Subscribe to Updates
Get the latest creative news from FooBar about art, design and business.
- ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
- ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ: ನಗನಗದು ದೋಚಿ ಪರಾರಿ
- ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
- ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
- ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
- ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
- ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
- ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Author: admin
ನನ್ನ ಸರ್ಕಾರ ಆಡಳಿತವನ್ನು ಪವಿತ್ರ ಕರ್ತವ್ಯ ಎಂದು ಪರಿಗಣಿಸುತ್ತೆ. ಸರ್ಕಾರ ಬಡವರು, ಆರ್ಥಿಕ ಹಿಂದುಳಿದವರ ಪರವಾಗಿ ನಿಲ್ಲುತ್ತದೆ. ಸರ್ಕಾರ ಆಧುನಿಕ ಕರ್ನಾಟಕ ನಿರ್ಮಾಣ ಮಾಡಲು ಉದ್ದೇಶಿಸಿದೆ. ಶಾಲಾ ಶಿಕ್ಷಣವು ಸಮಾಜದ ಅಡಿಪಾಯವೆಂದು ಗುರುತಿಸಲ್ಪಟ್ಟಿದೆ. ಪ್ರತಿ ಮಗುವಿನ ಮೂಲಭೂತ ಹಕ್ಕನ್ನು ಸಂರಕ್ಷಿಸಲು ಸರ್ಕಾರ ಬದ್ಧ. ಶಿಕ್ಷಣ ಜತೆಗೆ ಮಕ್ಕಳ ಆರೋಗ್ಯ ರಕ್ಷಣೆಯೂ ಸರ್ಕಾರದ ಜವಾಬ್ದಾರಿ. ಉನ್ನತ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಲು ನಾವು ಸಿದ್ಧರಾಗಿದ್ದೇವೆ. ಬಡತನ ರೇಖೆಗಿಂತ ಕೆಳಗಿರುವ ಎಲ್ಲರಿಗೂ ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತೆ. ಕಲ್ಯಾಣ ಕರ್ನಾಟಕದಲ್ಲಿ ಆರೋಗ್ಯ, ಶಿಕ್ಷಣ ಸೇವೆ ಒದಗಿಸಲು ನೆರವು ಎಂದು ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಗೆಹ್ಲೋಟ್ ಭಾಷಣದಲ್ಲಿ ತಿಳಿಸಿದರು. ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 3 ಸಾವಿರ ರೂ. ಹಣ ನೀಡಲಾಗುತ್ತೆ. ನಿರುದ್ಯೋಗಿ ಡಿಪ್ಲೋಮಾದಾರರ ಖಾತೆಗೆ ತಿಂಗಳಿಗೆ 1,500 ರೂ. ಹಾಕಲಾಗುತ್ತೆ. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ವರೆಗೆ ಉಚಿತ ವಿದ್ಯುತ್ ಕೊಡಲಾಗುತ್ತೆ. ಈ ಯೋಜನೆಯಿಂದ ಸುಮಾರು 2.14 ಕೋಟಿ ಕುಟುಂಬಕ್ಕೆ ಅನುಕೂಲ ಆಗಲಿದೆ. ಮಹಿಳಾ ಸಬಲೀಕರಣಕ್ಕಾಗಿ ಗೃಹಲಕ್ಷ್ಮೀ…
ಚಿಕ್ಕಬಳ್ಳಾಪುರ: ಹಾಲು ಒಕ್ಕೂಟವನ್ನು ವಜಾಗೊಳಿಸಿದ್ದು ಸರಿಯಲ್ಲ. ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ.ಕೆ ಸುಧಾಕರ್ ಆರೋಪಿಸಿದ್ದಾರೆ. ಚಿಮುಲ್ ಮರು ಸ್ಥಾಪಿಸುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಸಿದ್ದರಾಮಯ್ಯ ಸರ್ಕಾರ ಚಿಕ್ಕಬಳ್ಳಾಪುರ ರೈತರಿಗೆ ಪೆಟ್ಟು ನೀಡಿದೆ ಎಂದರು. ಚುನಾವಣೆಯಲ್ಲಿ ಸೋತಿದ್ದೇನೆ ಆದರೆ ಸತ್ತಿಲ್ಲ, ಟಾರ್ಗೆಟ್ ಮಾಡಿಕೊಂಡು ಏನು ತನಿಖೆ ಮಾಡಿಸುತ್ತಾರೋ ಮಾಡಿಸಲಿ ಎಂದರು. ಆಕ್ಸಿಜನ್ ದುರಂತ ತನಿಖೆಯಲ್ಲಿ ಯಾರು ಟಾರ್ಗೆಟ್ ಎಂಬುದು ಗೊತ್ತು. ಮುಂದಿನ 6 ತಿಂಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಮಾತನಾಡಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಗ್ಯಾರಂಟಿಗಳ ಅನುಷ್ಠಾನ ಬಗೆಗಿನ ಬದ್ಧತೆ ರಾಜ್ಯಪಾಲರು ತಿಳಿಸಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಯಾವ ದಿಸೆಯಲ್ಲಿ ಹೋಗುತ್ತೆ. ಇದನ್ನು ರಾಜ್ಯಪಾಲ ಗೆಹ್ಲೋಟ್ ಭಾಷಣದ ಮೂಲಕ ತಿಳಿಸಿದ್ದಾರೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು. ಸರ್ಕಾರದ ಜನಪರವಾದ ಕಾಳಜಿ ಬಗ್ಗೆ ರಾಜ್ಯಪಾಲರು ಹೇಳಿದ್ದಾರೆ. ದಲಿತರು, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರು ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವ ಸಂದೇಶ ನೀಡಿದ್ದೇವೆ ಎಂದರು. ಮನಸ್ಸನ್ನು ಕೂಡಿಸುವ ಎಲ್ಲ ವರ್ಗಗಳಿಗೂ ಗೌರವಿಸುವಂಥ ಸಂದೇಶ ನೀಡಿದ್ದೇವೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಡಬೇಕಾದ ಕರ್ತವ್ಯ, ಆ ಹೆಜ್ಜೆಗಳ ಸೂಕ್ಷ್ಮ ಪರಿಚಯವನ್ನು ರಾಜ್ಯಪಾಲರು ಮಾಡಿದ್ದಾರೆ ಎಂದರು. ಪ್ರವಾಸೋದ್ಯಮ, ಶಿಕ್ಷಣ ಸೇರಿ ಎಲ್ಲ ಕ್ಷೇತ್ರಕ್ಕೂ ಮಹತ್ವ ಕೊಟ್ಟಿದ್ದಾರೆ. ಪ್ರೀತಿಯನ್ನು ಬೆಳೆಸಿ ದ್ವೇಷವನ್ನು ಅಳಿಸುವಂತಹ ಕಾರ್ಯಕ್ರಮ ಕೊಡುವ ಭರವಸೆಯನ್ನು ನಾವು ನೀಡಿದ್ದೇವೆ ಎಂದು ವಿಧಾನಸೌಧದಲ್ಲಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ರಾಜ್ಯಪಾಲರ ಭಾಷಣ ಸಪ್ಪೆಯಾಗಿದ್ದು ಯಾವುದೇ ಜೀವಾಳ ಇಲ್ಲ. ಹೊಸ ಸರ್ಕಾರ ಬಂದಾಗ, ಹೊಸ ಚೈತನ್ಯ, ಹೊಸ ದಿಕ್ಸೂಚಿ ಇಲ್ಲದೆ ಸರ್ಕಾರ ಕವಲು ದಾರಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಪಾಲರ ಭಾಷಣದಲ್ಲಿ ಭರವಸೆ ಮೂಡುವಂತಹ ಯಾವುದೇ ಭಾಷಣ ಇಲ್ಲ. ಸುಳ್ಳಿನ ಕಂತೆ ಅಂತ ಸಾಭಿತಾಗಿದೆ. ಅಕ್ಕಿಯನ್ನು 10 ಕೆಜಿ ಕೊಡುತ್ತೇವೆ ಅಂತ ಸಹಿ ಮಾಡಿ ಹೇಳಿದ್ದರು. ಈಗ ಕೇಂದ್ರ ಅಂತ ಹೇಳದೆ ಆಹಾರ ಭದ್ರತೆಯಲ್ಲಿ ಕೊಡುತ್ತೇವೆ ಅಂತಿದ್ದಾರೆ. ಅಕ್ಕಿಯನ್ನು ಕೇಂದ್ರ ಸರ್ಕಾರ ಕೊಡುತ್ತಿದೆ ಎಂದು ಹೇಳಲು ಅವರಿಗೆ ನಾಚಿಕೆಯಾಗಿದೆ ಅಂತ ವಾಗ್ದಾಳಿ ನಡೆಸಿದರು. ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ 200 ಯೂನಿಟ್ ವಿದ್ಯುತ್ ಉಚಿತ ಕೊಡುವುದಾಗಿ ಹೇಳಿದ್ದರು. ಆದರೆ, ಈಗ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿದ್ದಾರೆ. ಜನರನ್ನು ಯಾಮಾರಿಸುವ ಕೆಲಸ ಮಾಡಿದ್ದಾರೆ. ಜವಾಬ್ದಾರಿಯಿಂದ ನುಸುಳಿಕೊಳ್ಳುತ್ತಿರುವ ಸರ್ಕಾರ ಇದು. ಅರ್ಥವಿಲ್ಲದೆ ಸುಮ್ಮನೆ ಬೊಗಳೆ ಭಾಷಣ ಮಾಡಿಸಿದ್ದಾರೆ. ಈ ಸರ್ಕಾರಕ್ಕೆ…
ಬೆಂಗಳೂರು: ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿನ ರಾಜ್ಯಪಾಲರ ಭಾಷಣವನ್ನು ಗಮನಿಸಿದರೆ ಈ ಸರಕಾರವು ಆದಷ್ಟು ಬೇಗ ರಾಜ್ಯದ ಆರ್ಥಿಕ ವ್ಯವಸ್ಥೆಯನ್ನು ವೆಂಟಿಲೇಟರ್ (ಐಸಿಯು) ಮೇಲೆ ಮಲಗಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆತಂಕ ವ್ಯಕ್ತಪಡಿಸಿದರು. ವಿಧಾನಸೌಧದ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ರಾಜ್ಯಪಾಲರ ಭಾಷಣದ ಬಗ್ಗೆ ಪ್ರತಿಕ್ರಿಯಿಸಿದರು. ರಾಜ್ಯಪಾಲರ ಭಾಷಣವು ರಾಜ್ಯದ ಮುಂದಿನ ದರ್ಬರ ದಿನಗಳತ್ತ ಬೊಟ್ಟು ಮಾಡಿದೆ. ಈ ಸರಕಾರ ಐಸಿಯುಗೆ ಹೋಗುವ ಕಾಲವೂ ಶೀಘ್ರವೇ ಬರಲಿದೆ ಎಂದು ಅನಿಸುತ್ತಿದೆ. ಐಸಿಯು, ವೆಂಟಿಲೇಟರ್ ಮೇಲೆ ಈ ಸರಕಾರ ನಡೆಯುವ ಸನ್ನಿವೇಶ ನಿರ್ಮಾಣ ಆಗಬಹುದು ಎಂದರು. ಅಲ್ಲದೆ, ಸಮ್ಮಿಶ್ರ ಸರಕಾರದಂತೆ ಆಗಿರುವ ಈ ಸರಕಾರವೂ ಐಸಿಯು ಪಾಲಾಗುವ ಕಾಲ ಹತ್ತಿರದಲ್ಲೇ ಇದೆ ಎಂದು ಅವರು ಭವಿಷ್ಯ ನುಡಿದರು.ವಿಪಕ್ಷ ನಾಯಕನಾಗಿ ಟೀಕಿಸಬೇಕೆಂದು ಸರಕಾರವನ್ನು ಟೀಕಿಸುತ್ತಿಲ್ಲ. ಆದರೆ ನಮ್ಮ ರಾಜ್ಯದ ಆರ್ಥಿಕ ಪರಿಸ್ಥಿತಿ ಏನಿದೆ ಎನ್ನುವುದರ ಬಗ್ಗೆ ಸರಕಾರ ಸತ್ಯ ಮರೆಮಾಚಿದೆ. ಚುನಾವಣೆ ವೇಳೆ ಕಾಂಗ್ರೆಸ್ ಜನರಿಗೆ…
ಬೆಂಗಳೂರು: ಜಾತಿಗಣತಿಯನ್ನು ಪಡೆಯಬೇಡ ಎಂದು ಆಗ ಪುಟ್ಟರಂಗಶೆಟ್ಟಿಯವರಿಗೆ ಹೇಳಿದ್ದೇ ಆಗಿನ ಮುಖ್ಯಮಂತ್ರಿ ಕುಮಾರಸ್ವಾಮಿಯವರು. ಆದರೆ ನಾವು ಜಾತಿಗಣತಿ ವರದಿಯನ್ನು ಸ್ವೀಕರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು. ಎಲ್ಲಾ ಶೋಷಿತ ಸಮುದಾಯಗಳಿಗೂ ಮಹಾಸಂಸ್ಥಾನ ಆಗಬೇಕು ಎಂಬ ಉದ್ದೇಶದಿಂದ ಕಾಗಿನೆಲೆ ಮಹಾಸಂಸ್ಥಾನವನ್ನು ಸ್ಥಾಪಿಸಲಾಗಿದೆ. ಆದ್ದರಿಂದ ಇದು ಕೇವಲ ಒಂದು ಜಾತಿ ಅಥವಾ ಸಮಾಜದ ಮಠವಲ್ಲ, ಎಲ್ಲಾ ಶೋಷಿತ ಸಮಾಜಗಳಿಗೆ ಸೇರಿದ ಮಹಾ ಸಂಸ್ಥಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶೋಷಿತ ಸಮುದಾಯಗಳಿಗೆ ಧ್ವನಿ ಆಗುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ ಸಮುದಾಯವನ್ನು ಒಟ್ಟಾಗಿಸಿ ಮಹಾಸಂಸ್ಥಾನಕ್ಕೆ ನಾಂದಿ ಹಾಡಲಾಯಿತು. ಮೊದಲ ಸ್ವಾಮೀಜಿ ತಾರಕಾನಂದಪುರಿ ಶ್ರೀಗಳ ಸಾನ್ನಿಧ್ಯದಲ್ಲಿ ಸಾಮಾಜಿಕ ಚಟುವಟಿಕೆ ಮಾಡಿಕೊಂಡು ಬರುತ್ತಿತ್ತು. ಈಗ ನಿರಂಜನಾನಂದಪುರಿ ಶ್ರೀಗಳ ಸಾನ್ನಿಧ್ಯದಲ್ಲಿ ಸಮಾಜಮುಖಿ ಕಾರ್ಯಗಳು ನಡೆಯುತ್ತಿವೆ ಎಂದಿದ್ದಾರೆ. ನಾವು ಚುನಾವಣೆ ವೇಳೆ ನೀಡಿರುವ 5 ಗ್ಯಾರಂಟಿಗಳನ್ನು ಎಷ್ಟೇ ಕಷ್ಟ ಬಂದರೂ ಜಾರಿ ಮಾಡುತ್ತೇವೆ.…
ಸಹೋದರನಂತಿದ್ದ ಧೃವನಾರಾಯಣ ಅವರ ಅಗಲಿಕೆ ನನ್ನ ಮನಸ್ಸಿಗೆ ಬಹಳ ನೋವು ತಂದಿದೆ. ನನಗೆ ರಾಜಕಾರಣದಲ್ಲಿ ಧೃವನಾರಾಯಣ್ ಸಹೋದರನಾಗಿದ್ದ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭಾವುಕರಾದರು. ವಿಧಾನಮಂಡಲ ಅಧಿವೇಶನದ ಮೊದಲ ದಿನದ ಕಲಾಪದಲ್ಲಿ, ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು ಈ ವೇಳೆ ಮಾತನಾಡಿದ ಅವರು, ಧೃವನಾರಾಯಣ್ ಅವರು ನನ್ನ ಜತೆ ಕಾರ್ಯಾಧ್ಯಕ್ಷರಾಗಿದ್ದರು. ಅವರಿಗೆ ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ ಜಿಲ್ಲಾ ಜವಾಬ್ದಾರಿ ವಹಿಸಿದ್ದೆ. ಈ ಎಲ್ಲಾ ಕಡೆಗಳಲ್ಲಿ ಅವರು ಶುದ್ಧ ರಾಜಕಾರಣ ಮಾಡಿದ್ದಾರೆ. ಅವರಿಗೆ ವಹಿಸಿದ್ದ ಪ್ರದೇಶದಲ್ಲಿ ಸುಮಾರು 75% ರಷ್ಟು ಸದಸ್ಯರು ಆಯ್ಕೆಯಾಗಿ ಬಂದಿದ್ದಾರೆ ಎಂದರು. ಇಂದು ನಾನು ಕೆಪಿಸಿಸಿ ಅಧ್ಯಕ್ಷನಾಗಿ ಮುಂದುವರಿಯುತ್ತಿದ್ದು, ನನ್ನ ನಂತರ ಈ ಸ್ಥಾನದಲ್ಲಿ ಧೃವನಾರಾಯಣ ಅವರನ್ನು ಕೂರಿಸಬೇಕು ಎಂಬ ಆಲೋಚನೆ ನನ್ನ ತಲೆಯಲ್ಲಿತ್ತು. ನನ್ನ ಜತೆ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡಿದ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್ ಅವರು ಸಚಿವ ಸಂಪುಟದ ಸದಸ್ಯರಾಗಿ ಕೂತಿದ್ದಾರೆ. ಧೃವನಾರಾಯಣ ಅವರು ಬದುಕಿದ್ದರೆ,…
ಇತ್ತೀಚೆಗೆ ಬಡ ಮಹಿಳೆಯೊಬ್ಬರಿಗೆ ತಾವೇ ಆಪರೇಷನ್ ಮಾಡಿ, ನೆರವಾಗಿದ್ದ ಕುಣಿಗಲ್ ಕ್ಷೇತ್ರದ ಶಾಸಕ ಡಾಕ್ಟರ್ ರಂಗನಾಥ್ ಅವರು ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ… ಮತದಾರರ ಭರವಸೆ ಉಳಿಸಿಕೊಳ್ಳಲು ಶಾಸಕರು ವಿಭಿನ್ನ ಪ್ರಯತ್ನಕ್ಕೆ ಕೈಹಾಕಿದ್ದು, ಶಾಸಕರ ನಡೆ, ಹಳ್ಳಿ ಕಡೆ ಕಾರ್ಯಕ್ರಮ ಆರಂಭಿಸಿದ್ದಾರೆ. ನಾಗಸಂದ್ರ ಗ್ರಾಮಕ್ಕೆ ಅಧಿಕಾರಿಗಳೊಂದಿಗೆ ತೆರಳಿದ ಶಾಸಕರು ಗ್ರಾಮದಲ್ಲಿ ರಾತ್ರಿ ವಾಸ್ತವ್ಯ ಹೂಡಿ ಜನರ ಸಮಸ್ಯೆಗಳನ್ನ ಆಲಿಸಿದ್ದಾರೆ. ಕುಣಿಗಲ್ ತಾಲ್ಲೂಕಿನ ಯಡಿಯೂರು ಹೋಬಳಿಯ ನಾಗಸಂದ್ರ ಗ್ರಾಮದಲ್ಲಿ ಶಾಸಕರ ನಡೆ ಹಳ್ಳಿ ಕಡೆ ಕಾರ್ಯಕ್ರಮ ನಡೆಸಿದ ಶಾಸಕ ರಂಗನಾಥ್ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ವೇಳೆ ಶಾಸಕರು ಹಾಗೂ ಅಧಿಕಾರಿಗಳು ಬಡವರ ಮನೆಯಲ್ಲಿ ಊಟ ಮಾಡಿ ರಾತ್ರಿ ವಾಸ್ತವ್ಯ ಹೂಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನಾನು ಚುನಾವಣೆಯಲ್ಲಿ ಸೋತ ಕ್ಷಣ ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂಬುದು ಸುಳ್ಳು, ಇಂತಹ ವದಂತಿಯನ್ನು ಕೆಲವರು ಹಬ್ಬಿಸುತ್ತಿದ್ದಾರೆ ಎಂದು ಮಾಜಿ ಸಚಿವ ಜೇ ಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷವನ್ನು ನಾನು ಬಿಡುವುದಿಲ್ಲ, ಕಾಂಗ್ರೆಸ್ ಸೇರುವಂತಹ ದುಸ್ಥಿತಿಯು ನನಗೆ ಬಂದಿಲ್ಲ. ಇಂತಹ ವದಂತಿಗಳಿಗೆಲ್ಲ ಕಾರ್ಯಕರ್ತರು ಕಿವಿಗೊಡಬಾರದು ಎಂದು ಹೇಳಿದರು. ವಿಧಾನಸಭೆ ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಸೋತ ಕ್ಷಣ ಎಲ್ಲ ಮುಗಿದೆ ಹೋಯಿತು ಎಂದಲ್ಲ, ನಾನು ನಾಲ್ಕು ದಶಕಗಳಿಂದ ರಾಜಕೀಯ ಜೀವನದಲ್ಲಿದ್ದೇನೆ. ನನ್ನ ಸೋಲಿಗೆ ಯಾರನ್ನು ಹೊಣೆ ಮಾಡುವುದಿಲ್ಲ ಅದು ನನ್ನ ಹಣೆಬರಹ ಸೋತಾಗ ಒಂದಷ್ಟು ದಿನ ಮನಸ್ಸಿಗೆ ನೋವು ಆಗುವುದು ಸಹಜ ಎಂದು ಹೇಳಿದರು. ಅಧಿಕಾರಕ್ಕೋಸ್ಕರ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರುವಂತಹ ದುಸ್ಥಿತಿ ನನಗೇನು ಬಂದಿಲ್ಲ ಪಕ್ಷ ನನಗೆ ಎಲ್ಲವನ್ನು ಕೊಟ್ಟಿದೆ. ಅದಕ್ಕಾಗಿ ಪಕ್ಷಕ್ಕೆ ಚಿರಋಣಿಯಾಗಿದ್ದೇನೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ವಿಧಾನ ಪರಿಷತ್ತಿಗೆ ನೂತನವಾಗಿ ಆಯ್ಕೆಯಾದ ಜಗದೀಶ್ ಶೆಟ್ಟರ್, ಎನ್. ಎಸ್. ಬೋಸರಾಜ್, ತಿಪ್ಪಣಪ್ಪ ಕಮಕನೂರು ಅವರು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಜಗದೀಶ ಶೆಟ್ಟರ್ ಮತ್ತು ಎನ್. ಎಸ್. ಭೋಸರಾಜು ಅವರು ಭಗವಂತನ ಹೆಸರಿನ ಮೇಲೆ ಹಾಗೂ ತಿಪ್ಪಣಪ್ಪ ಕಮಕನೂರು ಅವರು ಯಾನಾಗುಂದಿ ಮಾತಾ ಮಾಣಿಕೇಶ್ವರಿ ಹೆಸರಿನ ಮೇಲೆ ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣ ವಚನಸ್ವೀಕರಿಸಿದ ನಂತರ ನೂತನ ಶಾಸಕರುಗಳಿಗೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪಗುಚ್ಛ ನೀಡಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಸಭಾಪತಿಗಳು ನೂತನ ಶಾಸಕತ್ರಯರಿಗೆ ಸದನದ ನಿಯಮಾವಳಿಗಳು ಒಳಗೊಂಡ ಕಿಟ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಎಚ್. ಕೆ. ಪಾಟೀಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಬಿಟಿ ಮತ್ತು ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ್, ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ,…