Subscribe to Updates
Get the latest creative news from FooBar about art, design and business.
- ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
- ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ: ನಗನಗದು ದೋಚಿ ಪರಾರಿ
- ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
- ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
- ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
- ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
- ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
- ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Author: admin
ಪ್ರಧಾನಮಂತ್ರಿ ನರೆಂದ್ರ ಮೋದಿ ಅವರ ನಿವಾಸದ ಮೇಲೆ ಡ್ರೋನ್ ಒಂದು ಅನುಮಾನಾಸ್ಪದವಾಗಿ ಹಾರಾಟ ನಡೆಸಿದ್ದಾಗಿ ವರದಿಯಾಗಿದೆ. ಈ ಬಗ್ಗೆ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಮನೆಯು ರೆಡ್ ನೋ ಫ್ಲೈ ಝೋನ್ ಅಥವಾ ನೋ ಡ್ರೋನ್ ಝೋನ್ ಅಡಿಯಲ್ಲಿ ಬರುತ್ತದೆ. ಸೋಮವಾರ ಬೆಳಗ್ಗೆ ಸುಮಾರು 5 ಗಂಟೆ ವೇಳೆಗೆ ಮೋದಿ ನಿವಾಸದ ಮೇಲೆ ಡ್ರೋನ್ ಸುಳಿದಾಡಿದೆ ಎನ್ನಲಾಗಿದೆ. ಹೀಗಾಗಿ ಅಧಿಕಾರಿಗಳು ಎಚ್ಚೆತ್ತು ಈ ಬಗ್ಗೆ ತೀವ್ರ ತನಿಖೆ ಪ್ರಾರಂಭಿಸಿದ್ದಾರೆ. ಮೋದಿಯವರ ಸುರಕ್ಷತೆಯನ್ನು ಖಾತ್ರಿಪಡಿಸುವ ಕಾರ್ಯವನ್ನು ನಿರ್ವಹಿಸುವ ವಿಶೇಷ ರಕ್ಷಣಾ ತಂಡ ದೆಹಲಿ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಖಾಸಗಿ ಸಂಸ್ಥೆಯ ಉದ್ಯೋಗಿಯೊಬ್ಬ ಮಹಿಳೆಯ ಜೊತೆ ಆನ್ ಲೈನ್ ಲೈವ್ ಸೆಕ್ಸ್ ಚಾಟ್ ಮಾಡಿ 10 ಸಾವಿರ ರೂಪಾಯಿ ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 38 ವರ್ಷದ ವ್ಯಕ್ತಿ ಕಾಜಲ್ ಎಂದು ಗುರುತಿಸಲಾದ ಮಹಿಳೆಯೊಂದಿಗೆ 10 ನಿಮಿಷಗಳ ಕಾಲ ಸೆಕ್ಸ್ ಚಾಟ್ ಮಾಡಿದ್ದು, ಫೋನ್ ಕರೆ ಕಟ್ ಮಾಡುವಾಗ ಮಹಿಳೆಯು ಸಂತ್ರಸ್ತನ ಎಲ್ಲಾ ಸಂಪರ್ಕ ವಿವರಗಳನ್ನು ಪಡೆದಿದ್ದಳು. ಸ್ವಲ್ಪ ಸಮಯದ ನಂತರ, ಅವಳು ಮತ್ತೆ ಅವನಿಗೆ ಕರೆ ಮಾಡಿ ಹಣಕ್ಕಾಗಿ ಬೇಡಿಕೆಯಿಟ್ಟಳು, ಹಣ ನೀಡದಿದ್ದರೇ ಅವಳು ವೀಡಿಯೊವನ್ನು ಫೇಸ್ ಬುಕ್ ಮತ್ತು ಇತರ ಸಾಮಾಜಿಕ ಮಾಧ್ಯಮ ಗಳಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಳು. ಆರೋಪಿಯನ್ನು ಸುಮಾರು 12 ಗಂಟೆಗಳ ಕಾಲ ಬ್ಲಾಕ್ ಮೇಲ್ ಮಾಡಿ ಆಕೆ ನೀಡಿದ ಖಾತೆಗೆ ಹಣ ಕಳುಹಿಸುವಂತೆ ಮಾಡಲಾಗಿತ್ತು. ಮತ್ತೆ ಮತ್ತೆ ಆಕೆ ಹಣಕ್ಕಾಗಿ ಪೀಡಿಸಲು ಆರಂಭಿಸಿದಾಗ, ಸಂತ್ರಸ್ತ ವೈಟ್ ಫೀಲ್ಡ್ ವಿಭಾಗದ ಬೆಳ್ಳಂದೂರು ಪೊಲೀಸರನ್ನು ಸಂಪರ್ಕಿಸಿ ಆಕೆಯ ವಿರುದ್ಧ ದೂರು ದಾಖಲಿಸಿದರು. ಸಂತ್ರಸ್ತ ವ್ಯಕ್ತಿ…
ಮಂಡ್ಯ: ಕೊಳದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಮದ್ದೂರಮ್ಮ ದೇವಾಲಯದ ಕೊಳದಲ್ಲಿ ನಡೆದಿದೆ 16 ವರ್ಷದ ಅಜಲಮ್ ಪಾಷಾ, 13 ವರ್ಷದ ಮಹಮ್ಮದ್ ಅಲಿ ಮೃತ ದುರ್ದೈವಿಗಳಾಗಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದು, ಬಾಲಕರಿಬ್ಬರ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಬಾಲಕರಿಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಕ್ಕಳು ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಮಹಾರಾಷ್ಟ್ರ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿದ್ದು, ಎನ್ ಸಿಪಿ ನಾಯಕ ಅಜಿತ್ ಪವಾರ್ ಬಂಡಾಯವೆದ್ದು ಹಲವಾರು ಶಾಸಕರೊಂದಿಗೆ ಶಿಂಧೆ ಸರ್ಕಾರವನ್ನು ಸೇರಿದ್ದು, ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಎನ್ ಸಿಪಿಯ ಹಿರಿಯ ನಾಯಕ ಛಗನ್ ಭುಜಬಲ್ ಕೂಡ ಮಹಾರಾಷ್ಟ್ರದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೂತನ ಸಚಿವರಿಗೆ ರಾಜ್ಯಪಾಲ ರಮೇಶ್ ಬೈಸ್ ಪ್ರಮಾಣವಚನ ಬೋದಿಸಿದರು. ಪ್ರಮಾಣ ವಚನ ಸ್ವೀಕಾರದ ವೇಳೆ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡ ರಾಜಭವನದಲ್ಲಿ ಉಪಸ್ಥಿತರಿದ್ದರು. ಮಹಾರಾಷ್ಟ್ರದ ಮಾಜಿ ಗೃಹ ಸಚಿವರಾದ ದಿಲೀಪ್ ವಾಲ್ಸೆ ಪಾಟೀಲ್, ಹಸನ್ ಮುಶ್ರೀಫ್, ಸಂಜಯ್ ಬನ್ಸೋಡೆ, ಅದಿತಿ ತಟ್ಕರೆ, ಧರ್ಮರಾವ್ ಮತ್ತು ಧನಂಜಯ್ ಮುಂಡೆ ಕೂಡ ಮಹಾರಾಷ್ಟ್ರದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು: ವಸತಿ ನಿಲಯಗಳಿಗೆ ಪಾವಗಡ ತಹಶೀಲ್ದಾರ್ ಸುಜಾತ ದಿಢೀರ್ ಭೇಟಿ ನೀಡಿ ಹಾಸ್ಟೆಲ್ ಗಳ ಸ್ವಚ್ಛತೆ ಹಾಗೂ ಆಹಾರ ಗುಣಮಟ್ಟ ಪರಿಶೀಲನೆ ನಡೆಸಿದರು. ಪಾವಗಡ ಪಟ್ಟಣದಲ್ಲಿರುವ ದೇವರಾಜು ಅರಸು ಹಿಂದುಳಿದ ವರ್ಗಗಳ ಹಾಸ್ಟೆಲ್ ಗಳಿಗೆ ಭೇಟಿ ಮಾಡಿ ಅವರು, ಮಕ್ಕಳ ಹಾಜರಾತಿ ಪುಸ್ತಕ ಅಡುಗೆ ಮನೆಯ ಶುಚಿತ್ವ ಪರಿಶೀಲನೆ ನಡೆಸಿದರು. ತಾವೇ ಹಾಸ್ಟೆಲ್ ಊಟ ಸೇವಿಸಿ, ಆಹಾರದ ಗುಣಮಟ್ಟ ಪರಿಶೀಲನೆ ಮಾಡಿ, ಹಾಸ್ಟೆಲ್ ಸ್ವಚ್ಚವಾಗಿ ಇಡುವಂತೆ ವಾರ್ಡ್ ಗೆ ಸೂಚನೆ ನೀಡಿದರು. ಬಳಿಕ ಎಸ್ಸಿ-ಎಸ್ಟಿ ವಸತಿ ನಿಲಯಕ್ಕೂ ಭೇಟಿ ನೀಡಿದ ಅವರು, ಶೌಚಾಲಯ ಇಲ್ಲದೆ ಇರುವುದನ್ನು ಗಮನಿಸಿ ಕೂಡಲೇ ಶೌಚಾಲಯ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು. ಅಲ್ಲದೇ ಇಂದಿರಾ ಕ್ಯಾಂಟಿನ್ ಗೂ ಭೇಟಿ ನೀಡಿ, ಇಂದಿರಾ ಕ್ಯಾಂಟಿನ್ ಸ್ವಚ್ಛವಾಗಿಡುವಂತೆ ಸೂಚನೆ ನೀಡಿದರು. ತಹಶೀಲ್ದಾರ್ ಗೆ ಸ್ಥಳೀಯ ಅಧಿಕಾರಿಗಳ ಸಾಥ್ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಶಿರಾ: ಶಾಸಕ ಟಿ.ಬಿ.ಜಯಚಂದ್ರ ಅವರು, ಶಿರಾ ನಗರದ ಕೆಲ ಬಡಾವಣೆಗಳ ರೌಂಡ್ಸ್ ಹಾಕಿದ್ರು. ಇದೇ ವೇಳೆ ರಸ್ತೆ ಬದಿಯಲ್ಲಿ ಚಹಾ ಸವಿದು ಜನರ ಸಮಸ್ಯೆ ಆಲಿಸಿದರು. ಚುನಾವಣೆಯಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಸಿಟಿ ರೌಂಡ್ಸ್ ಹೊಡೆದ ಶಾಸಕರು ನಗರ ಪ್ರದೇಶದ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಮುಂದಾದರು. ಇದೇ ವೇಳೆ ಕುಡಿಯುವ ನೀರು, ಸ್ವಚ್ಛತೆ, ಚರಂಡಿ ಸಮಸ್ಯೆ ಕುರಿತಂತೆ ಹಲವು ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಹೇಳಿಕೊಂಡರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು: ಜಾನುವಾರುಗಳಿಗೆ ಮೇವು ತರಲು ಹೋಗಿದ್ದ ವ್ಯಕ್ತಿ ಹಾವಿಗೆ ಬಲಿಯಾದ ಘಟನೆ ಕೊಡಿಗೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪೆದ್ದಯ್ಯ(45) ಮೃತ ದುರ್ದೈವಿಯಾಗಿದ್ದಾರೆ. ಇವರು ಜಾನುವಾರುಗೆ ಮೇವು ತರಲು ಹೋಗಿದ್ದ ವೇಳೆ ಹಾವು ಕಚ್ಚಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು: ಈಜು ಬಾರದಿದ್ದರೂ ನೀರಿಗೆ ಬಿದ್ದ ತನ್ನಿಬ್ಬರು ಮಕ್ಕಳನ್ನು ರಕ್ಷಿಸಿ ತಾಯಿ ನೀರುಪಾಲಾದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ರಥಸಂದ್ರ ಗ್ರಾಮದ ಕೆರೆಯಲ್ಲಿ ನಡೆದಿದೆ. ಮನು(30) ಮೃತ ಮಹಿಳೆಯಾಗಿದ್ದಾರೆ. ಇವರು ಇಬ್ಬರು ಮಕ್ಕಳೊಂದಿಗೆ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದರು. ಈ ವೇಳೆ ಮಕ್ಕಳು ಕೆರೆ ದಡದಲ್ಲಿ ಆಟವಾಡುತ್ತಿದ್ದರು. ಈ ವೇಳೆ ಇಬ್ಬರು ಮಕ್ಕಳು ಕೂಡ ಕೆರೆಗೆ ಬಿದ್ದಿದ್ದಾರೆ. ತಕ್ಷಣವೇ ಕೆರೆಗೆ ಹಾರಿದ ಮನು ಮಕ್ಕಳಿಬ್ಬರನ್ನು ರಕ್ಷಿಸಿ ನೀರಿನಿಂದ ಮೇಲೆ ಹಾಕಿದ್ದಾರೆ. ಆದ್ರೆ ಈಜು ಬಾರದ ಕಾರಣ ತಾನು ನೀರಿನಿಂದ ಮೇಲೆ ಬರಲಾಗದೇ ಕೆರೆಯಲ್ಲೇ ಮುಳುಗಿ ಸಾವನ್ನಪ್ಪಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಪೊಲೀಸ್ ಸಂಬಂಧಿ ಸಮಸ್ಯೆ ಆಲಿಸಲು ಪ್ರತಿ ತಿಂಗಳು ನಾಲ್ಕನೇ ಶನಿವಾರದಂದು ಜನಸಂಪರ್ಕ ಸಭೆ ನಡೆಸಲಾಗುತ್ತಿದ್ದು, ಸಭೆಯಲ್ಲಿ ಬಿಬಿಎಂಪಿಗೆ ಸಂಬಂಧಪಟ್ಟ ಸಮಸ್ಯೆಗಳು ಹೆಚ್ಚಾಗಿ ಕೇಳಿಬರುತ್ತಿವೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿದರು. ‘ಬಿಬಿಎಂಪಿ ಅಧಿಕಾರಿಗಳನ್ನು ಕರೆಸಿ’ ಎಂದು ಪ್ರತಿಬಾರಿಯೂ ಸಾರ್ವಜನಿಕರು ಕೋರುತ್ತಿದ್ದಾರೆ. ಇದಕ್ಕೆ ಸ್ಪಂದಿಸಿರುವ ಬಿ. ದಯಾನಂದ್, ‘ಪೊಲೀಸ್ ಇಲಾಖೆಯಿಂದ ಹಮ್ಮಿಕೊಳ್ಳುವ ಜನಸಂಪರ್ಕ ಸಭೆಗೆ ಬಿಬಿಎಂಪಿ ಅಧಿಕಾರಿಗಳನ್ನು ಕಳುಹಿಸಿಕೊಡಿ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಪತ್ರ ಬರೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಗ್ರಾಮದಲ್ಲಿ ಡಿಸಿಆರ್ ಬಿ ಪೊಲೀಸರು ದಾಳಿ ಮಾಡಿದ್ದು, ಅಕ್ರಮವಾಗಿ ಸಂಗ್ರಹಿಸಿದ್ದ 3.61 ಲಕ್ಷ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಈ ವೇಳೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎಂ.ಬಿ.ರವಿಕುಮಾರ (47) ಹಾಗೂ ತಿಪ್ಪೇಶ (43) ಬಂಧಿತ ಆರೋಪಿಗಳು. ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA