Subscribe to Updates
Get the latest creative news from FooBar about art, design and business.
- ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
- ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ: ನಗನಗದು ದೋಚಿ ಪರಾರಿ
- ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
- ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
- ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
- ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
- ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
- ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Author: admin
ಜೈನಮುನಿಗಳ ಹತ್ಯೆಗೆ ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಾರಾಯಣ ಮಾಳಿ, ಹುಸೇನ್ ಢಾಲಾಯತ್ ಬಂಧಿತ ಆರೋಪಿಗಳು. ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ನಾರಾಯಣ ಮಾಳಿ, ಜೈನಮುನಿ ಆಶ್ರಮದ ಬಳಿ ಜಮೀನು ಲೀಸ್ ಪಡೆದು ಉಳುಮೆ ಮಾಡುತ್ತಿದ್ದ. ಇದೇ ವೇಳೆ ಜೈನಮುನಿಗೆ ಆಪ್ತನಾಗಿದ್ದು, ಆಶ್ರಮದಲ್ಲಿ ಸಣ್ಣಪುಟ್ಟ ಕೆಲಸ ಮಾಡಿ ಜೈನಮುನಿಗಳ ವಿಶ್ವಾಸಗಳಿಸಿದ್ದ. ವೈಯಕ್ತಿಕ ಕಾರಣಕ್ಕೆ ಮಾಳಿ ಜೈನಮುನಿಗಳ ಬಳಿ 6 ಲಕ್ಷ ರೂ. ಹಣ ಪಡೆದಿದ್ದ. ಸಾಲದ ಹಣ ವಾಪಸ್ ಕೇಳಿದ್ದಕ್ಕೆ ಜೈನಮುನಿಗಳ ಕೊಲೆಗೈಯಲಾಗಿದೆ ಎನ್ನಲಾಗುತ್ತಿದೆ. ಜು.5ರ ರಾತ್ರಿ ಹಿರೇಕೋಡಿ ನಂದಿಪರ್ವತ ಆಶ್ರಮದ ಕೋಣೆಯಲ್ಲೇ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ನಡೆದಿದೆ. ವಿದ್ಯುತ್ ಶಾಕ್ ನೀಡಿ ಕತ್ತು ಹಿಸುಕಿ ಹತ್ಯೆ ಮಾಡಿದ್ದು, ಬಳಿಕ ಸ್ನೇಹಿತ ಹುಸೇನ್‌ಗೆ ಕರೆಮಾಡಿ ಕರೆಸಿಕೊಂಡಿದ್ದ. ಇಬ್ಬರು ಮೃತದೇಹ ಕತ್ತರಿಸಿ ಬಟ್ಟೆ ಸುತ್ತಿ ಕೊಳವೆಬಾವಿಗೆ ಎಸೆದಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಬೆಂಗಳೂರು: ಪವಿತ್ರ ಅಮರನಾಥ ಯಾತ್ರೆಗೆ ತೆರಳಿದ್ದ 80 ಮಂದಿ ಕನ್ನಡಿಗರು ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ರಕ್ಷಿಸಿ ಸುರಕ್ಷಿತವಾಗಿ ಮರಳಿ ಕರೆತರಲು ಅಗತ್ಯ ಎಲ್ಲಾ ನೆರವನ್ನು ನೀಡುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗದಗದಿಂದ ತೆರಳಿರುವ 23 ಮಂದಿ ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಮಂದಿರದಿಂದ 6 km ದೂರದಲ್ಲಿರುವ ಪಂಚತಾರ್ನಿ ಟೆಂಟ್‌ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಅಗತ್ಯ ರಕ್ಷಣಾ ಕಾರ್ಯ ಕೈಗೊಳ್ಳುವಂತೆ ತಿಳಿಸಿದ್ದಾರೆ ಗದಗದಿಂದ ಅಮರನಾಥ ಯಾತ್ರೆಗೆ 23 ಯಾತ್ರಿಕರು ಹೋಗಿದ್ದರು. ದೇವರ ದರ್ಶನ ಪಡೆದು ಮರಳಿ ಬರುವ ವೇಳೆ ಗುಡ್ಡ ಕುಸಿತವಾಗಿ ರಸ್ತೆ ಮಧ್ಯೆ ಸಿಲುಕಿದ್ದಾರೆ. ಅಮರನಾಥದಿಂದ ಸುಮಾರು 10 ಕಿಮೀ ದೂರದಲ್ಲಿ ಗುಡ್ಡ ಕುಸಿತವಾಗಿದೆ. ರಸ್ತೆ ಮಧ್ಯೆ ಸಿಲುಕಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲು ರಕ್ಷಣಾ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ ಎನ್ನಲಾಗಿದೆ. ಮಿಲಿಟರಿ ಪಡೆಯಿಂದ ಯಾತ್ರಿಕರನ್ನು ಮರಳಿ ಕರೆತರಲು ಪ್ರಯತ್ನಿಸಲಾಗಿದೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾತ್ರಿಗಳ ಸಹಾಯಕ್ಕೆ…
ಮಧುಗಿರಿ: ಜೀವನದಲ್ಲಿ ಪ್ರಕೃತಿ ಅರಣ್ಯಕ್ಕೆ ಹೆಚ್ಚಿನ ಹೊತ್ತು ನೀಡಿ ಗಿಡ ಮರಗಳನ್ನು ಬೆಳೆಸುವುದರಿಂದ ಶುದ್ಧ ಗಾಳಿ ಸಿಗುತ್ತೆ ಹಾಗೂ ಅತ್ಯುತ್ತಮ ಸ್ಥಿತಿಯಲ್ಲಿ ತಾಪಮಾನವನ್ನು ಕಾಪಾಡಿಕೊಳ್ಳಬಹುದು ಎಂದು ಉಪ ವಿಭಾಗ ಅಧಿಕಾರಿಗಳಾದ ರಿಷಿ ಆನಂದ್ ಹೇಳಿದರು. ರಾಜ್ಯ ಸರಕಾರ ಆದೇಶದಂತೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಅರಣ್ಯ ಇಲಾಖೆ ಮತ್ತು ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮಕ್ಕೆ ಉಪವಿಭಾಗ ಅಧಿಕಾರಿಗಳಾದ ರಿಷಿ ಆನಂದ್ ಸಸಿ ನೆಡುವ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ನಂತರ ಮಾಧ್ಯಮದೊಂದಿಗೆ ಮಾತನಾಡಿ, ಪರಿಸರ ನಮ್ಮೆಲ್ಲರನ್ನು ರಕ್ಷಿಸುತ್ತದೆ ಹಾಗೆ ನಾವು ಪರಿಸರ ಉಳಿಸಲು ಶ್ರಮ ಪಡಬೇಕು. ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಮನುಷ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಲ್ಲರೂ ಗಿಡ ಮರ ಬೆಳೆಸುವುದರಿಂದ ಮಾತ್ರ ಸ್ವಚ್ಛ ಸುಂದರ ಪರಿಸರದ ಬದುಕಾಗುತ್ತದೆ ಎಂದರು. ತಾಲೂಕು ದಂಡಾಧಿಕಾರಿಗಳಾದ ಸಿಬ್ಗತುಲ್ಲಾ ರವರು ಮಾತಾಡಿ, ಆಮ್ಲಜನಕದ ಪ್ರಾಮುಖ್ಯತೆಯನ್ನು ನಾವು ಕಳೆದ ಕೋವಿಡ್ ಸಂದರ್ಭದಲ್ಲಿ ನೋಡಿದ್ದೇವೆ ಆದ್ದರಿಂದ ಸಸಿಗಳನ್ನು ನೆಡುವ ಮೂಲಕ ಮುಂದಿನ ಪೀಳಿಗೆಗೆ…
ತುಮಕೂರು: ಕೆಸರುಮಡು ಎರಡು ಕೋಮಿನ ನಡುವೆ ವೈಷಮ್ಯಕ್ಕೆ ಕಾರಣವಾಗಿದ್ದ ಕರಗಲಮ್ಮದೇವಿ ಪೂಜೆ ವಿಚಾರವನ್ನು ತುಮಕೂರು ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಎರಡು ಕೋಮಿನ ಮುಖಂಡರನ್ನು ಕರೆಸಿ ಶಾಂತಿ ಸಭೆ ಮೂಲಕ ಸಮಾಧಾನಪಡಿಸಿದ್ದಾರೆ. ಸಭೆಯಲ್ಲಿ ಒಬ್ಬರಿಗೊಬ್ಬರು ಗ್ರಾಮದಲ್ಲಿ ಒಗ್ಗಟ್ಟಿನ ಭಾವೈಕ್ಯತೆಯಿಂದಿರಲು ಸೂಚನೆ ನೀಡುವ ಮೂಲಕ ಕರಗಲಮ್ಮ ದೇವಿಗೆ ಊರಿನ ಎಲ್ಲ ಭಾಂದವರು ಸೇರಿ ಪೂಜೆ ನೆರವೇರಿಸಲಾಯಿತು. ಮುಂಜಾಗ್ರತಾ ಕ್ರಮವಹಿಸಿ ಊರಿನ ಎರಡು ಕೋಮಿನ ನಡುವೆ ಬುಗಿಲೆದ್ದ ಸಮಸ್ಯೆಯನ್ನು ಬಗೆಹರಿಸುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಚಿತ್ರರಂಗದ ಬೇಡಿಕೆಯಂತೆಯೇ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲೇ ಸ್ಥಾಪಿಸುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. ಈ ಹಿಂದಿನ ಸರ್ಕಾರದಲ್ಲಿ ಈ ಫಿಲ್ಮ್ ಸಿಟಿಯನ್ನು ಬೆಂಗಳೂರಿಗೆ ವರ್ಗಾಯಿಸುವ ಉದ್ದೇಶ ಹೊಂದಿತು. ಇದೀಗ ಮತ್ತೆ ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ಸ್ಥಾಪನೆ ಮಾಡುವ ಘೋಷಣೆ ಮಾಡಿದ್ದಾರೆ. ಇದರ ಜೊತೆಗೆ ಕನ್ನಡ ಚಿತ್ರರಂಗದ ಇತಿಹಾಸ, ಅದು ಬೆಳೆದು ಬಂದ ಇತಿಹಾಸ ತಿಳಿಸುವ ಸಂಗ್ರಹಾಯಲವನ್ನು ಬೆಂಗಳೂರಿನ ಕಂಠೀರವದಲ್ಲಿರುವ ಡಾ ರಾಜ್ ಕುಮಾರ್ ಸ್ಮಾರಕದ ಬಳಿ ನಿರ್ಮಾಣ ಮಾಡುಲಾಗುವುದು. ಕಳೆದ ಮೂರು ವರ್ಷಗಳಿಂದ ಕನ್ನಡದ ಗುಣಾತ್ಮಕ ಚಿತ್ರಗಳಿಗೆ ಸಹಾಯಧನ ನೀಡುವ ಯೋಜನೆ ಸ್ಥಗಿತಗೊಂಡಿದೆ. ಈ ಹಿನ್ನೆಲೆ ಈ ಯೋಜನೆಗೆ ಆಯ್ಕೆ ಸಮಿತಿ ರಚಿಸಿ ಮತ್ತು ಸಹಾಯ ಧನ ನೀಡಲು ಕ್ರಮ ಕೈಗೊಳ್ಳಲಾಗುವುದು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸಿದ್ಧರಾಮಯ್ಯರ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಯ ಕಲ್ಪನೆ ಇಲ್ಲದ ಬಜೆಟ್ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ. ಎಸ್. ಯಡಿಯೂರಪ್ಪ ಕಿಡಿಕಾರಿದ್ದಾರೆ. ಬಜೆಟ್ ಮೇಲಿನ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿದ ಯಡಿಯೂರಪ್ಪ, 85 ಸಾವಿರ ಕೋಟಿ ಸಾಲ ಮಾಡುತ್ತೇನೆ ಎಂದಿದ್ದಾರೆ. ಈ ಸಾಲದ ಹೊರೆ ರಾಜ್ಯದ ಜನರ ಮೇಲೆ ಬೀಳಲಿದೆ. 3 ಘಂಟೆ ಬಜೆಟ್ ಮಂಡನೆ ಮಾಡಿದ ಸಿಎಂ, ಸುಧೀರ್ಘ ಭಾಷಣದಲ್ಲಿ ಕೇಂದ್ರ ಸರ್ಕಾರ ಹಾಗೂ ಈ ಹಿಂದೆ ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರವನ್ನು ಅನಗತ್ಯವಾಗಿ ಟೀಕಿಸುವುದರಲ್ಲಿ ವ್ಯರ್ಥ ಮಾಡಿದ್ದಾರೆ. ನನ್ನ ಮತ್ತು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಆದ ಬಜೆಟ್ ಮಂಡನೆಯ ಬಗ್ಗೆ ಇಲ್ಲಸಲ್ಲದ್ದನ್ನು ಮಾತನ್ನಾಡಿ, ಸಾಧಿಸಿದ ಪ್ರಗತಿ ಹಾಗೂ ಆರ್ಥಿಕ ಸದೃಢತೆಯನ್ನು ಮರೆಮಾಚಿ ಬಜೆಟ್ ಮಂಡನೆಯ ಪವಿತ್ರ ಸಮಯವನ್ನು ಕೀಳುಮಟ್ಟದ ರಾಜಕಾರಣಕ್ಕೆ ಬಳಸಿಕೊಂಡಿದ್ದು ಖಂಡನೀಯ. ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಎಲ್ಲಾ ಘೋಷಣೆಗಳನ್ನು ಜಾರಿಗೊಳಿಸುತ್ತೇವೆ ಎಂದಿದ್ದ ಕಾಂಗ್ರೆಸ್, ಇಂದು ಯೋಜನೆಗಳ ಅನುಷ್ಠಾನಕ್ಕೆ 52 ಸಾವಿರ ಕೋಟಿ…
ವಿಶ್ವವಿದ್ಯಾಲಯಗಳಲ್ಲಿ/ ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಮಯದಲ್ಲಿ ಶುಲ್ಕಗಳನ್ನು ಪಡೆಯದಿರುವ ಬಗ್ಗೆ ಸುತ್ತೋಲೆ ಹೊರಡಿಸಲಾಗಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಯಿಂದ ಯಾವುದೇ ಕಡ್ಡಾಯ ಶುಲ್ಕ ಪಾವತಿ ಮಾಡುವಂತೆ ಒತ್ತಾಯ ಮಾಡಬಾರದು ಎಂದು ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಶಿವಶಂಕರ್ ನಾಯಕ್. ಎಲ್ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕುಟುಂಬದ ವಾರ್ಷಿಕ ಆದಾಯ ರೂ. 2. 50 ಲಕ್ಷ ಒಳಗಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಮಂಜೂರು ಮಾಡಲಾಗುತ್ತಿದೆ ಎಂದು ಹೇಳಿದೆ. ಸರ್ಕಾರ ಆಯಾಯ ಕೋರ್ಸಿಗೆ ನಿಗದಿ ಮಾಡಿರುವ ಕಾಲೇಜು ಶುಲ್ಕವನ್ನು ಮಾರುಪಾವತಿ ಮಾಡಲಾಗುತ್ತಿದೆ ಹಾಗೂ ಸದರಿ ಮೊತ್ತವನ್ನು ವಿದ್ಯಾರ್ಥಿಯು ತನ್ನ ಖಾತೆಗೆ ಜಮೆಯಾದ ನಂತರದಲ್ಲಿ ಸಂಬಂಧಪಟ್ಟ ಕಾಲೇಜಿಗೆ ಪಾವತಿಸಲು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿರುವ ರಾಜ್ಯದ ಕಾಂಗ್ರೆಸ್ ಸರಕಾರದ 2023 -24ನೇ ಸಾಲಿನ ಆಯವ್ಯಯ ರಾಜ್ಯದ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಪ್ರತಿಕ್ರಿಯಿಸಿದ್ದಾರೆ. ಜನಸಾಮಾನ್ಯರಿಗೆ ಹೊರೆಯಾಗದಂತೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲಾಗಿದೆ. ತನ್ಮೂಲಕ ಸಿದ್ದರಾಮಯ್ಯ ಅವರು, ಗ್ಯಾರಂಟಿ ಯೋಜನೆಗಳ ಕುರಿತು ಟೀಕೆ ಮಾಡುತ್ತಿರುವ ವಿರೋಧ ಪಕ್ಷಗಳ ಬಾಯಿ ಮುಚ್ಚಿಸಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಎಲ್ಲ ಭಾಗಗಳಿಗೂ, ಎಲ್ಲ ಕ್ಷೇತ್ರಗಳಿಗೂ ಹಣ ಒದಗಿಸುವ ಮೂಲಕ ಸಿದ್ದರಾಮಯ್ಯ ಅವರು ತಮ್ಮ 14ನೇ ಬಜೆಟ್ ಮಂಡಿಸಿದ್ದಾರೆ. ಕೇವಲ ಸಂಖ್ಯೆಯಲ್ಲಷ್ಟೇ ಅಲ್ಲ, ವೈಶಿಷ್ಟ್ಯತೆಯಲ್ಲೂ ಸಿದ್ದರಾಮಯ್ಯ ಅವರು ಈ ಬಜೆಟ್ ಮೂಲಕ ದಾಖಲೆ ಬರೆದಿದ್ದಾರೆ ಎಂದು ಚನ್ನರಾಜ ಪ್ರಶಂಸಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಸರಕಾರ ರಾಜ್ಯವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯಲಿದೆ ಎಂದು ಜನಸಾಮಾನ್ಯರಲ್ಲಿ ವಿಶ್ವಾಸ ಮೂಡಿಸುವಲ್ಲಿ ಈ ಬಜೆಟ್ ಯಶಸ್ವಿಯಾಗಿದೆ. ಮುಂದಿನ 5 ವರ್ಷ ಕರ್ನಾಟಕ ಇಡೀ ದೇಶಕ್ಕೆ ಮಾದರಿಯಾಗಿ ಬೆಳವಣಿಗೆ ಹೊಂದಲಿದೆ. ಇತರ ರಾಜ್ಯಗಳೂ…
ದಿ. ಪುನೀತ್ ಸ್ಮರಣಾರ್ಥ ಹಠಾತ್ ಹೃದಯ ಸಂಬಂಧಿ ಸಾವು ತಡೆಯಲು ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆ, ತಾಲ್ಲೂಕು ಆಸ್ಪತ್ರೆಗಳಲ್ಲಿ ಆಟೋಮೇಟೆಡ್ ಎಕ್ಸ್ ಟರ್ನಲ್ ಡೆಫಿಬ್ರಿಲ್ಲೇಟರ್ಸ್ ಅಳವಡಿಕೆಗೆ 6 ಕೋಟಿ ರೂ ಅನುದಾನ ನೀಡಲಾಗುವುದು ಎಂದುಮುಖ್ಯಮಂತ್ರಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವಲಯಕ್ಕೆ ವಿವಿಧ ಯೋಜನೆಗಳು, ಅನುದಾನಗಳನ್ನು ಘೋಷಣೆ ಮಾಡಿದ್ದಾರೆ. 92 ಕೋಟಿ ರೂ ಅನುದಾನ ನೀಡಲಾಗಿದೆ. 23 ಪ್ರಾಥಮಿಕ ಆರೋಗ್ಯ, ರಾಜ್ಯಾದ್ಯಂತ ಹೊಸದಾಗಿ 46 ಡಯಾಲಿಸಿಸ್ ಕೇಂದ್ರಗಳನ್ನು ಆರಂಭಿಸಲು ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು 70 ಕೋಟಿ ಅನುದಾನ ನೀಡಲಾಗಿದೆ. ನವಜಾತ ಶಿಶು, ಮಕ್ಕಳು, ಮಹಿಳೆಯರಲ್ಲಿ ರಕ್ತಹೀನತೆ, ಅಪೌಷ್ಟಿಕತೆ ನಿವಾರಿಸಲು ಸಮಗ್ರ ಪರೀಕ್ಷೆ, ಚಿಕಿತ್ಸೆ ಅರಿವು ಮೂಡಿಸಲು 25 ಕೋಟಿ ಅನುದಾನ ನೀಡಲಾಗಿದೆ. ಆಶಾಕಿರಣ ಕಾರ್ಯಕ್ರಮದಡಿ ಚಿತ್ರದುರ್ಗ, ರಾಯಚೂರು, ಉತ್ತರ ಕನ್ನಡ, ಮಂಡ್ಯ ಜಿಲ್ಲೆಯಲ್ಲಿ 21 ಕೋಟಿ ವೆಚ್ಚದಲ್ಲಿ ನೇತ್ರ ತಪಾಸಣೆ, ಚಿಕಿತ್ಸಾ ಅಭಿಯಾನ ನಡೆಸಲಾಗುವುದು. ಮಧುಮೇಹ, ರಕ್ತದೊತ್ತಡ ರೋಗಿಗಳ ಪತ್ತೆ ಹಚ್ಚಿ ಔಷಧಿ ಮನೆ ಬಾಗಿಲಿಗೆ ತಲುಪಿಸುವ…
ಭಾರತ ಸರ್ಕಾರವು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ನ ಇಂಟರ್ನ್ಯಾಷನಲ್ ಬೋರ್ಡ್‌ನ ವ್ಯಾಪ್ತಿಯನ್ನು ವಿಸ್ತರಿಸಲು ಮತ್ತು ಶಿಕ್ಷಣದಲ್ಲಿ ಜಾಗತಿಕ ಸಹಯೋಗವನ್ನು ಉತ್ತೇಜಿಸಲು ಮಹತ್ವಾಕಾಂಕ್ಷೆಯ ಯೋಜನೆಯನ್ನು ಅನಾವರಣಗೊಳಿಸಿದೆ. ಅಂತರರಾಷ್ಟ್ರೀಯ ಮಾನದಂಡಗಳೊಂದಿಗೆ CBSE ಯ ಅಂತರರಾಷ್ಟ್ರೀಯ ಪಠ್ಯಕ್ರಮದ (CBSE-i) ಪರಿಣಾಮಕಾರಿತ್ವ ಮತ್ತು ಜೋಡಣೆಯನ್ನು ಗುರುತಿಸಿ, CBSE-I ಶಾಲೆಗಳ ಉಪಸ್ಥಿತಿಯನ್ನು 26 ದೇಶಗಳಲ್ಲಿ ಪ್ರಸ್ತುತ 240 ಶಾಲೆಗಳನ್ನು ಮೀರಿ ವಿಸ್ತರಿಸುವ ಗುರಿಯನ್ನು ಸರ್ಕಾರ ಹೊಂದಿದೆ. 2010 ರಲ್ಲಿ ಪರಿಚಯಿಸಿದಾಗಿನಿಂದ, CBSE-i ವಿದೇಶದಲ್ಲಿ ವಾಸಿಸುವ ಭಾರತೀಯ ಕುಟುಂಬಗಳ ಶೈಕ್ಷಣಿಕ ಅಗತ್ಯಗಳನ್ನು ಪೂರೈಸಿದೆ. ಈಗ, ಇತರ ದೇಶಗಳಲ್ಲಿ, ವಿಶೇಷವಾಗಿ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿನ ಶಾಲಾ ಮಂಡಳಿಗಳೊಂದಿಗೆ ಪಾಲುದಾರಿಕೆಯನ್ನು ರೂಪಿಸುವ ಮೂಲಕ CBSE-i ನ ಯಶಸ್ಸನ್ನು ನಿಯಂತ್ರಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈ ಮಂಡಳಿಗಳೊಂದಿಗೆ ಸಹಕರಿಸುವ ಮೂಲಕ, ಭಾರತದಲ್ಲಿ ಶಾಲಾ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಮತ್ತು ಭಾರತೀಯ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ವರ್ಧಿತ ಶೈಕ್ಷಣಿಕ ಅವಕಾಶಗಳನ್ನು ಒದಗಿಸಲು ಸರ್ಕಾರವು ಪ್ರಯತ್ನಿಸುತ್ತದೆ. ಭಾರತವು ಈ ವರ್ಷ G20 ಅಧ್ಯಕ್ಷ ಸ್ಥಾನವನ್ನು…