Subscribe to Updates
Get the latest creative news from FooBar about art, design and business.
- ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ
- ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ
- ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ
- ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!
- ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.
- ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ
- ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ
- ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು
Author: admin
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರ ವಿರುದ್ಧ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಜನಪ್ರತಿನಿಧಿ ಕಾಯ್ದೆಯಡಿ ದಾಖಲಾದ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಲಾಗಿದೆ.‘ಬಿಜೆಪಿಗೆ ಮತ ನೀಡಿ ಮತ್ತು ಶ್ರೀ ನರೇಂದ್ರ ಮೋದಿಜಿಯವರ ಒಲವು ಪಡೆಯಿರಿ, ಕರ್ನಾಟಕವು ಮೋದಿಯವರ ಆಶೀರ್ವಾದ ಹೊಂದಿದೆ. ಅದರಿಂದ ವಂಚಿತವಾಗದಂತೆ ನೋಡಿಕೊಳ್ಳಿ’ ಎಂದು ನಡ್ಡಾರವರು ಹೇಳಿದ್ದು, ಇದು ಜನಪ್ರತಿನಿಧಿ ಕಾಯ್ದೆಯ ಪ್ರಕಾರ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 171(ಸಿ), 171(ಎಫ್) ಮತ್ತು 123(2) ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ಶಿಗ್ಗಾಂವಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ನಂ.51/2023 ರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಿಜೆಪಿ ಪರವಾಗಿ ನ್ಯಾಯವಾದಿ ಮತ್ತು ಕಾನೂನು ಪ್ರಕೋಷ್ಠದ ವಿನೋದ್ ಕುಮಾರ್ ಅವರು ಈ ಕೇಸು ರದ್ದು ಮಾಡಲು ಕೋರಿ ಹೈಕೋರ್ಟಿನ ಧಾರವಾಡ ಪೀಠದ ಮುಂದೆ ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿ ನಾಗಪ್ರಸನ್ನ ಅವರು ಈ ಪ್ರಕರಣದ ತನಿಖೆಗೆ ತಡೆ ನೀಡಿ ಆದೇಶ ಹೊರಿಡಿಸಿದ್ದಾಗಿ ವಿನೋದ್ ಕುಮಾರ್ ಅವರು ತಿಳಿಸಿದ್ದಾರೆ.
ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಕಾರ್ಯಕ್ರಮಗಳು ಸೇರಿದಂತೆ ದಸರಾ ಕೃಷಿ ಉತ್ಸವದ ಉದ್ಘಾಟನೆಗೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರನ್ನು ಮೈಸೂರು ಜಿಲ್ಲಾಡಳಿತದ ವತಿಯಿಂದ ಅಧಿಕೃತವಾಗಿ ಆಹ್ವಾನಿಸಲಾಯಿತು. ಮೈಸೂರು ಅಪರ ಜಿಲ್ಲಾಧಿಕಾರಿ ಶ್ರೀರೂಪ ಅವರು ವಿಧಾನ ಸೌಧದಲ್ಲಿರುವ ಸಮಿತಿ ಕೊಠಡಿಯಲ್ಲಿ ಮೈಸೂರು ಜಿಲ್ಲಾಡಳಿತದ ಪರವಾಗಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರನ್ನು ಭೇಟಿ ಮಾಡಿ, ಸನ್ಮಾನಿಸಿ, ಆಹ್ವಾನ ಪತ್ರವನ್ನು ನೀಡುವ ಮೂಲಕ ಅಧಿಕೃತ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾಡಳಿತದ ಅಧಿಕಾರಿಗಳು ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಸಣ್ಣ ನೀರಾವರಿ ಇಲಾಖೆಯ ಯೋಜನೆಗಳಡಿ, 2018ರಲ್ಲಿ ಬಾಕಿ ಬಿಲ್ 440 ಕೋಟಿ ರೂ.ನಷ್ಟಿತ್ತು. ಸೆಪ್ಟೆಂಬರ್ ಅಂತ್ಯದ ವೇಳೆಗೆ ಇದು 3036 ಕೋಟಿ ರೂ. ಗಳಷ್ಟಾಗಿದೆ. ಕಳೆದ ಎರಡು ವರ್ಷದಲ್ಲಿ ನಿಗದಿತ ಆಯವ್ಯಯದ ಮೂರು ಪಟ್ಟು ಹೆಚ್ಚು ಕಾಮಗಾರಿಗಳಿಗೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಬಾಕಿ ಬಿಲ್ ಮೊತ್ತ ಗಣನೀಯವಾಗಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇನ್ನೂ ಪ್ರಾರಂಭವಾಗದ ಹಾಗೂ ಹೊಸ ಕಾಮಗಾರಿಗಳ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ವೇಳೆ ಈ ಸೂಚನೆ ನೀಡಿದರು. 2023ರ ಏಪ್ರಿಲ್ 1ರ ವೇಳೆಗೆ ಇಲಾಖೆಯಲ್ಲಿ ಮಂಜೂರಾದ ಕಾಮಗಾರಿಗಳನ್ನು ಕೈಗೊಳ್ಳಲು ಬೇಕಾದ ಮೊತ್ತ- 22304 ಕೋಟಿ ರೂ. ಇದ್ದು, ಅದರಲ್ಲಿ 31-3-2023ರ ವರೆಗೆ 9602.37 ಕೋಟಿ ರೂ. ವೆಚ್ಚವಾಗಿದೆ. 2023-24ನೇ ಸಾಲಿಗೆ ಬಾಕಿ ಕಾಮಗಾರಿಗಳನ್ನು ಕೈಗೊಳ್ಳಲು ಬೇಕಾದ ಮೊತ್ತ 12,696.35 ಕೋಟಿ ರೂ. ಆಗಿದೆ. ಇಲಾಖೆಯಲ್ಲಿ ಮಂಜೂರಾಗಿರುವ…
ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2023ರ ಆಹಾರ ಮೇಳದ ಪೋಸ್ಟರ್ ರನ್ನು ಆಹಾರ, ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಬಿಡುಗಡೆ ಮಾಡಿದರು. ಈ ವೇಳೆ, ಮೈಸೂರು ಜಿಲ್ಲೆಯ ಆಹಾರ, ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಹಾಗೂ ಸಹಾಯಕ ನಿರ್ದೇಶಕರಾದ ರಮೇಶ್ ಉಪಸ್ಥಿತರಿದ್ದರು.
ಸರ್ಜಾಪುರ ಬಳಿಯ ಮುಳ್ಳೂರು, ಆರ್‌ಎಂವಿ ಎಕ್ಸ್ಟೆಕ್ಷನ್, ಬಿಇಎಲ್ ಸರ್ಕಲ್, ಮಲ್ಲೇಶ್ವರಂ, ಡಾಲರ್ಸ್ ಕಾಲೋನಿ ಸೇರಿದಂತೆ 15ಕ್ಕೂ ಹೆಚ್ಚು ಕಡೆ ದಾಳಿ ನಡೆದಿದೆ. ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಉದ್ಯಮಿಗಳ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತಡೊಗಿದ್ದಾರೆ. ವಿಜಯನಗರ, ಬಿಟಿಎಂ ಲೇಔಟ್ , ಹುಳಿಮಾವು, ಸದಾಶಿವನಗರ, ಸ್ಯಾಂಕಿ ಟ್ಯಾಂಕ್ ಸೇರಿದಂತೆ ಹಲವೆಡೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಬೆಂಗಳೂರಿನ ವಿಜಯನಗರದಲ್ಲಿ ವೈದ್ಯೆ ನಿವಾಸದ ಮೇಲೆ ಐಟಿ ದಾಳಿಯಾಗಿದೆ. ಶಾಂತಿನಗರದ ವೈದ್ಯೆ ಮನೆಯಲ್ಲಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಮೇಖ್ರಿ ವೃತ್ತ ಬಳಿಯ ಗಜರಾಜ ಜ್ಯುವೆಲರಿ ಶಾಪ್ ಮೇಲೂ ಐಟಿ ಅಧಿಕಾರಿಗಳ ದಾಳಿ ನಡೆದಿದೆ. ಅಂಗಡಿ ಬಾಗಿಲು ಮುಚ್ಚಿ ಒಳಗಡೆ ಪರಿಶೀಲನೆ ನಡೆಸಲಾಗುತ್ತಿದೆ. ಎರಡು ಇನ್ನೋವಾ ಕಾರಿನಲ್ಲಿ ಬಂದಿರುವ ಐಟಿ ಅಧಿಕಾರಿಗಳ ಟೀಂ ತಲಾಶ್ ನಡೆಸುತ್ತಿದೆ. ಕಳೆದ ತಿಂಗಳು ಸೆಪ್ಟೆಂಬರ್ 27ರಂದು ಬೆಂಗಳೂರಿನ ಹಲವು ಕಂಪೆನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು.…
ಉತ್ತರಾಖಂಡ: ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಉಡುಗೆಯಾದ ಪೇಟ ಮತ್ತು ಉಣ್ಣೆಯ ಶಾಲನ್ನು ತೊಟ್ಟು ಮೋದಿ ಅವರು ಪಾರ್ವತಿ ಕುಂಡ್‌ನ ತಟದಲ್ಲಿನ ಶಿವ -ಪಾರ್ವತಿ ದೇವಸ್ಥಾನದಲ್ಲಿ ಆರತಿ ಬೆಳಗಿದ್ದಾರೆ. ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಉತ್ತರಾಖಂಡಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪಿಥೋರಗಢದ ಪಾರ್ವತಿ ಕುಂಡ್ ಗೆ ಭೇಟಿ ನೀಡಿ ಆದಿ ಕೈಲಾಸ್ ತುದಿಯಲ್ಲಿ ಶಿವನಿಗೆ ಪೂಜೆ ಸಲ್ಲಿಸಿದ್ದಾರೆ. ಪಿಥೋರಗಢದಲ್ಲಿ ಪ್ರಧಾನಿ ಅವರು ₹4,200 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಗಡಿಭಾಗದಲ್ಲಿರುವ ಜುಂಜಿ ಎನ್ನುವ ಗ್ರಾಮ ತೆರಳಿ ಸ್ಥಳೀಯ ಜನರು ಮತ್ತು ಭದ್ರತಾ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದ್ದಾರೆ. ಜತೆಗೆ ಸ್ಥಳೀಯ ಉತ್ಪನ್ನಗಳ ಪ್ರದರ್ಶನ ಮಳಿಗೆಗೆ ತೆರಳಿ ವೀಕ್ಷಣೆ ಮಾಡಿದ್ದಾರೆ. ಪ್ರಧಾನಿ ಮೋದಿಯವರೊಂದಿಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಕೂಡ ತೆರಳಿದ್ದರು.
ಬೆಂಗಳೂರು: “ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿದ್ಯುತ್ ಕೊರತೆ ಎದುರಾಗಿದೆ. ಈ ವಿಚಾರವಾಗಿ ಟೀಕೆ ಮಾಡುವ ಬಿಜೆಪಿ ನಾಯಕರು ತಮ್ಮ ಅಧಿಕಾರ ಅವಧಿಯಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಎಷ್ಟು ಪ್ರಮಾಣ ಹೆಚ್ಚಳ ಮಾಡಿದ್ದರು ಎಂಬುದನ್ನು ಹೇಳಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜತೆ ಗುರುವಾರ ಮಾತನಾಡಿದರು. “ಮಳೆ ಬಿದ್ದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ, ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಹಿಂದೆ ನಮ್ಮ ಸರ್ಕಾರ ಇದ್ದಾಗ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ನಾವು ಆಗ 10 ರಿಂದ 13 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡಿದ್ದೆವು. ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡಿಲ್ಲ. ಹೀಗಾಗಿ ಈ ಪರಿಸ್ಥಿತಿ ಬಂದಿದೆ” ಎಂದು ತಿಳಿಸಿದರು. “ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ. ರಾಜ್ಯದ ಅಣೆಕಟ್ಟುಗಳಲ್ಲಿ ನೀರಿನ ಲಭ್ಯತೆ ಕಡಿಮೆ ಇದೆ. ಬರಗಾಲ ಎದುರಾದಾಗ ವಿದ್ಯುತ್ ಉತ್ಪಾದನೆ ಕುಸಿಯುತ್ತದೆ. ಅಲ್ಲದೇ ಪ್ರತಿವರ್ಷ…
ಬೆಂಗಳೂರು: ರಾಜ್ಯದಲ್ಲಿ ರೈತರಿಗೆ ಆತ್ಮಹತ್ಯೆ ಗ್ಯಾರಂಟಿ ನೀಡುವ ಕಾಂಗ್ರೆಸ್ ಸರಕಾರವಿದೆ ಎಂದು ರಾಜ್ಯದ ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಕಾಂಗ್ರೆಸ್ ಸರಕಾರ ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಇದರಿಂದ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ವಿದ್ಯುತ್ ಕೊಡಲು ಸಾಧ್ಯವಾಗುತ್ತಿಲ್ಲ. ಲೋಡ್ ಶೆಡ್ಡಿಂಗ್ ಇದೆ. ರಾಜ್ಯದಾದ್ಯಂತ ಬರಗಾಲದ ಛಾಯೆ ಆವರಿಸಿದೆ ಎಂದು ವಿವರಿಸಿದರು. ಈ ವರ್ಷ ಇದುವರೆಗೂ 11,18,527 ಹೆಕ್ಟೇರ್ ಭೂಮಿಯಲ್ಲಿ ಬೆಳೆ ಹಾನಿ ಸಂಭವಿಸಿದೆ. ಆದರೆ, ಸರಕಾರವು ಒಬ್ಬನೇ ಒಬ್ಬ ರೈತರಿಗೆ ಒಂದೇ ಒಂದು ಹೆಕ್ಟೇರ್‍ಗೆ, ಒಂದು ಪೈಸೆ ಪರಿಹಾರವನ್ನೂ ಕೊಟ್ಟಿಲ್ಲ. ಕಳೆದ ವರ್ಷ ನಮ್ಮ ಬಿಜೆಪಿ ಸರಕಾರದ ಅವಧಿಯಲ್ಲಿ 39,74,741 ಹೆಕ್ಟೇರ್ ಭೂಮಿಯಲ್ಲಿ ಅತಿವೃಷ್ಟಿಯಿಂದ ಬೆಳೆ ನಷ್ಟವಾಗಿತ್ತು. ಆಗ ನಾವು ಕೇಂದ್ರದಿಂದ ಬರ ಪರಿಹಾರಕ್ಕಾಗಿ ಕಾಯಲಿಲ್ಲ. ನಿಯಮಾವಳಿ ಪ್ರಕಾರ ಒಂದು ಹೆಕ್ಟೇರ್‍ಗೆ 6,800 ರೂ ಇದ್ದರೆ, ನಮ್ಮ ಸರಕಾರ 13,600 ರೂ. ಅಂದರೆ ದ್ವಿಗುಣ ಮೊತ್ತದ…
ಬೆಂಗಳೂರು: ಸುಸ್ಥಿರ ಭವಿಷ್ಯದ ಸಂಶೋಧನೆ ಮತ್ತು ಆವಿಷ್ಕಾರಗಳ ಪ್ರೋತ್ಸಾಹ ಹಾಗೂ ಅವುಗಳ ಫಲವನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಇ-ಕೆಆರ್ ಡಿಐಪಿ (e-KRDIP ಕರ್ನಾಟಕ ಆರ್&ಡಿ ಇನ್ನೋವೇಷನ್ ಫ್ಲಾಟ್‌ಫಾರಂ Karnataka R&D Innovation Platform e-KRDIP) ಅನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಆರ್ಥಿಕ ಇಲಾಖೆಯಿಂದ ಅಗತ್ಯ ಅನುಮೋದನೆಯನ್ನು ಪಡೆದುಕೊಳ್ಳಲಾಗಿದೆ. ಕರ್ನಾಟಕ ರಿಸರ್ಚ್ ಫೌಂಡೇಶನ್ ಸೇರಿದಂತೆ ಸಂಶೋಧನೆಗೆ ಒತ್ತು ನೀಡುವ ಈ ಎರಡೂ ಸಂಸ್ಥೆಗಳನ್ನ ಶೀಘ್ರದಲ್ಲೇ ಪ್ರಾರಂಭಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದರು. ಇಂದು ನಗರದಲ್ಲಿ ಶೆಲ್ ಇಂಡಿಯಾ “ಚೇಂಜ್ ಮೇಕರ್ಸ್ ಆಫ್ ಟುಮಾರೋ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು, ಕರ್ನಾಟಕ ರಾಜ್ಯ ಕೈಗಾರಿಕಾ ಸ್ನೇಹಿ ರಾಜ್ಯಗಳಲ್ಲಿ ಪ್ರಮಖವಾಗಿದೆ. ಸ್ಟಾರ್ಟ್ ಅಪ್ ಗಳ ಪ್ರೋತ್ಸಾಹಕ್ಕೆ, ಹೊಸ ಉದ್ಯಮಗಳ ಸ್ಥಾಪನೆಗೂ ರಾಜ್ಯ ಸರಕಾರ ಉತ್ತಮ ಸಹಕಾರ ನೀಡುತ್ತಿದೆ. ರಾಜ್ಯ ಸರಕಾರದ ಕ್ರಾಂತಿಕಾರಿ ಯೋಜನೆಗಳ ಪರಿಣಾಮದಿಂದ ವಿಶ್ವದ ಪ್ರಮುಖ ಸಂಸ್ಥೆಗಳು ಕರ್ನಾಟಕ ರಾಜ್ಯದಲ್ಲಿ…
ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಮನೆಗಳ ನಿರ್ಮಾಣಕ್ಕಾಗಿ ನಕ್ಷೆ ಮಂಜೂರಾತಿ ಬಯಸುವವರಿಗೆ ಮುಖಾಮುಖಿ ರಹಿತ (ಫೇಸ್ ಲೆಸ್) ಸೇವೆ ಒದಗಿಸಲು ತಂತ್ರಾಂಶ ಸಿದ್ಧಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯಿದೆ 2020ರ ಕಲಂ 144(6)ಮತ್ತು (21)ರ ಅಂಶಗಳನ್ನು ರಾಜ್ಯದ ಇತರ ಮಹಾನಗರ ಪಾಲಿಕೆ ಮತ್ತು ಇತರ ಸ್ಥಳೀಯ ಸಂಸ್ಥೆಗಳಿಗೂ ವಿಸ್ತರಿಸುವ ಕುರಿತ ಸಚಿವ ಸಂಪುಟದ ಉಪ ಸಮಿತಿಯ ಅಧ್ಯಕ್ಷರಾದ ಈಶ್ವರ ಖಂಡ್ರೆ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ಸ್ವತ್ತುಗಳನ್ನು ತೆರಿಗೆ ವ್ಯಾಪ್ತಿಗೆ ತರುವುದರಿಂದಾಗುವ ಸಾಧಕ ಬಾಧಕಗಳ ಬಗ್ಗೆ ಪರಾಮರ್ಶಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಅಂದರೆ ಕಂದಾಯ ಭೂಮಿಯಲ್ಲಿ ಭೂಪರಿವರ್ತನೆ ಆಗದೆ, ಬಡಾವಣೆಗೆ ಅನುಮೋದನೆ ಪಡೆಯದೆ ಮತ್ತು ಮನೆಗಳಿಗೆ ನಕ್ಷೆಯ ಮಂಜೂರಾತಿಯೂ ಇಲ್ಲದೆ ಅನಧಿಕೃತವಾಗಿ ನಿರ್ಮಾಣ ಮಾಡಲಾಗಿರುವ ಮನೆಗಳಿಗೆ ಮತ್ತು ನಿವೇಶನಗಳಿಗೆ ಬಿ ವಹಿಯಲ್ಲಿ ಖಾತೆ ನೀಡುತ್ತಿರುವುದನ್ನು ಯಾವುದಾದರೂ ಒಂದು ಹಂತದಲ್ಲಿ ನಿಲ್ಲಿಸಲೇಬೇಕಾಗುತ್ತದೆ. ಹೀಗಾಗಿ ಇದಕ್ಕೆ ಪರಿಹಾರ ಹುಡಕ…