Author: admin

ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ತಮ್ಮ ಆಶ್ವಾಸನೆ ಈಡೇರಿಸದೆ ಮಾತಿಗೆ ತಪ್ಪಿದೆ. ಇದರ ವಿರುದ್ಧ ‘ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’ ಹೋರಾಟಕ್ಕೆ ಬಿಜೆಪಿ ಮುಂದಾಗಿದೆ ಎಂದು ರಾಜ್ಯದ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಅನುಷ್ಠಾನದ ವಿಚಾರದಲ್ಲಿ ಭಂಡತನ ತೋರುತ್ತಿದೆ. ಕಂಡಿಷನ್ ಇಲ್ಲದೆ ಗ್ಯಾರಂಟಿಗಳನ್ನು ಜಾರಿ ಮಾಡಲು ಆಗ್ರಹಿಸಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಲಿದ್ದೇವೆ ಎಂದು ಹೇಳಿದರು. ಶೇ 50ಕ್ಕಿಂತ ಹೆಚ್ಚು ವಿದ್ಯುತ್ ದರ ಏರಿಸಿದ್ದಾರೆ. ಇದರಿಂದ ಬೆಲೆ ಏರಿಕೆ ಆಗುತ್ತಿದೆ ಎಂದರಲ್ಲದೆ, ಬೆಲೆ ಏರಿಕೆಯನ್ನು ಇಳಿಸಲು ಆಗ್ರಹಿಸಿದರು. ಈ ಸರಕಾರ ಬೆಲೆ ಏರಿಕೆ, ಭ್ರಷ್ಟಾಚಾರಕ್ಕೆ ಸಾಕ್ಷಿಯಾಗುತ್ತಿದೆ ಎಂದು ಆರೋಪಿಸಿದರು. ಕೈಗಾರಿಕೆಗಳು, ಜನಸಾಮಾನ್ಯರು ವಿದ್ಯುತ್ ದರ ಏರಿಕೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದರು. ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷವು…

Read More

ಚಾತುವರ್ಣ ವ್ಯವಸ್ಥೆ ಕಾರಣಕ್ಕೆ ಶಿಕ್ಷಣದಿಂದ ವಂಚಿತರಾಗಿದ್ದ ಮಹಿಳೆಯರು ಮತ್ತು ಶೂದ್ರರಿಗೆ ಶಿಕ್ಷಣ ಭಾಗ್ಯವನ್ನು ಕಲ್ಪಿಸಿ ಕ್ರಾಂತಿ ಮಾಡಿದವರು ವಚನಕಾರರು ಮತ್ತು ಬಸವಣ್ಣನವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಟೌನ್ ಹಾಲ್ ನಲ್ಲಿ ಫ.ಗು.ಹಳಕಟ್ಟಿ ಫೌಂಡೇಶನ್ ಹಮ್ಮಿಕೊಂಡಿದ್ದ ವಚನ ಪಿತಾಮಹ ಫ.ಗು.ಹಳಕಟ್ಟಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅವರು ಉದ್ಘಾಟಿಸಿ ಪ್ರಶಸ್ತಿ ವಿತರಿಸಿ ಮಾತನಾಡಿದರು. ಅತ್ಯಂತ ಕೆಳ ಜಾತಿಯಲ್ಲಿ ಜನಿಸಿ ಅತ್ಯುನ್ನತ ಎತ್ತರಕ್ಕೆ ಏರಿದ ಅಲ್ಲಮಪ್ರಭುರನ್ನು ಅನುಭವ ಮಂಟಪದ ಮುಖ್ಯಸ್ಥರನ್ನಾಗಿಸಿದ್ದರು. ಈ ಅನುಭವ ಮಂಟಪದ ಆಶಯವನ್ನು, ವಚನಗಳ ಮಹತ್ವವನ್ನು ಮುಂದಿನ ತಲೆಮಾರುಗಳಿಗೆ ದಾಟಿಸಿದವರಲ್ಲಿ ಫ.ಗು.ಹಳಕಟ್ಟಿಯವರು ಪ್ರಮುಖರು ಎಂದರು. “ಹುಟ್ಟುವಾಗ ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಹುಟ್ಟುತ್ತಾರೆ, ಬೆಳೆಯುತ್ತಾ ಅಲ್ಪಮಾನವರಾಗುತ್ತಾರೆ” ಎನ್ನುವ ಕುವೆಂಪು ಅವರ ಮಾತನ್ನು ಪ್ರಸ್ತಾಪಿಸಿ ವಿದ್ಯಾವಂತರೂ ಮೌಡ್ಯ ಮತ್ತು ಜಾತಿಯ ವ್ಯಸನಿಗಳಾಗಿದ್ದಾರೆ ಎಂದು ತಿಳಿಸಿದರು. ಚಾತುವರ್ಣ ವ್ಯವಸ್ಥೆ ಕಾರಣಕ್ಕೆ ಶಿಕ್ಷಣದಿಂದ, ಸಂಪತ್ತಿನಿಂದ ಶೂದ್ರ ಸಮುದಾಯ ವಂಚಿತವಾಗಿತ್ತು. ಅದಕ್ಕೇ ಕಾಯಕ ಮತ್ತು ದಾಸೋಹ ಸಂಸ್ಕಾರದ ಮೂಲಕ ಸರ್ವರಿಗೂ ಶಿಕ್ಷಣ ಮತ್ತು ಅವಕಾಶಗಳಲ್ಲಿ ಸಮಪಾಲು ಸಿಗುವಂತೆ…

Read More

ರಾಜ್ಯ ಸರ್ಕಾರ ಬಜೆಟ್‌ ಮಂಡನೆ ಮಾಡಲು ಸಿದ್ಧತೆ ನಡೆಸಿದ್ದು,ಈ ಬಜೆಟ್‌ ನಲ್ಲಿ, ಪರಿಶಿಷ್ಟರಿಗೆ ಸೂಕ್ತ ಅನುದಾನ ನೀಡಬೇಕು’ ಎಂದು. ಬಿ. ಆರ್. ಅಂಬೇಡ್ಕರ್ ದಲಿತ ಹೋರಾಟಗಾರರ ಒಕ್ಕೂಟದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೇರಿದ್ದ ಪ್ರತಿಭಟನಕಾರರು, ತಮ್ಮ ಬೇಡಿಕೆ ಈಡೇರಿಕೆಗಾಗಿ ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು. ನೀಲಿ ಶಾಲು ಧರಿಸಿ, ನೀಲಿ ಧ್ವಜ ಹಿಡಿದು ಘೋಷಣೆ ಕೂಗಿದರು. ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತಂದು ಪರಿಶಿಷ್ಟರಿಗೆ ಭೂ ನ್ಯಾಯ ನೀಡಬೇಕು. ಪರಿಶಿಷ್ಟ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್/ಜೆಇಇ/ ಸಿಇಟಿ ತರಬೇತಿ ನೀಡಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಹಾಗೂ ನೀಡಿದ ಅಧಿಕಾರಿಗಳಿಗೆ ಶಿಕ್ಷೆ ವಿಧಿಸಬೇಕು. ರಾಜ್ಯದ 7 ಜಿಲ್ಲೆಗಳ 10 ಊರುಗಳಿಗೆ ಡಾ. ಬಿ. ಆರ್. ಅಂಬೇಡ್ಕರ್ ಭೇಟಿ ನೀಡಿದ್ದು, ಅಲ್ಲೆಲ್ಲ ಸ್ಮಾರಕಗಳನ್ನು ನಿರ್ಮಿಸಬೇಕು’ ಎಂದು ಒತ್ತಾಯಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಚಿಕ್ಕಜಾಲ ಬಳಿಯ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆ ಮಾಡಲು ಹೋಗಿದ್ದ ಕಾನ್ಸ್’ಟೇಬಲ್ ಸಾವನ್ನಪ್ಪಿದ್ದು,ಇನ್ಸಪೆಕ್ಟರ್ ಸಾವಿನಂಚಿನಿಂದ ಪಾರಾಗಿದ್ದಾರೆ. ನಿನ್ನೆ(ಜುಲೈ 02) ರಾತ್ರಿ ಅಸೆಂಟ್ ಕಾರಿನಲ್ಲಿ ಮೂವರು ಯುವಕರು ಹಾಗೂ ಮೂವರು ಯುವತಿಯರಿದ್ದು, ರಾತ್ರಿಯೆಲ್ಲ ಪಾರ್ಟಿ ಮಾಡಿಕೊಂಡು ಮುಂಜಾನೆ ನಂದಿಬೆಟ್ಟಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕೆಟ್ಟು ನಿಂತಿದ್ದ ಕಾರಿನ ಚಾಲಕನನ್ನು ವಿಚಾರಿಸಲು ಹೋಗಿದ್ದ ಕಾನ್ಸ್’ಟೇಬಲ್ ಸುರೇಶ್ ಮೃತಪಟ್ಟಿದ್ದು, ಅಸೆಂಟ್ ಕಾರಿನ ಚಾಲಕನ ಕೈ ಕಾಲು ಮುರಿದಿವೆ. ಇನ್ನು ಕುಡಿದ ಮತ್ತಿನಲ್ಲಿದ್ದ ಯುವಕ ಯುವತಿಯರಿಗೂ ಸಹ ಗಂಭೀರ ಗಾಯಗಳವಾಗಿವೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಇನ್ಸ್’ಪೆಕ್ಟರ್ ಬಚಾವ್ ಆಗಿದ್ದಾರೆ. ನೈಟ್ ರೌಂಡ್ಸ್ನಲ್ಲಿ ದೇವನಹಳ್ಳಿ ಇನ್ಸ್ಪೆಕ್ಟರ್ ಧರ್ಮೆಗೌಡ ಮತ್ತು ಜೀಪ್ ಡ್ರೈವ್ ಮಾಡುತ್ತಿದ್ದ ಕಾನ್ಸ್ಟೇಬಲ್ ಸುರೇಶ್ ಇದ್ದರು.ಚಿಕ್ಕಜಾಲ ಬಳಿಯ ಹೆದ್ದಾರಿಯಲ್ಲಿ ಇನ್ನೋವಾ ಕಾರು ಕೆಟ್ಟು ನಿಂತಿತ್ತು. ರಾತ್ರಿ ಗಸ್ತಿನಲ್ಲಿದ್ದ ದೇವನಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಹಾಗೂ ಕಾನ್ಸ್ಟೇಬಲ್ ಸುರೇಶ್ ಕೆಟ್ಟು ನಿಂತಿದ್ದ ಕಾರಿನ ಬಳಿ ವಿಚಾರಿಸಲು ಹೋಗಿದ್ದಾರೆ.…

Read More

ವರ್ಗಾವಣೆ ದಂಧೆ ಬಗ್ಗೆ ತಮ್ಮ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟಿರುವ ಹೇಳಿಕೆ ಬಗ್ಗೆ ಕಿಡಿಕಾರಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ .ಕುಮಾರಸ್ವಾಮಿ ನಾನು ಸಿದ್ದರಾಮಯ್ಯ ಅವರನ್ನು ಕೇಳಲು ಬಯಸುತ್ತೇನೆ. ನಾನು ನಿಮ್ಮ ಪಕ್ಷದ ಜತೆ ಸರಕಾರ ರಚನೆ ಮಾಡಿದ್ದಾಗ ನೀವೆಲ್ಲ ಏನೇನು ಮಾಡಿದಿರಿ ಎನ್ನುವುದು ಗೊತ್ತಿದೆ. ಪೊಗದಸ್ತಾದ ಇಲಾಖೆಗಳನ್ನು ಇಟ್ಟುಕೊಂಡಿದ್ದ ನಿಮ್ಮ ಮಂತ್ರಿಗಳು ಏನು ಮಾಡಿದರು? ಮುಖ್ಯಮಂತ್ರಿಯಾಗಿ ನಾನು ಯಾವೊಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡುವಂತೆಯೇ ಇರಲಿಲ್ಲ. ಎಲ್ಲ ದಂಧೆಗಳು ಯಾರ ಮೂಗಿನಡಿ ನಡೆಯುತ್ತಿದ್ದವು ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು ವರ್ಗಾವಣೆ ದಂಧೆಯಲ್ಲಿ ಸರಕಾರ ಮುಳುಗೇಳುತ್ತಿದೆ ಎಂದು ದೂರಿದರು. ಹಣ ಕೊಟ್ಟು ಪೋಸ್ಟ್ ಪಡೆಯಲು ಬಂದವರನ್ನು ನಾನು ದೂರ ಇಟ್ಟಿದ್ದೆ. ಯಲಹಂಕ ತಹಶಿಲ್ದಾರ್ ಹುದ್ದೆಗೆ ಒಂದೂವರೆ ಕೋಟಿ ಕೊಡ್ತೀವಿ ಅಂದವರನ್ನು ಆಚೆ ಇಟ್ಟಿದ್ದೆ. ಇದು ನಾನು ನಡೆಸಿದ ಆಡಳಿತ. ಈಗ ನೋಡಿದರೆ ವೈಎಸ್ ಟಿ ತೆರಿಗೆ ಅಂತ…

Read More

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನ ಸೋಮವಾರ ಆರಂಭಗೊಳ್ಳಲಿದೆ. ಈ ಅಧಿವೇಶನ ರಾಜ್ಯ ಸರಕಾರ ಮತ್ತು ವಿಪಕ್ಷಗಳ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಜುಲೈ 3, ಇಂದಿನಿಂದ ಜುಲೈ 14ರವರೆಗೆ ವಿಧಾನಮಂಡಲದ ಉಭಯ ಸದನಗಳ ಕಲಾಪ ನಡೆಯಲಿದೆ. ಜುಲೈ. 3ರ ಮೊದಲ ದಿನವಾದ ಇಂದು ಮಧ್ಯಾಹ್ನ 12 ಗಂಟೆಗೆ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲಟ್ ಅವರು ಭಾಷಣ ಮಾಡಲಿದ್ದಾರೆ. ಇನ್ನೂ ರಾಜ್ಯ ಸರ್ಕಾರವನ್ನು ಕಟ್ಟಿ ಹಾಕಲು ಬಿಜೆಪಿ ಹಾಗೂ ಜೆಡಿಎಸ್ ತಯಾರಿ ನಡೆಸಿದೆ. ವಿಪಕ್ಷಗಳನ್ನು ಮಣಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೂಡ ತಯಾರಿ ನಡೆಸಿದೆ. ಇದೇ ವಿಧಾನಮಂಡಲದ ಅಧಿವೇಶನದಲ್ಲೇ ಕರ್ನಾಟಕ ಬಜೆಟ್ ಅನ್ನು ಕೂಡ ಮಂಡಿಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಜ್ಯದ ವಿದ್ಯುತ್ ಗ್ರಾಹಕರಿಗೆ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಗೃಹ ಜ್ಯೋತಿ ಯೋಜನೆಯಡಿ ಹಿಂಬಾಕಿ ಇದ್ದರೂ ಈ ಯೋಜನೆಯ ಪ್ರಯೋಜನ ದೊರೆಯಲಿದೆ ಎಂಬುದಾಗಿ ಇಂಧನ ಇಲಾಖೆ ಮಾಹಿತಿ ನೀಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಇಂಧನ ಇಲಾಖೆಯೂ, ಗೃಹ ಜ್ಯೋತಿ ಯೋಜನೆಯ ಸೌಲಭ್ಯ ಪಡೆಯಲು ಹಿಂಬಾಕಿ ಪಾವತಿಸುವುದು ಕಡ್ಡಾಯಗೊಳಿಸಲಾಗಿತ್ತು. ಮೂರು ತಿಂಗಳ ಕಾಲಾವಕಾಶ ಇರುವ ಕಾರಣ ಅದರೊಳಗೆ ಹಿಂಬಾಕಿ ಪಾವತಿಸಿದ್ರೇ, ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ 200 ಯೂನಿಟ್ ವರೆಗೆ ವಿದ್ಯುತ್ ಉಚಿತ ಸೌಲಭ್ಯದ ಪ್ರಯೋಜನ ಪಡೆಯಬಹುದಾಗಿದೆ ಎಂದು ಹೇಳಿದೆ. ಗ್ರಾಹಕರು ವಿದ್ಯುತ್ ಬಿಲ್‌ ನ ಹಿಂಬಾಕಿ ಉಳಿಸಿಕೊಂಡಿದ್ದರೂ ಅವರಿಗೆ ಗೃಹ ಜ್ಯೋತಿ ಯೋಜನೆಯ ಪ್ರಯೋಜನ ಸಿಗಲಿದೆ. ಹಿಂಬಾಕಿಯನ್ನು ಸೆ. 30 ರೊಳಗೆ ಪಾವತಿಸಬೇಕು. ಮೂರು ತಿಂಗಳು ಕಾಲಾವಕಾಶ ಇದೆ ಎಂದು ಹೇಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನಕಲಿ ಲಿಂಕ್ ಹಾಗೂ ಆ್ಯಪ್‌ ಗಳ ಬಗ್ಗೆ ಎಚ್ಚರವಹಿಸಿ ಎಂದು ಬೆಂಗಳೂರು ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ನಾಗರಿಕರು ಸೇವಾಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿಸಿಕೊಳ್ಳಬೇಕು. ಆದರೆ ಸೈಬರ್ ಖದೀಮರು ಹಲವು ನಕಲಿ ಆ್ಯಪ್ ಹಾಗೂ ಲಿಂಕ್‌ ಗಳನ್ನು ಹರಿಯಬಿಟ್ಟು, ನಾಗರಿಕರ ಮಾಹಿತಿಗೆ ಕನ್ನ ಹಾಕುತ್ತಿದ್ದಾರೆ. ‘ಗ್ಯಾರಂಟಿ ಯೋಜನೆಗಳ ನೋಂದಣಿಗೆ ಸರ್ಕಾರ ಯಾವುದೇ ಆ್ಯಪ್ ಅನ್ನು ಪರಿಚಯಿಸಿಲ್ಲ. ಆದರೆ ಹಲವು ನಕಲಿ ಆ್ಯಪ್‌ ಗಳು ಡೌನ್‌ ಲೋಡ್ ಮಾಡಿಕೊಳ್ಳಲು ಲಭ್ಯವಿದೆ. ಫಲಾನುಭವಿಗಳು ಇದರ ಬಗ್ಗೆ ಎಚ್ಚರಿಕೆಯಿಂದಿರಬೇಕು. ಆ್ಯಪ್‌ ಗಳನ್ನು ರಿಪೋರ್ಟ್ ಮಾಡಬೇಕು. ಈ ಬಗ್ಗೆ ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ’ ಎಂದು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಸ್. ಡಿ ಶರಣಪ್ಪ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು-ಧಾರವಾಡ ನಡುವೆ ಆರಂಭಗೊಂಡಿರುವ ವಂದೇ ಭಾರತ್ ಎಕ್ಸ್‌ಪ್ರೆಸ್  ರೈಲಿಗೆ ಪ್ರಯಾಣಿಕರ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. 8 ಕೋಚ್‌ ಗಳ ಈ ರೈಲಿನಲ್ಲಿ 52 ಸೀಟುಗಳು ಎಕ್ಸಿಕ್ಯುಟಿವ್  ಕ್ಲಾಸ್‌ ದ್ದಾಗಿವೆ. 478 ಸೀಟುಗಳು ಎಸಿ ಚೇರ್ ಕಾರ್ ಆಗಿವೆ. ಬೆಂಗಳೂರಿನಿಂದ ಬೆಳಿಗ್ಗೆ ಹೊರಟರೆ ಮಧ್ಯಾಹ್ನದೊಳಗೆ ಧಾರವಾಡಕ್ಕೆ ತಲುಪುತ್ತಿರುವುದು, ಮಧ್ಯಾಹ್ನ ಧಾರವಾಡದಿಂದ ಹೊರಟು ಸಂಜೆ ಬೆಂಗಳೂರಿಗೆ ತಲುಪುತ್ತಿರುವುದು ಪ್ರಯಾಣಿಕರ ಸ್ಪಂದನೆ ಜಾಸ್ತಿಯಾಗಲು ಕಾರಣವಾಗಿದೆ. ಇತರೇ ರೈಲುಗಳಿಗಿಂತ ದರ ಬಹಳ ಅಧಿಕವಿದ್ದರೂ ನೂಕುನುಗ್ಗಲು ಇಲ್ಲದ, ಸುಖ ಪ್ರಯಾಣಕ್ಕಾಗಿ ವಂದೇ ಭಾರತ್‌ಗೆ ಆದ್ಯತೆ ನೀಡುತ್ತಿದ್ದಾರೆ. ಪ್ರಯಾಣಿಕರಿಗೆ ಉತ್ತಮ ಸೌಲಭ್ಯ, ವೇಗವಾದ ಪ್ರಯಾಣ ಸಿಗುತ್ತಿರುವುದರಿಂದ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದೆ. ಮೈಸೂರು-ಚೆನ್ನೈ ವಂದೇ ಭಾರತ್ ಯಶಸ್ವಿಯಾದಂತೆ ಬೆಂಗಳೂರು- ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್  ಕೂಡ ಯಶಸ್ವಿಯಾಗಲಿದೆ ಎಂದು ವಿಭಾಗೀಯ ರೈಲ್ವೆ ಹೆಚ್ಚುವರಿ ವ್ಯವಸ್ಥಾಪಕಿ (ಆಡಳಿತ) ಕುಸುಮಾ ಹರಿಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ತೆಲಂಗಾಣದ ವಿಕಾರಾಬಾದ್  ಜಿಲ್ಲೆಯಲ್ಲಿ ರೈಲು ಡಿಕ್ಕಿ ಹೊಡೆದು ಸುಮಾರು 60 ಕ್ಕೂ ಹೆಚ್ಚು ಮೇಕೆಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಕಾರಾಬಾದ್ ಜಿಲ್ಲೆಯ ಧಾರೂರ್ ಮಂಡಲದಲ್ಲಿರುವ ಡೋರ್ನಾಲ್  ಗ್ರಾಮದಲ್ಲಿ ಮೇಕೆಗಳು ರೈಲು ಹಳಿ ದಾಟುತ್ತಿದ್ದಾಗ ಈ ಘಟನೆ ನಡೆದಿದೆ. ಅಧಿಕಾರಿಗಳ ಪ್ರಕಾರ, ಮೇಕೆಗಳು ಕಿಷ್ಟಪ್ಪ ಎಂದು ಗುರುತಿಸಲಾದ ವ್ಯಕ್ತಿಗೆ ಸೇರಿವೆ. ತರೂರ್ ಮಂಡಲದ ಡೋರ್ನಾಲ್ ಗ್ರಾಮದಲ್ಲಿ ಇಂದು ಹಳಿ ದಾಟುತ್ತಿದ್ದ 60 ಮೇಕೆಗಳಿಗೆ ರೈಲಿಗೆ ಡಿಕ್ಕಿ ಹೊಡೆದಿದ್ದು, 60 ಮೇಕೆಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More