Author: admin

ಸಾರಿಗೆ ನಿಗಮಗಳಲ್ಲಿ ದರ್ಜೆ-3 ಮೇಲ್ವಿಚಾರಕೇತರ ಹಾಗೂ ದರ್ಜೆ-4ರ ನೌಕರರಿಗೆ ಅಂತರ ನಿಗಮಗಳ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (ಕೆಎಸ್‌ಆರ್‌ ಟಿಸಿ), ಬೆಂಗಳೂರು ಮಹಾನಗರ ಸಾರಿಗೆ (ಬಿಎಂಟಿಸಿ), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ (ಎನ್‌ ಡಬ್ಲ್ಯುಕೆಆರ್‌ ಟಿಸಿ) ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯಲ್ಲಿ (ಕೆಕೆಆರ್‌ ಟಿಸಿ) ಜುಲೈ 5ರ ಬೆಳಿಗ್ಗೆ 10ರಿಂದ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ. ಆಗಸ್ಟ್ 18ರಂದು ಸಂಜೆ 5. 30ರ ವರೆಗೆ ಆನ್‌ಲೈನ್ ಮೂಲಕ: www.ksrtc.org/transfer ರಲ್ಲಿ ಸಾಮಾನ್ಯ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಬಹುದು ಎಂದು ಕೆಎಸ್ ಆರ್‌ ಟಿಸಿ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಮಾನ್ಯ ವರ್ಗಾವಣೆಯಲ್ಲಿ ಪತಿ/ಪತ್ನಿ ಪ್ರಕರಣಗಳೊಂದಿಗೆ ಶೇ 40ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ನೌಕರರು, ತೀವ್ರ ತರಹದ ಅನಾರೋಗ್ಯ (ಎಚ್‌ಐವಿ, ಹೃದ್ರೋಗ, ಕ್ಯಾನ್ಸರ್, ಸೈನಲ್ ಕಾರ್ಡ್ ಸಮಸ್ಯೆ, ಮೂತ್ರಪಿಂಡ ವೈಫಲ್ಯ, ಮಿದುಳು ಸಂಬಂಧಿ ಕಾಯಿಲೆಗಳು) ಪ್ರಕರಣಗಳಲ್ಲಿ ವರ್ಗಾವಣೆಯಲ್ಲಿ ಶೇ 5ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ನೌಕರರು ವೈದ್ಯಕೀಯ ಮಂಡಳಿ…

Read More

ವಿದೇಶಗಳಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ 2 ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 148 ಲಕ್ಷ ಮೌಲ್ಯದ 783 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ಬ್ಯಾಂಕಾಕ್ ನಿಂದ ಬಂದಿದ್ದ ಮೂವರು ಆರೋಪಿಗಳು ಚಿನ್ನದ ಸರಗಳನ್ನು ಮುಚ್ಚಿಟ್ಟುಕೊಂಡಿದ್ದರು. ಅವರ ಬಳಿಯಿದ್ದ 731.47 ಲಕ್ಷ ಮೌಲ್ಯದ 516 ಗ್ರಾಂನಷ್ಟು ಚಿನ್ನ ವಶಕ್ಕೆ ಪಡೆಯಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಟ್ರಾಲಿಬ್ಯಾಗ್‌ ನಲ್ಲಿ ದುಬೈನಿಂದ ರೇಡಿಯಂ ಲೇಪಿತ ಚಿನ್ನದ ಸರ, ತುಂಡು ತಂದಿದ್ದ ಪ್ರಯಾಣಿಕನನ್ನು ಬಂಧಿಸಿದ್ದು, ಆತನಿಂದ 116. 39 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ತುರುವೇಕೆರೆ : 2023-24ನೇ ಸಾಲಿನ ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 7ರಂದು ಪಟ್ಟಣದ ಚೌಧ್ರಿ ಕನ್ವೆನ್ಷನ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಡಿ.ಕೆ. ನಾಗರಾಜು ತಿಳಿಸಿದ್ದಾರೆ. ಪಟ್ಟಣದಲ್ಲಿ ಪತ್ರಿಗಾಗುವಷ್ಟ ಏನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ವರ್ಷವೂ ಸಹ ಜಿಸಿ ಶ್ರೀನಿವಾಸ್ ಅವರ  ನೇತೃತ್ವದಲ್ಲಿ ನಮ್ಮ ಸಂಸ್ಥೆ ನೂರಾರು ವಿಧವಾದ ಸೇವಾ ಚಟುವಟಿಕೆಗಳನ್ನು ನಡೆಸಿ ಉತ್ತಮ ಪ್ರಶಸ್ತಿಯನ್ನು ಸಹ ಪಡೆದುಕೊಂಡಿದೆ ಎಂದರು. 2023 — 24 ರ ಅವಧಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಲೋಕೇಶ್ ಮಾತನಾಡಿ ನನ್ನ ಪ್ರಸಕ್ತ ಅವಧಿಯಲ್ಲಿ ಪ್ರತಿ ತಿಂಗಳು ವ್ಯಕ್ತಿತ್ವ ವಿಕಸನಕ್ಕೆ ಒತ್ತು ನೀಡುವ ಜೊತೆಗೆ ಗಿಡಗಳನ್ನು ನೆಡುವುದು ಶೈಕ್ಷಣಿಕ ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ವಿಚಾರ ಸಂಕಿರಣ ಕ್ಯಾನ್ಸರ್ ಮತ್ತು ಡಯಾಬಿಟಿಸ್ ಬಗ್ಗೆ ಜಾಗೃತಿ ಜಾಥ ಅನಾಥರಿಗೆ ರಕ್ಷಣೆ ಮತ್ತು ಮೂಲಭೂತ ಸೌಕರ್ಯವನ್ನು ಒದಗಿಸುವ ಪ್ರಯತ್ನ ಮಾಡಲಾಗುವುದು ಹಾಗೆಯೇ ಶಾಲೆಗಳಿಗೆ ಅಗತ್ಯವಿರುವ ಸೌಕರ್ಯಗಳನ್ನು ಕಲ್ಪಿಸಲಾಗುವುದು ತಾಲೂಕಿನಲ್ಲಿ ಅತ್ಯುತ್ತಮವಾಗಿ ವಿದ್ಯಾಭ್ಯಾಸ…

Read More

ಬೆಳಗಾವಿ: ನಾವು ರಾಜಕಾರಣಿಗಳು ಹೆಸರು ಮಾಡುವ ಆಸೆ, ಆಕಾಂಕ್ಷೆಗಳನ್ನಿಟ್ಟುಕೊಂಡು ಕೆಲಸ ಮಾಡುತ್ತೇವೆ. ಆದರೆ ಈಶ್ವರೀಯ ವಿಶ್ವವಿದ್ಯಾಲಯ ನಿಸ್ವಾರ್ಥ ಭಾವದಿಂದ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿಯ ಲಕ್ಷ್ಮೀ ನಗರದ ಸಿದ್ದಿ ವಿನಾಯಕ ಕಾಲನಿಯಲ್ಲಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ “ಜ್ಞಾನ ಪ್ರಕಾಶ ಕುಂಜ” ದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಸತ್ಕಾರ ಸಮಾರಂಭದಲ್ಲಿ ಭಾಗಿಯಾಗಿ, ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿದ್ಯಾಲಯಕ್ಕೆ ತನ್ನದೇ ಆದ ವಿಶೇಷತೆಯಿದ್ದು, ಮನಸ್ಸಿಗೆ ಶಾಂತಿಯನ್ನು ನೀಡುವುದಲ್ಲದೆ ಮಾನಸಿಕ ಸ್ಥಿರತೆ, ಏಕಾಗ್ರತೆ, ಸಕಾರಾತ್ಮಕ ಚಿಂತನೆಯಿಂದ ಒತ್ತಡಮುಕ್ತ ಜೀವನ, ತನ್ಮೂಲಕ ಆರೋಗ್ಯ ಕಾಪಾಡಲು ಸಹಾಯ ಮಾಡುತ್ತಿದೆ. ನಾವು ನಂಬಿರುವ ಪರಮಾತ್ಮನನ್ನು ನೆನೆಯೊದರಲ್ಲೇ ಪರಮಸುಖವಿದೆ ಎನ್ನುವ ಸಂದೇಶವನ್ನು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯ ಸಮಾಜಕ್ಕೆ ಸಾರುತ್ತಿದೆ. ನಾವು ರಾಜಕಾರಣಿಗಳು ಹಲವಾರು ಆಸೆ, ಆಕಾಂಕ್ಷೆ, ಗುರಿಗಳನ್ನಿಟ್ಟುಕೊಂಡು ಸಮಾಜದಲ್ಲಿ ಹೆಸರು ಮಾಡಲು ಹೊರಟಿದ್ದೇವೆ, ಆದರೆ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ನಿಸ್ವಾರ್ಥ…

Read More

ಬೆಂಗಳೂರು: ಬೆಳಗಾವಿ ಜಿಲ್ಲೆ ಕಂಡ ಅತ್ಯಂತ ಮುತ್ಸದ್ದಿ ರಾಜಕಾರಣಿ ಡಿ.ಬಿ.ಇನಾಮದಾರ ಕಳಂಕ ರಹಿತವಾಗಿ ರಾಜಕಾರಣವನ್ನು ಹೇಗೆ ಮಾಡಬಹುದೆನ್ನುವುದನ್ನು ತೋರಿಸಿ ನಮಗೆಲ್ಲರಿಗೂ ಆದರ್ಶರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಸೋಮವಾರ ಅಗಲಿದ ಗಣ್ಯರಿಗೆ ಸಂತಾಪ ಸೂಚಕ ನಿರ್ಣಯದ ಪರವಾಗಿ ಅವರು ಮಾತನಾಡುತ್ತಿದ್ದರು. ಇನಾಮದಾರ ತಮ್ಮದೇ ಶೈಲಿಯಲ್ಲಿ ರಾಜಕಾರಣ ಮಾಡಿದ್ದಾರೆ. ಜಿಲ್ಲೆಗೆ ಅನೇಕ ಯೋಜನೆಗಳನ್ನು ತರಲು ಪ್ರಯತ್ನಿಸಿ, ರಾಜಕಾರಣವನ್ನು ಕಳಂಕರಹಿತವಾಗಿ ಮಾಡಿ ಮತ್ತು ಸಾಮಾಜಿಕ ಕಳಕಳಿ ಹೊಂದಿ ನಮಗೆಲ್ಲ ರಾಜಕಾರಣವನ್ನು ಯಾವ ರೀತಿ ಮಾಡಬೇಕೆಂದು ತೋರಿಸಿ ಹೋಗಿದ್ದಾರೆ ಎಂದು ಸ್ಮರಿಸಿದರು. 6 -7 ಬಾರಿ ಶಾಸಕರಾಗಿ, ಸಚಿವರಾಗಿ, ಯಾರಿಗೂ ಕಷ್ಟ ಕೊಡದೆ, ವಿರೋಧ ಪಕ್ಷದಲ್ಲಿರಲಿ, ಆಡಳಿತ ಪಕ್ಷದಲ್ಲಿರಲಿ ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗಿ ರಾಜಕಾರಣ ಮಾಡಿದರು. ಮಲಪ್ರಭ ಸಕ್ಕರೆ ಕಾರ್ಖಾನೆ ಮುಚ್ಚುವ ಸಂದರ್ಭದಲ್ಲಿದ್ದಾಗ ಪುನಶ್ಚೇತನ ಮಾಡಿ ರೈತರಿಗೆ ನೆರವಾದರು. ನಮ್ಮ ಭಾಗದಲ್ಲಿ ಅವರನ್ನು ಎಲ್ಲರೂ ಧಣಿ ಎಂದು ಕರೆಯುತ್ತಿದ್ದರು. ಯಾರೂ ಹೆಸರು ಹೇಳಿ ಕರೆಯುತ್ತಿರಲಿಲ್ಲ.…

Read More

ಬೆಂಗಳೂರು: ವಿಧಾನಸಭೆ ಕಲಾಪ ಪುನಾರಂಭವಾಗುತ್ತಿದ್ದಂತೆ ಸದನದ ಬಾವಿಗಿಳಿದು ಬಿಜೆಪಿ ಸದಸ್ಯರು ಪ್ರತಿಭಟಿಸುತ್ತಿದ್ದಾರೆ. ದ್ರೋಹ ದ್ರೋಹ ಕಾಂಗ್ರೆಸ್ ದ್ರೋಹ ಎಂದು ಬಿಜೆಪಿ ಘೋಷಣೆ ಮಾಡುತ್ತಿದ್ದರೆ, ಇತ್ತ ಕಾಂಗ್ರೆಸ್ ಶಾಸಕರು ಬಿಜೆಪಿ ವಿರುದ್ದ ಘೋಷಣೆ​ ಕೂಗುತ್ತಿದ್ದಾರೆ. ಸದನದಲ್ಲಿ ಬಿಜೆಪಿ ಗಲಾಟೆ ಹಿನ್ನಲೆ ಕೆಲ ನಿಮಿಷಗಳ ಕಲಾಪ ಮುಂದೂಡಿಕೆ ಮಾಡಲಾಗಿದ್ದು, ಈ ವೇಳೆ ಸ್ಪೀಕರ್ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯರನ್ನ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವ ಸುನಿಲ್ ಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬಿಟ್ ಕಾಯಿನ್ ಹಗರಣ ಮರು ತನಿಖೆಗೆ ರಾಜ್ಯ ಸರ್ಕಾರ ಎಸ್‌ ಐಟಿ (ವಿಶೇಷ ತನಿಖಾ ತಂಡ)ವನ್ನ ರಚನೆ ಮಾಡಿದೆ. ಅದರ ಮುಖ್ಯಸ್ಥರನ್ನನಾಗಿ ಸಿಐಡಿ ಎಡಿಜಿಪಿ ಮನೀಷ್ ಕರ್ಬೀಕರ್ ನೇಮಕ ಮಾಡೊದ್ದು, ಇವರ ನೇತೃತ್ವದಲ್ಲಿ ತಂಡ ರಚನೆಯಾಗಿದೆ. ತಂಡದಲ್ಲಿ ಡಿಐಜಿ ವಂಶಿಕೃಷ್ಣ, ಡಿಸಿಪಿ ಅನೂಪ್ ಶೆಟ್ಟಿ, ಎಸ್‌ಪಿ ಶರತ್ ಸಹ ಇರಲಿದ್ದಾರೆ. ತಂಡ ರಚನೆಯಾಗುತ್ತಿದ್ದಂತೆ ಸಿಐಡಿಯಲ್ಲಿ ಎಸ್‌ ಐಟಿ ಅಧಿಕಾರಿಗಳ ಜೊತೆ ಸಿಐಡಿ ಡಿಜಿ ಎಂ. ಎ. ಸಲೀಂ ಸಭೆ ನಡೆಸಿದ್ದಾರೆ. ತನಿಖೆಯ ರೂಪುರೇಷಗಳ ಬಗ್ಗೆ ಚರ್ಚೆ ನಡೆಸಿದ್ದು, ಫೈಲ್ ವರ್ಗಾವಣೆ, ಕೆಳಹಂತದಿಂದ ಯಾವೆಲ್ಲ ಅಧಿಕಾರಿಗಳು ತಂಡದಲ್ಲಿ ಇರಬೇಕು ಎಂಬುದರ ಚರ್ಚೆ ಮಾಡಲಾಗಿದೆ. ಈಗಾಗಲೇ ಸಿಸಿಬಿಯಿಂದ ಚಾರ್ಜ್ ಶೀಟ್ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಮೊದಲು ನ್ಯಾಯಾಲಯದ ಅನುಮತಿ ಪಡೆದು ತನಿಖೆ ಮುಂದುವರೆಸಲು ಸಿದ್ಧತೆ ನಡೆಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಜ್ಯಪಾಲರ ಭಾಷಣ ಸಪ್ಪೆಯಾಗಿದ್ದು ಯಾವುದೇ ಜೀವಾಳ ಇಲ್ಲ. ಹೊಸ ಸರ್ಕಾರ ಬಂದಾಗ, ಹೊಸ ಚೈತನ್ಯ, ಹೊಸ ದಿಕ್ಕೂಚಿ ಇಲ್ಲದೆ ಸರ್ಕಾರ ಕವಲು ದಾರಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಪಾಲರ ಭಾಷಣದಲ್ಲಿ ಭರವಸೆ ಮೂಡುವಂತಹ ಯಾವುದೇ ಭಾಷಣ ಇಲ್ಲ. ಸುಳ್ಳಿನ ಕಂತೆ ಅಂತ ಸಾಭಿತಾಗಿದೆ. ಅಕ್ಕಿಯನ್ನು 10 ಕೆಜಿ ಕೊಡುತ್ತೇವೆ ಅಂತ ಸಹಿ ಮಾಡಿ ಹೇಳಿದ್ದರು. ಈಗ ಕೇಂದ್ರ ಅಂತ ಹೇಳದೆ ಆಹಾರ ಭದ್ರತೆಯಲ್ಲಿ ಕೊಡುತ್ತೇವೆ ಅಂತಿದ್ದಾರೆ. ಅಕ್ಕಿಯನ್ನು ಕೇಂದ್ರ ಸರ್ಕಾರ ಕೊಡುತ್ತಿದೆ ಎಂದು ಹೇಳಲು ಅವರಿಗೆ ನಾಚಿಕೆಯಾಗಿದೆ ಅಂತ ವಾಗ್ದಾಳಿ ನಡೆಸಿದರು. ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ 200 ಯೂನಿಟ್ ವಿದ್ಯುತ್ ಉಚಿತ ಕೊಡುವುದಾಗಿ ಹೇಳಿದ್ದರು. ಆದರೆ, ಈಗ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿದ್ದಾರೆ. ಜನರನ್ನು ಯಾಮಾರಿಸುವ ಕೆಲಸ ಮಾಡಿದ್ದಾರೆ. ಜವಾಬ್ದಾರಿಯಿಂದ ನುಸುಳಿಕೊಳ್ಳುತ್ತಿರುವ ಸರ್ಕಾರ ಇದು. ಅರ್ಥವಿಲ್ಲದೆ ಸುಮ್ಮನೆ ಬೊಗಳೆ ಭಾಷಣ ಮಾಡಿಸಿದ್ದಾರೆ. ಈ ಸರ್ಕಾರಕ್ಕೆ ಅಭಿವೃದ್ಧಿಯ…

Read More

ಜೆ. ಪಿ. ನಗರದ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನಿಂದ ವಿಶೇಷವಾಗಿ ಗುರುಪೂರ್ಣಿಮೆ ಆಚರಿಸಲಾಗಿದ್ದು, ಶಿರಡಿ ಸಾಯಿ ಬಾಬಾರಿಗೆ ವಿಶೇಷ ಅಲಂಕಾರ, ವೈಭವದ ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ಏರ್ಪಡಿಸಲಾಗಿತ್ತು. ಶಿರಡಿ ಬಾಬಾರನ್ನು ೨೦ ಸಾವಿರ ತೆಂಗಿನಕಾಯಿ, ೨. ೫೦೦ ಪರಂಗಿ, ಹಲಸಿನ ಹಣ್ಣು, ೫, ೦೦೦ ಬೆಲ್ಲ, ೨೫, ೦೦೦ ಕ್ಕೂ ಹೆಚ್ಚು ಖರ್ಜೂರ, ಬಾದಾಮಿ, ಗೋಡಂಬಿ, ದ್ರಾಕ್ಷಿ, ಒಣ ಹಣ್ಣುಗಳು, ಅಸಂಖ್ಯಾತ ನವಧಾನ್ಯಗಳ ಮೂಲಕ ವಿಶೇಷ ಅಲಂಕಾರ ಮಾಡಲಾಗಿದ್ದು, ಗುರುಪೂರ್ಣಿಗೆ ಬಾಬಾ ಹಿಂದೆಂದಿಗಿಂತಲೂ ಈ ಬಾರಿ ವಿಶೇಷವಾಗಿ ಕಂಗೊಳಿಸುತ್ತಿದ್ದಾರೆ. ಕೆಂದು ಬಣ್ಣದ ಎಳನೀರಿನಿಂದಲೂ ವಿಶೇಷ ಅಲಂಕಾರ ಮಾಡಲಾಗಿದೆ ಎಂದು *ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನ ಟ್ರಸ್ಟಿ ರಾಮಮೋಹನ್ ರಾಜ್ ತಿಳಿಸಿದ್ದಾರೆ. ಸಾಯಿ ಬಾಬಾ ಅವರಿಗೆ ಅಲಂಕಾರ ಮಾಡಿದ ಎಲ್ಲಾ ವಸ್ತುಗಳನ್ನು ಮರಳಿ ಭಕ್ತರಿಗೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ. ಹಣ್ಣಾದ ಪರಂಗಿ, ಹಲಸು ಮತ್ತಿತರ ಆಹಾರ ವಸ್ತುಗಳನ್ನು ಸ್ಥಳದಲ್ಲಿಯೇ ಭಕ್ತಾದಿಗಳಿಗೆ ಸಮರ್ಪಿಸಲಾಗುತ್ತಿದೆ. ಕಳೆದ ವರ್ಷ ಕ್ರೀಡಾ…

Read More

ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಕೃಷ್ಣಮೂರ್ತಿ ಸಿ. ಡಿ (64) ಮೃತರು. ಶನಿವಾರ ಸಂಜೆ ನಡೆದಿದ್ದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕೃಷ್ಣಮೂರ್ತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಅವರು ಭಾನುವಾರ ಮೃತಪಟ್ಟಿದ್ದಾರೆ ಎಂದು ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಹೇಳಿದರು. ಕೃಷ್ಣಮೂರ್ತಿ ಅವರು ಟಿವಿಎಸ್ ಮೊಪೆಡ್ (ಕೆಎ 04 ಇಯು 9717) ವಾಹನದಲ್ಲಿ, ಈಸ್ಟ್ ವೆಸ್ಟ್ ಕಾಲೇಜು ಕಡೆಯಿಂದ ಬ್ಯಾಡರಹಳ್ಳಿ ಠಾಣೆ ಕಡೆಗೆ ಹೊರಟಿದ್ದರು. ಇದೇ ಮಾರ್ಗದಲ್ಲಿ ತೆರಳುತ್ತಿದ್ದ ಜೈ (24), ಅತೀ ವೇಗ ಹಾಗೂ ನಿರ್ಲಕ್ಷ್ಯದಿಂದ ತಮ್ಮ ಹೊಂಡಾ ಆ್ಯಕ್ಟಿವಾ ದ್ವಿಚಕ್ರ ವಾಹನ (ಕೆಎ 02 ಎಚ್‌ಕೆ 4120) ಚಲಾಯಿಸಿದ್ದ. ಇದರಿಂದಾಗಿ ದ್ವಿಚಕ್ರ ವಾಹನ, ಟಿವಿಎಸ್ ಮೊಪೆಡ್‌ ಡಿಕ್ಕಿ ಹೊಡೆದಿತ್ತು. ಕೃಷ್ಣಮೂರ್ತಿ, ಜೈ ಹಾಗೂ ಆತನ ವಾಹನದ ಹಿಂಬದಿಯಲ್ಲಿದ್ದ ಕಾಲು ಉರ್ವಾ (31) ಗಾಯಗೊಂಡಿದ್ದರು. ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೈ ಹಾಗೂ ಉರ್ವಾ ಚೇತರಿಸಿಕೊಳ್ಳುತ್ತಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More