Author: admin

ಬಿಟ್ ಕಾಯಿನ್ ಹಗರಣ ತನಿಖೆಗೆ ಎಸ್‌ಐಟಿ ರಚನೆಗೆ ಆದೇಶಿಸಿದ್ದು, ಆದಷ್ಟು ಬೇಗ ತನಿಖೆ ಮುಗಿಸಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ವಿಶ್ವಾಸ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಬಿಟ್ ಕಾಯಿನ್ ಹಗರಣ ಬಗ್ಗೆ ತನಿಖೆ ನಡೆಸಲು ಸಿಐಡಿ ಅಡಿ ಎಸ್‌ಐಟಿ ರಚಿಸಿ ಆದೇಶ ಹೊರಡಿಸಿದ್ದೇವೆ. ಎಸ್‌ ಐಟಿ ಜೊತೆಗೆ ತಾಂತ್ರಿಕ ತಜ್ಞರ ಸಹಾಯ ಬೇಕಾದರೆ ಉಪಯೋಗ ಮಾಡಬಹುದು. ಅದಕ್ಕೆ ಪೂರಕವಾದ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದರು. ಹಗರಣದಲ್ಲಿ ಏನೆಲ್ಲಾ ಮುಚ್ಚಿ ಹಾಕಲಾಗಿದೆ ಅದನ್ನು ಮರು ತನಿಖೆ ಮಾಡುತ್ತೇವೆ. ನಿಜ ಸ್ಥಿತಿ ಏನಿದೆ ಎಂಬ ಬಗ್ಗೆ ತನಿಖೆ ಆಗಲಿದೆ. ಎಡಿಜಿಪಿ ಮನೀಷ್ ನೇತೃತ್ವದಲ್ಲಿ ಎಸ್‌ ಐಟಿ ರಚನೆ ಮಾಡಲಾಗಿದೆ. ಅವರು ತನಿಖೆಗೆ ಯಾವ ತಾಂತ್ರಿಕ ತಜ್ಞರು ಬೇಕು, ಅವರ ಸಹಾಯ ಪಡೆಯಬಹುದು. ಆದಷ್ಟು ಬೇಗ ತನಿಖೆ ಮುಗಿಸುವಂತೆ ಕೇಳಿದ್ದೇವೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ವರ್ಗಾವಣೆ ಕೇಳಿದಾಗ ಶಿಫಾರಸು ಮಾಡೋದು ಸಹಜ. ಮಾಜಿ ಸಿಎಂ ಎಚ್ಚಿಕೆ ಹೇಳಿಕೆ ಹಾಸ್ಯಾಸ್ಪದ ಎಂದು ಯುವ ಸಬಲೀಕರಣ, ಕ್ರೀಡೆ ಮತ್ತು ಬುಡಕಟ್ಟು ಕಲ್ಯಾಣ ಸಚಿವ ಬಿ. ನಾಗೇಂದ್ರ ಟೀಕಿಸಿದರು. ವಿಧಾನಸೌಧದಲ್ಲಿ ಹೆಚ್ ಡಿಕೆಯವರ ವೈಎಸ್‌ ಟಿ ತೆರಿಗೆ ಆರೋಪಕ್ಕೆ ಪ್ರತಿಕ್ರಿಯಿಸುತ್ತ, ಅವರು ಎರಡು ಬಾರಿ ಸಿಎಂ ಆಗಿದ್ದವರು. ಸಿಎಂ ಆಗಿದ್ದಾಗ ಇಲಾಖೆ ಯಾವ ರೀತಿ ನಡೆಸಿದರು ಎಂದು ಗೊತ್ತಿದೆ. ಸಿಎಂ ಸುಪುತ್ರ ಯಾವುದರಲ್ಲೂ ಹಸ್ತಕ್ಷೇಪ ಮಾಡಿಲ್ಲ. ಆಧಾರ ರಹಿತ ಆರೋಪ ಮಾಡಿದ್ದಾರೆ. ಅದಕ್ಕೆ ಅವರ ಪಕ್ಷ 19 ಸ್ಥಾನಕ್ಕೆ ಇಳಿದಿದೆ. ಜನ ಮುಂದೆಯೂ ಅವರಿಗೆ ಪಾಠ ಕಲಿಸ್ತಾರೆ. ವದಂತಿ ಮಾತನ್ನು ಅವರು ಹೇಳುತ್ತಿದ್ದಾರೆ. ಇದು ಅವರ ಸ್ಥಾನಕ್ಕೆ ಗೌರವ ತರಲ್ಲ. ಗಾಳಿಯಲ್ಲಿ ಗುಂಡು ಹಾರಿಸುವುದನ್ನು ಈ ಹಿಂದಿನಿಂದಲೂ ಮಾಡಿಕೊಂಡು ಬರುತ್ತಿದ್ದಾರೆ. ಈಗಲೂ ಅದನ್ನು ಅವರು ಮುಂದುವರಿಸುತ್ತಿದ್ದಾರೆ. ಹೀಗೆ ಅವರು ಮುಂದುವರಿದರೆ ಲೋಕಸಭೆಯಲ್ಲಿ ಜನರು ಪಾಠ ಕಲಿಸುತ್ತಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸ್ಪಷ್ಟವಾದ ಆಡಳಿತ ಕೊಡುತ್ತಿದ್ದಾರೆ.…

Read More

ಅಂಬೇಡ್ಕರ್ ಅವರು ಸಂವಿಧಾನ ನೀಡದೇ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಕುರಿ, ಎಮ್ಮೆ ಕಾಯುತ್ತಾ ಇರಬೇಕಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಜಿಲ್ಲಾಡಳಿತ ರವೀಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಚಲನೆ ಇಲ್ಲದೆ ಹಿಂದುಳಿದ ಶೋಷಿತ ಸಮುದಾಯಗಳಿಗೆ ಆರ್ಥಿಕ, ಶೈಕ್ಷಣಿಕ ಚಲನೆ ಸಿಗುವುದಿಲ್ಲ. ಹೀಗಾಗಿ ಬುದ್ದ, ಬಸವಾದಿ ಶರಣರು, ಡಾ. ಬಿ. ಆರ್. ಅಂಬೇಡ್ಕರ್ ಅವರು ಜಾತಿ ಮುಕ್ತ ಸಮಾಜ ಇರಬೇಕು ಎಂದು ಆಶಿಸಿದ್ದರು. ಜನರಿಗೆ ಬಸವಣ್ಣ, ಹಡಪದ ಅಪ್ಪಣ್ಣ ಅವರಂಥವರ ಆದರ್ಶ ಮತ್ತು ವಿಚಾರಗಳು ಗೊತ್ತಾಗಬೇಕು. ಅದಕ್ಕಾಗಿ ಸಂತರ, ಬಸವಾದಿ ಶರಣರ ಜನ್ಮ ದಿನಾಚರಣೆಗಳನ್ನು ಆಚರಿಸಬೇಕು ಎಂದರು. ನಾವು ಬಸವಾದಿ ಶರಣರ ಆಶಯ ಮತ್ತು ಆದರ್ಶಗಳನ್ನು ಮುಂದುವರೆಸುವ ಉದ್ದೇಶದಿಂದಲೇ ಒಂದು ಜಾತಿ, ಒಂದು ಧರ್ಮಕ್ಕೆ ಸೀಮಿತ ಆಗದೆ ಸರ್ವರಿಗೂ ಅನ್ವಯ ಆಗುವ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ.…

Read More

ರಾಷ್ಟ್ರಪತಿ ಭವನದಿಂದ ಬುಡಕಟ್ಟು ಜನರಿಗೆ ಉಡುಗೊರೆ ಸಿಕ್ಕಿದೆ ಎಂದು ಯುವಜನ ಕ್ರೀಡಾ ಸಚಿವ ಬಿ. ನಾಗೇಂದ್ರ ಹೇಳಿದ್ದಾರೆ. ಇಂದು ಬುಡಕಟ್ಟು ಜನಾಂಗದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ಕೊರಗ ಹಾಗೂ ಜೇನುಕುರುಬ ಬುಡಕಟ್ಟುಗಳ ಜನರಿಗೆ ರಾಷ್ಟ್ರಪತಿ ಭವನದಿಂದ ತಂದಿದ್ದ ಉಡುಗೊರೆಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ವಿತರಿಸಿದರು. ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಸಚಿವರಾದ ಬಿ. ನಾಗೇಂದ್ರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯದಲ್ಲಿ ನೈಜ ಬುಡಕಟ್ಟು ಜನರ ಕಲ್ಯಾಣಕ್ಕಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ವಿವರಿಸಿದರು. ರಾಜ್ಯಪಾಲರಾದ ಥಾವರಚಂದ್ ಗೆಹೋಟ್ ಅವರ ಸಮ್ಮುಖದಲ್ಲಿ ನಡೆದ ಬುಡಕಟ್ಟು ಸಮುದಾಯಗಳೊಂದಿಗಿನ ಸಂವಾದದಲ್ಲಿ ಗುಂಡ್ಲುಪೇಟೆಯ ದೇಶಿಪುರ ಕಾಲೊನಿಯ ಸಿದ್ದಮ್ಮ, ಪುಟ್ಟಮ್ಮ, ಮದ್ದೂರು ಕಾಲೊನಿಯ ಗೋವಿಂದ, ಎಚ್. ಡಿ. ಕೋಟೆಯ ಬಸಮ್ಮ, ರಾಜೇಶ್, ಅಯ್ಯಪ್ಪ, ಭೈರಾ, ಸಿ. ಭಾಸ್ಕರ, ಪುಟ್ಟಬಸವಯ್ಯ, ಹುಣಸೂರಿನ ಜೆ. ಪಿ. ಪಾರ್ವತಿ, ಸುಮಾ, ರಾಜಪ್ಪ, ಸಚಿನ್, ಪಿರಿಯಾಪಟ್ಟಣದ ಜಯಮ್ಮ, ಗೌರಿ, ಲಕ್ಷ್ಮೀ, ಜಾನಕಮ್ಮ, ಬಸವಣ್ಣ, ಬಸಪ್ಪ, ಸರಗೂರಿನ ವಿಜಯ್, ಸೋಮವಾರಪೇಟೆಯ ಜೆ.ಕೆ. ಮುತ್ತಮ್ಮ, ಬಿ. ಕೆ.…

Read More

ಜುಲೈ 03 ರಂದು ಬೆಂಗಳೂರಿಗೆ ಆಗಮಿಸಿ, ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿಲಾಗಿದ್ದ, ಬುಡಕಟ್ಟು ಸಮುದಾಯದ ಜನತೆಯೊಂದಿಗೆ ಸಂವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಗೌರವಾನ್ವಿತ ರಾಷ್ಟ್ರಪತಿಗಳಾದ ದೌಪದಿ ಮುರ್ಮು ಅವರು ಇಂದು ಬೆಳಿಗ್ಗೆ ಹೆಚ್. ಎ. ಎಲ್ ವಿಮಾನ ನಿಲ್ದಾಣದಿಂದ ಹೈದರಾಬಾದ್ ಗೆ ಪ್ರಯಾಣಿಸಿದರು. ಗೌರವಾನ್ವಿತ ರಾಷ್ಟ್ರಪತಿಗಳನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರಚಂದ್ ಗೆಹೋಟ್ ಅವರು ಆತ್ಮೀಯವಾಗಿ ಬೀಳ್ಕೊಟ್ಟರು. ಈ ಸಮಯದಲ್ಲಿ ಇಂಧನ ಇಲಾಖೆಯ ಸಚಿವರಾದ ಕೆ. ಜೆ. ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬೆಂಗಳೂರು ಪ್ರಾದೇಶಿಕ ಆಯುಕ್ತರಾದ ಆಮ್ಲನ್ ಆದಿತ್ಯ ಬಿಸ್ವಾಸ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತರಾದ ಬಿ. ದಯಾನಂದ್, ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಇನ್ನಿನಿತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಪತಿಯ ಅನೈತಿಕ ಸಂಬಂಧದಿಂದ ಬೇಸತ್ತ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೆಗ್ಗನಹಳ್ಳಿ ನಿವಾಸಿ ಪವಿತ್ರಾ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಈಕೆ ಪತಿ ಹಾಗೂ ಆತನ ಗಲ್‌ರ್ಫ್ರೆಂಡ್ ವಿರುದ್ಧ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಏನಿದು ಪ್ರಕರಣ? ಮೊದಲ ಪತಿಗೆ ವಿಚ್ಛೇದನ ನೀಡಿ ಚೇತನ್ ಗೌಡರನ್ನು ಪವಿತ್ರಾ ಎರಡನೇ ಮದುವೆಯಾಗಿದ್ದಳು. ಚೇತನ್ ಕೆಲಸ ಮಡುತ್ತಿದ್ದ ಖಾಸಗಿ ಕಂಪನಿಯೊಂದರಲ್ಲಿಯೇ ಪವಿತ್ರಾ ಕೂಡ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಳು. ಇತ್ತೀಚೆಗೆ ಮತ್ತೋರ್ವ ಯುವತಿಯ ವಿಚಾರವಾಗಿ ಪತಿ-ಪತ್ನಿ ಮಧ್ಯೆ ಜಗಳವಾಗುತ್ತಿತ್ತು. ಈ ಬಗ್ಗೆ ಪವಿತ್ರಾ ತನ್ನ ತಾಯಿ ಪದ್ಮಮ್ಮ ಬಳಿ ತಿಳಿಸಿದ್ದಳು. ಬಳಿಕ ಮನನೊಂದು ವಾಟ್ಸಾಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾಗಿದ್ದಾಳೆ. ಮಗಳ ವಾಟ್ಸಾಪ್ ಸ್ಟೇಟಸ್ ನಲ್ಲಿ ಡೆತ್‌ನೋಟ್ ನೋಡಿ ತಾಯಿ, ಮಗಳ ಮನೆಗೆ ಓಡಿ ಬಂದಾಗ ಸಾವನ್ನಪ್ಪಿರೋದು ಬೆಳಕಿಗೆ ಬಂದಿದೆ. ಮೃತಳ ತಾಯಿ ಪದ್ಮಮ್ಮರ ದೂರಿನನ್ವಯ ಐಪಿಸಿ ಸೆಕ್ಷನ್ 306 (ಆತ್ಮಹತ್ಯೆ ಪ್ರಚೋದನೆ) ಅಡಿ ದೂರು ದಾಖಲಾಗಿದೆ. ಸದ್ಯ ಕೆಂಗೇರಿ ಠಾಣೆಯಲ್ಲಿ…

Read More

ಬೈಲಹೊಂಗಲ: ಅತಿವೃಷ್ಟ, ಅನಾವೃಷ್ಟಿಯ ಜೋತೆಗೆ ಕೋವಿಡ್ ಹಾವಳಿಯಿಂದ ಕಳೆದ ಹಲವಾರು ವರ್ಷಗಳಿಂದ ರೈತರಿಗೆ ತೊಂದರೆಯಾಗಿದ್ದು ಈ ಭಾರಿಯಾದರು ಉತ್ತಮ ಮಳೆಯಿಂದ ಬೆಳೆ ತಗೆಯುವ ಉದ್ದೇಶದಿಂದ ಸಾಲ ಮಾಡಿ ರಸಗೊಬ್ಬರ, ಬಿತ್ತನೆ ಬೀಜಗಳನ್ನು ರೈತರು ಖರೀದಿಸಿ ಮನೆಯಲ್ಲಿ ಸಂಗ್ರಹಿಸಿದ್ದಾರೆ. ಮಂಗಾರು ಮಳೆ ಸಂಪೂರ್ಣವಾಗಿ ವಿಫಲ ಕಂಡಿದೆ. ಇದರಿಂದ ಜನ ಜಾನುವಾರು ಹಾಗೂ ರೈತ ಸಮುದಾಯ ಸಂಕಷ್ಟದಲ್ಲಿದ್ದು ತಕ್ಷಣ ರಾಜ್ಯ ಸರ್ಕಾರ ಬರಗಾಲ ಜಿಲ್ಲೆಯನ್ನಾಗಿ ಘೋಷಿಸಿ, ರೈತರ ಸಂಕಷ್ಟಕ್ಕೆ ಸ್ಪಂದಿಸುವಂತೆ ಆಗ್ರಹಿಸಿ ಉಪವಿಭಾಗಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರೈತರ ಪರವಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕೂಲಿ ಕಾರ್ಮಿಕರ‌ ಹಿತಾಸಕ್ತಿ ಸಂಘದಿಂದ ಮನವಿ ಅರ್ಪಿಸಿದರು. ಈ‌ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಮಹಾಂತೇಶ ಕಮತ ಹಾಗೂ ಸವದತ್ತಿ ಎಪಿಎಂಸಿ ಮಾಜಿ ಅಧ್ಯಕ್ಷ ಎಫ್.ಎಸ್.ಸಿದ್ದನಗೌಡರ ಮಾತನಾಡಿ, ಬೈಲಹೊಂಗಲ ಮತ್ತು ಸವದತ್ತಿ ತಾಲೂಕು ಸೇರಿದಂತೆ ಬೆಳಗಾವಿ ಜಿಲ್ಲೆಯನ್ನು ಬರಗಾಲ ಜಿಲ್ಲೆಯನ್ನಾಗಿ ಘೋಷಿಸಬೇಕು. ರೈತರ ಜಮೀನುಗಳ ಆಧಾರದ ಮೇಲೆ ಪ್ರತಿ ಎಕರೆಗೆ 50ಸಾವಿರ ರೂಪಾಯಿ ಪರಿಹಾರ ನೀಡಬೇಕು. ಜಾನುವಾರಗಳ ಪೋಷಣೆಗೆ ಪ್ರತಿ ಗ್ರಾಮ ಪಂಚಾಯತಿಗೊಂದು…

Read More

ಬೆಂಗಳೂರು: ಮರಾಠ ಸಮಾಜ ನನ್ನನ್ನು ಮನೆಮಗಳಂತೆ ಕಂಡಿದೆ. ನಾನು ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಸೇರಿದರೂ ಮರಾಠ ಸಮಾಜ ನನ್ನನ್ನು ಮನೆ ಮಗಳಂತೆ ನೋಡುತ್ತಾ ಬಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಬೆಂಗಳೂರಿನ ಗವಿಪುರಂನಲ್ಲಿರುವ ಶ್ರೀ ಗೋಸಾಯಿ ಮಹಾ ಸಂಸ್ಥಾನ ಮಠದಲ್ಲಿ ಗುರು ಪೂರ್ಣಿಮೆ ಅಂಗವಾಗಿ ನಡೆದ ಗುರುವಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ಮರಾಠ ಸಮಾಜ. ಇಂಥ ಅಪರೂಪದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ನನ್ನ ಪುಣ್ಯ ಎಂದರು. ಉತ್ತರ ಕರ್ನಾಟಕದ ಭಾಗದ ಜನರ ಮಾತು ಒರಟಾಗಿದ್ದರೂ ಮನಸ್ಸು ಮೃದುವಾಗಿರುತ್ತದೆ. ನಾನು ಉತ್ತರ ಕರ್ನಾಟಕದ ಹೆಣ್ಣುಮಗಳು ಎನ್ನುವುದಕ್ಕೆ ಹೆಮ್ಮೆಯಾಗುತ್ತಿದೆ ಎಂದರು. ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಸಾಕಷ್ಟು ಜನಪ್ರಿಯಗೊಂಡಿವೆ. ಅದ್ರಲ್ಲೂ ನನ್ನ ಇಲಾಖೆ ವ್ಯಾಪ್ತಿಯ ಗೃಹ ಲಕ್ಷ್ಮಿ ಯೋಜನೆಯನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಚಿವರು ಕರೆ ನೀಡಿದರು. ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಂಎಲ್ಸಿ ಯು.ಬಿ.ವೆಂಕಟೇಶ್, ನಿವೃತ್ತ…

Read More

ಭಾರತೀಯ ನಾಮಫಲಕ ಕುಂಚ ಕಲಾವಿದರ ಸಂಘ (ರಿ ) . ಕೇಂದ್ರ ಕಛೇರಿ ಬೆಂಗಳೂರು ಇಲ್ಲಿ ಇಂದು  ರಾಜ್ಯಾಧ್ಯಕ್ಷರು ಮತ್ತು ಚಲನಚಿತ್ರ ಕಲಾ ನಿರ್ದೇಶಕರಾದ ಎನ್. ಕುಮಾರ್ ಮತ್ತು ರಾಜ್ಯ ಉಪಾಧ್ಯಕ್ಷರಾದ ಕಲೆಗಾರ ಕೇಶವ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಯವರಾದ ನೆನಪು ಲೋಕೇಶ್ ಅವರ ನೇತೃತ್ವದಲ್ಲಿ ಇಂದು ಗುರು ಪೂರ್ಣಿಮೆಯ ಅಂಗವಾಗಿ ನಡೆದ ಅರವತ್ತು ವರ್ಷ ದಾಟಿದ ಹಿರಿಯ ಕುಂಚ ಕಲಾವಿದರಿಗೆ ಕುಂಚ ಗುರು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಇದೇ ವೇಳೆ ಯುವ ಕುಂಚ ಕಲಾವಿದರನ್ನು ಸಹ ಸನ್ಮಾನಿಸಿ ಗೌರವಿಸಲಾಯಿತು. ಈ ಅಭೂತಪೂರ್ವ ಕಾರ್ಯಕ್ರಮಕ್ಕೆ ರಾಜ್ಯ ಮತ್ತು ನೆರೆಯ ರಾಜ್ಯಗಳ ಕುಂಚ ಕಲಾವಿದರುಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಕುಂಚ ಕಲಾವಿದ ಸಾಹಿತಿ ಗಾಯಕ ನಿರ್ದೇಶಕರಾದ ಶ್ರೀ ಕಲಾಕಾರ್ ಹುಲಿಕುಂಟೆ ಮುನ್ನಾ ಆರ್ಟ್ಸ್,  ಅಸ್ಲಾಂ ಆರ್ಟ್ಸ್, ಸನ್ ಆರ್ಟ್ಸ್,  ಆನಂದ್ ಆರ್ಟ್ಸ್, ವಿಷ್ಣು ಆರ್ಟ್ಸ್,  ನವೀನ್ ಆರ್ಟ್ಸ್, ಎಸ್ ಪಿ ಆರ್ಟ್ಸ್ ಮತ್ತಿತರರು ಹಾಜರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಮಧುಗಿರಿ: ಪಟ್ಟಣದ ಆರಕ್ಷಕ ನಿರೀಕ್ಷಕರ ಕಚೇರಿ ಮುಂಭಾಗದ ರಸ್ತೆಯಲ್ಲಿ ಬೈಕ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವ ಘಟನೆ ನಡೆದಿದೆ. ತಾಲೂಕಿನ ಜಿ.ಡಿ.ಪಾಳ್ಯದಿಂದ ಮಧುಗಿರಿ ಮಾರ್ಗವಾಗಿ ತುಮಕೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಆರಕ್ಷಕ ನಿರೀಕ್ಷಕರ ಕಚೇರಿಯ ಮುಂಭಾಗದ ರಸ್ತೆಯಲ್ಲಿ ಎದುರಿನಿಂದ ಬಂದ ಬೈಕ್ ನಡುವೆ ಅಪಘಾತದ ಸಂಭವಿಸಿದೆ. ಬೈಕ್ ನಲ್ಲಿ ಇಬ್ಬರು ಸವಾರರು  ಪ್ರಯಾಣಿಸುತ್ತಿದ್ದು ಹಿಂಬದಿ ಸವಾರನಿಗೆ ಗಂಭೀರವಾಗಿ ಗಾಯಗಳಾಗಿ ಒಂದು ಕಾಲು ಮುರಿದಿದ್ದು ಇನ್ನೊಂದು ಕಾಲಿನ ಮೊಣ ಕಾಲಿಗೆ ತೀವ್ರ ಪೆಟ್ಟಾಗಿದೆ,   ಗಾಯಗೊಂಡ ವ್ಯಕ್ತಿಯನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ  ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ ಹಾಗೂ ಈ ಘಟನೆಗೆ ಸಂಬಂಧಿಸಿದಂತೆ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಅಫಘಾತಕ್ಕೆ ಮುಖ್ಯ ಕಾರಣ ಯಾರಿಂದ ತಪ್ಪಾಗಿದೆ ಎಂಬ ಹೆಚ್ಚಿನ ಮಾಹಿತಿ ಪೊಲೀಸ ತನಿಖೆಯಿಂದ ತಿಳಿದು ಬರಬೇಕಿದೆ. ವರದಿ: ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More