Subscribe to Updates
Get the latest creative news from FooBar about art, design and business.
- ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
- ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ: ನಗನಗದು ದೋಚಿ ಪರಾರಿ
- ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
- ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
- ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
- ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
- ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
- ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Author: admin
ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ದಂಡ ಕಟ್ಟಲು ಈ ಹಿಂದೆ ಶೇ 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ಡಿಸ್ಕೌಂಟ್ ನೀಡಿದ್ದಾರೆ. ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರು ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2023ರ ಫೆಬ್ರವರಿ 11ರ ಒಳಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಲು ಈ ಹಿಂದೆ ಆದೇಶಿಸಲಾಗಿತ್ತು. ಇದೀಗ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ 2023ರ ಫೆಬ್ರವರಿ 11ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಮತ್ತೊಮ್ಮೆ ಶೇ 50ರ ರಿಯಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಬೆಂಗಳೂರು: ಬಿಜೆಪಿ ಪ್ರತಿಭಟನೆ ಪಶ್ಚಾತ್ತಾಪದ ಪ್ರತಿಭಟನೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ದೆಹಲಿಯಲ್ಲಿ ಪ್ರತಿಭಟಿಸಿ. ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಧರಣಿ ನಡೆಸಲಿ. ತೈಲ ಬೆಲೆ ಕುಸಿದಿದ್ದರೂ ಪೆಟ್ರೋಲ್, ಡೀಸೆಲ್ ದರ ಇಳಿಸಿಲ್ಲ. ಕೇಂದ್ರ ಸರ್ಕಾರ ತೈಲ ಬೆಲೆ ಇಳಿಸದಿದ್ದರಿಂದ ಬೆಲೆ ಏರಿಕೆಯಾಗಿದೆ ಎಂದು ಸದನದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಮೈಸೂರು: ವರುಣ ಕ್ಷೇತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಚ್ಚು ಸಮಯ ನೀಡದ ಹಿನ್ನೆಲೆ ಕ್ಷೇತ್ರದಲ್ಲಿ ತಂದೆಯ ಜವಾಬ್ದಾರಿ ನಿಭಾಯಿಸಲು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಒಲವು ತೋರಿದ್ದಾರೆ. ಕಳೆದ ಬಾರಿಯಂತೆ ಸಣ್ಣ ಹುದ್ದೆ ನೀಡಿದರೂ ನಿಭಾಯಿಸುತ್ತೇನೆ. ತಂದೆ ಸಿಎಂ ಆಗಿರುವುದರಿಂದ ಕ್ಷೇತ್ರದ ಜನರಿಗೆ ಸಮಯ ನೀಡಲಾಗುತ್ತಿಲ್ಲ. ಕ್ಷೇತ್ರದ ಜನರ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಬೇಕು. ಜನರ ಸಣ್ಣ ಪುಟ್ಟ ಸಮಸ್ಯೆ ಬಗೆಹರಿಸಲು ಸರ್ಕಾರಿ ಸ್ಥಾನಮಾನ ಅಗತ್ಯ. ಹೀಗಾಗಿ ಚಿಕ್ಕ ಸ್ಥಾನಮಾನ ನೀಡಿದರೂ ಸಹಕಾರಿ ಆಗಲಿದೆ. ಕಳೆದ ಬಾರಿ ಆಶ್ರಯ ಸಮಿತಿಯ ಅಧ್ಯಕ್ಷ ಸ್ಥಾನ ನೀಡಿದ್ದರು. ಅದು ದೊಡ್ಡ ಹುದ್ದೆಯಲ್ಲ ಆದರೂ ಅಂತಹದ್ದೇ ಸಣ್ಣ ಹುದ್ದೆ ನೀಡಿದರೇ ಜನರ ಸೇವೆ ಮಾಡಲು ನಾನು ಸಿದ್ಧನಿದ್ದೇನೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬಸ್ ನಿಂದ ಆಟೊ ಕ್ಯಾಬ್‌ಗೆ ತೊಂದರೆ ಇಲ್ಲ: ಶಕ್ತಿ ಯೋಜನೆ ಜಾರಿಯಿಂದಾಗಿ ಆಟೊ ಹಾಗೂ ಕ್ಯಾಬ್ ಚಾಲಕರಿಗೆ ತೊಂದರೆಯಾಗುತ್ತಿರುವ ಕುರಿತು ಯಾವುದೇ ದೂರು ಬಂದಿಲ್ಲ. ಯೋಜನೆ ಜಾರಿಯಾದ ತಕ್ಷಣದಲ್ಲಿ ಅದರ ಪರಿಣಾಮ ಗೊತ್ತಾಗಲ್ಲ. ಹಾಗಾಗಿ ಸ್ವಲ್ಪ ಸಮಯ ನೋಡಿ ಪರಿಶೀಲಿಸಿ, ಒಂದು ವೇಳೆ ನಮ್ಮ ಯೋಜನೆಯಿಂದ ಆಟೊ, ಕ್ಯಾಬ್ ಗಳಿಗೆ ತೊಂದರೆಯಾಗುತ್ತಿದ್ದಲ್ಲಿ ಅವರಿಗೇನು ಮಾಡಬಹುದು ಎಂದು ಪರಿಶೀಲಿಸುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದರು. ವಿಧಾನ ಪರಿಷತ್ ಪ್ರಶೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಬೋಜೇಗೌಡ ಪ್ರಶ್ನೆಗೆ ಉತ್ತರಿಸಿದ ರಾಮಲಿಂಗಾರೆಡ್ಡಿ, ತಿಂಗಳು ಕಾಯೋಣ, ಶಕ್ತಿ ಯೋಜನೆಯಿಂದ ಆಗುವ ಪರಿಣಾಮ ನೋಡಿ ಆಟೊ, ಕ್ಯಾಬ್ ಇತ್ಯಾದಿ ಸಮಸ್ಯೆ ಆಗಿದ್ದಲ್ಲಿ ಪರಿಹಾರಕ್ಕೆ ಕ್ರಮ ವಹಿಸಲಿದ್ದೇವೆ. ಶಕ್ತಿ ಯೋಜನೆಯಿಂದ ತೊಂದರೆಯಾಗಿದೆ ಎಂದು ಯಾವ ಆಟೊ ಚಾಲಕ ಹಾಗೂ ಚಾಲಕರ ಸಂಘ ನನ್ನನ್ನು ಭೇಟಿ ಆಗಿಲ್ಲ, ಇಲಾಖೆಗೂ ದೂರು ನೀಡಿಲ್ಲ, ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ಬಂದಿದೆ. ಯೋಜನೆ ಜಾರಿಯಾಗಿ ವಾರದಲ್ಲೇ ಎಲ್ಲ ಗೊತ್ತಾಗಲ್ಲ. ಒಂದು ತಿಂಗಳು ಕಾದು…
ಮಹಿಳೆ ಎಂಬ ಕಾರಣಕ್ಕೆ ಗಂಡನನ್ನೇ ಕೊಲೆ ಮಾಡಿದ್ದ ಆರೋಪಿಗೆ ಜಾಮೀನು ನೀಡಲಾಗದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗಂಡನನ್ನು ಕತ್ತು ಸೀಳಿ ಕೊಲೆಗೈದಿದ್ದ ಡಿಲ್ಲಿ ರಾಣಿ ಎಂಬವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ನ್ಯಾಯಪೀಠ ಜಾಮೀನು ನಿರಾಕರಿಸಿ ಆದೇಶಿಸಿದೆ. ಆರೋಪಿಗೆ ತನ್ನ ಕೈಗಳಿಗೆ ಗಾಯ ಮಾಡಿಕೊಂಡು, ತನಗೆ ಸೇರಿದ ಮಾಂಗಲ್ಯ ಸರ ಹಾಗೂ ಕಿವಿಯೋಲೆ ಬಚ್ಚಿಟ್ಟಿದ್ದು, ಆ ಮೂಲಕ ತನಿಖೆಯ ದಿಕ್ಕು ತಪ್ಪಿಸಲು ಪ್ರಯತ್ನಿಸಿದ್ದಾರೆ. ಮಾಂಗಲ್ಯ ಸರ ಮತ್ತು ಕಿವಿಯೋಲೆ, ಮಹಿಳೆಯ ರಕ್ತದ ಕಲೆಗಳಿದ್ದ ನೈಟಿಯನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ನಡೆದ ರಾತ್ರಿ ಶಂಕರರೆಡ್ಡಿ ಮತ್ತು ಅರ್ಜಿದಾರೆ ಮಧ್ಯೆ ಜಗಳವಾಗಿದೆ. ನಿದ್ದೆಯಿಂದ ಎಚ್ಚರಗೊಂಡು ನೋಡಿದಾಗ ತಂದೆ ರಕ್ತದ ಮಡುವಿನಲ್ಲಿ ಬಿದ್ದಿದ್ದರು ಎಂಬುದಾಗಿ ಮಹಿಳೆಯ ಅಪ್ರಾಪ್ತ ಪುತ್ರ ಸಹ ಸಾಕ್ಷ್ಯ ನುಡಿದಿದ್ದಾರೆ. ಹಾಗಾಗಿ, ಈ ಹಂತದಲ್ಲಿ ಮೇಲ್ನೋಟಕ್ಕೆ ಮಹಿಳೆಯ ವಿರುದ್ಧ ಸಾಕ್ಷ್ಯಗಳಿವೆ. ಅಪರಾಧ ಕೃತ್ಯ ಗಂಭೀರ ಸ್ವರೂಪದ್ದಾಗಿದ್ದು,…
ಬೆಂಗಳೂರಿನ ಶಿವಾಜಿನಗರದ ಆಜಾಂ ಮಸೀದಿಗೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದೆ. ಮಸೀದಿಗೆ ಬಾಂಬ್ ಇಟ್ಟಿದ್ದಾರೆಂದು ರಾತ್ರಿ 11ಕ್ಕೆ ಅಪರಿಚಿತನೊಬ್ಬ ಪೊಲೀಸ್ ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿ ತಿಳಿಸಿದ್ದಾನೆ. ಉಗ್ರರು ಬಾಂಬ್ ಇಟ್ಟಿದ್ದಾರೆಂದು ಅಪರಿಚಿತ ವ್ಯಕ್ತಿ ಕರೆ ಮಾಡಿದ್ದು ಮಾಹಿತಿ ತಿಳಿದು ಸ್ಥಳಕ್ಕೆ ಶಿವಾಜಿನಗರ ಪೊಲೀಸರು ದೌಡಾಯಿಸಿದ್ದಾರೆ. ಹಿರಿಯ ಅಧಿಕಾರಿಗಳು ಸಹಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಸೀದಿ ಪರಿಶೀಲನೆ ಬಳಿಕ ಹುಸಿ ಬಾಂಬ್ ಕರೆ ಎಂದು ತಿಳಿದು ನಿಟ್ಟುಸಿರು ಬಿಟ್ಟಿದ್ದಾರೆ. ಕರೆ ಮಾಡಿದ ವ್ಯಕ್ತಿಗಾಗಿ ಶಿವಾಜಿನಗರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಜುಲೈ 14 ರಿಂದ ಗೃಹ ಲಕ್ಷ್ಮಿ ಜಾರಿಗೆ ಸರ್ಕಾರ ಪ್ಲಾನ್ ಮಾಡಿದೆ. ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಜುಲೈ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ ನಡೆಸಲು ಚಿಂತನೆ ನಡೆಸಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಮ್ಮುಖದಲ್ಲಿ ಈ ಯೋಜನೆ ಜಾರಿಯಾಗಲಿದೆ. 10 ರಿಂದ 15 ಮಂದಿ ಫಲಾನುಭವಿಗಳನ್ನ ಗುರುತಿಸಿ ಸಾಂಕೇತಿಕವಾಗಿ ಹಣ ವರ್ಗಾವಣೆ ಮಾಡುವ ಮೂಲಕ ಚಾಲನೆ ನೀಡಲಾಗುತ್ತೆ. ಜುಲೈ 17 ರಿಂದ ಪೂರ್ಣ ಪ್ರಮಾಣದಲ್ಲಿ ಯೋಜನೆ ಜಾರಿಗೆ ಚಿಂತನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬಜೆಟ್ ಅಧಿವೇಶನ ಮುಗಿದ ನಂತರ ಅಡ್ವಕೇಟ್ ಜನರಲ್, ಕಾನೂನು ಇಲಾಖೆ ಹಾಗೂ ಸಮುದಾಯದ ಸಚಿವರೊಂದಿಗೆ ಪ್ರತ್ಯೇಕ ಸಭೆ ಕರೆದು ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಸೃಷ್ಟಿಸಿರುವ ಗೊಂದಲಗಳ ನಿವಾರಣೆಗೆ ಚರ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಪೀಠದ ಪೀಠಾಧ್ಯಕ್ಷ ಶ್ರೀ ಪ್ರಸನ್ನಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಸಚಿವರು ಹಾಗೂ ಶಾಸಕರ ನಿಯೋಗ ತಮ್ಮನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮಾತನಾಡಿದರು. ಸಿಎಂ ಭೇಟಿ ಮಾಡಿದ ನಿಯೋಗಹಿಂದಿನ ಸರ್ಕಾರ ಮೀಸಲಾತಿಯ ಕುರಿತು ಆತುರಾತುರವಾಗಿ ತೀರ್ಮಾನ ಮಾಡಿದ್ದು, ಗೊಂದಲ ಸೃಷ್ಟಿಸಿದೆ. ಮುಸ್ಲಿಮರಿಗೆ 4% ರಷ್ಟಿದ್ದ ಮೀಸಲಾತಿ ರದ್ದು ಮಾಡಿ ಒಕ್ಕಲಿಗರು ಹಾಗೂ ಲಿಂಗಾಯತರಿಗೆ ತಲಾ 2% ರಷ್ಟು ಮೀಸಲಾತಿ ನೀಡಿದೆ. 20, 2D ಸಹ ಮಾಡಿದ್ದಾರೆ. ಇದರ ಬಗ್ಗೆ ಗೊಂದಲಗಳಿವೆ. ಸಂವಿಧಾನಾತ್ಮಕವಾಗಿ ಇಲ್ಲದಿರುವ ಕಾರಣ ಸುದೀರ್ಘ ಚರ್ಚೆಯ ಅಗತ್ಯವಿದೆ. ಒಟ್ಟಾರೆ ಮೀಸಲಾತಿಯ ಪರಿಮಿತಿಯನ್ನು ಸಡಿಲಗೊಳಿಸದಿದ್ದರೆ ಪರಿಹಾರ ಸಿಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಬೆಳಗಾವಿ: ನಗರದ ಸರ್ಕಿಟ್ ಹೌಸ್ ನಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಬೆಳಗಾವಿ ಜಿಲ್ಲಾ ಸಮಿತಿ ಪತ್ರಿಕಾ ಪರಿಷತ್ ನಡೆಸಿ ಸಾಮಾಜಿಕ ನ್ಯಾಯದ ಅಡಿಯಲ್ಲಿ ಮಾದಿಗ ಸಮಾಜಕ್ಕೆ ಖಾಲಿ ಇರುವ ಮೂರು ವಿಧಾನಪರಿಷತ್ ಸ್ಥಾನಗಳಲ್ಲಿ ಒಂದು ಸ್ಥಾನವನ್ನು ಉತ್ತರ ಕರ್ನಾಟಕಕ್ಕೆ ನೀಡಬೇಕೆಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಆಗ್ರಹಿಸಿದರು. 2023ರ ಚುನಾವಣೆಯಲ್ಲಿ ಅತಿ ಹೆಚ್ಚು ಮಾದಿಗ ಸಮಾಜ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಮಾದಿಗ ಸಮಾಜ ಬಹುದೊಡ್ಡ ಪಾಲವಿದೆ ಮಾದಿಗ ಎಡ ಪಂಗಡಕ್ಕೆ ಸೇರಿದ ಮಾದಿಗ ಸಮಾಜವನ್ನು ರಾಜಕೀಯವಾಗಿ ಪ್ರತಿನಿತ್ಯ ನೀಡಲು ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಮುಂಚುನಿಯಲ್ಲಿದೆ. ಉತ್ತರ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕದಲ್ಲಿ ಈವರೆಗೂ ಮಾದಿಗ ಸಮಾಜಕ್ಕೆ ಆರ್. ಬಿ .ತಿಮ್ಮಾಪುರ್, ಅವರನ್ನು ಹೊರತುಪಡಿಸಿದರೆ ಯಾವ ನಾಯಕರಿಗೂ ಈ ಸ್ಥಾನ ಒದಿಗೆ ಬಂದಿಲ್ಲ ಆದ್ದರಿಂದ ಪಕ್ಷ ಹಾಗೂ ಸರ್ಕಾರ ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದ ನಮ್ಮ ಸಮಾಜಕ್ಕೆ ರಾಜಕೀಯ ಪ್ರತಿನಿತ್ಯ ನೀಡಬೇಕೆಂದು ಆಗ್ರಹಿಸಿದರು . ಈ…
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ಆರಂಭವಾದ ಟರ್ಮಿನಲ್ -2ರಿಂದ ಬಿಎಂಟಿಸಿಯ ವಾಯುವಜ್ರ ಹವಾನಿಯಂತ್ರಿತ ವೊಲ್ಲೊ ಬಸ್ ಸಂಚಾರ ಸೋಮವಾರದಿಂದ ಅಧಿಕೃತವಾಗಿ ಆರಂಭವಾಗಿದೆ. ಈಗಾಗಲೇ ಟರ್ಮಿನಲ್-1 ರಿಂದ ವಾಯುವಜ್ರ ಬಸ್ ಕಾರ್ಯಾಚರಣೆ ನಡೆಸುತ್ತಿತ್ತು. ಎರಡು ತಿಂಗಳಿನಿಂದ ಟರ್ಮಿನಲ್ 2ವರೆಗೆ ಪ್ರಾಯೋಗಿಕವಾಗಿ ಬಸ್ ಓಡಿಸಲಾಗುತ್ತಿತ್ತು. ಆದರೆ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ. ಇನ್ನೂ ಮುಂದೆ ಟರ್ಮಿನಲ್ 2ರಲ್ಲಿ ಬಿಎಂಟಿಸಿ ಪೂರ್ಣ ಪ್ರಮಾಣದಲ್ಲಿ ವಾಯುವಜ್ರ ಬಸ್ ಸೇವೆ ಒದಗಿಸಲಿದೆ. ಟರ್ಮಿನಲ್-1 ಬಸ್ ದರಗಳು ಇದಕ್ಕೂ ಅನ್ವಯಿಸುತ್ತವೆ. ಟರ್ಮಿನಲ್ 2ರಲ್ಲಿ ಬಸ್ ನಿಲುಗಡೆಗೆ ಜಾಗ ಮೀಸಲಿಡಲಾಗಿದೆ ಎಂದು ಬಿಎಂಟಿಸಿ ಟ್ವಿಟ್ ಮಾಡಿದೆ. ಪ್ರತಿ ದಿನ ಸರಾಸರಿ ಆರರಿಂದ ಏಳು ಸಾವಿರ ಪ್ರಯಾಣಿಕರು ವಿಮಾನ ನಿಲ್ದಾಣದಿಂದ ನಗರದ ಕಡೆಗೆ ಪ್ರಯಾಣಿಸುತ್ತಾರೆ. ಅದೇ ರೀತಿ ಐದರಿಂದ ಆರು ಸಾವಿರ ಪ್ರಯಾಣಿಕರು ಬೆಂಗಳೂರಿನ ವಿವಿಧ ಭಾಗಗಳಿಂದ ವಿಮಾನ ನಿಲ್ದಾಣಕ್ಕೆ ಸಂಚಾರ ಮಾಡುತ್ತಾರೆ. ಹೊಸ ಟರ್ಮಿನಲ್‌ಗೆ ಬಿಎಂಟಿಸಿ ಬಸ್ ಸೇವೆ ಆರಂಭಿಸಿರುವುದನ್ನು ಪ್ರಯಾಣಿಕರು ಸ್ವಾಗತಿಸಿದ್ದಾರೆ. ಕ್ಯಾಬ್‌ಗಳಿಗೆ ಹೋಲಿಸಿದರೆ, ಬಿಎಂಟಿಸಿಯ ವಾಯುವಜ್ರ…