Author: admin

ಕೊರಟಗೆರೆ : ಸಮಾಜಕ್ಕೆ ದುಡಿಯಬೇಕು ಎಂಬ ತುಡಿತ ಇದ್ದವರಿಗೆ ರೋಟರಿ ಸಂಸ್ಥೆ ಅತ್ಯುತ್ತಮ ವೇದಿಕೆ. ಅದೆಷ್ಟೋ ಮಂದಿ ಹಿರಿಯರ ಸೇವಾ ಮನೋಭಾವದಿಂದ ರೋಟರಿ ಸಂಸ್ಥೆ ಗಟ್ಟಿಯಾಗಿ ಬೆಳೆದಿದ್ದು, ಪ್ರಪಂಚದಾದ್ಯಂತ ತನ್ನ ಸೇವಾ ಕಾರ್ಯವನ್ನು ಮುಂದುವರೆಸಿಕೊಂಡು ಬಂದಿದೆ ಎಂದು ಸಿದ್ದರಬೆಟ್ಟ ಶ್ರೀಮಠದ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ತಾಲ್ಲೂಕಿನ ಸಿಎನ್ ದುರ್ಗಾ ಹೋಬಳಿ ಸಿದ್ದರಬೆಟ್ಟ ಶ್ರೀಮಠದ ಸಮುದಾಯ ಭವನದಲ್ಲಿ ರೋಟರಿ ಸಿದ್ದರಬೆಟ್ಟ– 3192 (2025-26)ನೇ ಸಾಲಿನ ಅಧ್ಯಕ್ಷರು, ನಿರ್ದೇಶಕರು ಮತ್ತು ಪದಾಧಿಕಾರಿಗಳ ಪದವಿ ಪ್ರಧಾನ ಸಮಾರಂಭ ಕಾರ್ಯಕ್ರಮದಲ್ಲಿ ದಿವ್ಯಸಾನಿಧ್ಯ ವಹಿಸಿ ಮಾತನಾಡಿದರು. 2024–25ನೇ ಸಾಲಿನ ಅಧ್ಯಕ್ಷ ರಘು ತನ್ನ ಅವಧಿಯಲ್ಲಿ ರೋಟರಿ ಸಂಸ್ಥೆಯಲ್ಲಿ ಅತ್ಯುತ್ತಮ ಕಾರ್ಯನಿರ್ವಹಿಸಿದ್ದಾರೆ. ಕಾಮಧೇನು ಯೋಜನೆಯಿಂದ 220ಕ್ಕೂ ಹೆಚ್ಚು ಬಡ ಕುಟುಂಬ ಆರ್ಥಿಕತೆಯಲ್ಲಿ ಅಭಿವೃದ್ಧಿ ಹೊಂದಿದೆ. ಬೋರ್‌ ವೆಲ್ ರಿಚಾರ್ಜ್, ಇತ್ತೀಚಿಗೆ ಪ್ರಾರಂಭಿಸಿದ ಕೊರಟಗೆರೆ ರೇಣುಕಾ ಆಸ್ಪತ್ರೆ ಸಹಯೋಗದಲ್ಲಿ ಡಯಾಲಿಸಿಸ್ ಕೇಂದ್ರದಿಂದ ಸಾಕಷ್ಟು ಬಡ ಕುಟುಂಬಗಳಿಗೆ ಅನುಕೂಲವಾಗಿದ್ದು, ನೂತನ ಪದಾಧಿಕಾರಿಗಳು ಈ ಕಾರ್ಯಕ್ರಮಗಳನ್ನು ಮುಂದುವರೆಸಬೇಕಿದೆ ಎಂದು ಹೇಳಿದರು. ನಿಕಟ ಪೂರ್ವ…

Read More

ಸರಗೂರು:  ತಾಲೂಕು ಅಭಿವೃದ್ಧಿ ಕಂಡಿಲ್ಲ ಎಂದು ಶಾಸಕ ಅನಿಲ್ ಚಿಕ್ಕಮಾಧು ಅವರ ವಿರುದ್ಧ ಯಾರೋ  ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡಿದ್ದಾರೆ, ತಾಲೂಕು ಅಭಿವೃದ್ಧಿಯಾಗಿರುವ ಜಾಗ ಮತ್ತು ದಾಖಲೆಗಳನ್ನು ನೀಡುತ್ತಾನೆ ಎಂದು ಪ.ಪಂ. ಸದಸ್ಯ ಹಾಗೂ ನಾಯಕ ಸಮಾಜದ ಉಪಾಧ್ಯಕ್ಷ ಶ್ರೀನಿವಾಸ ತಿರುಗೇಟು ನೀಡಿದ್ದಾರೆ. ಪಟ್ಟಣದ ತಾಲೂಕು ನಾಯಕ ಸಮಾಜದ ವತಿಯಿಂದ ಬುಧವಾರದಂದು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿ ಮಾತನಾಡಿದ ಅವರು,  ನಮ್ಮ ಶಾಸಕರಾದ ಅನೀಲ್ ಚಿಕ್ಕಮಾದು ರವರ ತಂದೆ ಶಾಸಕರಾಗಿದ್ದ ಸಮಯದಲ್ಲಿ ತಾಲೂಕಿನ ಬಗ್ಗೆ ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿ ಹೋಗಲಾಡಿಸಲು ಜೀವವನ್ನು ತ್ಯಾಗ ಮಾಡಿ ಹೋಗಿದ್ದಾರೆ. ಅವರಂತೆಯೇ ಇವರು ಕೂಡ ಎರಡು ತಾಲ್ಲೂಕು ಎರಡು ಕಣ್ಣು ಇದ್ದಾಂಗೆ ನೋಡಿಕೊಂಡು ಅಭಿವೃದ್ಧಿ ಕೆಲಸ ಮಾಡಿಕೊಂಡು ಹೊಗುತ್ತಿದ್ದಾರೆ ಎಂದರು. ಯಾರೋ ಕಿಡಿಗೇಡಿಗಳು ಅವರ ವಿರುದ್ಧ ಮಾಧ್ಯಮಗಳಲ್ಲಿ ಪ್ರಸಾರ ಮಾಡಿದ್ದಾರೆ. ಅವರ ಬಗ್ಗೆ ತಲೆಕೆಡಿಸಿಕೊಳ್ಳದೇ ನಮ್ಮ ಅಭಿವೃದ್ಧಿ ಕೆಲಸ ಬಗ್ಗೆ ನಾವುಗಳು ಹೋಗೋಣ ಎಂದು  ಕಾರ್ಯಕರ್ತರಿಗೆ ಕರೆ ನೀಡಿದರು. ಅವರಿಗೆ ನಮ್ಮ ತಾಲೂಕಿನಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು…

Read More

ಸರಗೂರು:  ವಿದ್ಯಾರ್ಥಿಗಳು ಕೆಟ್ಟ ಹವ್ಯಾಸಗಳಿಂದ ದೂರವಿದ್ದು, ಶಿಸ್ತಿನ ಜೀವನ ರೂಪಿಸಿಕೊಳ್ಳಬೇಕು ಎಂದು ಸರಗೂರು ಪೊಲೀಸ್ ಠಾಣೆಯ ಎಚ್.ಸಿ. ಶೋಭಾ ಹೇಳಿದರು. ತಾಲೂಕಿನ ಹಳೆಯೂರು ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಮ್ಮಿಕೊಂಡಿದ್ದ ನೀತಿ ಶಿಕ್ಷಣ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಾಲ್ಯ ವಿವಾಹ ದೊಡ್ಡ ಸಾಮಾಜಿಕ ದುಷ್ಪರಿಣಾಮವಾಗಿದ್ದು, ಆದರ ನಿಯಂತ್ರಣದ ಹೊರತು ಸ್ವಾಸ್ಥ್ಯ ಆರೋಗ್ಯ ಸಾಧ್ಯವಿಲ್ಲ, ವಿದ್ಯಾರ್ಥಿಗಳ ಪೋಷಕರು ಇದರ ಬಗ್ಗೆ ಹೆಚ್ಚು ಗಮನಹರಿಸಬೇಕು. ಮಕ್ಕಳು ಶಾಲಾ ಶಿಕ್ಷಕರು ಹೇಳಿಕೊಡುವ ಶಿಕ್ಷಣವನ್ನು ಕಲಿತು ಉನ್ನತ ಮಟ್ಟದಲ್ಲಿ ವಿದ್ಯಾರ್ಜನೆಗೆ ಮುಂದಾಗಬೇಕು ಎಂದು ತಿಳಿಸಿದರು. ಮಕ್ಕಳು ಸಹಾಯವಾಣಿ’ 1098 ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ಸೂಕ್ತ ಮಾಹಿತಿ ನೀಡಿದರು. ಇಂದಿನ ಶಾಲಾಮಕ್ಕಳಲ್ಲಿ ನೀತಿ ಶಿಕ್ಷಣ, ಅದರ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡುವುದು ಅತಿ ಅಗತ್ಯವಾಗಿದ್ದು, ಇದರಿಂದ ಶಾಲಾ ಮಕ್ಕಳ ಸಮರ್ಥ ವ್ಯಕ್ತಿತ್ವ ಬೆಳಸುವುದು ಸಾಧ್ಯವಾಗಲಿದೆ ಎಂದು ತಿಳಿಸಿದರು. ಠಾಣೆ ಸಿಬ್ಬಂದಿ ವಿನಯ್ ಕುಮಾರ್ ಮಾತನಾಡಿ, ಶಾಲಾ ಮಕ್ಕಳು ಬಾಲ್ಯದಿಂದಲೇ ಕೆಟ್ಟ ಹವ್ಯಾಸಗಳಿಂದ…

Read More

ಸರಗೂರು: ತಾಲ್ಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಹೆಗ್ಗನೂರು ಸುಧೀರ್,  ಪ್ರಧಾನ ಕಾರ್ಯದರ್ಶಿಯಾಗಿ ಆಶೋಕ್,  ಉಪಾಧ್ಯಕ್ಷರಾಗಿ ಬಿ.ಜೆ. ಆಶೋಕ್ ಕುಮಾರ್ ಆಯ್ಕೆಯಾದರು. ತಾಲೂಕಿನ ಸಮೀಪದ ಬೀಚನಹಳ್ಳಿ ಗ್ರಾಮದ ಕಬಿನಿ ಪ್ರವಾಸಿ ಮಂದಿರದಲ್ಲಿ ಬುಧವಾರದಂದು ಸಮಾಜದ ಸಮುದಾಯ ಭವನದಲ್ಲಿ ನಡೆದ ತಾಲ್ಲೂಕು ಒಕ್ಕಲಿಗರ ಸಂಘದ ಸಭೆಯಲ್ಲಿ ಸುಧೀರ್ ಗೌಡ ಅವರನ್ನು ಸಮಾಜದ ಮುಖಂಡರ ಸರ್ವಾನುಮತದಿಂದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಒಕ್ಕಲಿಗ ಸಂಘದ ಪದಾಧಿಕಾರಿಗಳು ಆಯ್ಕೆ: ಅಧ್ಯಕ್ಷ ಹೆಗ್ಗನೂರು ಸುಧೀರ್, ಪ್ರಧಾನ ಕಾರ್ಯದರ್ಶಿ ಅಶೋಕ್, ಉಪಾಧ್ಯಕ್ಷ ಬಡಗಲಪುರ ಬಿ.ಜೆ.ಅಶೋಕ ಕುಮಾರ್, ಗೌರವಾಧ್ಯಕ್ಷ ಕಾಳಿಹುಂಡಿ ಸಿದ್ದೇಗೌಡ, ಸಹ ಕಾರ್ಯದರ್ಶಿ ಚೇತನ್, ಸಂಘಟನಾ ಕಾರ್ಯದರ್ಶಿ ಅಳಲಹಳ್ಳಿ ಸುರೇಶ್, ಖಜಾಂಚಿ ಸಾಗರೆ ಸಕಲೇಶ್,  ನಿರ್ದೇಶಕರು ಶಿವರಾಜು, ರವಿ, ಬಿ.ಬಿ ಎಂ ಮಹದೇವಸ್ವಾಮಿ, ಬಿ.ಕೆ. ಶಿವರಾಜು ಕೆ. ಗೌಡ, ಕಾಳಪ್ಪ ಸಿ., ಮಂಜುನಾಥ, ನವೀನ್, ಬಾಬು ಕಾನಕನಹಳ್ಳಿ, ನಾಗೇಂದ್ರ ಕೆ.ಸಿ., ನಿಂಗೇಗೌಡ, ನಾಗೇಶ್ ಎಸ್ ಬಿ, ಮಹೇಂದ್ರ ಸಾಗರೆ ಆಯ್ಕೆಯಾದರು. ನಂತರ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹೆಗ್ಗನೂರು ಸುಧೀರ್ ಮಾತನಾಡಿ,…

Read More

ಬೀದರ್: ಕೇಂದ್ರ ಸರಕಾರದ ಕಾರ್ಮಿಕ ನೀತಿ ವಿರೋಧಿಸಿ ಭಾರತ್ ಬಂದ್ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಬೃಹತ್ ಮುಷ್ಕರ ನಡೆಸಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಲಾಯಿತು. ನಗರದ ಅಂಬೇಡ್ಕರ್ ವೃತ್ತ, ಭಗತಸಿಂಗ್ ವೃತ್ತ ಹಾಗೂ ಶಿವಾಜಿ ವೃತ್ತದ ಮೂಲಕ ಸಾವಿರಾರು ಮಹಿಳಾ ಕಾರ್ಮಿಕರು ಸೇರಿ ವಿವಿಧ ಕಾರ್ಮಿಕ ಸಂಘಟನೆ ಜತೆಗೂಡಿ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯ ವಿರುದ್ಧ ಘೋಷಣೆ ಕೂಗುತ್ತಾ ಜಿಲ್ಲಾಧಿಕಾರಿ ಕಚೇರಿಗೆ ತಲುಪಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾರ್ಮಿಕ ಸಂಘಟನೆ ಜಂಟಿ ಸಮಿತಿಯ ಸಹ ಸಂಚಾಲಕ ಆರ್.ಪಿ.ರಾಜಾ, ಸಂಯುಕ್ತ ಕಿಸಾನ್ ಮೋರ್ಚಾದ ಸಂಚಾಲಕ ನಜೀರ್ ಅಹಮ್ಮದ್, ಕಾರ್ಮಿಕ ಸಂಘಟನೆ ಜಂಟಿ ಸಮಿತಿಯ ಸಹ ಸಂಚಾಲಕ ಮಹೇಶ್ನಾಡಗೌಡ, ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಎಂ.ಡಿ.ಶಫಾಯತ್ ಅಲಿ, ಎಐಟಿಯುಸಿಯ ಜಿಲ್ಲಾಧ್ಯಕ್ಷೆ ಚಂದ್ರಕಲಾ, ಜಿಲ್ಲಾ ಕಾರ್ಯದರ್ಶಿ ಸುಜಾತಾ ಕೆ.ದೊಡ್ಡಿ ಹಾಗೂ ಸಾರಿಕಾ ಕಾಳೆ ಸೇರಿದಂತೆ ಸಾವಿರಾರು ಕಾರ್ಮಿಕರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ,…

Read More

ಬಳ್ಳಾರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಅಂತ ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿಲ್ಲಿಯಲ್ಲಿ ನಾನು ಕಂಡಂತೆ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ. ಇದು ನನ್ನ ವೈಯಕ್ತಿಕ ಅಭಿಪ್ರಾಯ. ಇದೆಲ್ಲಾ ಮ್ಯಾಚ್‌ ಫಿಕ್ಸಿಂಗ್‌ ಆಗಿರುವ ಕಾರಣ, ಯಾವುದೇ ಕಾರಣಕ್ಕೂ ಡಿಕೆಶಿ ಅವರು ಸಿಎಂ ಆಗಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷ ಎರಡೂವರೆ ವರ್ಷಗಳಿಂದ ಆಡಳಿತ ನಡೆಸುತ್ತಿದೆ. ಆದರೆ, ಅವರ ಅಗ್ರಿಮೆಂಟ್‌ ಪ್ರಕಾರ ಸಿಎಂ ಅಧಿಕಾರ ಎರಡೂವರೆ ವರ್ಷ ಪೂರ್ಣಗೊಂಡಿದ್ದು, ಸಿಎಂ ಆಗಲು ಡಿ.ಕೆ ಶಿವಕುಮಾರ್‌ ಅವರು ನಾನಾ ಪ್ರಯತ್ನ ಮಾಡುತ್ತಿದ್ದಾರೆ. ಇನ್ನೊಂದಡೆ ಸಿಎಂ ಸಿದ್ದರಾಮಯ್ಯ ತಮ್ಮ ಖುರ್ಚಿಯನ್ನು ಭದ್ರಮಾಡಿಕೊಳ್ಳಲು ತಮ್ಮ ಪ್ರಯತ್ನದಲ್ಲಿ ನಿರತರಾಗಿದ್ದಾರೆ ಎಂದು ಲೇವಡಿ ಮಾಡಿದರು. ಈ ಹಿನ್ನೆಲೆ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ಕಾಂಗ್ರೆಸ್‌ ಪಕ್ಷದ ಶಾಸಕರೊಂದಿಗೆ ಚರ್ಚೆ ಮಾಡುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಯಿಂದ ರಾಜ್ಯದಲ್ಲಿ…

Read More

ಗೌರಿಬಿದನೂರು: ಜೆಡಿಎಸ್ ಕಾರ್ಯಕರ್ತರೊಬ್ಬರು ನಿಖಿಲ್ ಕುಮಾರಸ್ವಾಮಿ ಅವರ ಕಾರಿನಡಿಗೆ ಸಿಲುಕಿ ಸ್ವಲ್ಪದರಲ್ಲೇ  ಅಪಾಯದಿಂದ ಪಾರಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನದಿ ದಡ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ನಡೆದಿದೆ. ಜನತಾದಳ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜ್ಯಾದ್ಯಂತ ಸದಸ್ಯತ್ವ ನೋಂದಣಿ ಕಾರ್ಯಕ್ರಮ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನದಿ ದಡ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಕಾರ್ಯಕರ್ತನೊಬ್ಬ ಕಾರಿನಡಿ ಸಿಲುಕಿ ಸ್ವಲ್ಪದರಲ್ಲೇ ಪಾರಾಗಿದ್ದಾನೆ. ನಿಖಿಲ್ ಕುಮಾರಸ್ವಾಮಿಯವರೊಂದಿಗೆ ಮಾತನಾಡಲು ತೆರಳುತ್ತಿದ್ದಾಗ ಕಾರ್ಯಕರ್ತರೊಬ್ಬರು ನಿಖಿಲ್​ ಕಾರಿನಡಿ ಬಿದ್ದಿದ್ದಾರೆ. ಅದೃಷ್ಟವಶಾತ್​ ಯಾವುದೇ ಅನಾಹುತ ಸಂಭವಿಸಿಲ್ಲ. ಗೌರಿಬಿದನೂರಿನ ನದಿದಡ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಜನತಾದಳ ಸದಸ್ಯತ್ವ ನೊಂದಣಿ ಕಾರ್ಯಕ್ರಮಕ್ಕಾಗಿ ನಿಖಿಲ್ ಕುಮಾರಸ್ವಾಮಿಯವರು ಆಗಮಿಸಿದ್ದರು. ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ ಪಡೆದ ಅವರು, ಮೊದಲಿಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ, ನೂರಾರು ಕಾರ್ಯಕರ್ತರು ಮತ್ತು ಸ್ಥಳೀಯ ಜನರೊಂದಿಗೆ ಸದಸ್ಯತ್ವ ನೊಂದಣಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ಸರಗೂರು:  ತಾಲೂಕಿನ ಹಾದನೂರು ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ತುಂಬಸೋಗೆ ಗ್ರಾಮದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ, ಚುನಾಯಿತ ಜನಪ್ರತಿನಿಧಿಗಳ ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಮ್ಮುಖದಲ್ಲಿ ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿ ಸಭೆಯನ್ನು ಸೋಮವಾರ ಆಯೋಜಿಸಲಾಗಿತ್ತು. ನಂತರ ಮಾತನಾಡಿದ ಡಾ.ಟಿ.ರವಿಕುಮಾರ್  ಸಮಿತಿಗಳಿಗೆ 2025–26ನೇ ಸಾಲಿನ ಆರ್ಥಿಕ ವರ್ಷದ ಅನುದಾನವನ್ನು ಆರೋಗ್ಯ ಕೇಂದ್ರಗಳ ಖಾತೆಗೆ ಬಿಡುಗಡೆ ಮಾಡುವ ಹಿನ್ನೆಲೆಯಲ್ಲಿ, ಲಭ್ಯವಿರುವ ಅನುದಾನವನ್ನು ನಿಯಮಾನುಸಾರ ಬಳಕೆ ಮಾಡಿಕೊಳ್ಳಲು ತಿಳಿಸಿದರು. ಗ್ರಾಮ ಆರೋಗ್ಯ ಕುರಿತು ಚರ್ಚಿಸುವುದು ಹಾಗೂ 2025–26ನೇ ಸಾಲಿಗೆ ಸಂಬಂಧಿಸಿದಂತೆ ಗ್ರಾಮಗಳ ಕ್ರಿಯಾ ಯೋಜನೆಯ ಬಗ್ಗೆ ಚರ್ಚಿಸಿ, ತಯಾರಿಸುವುದು. ಹಾಗೆ ಜುಲೈ 11ರಂದು ವಿಶ್ವ ಜನ ಸಂಖ್ಯೆ ದಿನಾಚರಣೆಯನ್ನೂ ಕಡ್ಡಾಯವಾಗಿ ಮಾಡಬೇಕು ತಿಳಿಸಿದರು. ವಿಶ್ವಾಸ್ ಆಂದೋಲನದ ವ್ಯಾಪ್ತಿಯಲ್ಲಿ ಕೈ ತೊಳೆಯುವ ವಿಧಾನ ಮತ್ತು ಮಹತ್ವದ ಕುರಿತು ಸಭೆಗಳಲ್ಲಿ ಅರಿವು ಮೂಡಿಸುವುದು ಹಾಗೂ ಅಣುಕು ಪ್ರದರ್ಶನ ಕೈಗೊಳ್ಳಲು ತಿಳಿಸಿದರು. 2025–26ರ ಆರ್ಥಿಕ ವರ್ಷದಲ್ಲಿ ಆರೋಗ್ಯ ಕಾರ್ಯಕ್ರಮಗಳನ್ನು ಸಮುದಾಯ ಮಟ್ಟದಲ್ಲಿ ಅನುಷ್ಠಾನ…

Read More

ತುಮಕೂರು:  ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ 18ನೇ ವಿವಿ ಘಟಿಕೋತ್ಸವದಲ್ಲಿ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಾಹಿತ್ಯ ಹಂಪ ನಾಗರಾಜಯ್ಯ, ಉದ್ಯಮಿ ದಿಲೀಪ್ ಜಿ. ಸುರಾನ ಹಾಗೂ ಪತ್ರಕರ್ತ  ನಾಗಣ್ಣ  ಅವರಿಗೆ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. 59 ಡಾಕ್ಟರೇಟ್ ಗಳನ್ನು ಪ್ರಧಾನ ಮಾಡಲಾಯಿತು. ಕಲಾವಿ ಭಾಗದಲ್ಲಿ 37, ವಾಣಿಜ್ಯ ಮತ್ತು ನಿರ್ವಹಣಾ ನಿಕಾಯದಲ್ಲಿ ಎರಡು, ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದಲ್ಲಿ 20 ಸೇರಿದಂತೆ 59 ಮಂದಿಗೆ ರಾಜ್ಯಪಾಲರು ಪಿ ಎಚ್ ಡಿ ಪ್ರದಾನ ಮಾಡಿದರು. 11,349 ಮಂದಿಗೆ ಪದವಿ ಪ್ರದಾನವನ್ನು ಕೂಡ ಮಾಡಿದರು. ನಾಟಕ ಸ್ನಾತಕೋತ್ತರ ಸೇರಿ 11,349 ವಿದ್ಯಾರ್ಥಿಗಳು ಪದವಿ ಪಡೆದರು.  76 ವಿದ್ಯಾರ್ಥಿಗಳು ಒಟ್ಟು 109 ಚಿನ್ನದ ಪದಕವನ್ನು ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಪಾಲ, ಶಿಕ್ಷಕ ಯುವ ಸಮೂಹ ಸ್ವಚ್ಛ, ಸಶಕ್ತಾ ಭಾರತ ನಿರ್ಮಾಣಕ್ಕೆ ಮುಂದಾಗಬೇಕೆಂದು ರಾಜ್ಯಪಾಲ ಕರೆ ನೀಡಿದರು. ಶಿಕ್ಷಣವು ಅತ್ಯಮೂಲ್ಯ ಸಂಪತ್ತು ಆಗಿದೆ.…

Read More

ಕೊರಟಗೆರೆ : ಪಟ್ಟಣದ ಮೂಡಲಪಣ್ಣೆ ಪುಣ್ಯಕೋಟಿ ಬಡಾವಣೆಯಲ್ಲಿರುವ ಶ್ರೀಶಿರಡಿ ಸಾಯಿಬಾಬಾ ಮಂದಿರದಲ್ಲಿ ಜು.10 ರಂದು ಗುರು ಪೂರ್ಣಿಮಾ ಹಾಗೂ 6ನೇ ವರ್ಷದ ಮಹೋತ್ಸವ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಶಿರಡಿ ಸಾಯಿಬಾಬಾ ಸೇವಾ ಸಮಿತಿ ಕಾರ್ಯದರ್ಶಿ ಡಾ.ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಪಟ್ಟಣದ ಶ್ರೀಶಿರಡಿ ಸಾಯಿಬಾಬಾ ಮಂದಿರದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಮಾತನಾಡಿದ ಅವರು, ಪ್ರತಿವರ್ಷದಂತೆ ಈ ವರ್ಷವೂ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರುಪೂರ್ಣಿಮೆ ಕಾರ್ಯಕ್ರಮದೊಂದಿಗೆ ದೇವಾಲಯದ 6ನೇ ವರ್ಷದ ಮಹೋತ್ಸವ ಅಂಗವಾಗಿ ಪ್ರಧಾನ ಅರ್ಚಕ ಸಂಜಯ್‌ ಮಿಶ್ರ ನೇತೃತ್ವದಲ್ಲಿ ವಿಶೇಷ ಪೂಜೆ, ಅಭಿಷೇಕ, ಕೋಲಾಟ ಮತ್ತು ಭಜನಾ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಪೂಜಾ ಕಾರ್ಯಕ್ರಮದ ನಂತರ ಬೆಳಗ್ಗೆ 8 ಗಂಟೆಯಿಂದ ರಾತ್ರಿ 9:30ರವರೆಗೂ ನಿರಂತರವಾಗಿ ಪ್ರಸಾದ ವಿನಿಯೋಗ ಮಾಡಲಾಗುವುದು ಎಂದು ತಿಳಿಸಿದರು. ನಿರ್ದೇಶಕ ಎಂ.ಜಿ.ಬದ್ರಿಪ್ರಸಾದ್ ಮಾತನಾಡಿ, ಜು.10 ರಂದು ನಡೆಯುವ 6ನೇ ವರ್ಷದ ಮಹೋತ್ಸವ ಕಾರ್ಯಕ್ರಮ ಅಂಗವಾಗಿ 6:30 ರಿಂದ 9:30ರವರೆಗೆ ಬೆಂಗಳೂರು ಆರ್ಟ್ ಆಫ್ ಲಿವಿಂಗ್ ಅಂತರಾಷ್ಟ್ರೀಯ ಕೇಂದ್ರದ…

Read More