Author: admin

ಬಾಗಲಕೋಟೆ: ವಿದ್ಯಾರ್ಥಿಗಳಿಗೆ ಕಲಿಯುವ ಹಂಬಲ ಇದ್ದರೆ ಮಾತ್ರ ಜೀವನದಲ್ಲಿ ಏನಾದರೂ ಸಾಧಿಸಲು ಸಾಧ್ಯ ಎಂದು ತೋಟಗಾರಿಕಾ ವಿಜ್ಞಾನ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರಾದ ಡಾ.ನಾಗರಾಜ ಹೋಳೆಯಣ್ಣವರ ಹೇಳಿದರು. ನಗರದ ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ಇಂಗ್ಲೀಷ್ ಸ್ನಾತಕೋತ್ತರ ವಿಭಾಗದಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ಪಿ.ಜಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಒಂದು ದಿನದ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಅಸಂಬದ್ಧ ಥಿಯೇಟರ್ ಎಂಬ ಆಂಗ್ಲಭಾಷೆಯ ನಾಟಕವು ಮಾನವ ಜೀವನದ ಅಮೂರ್ತವಾಗಿದೆ. ನಾವು ಇತರ ವ್ಯಕ್ತಿಗಳಂತೆ ನಮ್ಮ ಜೀವನ ಹೇಗೆ ನಡೆಯುತ್ತಿದೆ ಎಂಬುದನ್ನು ಈ ನಾಟಕದಿಂದ ತಿಳಿದುಕೊಳ್ಳಬಹುದು ಎಂದರು. ಮಾನವ ಪರಿಸ್ಥಿತಿಯ ಕಠೋರ ಸಂಗತಿಗಳೊಂದಿಗೆ ಎಳೆಎಳೆಯಾಗಿ ಬಿಚ್ಚಿಡಯವ ಈ ನಾಟಕವು ಪ್ರಾರಂಭ ಮತ್ತು ಅಂತ್ಯವನ್ನು ಹೊಂದಿಲ್ಲ, ಅದು ಎಲ್ಲಿಂದ ಪ್ರಾರಂಭವಾಗುತ್ತದೆ ಮತ್ತು ಎಲ್ಲಿ ಕೊನೆಗೊಳ್ಳುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಕಷ್ಟ. ಈ ನಾಟಕವು ಆ್ಯಕ್ಷನ್ ಓರಿಯೆಂಟೆಡ್ ಆಗಿದೆ ಎಂದು ಹೇಳಿದರು. ಈ ಇಂಗ್ಲಿಷ್ ನಾಟಕವು ವೃತ್ತಿಪರವಾಗಿದ್ದು ಪ್ರೇಕ್ಷಕರ ಮುಂದೆ ವೇದಿಕೆಯಲ್ಲಿ ಅಥವಾ ರಂಗಭೂಮಿಯಲ್ಲಿ ನಿರ್ವಹಿಸುವ…

Read More

ವಿಜಯಪುರ ಜಿಲ್ಲೆಯ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ಹಾಂಗ್‌ಕಾಂಗ್ ಮೂಲದ ಟಾಲ್ ಅಪಾರೆಲ್ಸ್ ಜವಳಿ ಹಾಗೂ ಸಿದ್ಧ ಉಡುಪು ಉತ್ಪಾದನಾ ಕಂಪನಿಯು 700 ರಿಂದ 800 ಕೋಟಿ ರೂ ಹೂಡಿಕೆ ಮಾಡಲು ಉತ್ಸುಕತೆ ತೋರಿರುವ ಹಿನ್ನೆಲೆಯಲ್ಲಿ ಕಂಪನಿಯ ನಿರ್ದೇಶಕರಾದ ಇತಾನ್ ಯಾಂಗ್ ಅವರೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಲಾಯಿತು ಎಂದು ಜವಳಿ ಸಚಿವ ಶಿವಾನಂದ ಪಾಟೀಲ್ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕಂಪನಿ ನಿರ್ದೇಶಕರಿಗೆ ಮಾಹಿತಿ ಒದಗಿಸಿ ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಇರುವ ಪ್ರೋತ್ಸಾಹ ಹಾಗೂ ರಿಯಾಯಿತಿ ಕುರಿತು ವಿಸ್ತ್ರತವಾಗಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿಗಳಾದ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜವಳಿ ಇಲಾಖೆಯ ಆಯುಕ್ತರಾದ ಟಿ ಎಚ್ ಎಂ ಕುಮಾರ್ ಹಾಗೂ ಕೆ ಐಎಡಿಬಿ ಸಿಇಒ ಡಾ. ಮಹೇಶ್ ಇಲಾಖಾ ಅಧಿಕಾರಿಗಳು ಪಿಪಿಟಿ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿ ಮನವರಿಕೆ ಮಾಡಿಕೊಟ್ಟರು ಎಂದು ಹೇಳಿದರು. ಹಾಂಗ್‌ಕಾಂಗ್ ಟಾಲ್ ಅಪಾರೆಲ್ಸ್ ಕಂಪನಿಯ ನಿರ್ದೇಶಕರಾದ ಇತಾನ್ ಯಾಂಗ್ ಅವರಿಗೆ ಬಂಡವಾಳ ಹೂಡಿಕೆಗೆ ಇರುವ…

Read More

ಕರ್ನಾಟಕ ಲೇಖಕಿಯರ ಸಂಘ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪತ್ರಕರ್ತೆ ಆರ್. ಪೂರ್ಣಿಮಾ ಅವರಿಗೆ ‘ನಾಗಮಣಿ ಎಸ್. ರಾವ್ ದತ್ತಿ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಸಾಹಿತಿ ಕಮಲಾ ಹಂಪನಾ ಮಾತನಾಡಿ, ಶಾಸನವೊಂದರಲ್ಲಿ ‘ಕೆರೆಯಂ ಕಟ್ಟಿಸು, ಬಾವಿಯಂ ಸವೆಸು, ದೇವಾಗಾರಮಂ ಮಾಡಿಸ. ‘ಎನ್ನಲಾಗಿದೆ. ಇದನ್ನು ಪ್ರೌಢಪ್ರತಾಪದೇವರಾಯನ ಮಂತ್ರಿ ಲಕ್ಷ್ಮೀಧರಾಮಾತ್ಯನಿಗೆ ಬಾಲ್ಯದಲ್ಲಿ ಆತನ ತಾಯಿ ಹಾಲನ್ನು ಕುಡಿಸುತ್ತಾ ಹೇಳುತ್ತಾಳೆ. ಆಗ ಕೆರೆ, ಬಾವಿಗಳು ನೀರಿನ ಮೂಲಾಧಾರವಾಗಿದ್ದವು. ದೇವಾಲಯಗಳು ಪಂಚಾಯಿತಿ ಕಟ್ಟೆಗಳಾಗಿದ್ದವು. ಅಲ್ಲಿ ಸರಿ ತಪ್ಪುಗಳ ಬಗ್ಗೆ ಚರ್ಚೆಗಳು ನಡೆಯುತ್ತಿದ್ದವು. ಆದರೆ, ಈಗ ಅವುಗಳ ಮಹತ್ವ ಅರಿತುಕೊಳ್ಳುವಲ್ಲಿ ವಿಫಲವಾಗುತ್ತಿದ್ದೇವೆ. ನಮ್ಮ ನಡೆ ಇತರರಿಗೆ ಮಾದರಿಯಾಗುವಂತಿರಬೇಕು’ ಎಂದು ಹೇಳಿದರು. ಆರ್. ಪೂರ್ಣಿಮಾ, ‘ನಾಗಮಣಿ ಅವರು ವಿಧಾನಮಂಡಲ ಅಧಿವೇಶನದ ವರದಿ ಮಾಡಿದ ಮೊದಲ ಪತ್ರಕರ್ತೆ. ಅವರ ಅನುಭವ ರೋಮಾಂಚನಕಾರಿಯಾದದ್ದು. ಅವರು ತಮ್ಮ ಜೀವನಾನುಭವವನ್ನು ಪುಸ್ತಕ ರೂಪದಲ್ಲಿ ಹೊರತರಬೇಕು’ ಎಂದು ಹೇಳಿದರು. ಹಿರಿಯ ಪತ್ರಕರ್ತ ರವೀಂದ್ರ ಭಟ್ಟ ಅವರು ‘ಪತ್ರಿಕೆಗಳಲ್ಲಿ ಸಾಹಿತ್ಯದ ಪಾತ್ರ ಅಂದು-ಇಂದು’ ಎಂಬ ವಿಷಯ ಬಗ್ಗೆ ಮತ್ತು…

Read More

ಎಸ್ ಪಿ ರೋಡ್ ನಲ್ಲಿ ಅಂಗಡಿ ಹಾಕುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಫುಟ್ ಪಾತ್ ವ್ಯಾಪಾರಿಯಿಂದ ಅಂಗಡಿ ಸಿಬ್ಬಂದಿ ಮೇಲೆ ಹಲ್ಲೆ ನಡೆದಿದ್ದು, ಅಂಗಡಿ ಬಂದ್ ಮಾಡಿ ವರ್ತಕರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಪೋಲೀಸರ ಜೊತೆಗೆ ವರ್ತಕರು ವಾಗ್ವಾದ ನಡೆಸಿದ್ದು, ಫುಟ್ ಪಾತ್ ವ್ಯಾಪಾರಿಗಳಿಂದ ಸಾಕಷ್ಟು ತೊಂದರೆ ಆಗ್ತಿದೆ. ಅಂಗಡಿ ಖಾಲಿ ಮಾಡಿಸಿ ಅಂತಾ ಹಲವಾರು ಬಾರಿ ಮನವಿ ಮಾಡಿದ್ದೀವಿ. ಬಿಬಿಎಂಪಿ ಹಾಗೂ ಪೊಲೀಸರಿಗೂ ಮನವಿ ಮಾಡಿದ್ದೀವಿ. ಆದರೂ ಯಾವುದೇ ಪ್ರಯೋಜನ ಆಗಿಲ್ಲ, ನಮಗೆ ನ್ಯಾಯ ಸಿಗಬೇಕು. ಹಲ್ಲೆ ಮಾಡಿದವರಿಗೆ ಶಿಕ್ಷೆ ಆಗಬೇಕೆಂದು ಆಗ್ರಹ ಮಾಡಿದ್ದಾರೆ.ಇನ್ನೂ ವರ್ತಕರ ಗುಂಪು ಚದುರಿಸಲು ಪೊಲೀಸರು ಬಂದ ವೇಳೆ ಕೆಲಕಾಲ ಗೊಂದಲ ಉಂಟಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಶಿಕ್ಷಣ ಇಲಾಖೆಗೆ ಹೆಚ್ಚಿನ ಅನುದಾನ ದೊರೆತಿದ್ದು, ಇದರಿಂದ ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಪರಿವರ್ತಿಸಲಾಗುವುದು. 10ನೇ ತರಗತಿವರೆಗೆ ಎರಡು ಮೊಟ್ಟೆ ನೀಡುವ ಕಾರ್ಯಕ್ರಮದಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಬೆಳಣಿಗೆಗೆ ಸಹಕಾರಿಯಾಗಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ, ಬ್ಯಾಗ್ ಮತ್ತು ಸೈಟರ್ ವಿತರಣೆಸಚಿವ ರಾಮಲಿಂಗಾರೆಡ್ಡಿ ಪ್ರತಿನಿಧಿಸುವ ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳನ್ನು ಮೀರಿಸುವಂತೆ ಮಾಡಿರುವ ಅಭಿವೃದ್ಧಿ ಚಟುವಟಿಕೆಯನ್ನು ವೀಕ್ಷಿಸಿದ ನಂತರ ಆಡುಗೋಡಿ ಸರ್ಕಾರಿ ಶಾಲೆಯಲ್ಲಿ 22 ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ, ಬ್ಯಾಗ್ ಮತ್ತು ಸೈಟರ್‌ಗಳನ್ನು ವಿತರಿಸಿ ದಾನಿಗಳನ್ನು ಸನ್ಮಾನಿಸಿ ಮಾತನಾಡಿದ ಮಧು ಬಂಗಾರಪ್ಪ, 8ನೇ ತರಗತಿವರೆಗಿನ ಮಕ್ಕಳಿಗೆ ಒಂದು ಮೊಟ್ಟೆ ನೀಡಲಾಗುತ್ತಿತ್ತು. ಇದೀಗ ಪ್ರೌಢ ಶಾಲೆಗೂ ಈ ಯೋಜನೆ ವಿಸ್ತರಿಸಿ ಎರಡು ಮೊಟ್ಟೆ ವಿತರಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಸದೃಢವಾದ ದೇಹ ಇದ್ದರೆ ಸದೃಢವಾದ ಮನಸ್ಸು ಇರುತ್ತದೆ ಎಂಬುದನ್ನು ಮನಗಂಡು ಮುಖ್ಯಮಂತ್ರಿಗಳು ಈ…

Read More

ಕಳೆದ ವಾರ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವೃತ್ತಿ ವೈಷಮ್ಯಕ್ಕೆ ಹತ್ಯೆ ಮಾಡಿದ್ದ ಮೂವರನ್ನು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಆನಂದ್ ಎಂಬಾತನನ್ನು ಕೊಲೆ ಮಾಡಿದ ಆರೋಪಡಿ ಸತೀಶ್, ಪುಟ್ಟ ಹಾಗೂ ದಯಾನಂದ್ ಎಂಬುವರನ್ನು ಬಂಧಿಸಲಾಗಿದೆ. ಈ ಆರೋಪಿಗಳು ಕಳೆದ ಜುಲೈ 2 ರಂದು ಆನಂದ್‌ನನ್ನು ಹತ್ಯೆ ಮಾಡಿದ್ದರು. ಚನ್ನನಾಯಕನಪಾಳ್ಯದ ನಿರ್ಜನ ಪ್ರದೇಶದ ಬಯಲಿನಲ್ಲಿ ಶವ ಕಂಡುಬಂದಿದ್ದು, ಬೇರೆಡೆ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿತ್ತು. ಕೃತ್ಯಕ್ಕೂ ಮುನ್ನ ಸ್ಥಳದಲ್ಲಿ ಮದ್ಯಪಾನ ಸೇವಿಸಿರುವುದು, ಕಸದ ರಾಶಿಯ ಮೇಲೆ ಶವ ಇರಿಸಿ ಬೆಂಕಿ ಹಚ್ಚಲಾಗಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿತ್ತು. ಪ್ರಕರಣವನ್ನು ಚುರುಕುಗೊಳಿಸಿದ ಪೊಲೀಸರು 1 ವಾರದಲ್ಲೇ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಮಕ್ಕಳು ವಿಶ್ವಪ್ರಜ್ಞೆ ಬೆಳೆಸಿಕೊಂಡು ವೈಚಾರಿಕವಾಗಿ ಸನ್ನದ್ಧಗೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡಲಿದೆ. ಬೋಧಕರು ಜಾತ್ಯತೀತವಾಗಿಲ್ಲದಿದ್ದರೆ, ಶಿಕ್ಷಕರಲ್ಲೇ ವೈಚಾರಿಕತೆ ಇಲ್ಲದಿದ್ದರೆ ಮಕ್ಕಳಲ್ಲಿ ಜ್ಞಾನದ ವಿಕಾಸ ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜನಮನ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕೇಂದ್ರ ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಸಭಿಕರ ಪ್ರಶ್ನೆಗಳಿಗೆ ಉತ್ತರಿಸಿದರು. ಜಾಗತಿಕ ಮಟ್ಟದ ಬಂಡವಾಳವನ್ನು ಆಕರ್ಷಿಕಸಬೇಕು ಎಂದು ಶಾಂತಿ, ಸುವ್ಯವಸ್ಥೆ ಮತ್ತು ಉದ್ಯಮ ಸ್ನೇಹಿ ವಾತಾವರಣ ಇರಬೇಕು. ಬಂಡವಾಳ ಹೂಡಿಕೆಯಿಂದ ಉದ್ಯೋಗ ಸೃಷ್ಟಿಯಾಗಿ ಜಿಡಿಪಿ ಹೆಚ್ಚುತ್ತದೆ. ಹೀಗಾಗಿ ಜಾತಿ-ಧರ್ಮದ ಸಂಘರ್ಷ ಇಲ್ಲದ ಶಾಂತಿಯುತ ಸಮಾಜ ಇರಬೇಕು ಎಂದರು. ನಮ್ಮ ಯುವ ಸಮೂಹದ ಶಕ್ತಿ ಮತ್ತು ಚೈತನ್ಯ ದುರುಪಯೋಗ ಆಗಬಾರದು, ಜಾತಿ-ಧರ್ಮದ ಹೆಸರಲ್ಲಿ ಗಲಭೆಗಳಿಗೆ ಯುವ ಸಮೂಹ ದುರ್ಬಳಕೆ ಆಗುವುದನ್ನು ತಪ್ಪಿಸುವ ರೀತಿಯಲ್ಲಿ ನಮ್ಮ ಸರ್ಕಾರ ನೀತಿ ರೂಪಿಸಿದೆ. ಇದಕ್ಕಾಗಿ ಕೌಶಲ್ಯ ತರಬೇತಿ ಜತೆಗೆ ನಿರುದ್ಯೋಗಿ ಯುವ ಸಮೂಹಕ್ಕೆ 24 ತಿಂಗಳ ಕಾಲ ಯುವನಿಧಿ ನೀಡಲು…

Read More

ಪ್ರಪಂಚದಾದ್ಯಂತ ಇರುವ ಕನ್ನಡಿಗರನ್ನು ಒಂದುಗೂಡಿಸುವ ಮಹತ್ವದ ಕಾರ್ಯಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದಲ್ಲಿರುವ ಮೆಲ್ಬರ್ನ್ ನಗರದಲ್ಲಿ ಸ್ಥಾಪಿಸಲಾದ ಕನ್ನಡ ಭವನವನ್ನುಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಇಂದು ಲೋಕಾರ್ಪಣೆ ಮಾಡಿದರು. ಆಸ್ಟ್ರೇಲಿಯಾದಲ್ಲಿರುವ ಕನ್ನಡಿಗರ ಆಹ್ವಾನ ಮೇರೆಗೆ ಅಲ್ಲಿ ನಡೆಯುತ್ತಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತೆರಳಿದ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಆಸ್ಟ್ರೇಲಿಯಾದ ಮೆಲ್ಬರ್ನ್ ನಗರದಲ್ಲಿ ನೆಲೆ ನಿಂತ ಕನ್ನಡಿಗರು ನಿರ್ಮಾಣ ಮಾಡಿರುವ ಕನ್ನಡ ಭವನವನ್ನು ಇಂದು ಉದ್ಘಾಟನೆ ಮಾಡಿದರು. ಕನ್ನಡದ ಕಾರ್ಯಚಟುವಟಿಕೆಗಳನ್ನು ವಿದೇಶದಲ್ಲಿಯೂ ವಿಸ್ತರಿಸುತ್ತಿರುವ ಅನಿವಾಸಿ ಕನ್ನಡಿಗರ ಭಾಷಾ ಪ್ರೇಮ ಹಾಗೂ ನಾಡು ನುಡಿಯ ಮೇಲಿರುವ ಅಭಿಮಾನ ಈ ಕನ್ನಡ ಭವನವನ್ನು ನೋಡಿದಾಗ ಅರ್ಥವಾಗುತ್ತದೆ. ಕನ್ನಡ ಸಾಹಿತ್ಯ ಪರಿಷತ್ತು ವಿದೇಶದಲ್ಲಿ ಇರುವ ಕನ್ನಡ ಸಂಘಗಳನ್ನು ಪರಿಷತ್ತಿನ ಅಮಗ ಸಂಸ್ಥೆಯನ್ನಾಗಿಸಿಕೊಂಡು ವಿದೇಶದಲ್ಲಿಯೂ ಕನ್ನಡ ಕಟ್ಟುವ ಕಾಯಕಲ್ಪದಲ್ಲಿ ತೊಡಗಿಕೊಳ್ಳಲಿದೆ. ರಾಜ್ಯದಲ್ಲಿ ಅನಿವಾಸಿ ಕನ್ನಡಿಗರ…

Read More

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವ ಘಟನೆ ಯಲಹಂಕ ತಾಲೂಕಿನ ಅನಂತಪುರ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಪರಿಣಾಮ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅಪಘಾತದ ವಿಡಿಯೋ ಪಕ್ಕದಲ್ಲೇ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದ್ದು, ಡಿಕ್ಕಿ ಹೊಡೆದ ಬೈಕ್‌ನಲ್ಲಿದ್ದವರಿಗೂ ಗಾಯಗಳಾಗಿವೆ. ರಾಮಗೊಂಡನಹಳ್ಳಿ ಕಡೆಯಿಂದ ದ್ವಿಚಕ್ರ ವಾಹನದಲ್ಲಿ (ಸ್ಕೂಟಿ) ಕಾಲೇಜು ವಿದ್ಯಾರ್ಥಿನಿ ಬರುತ್ತಿದ್ದು ಇದೇ ಸಮಯಕ್ಕೆ ಮತ್ತೊಂದು ಬೈಕನಲ್ಲಿ ಎದುರು ಬಂದ ಇಬ್ಬರು ಯುವಕರು ಅಡ್ಡಾ- ದಿಡ್ಡಿ ಬಂದು ನೋಡ ನೋಡುತ್ತಿದ್ದಂತೆ ವಿದ್ಯಾರ್ಥಿನಿಯ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸದ ಭಯಾನಕ ದೃಶ್ಯ ಪಕ್ಕದಲ್ಲಿದ್ದ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತಕ್ಕೆ ಒಳಗಾದ ಯುವಕರು ರಾಮಗೊಂಡನಹಳ್ಳಿ ಗ್ರಾಮದವರು ಎಂದು ತಿಳಿದು ಬಂದಿದೆ. ಈ ಸಂಬಂಧ ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC…

Read More

ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆ ವೇಳೆ ವ್ಯಾಪಕ ಹಿಂಸಾಚಾರ ನಡೆದಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಪಡೆಗಳು ವಿಫಲವಾಗಿವೆ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ. ಕೂಚ್ ಬೆಹಾರ್ ಜಿಲ್ಲೆಯ ದಿನಾಟಾದಲ್ಲಿ, ಬಾರಾವಿಟಾ ಸರ್ಕಾರಿ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತಪೆಟ್ಟಿಗೆಗಳನ್ನು ಧ್ವಂಸಗೊಳಿಸಿ ಮತಪತ್ರಗಳಿಗೆ ಬೆಂಕಿ ಹಚ್ಚಲಾಯಿತು. ಬಾರ್ನಾಚಿನಾ ಪ್ರದೇಶದ ಮತ್ತೊಂದು ಮತಗಟ್ಟೆಯಲ್ಲಿ ಸ್ಥಳೀಯರು ಫೇಕ್ ಮತದಾನ ಮಾಡಲಾಗಿದೆ ಎಂದು ಆರೋಪಿಸಿ ಮತಯಂತ್ರಗಳ ಜತೆಗೆ ಮತಪೆಟ್ಟಿಗೆಗೆ ಬೆಂಕಿ ಹಚ್ಚಿದ್ದಾರೆ. ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ಒತ್ತಾಯಿಸಿ ವಿವಿಧ ಪ್ರದೇಶಗಳಲ್ಲಿ ಪ್ರತಿಭಟನೆಗಳೂ ನಡೆದಿವೆ. ನಂದಿಗ್ರಾಮದಲ್ಲಿ ಮಹಿಳಾ ಮತದಾರರು ತಮ್ಮ ಕೈಯಲ್ಲಿ ವಿಷದ ಬಾಟಲಿಗಳೊಂದಿಗೆ ಪೊಲೀಸ್ ಅಧಿಕಾರಿಯನ್ನು ಘೇರಾವ್ ಮಾಡಿ, ಪ್ರದೇಶದಲ್ಲಿ ಕೇಂದ್ರ ಪಡೆ ನಿಯೋಜಿಸಬೇಕೆಂದು ಒತ್ತಾಯಿಸಿದರು. ಇದೆಲ್ಲದರ ನಡುವೆ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರು ಉತ್ತರ 24 ಪರಗಣದ ವಿವಿಧ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡು ಹಿಂಸಾಚಾರದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ದೂರುಗಳನ್ನು ಆಲಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More