೇವೆ ಎಂದು ವಿವರಿಸಿದರು. ಇವತ್ತು ಹೈಕೋರ್ಟಿನಲ್ಲಿ ಒಂದು ಆದೇಶ ಹೊರಗೆ…

Read More

ಬೆಳಗಾವಿ: “ನನ್ನನ್ನು ಜೈಲಿಗೆ ಕಳುಹಿಸಲು ನಳೀನ್ ಕುಮಾರ್ ಕಟೀಲ್ ಆಗಲಿ, ಕುಮಾರಸ್ವಾಮಿ ಅವರಾಗಲಿ ನ್ಯಾಯಾಧೀಶರಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಳಗಾವಿಯಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ, “ಶಿವಕುಮಾರ್ ಅವರು ಎರಡನೇ ಬಾರಿಗೆ ತಿಹಾರ್ ಜೈಲಿಗೆ ಹೋಗಲು ಸಿದ್ಧತೆ ಮಾಡಿಕೊಳ್ಳಲಿ” ಎಂಬ ಕಟೀಲ್ ಅವರ ಹೇಳಿಕೆ ಬಗ್ಗೆ ಕೇಳಿದಾಗ ಅವರು ಈ ರೀತಿ ಉತ್ತರಿಸಿದರು. ಉಳಿದಂತೆ ಮಾಧ್ಯಮಗೊಷ್ಠಿಯಲ್ಲಿ ಡಿಸಿಎಂ ಅವರು ಹೇಳಿದ್ದಿಷ್ಟು; “ಬೆಳಗಾವಿಯಲ್ಲಿ ಇಂದು ಈ ಭಾಗದ ವಿವಿಧ ನೀರಾವರಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳ ಸಭೆ ಮಾಡಿ ಚರ್ಚಿಸಿದ್ದೇನೆ. ಈ ಭಾಗದಲ್ಲಿ ಘಟಪ್ರಭ, ಮಾರ್ಕಂಡೇಯ, ಹಿಪ್ಪರಗಿ, ಆಲಮಟ್ಟಿ ಜಲಾಶಯಗಳಲ್ಲಿ ಶೇ.90 ರಷ್ಟು ನೀರು ತುಂಬಿದೆ. ಮಲಪ್ರಭದಲ್ಲಿ ಮಾತ್ರ ಶೇ. 52ರಷ್ಟಿದೆ. ಈ ಭಾಗದಲ್ಲಿ ನೀರಾವರಿ ಇಲಾಖೆಯ ಹುದ್ದೆಗಳ ನೇಮಕಾತಿ ಸಮಸ್ಯೆ ಇದೆ. ಒಟ್ಟು 1322 ಹುದ್ದೆಗಳು ಮಂಜೂರಾಗಿದ್ದು, 671 ಭರ್ತಿಯಾಗಿದ್ದು, 651 ಹುದ್ದೆಗಳು ಖಾಲಿ ಇವೆ. ಬೆಂಗಳೂರಿಗೆ ಹೋದ ಮೇಲೆ ಈ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳುತ್ತೇನೆ. ಯಾವ ಕಾಮಗಾರಿಗಳನ್ನು…

Read More

ಕಾರವಾರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಕತ್ತು ಸೀಳಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಮುರುಡೇಶ್ವರದಲ್ಲಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ನಂದಿನಿ ನಾಯ್ಕ (30) ಎಂದು ಗುರುತಿಸಲಾಗಿದೆ. ಮಹಿಳೆಯ ಪತಿ ಲೋಕೇಶ್ ನಾಯ್ಕ (34) ಕೊಲೆ ಆರೋಪಿಯಾಗಿದ್ದಾನೆ. ಇಬ್ಬರ ನಡುವೆ ಗಲಾಟೆ ನಡೆದಿದೆ ಇದೇ ಕಾರಣಕ್ಕೆ ಆರೋಪಿ ಏಕಾಏಕಿ ಚಾಕುವಿನಿಂದ ಕತ್ತಿನ ಬಳಿ ಹಲ್ಲೆ ನಡೆಸಿದ್ದಾನೆ. ಈ ವೇಳೆ ಮಹಿಳೆ ಸಹಾಯಕ್ಕಾಗಿ ಹೊರಗೆ ಓಡಿ ಬಂದಿದ್ದು, ಜನ ಸೇರುವಷ್ಟರಲ್ಲಿ ತೀವ್ರ ರಕ್ತಸ್ರಾವದಿಂದ ಆಕೆ ಮೃತಪಟ್ಟಿದ್ದಾಳೆ. ಕೊಲೆ ಮಾಡಿದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಆತನನ್ನು ಹೋಟೆಲ್ ಒಂದರಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿಲ್ಪಿ ಕೆಲಸ ಮಾಡುತ್ತಿದ್ದ ಲೋಕೆಶ್ ನಾಯ್ಕ ಕಳೆದ ಮೂರು ದಿನಗಳಿಂದ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

Read More

ಬೆಂಗಳೂರು : ಹೆಚ್‌ಐವಿ ಸೋಂಕಿತ ಎಂದು ಬೇಧಭಾವ ತೋರಿ ಕಿರುಕುಳ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆ ಬೆಂಗಳೂರಿನ ಖಾಸಗಿ ಕಂಪನಿಯೊಂದರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ನ್ಯಾಯಾಲಯದ ಪಿಸಿಆ‌ ಮೂಲಕ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿದೆ. ಬಾಧಿತ ಉದ್ಯೋಗಿಯನ್ನು ಹೆಚ್‌ಐವಿ ಇದೆ ಎಂದು ಪ್ರತ್ಯೇಕ ಜಾಗದಲ್ಲಿ ಕಂಪನಿ ಕೂರಿಸುತ್ತಿತ್ತಂತೆ. ನಂತರ ಹಾಜರಾತಿ ಇಲ್ಲ ಎಂದು ಸಂಬಳ ನೀಡದೆ ಕಿರುಕುಳ ನೀಡಿರುವ ಆರೋಪವೂ ಕೇಳಿಬಂದಿದೆ.

Read More

ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ರಾಸಾಯನಿಕಯುಕ್ತ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು‌ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಈ ಅದೇಶಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿರುವುದರಿಂದ ಈ ಸಂಬಂಧ ಸ್ಪಷ್ಟನೆ ಹೊರಡಿಸಿರುವ ಸರ್ಕಾರ, ಈ ಆದೇಶ ಹೊಸತೇನಲ್ಲ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ. ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಸಿಎಂ ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿದ್ದಾರೆ.

Read More

ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಮಗೆ ಪಾಠ ಕಲಿಸಿದೆ. ಹಾಗಾಗಿ ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಧಕ ಬಾಧಕ ಗಮನಿಸಿ ಕನಿಷ್ಠ ಬೆಂಗಳೂರಿನಲ್ಲಿ ಪಟಾಕಿ ಬ್ಯಾನ್ ಮಾಡಲು ಚಿಂತನೆ ಮಾಡಲಾಗುವುದು.

Read More

ಬೆಂಗಳೂರು: ಸತೀಶ್ ಜಾರಕಿಹೊಳಿ ಅವರು 20 ಶಾಸಕರ ಜೊತೆ ವಿದೇಶ ಪ್ರವಾಸ ಹೋಗಲು ಸಿದ್ದರಾಗಿದ್ದರು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಎಂ.ಬಿ.ಪಾಟೀಲ್,  ಅವರೇನೋ ಸ್ನೇಹಿತರು ಫಾರಿನ್ ಕಂಟ್ರಿಗೆ ಹೋಗುತ್ತಿರಬಹುದು. ವಿದೇಶಕ್ಕೆ ಹೋಗೋದರ ಬಗ್ಗೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಹೇಳಿದರು. ಐಟಿ ದಾಳಿಯಲ್ಲಿ ಸಿಕ್ಕ ಹಣದ ವಿಚಾರವಾಗಿ ಸಿಬಿಐ ತನಿಖೆಗೆ ಕೊಡಬೇಕು ಎಂದು ಬಿಜೆಪಿ ಆಗ್ರಹಿಸುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಅವರು ಆರೋಪ ಮಾಡುತ್ತಾರೆ. ಸಿಬಿಐಗೆ ಕೊಡಬೇಕು ಅಂತಿದರೇ ಐಟಿ ಡಿಪಾರ್ಟ್‌ಮೆಂಟ್ ನವರೇ ಕೊಡುತ್ತಾರೆ. ಪಂಚರಾಜ್ಯಗಳಿಗೆ ಹಣ ಕಳಿಸುತ್ತಾರೆ ಅಂತ ಹೇಳುತ್ತಾರೆ. ಅವಕಾಶ ಸಿಕ್ಕಾಗ ಬಿಜೆಪಿಯವರು ಹೀಗೆ ಹೇಳುತ್ತಾರೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದರು.

Read More

ತುಮಕೂರು:  ನಗರದ ಹೊರವಲಯದ ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ ಚಿರತೆಗಳ ಅಧ್ಯಯನಕ್ಕಾಗಿ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ಚಿರತೆಯೊಂದು ಬಹುದೊಡ್ಡ ಬಾವಲಿಯೊಂದನ್ನು ಬೇಟೆಯಾಡಿ ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಕಂಡುಬಂದಿದೆ. ಜಿಲ್ಲೆಯ ಸಂಜಯ್ ಗುಬ್ಬಿ ಮತ್ತು ತಂಡ ಅಳವಡಿಸಿದ್ದ ಕ್ಯಾಮೆರಾದಲ್ಲಿ ಹೊಳೆಮತ್ತಿ ನೇಚ‌ರ್ ಫೌಂಡೇಶನ್ ಹಾಗೂ ನೇಚ‌ರ್ ಕನ್ನರ್ವೇಷನ್ ಫೌಂಡೇಶನ್‌ ವತಿಯಿಂದ ಆಗಸ್ಟ್- ಸೆಪ್ಟೆಂಬರ್ ಅವಧಿಯಲ್ಲಿ ಚಿರತೆ ಬೇಟೆಯಾಡುವಂತಹ ದೃಶ್ಯ ಕಂಡುಬರುತ್ತದೆ. ಈ ರೀತಿಯಾದ ಅಪರೂಪದ ದೃಶ್ಯ ಇದೇ ಮೊದಲ ಬಾರಿಗೆ ಕ್ಯಾಮರಾದಲ್ಲಿ ಸೆರೆಯಾಗಿದ್ದು ಸಾಮಾನ್ಯವಾಗಿ ಚಿರತೆಗಳು ಪ್ರಾಣಿಗಳನ್ನು ಬೇಟೆಯಾಡುತ್ತವೆ.ಚಿರತೆಗಳು ಹಲವು ವಿಧದ ಪ್ರಾಣಿಗಳನ್ನು ಭಕ್ತಿಸುವುದು ವೈಜ್ಞಾನಿಕವಾಗಿ ದಾಖಲಾಗಿದೆ. ಕಡವೆ, ಸಾರಂಗ, ಕಾಡು ಹಂದಿ, ಕುರಿ, ಮೇಕೆ, ನಾಯಿ, ಮೊಲ, ಮುಳ್ಳುಹಂದಿ, ಚಿಪ್ಪು ಹಂದಿಯನ್ನು ಬೇಟೆಯಾಡುತ್ತವೆ. ಆದರೆ ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿಯ ಚಿರತೆ ದೊಡ್ಡ ಬಾವಲಿಯನ್ನೂ ಬೇಟೆಯಾಡಿರೋದು ಕಂಡುಬಂದಿದೆ. ಸಾಮಾನ್ಯವಾಗಿ ದೇವರಾಯನ ದುರ್ಗಾ ಅರಣ್ಯ ದಲ್ಲಿ ಕಂಡುಬರುವ (ಹಾಲಕ್ಕಿ) ಎಂದು ಕರೆಲಾಗುವ ಈ ದೊಡ್ಡ ಬಾವಲಿಗಳು 1.5 ಕೆ.ಜಿಯಷ್ಟು ತೂಕವಿರುತ್ತವೆ. ರಕ್ಕೆಗಳನ್ನು ಹರಡಿದರೆ ಐದು ಅಡಿಗಳಷ್ಟು ವಿಸ್ತಾರವಾಗಿದೆ.…

Read More

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಸಿದ್ದರಬೆಟ್ಟ ಗ್ರಾಪಂ ವ್ಯಾಪ್ತಿಯ ಮರೇನಾಯಕನಹಳ್ಳಿ ಗ್ರಾಮದ ತಂಗುದಾಣದ ಸಮೀಪ ಭಿಕ್ಷುಕನ ಬಳಿ ಸಾವಿರಾರು ರೂಪಾಯಿ ಹಣ ಪತ್ತೆಯಾಗಿರುವುದು ಅಚ್ಚರಿ ಮೂಡಿಸಿದೆ. ಮೂಟೆಯಲ್ಲಿ ಗಾಂಜಾ ಸೊಪ್ಪಿನ ಶಂಕೆ: ತಂಗುದಾಣದ ಬಳಿ ಗುರುಸಿದ್ದಪ್ಪನ ವರ್ತನೆ ಮತ್ತು ಹಳೆಯ ಚೀಲದಲ್ಲಿ ಗಾಂಜಾಸೊಪ್ಪು ಇರುವುದಾಗಿ ಶಂಕಿಸಿ ಎಎಸೈ ಹನುಮಂತರಾಯಪ್ಪ ಮತ್ತು ಮುಖ್ಯಪೇದೆ ರಾಮಕೃಷ್ಣಯ್ಯ ವಿಚಾರಣೆ ನಡೆಸಿದ್ದರು. ಈ ವೇಳೆ ಭಿಕ್ಷುಕನ ಮೂಟೆಯಲ್ಲಿ 50 ಸಾವಿರಕ್ಕೂ ಅಧಿಕ ಚಿಲ್ಲರೇ ಹಣ ನೋಡಿ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಸಿದ್ದರಬೆಟ್ಟದ ತಪ್ಪಲಿನಲ್ಲೇ ಇರುವ ತಂಗುದಾಣ ಮತ್ತು ರಸ್ತೆಬದಿಯ ಮರದ ಕೆಳಗಡೆ ಕಳೆದ ವಾರದಿಂದ ಕೊಳಕು ಹರಿದ ಬಟ್ಟೆಯಲ್ಲಿಯೇ ಗುರುಸಿದ್ದಪ್ಪ ತನ್ನ ಚೀಲದೊಂದಿಗೆ ವಾಸವಿದ್ದನು. ಈತ ಎಲ್ಲಿಗೆ ಹೋದ್ರು ಹಳೆಯ ಚೀಲವನ್ನು ಜೊತೆಯಲ್ಲೇ ಕೊಂಡೊಯ್ಯುತ್ತಿದ್ದ. ಸ್ಥಳೀಯರಿಗೆ ವೃದ್ದನ ಮೇಲೆ ಅನುಮಾನ ಬಂದು ಚೀಲದಲ್ಲಿ ಗಾಂಜಾದ ಸೋಪ್ಪು ಇದೆ ಎಂದು ಶಂಕಿಸಿ 112ಕ್ಕೆ ದೂರವಾಣಿ ಕರೆ ಮಾಡಿದ್ದರು. ಪೊಲೀಸರಿಗೆ ಮಾಹಿತಿ ಲಭ್ಯವಾಗಿ ವಿಚಾರಣೆ ನಡೆಸಿದಾಗ ಸತ್ಯಾಂಶ ಹೊರಬಂದಿದೆ.…

Read More

ತುರುವೇಕೆರೆ: ತಾಲೂಕಿನ ಕೋಳಘಟ್ಟ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ದಲಿತ ವ್ಯಕ್ತಿಯ ಮೇಲೆ ನಗಾರಿಯನ್ನು ಹೋರಿಸಿ ಸುವರ್ಣೀಯ ವ್ಯಕ್ತಿಯೊಬ್ಬನು ಅದನ್ನು ಬಾರಿಸಿಕೊಂಡು ಊರಿಲ್ಲ ಸುತ್ತಿರುವ ಘಟನೆ ಸುದ್ದಿಯು ಪತ್ರಿಕೆಗಳಲ್ಲಿ ಪ್ರಕಟವಾಗಿದ್ದು, ಈ ಸಂಬಂಧ ತುರುವೇಕೆರೆ ತಾಲೂಕಿನ ದಂಡಾಧಿಕಾರಿಗಳಾದ ವೈ ಎಮ್ ರೇಣು ಕುಮಾರ್ ರವರು ಕೋಳಘಟ್ಟ ಗ್ರಾಮಕ್ಕೆ ಭೇಟಿ ನೀಡಿ ವಸ್ತು ಸ್ಥಿತಿಯನ್ನು ಪರಿಶೀಲನೆ ಮಾಡಿದರು. ಇದೇ ವೇಳೆ ದಲಿತರು ಮತ್ತು ಸವರ್ಣಿಯರಿಂದ ಹೇಳಿಕೆಗಳನ್ನು ಪಡೆದು ದಲಿತರ ಮೇಲಾಗುವ ದೌರ್ಜನ್ಯಗಳನ್ನು ತಡೆಗಟ್ಟಬೇಕು ಹಾಗೂ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರಿಕೆಯಿಂದ ಇರಿ ಹಾಗೇನಾದರೂ ಮುಂದಿನ ದಿನಗಳಲ್ಲಿ ದೌರ್ಜನ್ಯ ಪ್ರಕರಣ ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕೇಸು ದಾಖಲು ಮಾಡಲಾಗುವುದು  ಎಂದು ಎಚ್ಚರಿಕೆ ನೀಡಿದರು. ಸೌಹಾರ್ದತೆಯಿಂದ ಜೀವನ ನಡೆಸಲು ಈ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸೌಹಾರ್ದಯತ ಸಭೆ ಹಾಗೂ ಅಸ್ಪೃಶ್ಯತಾ ಅರಿವು ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಇದೇ ವೇಳೆ ಅವರು ತಿಳಿಸಿದರು. ವರದಿ: ಸುರೇಶ್ ಬಾಬು ಎಂ.…

Read More