Subscribe to Updates
Get the latest creative news from FooBar about art, design and business.
- ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
- ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
- ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
- ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
- ಮಧುಗಿರಿ: ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
- ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
- ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
- ಗುರು ಶಿಷ್ಯರು: ಈ ದಿನದ ಕಥೆ
Author: admin
ರಾಮನಗರ: ಮೊರಾರ್ಜಿ ವಸತಿ ಶಾಲೆ ಗೋಡೆ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಹೊಸೂರು ಗೊಲ್ಲಳ್ಳಿಯಲ್ಲಿ ನಡೆದಿದೆ. ವಿದ್ಯಾರ್ಥಿ ಕೌಶಿಕ್ (12) ಮೃತ ದುರ್ದೈವಿ. ಬೆಳಗ್ಗೆ ಸ್ನಾನಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ. ಗೋಡೆಯ ಅವಶೇಷಗಳಡಿ ಸಿಲುಕಿ ಗಾಯಗೊಂಡಿದ್ದ ಕೌಶಿಕ್ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾರೆ. ನೀರು ಸಂಗ್ರಹಕ್ಕೆ ತಡೆಗೋಡೆ ನಿರ್ಮಿಸಲಾಗಿತ್ತು. ನೀರಿನ ಪ್ರಮಾಣ ತಡೆಯಲಾಗದೇ ಗೋಡೆ ಕುಸಿದಿದೆ.
ಬೆಂಗಳೂರು: ಹೆಣ್ಣೂರು ಠಾಣೆ ವ್ಯಾಪ್ತಿಯಲ್ಲಿ ಕಾರು ಡಿಕ್ಕಿಯಾಗಿ ಪಾದಚಾರಿ ರಾಘವೇಂದ್ರ (21) ಮೃತಪಟ್ಟಿದ್ದು, ಅಪಘಾತದ ಬಳಿಕ ಕಾರು ಸಮೇತ ಚಾಲಕ ಪರಾರಿಯಾಗಿದ್ದಾನೆ. ‘ಕೊಪ್ಪಳದ ರಾಘವೇಂದ್ರ, ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದರು. ಹೋಟೆಲೊಂದರಲ್ಲಿ ಸಹಾಯಕ ಕೆಲಸಕ್ಕೆ ಸೇರಿದ್ದರು. ಸ್ನೇಹಿತರ ಜೊತೆ ಕೊಠಡಿಯಲ್ಲಿ ವಾಸವಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ. ‘ಸೆ. 17ರಂದು ರಾಘವೇಂದ್ರ, ಇಬ್ಬರು ಸ್ನೇಹಿತರ ಜೊತೆ ಕೊಠಡಿಯತ್ತ ನಡೆದುಕೊಂಡು ಹೊರಟಿದ್ದರು. ಹೋಟೆಲ್ ಬಳಿ ರಸ್ತೆ ದಾಟುತ್ತಿದ್ದರು. ಆಗ ಕಾರು ಡಿಕ್ಕಿಯಾಗಿ ದಾರುಣ ಸಾವನ್ನಪ್ಪಿದ್ದಾರೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ಲಕ್ಷ್ಯದಿಂದಾಗಿ , ಮಳೆ ಬಂದಾಗಲೆಲ್ಲಾ ದಕ್ಷಿಣ ಬೆಂಗಳೂರಿನ ರಾಮಕೃಷ್ಣನಗರ ಮತ್ತು ಇಲಿಯಾಸ್ ನಗರದಲ್ಲಿ ಹತ್ತಾರು ಮನೆಗಳಿಗೆ ಕೊಳಚೆ ನೀರು ನುಗ್ಗುತ್ತಿದೆ. ಈ ಸಂಬಂಧ ನಿವಾಸಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಪದೇ ಪದೇ ಜಲಮಂಡಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಗಂಗಾಧರನಗರ ಮತ್ತು ಯಲಚೇನಹಳ್ಳಿಗೆ ಸಂಪರ್ಕ ಕಲ್ಪಿಸುವ ಒಳಚರಂಡಿ ಸಂಪರ್ಕ ಮಾರ್ಗದ ಕಾಮಗಾರಿಯನ್ನು ಬಿಡಬ್ಲ್ಯುಎಸ್ ಎಸ್ ಬಿ ಪೂರ್ಣಗೊಳಿಸದಿರುವುದು ಈ ಸಮಸ್ಯೆಗೆ ಕಾರಣವಾಗಿದೆ. ಇದರಿಂದಾಗಿ ಕೇವಲ 1.5 ಮೀಟರ್ ಅಗಲದ ಬಿಬಿಎಂಪಿ ರಾಜಕಾಲುವೆಗೆ ಕೊಳಚೆ ನೀರು ಸೇರುತ್ತಿದೆ. BWSSB ಲಿಂಕ್ ಲೈನ್ ಪೂರ್ಣಗೊಳಿಸಲು 40 ಮೀಟರ್ ಒಳಚರಂಡಿ ಪೈಪ್ ಲೈನ್ ಹಾಕುವ ಅವಶ್ಯಕತೆಯಿದೆ ಎಂದು ಹೇಳಲಾಗಿದೆ. ಯಲಚೇನಹಳ್ಳಿಯಲ್ಲಿನ ಉಪ ಒಳಚರಂಡಿ ಮಾರ್ಗವನ್ನು ಸಂಪರ್ಕಿಸುವ ಒಳಚರಂಡಿ ಕಾಮಗಾರಿ ಪೂರ್ಣಗೊಳ್ಳದಿರುವುದು ಮತ್ತು ಪೈಪ್ ಲೈನ್ ವಿಸ್ತರಿಸದಿರುವ ಕಾರಣ ರಾಜಕಾಲುವೆಗೆ ಚರಂಡಿ ನೀರು ಹರಿಯುತ್ತದೆ. ಮಳೆ ಬಂದರೆ ಬಿಎಸ್ ಡಬ್ಲ್ಯುಡಿಯಿಂದ ಕೊಳಚೆ ನೀರು ಉಕ್ಕಿ ಹರಿದು ತಗ್ಗು ಪ್ರದೇಶದಲ್ಲಿರುವ…
ಬೆಂಗಳೂರು: ಕುಡಿದ ಮತ್ತಿನಲ್ಲಿ ಸ್ನೇಹಿತನ ಮಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿಯನ್ನು ಪ್ಲಾಸ್ಕ್ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆ ಮಾಡಿ ಬಳಿಕ ಶವವನ್ನು ಸ್ಥಳಾಂತರ ಮಾಡಲು ಹೋಗಿ ಆರೋಪಿ ಸಿಕ್ಕಿಬಿದ್ದಿದ್ದಾನೆ. ಸೀಗೆಹಳ್ಳಿ ನಿವಾಸಿ ತೇಜೇಶ್ವರ್ ಕೊಲೆಯಾದ ವ್ಯಕ್ತಿ. ಆರೋಪಿ ಧರ್ಮೇಂದ್ರ ಸಿಂಗ್ನನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮದ್ಯ ವ್ಯಸನಿಯಾಗಿದ್ದ. ಬೆಳಿಗ್ಗೆಯೇ ಮದ್ಯ ಸೇವಿಸಿ ಕೆಲಸಕ್ಕೆ ತೆರಳುತ್ತಿದ್ದ. ಇದರಿಂದ ತೇಜೇಶ್ವರ್ ನನ್ನು ಹೋಟೆಲ್ನ ಸೆಕ್ಯೂರಿಟಿ ಕೆಲಸದಿಂದ ತೆಗೆದುಹಾಕಲಾಗಿತ್ತು. ಇಬ್ಬರು ನೇಪಾಳ ಮೂಲದವರಾಗಿದ್ದಾರೆ. ಬುಧವಾರ ಬೆಳಿಗ್ಗೆ ಆರೋಪಿ ಸೇರಿದಂತೆ ನಾಲ್ವರು ಬಾರ್ ವೊಂದಕ್ಕೆ ತೆರಳಿ ಮದ್ಯ ಸೇವಿಸಿದ್ದರು. ಮಧ್ಯಾಹ್ನದ ಬಳಿಕ ಕೊಲೆಯಾದ ವ್ಯಕ್ತಿ ಹಾಗೂ ಆರೋಪಿ ಮನೆಯೊಂದರಲ್ಲಿ ಪಾರ್ಟಿ ನಡೆಸುತ್ತಿದ್ದರು. ಆಗ ಪುತ್ರಿಯ ಬಗ್ಗೆ ಕೀಳಾಗಿ ಮಾತನಾಡಿದ್ದಾನೆ ಎಂದು ಆರೋಪಿಸಿ, ತೇಜೇಶ್ವರ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಬೆಂಗಳೂರು: ರಾಜ್ಯ ಸರ್ಕಾರ ಸಮರ್ಪಕ ವಾದ ಮಾಡದೆ ಇದ್ದುದರಿಂದ, ವಾಸ್ತವಿಕ ಸ್ಥಿತಿಯನ್ನು ಸಮರ್ಥವಾಗಿ ಮನದಟ್ಟು ಮಾಡಿಕೊಡಲು ವಿಫಲವಾಗಿದ್ದರಿಂದ ಕಾವೇರಿ ವಿಚಾರದಲ್ಲಿ ಸುಪ್ರೀಂಕೋರ್ಟ್ನಲ್ಲಿ ರಾಜ್ಯಕ್ಕೆ ಹಿನ್ನಡೆಯಾಯಿತು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿಪ್ರಾಯ ಪಟ್ಟಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ನೀರು ಬಿಟ್ಟು ತಪ್ಪು ಮಾಡಿತು. ಈಗ ಕೋರ್ಟ್ ಮುಂದೆ ಸಮರ್ಪಕವಾದ ವಾದ ಮಂಡಿಸುವಲ್ಲಿ ವಿಫಲವಾಯಿತು. ಸರಿಯಾಗಿ ಹೋಂ ವರ್ಕ್ ಮಾಡದೆ ಕೋರ್ಟ್ ಮೆಟ್ಟಿಲೇರಿರುವುದು ಸಾಬೀತಾಗಿದೆ ಎಂದರು. ಕೋರ್ಟ್ ಆದೇಶಕ್ಕೂ ಮೊದಲೇ ನೀರು ಬಿಟ್ಟು ತಪ್ಪು ಮಾಡಿದರು. ಈಗ ಕೋರ್ಟ್ ನಲ್ಲಿ ಸರಿಯಾಗಿ ವಾದ ಮಂಡಿಸದೇ ವಿಫಲರಾದರು. ನಾವು ನೀಡುವ ಅಂಕಿ ಅಂಶಗಳ ಮೇಲೆ ಕೋರ್ಟ್ ಆದೇಶ ನೀಡುತ್ತದೆ, ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಮರ್ಥವಾಗಿ ವಾದ ಮಾಡದಿರುವುದು ಹಿನ್ನಡೆಗೆ ಕಾರಣವಾಗಿದೆ ಎಂದರು. ಸರ್ಕಾರ ಮೊದಲಿನಿಂದಲು ಕಾವೇರಿ ವಿಚಾರದಲ್ಲಿ ತಪ್ಪು ಮಾಡಿಕೊಂಡು ಬಂದಿದೆ. ಡಿಎಂಕೆ ಹಾಗೂ ಕಾಂಗ್ರೆಸ್ ನಡುವೆ ಹೊಂದಾಣಿಕೆ ಕೂಡಾ ಇದಕ್ಕೆ ಒಂದು ಕಾರಣ ಎಂದು…
ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಸಂಪೂರ್ಣ ಸಿಡಬ್ಲುಎಂಎ ಆದೇಶವನ್ನೇ ಪರಿಗಣಿಸದೇ, ವಾಸ್ತವದ ಆಧಾರದಲ್ಲಿ ತೀರ್ಪು ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವತ್ತು ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಎರಡು ರಾಜ್ಯಗಳ ವಾದ ಕೇಳಿ ಸಿಡಬ್ಲುಎಂಎ ಆದೇಶ ಎತ್ತಿ ಹಿಡಿದಿದೆ. ಮುಂದಿನ 15 ದಿನ ಸಿಡಬ್ಲುಎಂಎ ಆದೇಶ ಪಾಲನೆ ಮಾಡಬೇಕು ಅಂತ ಹೇಳಿರುವುದು ದುರಾದೃಷ್ಟ. ಮತ್ತೊಮ್ಮೆ ಕರ್ನಾಟಕದ ವಸ್ತು ಸ್ಥಿತಿಯನ್ನು ಸುಪ್ರೀಂ ಕೋರ್ಟ್ ಗೆ ಮನವರಿಕೆ ಮಾಡಬೇಕಿದೆ. ಸಿಡಬ್ಲುಎಂಎ ಆದೇಶ ಅಂತಿಮವಲ್ಲ. ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ತನಗೆ ಸಂಬಂಧ ಇಲ್ಲ ಎನ್ನುವುದು ಸರಿಯಲ್ಲ. ಕೇವಲ ಕರ್ನಾಟಕದ ಡ್ಯಾಮ್ ಗಳ ನೀರಿನಟ್ಟ ಲೆಕ್ಕ ಹಾಕುವುದಲ್ಲ. ತಮಿಳುನಾಡು ಡ್ಯಾಮ್ ಗಳಲ್ಲಿ ನ ನೀರಿನ ಮಟ್ಟ ಲೆಕ್ಕ ಹಾಕಬೇಕು ಎಂದು ಆಗ್ರಹಿಸಿದರು. ಸಿಡಬ್ಲುಎಂಎ ಮೊದಲ ಆದೇಶ ಬಂದಾಗಲೇ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮುಂದೆ ಮೆಲ್ಮನವಿ ಸಲ್ಲಿಸಬೇಕಿತ್ತು. ಸರ್ಕಾರ ಎರಡು…
ಬೆಂಗಳೂರು: ಮತದಾರರಿಗೆ ಆಮಿಷ ಒಡ್ಡಿ, ಕೂಪನ್ ಮತ್ತು ಗ್ಯಾರಂಟಿ ಕಾರ್ಡುಗಳನ್ನು ಹಂಚಿ ಅಕ್ರಮ ಮಾರ್ಗದಲ್ಲಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಸರಕಾರವನ್ನು ವಜಾ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಒತ್ತಾಯ ಮಾಡಿರುವ ಅವರು; ಅಪ್ರಜಾಸತ್ತಾತ್ಮಕವಾಗಿ ಗೆದ್ದಿರುವ ಆ ಪಕ್ಷದ ಎಲ್ಲಾ 135 ಶಾಸಕರನ್ನೂ ಅನರ್ಹಗೊಳಿಸಬೇಕು. ಕೇಂದ್ರ ಸರಕಾರವೂ ಈ ಚುನಾವಣೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ವಿಸ್ತೃತ ತನಿಖೆ ನಡೆಸಬೇಕು ಹಾಗೂ ಈ ಅಕ್ರಮ ಸರಕಾರವನ್ನು ವಜಾ ಮಾಡಬೇಕು ಎಂದು ಆಗ್ರಹಪಡಿಸಿದರು. ಮತದಾರರಿಗೆ ಸಲ್ಲದ ಆಸೆ, ಆಮಿಷ ಒಡ್ಡಿ ಈ ಸರಕಾರ ಅಧಿಕಾರಕ್ಕೆ ಬಂದಿದೆ ಎಂದು ನಾನು ಪದೇಪದೆ ಹೇಳಿದ್ದೆ. ಗಿಫ್ಟ್ ಕೂಪನ್, ತವಾ, ಕುಕ್ಕರ್, ಇಸ್ತ್ರಿಪೆಟ್ಟಿಗೆ, ಸೀರೆ ಕೊಟ್ಟ ರಾಜ್ಯ ಕಾಂಗ್ರೆಸ್ ಪಕ್ಷದ ‘ಅಸಲಿ ಹಸ್ತ’ದ ಹಕೀಕತ್ತು ಹೀಗಿದೆ ನೋಡಿ. ಸ್ವತಃ ರಾಜ್ಯದ ಘನತವೇತ್ತ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಸುಪುತ್ರನೇ ರಾಜ್ಯಕ್ಕೆ ಸತ್ಯದ ಸಾಕ್ಷಾತ್ಕಾರ ಮಾಡಿದ್ದಾರೆ. ಅಂಗೈ ಹುಣ್ಣಿಗೆ ಕನ್ನಡಿ…
ದೆಹಲಿ: “ನನ್ನ ಸುದ್ದಿಗೆ ಬಂದವರದ್ದು ಒಂದೊಂದೇ ಸೆಟಲ್ ಮೆಂಟ್ ಆಗಿದೆ. ಈಶ್ವರಪ್ಪ ವಿಶ್ರಾಂತಿ ಪಡೆಯುತ್ತಿದ್ದಾರೆ ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ʼನೀರಿನ ಕಳ್ಳʼ ಹೇಳಿಕೆ ಬಗ್ಗೆ ದೆಹಲಿಯಲ್ಲಿ ಮಾಧ್ಯಮದವರು ಬುಧವಾರ ಗಮನ ಸೆಳೆದಾಗ ಅವರು ಹೀಗೆ ಪ್ರತಿಕ್ರಿಯೆ ನೀಡಿದರು. “ಈಗ ಈಶ್ವರಪ್ಪ ಅವರು ಎಲ್ಲಿದ್ದಾರೆ? ನಾನೆಲ್ಲಿ ಇದ್ದೀನಿ? ವಿಧಾನಸಭೆಯಲ್ಲಿ ನನ್ನ ಅಪ್ಪನ ಬಗ್ಗೆ ಮಾತಾಡಿದ್ದರು. ಈಗ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ, ತೆಗೆದುಕೊಳ್ಳಲಿ ಎಂದರು. ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂಡಿಯಾ ಮೈತ್ರಿಕೂಟಕ್ಕೆ ಕಾವೇರಿ ನೀರನ್ನು ಒತ್ತೆ ಇಟ್ಟಿದ್ದಾರೆ, ಅವರು ʼನೀರಿನ ಕಳ್ಳʼ ಎಂದು ಜರೆದಿದ್ದರು.
ತೃಣಮೂಲ ಕಾಂಗ್ರೆಸ್ ಸಂಸದ ಕಾಕೋಲಿ ಘೋಷ್ ದಸ್ತಿದಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ದಸ್ತಿದಾರ್ ಪ್ರಶ್ನಿಸಿದ್ದಾರೆ. ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಪಕ್ಷವು ಮಹಿಳೆಯರಿಗೆ ಗೌರವ ನೀಡಬೇಕು ಎಂದು ದಸ್ತಿದಾರ್ ಹೇಳಿದ್ದಾರೆ. ಮಹಿಳಾ ಮೀಸಲಾತಿ ಮಸೂದೆಯನ್ನು ಬೆಂಬಲಿಸಿ ಬರಸಮ್‌ನ ಟಿಎಂಸಿ ಸಂಸದ ಸಂಸತ್ತಿನಲ್ಲಿ ಮಾತನಾಡುತ್ತಿದ್ದರು. ದೇಶಕ್ಕಾಗಿ ಚಿನ್ನದ ಪದಕ ಗೆದ್ದ ನಮ್ಮ ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ನ್ಯಾಯಕ್ಕಾಗಿ ಜಂತರಂಮಂದಿರದಲ್ಲಿ ಪ್ರತಿಭಟನೆ ನಡೆಸಬೇಕಾಯಿತು. ಆದರೂ ಬ್ರಿಜ್ ಭೂಷಣ್ ಸಿಂಗ್ ಇಂದು ಇಲ್ಲಿ ಕುಳಿತಿದ್ದಾರೆ. ತಪ್ಪಿತಸ್ಥನನ್ನು ಏಕೆ ನ್ಯಾಯದ ಮುಂದೆ ತರಬಾರದು? ನಿಮಗೆ ಮಹಿಳೆಯರ ಪ್ರಗತಿ ಮತ್ತು ಉನ್ನತಿ ಬೇಕಾದರೆ, ನಿಮಗೆ ನಿಜವಾಗಿಯೂ ಅದರ ಬಗ್ಗೆ ಕಾಳಜಿ ಇದ್ದರೆ, ಬ್ರಿಜ್ ಭೂಷಣ್ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳಬಾರದು? – ಎಂದು ಟಿಎಂಸಿ ಸಂಸದರು ಪ್ರಶ್ನಿಸಿದರು. ಹತ್ರಾಸ್ ಮತ್ತು…
ಭಾರತೀಯ ರೈಲ್ವೇಯು ಮಕ್ಕಳ ಶುಲ್ಕದ ನಿಯಮಗಳನ್ನು ತಿದ್ದುಪಡಿ ಮಾಡುವ ಮೂಲಕ ಏಳು ವರ್ಷಗಳಲ್ಲಿ 2,800 ಕೋಟಿ ರೂಪಾಯಿಗಳ ಹೆಚ್ಚುವರಿ ಆದಾಯವನ್ನು ಗಳಿಸಿದೆ ಎಂದು ವರದಿಯಾಗಿದೆ. 2022-23ರಲ್ಲಿ ರೈಲ್ವೆಗೆ ಹೆಚ್ಚುವರಿ ಆದಾಯವಾಗಿ 560 ಕೋಟಿ ರೂ. ಆರ್‌ಟಿಐ ಕಾಯ್ದೆಯಡಿ ಸೆಂಟರ್ ಫಾರ್ ರೈಲ್ವೇ ಮಾಹಿತಿ ವ್ಯವಸ್ಥೆ (ಸಿಆರ್‌ಐಎಸ್) ನೀಡಿರುವ ಉತ್ತರದಲ್ಲಿ ಇದನ್ನು ಹೇಳಲಾಗಿದೆ. ಮಾರ್ಚ್ 2016 ರಲ್ಲಿ, ರೈಲ್ವೆಯು ಮಕ್ಕಳ ಪ್ರಯಾಣ ದರವನ್ನು ಪರಿಷ್ಕರಿಸಿತು. ಐದು ಮತ್ತು ಹನ್ನೆರಡು ವರ್ಷದೊಳಗಿನ ಮಕ್ಕಳು ವಿಶೇಷ ಸೀಟುಗಳು ಅಥವಾ ಬರ್ತ್‌ಗಳನ್ನು ಕಾಯ್ದಿರಿಸಲು ಬಯಸಿದರೆ ವಯಸ್ಕರಿಗೆ ಸಮಾನವಾದ ದರವನ್ನು ವಿಧಿಸಲಾಗುವುದು ಎಂದು ರೈಲ್ವೇ ಘೋಷಿಸಿತ್ತು. ಪರಿಷ್ಕೃತ ಮಾನದಂಡಗಳು 21 ಏಪ್ರಿಲ್ 2016 ರಿಂದ ಜಾರಿಗೆ ಬಂದವು. ಸಚಿವಾಲಯವು 2016-2017 ರಿಂದ 2020-2023 ರ ಆರ್ಥಿಕ ವರ್ಷದ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ. 70 ರಷ್ಟು ಮಕ್ಕಳ ಪ್ರಯಾಣಿಕರು ಪೂರ್ಣ ಶುಲ್ಕದ ಪ್ರಯಾಣಿಕರಾಗಿದ್ದರು. 3.6 ಕೋಟಿ ಮಕ್ಕಳು ಅರ್ಧ ದರದಲ್ಲಿ ಪ್ರಯಾಣಿಸಿದ್ದಾರೆ ಎಂದು ಅಂಕಿಅಂಶಗಳು ತೋರಿಸುತ್ತವೆ. ಮೊದಲು ಮಕ್ಕಳಿಗೆ ಅರ್ಧ…