Author: admin

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅವಿನಾಶ್ ಮಣ್ಣಿಕೆರೆ ಮೇಲಿನ ಪೊಲೀಸರ ಹಲ್ಲೆ ಪ್ರಕರಣದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಶಾಸಕ ಡಿ. ಎಸ್. ಅರುಣ್ ಅವರು ಒತ್ತಾಯಿಸಿದರು. ಶೂನ್ಯ ವೇಳೆಯಲ್ಲಿ ಬಿಜೆಪಿ ಸದಸ್ಯ: ಡಿ. ಎಸ್. ಅರುಣ್ ಅವರು, ವಿಷಯ ಪ್ರಸ್ತಾಪಿಸಿ, ರಾಜ್ಯ ಸರ್ಕಾರ ಹಿಂದುಗಳ ವಿರೋಧಿಯಾಗಿ ಅಡಳಿತ ನಡೆಸುತ್ತಿದ್ದು ಪೊಲೀಸರು ಕೂಡ ಕಾಂಗ್ರೆಸ್ ಕೈಗೊಂಬೆಯಾಗಿ ಮಾಡುತ್ತಿದ್ದಾರೆ. ಅದಕ್ಕೆಪೂರಕವಾಗಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರ ಮೇಲೆ ನಡೆದಿರುವ ಹಲ್ಲೆಯೇ ಸಾಕ್ಷಿಯಾಗಿದೆ. ಈ ಕುರಿತು ಹಿಂದುತ್ವ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆದಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಪ್ರಕರಣ ರಾಜ್ಯ ಸರ್ಕಾರ ಹಿಂದುಗಳ ವಿರೋಧಿ ಧೋರಣೆಗೆ ಮುನ್ನುಡಿ ಹಾಕಿದಂತಾಗಿದ್ದು, ಮುಂಬರುವ ದಿನಗಳಲ್ಲಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ಪ್ರಕರಣಗಳು ಮರುಕಳಿಸುವ೦ತಹ ಸ೦ದರ್ಭಗಳು ಹೆಚ್ಚಾಗಿದೆ. ಪ್ರೋತ್ಸಾಹ ಉದ್ದೇಶಪೂರ್ವಕವಾಗಿ ಇಂತಹ ದಾಖಲಿಸುವ ಪ್ರಕರಣಗಳನ್ನು ಮೂಲಕ ರಾಜ್ಯದ ಜನರ ದಿಕ್ಕನ್ನು ತಪ್ಪಿಸುವ ಕೆಲಸಕ್ಕೆ ಕೈ ಹಾಕಬಾರದು. ಜಾತ್ಯಾತೀತವಾಗಿ ಧರ್ಮತೀತವಾಗಿ ಸರ್ಕಾರ ಕೆಲಸ ನಿರ್ವಹಿಸುವಂತಾಗಬೇಕು ಎಂದು ಆಗ್ರಹಿಸಿದರು. ಈ ವೇಳೆ…

Read More

ಕೊಮ್ಮಘಟ್ಟ ಸುತ್ತಲಿನ ಬಡಾವಣೆಗಳ ನಿವಾಸಿಗಳು, ಬಿಬಿಎಂಪಿ ವ್ಯಾಪ್ತಿಯ ನಿವಾಸಿಗಳು ಮನೆಯ ಕಸ, ತ್ಯಾಜ್ಯವನ್ನು ಕವರ್‌ನಲ್ಲಿ ಕಟ್ಟಿ ದ್ವಿಚಕ್ರವಾಹನಗಳಲ್ಲಿ ಬಂದು ರಸ್ತೆಯ ಬದಿಯಲ್ಲಿ ಬಿಸಾಡುತ್ತಿದ್ದಾರೆ. ಕಸ, ಕೋಳಿ, ಮೇಕೆ, ಕುರಿಗಳ ತ್ಯಾಜ್ಯ, ಲಿವರ್, ಮೂಳೆ ಸೇರಿ ಕೊಳೆತ ದುರ್ವಾಸನೆ ಬೀರುತ್ತಿದೆ. ಇದರ ಜೊತೆಗೆ ಮದ್ಯದ ಖಾಲಿ ಬಾಟಲ್, ಪ್ಲಾಸ್ಟಿಕ್ ಕವರ್, ಆಸ್ಪತ್ರೆಯ ನಿರುಪಯುಕ್ತ ವಸ್ತುಗಳೂ ಬಂದು ಬೀಳುತ್ತಿವೆ. ಕೊಳೆತ ತರಕಾರಿ, ಹಣ್ಣು, ಹೂವು, ಮಾವಿನ ಹಣ್ಣು, ಹಲಸಿನ ಹಣ್ಣು, ಮಾಂಸದ ತುಂಡುಗಳನ್ನು ತಂದು ಸುರಿಯುವುದರಿಂದ ಸೊಳ್ಳೆ, ನೊಣಗಳ ಹಾವಳಿ ಹೆಚ್ಚಾಗಿದೆ. ಚೀಲಗಳಲ್ಲೂ ಕಸವನ್ನು ತಂದು ಹಾಕಲಾಗುತ್ತಿದೆ. ಸಾಂಕ್ರಾಮಿಕ ರೋಗದ ಭಯದಿಂದ ಜೀವನ ನಡೆಸಬೇಕು. ಗಾಳಿ ಬೀಸಿದಾಗ ದುರ್ವಾಸನೆಯ ವಿಷಕಾರಿ ಗಾಳಿ ಬೀಸುತ್ತಿದೆ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು ಸೇರಿದಂತೆ ಹಲವಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ವರುಣಾರ್ಭಟಕ್ಕೆ ಜನಜೀವನ ಈಗಾಗ್ಲೆ ಅಸ್ತವ್ಯಸ್ಥವಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಹಾವೇರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಕಟ್ಟಡ ಕಾಮಗಾರಿ ನಡೆಯುತ್ತಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ 50 ಮೀಟರ್ಗಳಷ್ಟು ತಾಮ್ರದ ಕೇಬಲ್ ವೈರ್ ಕದಿಯುತ್ತಿದ್ದ ಹೌಸ್ ಕೀಪಿಂಗ್ ಸಿಬ್ಬಂದಿಯೊಬ್ಬರು ರೆಸ್ಟ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಕೇಬಲ ಕದ್ದ ರಾಹುಲ್ ಕುಮಾರ್ ವಿರುದ್ಧ ಕೆಐಎ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಎಫ್‌ಐಆರ್ ದಾಖಲಾಗಿದ್ದು, ಇಂದು ಸೇವೆಯಿಂದ ವಜಾಗೊಳಿಸಲಾಗಿದೆ. ವಿಮಾನ ನಿಲ್ದಾಣದ ಪೊಲೀಸರ ಪ್ರಕಾರ, ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು 2 ನಡುವೆ ಮಲ್ಟಿ ಮಾಡಲ್ ಟ್ರಾಸ್ಪೋರ್ಟ್ ಹಬ್(ಎಂಎಂಟಿಎಚ್) ನಿರ್ಮಿಸುತ್ತಿರುವ ಗೋದ್ರೇಜ್ ಮತ್ತು ಬಾಯ್ಸ್ ಅವರು ನೀಡಿದ ದೂರಿನ ಆಧಾರದ ಮೇಲೆ ಐಪಿಸಿಯ ಸೆಕ್ಷನ್ 379(ಕಳ್ಳತನ) ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ. ಎಸ್ಎಲ್ ವಿ ಸರ್ವಿಸೆಸ್, ತನ್ನ ಹೌಸ್ ಕೀಪಿಂಗ್ ಸಿಬ್ಬಂದಿಯಾಗಿದ್ದ ರಾಹುಲ್ ಕುಮಾರ್ ನನ್ನು ಕೆಲಸದಿಂದ ವಜಾ ಮಾಡಿದೆ. ಬಿಹಾರ ಮೂಲದ ಕುಮಾರ್ ಮಂಗಳವಾರ ಸಂಜೆ 5. 30 ರ ಸುಮಾರಿಗೆ ಕೇಬಲ್ ಅನ್ನು ಹೊತ್ತುಕೊಂಡು ನಿರ್ಮಾಣ ಸ್ಥಳದಿಂದ ಹೊರಗೆ ಹೋಗುತ್ತಿರುವುದನ್ನು ವಿಮಾನ ನಿಲ್ದಾಣದ ನಿರ್ವಾಹಕರು, ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋಟ್‌್ರ ಲಿಮಿಟೆಡ್…

Read More

ತುಮಕೂರು: ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದ ಬೆಸ್ಕಾಂ ಇಂಜಿನಿಯರ್ ಒಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಪಾವಗಡದಲ್ಲಿ ನಡೆದಿದೆ. ಬೆಂಗಳೂರಿನಲ್ಲಿರುವ ಬೆಳ್ಳಂದೂರಿನ‌ ಬೆಸ್ಕಾಂ ಪೂರ್ವ ವಿಭಾಗದ ಜೂನಿಯರ್ ಇಂಜಿನಿಯರ್ ಮಂಜುನಾಥ್ (22) ಆತ್ಮಹತ್ಯೆ ವ್ಯಕ್ತಿಯಾಗಿದ್ದಾರೆ. ಪಾವಗಡ ಪಟ್ಟಣದ ಲಾಡ್ಜ್ ವೊಂದರಲ್ಲಿ‌‌‌ ನೇಣಿಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆ‌‌ ವಿಚಾರದಲ್ಲಿ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಪಾವಗಡ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ತುಮಕೂರು: ಶಿರಾ ನಗರದಲ್ಲಿರುವ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ವಿಧಾನ ಪರಿಷತ್ ಶಾಸಕ ಚಿದಾನಂದ ಗೌಡರು ಇಂದು ಭೇಟಿ ನೀಡಿ, ಕಾಲೇಜಿನ ಎಲ್ಲಾ ವಿದ್ಯಾರ್ಥಿನಿಯರಿಗೆ ಸಿಇಟಿ ಗೆ ಸಂಬಂಧಪಟ್ಟ ಸುಮಾರು ಮೂರುವರೆ ಸಾವಿರ ಬೆಲೆ ಬಾಳುವ 4 ಉಚಿತ ತರಬೇತಿ ಪುಸ್ತಕ ನೀಡುವುದರ ಜೊತೆಗೆ ಉಚಿತ “CET” ತರಬೇತಿ ಕ್ಲಾಸ್ ಗೆ ಚಾಲನೆ ನೀಡಿದರು. ಕಳೆದ ಕೆಲ ದಿನಗಳ ಹಿಂದೆ ಈ ಸರ್ಕಾರಿ ಕಾಲೇಜ್ ಗೆ ಭೇಟಿ ಕೊಟ್ಟ  ಸಂದರ್ಭದಲ್ಲಿ ಉಚಿತವಾಗಿ CET ತರಬೇತಿ ಕ್ಲಾಸ್ ನೀಡುವುದಾಗಿ ಭರವಸೆ ನೀಡಿದ್ದರು. ಇದೀಗ ತಮ್ಮ ಭರವಸೆಯನ್ನು ನೆರವೇರಿಸಿದ್ದಾರೆ. ಇದೇ ವೇಳೆ  ಮಾತನಾಡಿದ  ಅವರು, ದ್ವಿತೀಯ ಪಿಯುಸಿ ಈ ಹಂತದಲ್ಲಿ ನೀವೆಲ್ಲ ಬಹಳ ಗಮನವಿಟ್ಟು ಓದಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಈಗಿನಿಂದಲೇ ಕಷ್ಟಪಟ್ಟು ಶ್ರದ್ದೆಯಿಂದ ಕಲಿಯಬೇಕು. ನೀವುಗಳು ಜೀವನದಲ್ಲಿ ಅತ್ಯುತ್ತಮ ಮಟ್ಟಕ್ಕೇರಿ, ಈ ತಾಲೂಕಿಗೆ ಕೀರ್ತಿ ತರಬೇಕೆಂಬುದು ನನ್ನ ಮಹಾದಾಸೆಯಾಗಿದೆ. ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳು ಇಂತಹ ಶಿಕ್ಷಣ ಪಡೆದು ನಗರ ಪ್ರದೇಶದ ವಿದ್ಯಾರ್ಥಿಗಳಿಗೆ…

Read More

ಬೆಂಗಳೂರು: ನಾನು ಯಾವುದಾದರೂ ವರ್ಗಾವಣೆ ವಿಷಯದಲ್ಲಿ ಭಾಗಿಯಾದ ದಾಖಲಾತಿ ನೀಡಿದರೆ ರಾಜಕೀಯ ನಿವೃತ್ತಿ ಆಗುವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದರು. ಇಂದು ಬೆಳಗ್ಗೆ ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈ ಸರಕಾರ ದಿನದ 24 ಗಂಟೆಯೂ ವರ್ಗಾವಣೆ ದಂಧೆಯನ್ನೇ ನಡೆಸುತ್ತಿದೆ. ಅಭಿವೃದ್ಧಿ ಬದಲು ನಗದು ಅಭಿವೃದ್ಧಿಯಲ್ಲಿ ತೊಡಗಿದೆ. ಇದನ್ನು ಹೇಳಿದರೆ ನಮ್ಮ ಮೇಲೆಯೇ ಕೆಸರು ಎರಚುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ನನ್ನಲ್ಲಿ ಈ ಸರಕಾರ ನಡೆಸುತ್ತಿರುವ ವರ್ಗಾವಣೆ ದಂಧೆಗಳಿಗೆ ಸಂಬಂಧಿಸಿ ನನ್ನಲ್ಲಿ ದಾಖಲೆಗಳಿವೆ. ಅದರಲ್ಲಿ ಯಾರಿಗೂ ಅನುಮಾನ ಬೇಡ. ಅದನ್ನು ಬಿಡುಗಡೆ ಮಾಡಬೇಕಾದ ಸಂದರ್ಭದಲ್ಲಿ ಮಾಡುತ್ತೇನೆ. ಯಾವಾಗ, ಎಲ್ಲಿ ಬಿಡುಗಡೆ ಮಾಡುತ್ತೇನೆ ಎಂಬುದು ನನಗೆ ಗೊತ್ತಿದೆ. ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿ ಹಲವಾರು ವರ್ಷಗಳು ಕೆಲಸ ಮಾಡಿದ್ದಾರೆ, ಅವರು ಎಂದಾದರೂ ದಾಖಲೆ ಬಿಡುಗಡೆ ಮಾಡಿದ್ದರಾ? ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನೆ ಮಾಡಿದರು. ಅವರು ಎಂದೂ ದಾಖಲೆ ಇಟ್ಟು ಮಾತನಾಡಿದನ್ನು ನಾನು ನೋಡಲೇ ಇಲ್ಲ.…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರುದ್ರಪ್ಪ ಲಮಾಣಿ ಉಪ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ನಮಗೆ ಮುಜುಗರ ಇದೆ. ಚುನಾವಣೆಯ ಫಲಿತಾಂಶ ಬಂದ ಮೇಲೆ ಹಾವೇರಿ ಜಿಲ್ಲೆಯವರು ಇಬ್ಬರು ಮೂಬರು ಹಿರಿಯ ಶಾಸಕರಿದ್ದೀರಿ, ನೀವು ಸಚಿವರಾಗಿ ಬರುತ್ತಿರಿ ಎಂದು ಭಾವಿಸಿದ್ದೇವು. ಅದು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಈ ಹುದ್ದೆಯಲ್ಲಿ ಅಧಿಕಾರ ಕಡಿಮೆ ಗೌರವ ಜಾಸ್ತಿ, ನೀವು ಸರಳ ಸಜ್ಜನರಿದ್ದೀರಿ, ನಾನು ನಿಮ್ಮ ತಾಂಡಾಕ್ಕೆ, ಮನೆಗೆ ಬಂದಿದ್ದೇನೆ. ರಾಜಕಾರಣದಲ್ಲಿ ಯಾರು ಏನು ಬೇಕಾದರೂ ಆಗಬಹುದು. ರಾಜಕಾರಣದಲ್ಲಿ ಪವರ್ ಪೊಲಿಟಿಕ್ಸ್ ಇಸ್ ವೇಟಿಂಗ್ ಗೇಮ್ ಅಂತ ಈಗ ಅದು ಅವಕಾಶ ಬಂದಾಗ ಅದನ್ನು ಪಡೆದುಕೊಳ್ಳಬೇಕು. ಶಕ್ತಿ ಇದ್ದವರು ಅಧಿಕಾರ ಪಡೆದುಕೊಳ್ಳುವ ಕೆಲಸ ಮಾಡುತ್ತಾರೆ ಎಂದರು. ಕೊಟ್ಟ ಕುದುರೆ ಏರದವನು ಶೂರನೂ ಅಲ್ಲ ವೀರನೂ ಅಲ್ಲ ಎಂದು ಅಲ್ಲಮಪ್ರಭುಗಳು ಹೇಳಿದ್ದಾರೆ. ಉಪ ಮುಖ್ಯಮಂತ್ರಿ ಡಿ ಕೆ…

Read More

2023ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ವಿಧೇಯಕ ಸೇರಿದಂತೆ 6 ವಿಧೇಯಕಗಳನ್ನು ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾಯಿತು. ಶಾಸನ ರಚನಾ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2023ನೇ ಸಾಲಿನ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ ಹಾಗೂ 2023ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು. 2023ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ವಿಧೇಯಕವನ್ನು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಮಂಡಿಸಿದರು. ಕಾನೂನು ಸಚಿವ ಎಚ್. ಕೆ. ಪಾಟೀಲ್ ಪರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, 2023ನೇ ಸಾಲಿನ ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪರವಾಗಿ 2023ನೇ ಸಾಲಿನ ಕರ್ನಾಟಕ ಅಗ್ನಿಶಾಮಕ ತಿದ್ದುಪಡಿ ವಿಧೇಯಕ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪರವಾಗಿ 2023ನೇ ಸಾಲಿನ ಕರ್ನಾಟಕ…

Read More

ಬೆಂಗಳೂರು: ರಾಜ್ಯದ ಅಂಗನವಾಡಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅವರಿಗೆ ಫಿಲ್ಟರ್ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ. ಕರ್ನಾಟಕ ವಿಧಾನ ಸಭೆಯಲ್ಲಿ ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಕೆ.ಎಂ. ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬರುವ ಬಜೆಟ್ ನಲ್ಲಿ ಈ ಯೋಜನೆ ಅಳವಡಿಸಿಕೊಳ್ಳಲು ಮುಖ್ಯಮಂತ್ರಿಗೆ ಈಗಾಗಲೇ ಮನವಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು. ಅನೇಕ ಅಂಗನವಾಡಿಗಳ ಕಟ್ಟಡಗಳ ನಿರ್ಮಾಣ ಕಾರ್ಯ ಅರ್ಧದಲ್ಲಿದ್ದು ಅವುಗಳನ್ನು ಪೂರ್ತಿಗೊಳಿಸಲು ಹಾಗೂ ಅಂಗನವಾಡಿ ಮಕ್ಕಳಿಗೂ ಶೌಚಾಲಯ ವ್ಯವಸ್ಥೆ ಒದಗಿಸಿಕೊಡಲು ಕ್ರಮ ಕೈಗೊಳ್ಳಬೇಕು ಎಂಬ ಶಾಸಕ ನಾರಾಯಣಸ್ವಾಮಿ ಅವರ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಲಕ್ಷ್ಮೀ ಹೆಬ್ಬಾಳಕರ, ಆದಷ್ಟೂ ಶೀಘ್ರವೇ ಈ ಕುರಿತು ಕ್ರಮ ಕೈಗೊಳ್ಳಲಾಗುವುದು. ಸಂಬಂಧಪಟ್ಟ ಇಲಾಖೆಗೆ ಈ ಕುರಿತು ಸೂಚನೆ ನೀಡಲಾಗುವುದು ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More