Subscribe to Updates
Get the latest creative news from FooBar about art, design and business.
- ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
- ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ: ನಗನಗದು ದೋಚಿ ಪರಾರಿ
- ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
- ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
- ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
- ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
- ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
- ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Author: admin
ನಮ್ಮತುಮಕೂರು ಸ್ಪೆಷಲ್ ರಿಪೋರ್ಟ್: ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ದೃಷ್ಟಿಯಿಂದ ತುಮಕೂರು ನಗರದ ಜೀವ ಜಲವಾಗಿರುವ ಹೇಮಾವತಿ ನದಿ ನೀರು ಗುರುರಿನ ಹೇಮಾವತಿ ಜಲಾಶಯದಿಂದ ಬುಗುಡನಹಳ್ಳಿ ಜಲಸಂಗ್ರಹಕಾರಕ್ಕೆ ಹರಿದು ಬರುತ್ತಿದೆ. ಹೌದು ಮುಂದಿನ ಒಂದು ವಾರದಲ್ಲಿ 300ಎಂಸಿಎಫ್ ಟೀ ಸಾಮರ್ಥ್ಯದ ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ನೀರು ಬಂದು ಸೇರಲಿದೆ. ನಿತ್ಯ 45 ಎಂಸಿಎಫ್ ಟಿ ಯಷ್ಟು ನೀರು ಬಂದು ಸೇರುತ್ತಿದ್ದು ಸುಮಾರು 500 ಕ್ಯೂಸ್ ಪ್ರಮಾಣದಲ್ಲಿ ನೀರು ಹರಿವಿನ ಪ್ರಮಾಣದಲ್ಲಿದೆ. ಈ ಮೂಲಕ ಮುಂದಿನ ಐದು ತಿಂಗಳವರೆಗೆ ತುಮಕೂರು ನಗರದಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ. ಬುಗುಡನಹಳ್ಳಿ ಜಲಸಂಗ್ರಹಗಾರದಲ್ಲಿ ಪ್ರಸ್ತುತ 32 ಎಂಸಿಎಫ್ ಅಷ್ಟು ನೀರು ಸಂಗ್ರಹವಾಗಿದ್ದು ಕಳೆದ ವರ್ಷ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದಲ್ಲಿ ನೀರು ಹರಿದು ಬಂದಿತ್ತು ಅಲ್ಲದೆ ಈ ವರ್ಷದ ಜನವರಿ 23ರವರೆಗು ಕೂಡ ಗೊರೂರಿನ ಹೇಮಾವತಿ ಜಲಾಶಯದಿಂದ ನೀರು ಹರಿಸಲಾಗಿತ್ತು. ಹಾಸನ ಜಿಲ್ಲೆಯ ಗೋರೂರಿನಲ್ಲಿರುವ ಹೇಮಾವತಿ ಜಲಾಶಯದಿಂದ ತುಮಕೂರು ನಗರಕ್ಕೆ ಜೂನ್ 27ರಂದು…
ಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ. ಯುವಕರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಬರದಿದ್ದರೆ, ನಾನು ಮಂತ್ರಿಯಾಗದಿದ್ದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದೆ, ಆದರೆ ಈಗ ಸರ್ಕಾರವು ಬಂದಿದೆ. ಮಂತ್ರಿಯೂ ಆಗಿದ್ದೇನೆ, ಆದ್ದರಿಂದ ಬೇರೆಯವರಿಗೆ ನಮ್ಮ ಶಾಸಕರೊಂದಿಗೆ ಚರ್ಚಿಸಿ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು. ನಂತರ ವ್ಯಾಕ್ಸಿನ್ ಡಿಪೋದಲ್ಲಿ ನಡೆದ ಅಕ್ರಮದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ವ್ಯಾಕ್ಸಿನ್ ಡಿಪೋದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಆರಂಭಿಸಲು ಆರೋಗ್ಯ ಇಲಾಖೆಯಿಂದ ಯಾವುದೇ ರೀತಿಯ ಪರವಾನಿಗೆ ನೀಡಿರುವುದಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕೇವಲ ಹೆರಿಟೇಜ್ ಪಾರ್ಕ್ ಅಭಿವೃದ್ಧಿಪಡಿಸಲು ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ. ಆದರೆ ಅಲ್ಲಿ ಮರಗಳನ್ನು ಕಡಿದು ಅಕ್ರಮ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದ್ದು, ಈ ಕುರಿತು ತನಿಖೆ ಕೈಗೊಂಡು ಗೊಂದಲಕ್ಕೆ ಸ್ಪಷ್ಟೀಕರಣ ನೀಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದ ಅವರು, ಕಾಮಗಾರಿಗಳಲ್ಲಿ…
ಹಾವೇರಿ: ಮೊದಲು ಬಸ್ ಗಳಲ್ಲಿ ಪುರುಷ ಪ್ರಯಾಣಿಕರ ಸಂಖ್ಯೆ 60% ಮತ್ತು ಮಹಿಳಾ ಪ್ರಯಾಣಿಕರ ಸಂಖ್ಯೆ ಶೇ. 40 ರಷ್ಟಿತ್ತು. ಈಗ ಪುರುಷ ಪ್ರಯಾಣಿಕರ ಸಂಖ್ಯೆ ಕುಸಿದಿದೆ ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಶಕ್ತಿ ಯೋಜನೆ ಬಗ್ಗೆ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಶೇ.60 ರಷ್ಟು ಮಹಿಳೆಯರು ಈಗ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾರೆ. ಶೇ.40ರಷ್ಟು ಪುರುಷರು ಪ್ರಯಾಣಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಬಸ್ ಗಳ ಆದಾಯ ದಿನಕ್ಕೆ 55 ಲಕ್ಷ ಇತ್ತು. ಈಗ 70 ಲಕ್ಷಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಗದಗ: ಜನರ ಮನಸ್ಸನ್ನ ಕೆಡಿಸಿ ಗೊಂದಲಸೃಷ್ಠಿ ಮಾಡಿ ರಾಜಕೀಯ ಲಾಭ ಪಡೆಯುವ ಬಿಜೆಪಿ ಪ್ರಯತ್ನ ವಿಫಲವಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ ಹೇಳಿದ್ದಾರೆ. ಅಕ್ಕಿ ಹೊಂದಿಸಲು ಕೈಲಾಗದ ಸಿಎಂ ಎಂಬ ಬಿಜೆಪಿ ಟ್ವೀಟ್ ಗೆ ತಿರುಗೇಟು ನೀಡಿದ ಅವರು, ಅಕ್ಕಿ ಹೊಂದಿಸಲು ಆಗದಂತೆ ಪರಿಸ್ಥಿತಿ ನಿರ್ಮಾಣ ಮಾಡಿದ್ದೇ ಕೇಂದ್ರ ಸರ್ಕಾರ ಎಂದಿದ್ದಾರೆ. ಖಾಸಗಿಯವರಿಗೆ ಅಕ್ಕಿ ಮಾರಾಟ ಮಾಡಿ ಆದರೆ ರಾಜ್ಯ ಸರ್ಕಾರಕ್ಕೆ ಅಕ್ಕಿ ಕೊಡಬೇಡಿ. ಇಂತಹ ನಿಲುವಿಗೆ ಆ(ಬಿಜೆಪಿ) ಪಕ್ಷದ ನಾಯಕರಿಗೆ ನಾಚಿಕೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ನಗರದಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ರದ್ದು ಮಾಡಲಾಗಿದೆ. ಮುಂದಿನ ಕ್ರಮದ ಬಗ್ಗೆ ಹೈಕಮಾಂಡ್ ಜತೆ ಚರ್ಚಿಸಲು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಿಂದ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಬಿಜೆಪಿ ಸಭೆಯಲ್ಲಿ ಬಿಎಸ್ ಯಡಿಯೂರಪ್ಪ ಭಾಗವಹಿಸಲಿದ್ದು, ಬಳಿಕ ದೆಹಲಿಯಲ್ಲೇ ವಿಧಾನಸಭೆ, ವಿಧಾನಪರಿಷತ್ ವಿಪಕ್ಷ ನಾಯಕ, ಮುಖ್ಯ ಸಚೇತಕರ ಹೆಸರು ಘೋಷಣೆ ನಿರೀಕ್ಷೆ ಇದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಕಾರವಾರ: ನಡುರಸ್ತೆಯಲ್ಲಿ ದನದ ತಲೆಯೊಂದು ಬಿದ್ದಿರುವಂತಹ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹೆಗಡೆಕಟ್ಟಾ ಗ್ರಾಮದಲ್ಲಿ ಈ ಘಟನೆ ಕಂಡು ಬಂದಿದ್ದು, ಸದ್ಯ ಆತಂಕ ಸೃಷ್ಟಿಸಿದೆ. ಅಪರಿಚಿತರು ದನದ ತಲೆ ಕತ್ತರಿಸಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಇನೊಂದೆಡೆ ಪೊದೆಯಲ್ಲಿ ಎಸೆದಿದ್ದ ದನದ ತಲೆಯನ್ನ ಕಚ್ಚಿ ತಂದು ಶ್ವಾನಗಳು ರಸ್ತೆ ಬಿಸಾಡಿವೆ ಎನ್ನಲಾಗುತ್ತಿದೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು: ಜಿಲ್ಲೆಯಲ್ಲಿ ಆಡಳಿತಾತ್ಮಕ ಭೂಮಿ ವಸತಿ ಸಮಸ್ಯೆಗಳ ಕುರಿತು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯಿಂದ ಶನಿವಾರ ಬೆಳಿಗ್ಗೆ ಮುಂದಿನ ಹೋರಾಟಗಳ ರೂಪುರೇಷೆಗಳ ಬಗ್ಗೆ ತುಮಕೂರಿನ ಭೂಮಿ ವಸತಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಭೆಯು ಯಶಸ್ವಿಯಾಗಿ ನಡೆಯಿತು ತುಮಕೂರು ಜಿಲ್ಲೆಯ ಚಿ.ನಾ ಹಳ್ಳಿ,ತುಮಕೂರು, ಮಧುಗಿರಿ, ಕೊರಟಗೆರೆ ತಾಲ್ಲೂಕುಗಳ ಸುಮಾರು 300 ಜನರು ಸಭೆಯಲ್ಲಿ ಭಾಗವಹಿಸಿ ಸಮಿತಿಯಲ್ಲಿ ಸಮಸ್ಯೆಗಳನ್ನು ನೊಂದಾಯಿಸಿಕೊಂಡರು. ಇದೇ ವೇಳೆ ಸಮಿತಿಗೆ ಬಂದಿರುವ ಸಾರ್ವಜನಿಕರ ಸಮಸ್ಯೆಗಳನ್ನು ಪಟ್ಟಿ ಮಾಡಿ, ಜುಲೈ ತಿಂಗಳ 15ನೇ ತಾರೀಖಿನ ನಂತರ ಸುಮಾರು 500 ಜನರು ಒಂದು ದಿನದ ಸಾಂಕೇತಿಕ ಪ್ರತಿಭಟನೆ ಕೈಗೊಂಡು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿ ಸಮಸ್ಯೆಗಳನ್ನು ಮೂರು ತಿಂಗಳೊಳಗೆ ಬಗೆಹರಿಸಿ ಕೊಡಲು ಒತ್ತಾಯಿಸಲು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಇದೇ ವೇಳೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರನ್ನು ಭೇಟಿ ಮಾಡಿ ತುರ್ತು ಸಮಸ್ಯೆಗಳ ಬಗ್ಗೆ ವಿಚಾರ ಮಾಡಲಾಯಿತು. ಈ ವೇಳೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ತುಮಕೂರು…
ತುರುವೇಕೆರೆ: ತಾಲೂಕಿನ ಕೊಂಡಜ್ಜಿ ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಸಾಮಾನ್ಯ ಕ್ಷೇತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಬಿಸಿಎಂಎ ಮತ್ತು ಬಿ ಸಿ ಎಂ ಬಿ ಕ್ಷೇತ್ರಗಳಿಗೆ ಚುನಾವಣೆ ನಡೆಯಿತು. ಬಿಜೆಪಿ ಮುಖಂಡರಾದ ಕೊಂಡಜ್ಜಿ ವಿಶ್ವನಾಥ್ ರವರ ಬೆಂಬಲಿತ ಏಳು ಜನ ಅಭ್ಯರ್ಥಿಗಳಾದ ಲತಾ ಗಿರೀಶ್ ಕೆ ಸಿ.ಸುಮತಿ ಚಂದ್ರಶೇಖರ್, ಸಾವಿತ್ರಮ್ಮ ರಾಜಣ್ಣ ,ಪದ್ಮ ಗಂಗಾಧರ್, ತೀರ್ಥ ಶ್ರೀ ಪುರುಷೋತ್ತಮ್ , ಜಯಲಕ್ಷ್ಮಿ ಶಿವಣ್ಣ .ಜಗದಾಂಬ ರಮೇಶ್ ರವರುಗಳು ವಿಜಯಶಾಲಿಗಳಾಗಿದ್ದು, ಇವರ ಹೆಸರುಗಳು ಘೋಷಣೆಯಾದ ತಕ್ಷಣ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿ ಸಿಹಿ ಹಂಚಿದರು. ಅಧ್ಯಕ್ಷ ಗಾದಿಯೂ ಕೂಡ ವಿಶ್ವನಾಥ್ ರವರ ಬೆಂಬಲಿತರ ಪಾಲಿಗೆ ಬಂದಿದೆ. ವಿಜಯಶಾಲಿಗಳಾದ ನೂತನ ಸದಸ್ಯರುಗಳಿಗೆ ಮುಖಂಡರಾದ ಕೊಂಡಜ್ಜಿ ಕೆ.ಎಸ್.ವಿಶ್ವನಾಥ್ ಹಾರ ಹಾಕಿ ಶಾಲು ಹೊದಿಸಿ ಅಭಿನಂದಿಸಿದರು.ಈ ಸಂದರ್ಭದಲ್ಲಿ ದಯಾನಂದ್. ಕೆ.ಸಿ.ಗಿರೀಶ್, ಗುಡಿ ಗೌಡ ಲೋಕೇಶ್, ಪುರುಷೋತ್ತಮ್, ಸಿದ್ದಲಿಂಗೇಗೌಡ ಇತರರು ಇದ್ದರು. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಬೆಳಗಾವಿ: ಮಹಾನ್ ಪುರುಷರ ಇತಿಹಾಸ ತಿರುಚುವ ಪ್ರಯತ್ನ ನಡೆಯುತಿದೆ.ಇತಿಹಾಸ ಉಳಿಸಿ, ಬೆಳೆಸುವ ಸಲುವಾಗಿ ಮಹಾನ್ ಪುರುಷರ ಪ್ರತಿಮೆ ಅನಾವರಣ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ. ಇಲ್ಲಿನ ಆಂಜನೇಯ ನಗರದಲ್ಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಆವರಣದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು,ಮಹಾಪುರುಷರು ಇದ್ದ, ಹಾಗೆ ಇರಬೇಕು. ಯಾರೋ ಮಧ್ಯ ಬಂದು ಒಂದು ಪುಸ್ತಕದಲ್ಲಿ ತಿರುಚಿದರೆ ಹತ್ತು ವರ್ಷದ ನಂತರ ಅದು ನಿಜವಾಗುತ್ತದೆ. ಹೀಗಾಗಿ ರಾಯಣ್ಣ, ಅಂಬೇಡ್ಕರ್ ಅವರೆಲ್ಲಾ ಇದ್ದ ಹಾಗೇ ಇರಬೇಕೆಂಬ ಉದ್ದೇಶದಿಂದ ಅಲ್ಲಲ್ಲಿ ಮಹಾನ್ ಪುರುಷರ ಪ್ರತಿಮೆ ಅನಾವರಣ ಮಾಡಲಾಗುತ್ತಿದೆ. ಸರ್ಕಾರದಿಂದ ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡಲಾಗುವುದು ಎಂದು ಭರವಸೆ ನೀಡಿದರು. ದೇಶದ ಪ್ರಗತಿಗೆ ಕಾಂಗ್ರೆಸ್ ಸಾಕಷ್ಟು ಶ್ರಮಿಸಿದೆ: 2013ರಲ್ಲಿ ನಾನು ಮಂತ್ರಿಯಾಗಿದ್ದಾಗ ಈ ಕಾಲೇಜು ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದೇವು, ಈಗ ಇಷ್ಟು ದೊಡ್ಡದಾಗಿ ಬೆಳೆದಿರುವುದು ಬಹಳ ಸಂತೋಷ ತಂದಿದೆ. ಇದು ಇತಿಹಾಸ, ಮತ್ತೆ…
ಜುಲೈ 3ರಿಂದ 14ರವರೆಗೆ ವಿಧಾನಮಂಡಲದ ಅಧಿವೇಶನ ನಡೆಯಲಿದೆ.ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ವಿಧಾನಸೌಧ ಸುತ್ತಮುತ್ತಲಿನ 2 ಕಿ. ಮೀ ವ್ಯಾಪ್ತಿಯ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ನಿಷೇದಾಜ್ಞೆ ಹೊರಡಿಸಿದ್ದಾರೆ. ಜುಲೈ 3ರಿಂದ 14ರವರೆಗೆ ಬೆಳಿಗ್ಗೆ 6 ಗಂಟೆಯಿಂದ ತಡರಾತ್ರಿ 12ಗಂಟೆವರೆಗೂ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರಬಾರದು. ಪ್ರತಿಭಟನೆ, ಮೆರವಣಿಗೆ,ರ್ಯಾಲಿ,ಸಭೆ ನಡೆಸಬಾರದು. ಶಸ್ತ್ರಾಸ್ತ್ರ, ದೊಣ್ಣೆ, ಕತ್ತಿ, ಕಲ್ಲು, ಚಾಕು ಹಾಗೂ ಇತರ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಓಡಾಡಬಾರದು. ವ್ಯಕ್ತಿಗಳ ಪ್ರತಿಕೃತಿ ದಹನ, ಭಿತ್ತಿಪತ್ರ ಪ್ರದರ್ಶನ ಮಾಡಬಾರದು’ ಎಂದು ಆದೇಶದಲ್ಲಿ ತಿಳಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy