Author: admin

ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಲ್ಲಿ ಬಾಕಿ ಇರುವ ಕಡತಗಳ ಸ್ಥಿತಿಗತಿ ಕುರಿತು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಂದ ಸೋಮವಾರ ಮಾಹಿತಿ ಪಡೆದರು. ಮೇಕೆದಾಟು ಯೋಜನೆ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಚುನಾಯಿತ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಜತೆ ವಿಕಾಸಸೌಧದಲ್ಲಿ ಅವರು ಸಭೆ ನಡೆಸಿದರು. ಸಮತೋಲನ ಜಲಾಶಯ ನಿರ್ಮಾಣಕ್ಕೆ ಬಾಕಿ ಇರುವ ಅನುಮತಿಗಳು, ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು, ಕೇಂದ್ರ ಜಲ ಆಯೋಗ ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ಬಾಕಿ ಇರುವ ಕಡತಗಳ ಕುರಿತು ಅಧಿಕಾರಿಗಳು ಮಾಹಿತಿ ಒದಗಿಸಿದರು. ತ್ವರಿತವಾಗಿ ಅನುಮತಿಗಳನ್ನು ಪಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಸಂಸದ ಡಿ. ಕೆ. ಸುರೇಶ್, ಶಾಸಕರಾದ ಎಚ್. ಸಿ. ಬಾಲಕೃಷ್ಣ, ಬಿ. ಶಿವಣ್ಣ, ಶರತ್ ಬಚ್ಚೇಗೌಡ, ಇಟ್ಬಾಲ್ ಹುಸೇನ್, ಡಾ.…

Read More

ಸುಳ್ಳು ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದು ಜನವಿರೋಧಿ ನೀತಿ ಅನುಸರಿಸುತ್ತಿರುವ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್‌ ಕುಮಾರ್ ಕಟೀಲ್ ಅವರು ತಿಳಿಸಿದರು. ರಾಜ್ಯದ ಕಾಂಗ್ರೆಸ್ ಸರಕಾರವು ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಕಂಡಿಷನ್ ಇಲ್ಲದೆ ಗ್ಯಾರಂಟಿ ಜಾರಿ ಮಾಡಲು ಆಗ್ರಹಿಸಿ ಬಿಜೆಪಿ ವತಿಯಿಂದ ನಗರದಲ್ಲಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಅವರು ಮಾತನಾಡಿದರು. ಚುನಾವಣೆ ಪೂರ್ವದಲ್ಲಿ ಮನೆಮನೆಗೆ ಸಹಿ ಹಾಕಿದ ಗ್ಯಾರಂಟಿ ಕಾರ್ಡ್ ಗಳನ್ನು ಹಂಚುವ ಮೂಲಕ ಸುಳ್ಳು ಘೋಷಣೆಗಳ ಆಧಾರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಇದೀಗ ಜನರಿಗೆ ಮೋಸ ಮಾಡುತ್ತಿದೆ ಎಂದು ಟೀಕಿಸಿದರು. ಸರಕಾರ ಬಂದು 24 ಗಂಟೆಗಳಲ್ಲಿ ಭರವಸೆ ಅನುಷ್ಠಾನಕ್ಕೆ ತರುವುದಾಗಿ ಹೇಳಿದವರು ಇದೀಗ ಸುಮಾರು 2 ತಿಂಗಳಾದರೂ ಸಮರ್ಪಕ ಮಾರ್ಗಸೂಚಿಯನ್ನೇ ನೀಡಿಲ್ಲ. ಗ್ಯಾರಂಟಿಗಳನ್ನು ಕಂಡಿಷನ್‌ಗಳೊಂದಿಗೆ ಜಾರಿ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. 10 ಕೆಜಿ ಅಕ್ಕಿ ಎಂದವರು ಇದೀಗ 5 ಕೆಜಿಗೆ ಹಣ ನೀಡುತ್ತಿದ್ದಾರೆ ಎಂದ…

Read More

ದಕ್ಷಿಣ ಕನ್ನಡ: ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಲಾಸಾಧಕಿ ಸವಿತಾ ಕೋಡಂದೂರ್ ಅವರಿಗೆ ಸನ್ಮಾನ ಮಾಡಲಾಯಿತು. ಅಮ್ಮುಂಜೆ ಅನುದಾನಿತ ಹಿಪ್ರಾ ಶಾಲೆ ಯ ವೀರಯೋಧ ಯಾದವ್ ಪೂಜಾರಿ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರು ಎ.ಸಿ.ಭಂಡಾರಿ ಅವರ ಅಧ್ಯಕ್ಷತೆಯಲ್ಲಿ ವಿವಿಧ ಸಾಧಕರನ್ನು  ಶಾಲು, ಹಾರ, ಪೇಟ, ಸ್ಮರಣಿಕೆ ಪುಸ್ತಕ ಅಭಿನಂದನಾ ಪತ್ರಗಳನ್ನು ಇಟ್ಟು ಸನ್ಮಾನಿಸಲಾಯಿತು. ಸಮ್ಮೆಮೇಳನ ಅಧ್ಯಕ್ಷರಾದ   ಹಿರಿಯ ಪತ್ರಕರ್ತ ಪ್ರೊ.ಕೆ.ಬಾಲಕೃಷ್ಣಗಟ್ಟಿ ದಕ್ಷಿಣ ಕನ್ನಡ  ಕ.ಸಾ.ಪ ಅಧ್ಯಕ್ಷರಾದ ಡಾ.ಎಂ.ಪಿ.ಶ್ರೀನಾಥ್ ಬಂಟ್ವಾಳ ತಾಲೂಕು ಕ.ಸಾ.ಪ ಅಧ್ಯಕ್ಷರಾದ ವಿಶ್ವನಾಥ್ ಕಾರ್ಯದರ್ಶಿ ರಾಜೇಶ್ವರಿ ರಾಷ್ಟ್ರಪ್ರಶಸ್ತಿ ವಿಜೇತ ಜೇನು ಕೃಷಿ ಕಲಾ ಪ್ರೋತ್ಸಾಹಕರಾದ ಕುಮಾರ್ ಪೆರ್ನಾಜೆ  ನ್ಯಾಯವಾದಿ ಅಶ್ವಿನಿ ಕುಮಾರ್ ರೈ ಕಸಾಪ   ಗೌರವ ಕಾರ್ಯದರ್ಶಿಗಳಾದ    ರಮಾನಂದ ನೂಜಿಪ್ಪಾಡಿ ಸ್ವಾಗತ ಸಮಿತಿಯ ಅಧ್ಯಕ್ಷರಾದ ಉಮೇಶ್ ಸಾಲ್ಯನ್ ಬೆಂಜನ ಪದವು ಪ್ರಧಾನ ಸಂಚಾಲಕ  ಅಬೂಬಕರ್ ಅಮ್ಮುಂಜೆ ಗ್ರಾಮ ಪಂಚಾಯತ್…

Read More

ಬಿಬಿಎಂಪಿ ವ್ಯಾಪ್ತಿಯಲ್ಲಿ 110 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗ್ರತೆ ಕ್ರಮವನ್ನು ಕೈಗೊಂಡಿದ್ದು, ಸುಮಾರು 100 ಕೊಳವೆಬಾವಿಗಳನ್ನು ಕೊರೆಯಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು. ಕುಡಿಯುವ ನೀರು ಸರಬರಾಜು ಜವಾಬ್ದಾರಿ ಬಿಬಿಎಂಪಿಯದ್ದು, ಅಲ್ಲದಿದ್ದರೂ, ಹೊರಭಾಗದ 110 ಹಳ್ಳಿಗಳಲ್ಲಿ ಕಾವೇರಿ ನೀರು ಪೂರೈಕೆ ಇನ್ನೂ ಸಾಧ್ಯವಾಗಿಲ್ಲ. ಹೀಗಾಗಿ ಅಲ್ಲಿನ ಜನರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ತುರ್ತು ಕಾಮಗಾರಿಯಡಿ 110 ಕೋಟಿ ವೆಚ್ಚ ಮಾಡಲು ನಿರ್ಧರಿಸಲಾಗಿದೆ. ನಿರ್ಲ್ಲಿ ರಧ ನೀರಿನ ವ್ಯವಸ್ಥೆ ಮಾಡಲಾಗುತ್ತದೆ. ಪ್ರತಿ ಕೊಳವೆಬಾವಿ ಸುಮಾರು *8 ಲಕ್ಷ ವೆಚ್ಚವಾಗಲಿದೆ. ಯಲಹಂಕ, ದಾಸರಹಳ್ಳಿ, ಆರ್. ಆರ್. ನಗರ, ಬೊಮ್ಮನಹಳ್ಳಿ ವಲಯಗಳಲ್ಲಿ ಅಗತ್ಯಕ್ಕನುಸಾರವಾಗಿ ಕೊಳವೆಬಾವಿ ಕೊರೆಯಲಾಗುತ್ತದೆ ಎಂದರು. ಬೆಂಗಳೂರು ನಗರ ಭಾಗದಲ್ಲಿ ನೀರು ಪೂರೈಕೆ ಜವಾಬ್ದಾರಿ ಬಿಡಬ್ಲ್ಯೂಎಸ್‌ಎಸ್‌ಬಿಯದ್ದಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಮಳೆಗಾಲಕ್ಕೆ ಸಿದ್ಧತೆ: ನಗರದಲ್ಲಿ 198 ಸೂಕ್ಷ್ಮ ಪ್ರದೇಶಗಳಲ್ಲಿ ಜಲಾವೃತವಾಗುವುದನ್ನು ಗುರುತಿಸಲಾಗಿದೆ. ಇದರಲ್ಲಿ ಶೇ 80ರಷ್ಟು ಪ್ರದೇಶದಲ್ಲಿ ಸಮಸ್ಯೆಯನ್ನು ನಿವಾರಿಸಲಾಗಿದೆ ಎಂದು ತುಷಾರ್ ಗಿರಿನಾಥ್ ಹೇಳಿದರು.…

Read More

ರಸ್ತೆಯನ್ನು ಅಕ್ರಮವಾಗಿ ಅಗೆದು ಕುಡಿಯುವ ನೀರು ಹಾಗೂ ಒಳಚರಂಡಿ ಮಾರ್ಗಕ್ಕೆ ಹಾನಿ ಮಾಡಿರುವ ಪ್ರಕರಣದಲ್ಲಿ ಬಿಬಿಎಂಪಿ ಹಾಗೂ ಜಲಮಂಡಳಿ ಅಧಿಕಾರಿಗಳ ವಿರುದ್ಧ ಪುಟ್ಟೇನಹಳ್ಳಿ ಠಾಣೆಯಲ್ಲಿ ಎಫ್‌ ಐಆರ್ ದಾಖಲಾಗಿದೆ. ಜಿಯೊ ಡಿಜಿಟಲ್ ಫೈಬರ್ ಕಂಪನಿಯ ನಿರ್ದೇಶಕರಾದ ನಟರಾಜನ್ ಜ್ಞಾನಸ್ಕಂದನ್ ತಂಜೂರ, ಶ್ರೀಧರ್ ವೈದ್ಯಾನಂದ್, ಧ್ರುವ್ ಕುಮಾರ್ ತಾಯಲ್ ಹಾಗೂ ಕೃತ್ಯಕ್ಕೆ ಸಹಕರಿಸಿ ಸರ್ಕಾರಕ್ಕೆ ನಂಬಿಕೆ ದ್ರೋಹ ಎಸಗಿರುವ ಬಿಬಿಎಂಪಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಾಶ್, ಜಲಮಂಡಳಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿನಾಯಕ್ ವಿರುದ್ಧ ಸ್ಥಳೀಯ ನಿವಾಸಿಯೊಬ್ಬರು ದೂರು ನೀಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ. ದೂರಿನ ವಿವರ: ‘ಅರಕೆರೆಯ ಬ್ರಿಗೇಡ್ ಮಿಲೇನಿಯಂ ಮುಖ್ಯರಸ್ತೆ, ಸೆಂಚುರಿ ಪ್ರಗತಿ ಅಪಾರ್ಟ್‌ಮೆಂಟ್ ಸಮುಚ್ಚಯ ಮುಂಭಾಗ ಹಾಗೂ ಸುತ್ತಮುತ್ತ ಹೊಸದಾಗಿ ಡಾಂಬರ್ ರಸ್ತೆ ನಿರ್ಮಿಸಲಾಗಿದೆ. ಬಿಬಿಎಂಪಿಯಿಂದ ಯಾವುದೇ ಅನುಮತಿ ಪಡೆಯದೇ ಜಿಯೊ ಡಿಜಿಟಲ್ ಫೈಬರ್ ಕಂಪನಿಯವರು, ಕೇಬಲ್ ಅಳವಡಿಸಲು ರಸ್ತೆಯನ್ನು ಅಕ್ರಮವಾಗಿ ಅಗೆದಿದ್ದಾರೆ. ಇದರಿಂದ ಕುಡಿಯುವ ನೀರಿನ ಪೈಪ್ ಹಾಗೂ ಒಳಚರಂಡಿ ವ್ಯವಸ್ಥೆಗೆ ಧಕ್ಕೆಯಾಗಿದೆ . ಜಿಯೊ…

Read More

ರಾಜ್ಯಕ್ಕೆ ಅಕ್ರಮವಾಗಿ ಗಾಂಜಾ ಸಾಗಿಸಿ ಮಾರುತ್ತಿದ್ದ ನಾಲ್ವರು ಆರೋಪಿಗಳನ್ನು ಗಿರಿನಗರ ಠಾಣೆ ಪೊಲೀಸರು ಮಹಾರಾಷ್ಟ್ರದಲ್ಲಿ ಬಂಧಿಸಿ ಸಿನಿಮೀಯ ರೀತಿಯಲ್ಲಿ ನಗರಕ್ಕೆ ಕರೆತಂದಿದ್ದಾರೆ. ಮಹಾರಾಷ್ಟ್ರದ ಸೈಯದ್, ಅಮೂಲ್, ಆಕಾಶ್ ಹಾಗೂ ರಾಹುಲ್ ಬಂಧಿತರು. ಇವರಿಂದ 7 50 ಲಕ್ಷ ಮೌಲ್ಯದ ಗಾಂಜಾ ಜಪ್ತಿ ಮಾಡಲಾಗಿದೆ. ಗಾಂಜಾ ಮಾರಾಟ ಜಾಲದ ಆರೋಪಿಯೊಬ್ಬನನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಮಹಾರಾಷ್ಟ್ರದಿಂದ ಗಾಂಜಾ ತರುತ್ತಿದ್ದ ಬಗ್ಗೆ ಆತ ಮಾಹಿತಿ ನೀಡಿದ್ದ. ಪೆಡ್ಲರ್‌ ಗಳ ಪತ್ತೆಗೆ ರಚಿಸಲಾಗಿದ್ದ ವಿಶೇಷ ತಂಡ, ಮಹಾರಾಷ್ ಜಿಲ್ಲೆಗೆ ಹೋಗಿತ್ತು. ಆರೋಪಿಗಳ ಮನೆಯಲ್ಲಿ ಪರಿಶೀಲನೆ ನಡೆಸಿತ್ತು. ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಕುಟುಂಬಸ್ಥರು ಪೊಲೀಸರ ಮೇಲೆ ಹಲ್ಲೆಗೂ ಯತ್ನಿಸಿದ್ದರು. ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು, ಅವರನ್ನು ಕರೆದುಕೊಂಡು ರಾಜ್ಯದತ್ತ ಪ್ರಯಾಣ ಬೆಳೆಸಿದ್ದರು. ಪೊಲೀಸರ ವಾಹನವನ್ನು ಬೆನ್ನಟ್ಟಿದ್ದ ಕುಟುಂಬಸ್ಥರು, ನಮ್ಮ ಸಂಬಂಧಿಕರನ್ನು ಯಾರೋ ಅಪಹರಿಸಿಕೊಂಡು ಹೋಗುತ್ತಿದ್ದಾರೆ’ ಎಂದು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸಹ ವಾಹನ ಬೆನ್ನಟ್ಟಿದ್ದರು ಎಂದು ಮೂಲಗಳು ತಿಳಿಸಿವೆ. ಮಹಾರಾಷ್ಟ್ರ ಗಡಿಯಲ್ಲಿ ಪೊಲೀಸರ ವಾಹನವನ್ನು ಅಡ್ಡಗಟ್ಟಲಾಗಿತ್ತು.…

Read More

ಉತ್ಕೃಷ್ಣ ಗುಣಮಟ್ಟಕ್ಕೆ ಹೆಸರಾಗಿರುವ ಮೈಸೂರು ಸ್ಯಾಂಡಲ್ ಸೋಪ್‌ ಗೆ ಮತ್ತೆ ಬ್ರಾಂಡ್ ಮೌಲ್ಯ ತಂದುಕೊಟ್ಟು, ಕರ್ನಾಟಕದ ಹೆಮ್ಮೆಯ ಉತ್ಪನ್ನವಾಗಿ ಮಾಡಲಾಗುವುದು. ಇದಕ್ಕಾಗಿ ಉದ್ಯಮ ಪರಿಣತರಿಂದ ಸಲಹೆಗಳನ್ನು ಮುಕ್ತವಾಗಿ ಆಹ್ವಾನಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಆಸಕ್ತರು karnatakavision2030@gmail.comಗೆ ತಮ್ಮ ಸಲಹೆಗಳನ್ನು ಕಳಿಸಬಹುದು. ಈ ಬಗ್ಗೆ ಮಂಗಳವಾರ ಟ್ವಿಟ್ ಮಾಡಿರುವ ಅವರು, “ಮೈಸೂರು ಸ್ಯಾಂಡಲ್ ಸೋಪ್, ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಆರಂಭಿಸಿದ ಉತ್ಪನ್ನವಾಗಿದೆ. ಅದು ರಾಜ್ಯದ ಮಕುಟಮಣಿಯ ಅನರ್ಥ್ಯರತ್ನವಾಗಿದೆ. ಅವರ ಆಶಯಕ್ಕೆ ತಕ್ಕಂತೆ ಈ ಹೆಜ್ಜೆ ಇಡಲು ತೀರ್ಮಾನಿಸಲಾಗಿದೆ. ಉದ್ಯಮಿಗಳು ಈ ನಿಟ್ಟಿನಲ್ಲಿ ಸೂಕ್ತ ಸಲಹೆಗಳನ್ನು ಕೊಟ್ಟು, ಸರಕಾರದ ಈ ಪ್ರಯತ್ನಕ್ಕೆ ಕೈಗೂಡಿಸಬೇಕು’ ಎಂದು ಆಹ್ವಾನಿಸಿದ್ದಾರೆ. ಮೈಸೂರು ಸ್ಯಾಂಡಲ್ ಸೋಪ್ ರಾಜ್ಯದ ಸಾಬೂನು ಮಾರುಕಟ್ಟೆಯಲ್ಲೂ ಸಿಂಹಪಾಲು ಹೊಂದಿಲ್ಲ. ಹಾಗೆಯೇ, ಈ ಬ್ರಾಂಡ್ ಉತ್ಪನ್ನವು ದಕ್ಷಿಣ ಭಾರತಕ್ಕಷ್ಟೇ ಸೀಮಿತವಾಗಿದೆ. ಮಾರುಕಟ್ಟೆಯಲ್ಲಿ ಉಳಿದ ಹೆಸರಿನ ಸಾಬೂನುಗಳು ಅತ್ಯಧಿಕ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ. ಜೊತೆಗೆ ಒಟ್ಟು ವಹಿವಾಟಿನಲ್ಲಿ…

Read More

ಕೇಂದ್ರ ಸಚಿವ ಮನ್ಸುಖ್ ಮಾಂಡವಿಯ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಹಿರಿಯರಾದ ವಿನೋದ್ ತಾವೇ ಅವರು ಪ್ರಮುಖ ಪದಾಧಿಕಾರಿಗಳ ಅಭಿಪ್ರಾಯವನ್ನು ಸಂಗ್ರಹಿಸಿ ತೆರಳಿದ್ದಾರೆ.  ಕೇಂದ್ರದಲ್ಲಿ ರಾಷ್ಟ್ರೀಯ ಅಧ್ಯಕ್ಷರು ಮತ್ತು ಇನ್ನೂ ಕೆಲವರ ಜೊತೆ ಚರ್ಚಿಸಿ ರಾಜ್ಯ ಅಧ್ಯಕ್ಷರು ಯಾರು ಮತ್ತು ಯಾರು ವಿಪಕ್ಷ ನಾಯಕರೆಂದು ಪಕ್ಷ ಪ್ರಕಟಿಸಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕೇಂದ್ರದ ವೀಕ್ಷಕರು ರಾಜ್ಯಾಧ್ಯಕ್ಷರ ಮತ್ತು ವಿಪಕ್ಷ ನಾಯಕರ ಕುರಿತು ಅಭಿಪ್ರಾಯ ಸಂಗ್ರಹಿಸಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರು ಮತ್ತು ರಾಷ್ಟ್ರೀಯ ನಾಯಕರ ಜೊತೆ ಮಾತನಾಡಿ ಕರ್ನಾಟಕಕ್ಕೆ ಹೆಸರುಗಳನ್ನು ತಿಳಿಸುತ್ತಾರೆ ಎಂದು ವಿವರಿಸಿದರು. ವಿಪಕ್ಷ ನಾಯಕರ ಕುರಿತು ಶೀಘ್ರವೇ ಅವರು ತಿಳಿಸಲಿದ್ದಾರೆ ಎಂದು ಪ್ರಶ್ನೆಗೆ ಉತ್ತರ ನೀಡಿದರು. ರಾಜ್ಯ ವಿಧಾನಸಭೆ ಮತ್ತು ಮೇಲ್ಮನೆಯ ವಿಪಕ್ಷ ನಾಯಕರ ಹೆಸರನ್ನು ತಿಳಿಸುತ್ತಾರೆ. ಕೆಲವೇ ಸಮಯದಲ್ಲಿ ವಿಪಕ್ಷ ನಾಯಕರು…

Read More

ಈ ಸರಕಾರ ಬಂದ ಮೇಲೆ ನಡೆಯುತ್ತಿರುವ ವರ್ಗಾವಣೆ ದಂಧೆ ಹಾಗೂ ಕಾಸಿಗಾಗಿ ಪೋಸ್ಟಿಂಗ್ ಬಗ್ಗೆ ನಾನು ದಾಖಲೆ ಕೊಡಲು ಸಿದ್ಧನಿದ್ದೇನೆ. ತನಿಖೆ ನಡೆಸುವ ದಮ್ಮು ತಾಕತ್ತು ಸರಕಾರಕ್ಕೆ ಇದೆಯಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ನೇರ ಸವಾಲು ಹಾಕಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ ಅವರು; ಯಾರೋ ಒಬ್ಬರು ತಾಖತ್ತು ಇದ್ದರೆ ಕುಮಾರಸ್ವಾಮಿ ದಾಖಲೆ ಕೊಡಲಿ ಎಂದು ಹೇಳಿದ್ದಾರೆ. ಅದಕ್ಕೆ ಇದೇ ನನ್ನ ಉತ್ತರ. ನನ್ನ ಹತ್ತಿರ ದಾಖಲೆಗಳೂ ಇವೆ ಎಂದರು. ದಾಖಲೆ ಕೊಡುವ ದಮ್ಮು, ತಾಖತ್ತು ನನಗೆ ಇದೆ. ತನಿಖೆ ಮಾಡುವ ದಮ್ಮು, ತಾಖತ್ತು ಇವರಿಗೆ ಇದೆಯಾ? ಎಂದು ಅವರು ಖಾರವಾಗಿ ಪ್ರಶ್ನಿಸಿದರು. ಈ ಸರಕಾರ ಇನ್ನೂ ಹನಿಮೂನ್ ಪೀರಿಯಡ್ ನಲ್ಲಿ ಇದೆ ಎಂದು ಹೇಳುತ್ತಿದ್ದಾರೆ ಕಾಂಗ್ರೆಸ್ ನವರು, ಸರಕಾರಕ್ಕೆ ಐದು ಆರು ತಿಂಗಳಾದರೂ ಸಮಯ ಕೊಡಬೇಡವೇ ಎಂದು ಕೆಲವರು ಕೇಳುತ್ತಿದ್ದಾರೆ. ಹನಿಮೂನ್ ಪೀರಿಯಡ್ ನಲ್ಲಿದ್ದರೆ ಈಗೆಲ್ಲಾ ಮಾಡುತ್ತಾರೆಯೇ? ಹನಿಮೂನ್ ಪಿರಿಯಡ್…

Read More

ಬೀದಿ ಬದಿ ಸೊಪ್ಪು ಮಾರುವ ವೃದ್ಧೆ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ಕಳೆದ ಶನಿವಾರ ಜಯನಗರದ 26ನೇ ಕ್ರಾಸ್ ನಲ್ಲಿರುವ ಬಾಲಜಿ ಮೆಡಿಕಲ್ ಬಳಿ ನಡೆದಿದೆ. ವೃದ್ಧೆ ಚಂದ್ರಮ್ಮ ಬಾಲಜಿ ಮೆಡಿಕಲ್ ಬಳಿ ಫುಟ್ ಬಾತ್ ನಲ್ಲಿ ಕಳೆದ ಕೆಲ ವರ್ಷಗಳಿಂದ ಸೊಪ್ಪಿನ ವ್ಯಾಪಾರವನ್ನು ಮಾಡುತ್ತಿದ್ದರು. ಶನಿವಾರ ಸಂಜೆ ಬೈಕ್ ನಲ್ಲಿ ಹೆಲ್ಮೆಟ್ ಧರಿಸಿ ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಚಂದ್ರಮ್ಮ ತಲೆಗೆ ಮಚ್ಚಿನಿಂದ ಹೊಡೆದು ಪರಾರಿಯಾಗಿದ್ದಾರೆ. ಚಂದ್ರಮ್ಮ ತಲೆಗೆ ತೀವ್ರ ಪೆಟ್ಟಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಕುರಿತು ತಿಲಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More