Author: admin

ಸರಗೂರು:  ಕೆಎಸ್‌ ಆರ್‌ ಟಿಸಿ ಬಸ್‌ ನಿಯಂತ್ರಣ ತಪ್ಪಿ  ದೊಡ್ಡ ಕೆರೆಗೆ ಉರುಳಿಬಿದ್ದು, ಬಸ್‌ ನಲ್ಲಿ ಪ್ರಯಾಣಿಸುತ್ತಿದ್ದ 25 ಮಂದಿಯಲ್ಲಿ 21 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ ಆರು ಮಂದಿ ಸ್ಥಿತಿ ಗಂಭೀರವಾಗಿದೆ. ಪಟ್ಟಣದಿಂದ ಯಡಿಯಾಲ ಮಾರ್ಗವಾಗಿ ಕಾಡು ಬೇಗೂರಿಗೆ ತೆರಳುತ್ತಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ಚಾಲಕ ನಿಯಂತ್ರಣದಿಂದ   ಬೊಂತೇಗಾಲದ ಕೆರೆಗೆ ಉರುಳಿ ಬಿದ್ದಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಸರಗೂರಿನಿಂದ ಕಾಡುಬೇಗೂರು–ಕುರ್ಣೆಗಾಲಕ್ಕೆ ಗುರುವಾರ ರಾತ್ರಿ ತೆರಳುತ್ತಿದ್ದ ಬಸ್(ಕೆಎ11ಎ- 0333)ನಲ್ಲಿ 25 ಮಂದಿ ತೆರಳುತ್ತಿದ್ದರು. ಇದರಲ್ಲಿ ನಾಲ್ಕು ಮಂದಿಗೆ ಗಂಭೀರ ಗಾಯವಾಗಿದೆ. ಚಾಲಕ ರವೀಶ್, ಕಂಡಕ್ಟರ್ ಗಣೇಶ್ ಸೇರಿದಂತೆ ಉಳಿದವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸರಗೂರಿನ ಸರ್ಕಾರಿ ಆಸ್ಪತ್ರೆ, ಎಚ್.ಡಿ.ಕೋಟೆ ಹಾಗೂ ಮೈಸೂರಿಗೆ ಸ್ಥಳಾಂತರಿಸಲಾಗಿದೆ. ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿಗಳ ನೆರವಿನಿಂದ ಗಾಯಗಳನ್ನು ಬಸ್‌ ನಿಂದ ಹೊರ ತೆಗೆದು ಆಸ್ಪತ್ರೆಗೆ ಕಳುಹಿಸಲಾಗಿದೆ. ಸ್ಥಳಕ್ಕೆ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಶರತ್, ಬಿ.ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಚಂದ್ರಶೇಖರ್ ಭೇಟಿ ನೀಡಿ…

Read More

ಬೆಂಗಳೂರು:  ಕಿರುತೆರೆ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿಗೆ ಪತಿಯೇ ಚಾಕು ಇರಿದ ಘಟನೆ ನಡೆದಿದೆ. ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್‌ನಲ್ಲಿ ಈ ಘಟನೆ ಜುಲೈ 4ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶ್ರುತಿ ಚಿಕಿತ್ಸೆ ಪಡೆಯುತ್ತಿದ್ದಾರೆ.  20 ವರ್ಷದ ಹಿಂದೆ ಅಂಬರೀಶ್ ಎಂಬಾತನ ಪ್ರೀತಿಸಿ ಶ್ರುತಿ ಮದುವೆಯಾಗಿದ್ದರು. ಮದುವೆಯಾಗಿ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇತ್ತೀಚೆಗೆ ವಿವಿಧ ವಿಚಾರಕ್ಕೆ ಸಂಬಂಧಿಸಿದಂತೆ ಪತಿ ಪತ್ನಿಯ ನಡುವೆ ಜಗಳ ನಡೆಯುತ್ತಿತ್ತು ಎಂದು ಹೇಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಳಗಾವಿ: ಇನ್ಸ್ಟಾಗ್ರಾಮ್‌ ನಲ್ಲಿ ಪತ್ನಿಗೆ ಅಶ್ಲೀಲ ಫೋಟೋ ಕಳುಹಿಸಿದ್ದ ಯುವಕನಿಗೆ ಹಾಸ್ಯನಟ ಸಂಜು ಬಸಯ್ಯ ತಕ್ಕಪಾಠ ಕಲಿಸಿದ್ದಾರೆ. ಸಂಜು ಬಸಯ್ಯ ಅವರ ಪತ್ನಿ ನಟಿ ಪಲ್ಲವಿ ಸಂಜು ಬಸಯ್ಯ  ಅವರಿಗೆ ವಿಜಯನಗರ ಮೂಲದ ಮನೋಜ್ ಎಂಬ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಯುವಕ ಇನ್ಸ್ಟಾಗ್ರಾಮ್‌ ಮೂಲಕ ಅಶ್ಲೀಲ ಸಂದೇಶ ಕಳುಹಿಸಿದ್ದ. ಇದು ಗಮನಕ್ಕೆ ಬಂದ ತಕ್ಷಣವೇ ಸಂಜು ಬಸಯ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ತಕ್ಷಣವೇ ಪೊಲೀಸರು  ಕಿಡಿಗೇಡಿ ಯುವಕನನ್ನು ಪತ್ತೆ ಮಾಡಿ ಠಾಣೆಗೆ ಕರೆತಂದು ಸರಿಯಾದ ಬುದ್ಧಿ ಕಲಿಸಿದ್ದಾರೆ. ಬಳಿಕ ಯುವಕನ ಭವಿಷ್ಯ ಹಾಳಾಗಬಾರದು ಎನ್ನುವ ಕಾರಣಕ್ಕೆ  ಯುವಕನಿಗೆ ಬುದ್ಧಿ ಹೇಳಿ ಕಳುಹಿಸಿಕೊಟ್ಟಿದ್ದಾರೆ. ಈ ಘಟನೆಯ ಬೆನ್ನಲ್ಲೇ  ಕ್ಷಮೆ ಯಾಚಿಸಿದ ಆರೋಪಿ ಮನೋಜ್ ನಾನು ಬಹಳ ದಿವಸದಿಂದ ಇನ್‌ ಸ್ಟಾಗ್ರಾಂ ಬಳಸುತ್ತಿದ್ದೆ. ಪಲ್ಲು ಸಂಜು ಅಫಿಷಿಯಲ್ ಖಾತೆಗೆ ಕೆಟ್ಟ ಕಾಮೆಂಟ್ ಹಾಗೂ ಅಶ್ಲೀಲ ವಿಡಿಯೋ ಕಳುಹಿಸಿದ್ದೆ. ಈ ಬಗ್ಗೆ ಸಂಜು ಬಸಯ್ಯ ಅವರು ಬೈಲಹೊಂಗಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ನನ್ನನ್ನ ಕರೆಸಿ,…

Read More

ಬೀದರ್: ಸುಧಾಕರ ಕೊಳ್ಳುರ ಅವರಿಗೆ ವಿವಿಧ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಕನ್ನಡದ ಪ್ರತಿಷ್ಠಿತ ನ್ಯೂಸ್ ಚಾನೆಲ್ ನ ‘ಯುವರತ್ನ ಅವಾರ್ಡ್ 2025’ ನೀಡಿ ಗೌರವಿಸಿ ಪ್ರೋತ್ಸಾಹಿಸಲಾಯಿತು. ಬೆಂಗಳೂರಿನ ಫೋರ್ ಸಿಜನ್ಸ್ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ, ವಿಧಾನಭೆ ಸಭಾಧ್ಯಕ್ಷ ಯು.ಟಿ.ಖಾದರ್, ಸಚಿವ ರಾಮಲಿಂಗ ರೆಡ್ಡಿ, ಶಾಸಕ ಸಿ.ಟಿ.ರವಿ, ಖ್ಯಾತ ನಟ ಅಜಯ್ ರಾವ್, ಯುವರಾಜಕುಮಾರ್, ಹಾಸ್ಯನಟ ಚಿಕ್ಕಣ್ಣ, ನಟಿ ಸುಧಾರಾಣಿ ಹಾಗೂ ಸಂಪಾದಕ ರವಿ ಎಸ್. ಅವರು ಇದ್ದರು. ರಾಜ್ಯದ ವಿವಿಧ ಭಾಗಗಳ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುವ ಜೀ ಕನ್ನಡನ್ಯೂಸ್ ನ ವೇದಿಕೆಯಲ್ಲಿ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗಡಿ ಗ್ರಾಮ ಕೊಳ್ಳುರನಲ್ಲಿ ಜನಿಸಿದ ಸುಧಾಕರ ಕೊಳ್ಳುರ ಅವರ ದಶಕಗಳ ಸಾಮಾಜಿಕ ಕಾರ್ಯಗಳನ್ನು ಗುರುತಿಸಿ ಕಾಂಗ್ರೆಸ್ ಪಕ್ಷದಲ್ಲಿ ಯುವ ಕ್ರಾಂತಿಯನ್ನೆ ಎಬ್ಬಿಸಿರುವುದನ್ನು ಪರಿಗಣಿಸಿ ಪ್ರಶಸ್ತಿ ನೀಡಿರುವುದಕ್ಕೆ ಸುಧಾಕರ ಸಂತಸ ವ್ಯಕ್ತಪಡಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಬೆಳಗಾವಿ: ರಜೆಯಲ್ಲಿ ಊರಿಗೆ ಬಂದಿದ್ದ ಯೋಧ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿ ನಗರದ ಅನಗೋಳದ ಬಜಾರ್‌ ನಲ್ಲಿ ನಡೆದಿದೆ. ಇಬ್ರಾಹಿಂ ದೇವಲಾಪುರ (37) ಮೃತಪಟ್ಟ ಯೋಧ ಆಗಿದ್ದು, ಇವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ರಜೆಯ ಹಿನ್ನೆಲೆ ಇಬ್ರಾಹಿಂ ಊರಿಗೆ ಬಂದಿದ್ದರು. ಅನಗೋಳದ ಬಜಾರ್‌ ಗೆ ತೆರಳಿದ್ದ  ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾದ ಅವರು ಕುಸಿದು ಬಿದ್ದಿದ್ದಾರೆ. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲು ಯತ್ನಿಸಲಾಯಿತು. ಆದರೆ ಆಸ್ಪತ್ರೆಯ ದಾರಿ ಮಧ್ಯೆ ಅವರು ನಿಧನರಾಗಿದ್ದಾರೆ. ಎದೆನೋವಿನಿಂದ ಯೋಧ ಕುಸಿದು ಬೀಳುತ್ತಿರುವ ದೃಶ್ಯ  ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಕೊರಟಗೆರೆ: ಗ್ರಾಮೀಣ ಭಾಗದ ಬಡ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡುವ ಸಲುವಾಗಿ ನಮ್ಮ ಶಾಲೆಯ ಪ್ರತಿಯೊಬ್ಬ ಶಿಕ್ಷಕರು ತಮ್ಮದೇ ಆದ ಶ್ರಮ ಹಾಕುತ್ತಿದ್ದಾರೆ ಎಂದು  ಆಡಳಿತ ಮಂಡಳಿಯ ಇಸ್ಮಾಯಿಲ್ ಜಬೀವೂಲ್ಲಾ ತಿಳಿಸಿದರು. ತಾಲೂಕಿನ ಹೊಳವನಹಳ್ಳಿ ಹೋಬಳಿಯ ಅಕ್ಕಿರಾಂಪುರ ಗ್ರಾಮದ ಕಾರ್ಡಿನಲ್ ಸ್ಕೂಲ್‌ನಲ್ಲಿ ಏರ್ಪಡಿಸಲಾಗಿದ್ದ ಎಲ್‌ ಕೆಜಿ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಗ್ರಾಮೀಣ ಭಾಗದ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ಎಷ್ಟೋ ಮಕ್ಕಳು ಇಂದು ದೊಡ್ಡ ದೊಡ್ಡ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಮ್ಮ ಶಾಲೆಯಲ್ಲೂ ಸಹ ಗುಣ ಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಅಕ್ಷರಾಭ್ಯಾಸ ಎನ್ನವುದು ಮಕ್ಕಳಿಗೆ ಶಾಲೆಯಲ್ಲಿ ಮೊದಲ “ಅ” ಎನ್ನವ ಪದದಿಂದ ಪ್ರಾರಂಭ ಮಾಡುವುದು ಮುಂದಿನ ಕಲಿಕೆಗೆ ಮುನ್ನುಡಿ ಬರೆಯಲಿದೆ ಎಂದು ಹೇಳಿದರು. ಮುಖ್ಯ ಶಿಕ್ಷಕಿ ಎಚ್.ವೈ.ಮಂಜಮ್ಮ ಮಾತನಾಡಿ, ನಮ್ಮ ಹಿಂದೂ ಸಂಸ್ಕೃತಿ ಅಥವಾ ಶಾಸ್ತ್ರದ ಪ್ರಕಾರ ಮಕ್ಕಳಿಗೆ ಅನೇಕ ಶಾಸ್ತ್ರಗಳಿವೆ ನಾಮಕರಣ, ಅನ್ನಶಾಸ್ತ್ರ, ಅಕ್ಷರಾಭ್ಯಾಸ, ಎಂಬುದು ಕೂಡ ಪದ್ದತಿಯಲ್ಲಿದೆ. ನಮ್ಮ ಶಾಲೆಗೆ ದಾಖಲಾದ ಎಲ್‌ ಕೆಜಿ…

Read More

ಸರಗೂರು:  ಗುರು ಪೂರ್ಣಿಮಾವನ್ನು ಆಷಾಢ ಮಾಸದ ಹುಣ್ಣಿಮೆಯ ದಿನದಂದು ಆಚರಿಸಲಾಗುತ್ತದೆ. ಗುರು ಪೂರ್ಣಿಮಾವನ್ನು ಗುರು ಮತ್ತು ಶಿಷ್ಯರ ನಡುವಿನ ಬಾಂದವ್ಯವನ್ನು ಗೌರವಿಸುವುದಕ್ಕಾಗಿ ಆಚರಿಸಲಾಗುವುದು ಎಂದು ಪಡವಲು ವೀರಕ್ತ ಮಠದ ಮಹದೇವಸ್ವಾಮಿಗಳು ತಿಳಿಸಿದರು. ಪಟ್ಟಣದ 11 ವಾರ್ಡಿನ ಬಿಡಗಲು ಗ್ರಾಮದ ವ್ಯಾಪ್ತಿಯ ಪಡವಲು ವೀರಕ್ತ ಮಠದಲ್ಲಿ ಗುರುವಾರದಂದು ಗುರು ಪೂರ್ಣಿಮೆ ಪೂಜೆ ಕಾರ್ಯಕ್ರಮ ಹಾಗೂ ಕಾಳ ಓಡಯ ಗುರುಗಳ ಗದ್ದಿಗೆ ಮತ್ತು ವೀರಭದ್ರೇಶ್ವರ ಸ್ವಾಮಿಗೆ ರುದ್ರಾಭಿಷೇಕ ಬಿಲ್ವಾರ್ಚನೆ ದಾಸೋಹ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿ ಮಾತನಾಡಿದರು. ಮಲೈ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಕಾರ್ಯನಿರ್ವಾಹಣಾಧಿಕಾರಿ ಎ ಇ ರಘು ಮಾತನಾಡಿ, ಗುರುಗಳನ್ನು ದೇವರೆಂದು ಪೂಜಿಸುವ ಪ್ರತಿಯೊಬ್ಬ ವ್ಯಕ್ತಿಗೂ ಮೀಸಲಿಡಲಾದ ದಿನವಾಗಿದೆ. ಪ್ರತಿಯೊಬ್ಬರ ಬದುಕಿನಲ್ಲೂ ಗುರುವಿನ ಮಹತ್ವ ತುಂಬಾನೇ ವಿಶೇಷವಾಗಿರುತ್ತದೆ. ಗುರು ನಮಗೆ ಪ್ರತಿಯೊಂದು ಹಂತದಲ್ಲೂ ಜ್ಞಾನವನ್ನು ಮತ್ತು ಮಾರ್ಗದರ್ಶನವನ್ನು ನೀಡುವವನಾಗಿದ್ದಾನೆ. ಅವರು ನಮಗೆ ಪೋಷಕರಾಗಿದ್ದರು ಸರಿ, ಗುರುಗಳಾಗಿದ್ದರು ಸರಿ ನಾವೆಲ್ಲರೂ ಗುರು ಪೂರ್ಣಿಮೆಯಂದು ಅವರನ್ನು ಸ್ಮರಿಸುತ್ತೇವೆ ಎಂದು ತಿಳಿಸಿದರು.…

Read More

ಸರಗೂರು:  12ನೇ ಶತಮಾನದಲ್ಲಿಯೇ ಶರಣ ಹಡಪದ ಅಪ್ಪಣ್ಣನವರಿಗೆ ನಿಜಸುಖಿ ಎಂದು ಬಸವಣ್ಣನವರು ಕರೆಯುತ್ತಿದ್ದರು. ಅಪ್ಪಣ್ಣನವರು ಅಂಗೈಯಲ್ಲಿ ಲಿಂಗ ಇಟ್ಟುಕೊಂಡು ಲಿಂಗವನ್ನು ನೋಡಿ, ಅದರಲ್ಲಿಯೇ ತಲ್ಲೀನರಾಗಿರುತ್ತಿದ್ದರು ಎಂದು ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ವೈ.ಡಿ.ರಾಜಣ್ಣ  ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗುರುವಾರದಂದು ಹಡಪದ ಅಪ್ಪಣ್ಣ ಜಯಂತಿಯನ್ನು ಹಮ್ಮಿಕೊಂಡು ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ ಪೋಟೋ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು. ಡೋಹರ ಡಕ್ಕಯ್ಯ, ಅಂಬಿಗರ ಚೌಡಯ್ಯ, ಹಡಪದ ಅಪ್ಪಣ್ಣ, ಮೋಳಿಗೆಯ ಮಾರಯ್ಯ, ಮೇಧಾರ ಕೇತಯ್ಯ, ಸಮಗಾರ ಹರಳಯ್ಯ, ಸೊನ್ನಲಗದ ಸಿದ್ದರಾಮ ಸೇರಿದಂತೆ ಜಗತ್ತಿನ ಎಲ್ಲ ಧರ್ಮದ ಶರಣರಿಗೆ ಬಸವಣ್ಣನವರು 12ನೇ ಶತಮಾನದ ಅನುಭವ ಮಂಟಪದಲ್ಲಿ ಅವಕಾಶ ಕಲ್ಪಿಸಿದ್ದರು ಎಂದರು. ಸವಿತಾ ಸಮಾಜ ತಾಲೂಕು ಅಧ್ಯಕ್ಷ ನರಸಿಂಹ ಮಾತನಾಡಿ, ತಾಲ್ಲೂಕು ಅಧಿಕಾರಿಗಳು ಹಾಗೂ ಶಾಸಕರು ನಮ್ಮ ಸಮಾಜವನ್ನು ಕಡೆಗಣಿಸುತ್ತಿದ್ದಾರೆ . ಐದು ಅವಧಿಯಲ್ಲಿ ಐದು ಶಾಸಕರನ್ನು ನೋಡಿಕೊಂಡು ಬರುತ್ತಿದ್ದೇವೆ. ಆದರೆ ಸಮಾಜಕ್ಕೆ ಸಮುದಾಯದ ಭವನಕ್ಕೆ ಜಾಗವನ್ನು ನೀಡಲು…

Read More

ಸರಗೂರು:  ಸದಾ ಒತ್ತಡ ಜೀವನದಲ್ಲಿರುವ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಕುಟುಂಬದವರು ತಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕಡೆಗೆ ಗಮನ ಹರಿಸುವುವಲ್ಲಿ ಅಸಹಾಯಕರಾಗಿತ್ತಾರೆ ಎಂದು ಸರಗೂರು ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಆರ್. ಕಿರಣ್ ತಿಳಿಸಿದರು. ಪಟ್ಟಣದ  ಪೊಲೀಸ್ ಠಾಣೆಯಲ್ಲಿ, ಪೊಲೀಸ್ ಸಿಬ್ಬಂದಿ ವರ್ಗದವರಿಗೆ ಹಾಗೂ ಅವರ ಕುಟುಂಬದವರಿಗೆ ನಾರಾಯಣ ಕುಮಾರ್  ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಹಾಯದೊಂದಿಗೆ ಕಣ್ಣಿನ ತಪಾಸಣೆ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜನರ ರಕ್ಷಣೆಯಲ್ಲಿ ತೊಡಗಿಸಿಕೊಂಡು ಆರೋಗ್ಯದ ಕಾಳಜಿ ಬಗ್ಗೆ ಹೆಚ್ಚಿನ ಒತ್ತು ನೀಡುವುದಿಲ್ಲ. ಹಾಗಾಗಿ ಮೈಸೂರು ಜಿಲ್ಲಾ ಪೊಲೀಸ್ ಇಲಾಖೆ ಅಧಿಕಾರಿಗಳ ಆದೇಶದ ಮೇರೆಗೆ ನಮ್ಮ ಠಾಣೆಯ ಸಿಬ್ಬಂದಿಗಳು ಹಾಗೂ ಕುಟುಂಬದವರಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು ಎಂದು ತಿಳಿಸಿದರು. ರಸ್ತೆಯಲ್ಲಿ ನಿಂತು ಕರ್ತವ್ಯ, ಒತ್ತಡದ ಮಧ್ಯೆ ಕೆಲಸ, ಸಮಯ ಮೀರಿ ಆಹಾರ ಸೇವನೆ ಮುಂತಾದ ಕಾರಣಗಳಿಂದ ಪೊಲೀಸ್ ಸಿಬ್ಬಂದಿ ತಮ್ಮ ಆರೋಗ್ಯ ರಕ್ಷಣೆ ಮಾಡಿಕೊಳ್ಳುವುದು ಕಷ್ಟಕರವಾಗುತ್ತದೆ.…

Read More

ಪಾವಗಡ:  ರಾಷ್ಟ್ರೀಯ ಮಹಾ ಮುಷ್ಕರದ ಅಂಗವಾಗಿ ಪಾವಗಡ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆಗೆ ಕಾರ್ಮಿಕರು, ನೌಕರರು, ರೈತ ಸಂಘಟನೆಗಳು ಧ್ವನಿ ನೀಡಿದವು. ಪಾವಗಡದ ಶನಿ ಮಹಾತ್ಮ ವೃತ್ತದಲ್ಲಿ ಬುಧವಾರ ಮಧ್ಯಾಹ್ನ 2 ಗಂಟೆಗೆ ಆರಂಭವಾದ ಪ್ರತಿಭಟನೆಯಲ್ಲಿ ಸಾವಿರಕ್ಕೂ ಅಧಿಕ ಜನರು ಪಾಲ್ಗೊಂಡಿದ್ದರು. ಕನಿಷ್ಠ ವೇತನ ನೀಡಬೇಕು, ಗುಜರಾತ್ ಹೈಕೋರ್ಟ್ ಆದೇಶದಂತೆ ಅಂಗನವಾಡಿ ನೌಕರರನ್ನು ಕಾಯಂಗೊಳಿಸಬೇಕು, ಕಾರ್ಮಿಕ ಸಂಹಿತೆಯನ್ನು ರದ್ದುಗೊಳಿಸಬೇಕು, ಗುತ್ತಿಗೆ ಕಾರ್ಮಿಕರ ಸಮಸ್ಯೆ ಬಗೆಹರಿಸಬೇಕು ಹಾಗೂ ಉದ್ಯೋಗ ಸೃಷ್ಟಿಸಬೇಕು ಎಂಬಂತಹ ಬೇಡಿಕೆಗಳೊಂದಿಗೆ ಈ ಪ್ರತಿಭಟನೆ ನಡೆಯಿತು. ಪ್ರವಾಸಿ ಮಂದಿರದಿಂದ ಶನಿ ಮಹಾತ್ಮ ವೃತ್ತದವರೆಗೆ ನಡೆದ ರ್ಯಾಲಿಯಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ಸದಸ್ಯರು, ಅಂಗನವಾಡಿ ಹಾಗೂ ಬಿಸಿಯೂಟ ನೌಕರರು, ಗ್ರಾಮ ಪಂಚಾಯತಿ ನೌಕರರು, ಆಶಾ ಕಾರ್ಯಕರ್ತೆಯರು, ರೈತ ಸಂಘದ ಪದಾಧಿಕಾರಿಗಳು ಸಕ್ರಿಯವಾಗಿ ಭಾಗವಹಿಸಿದರು. ಶನಿ ಮಹಾತ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಲಾಗಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಮಧ್ಯಾಹ್ನ 3 ಗಂಟೆಗೆ ಪೊಲೀಸರ ದೌತ್ಯದಲ್ಲಿ ರೈತ ಸಂಘದ ಅಧ್ಯಕ್ಷ ಪೂಜಾರಪ್ಪ, ಕಾರ್ಮಿಕ…

Read More