Subscribe to Updates
Get the latest creative news from FooBar about art, design and business.
- ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
- ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ: ನಗನಗದು ದೋಚಿ ಪರಾರಿ
- ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
- ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
- ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
- ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
- ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
- ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Author: admin
ಕೊರಟಗೆರೆ: ಪಟ್ಟಣದ ತೇರಿನ ಬೀದಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಏಕಾದಶಿ ಹಬ್ಬದ ಮರುದಿನ ಬೆಳಗ್ಗೆ ಕೋಟೆ ವೆಂಕಟರಮಣ ಸ್ವಾಮಿಯ ರಥೋತ್ಸವ ಮಾಡುವುದು ಇತಿಹಾಸದಿಂದ ಇಲ್ಲಿ ನಡೆದುಕೊಂಡು ಬಂದಿರುವ ಪದ್ಧತಿ.. ಶ್ರೀ ವೆಂಕಟರಮಣ ಸ್ವಾಮಿಯ ತೇರಿನ ವಿಶೇಷವೇನೆಂದರೆ ಏಕಾದಶಿ ಹಬ್ಬದ ಮರುದಿನ ಬೆಳಗ್ಗೆ ತೇರನ್ನು ಇಳಿಯುವ ಸಂದರ್ಭದಲ್ಲಿ ಕರಿಯಣ್ಣ ಕೆಂಚಣ್ಣ ಎಂದು ಭೂತಾರಾಧನೆ ಮಾಡುವುದು ಇಲ್ಲಿನ ಕೆಲವು ಜನಾಂಗದ ವಾಡಿಕೆ… ಪಟ್ಟಣದಲ್ಲಿ ವಾಸಿಸುವ ಪ್ರತಿಯೊಬ್ಬರು ಜಾತಿಭೇದವಿಲ್ಲದೆ ಈ ರಥೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ ಶ್ರೀ ವೆಂಕಟರಮಣ ಸ್ವಾಮಿಯ ಕೃಪೆಗೆ ಪಾತ್ರರಾಗಿ ತೇರನ್ನ ಎಳೆದು ದೇವರಲ್ಲಿ ತಮ್ಮ ಇಷ್ಟಾರ್ಥಗಳನ್ನು ಬೇಡಿಕೊಳ್ಳುತ್ತಾರೆ… ಶ್ರೀ ವೆಂಕಟರಮಣ ಸ್ವಾಮಿಯ ಭಕ್ತಾದಿಗಳು ಮಾತನಾಡಿ ಮುಜರಾಯಿ ಇಲಾಖೆಗೆ ಸೇರಿರುವ ಈ ದೇವಸ್ಥಾನಗಳನ್ನು ಜೀರ್ಣೋದ್ವಾರ ಮಾಡುವುದರಲ್ಲಿ ನಮ್ಮ ರಾಜ್ಯ ಸರ್ಕಾರ ವಿಫಲವಾಗಿರುವುದು ನಮ್ಮ ದುರದೃಷ್ಟವೇ ಸರಿ ದೇವಸ್ಥಾನಗಳಲ್ಲಿ ಭಕ್ತಾದಿಗಳು ಹರಕೆ ಎಂದು ಹುಂಡಿಯಲ್ಲಿ ಹಾಕುವ ಹಣವನ್ನು ಮಾತ್ರ ತೆಗೆದುಕೊಂಡು ಹೋಗುತ್ತಾರೆ ಆದರೆ ದೇವಸ್ಥಾನಗಳ ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ ಇನ್ನಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು…
ಕೊರಟಗೆರೆ: ತಾಲೂಕಿನ ಕಸಬಾ ಹೋಬಳಿಯ ಬೋಡ ಬಂಡೆನಹಳ್ಳಿ ಗ್ರಾಮದಲ್ಲಿ ಏಕಾದಶಿ ಹಬ್ಬದ ಪ್ರಯುಕ್ತ ಇತಿಹಾಸ ಪ್ರಸಿದ್ದಿ ಇರುವಂತಹ ಬೆಟ್ಟದ ಮೇಲೆ ಗುಹೆಯೊಳಗೆ ನೆಲೆಸಿರುವ ತಿಮ್ಮಪ್ಪ ಹಾಗೂ ಆಂಜನೇಯನಿಗೆ ಗ್ರಾಮದ ಪ್ರತಿ ಮನೆಯಲ್ಲೂ ವಿಶೇಷ ನೈವೇದ್ಯವನ್ನ ತಯಾರು ಮಾಡಿ ಬುತ್ತಿ ಕಟ್ಟಿಕೊಂಡು ಬೆಟ್ಟಕ್ಕೆ ಹೋಗುವುದು ವಾಡಿಕೆ… ಗ್ರಾಮದ ಹಿಂದೂ ಸಾದರು ಜನಾಂಗದ ಪ್ರತಿ ಮನೆಯಲ್ಲಿ ವಿಶೇಷ ನೈವೇದ್ಯದ ಬುತ್ತಿಯನ್ನು ಹೊತ್ತುಕೊಂಡು ಊರಿನ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿ ಬೆಟ್ಟದ ಮೇಲೆ ನೆಲೆಸಿರುವ ತಿಮ್ಮಪ್ಪ ಹಾಗೂ ಆಂಜನೇಯನಿಗೆ ನೈವೇದ್ಯವನ್ನ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿ ರೈತರು ತಮ್ಮ ಭೂಮಿಯಲ್ಲಿ ಬಿತ್ತಿರುವ ಬೆಳೆಯು ಕೈ ಸೇರುವಂತೆ ವರುಣ ದೇವರಲ್ಲಿ ಪ್ರಾರ್ಥಿಸುತ್ತಾರೆ. ನಂತರ ಬೆಟ್ಟಕ್ಕೆ ಹೋಗಿರುವ ಭಕ್ತರು ಪ್ರತಿ ವರ್ಷದಂತೆ ಬಂಡೆಯ ಮೇಲೆ ನೈವೇದ್ಯವನ್ನ ಸೇವಿಸಿ ಹಿಂತಿರುಗುವುದು ಇಲ್ಲಿನ ಪದ್ಧತಿಯಾಗಿದೆ.ಇದೇ ಸಂದರ್ಭದಲ್ಲಿ ಗ್ರಾಮದ ಹಿರಿಯರು ಯುವಕರು ಮಹಿಳೆಯರು ಮಕ್ಕಳು ಪಾಲ್ಗೊಂಡಿದ್ದರು… ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ… ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ರಾಜ್ಯದಲ್ಲಿ ಕ್ರೈಸ್ತರು ಸೇರಿದಂತೆ ಎಲ್ಲಾ ಸಮುದಾಯಗಳ ಸಂವಿಧಾನಬದ್ಧ ಹಕ್ಕುಗಳನ್ನು ರಕ್ಷಿಸಿ ಅಗತ್ಯ ರಕ್ಷಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಯ ನೀಡಿದರು. ಗೃಹಕಚೇರಿ ಕೃಷ್ಣಾದಲ್ಲಿ ಇಂಡಿಯನ್ ಕ್ರಿಶ್ಚಿಯನ್ ಯೂನಿಟಿ ಫೋರಂ ವತಿಯಿಂದ ಕ್ರೈಸ್ತ ಪಾದ್ರಿಗಳು ಮತ್ತು ಕ್ರೈಸ್ತ ಸಂಘಟನೆಗಳ ನಾಯಕರು ಇಂದು ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಮತಾಂತರ ನಿಷೇಧ ಕಾಯ್ದೆಗೆ ತರಲಾಗಿದ್ದ ಸಂವಿಧಾನ ವಿರೋಧಿ ತಿದ್ದುಪಡಿಯನ್ನು ರದ್ದುಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಮತಾಂತರ ನಿಷೇಧ ಕಾಯ್ದೆಯಡಿ ಪಾದ್ರಿಗಳ ಮೇಲೆ ದಾಖಲಾಗಿರುವ ಸುಳ್ಳು ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು. ಹಾಗೂ ಮುಂದಿನ ಆಯವ್ಯಯದಲ್ಲಿ ಹೆಚ್ಚಿನ ಅನುದಾನವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಹಾಗೂ ಕ್ರೈಸ್ತರ 14 ಪಂಗಡಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಹಾಜರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ತಿಮ್ಮಕ್ಕ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದರು. ತಂದೆ ಚಿಕ್ಕರಂಗಯ್ಯ; ತಾಯಿ ವಿಜಯಮ್ಮ. ಇವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಲಭ್ಯವಾಗದೆ ಹತ್ತಿರದ ಒಂದು ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡಿದರು. ಇವರು ಚಿಕ್ಕಯ್ಯ ಎಂಬ ಒಬ್ಬ ದನಕಾಯುವವರನ್ನು ಮದುವೆಯಾಗಿದ್ದು, ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರು. ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ತಿಮ್ಮಕ್ಕ ಅವರು ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರು ಎಂದು ಹೇಳಲಾಗಿದೆ. ಕುದೂರಿನಿಂದ ಹುಲಿಕಲ್ ತನಕವಿರುವ ರಾಜ್ಯ ಹೆದ್ದಾರಿ ೯೪ರಲ್ಲಿ ತಿಮ್ಮಕ್ಕರವರು ಬೆಳಸಿದ ಆಲದ ಮರಗಳು. ತಿಮ್ಮಕ್ಕ ಅವರ ಹಳ್ಳಿಯ ಬಳಿ ಆಲದ ಮರಗಳು ಹೇರಳವಾಗಿದ್ದವು. ತಿಮ್ಮಕ್ಕ ಮತ್ತು ಅವರ ಪತಿ ಈ ಮರಗಳಿಂದ ಸಸಿಗಳನ್ನು ಕಸಿಮಾಡಲು ಆರಂಭಿಸಿದರು. ಮೊದಲ ವರ್ಷದಲ್ಲಿ ಹತ್ತು ಸಸಿಗಳನ್ನು ನೆರೆಯ ಕುದೂರು ಹಳ್ಳಿಯ ಬಳಿ ೪ ಕಿ.ಮೀ. ಉದ್ದಳತೆಯ ದೂರ ನೆಡಲಾಯಿತು. ಹೀಗೆಯೇ ಎರಡನೇ ವರ್ಷ ಹದಿನೈದು ಮತ್ತು ಮೂರನೇ ವರ್ಷ ೨೦ ಸಸಿಗಳನ್ನು ನೆಡಲಾಯಿತು.…
ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ ಚಿಂತಕರ ಚಾವಡಿಯ ಕೇಂದ್ರ ಮಂಡಳಿಯ ನಿಯೋಗವು ಇಂದು ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ ಸಂಧರ್ಭದಲ್ಲಿ ಮಾತನಾಡುತ್ತಿದ್ದರು. ಸರ್ಕಾರ ಘೋಷಿಸಿದ್ದಂತೆ ಐದು ಗ್ಯಾರಂಟಿಗಳನ್ನು ಈಗಲೇ ಅನುಷ್ಠಾನಕ್ಕೆ ತರುತ್ತಿದ್ದು, ಮುಂದಿನ ವರ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನಿಗದಿಪಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಚಾವಡಿಯು ಒಂದು ದಶಕದಿಂದ ಕರ್ನಾಟಕದ ಜನಪರ ಚಳವಳಿಗಳೊಂದಿಗೆ ಗುರುತಿಸಿಕೊಂಡಿದೆ. ಸಾಹಿತ್ಯ ಕ್ಷೇತ್ರ, ಕಲ್ಯಾಣ ಕರ್ನಾಟಕದ ಅಭಿವೃದ್ಧಿ, ವಿದ್ಯಾರ್ಥಿ, ಹಾಗೂ ದಲಿತ ಚಳವಳಿಗಳು ಹಾಗೂ ಜನಪರವಾದ ಇತರೆ ಹೋರಾಟಗಳೊಂದಿಗೆ ಗುರುತಿಸಿಕೊಂಡಿದೆ. ಮುಸ್ಲಿಂ ಸಮುದಾಯದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಚಾವಡಿ ಒತ್ತು ನೀಡಿದೆ. ತನ್ನ ಧರ್ಮದ ಕೋಮುವಾದವನ್ನು ವಿರೋಧಿಸುತ್ತಲೇ ಇನ್ನೊಂದರ ಕೋಮುವಾದವನ್ನು ವಿರೋಧಿಸುವ ಕೆಲಸ ಮಾಡುತ್ತಿದೆ ಎಂದು ಸಭೆಗೆ ತಿಳಿಸಲಾಯಿತು. ಕಳೆದ ಐದು ವರ್ಷಗಳಿಂದ ಸರ್ಕಾರದ ಯೋಜನೆಗಳಿಂದ ಸಮುದಾಯ ವಂಚಿತವಾಗಿದ್ದು, ಈ…
ನಾನು ಸಚಿವನಾದ ಬಳಿಕ ದೆಹಲಿಗೆ ಅಧಿಕೃತ ಭೇಟಿ ನೀಡಿದ್ದು, ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿದ್ದೇನೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ನೀರು ಶುದ್ದೀಕರಿಸಿ ಕೋಲಾರ ಭಾಗಕ್ಕೆ ನೀಡುತ್ತಿರುವುದನ್ನು ಪ್ರಶ್ನಿಸಿ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿದೆ. ಇದರಲ್ಲಿ ಟ್ರಿಬ್ಯೂನಲ್ ರಚನೆಗೆ ಆಗ್ರಹಿಸಿ ನ್ಯಾಯಾಲಯದ ಮೊರೆ ಹೋಗಿದ್ದು, ಜುಲೈ 5ರ ಒಳಗಾಗಿ ಇದನ್ನು ಸ್ಥಾಪಿಸಬೇಕು ಎಂದು ನ್ಯಾಯಾಲಯ ಆದೇಶ ನೀಡಿದೆ. ನಾನು ಈ ಹಿಂದೆ ನೀರಾವರಿ ಸಚಿವನಾಗಿ ನಂತರ ಕೊಳಚೆ ನೀರು ಶುದ್ದೀಕರಣ ಮಾಡಿ ಅದನ್ನು ಬೇರೆ ಪ್ರದೇಶಗಳಿಗೆ ನೀಡಲಾಗಿತ್ತು. ಇನ್ನು ವೃಷಭಾವತಿ ಕಲುಷಿತ ನೀರು ಪರಿಷ್ಕರಿಸಿ ಅದನ್ನು ಕೆರೆ ತುಂಬಿಸಲಾಗಿತ್ತು. ನಮ್ಮ ಈ ಕೆಲಸವನ್ನು ಕೇಂದ್ರ ಸರ್ಕಾರ ಕೂಡ ಪ್ರಶಂಸೆ ಮಾಡಿತ್ತು. ಆದರೆ ಈಗ ತಮಿಳುನಾಡು ತಕರಾರು ಎತ್ತಿದ್ದು, ಜುಲೈ 5ರ ಒಳಗಾಗಿ ನ್ಯಾಯಾಧೀಕರಣ ರಚನೆಗೆ ಆದೇಶ ನೀಡಿದೆ. ನಾವು ಈಗಾಗಲೇ 500mcft ಶೇಖರಣೆಯ ಮಾರ್ಕಂಡೇಯ ಯೋಜನೆ, ವರ್ತೂರು ಟ್ಯಾಂಕ್, ನರಸಾಪುರ ಯೋಜನೆ ಕೈಗೆತ್ತಿ ಕೊಂಡಿದ್ದೇವೆ. ಈ ವಿಚಾರವಾಗಿ…
ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡ ಬಿಜೆಪಿ ಅಧಿಕೃತ ವಿಪಕ್ಷವಾಗಿ ಕಾರ್ಯನಿರ್ವಹಣೆ ಮಾಡಬೇಕಿದ್ದು, ಇದಕ್ಕಾಗಿ ಭಾನುವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಮುಂದೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಬಿಜೆಪಿಗೆ ನೂತನ ಶಾಸಕಾಂಗ ಪಕ್ಷದ ನಾಯಲನ ಆಯ್ಕೆಯಾಗಬೇಕಿದ್ದು, ಇದಕ್ಕಾಗಿ ಭಾನುವಾರ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಭಾನುವಾರ ರಾಜ್ಯ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆಯ ಹಿನ್ನೆಲೆಯಲ್ಲಿ, ಎಲ್ಲಾ ಶಾಸಕರುಗಳು ಉಪಸ್ಥಿತರಿರಲಿದ್ದು, ಅಂದೇ ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆಯಾಗಲಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ನಡುವೆ ಇರುವ ಶ್ರೀರಂಗಪಟ್ಟಣದಲ್ಲಿ ಟೋಲ್ ಶುಲ್ಕ ಸಂಗ್ರಹಿಸದಂತೆ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಿ, ಇದಕ್ಕೆ ತಡೆ ನೀಡಬೇಕು. ಸರ್ವಿಸ್ ರಸ್ತೆಗಳು ಇನ್ನಿತರ ಕಾಮಗಾರಿಗಳು ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹ ಮಾಡದಂತೆ ತಡೆ ನೀಡಲು ಕೇಂದ್ರ ಸರ್ಕಾರದ ಗಮನ ಸೆಳೆಯಬೇಕು ಎಂದು ಶಾಸಕರಾದ ದಿನೇಶ್ ಗೂಳಿಗೌಡ, ರವಿಕುಮಾರ್ ಗಣಿಗ ಹಾಗೂ ರಮೇಶ್ ಬಂಡಿಸಿದ್ದೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಬೆಂಗಳೂರಿನಿಂದ ಅಥವಾ ಮೈಸೂರಿನಿಂದ ಹೊರಟಾಗ ಒಂದು ಬಾರಿ ಟೋಲ್ ಶುಲ್ಕವನ್ನು ಕಟ್ಟಿಸಿಕೊಳ್ಳಲಾಗುತ್ತಿದೆ. ಈಗ ಶ್ರೀರಂಗಪಟ್ಟಣದಲ್ಲಿಯೂ ಟೋಲ್ ಕಟ್ಟಿಸಿಕೊಳ್ಳುತ್ತಿರುವುದು ಸಾರ್ವಜನಿಕರಿಗೆ ದುಪ್ಪಟ್ಟು ಹೊರೆಯಾಗಲಿದೆ. ಅಲ್ಲದೆ, ಇನ್ನೂ ಕಾಮಗಾರಿಗಳೇ ಪೂರ್ಣಗೊಂಡಿಲ್ಲ. ಹೀಗಾಗಿ ಮುಖ್ಯಮಂತ್ರಿಗಳು ಈ ಸಂಬಂಧ ಕೇಂದ್ರ ಸರ್ಕಾರದ ಗಮನಕ್ಕೆ ತಂದು ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಮನವಿ ಮಾಡಿದರು. ಸರ್ವಿಸ್ ರಸ್ತೆ ಸೇರಿದಂತೆ ಇನ್ನಿತರ ಕಾಮಗಾರಿ ಮುಗಿಯುವವರೆಗೂ ಶ್ರೀರಂಗಪಟ್ಟಣ ಟೋಲ್ ನಲ್ಲಿ ಶುಲ್ಕವನ್ನು ಸಂಗ್ರಹ ಮಾಡದಂತೆ ಕ್ರಮ ವಹಿಸಬೇಕು ಎಂದು ಮನವಿ ಮಾಡಿದ್ದಾರೆ. ಮನವಿ ಪತ್ರದಲ್ಲೇನಿದೆ? ಬೆಂಗಳೂರು-ಮೈಸೂರು…
ರಾಜ್ಯದಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಕರ್ನಾಟಕ ಲೇಖಕಿಯರ ಸಂಘದ ಕಾರ್ಯ ಚಟುವಟಿಕೆಗಳಿಗೆ ಒಂದು ಕೋಟಿ ರೂಪಾಯಿ ವಿಶೇಷ ಅನುದಾನ ನೀಡಬೇಕು ಎಂದು ಸಂಘದ ನಿಯೋಗ ಮುಖ್ಯಮಂತ್ರಿಗಳಿಗೆ ಮನವಿ ಮಾಡಿತು. ಸಂಘದ ಅಧ್ಯಕ್ಷೆ ಹೆಚ್. ಎಲ್. ಪುಷ್ಪ ಅವರ ನೇತೃತ್ವದ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹಲವು ಮಹತ್ವದ ಸಂಗತಿಗಳನ್ನು ಚರ್ಚಿಸಿ ತಮ್ಮ ಬೇಡಿಕೆಗಳನ್ನು ಮಂಡಿಸಿತು. ವಿಶೇಷ ಅನುದಾನದ ಜತೆಗೆ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅರ್ಹ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು. ‘ನನ್ನ ಕವಿತೆ-ನನ್ನ ಹಾಡು” ಯೋಜನೆಯ ಹಣವನ್ನು ಬಿಡುಗಡೆ ಮಾಡಲು ಸೂಚಿಸಬೇಕು ಎನ್ನುವುದೂ ಸೇರಿ, ಹಲವು ಹಕ್ಕೊತ್ತಾಯಗಳನ್ನು ಮಂಡಿಸಿದರು. ನಿಯೋಗದಲ್ಲಿ ವಸುಂಧರಾ ಭೂಪತಿ, ಎಂ. ಎಸ್. ಆಶಾದೇವಿ, ಬಿ. ಟಿ. ಲಲಿತಾನಾಯಕ್ ಸೇರಿ ಹಲವು ಲೇಖಕಿಯರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾಂಗ್ರೆಸ್ ಪಕ್ಷ ನೀಡಿದ್ದ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ವಿಧಾನಸೌಧದ ಮುಂದೆ ಗಾಂಧಿ ಪ್ರತಿಮೆ ಬಳಿಯಲ್ಲಿ ಜುಲೈ 4ರಂದು ನಮ್ಮ ನೂರಾರು ಕಾರ್ಯಕರ್ತರು ಬೆಳಿಗ್ಗೆಯಿಂದ ಸಂಜೆವರೆಗೆ ಒಂದು ದಿನ ಧರಣಿ ಸತ್ಯಾಗ್ರಹ ಮಾಡಲಿದ್ದಾರೆ. ಬಿಜೆಪಿ ಚುನಾಯಿತ ಪ್ರತಿನಿಧಿಗಳು ಸದನದ ಒಳಗೂ ಹೋರಾಟ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ. ಎಸ್. ಯಡಿಯೂರಪ್ಪ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಮನೆಮನೆಗೆ ಹೋಗಿ ಸಿದ್ದರಾಮಯ್ಯ, ಶಿವಕುಮಾರ್ ಅವರು ಸಹಿ ಮಾಡಿ ಕೊಟ್ಟ ಗ್ಯಾರಂಟಿ ಕಾರ್ಡಿನ ಅಂಶಗಳನ್ನು ಚಾಚೂತಪ್ಪದೆ ಅನುಷ್ಠಾನಕ್ಕೆ ತರಲು ಅವರು ಆಗ್ರಹಿಸಿದರು. ಈ ಕುರಿತು ಪಕ್ಷದ ಮುಖಂಡರ ಸಭೆಯಲ್ಲಿ ಚರ್ಚಿಸಿದ್ದಾಗಿ ವಿವರಿಸಿದರು. ಅವರು ಭರವಸೆ ಕೊಟ್ಟಂತೆ 10 ಕೆಜಿ ಅಕ್ಕಿ ಕೊಡಬೇಕು; ಎಲ್ಲ ಪದವೀಧರ ನಿರುದ್ಯೋಗಿಗಳಿಗೆ 3 ಸಾವಿರ ಭತ್ಯೆ, ಡಿಪ್ಲೊಮಾ ಮಾಡಿ ನಿರುದ್ಯೋಗಿ ಆಗಿರುವವರಿಗೆ 1500…