Author: admin

ಸಿದ್ಧರಾಮಯ್ಯರ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಯ ಕಲ್ಪನೆ ಇಲ್ಲದ ಬಜೆಟ್ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ. ಎಸ್. ಯಡಿಯೂರಪ್ಪ ಕಿಡಿಕಾರಿದ್ದಾರೆ. ಬಜೆಟ್ ಮೇಲಿನ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿದ ಯಡಿಯೂರಪ್ಪ, 85 ಸಾವಿರ ಕೋಟಿ ಸಾಲ ಮಾಡುತ್ತೇನೆ ಎಂದಿದ್ದಾರೆ. ಈ ಸಾಲದ ಹೊರೆ ರಾಜ್ಯದ ಜನರ ಮೇಲೆ ಬೀಳಲಿದೆ. 3 ಘಂಟೆ ಬಜೆಟ್ ಮಂಡನೆ ಮಾಡಿದ ಸಿಎಂ, ಸುಧೀರ್ಘ ಭಾಷಣದಲ್ಲಿ ಕೇಂದ್ರ ಸರ್ಕಾರ ಹಾಗೂ ಈ ಹಿಂದೆ ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರವನ್ನು ಅನಗತ್ಯವಾಗಿ ಟೀಕಿಸುವುದರಲ್ಲಿ ವ್ಯರ್ಥ ಮಾಡಿದ್ದಾರೆ. ನನ್ನ ಮತ್ತು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಆದ ಬಜೆಟ್ ಮಂಡನೆಯ ಬಗ್ಗೆ ಇಲ್ಲಸಲ್ಲದ್ದನ್ನು ಮಾತನ್ನಾಡಿ, ಸಾಧಿಸಿದ ಪ್ರಗತಿ ಹಾಗೂ ಆರ್ಥಿಕ ಸದೃಢತೆಯನ್ನು ಮರೆಮಾಚಿ ಬಜೆಟ್ ಮಂಡನೆಯ ಪವಿತ್ರ ಸಮಯವನ್ನು ಕೀಳುಮಟ್ಟದ ರಾಜಕಾರಣಕ್ಕೆ ಬಳಸಿಕೊಂಡಿದ್ದು ಖಂಡನೀಯ. ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಎಲ್ಲಾ ಘೋಷಣೆಗಳನ್ನು ಜಾರಿಗೊಳಿಸುತ್ತೇವೆ ಎಂದಿದ್ದ ಕಾಂಗ್ರೆಸ್, ಇಂದು ಯೋಜನೆಗಳ ಅನುಷ್ಠಾನಕ್ಕೆ 52 ಸಾವಿರ ಕೋಟಿ…

Read More

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಲಯ ಜಯನಗರ ವಿಧಾನಸಭಾ ಕ್ಷೇತ್ರದ ಜಯನಗರ 4ನೇ ಬ್ಲಾಕ್, 11ನೇ ಮುಖ್ಯ ರಸ್ತೆಯ ಯುವ ಪಥ (ಯುವಕ ಸಂಘ)ದಲ್ಲಿ ಇಂದು ನಡೆದ ನಾಡಪ್ರಭು ಕೆಂಪೇಗೌಡರ 514ನೇ ಜಯಂತಿ ಕಾರ್ಯಕ್ರಮಕ್ಕೆ ಶಾಸಕ ಸಿ. ಕೆ. ರಾಮಮೂರ್ತಿ, ವಲಯ ಆಯುಕ್ತ ಜಯರಾಮ್ ರಾಯಪುರ ರವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ವಲಯ ಆಯುಕ್ತರಾದ ಜಯರಾಮ್ ರಾಯಪುರ ರವರು ಮಾತನಾಡಿ, ಪಾಲಿಕೆ ವತಿಯಿಂದ ನಗರದ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲೂ ಕೆಂಪೇಗೌಡರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು. ಬೆಂಗಳೂರು ನಗರ ಕಟ್ಟಿದಂತಹ ಕೆಂಪೇಗೌಡರನ್ನು ನಾವೆಲ್ಲರೂ ಸ್ಮರಿಸಬೇಕು. ಕಳೆದ 15 ವರ್ಷಗಳಿಂದ ಕೆಂಪೇಗೌಡರಿಗೆ ಗೌರವ ಕೊಡಬೇಕಾದ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ. ದಕ್ಷಿಣ ವಲಯ ವ್ಯಾಪ್ತಿಯ ಲಾಲ್ ಬಾಗ್ ಗಡಿ ಗೋಪುರದಿಂದ ಕೆಂಪಾಂಬುದಿ ಗಡಿ ಗೋಪುರದ ವರೆಗೆ ಸುಮಾರು 13 ಕಿ. ಮೀ ಪ್ರದೇಶದಲ್ಲಿ ಕೆಂಪೇಗೌಡರ ಸರ್ಕ್ಯುಟ್ ಮಾಡಲು ನಿರ್ಧರಿಸಲಾಗಿದ್ದು, 1947ಕ್ಕಿಂತ ಹಿಂದಿನಿಂದಲೂ ಇರುವ ಸ್ಥಳಗಳನ್ನು ಗುರುತಿಸಿ ಪಾರಂಪರಿಕ ಸರ್ಕ್ಯುಟ್ ಮಾಡಲಾಗುವುದು. ಅಲ್ಲದೆ ಹಲಸೂರು…

Read More

ಹೊರ ರಾಜ್ಯಗಳಿಂದ ನಗರಕ್ಕೆ ತಂದು ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆ ಸೇರಿ ಒಟ್ಟು ಎಂಟು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಅಬಕಾರಿ ಅಧಿಕಾರಿಗಳು ಯಶಸ್ವಿಯಾಗಿದ್ದು, 79 ಕೆ. ಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರೈಲು ಹಾಗೂ ಬಸ್ ಮಾರ್ಗವಾಗಿ ನಗರದಲ್ಲಿ ಅವ್ಯವಾಹತವಾಗಿ ನಗರಕ್ಕೆ ತಂದು ಸಣ್ಣ ಪೊಟ್ಟಣಗಳಲ್ಲಿ ಇಟ್ಟು ಗಾಂಜಾ ಮಾರಾಟ ಮಾಡುತ್ತಿದ್ದ ಒಡಿಶಾ ಮೂಲದ ಮಧುಸ್ಮಿತಾ, ನರೇಶ್, ದಿಲ್ಮಾಜ್, ಸುಬ್ರತ್ ಪ್ರಧಾನ್, ರಾಜ್ ಮೋಹನ್ ಹಾಗೂ ಲಕ್ಷ್ಮೀಕಾಂತ್ ಸೇರಿ ಒಟ್ಟು 8 ಮಂದಿಯನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎಂದು ಮಹಿಳೆಯೊಬ್ಬರು ತನ್ನ ಅತ್ತೆ ಮಗನ ವಿರುದ್ಧವೇ ದೂರು ನೀಡಿದ್ದಾರೆ. ಮದುವೆಯಾಗಿ ಹೊಸ ಬಾಳು ಕೊಡುವುದಾಗಿ ನಂಬಿಸಿ, ಗರ್ಭಿಣಿಯನ್ನಾಗಿಸಿ ಎಸ್ಕೆಪ್ ಆಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕೌಟುಂಬಿಕ ವಿಚಾರವಾಗಿ ಭಿನ್ನಾಭಿಪ್ರಾಯ ಉಂಟಾಗಿದ್ದರಿಂದ ಸಂತ್ರಸ್ತೆ 10 ವರ್ಷದಿಂದ ಪತಿಯಿಂದ ದೂರವಾಗಿ ಒಬ್ಬರೇ ವಾಸಿಸುತ್ತಿದ್ದರು. ಈ ನಡುವೆ ಅತ್ತೆ ಮಗನ (ತಂದೆಯ ತಂಗಿ ಮಗ) ಪರಿಚಯವಾಗಿ, ಮದುವೆಯಾಗುವುದಾಗಿ ನಂಬಿಸಿದ್ದ. ಅಂತೆಯೇ ಇಬ್ಬರೂ ಜೊತೆಗೆ ವಾಸವಾಗಿದ್ದರು ಎಂದು ತಿಳಿದುಬಂದಿದೆ. 6 ವರ್ಷದ ಹಿಂದೆ ಆತ ನನ್ನನ್ನು ಮದುವೆಯಾಗಿ ಬಾಳು ಕೊಡುವುದಾಗಿ ಭರವಸೆ ನೀಡಿದ್ದ. ಅಂತೆಯೇ ತುಮಕೂರಿನ ಯಲ್ಲಾಪುರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇಬ್ಬರೂ ಸಹ ಜೀವನ ನಡೆಸುತ್ತಿದ್ದೆವು. ಆತ ಕೆಲಸಕ್ಕೆ ಹೋಗುತ್ತಿರಲಿಲ್ಲ. ನಾನೇ ದುಡಿಯುತ್ತಿದ್ದೆ. ಕಳೆದ ಒಂದೂವರೆ ವರ್ಷದ ಹಿಂದೆ ಬೆಂಗಳೂರಿಗೆ ಬಂದು ಪೀಣ್ಯದ ವಿದ್ಯಾನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇಬ್ಬರು ವಾಸವಾಗಿದ್ದೆವು. ಈ ನಡುವೆ ಮೂರು ತಿಂಗಳ ಗರ್ಭಿಣಿಯಾದ ಬಳಿಕ, ನಮ್ಮಿಬ್ಬರ ಮದುವೆಗೆ ಮನೆಯವರು ಒಪ್ಪುತ್ತಿಲ್ಲವೆಂದು ಹೇಳಿದ್ದಾನೆ ಎಂದು…

Read More

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿಗೆ ವ್ಯಾಪಕ ಮಳೆಯಾಗುತ್ತಿರುವುದರಿಂದ ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಜೊತೆ ಸಂಪರ್ಕದಲ್ಲಿದ್ದು ಈ ಕೆಳಕಂಡ ಅವಶ್ಯಕತೆ ಹಾಗೂ ಸೂಚನೆಗಳನ್ನು ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. 1. ಮಳೆ ನೀರಿನಿಂದ ಅನಾಹುವಾಗಬಹುದಾದಂತಹ ತಗ್ಗು ಪ್ರದೇಶ, ಕೆರೆ, ನದಿ ತೀರಗಳಲ್ಲಿ ಅವಶ್ಯಕ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವುದು. 2. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಅಗತ್ಯ ಸೂಚನೆಗಳನ್ನು ನೀಡುವುದು. 3. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ವಿಪತ್ತು ನಿರ್ವಹಣಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವುದು. ಯಾವುದಾದರೂ ಲೋಪ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ನೇರ ಹೊಣೆಗಾರರಾಗಿದ್ದು, ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದು. 4. ಮಳೆಯಿಂದ ಸಂಭವನೀಯ ಅನಾಹುತವಾಗುವ ಪ್ರದೇಶಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ ಅವರ ಕಾರ್ಯನಿರ್ವಹಣೆಯ ಮೇಲ್ವಿಚಾರಣೆ ನಿರ್ವಹಿಸುವುದು. 5. ಈಗಾಗಲೇ ಸ್ಥಾಪಿಸಿರುವ ಕಾಳಜಿ ಕೇಂದ್ರಗಳನ್ನು ಮೇಲ್ವಿಚಾರಣೆ ನಡೆಸುವುದು. ಅವಶ್ಯವಿದ್ದಲ್ಲಿ ಮತ್ತಷ್ಟು ಕಾಳಜಿ ಕೇಂದ್ರಗಳನ್ನು ತೆರೆಯುವುದು. 6. ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ…

Read More

ಮಾಜಿ ಸಚಿವ ಹಾಗೂ ಹಾಲಿ ವಿಧಾನಸಭಾ ಸದಸ್ಯ ಶ್ರೀ ಸುರೇಶ ಕುಮಾರ್ ಅವರು ಕರ್ನಾಟಕ ಬಜೆಟ್ ಬಗ್ಗೆ ವಿಶ್ಲೇಷಿಸಿದ್ದಾರೆ. ಸಿದ್ದರಾಮಯ್ಯನವರೇ, ವಿಧಾನಸಭಾ ಚುನಾವಣೆ ಮುಗಿದು 58 ದಿನಗಳು ಕಳೆದಿವೆ. ಆದರೆ, ನಿಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣಾ’ ಅಪಪ್ರಚಾರದ ಗುಂಗಿನಿಂದ ಇನ್ನೂ ಹೊರಗೆ ಬಂದಿಲ್ಲ ಎಂಬುದು ಇಂದಿನ ನಿಮ್ಮ ಮುಂಗಡ ಪತ್ರ ಭಾಷಣದಿಂದ ಸ್ಪಷ್ಟವಾಗಿದೆ. ಇಂದು ಮಂಡಿಸಲಾಗಿರುವ ಮುಂಗಡ ಪತ್ರ ಬಜೆಟ್ ಭಾಷಣ ಎನ್ನುವುದಕ್ಕಿಂತ ಚುನಾವಣಾ ರಾಜಕೀಯ ಪ್ರಚಾರ ಭಾಷಣವಾಗಿದೆ. ಹಿಂದಿನ ಸರ್ಕಾರವನ್ನು ಹಳಿಯುವುದರಲ್ಲಿ, ಹಿಂದಿನ ಆಡಳಿತವನ್ನು ಟೀಕಿಸುವುದರಲ್ಲಿ, ಡಬಲ್ ಇಂಜಿನ್ ಸರ್ಕಾರವನ್ನು ವ್ಯಂಗ್ಯ ಮಾಡುವುದರಲ್ಲಿ ಈ ಮುಂಗಡಪತ್ರ ತನ್ನ ಶೇಕಡಾ 60 ಕ್ಕೂ ಹೆಚ್ಚು ಭಾಗವನ್ನು ಮೀಸಲಿಟ್ಟಿದೆ. ರಾಜ್ಯದ ನಾಗರಿಕರಿಗೆ ಸ್ಪಷ್ಟವಾಗಿ ತಾನು ಏನು ಮಾಡುತ್ತೇನೆ ಎಂದು ಹೇಳುವುದರ ಬದಲಿಗೆ ತನ್ನ ಕಹಿ ಭಾವನೆಗಳನ್ನು ವ್ಯಕ್ತಪಡಿಸುವುದರಲ್ಲಿಯೇ ಈ ಮುಂಗಡಪತ್ರ ಆನಂದ ಪಡುವಂತಿದೆ. ಕೇವಲ ಮೋದಿಯವರ ನೇತೃತ್ವದ ಸರ್ಕಾರದ ಅವಧಿಯಲ್ಲಿ ರಚಿತವಾಯಿತು ಎಂಬ ಒಂದೇ ಕಾರಣದಿಂದ ಬೇರೆ ಬೇರೆ ನೆಪವೊಡ್ಡಿ ರಾಷ್ಟ್ರೀಯ…

Read More

ಲೋಕಸಭೆ ಚುನಾವಣೆಯಲ್ಲಿ 7 ಲಕ್ಷ ಮತಗಳ ಅಂತರದಲ್ಲಿ ಗೆದ್ದಿರುವ ರಾಹುಲ್ ಗಾಂಧಿ ಅವರ ಅನರ್ಹತೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕರಾಳ ಅಧ್ಯಾಯ ಎಂದು ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಡಿ. ಕೆ. ಶಿವಕುಮಾರ್ ಹೇಳಿದರು. ಗಾಂಧಿ ಕುಟುಂಬ ದೇಶಕ್ಕಾಗಿ ತಮಗೆ ಸಿಕ್ಕ ಎಲ್ಲಾ ಸ್ಥಾನಮಾನ ತ್ಯಾಗ ಮಾಡಿದೆ. ನಮ್ಮ ರಾಜ್ಯದಲ್ಲಿ ಮಾಡಿದ ಭಾಷಣ ಇಟ್ಟುಕೊಂಡು ಬಿಜೆಪಿ ಕುತಂತ್ರ ಮಾಡಿದೆ. ನ್ಯಾಯಾಲಯದಲ್ಲಿ ನ್ಯಾಯ ಸಿಗುವ ನಿರೀಕ್ಷೆ ಇತ್ತು. ತೀರ್ಪಿನ ವಿಚಾರವಾಗಿ ನಾವು ಮಾತನಾಡುವುದಿಲ್ಲ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಪ್ರಧಾನಿ ಆಗಬಹುದಿತ್ತು. ಆದರೆ ದೇಶಕ್ಕೆ ಆರ್ಥಿಕ ತಜ್ಞ ಅಗತ್ಯವಿದೆ ಎಂದು ಅಧಿಕಾರ ತ್ಯಾಗ ಮಾಡಿದರು. ಅವರು ಭಾರತ ಜೋಡೋ ಯಾತ್ರೆ ಮೂಲಕ ಬೆಲೆ ಏರಿಕೆ, ನಿರುದ್ಯೋಗ ಬಗ್ಗೆ ಧ್ವನಿ ಎತ್ತಿ. ಭಾರತ ಒಂದುಗೂಡಿಸಲು ಪ್ರಯತ್ನಿಸಿದರು. ಇದರಿಂದ ಅವರಿಗೆ ಸಿಕ್ಕ ಜನಬೆಂಬಲ ಸಹಿಸದೆ ಬಿಜೆಪಿ ಅವರ ಸದಸ್ಯತ್ವ ಅನರ್ಹಗೊಳಿಸಲಾಗಿದೆ. ಈ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ಆಗುತ್ತಿರುವ ದಾಳಿಯನ್ನು ಇಡೀ ವಿದೇಶಗಳಲ್ಲೂ…

Read More

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಲಯ ಜಯನಗರ ವಿಧಾನಸಭಾ ಕ್ಷೇತ್ರದ ಜಯನಗರ 4ನೇ ಬ್ಲಾಕ್, 11ನೇ ಮುಖ್ಯ ರಸ್ತೆಯ ಯುವ ಪಥ (ಯುವಕ ಸಂಘ)ದಲ್ಲಿ ಇಂದು ನಡೆದ ನಾಡಪ್ರಭು ಕೆಂಪೇಗೌಡರ 514ನೇ ಜಯಂತಿ ಕಾರ್ಯಕ್ರಮಕ್ಕೆ ಶಾಸಕ ಸಿ. ಕೆ. ರಾಮಮೂರ್ತಿ, ವಲಯ ಆಯುಕ್ತ ಜಯರಾಮ್ ರಾಯಪುರ ರವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ವಲಯ ಆಯುಕ್ತರಾದ ಜಯರಾಮ್  ರಾಯಪುರ ರವರು ಮಾತನಾಡಿ, ಪಾಲಿಕೆ ವತಿಯಿಂದ ನಗರದ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲೂ ಕೆಂಪೇಗೌಡರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು. ಬೆಂಗಳೂರು ನಗರ ಕಟ್ಟಿದಂತಹ ಕೆಂಪೇಗೌಡರನ್ನು ನಾವೆಲ್ಲರೂ ಸ್ಮರಿಸಬೇಕು. ಕಳೆದ 15 ವರ್ಷಗಳಿಂದ ಕೆಂಪೇಗೌಡರಿಗೆ ಗೌರವ ಕೊಡಬೇಕಾದ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ. ದಕ್ಷಿಣ ವಲಯ ವ್ಯಾಪ್ತಿಯ ಲಾಲ್ ಬಾಗ್ ಗಡಿ ಗೋಪುರದಿಂದ ಕೆಂಪಾಂಬುದಿ ಗಡಿ ಗೋಪುರದ ವರೆಗೆ ಸುಮಾರು 13 ಕಿ. ಮೀ ಪ್ರದೇಶದಲ್ಲಿ ಕೆಂಪೇಗೌಡರ ಸರ್ಕ್ಯುಟ್ ಮಾಡಲು ನಿರ್ಧರಿಸಲಾಗಿದ್ದು, 1947ಕ್ಕಿಂತ ಹಿಂದಿನಿಂದಲೂ ಇರುವ ಸ್ಥಳಗಳನ್ನು ಗುರುತಿಸಿ ಪಾರಂಪರಿಕ ಸರ್ಕ್ಯುಟ್ ಮಾಡಲಾಗುವುದು. ಅಲ್ಲದೆ, ಹಲಸೂರು…

Read More

ದೇಶದ ವ್ಯವಸ್ಥೆ ಕುಲಗೆಟ್ಟು ಹೋಗಿದ್ದು, ಎಲ್ಲೆಡೆ ಕುದುರೆ ವ್ಯಾಪಾರ ಮೆರೆದಾಡುತ್ತಿದೆ. ಇದನ್ನೆಲ್ಲಾ ಹೇಳಲು ನನಗೆ ನಾಚಿಕೆಯಾಗುತ್ತಿದೆ’ ಎಂದು ಮೌಖಿಕವಾಗಿ ಬೇಸರ ವ್ಯಕ್ತಪಡಿಸಿರುವ ಹೈಕೋರ್ಟ್, ರಾಜ್ಯ ಒಕ್ಕಲಿಗರ ಸಂಘದೊಳಗಿನ ಕಿತ್ತಾಟಕ್ಕೆ ತೀವ್ರ ವ್ಯಥೆ ವ್ಯಕ್ತಪಡಿಸಿದೆ. ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ. ಕೆಂಚಪ್ಪಗೌಡ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ಸಂಘದ ಕಾರ್ಯಕಾರಿ ಸಮಿತಿ ಸಭೆಯನ್ನು ಪ್ರಶ್ನಿಸಿ ಸಂಘದ ಸದಸ್ಯರಾದ ಹಾಸನ ಜಿಲ್ಲೆಯ ಸಂಕ್ಲಾಪುರದ ಎಸ್. ಎಸ್. ರಘುಗೌಡ, ಸೇರಿದಂತೆ ನಾಲ್ವರು ಸದಸ್ಯರು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಚ್. ಪಿ. ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ಈ ವೇಳೆ ನ್ಯಾಯಪೀಠವು, ಸಿ. ಎನ್. ಬಾಲಕೃಷ್ಣ ಮತ್ತು ಕೋನಪ್ಪ ರೆಡ್ಡಿ ನೇತೃತ್ವದ ಕಾರ್ಯಕಾರಿ ಸಮಿತಿ ವಿರುದ್ಧ ಕೆಂಚಪ್ಪಗೌಡರ ಗುಂಪು 2023ರ ಮೇ 9ರಂದು ಅವಿಶ್ವಾಸ ನಿರ್ಣಯ ಮಂಡಿಸಿ, ನಂತರ ಚುನಾವಣೆ ನಡೆಸಿ ಅಧಿಕಾರ ಪಡೆದದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅಸಲು ದಾವೆಯಲ್ಲಿನ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿತು. ಈ ಆದೇಶಕ್ಕೆ ಪ್ರತಿಕ್ರಿಯಿಸಿದ…

Read More

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್‌ ಎಲ್‌ ಎಸ್‌ ಎ) ವತಿಯಿಂದ ಇದೇ 8ರಂದು ಹೈಕೋರ್ಟ್‌ ಸೇರಿದಂತೆ ಎಲ್ಲ ಜಿಲ್ಲೆಗಳು ಹಾಗೂ ತಾಲ್ಲೂಕು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ಈ ಕುರಿತ ವಿವರಗಳನ್ನು ಕೆಎಸ್‌ ಎಲ್‌ ಎಸ್‌ ಎ ಕಾರ್ಯನಿರ್ವಾಹಕ ಅಧ್ಯಕ್ಷರೂ ಆದ ಹೈಕೋರ್ಟ್‌ ನ್ಯಾಯಮೂರ್ತಿ ಜಿ. ನರೇಂದರ್ ಗುರುವಾರ ಮಾಧ್ಯಮ ಗೋಷ್ಠಿಯಲ್ಲಿ ವಿವರಿಸಿ, ‘ರಾಜ್ಯದಾದ್ಯಂತ ಒಟ್ಟು 20 ಲಕ್ಷದಷ್ಟು ಪ್ರಕರಣಗಳ ವಿಚಾರಣೆ ನಡೆಯಲಿದೆ’ ಎಂದರು. ರಾಜಿ ಮಾಡಿಕೊಳ್ಳಬಹುದಾದ ನ್ಯಾಯಾಲಯಗಳಲ್ಲಿ ಬಾಕಿಯಿರುವ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಈ ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶ’ ಎಂದು ಅವರು ತಿಳಿಸಿದರು. ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಷೇಮ್‌ಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಮಂಡಳಿ ಪ್ರಕರಣ, ಹಣಕಾಸು ಸಂಸ್ಥೆಗಳಿಗೆ ಸಂಬಂಧಿಸಿದ, ಚೆಕ್ ಬೌನ್ಸ್, ವೈವಾಹಿಕ, ಕೌಟುಂಬಿಕ ಪ್ರಕರಣಗಳೂ (ವಿಚ್ಛೇದನ ಹೊರತುಪಡಿಸಿ) ಸೇರಿದಂತೆ ರಾಜಿಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ವ್ಯಾಜ್ಯಗಳನ್ನು ಈ ಅದಾಲತ್‌ನಲ್ಲಿ ಪರಿಗಣಿಸಲಾಗುತ್ತದೆ’ ಎಂದರು. ಪೊಲೀಸ್ ಇಲಾಖೆಯ ಮಾಹಿತಿ ಪ್ರಕಾರ ರಾಜ್ಯದಾದ್ಯಂತ…

Read More