Subscribe to Updates
Get the latest creative news from FooBar about art, design and business.
- ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ
- ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ
- ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ
- ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!
- ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.
- ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ
- ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ
- ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು
Author: admin
ಡಾ.ವಿಷ್ಣುವರ್ಧನ್ ಅವರ ಸ್ಮಾರಕ ಮೈಸೂರಿನಲ್ಲಿ ನಿರ್ಮಾಣವಾಗಿದ್ದರೂ ಸಹ ಅಂತ್ಯಕ್ರಿಯೆಗೊಂಡಂತಹ ಅಭಿಮಾನ್ ಸ್ಟುಡಿಯೋದಲ್ಲಿ ಅವರ ಪುಣ್ಯಭೂಮಿಗೆ ಕನಿಷ್ಠ 20 ಗುಂಟೆಗಳ ಜಾಗ ನೀಡಬೇಕೆಂದು ಕೋರಿ ಡಾ.ವಿಷ್ಣು ಸೇನಾ ಸಮಿತಿಯು 18.09.2015 ರ ಕೇಸ್ .RD/308/LJB/2015 ರಲ್ಲಿ ಕೇಸಿನಲ್ಲಿ implead ಆಗಿ ತಮ್ಮ ವಾದವನ್ನು ಮಂಡಿಸಿತ್ತು. ಜೊತೆಗೆ ಹಿರಿಯ ನಟ ಬಾಲಕೃಷ್ಣ ಅವರಿಗೆ ನೀಡಿರುವಂತಹ ಜಮೀನು ಅರಣ್ಯ ಇಲಾಖೆಗೆ ಒಳಪಟ್ಟಿರುತ್ತದೆ ಮತ್ತು ಅವರ ಕಾಲ ನಂತರದಲ್ಲಿ ಅವರ ಮಕ್ಕಳು/ಮೊಮ್ಮಕ್ಕಳು ಹತ್ತು ಎಕರೆಯನ್ನು ಮಾರಾಟ ಮಾಡಿ ಸರ್ಕಾರಕ್ಕೆ ವಂಚಿಸಿರುತ್ತಾರೆ ಎಂಬ ವಿಷಯವನ್ನು ಪ್ರಸ್ತಾಪಿಸಿತ್ತು. ಈ ಕುರಿತು ವಾದ ವಿವಾದ ಆಲಿಸಿದ ನ್ಯಾಯಾಲಯವು ” ಈ ಸಂಬಂಧ ಅಭಿಮಾನಿ ಸಂಘವಾದ ಡಾ.ವಿಷ್ಣು ಸೇನಾ ಸಮಿತಿಗೆ ಹಕ್ಕಿರುವುದಿಲ್ಲವೆಂದೂ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ಅಥವಾ ಸರ್ಕಾರದ ಮೂಲಕ ಈ ವಿಷಯವನ್ನು ಇತ್ಯರ್ಥಪಡಿಸಿಕೊಳ್ಳಬೇಕೆಂದು ತಿಳಿಸಿತು. ನ್ಯಾಯಾಧೀಶರ ಅಭಿಪ್ರಾಯದಂತೆ, ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಮೂಲಕ ನಟ ದಿ.ಬಾಲಕೃಷ್ಣ ಅವರ ಕಲಾಸೇವೆಗೆ ಮೆಚ್ಚಿ ಸರ್ಕಾರವು ನೀಡಿದ 20 ಎಕರೆಯ ಭೂಮಿಯನ್ನು ಅವರ ಮಕ್ಕಳು ಖಾಸಗಿ…
ಬೆಂಗಳೂರು: “ಶಾಸಕ ಮುನಿರತ್ನ ಅವರು ನನ್ನ ಭೇಟಿಗೆ ಮೊದಲೇ ಅವಕಾಶ ಕೇಳಿದ್ದರೆ ಕೊಡುತ್ತಿದ್ದೆ. ಕಂಬಳ ಕರೆಪೂಜೆ (ಗುದ್ದಲಿಪೂಜೆ) ಕಾರ್ಯಕ್ರಮದ ಬಳಿ ಬಂದು ಸೀನ್ ಕ್ರಿಯೇಟ್ ಮಾಡುವ ಅವಶ್ಯಕತೆ ಇರಲಿಲ್ಲ. ಅವರನ್ನು ಕಾಲಿಗೆ ಬೀಳಿಸಿಕೊಳ್ಳಲು ನಾನೇನು ಮಠದ ಸ್ವಾಮೀಜಿಯೇ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸಲ್ಲಿ ಶಾಸಕ ಮುನಿರತ್ನ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು,“ಶಾಸಕ ಮುನಿರತ್ನ ಅವರು ರಾಜರಾಜೇಶ್ವರಿ ಕ್ಷೇತ್ರಕ್ಕೆ ಅನುದಾನದ ವಿಚಾರವಾಗಿ ಚರ್ಚೆ ನಡೆಸಿದರು. ʼದ್ವೇಷದ ರಾಜಕಾರಣ’ ಎಂದು ಹೇಳಿದರು. ಅದಕ್ಕೆ ನಾನು, “ಬಿಜೆಪಿ ಸರ್ಕಾರ ಇದ್ದ ವೇಳೆ ಕಾಂಗ್ರೆಸ್ ಶಾಸಕರ ಅನುದಾನಕ್ಕೆ ಏಕೆ ಕತ್ತರಿ ಹಾಕಿದ್ದರು? ಹೋಗಿ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರನ್ನೇ ಕೇಳಿನೋಡಿ. ಕನಕಪುರಕ್ಕೆ ಬಂದಿದ್ದ ವೈದ್ಯಕೀಯ ಕಾಲೇಜನ್ನು ಹೇಗೆ ತೆಗೆದರು? ಅಂತಾ. ಅದನ್ನು ಯಾವ ರಾಜಕಾರಣ ಎಂದು ಕರೆಯುತ್ತಾರೆ”ಎಂದು ಮುನಿರತ್ನ ಅವರಿಗೆ ಕೇಳಿದ್ದಾಗಿ ತಿಳಿಸಿದರು. “ಅದಕ್ಕೆ ಮುನಿರತ್ನ ಅವರು ನಾನು ಚಿಕ್ಕವನು, ಇದಕ್ಕೆಲ್ಲ ನನ್ನನ್ನ ಮುಂದೆ ಬಿಡಬೇಡಿ ಎಂದರು. ಇನ್ನೂ ಅನೇಕ…
ಬೆಂಗಳೂರು: ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರದ ವೈಫಲ್ಯದ ಕಾರಣದಿಂದ ಸಿಡಬ್ಲುಆರ್ ಸಿ ಮತ್ತೆ ರಾಜ್ಯದ ವಿರುದ್ದ ಆದೇಶ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿದ ಅವರು, ಸಿಡಬ್ಲುಆರ್ ತಮಿಳುನಾಡು ನಿಯಮಬಾಹಿರವಾಗಿ ನೀರು ಬಳಕೆ ಮಾಡಿಕೊಂಡಿರುವುದನ್ನು, ಕರ್ನಾಟಕದ ನೀರಿನ ಅಗತ್ಯತೆಯನ್ನು ಅರಿಯದೇ ಆದೇಶ ಮಾಡುತ್ತಿದೆ. ರಾಜ್ಯ ಸರ್ಕಾರವೂ ಸಿಡಬ್ಲುಎಂಎ ಹಾಗೂ ಸಿಡಬ್ಲುಆರ್ ಸಿ ಗೆ ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದಿನ ಸಿಡಬ್ಲುಆರ್ ಸಿಡಬ್ಲುಎಂಎ ಆದೇಶಗಳ ವಿರುದ್ದ ಮಧ್ಯಂತರ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದರು. ಆದರೆ, ಇದುವರೆಗೂ ಹಾಕಿಲ್ಲ. ಇದರ ಪರಿಣಾಮ ರಾಜ್ಯದ ವಿರುದ್ದ ಮತ್ತೊಂದು ಆದೇಶ ಬರುವಂತಾಗಿದೆ ಎಂದು ಹೇಳಿದ್ದಾರೆ.
ಹಸಿರು ಪಟಾಕಿಗಳನ್ನು ಪತ್ತೆಹಚ್ಚಲು ಕ್ಯೂ ಆರ್ ಕೋಡ್ ಬಂದಿದೆ. ನಿಮ್ಮ ಮೊಬೈಲ್ ನಿಂದ ಪಟಾಕಿ ಬಾಕ್ಸ್ ಮೇಲಿರುವ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ನೀವು ಖರೀದಿಸಿರುವುದು ಹಸಿರು ಪಟಾಕಿ ಹೌದ? ಅಲ್ಲವ ಎಂದು ಪರೀಕ್ಷಿಸಬಹುದು. ತಮಿಳುನಾಡು ಪಟಾಕಿ ತಯಾರಕರ ಸಂಘದ ಉಪಾಧ್ಯಕ್ಷ ಅಯ್ಯನ್ ಬೆಂಗಳೂರಿನಲ್ಲಿ ಮಾತನಾಡಿ ಶಿವಕಾಶಿಯಲ್ಲಿ ಪಟಾಕಿ ತಯಾರಕರು ಹಸಿರು ಪಟಾಕಿ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಹಸಿರು ಲೋಗೋ ಹೊರತುಪಡಿಸಿ, ಈ ವರ್ಷ ಕ್ಯೂಆರ್ ಕೋಡ್ ಪರಿಕಲ್ಪನೆ ಹೊರತಂದಿದ್ದೇವೆ ಎಂದರು.
ಮಾಧ್ಯಮಗಳು ಸಮಾಜ ಮತ್ತು ಸರ್ಕಾರದ ನಡುವೆ ಸೌಹಾರ್ದದ ಸೇತುವೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಬಿ. ಕೆ. ರವಿ ಅವರ ಸಂಪಾದಕತ್ವದ ‘ಮೀಡಿಯಾ ಆಫ್ ದಿ ಮಿಲೇನಿಯಂ’ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಮಾಧ್ಯಮ ಸಾಕ್ಷರತೆ ಕುರಿತಾದ ಈ ಹೊಸ ಪುಸ್ತಕ ಮಾಧ್ಯಮ ಕ್ಷೇತ್ರದ ಅರಿವನ್ನು ವಿಸ್ತರಿಸಲಿ. ವೃತ್ತಿಧರ್ಮ ಕಾಪಾಡಿಕೊಂಡರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆ ಎಂದು ತಿಳಿಸಿದರು.
ಬೆಂಗಳೂರು: ಅತ್ತಿಬೆಲೆ ಗಡಿಭಾಗದ ಪಟಾಕಿ ಅಂಗಡಿಯಲ್ಲಿ ನಡೆದ ಅಗ್ನಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಇದರಿಂದ ಪ್ರಕರಣದಲ್ಲಿ ಒಟ್ಟು ಸಾವಿನ ಸಂಖ್ಯೆ 15ಕ್ಕೇರಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿತ್ತಿದ್ದ ದಿನೇಶ್ ಎಂಬಾತ ಮೃತಪಟ್ಟಿದ್ದಾನೆ. ಅಗ್ನಿ ದುರಂತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರಿಂದ ಯುವಕ ಕೊನೆಯುಸಿರೆಳೆದಿದ್ದಾನೆ.
ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಆಕೆಯೆನ್ನು ಕೊಲೆ ಮಾಡಿದ್ದ ವ್ಯಕ್ತಿಗೆ ನ್ಯಾಯಾಲಯ ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. 2016ರಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಅಪರಾಧಿ ಮುತ್ತಪ್ಪ ಬಸಪ್ಪ ಸವದಿ 10,000 ರೂಪಾಯಿ ದಂಡ ಪಾವತಿಸುವಂತೆಯೂ ಸೂಚಿಸಿದೆ. ನ್ಯಾಯಾಧೀಶ ಮಂಜುನಾಥ್, ತೀರ್ಪಿನ ಪ್ರತಿಯನ್ನು ಬೆಂಗಳೂರು ನಗರ ಜಿಲ್ಲೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ಕಳುಹಿಸಿ, ಮೃತ ಮಹಾದೇವಿಯ ಮಕ್ಕಳಿಗೆ ಪರಿಹಾರ ನೀಡಲು ಸೂಚಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಅಂಕಪಟ್ಟಿಯಲ್ಲಿ ಅಭ್ಯರ್ಥಿ ಹೆಸರು, ತಂದೆ-ತಾಯಿ ಹೆಸರು, ಜನ್ಮ ದಿನಾಂಕ ಮತ್ತು ಇತರ ತಪ್ಪುಗಳಿದ್ದರೆ ಇನ್ಮುಂದೆ ಆನ್‌ಲೈನ್‌ನಲ್ಲಿಯೆ ತಿದ್ದುಪಡಿ ಮಾಡಿಕೊಳ್ಳಬಹುದು. ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು, ತಿದ್ದುಪಡಿಗಾಗಿ ವ್ಯಾಸಂಗ ಮಾಡಿದ ಶಾಲೆಗಳ ಮುಖ್ಯ ಶಿಕ್ಷಕರಿಗೆ ದಾಖಲೆಗಳನ್ನು ಸಲ್ಲಿಸಬೇಕು. ಮುಂದಿನ ಒಂದು ತಿಂಗಳ ಮಟ್ಟಿಗೆ ಮಾತ್ರ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಬಳಿಕ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.
ಬೆಂಗಳೂರು: ನಗರದಲ್ಲಿ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಮದನ್ (32) ಎಂಬಾತನನ್ನು ಕೊಲೆ ಮಾಡಲಾಗಿದೆ. ಬಾಣಸವಾಡಿ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದ್ದು, ಹಳೆ ದ್ವೇಷದ ಹಿನ್ನಲೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ರಾಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರಾಮಮೂರ್ತಿನಗರ ಪೊಲೀಸರಿಂದ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಅಟ್ಯಾಕ್ ನಲ್ಲಿ ಮದನ್ ಕೈ ಯನ್ನು ಆರೋಪಿಗಳು ಕತ್ತರಿಸಿದ್ರು. ಗಾಯಗೊಂಡ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದರು.
ನವದೆಹಲಿ: ಭಾರತದಾದ್ಯಂತ ಅನೇಕ ಮೊಬೈಲ್ ಬಳಕೆದಾರರ ಮೊಬೈಲ್ ಗಳಿಗೆ ಭಾರತ ಸರ್ಕಾರ ತುರ್ತು ಧ್ವನಿಯೊಂದಿಗೆ ಸಂದೇಶವೊಂದನ್ನು ಕಳುಹಿಸಿದೆ. ಈ ಸಂದೇಶದ ಏನು ಎನ್ನುವುದು ತಿಳಿಯದೇ ಸಾರ್ವಜನಿಕರು ಕ್ಷಣ ಕಾಲ ದಂಗಾದ ಘಟನೆ ಕೂಡ ನಡೆಯಿತು.ಈ ಸಂದೇಶ ಬರುವುದಕ್ಕೂ ಮೊದಲು ಹಲವರ ಮೊಬೈಲ್ ಗಳಿಗೆ ಈ ರೀತಿಯ ಸಂದೇಶವನ್ನ ಕಳುಹಿಸುವುದಾಗಿ ಮೊದಲೇ ಮೆಸೇಜ್ ಗಳನ್ನು ಕಳುಹಿಸಲಾಗಿತ್ತು. ಅದರಲ್ಲಿ “ ಪ್ರಮುಖ ಸೂಚನೆ”: ತುರ್ತು ಪರಿಸ್ಥಿತಿಯ ಕುರಿತು ನಿಮ್ಮ ಮೊಬೈಲ್ ನಲ್ಲಿ ಪರೀಕ್ಷಾ ಸಂದೇಶವನ್ನು ನೀವು ಸ್ವೀಕರಿಸಬಹುದು. ದಯವಿಟ್ಟು ಗಾಬರಿಯಾಗಬೇಡಿ, ಈ ಸಂದೇಶವು ನಿಜವಾದ ತುರ್ತುಪರಿಸ್ಥಿತಿಯನ್ನ ಸೂಚಿಸುವುದಿಲ್ಲ. ಈ ಸಂದೇಶವನ್ನು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ಯೋಜಿತ ಪ್ರಯೋಗ ಪ್ರಕ್ರಿಯೆಯಾಗಿ ಕಳುಹಿಸಲಾಗಿದೆ. ಎಂದು ತಿಳಿಸಲಾಗಿತ್ತು. ಆ ಬಳಿಕ ಬಂದ ಸಂದೇಶದಲ್ಲಿ ಇದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಲಾದ ಮಾದರಿ ಪರೀಕ್ಷಾ ಸಂದೇಶವಾಗಿದೆ. ನಿಮ್ಮ ಕಡೆಯಿಂದ ಯಾವುದೇ ಕ್ರಿಯೆಯ ಅಗತ್ಯವಿಲ್ಲದ…