Subscribe to Updates
Get the latest creative news from FooBar about art, design and business.
- ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ
- ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ
- ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ
- ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!
- ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.
- ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ
- ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ
- ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು
Author: admin
ದೇಶದಲ್ಲಿ ರಾಜಕೀಯ ವಾತಾವರಣ ಕಲುಷಿತವಾಗಿದ್ದು, ಮತ್ತೊಮ್ಮೆ ಸಂಪೂರ್ಣ ಕ್ರಾಂತಿಗೆ ದೇಶದ ನೆಲ ಹದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಭಾರತ ಯಾತ್ರಾ ಕೇಂದ್ರ, ಲೋಕನಾಯಕ ಜೆ. ಪಿ. ವಿಚಾರ ವೇದಿಕೆ ಹಮ್ಮಿಕೊಂಡಿದ್ದ ಜಯಪ್ರಕಾಶ್ ನಾರಾಯಣ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಬಿ. ಆರ್. ಪಾಟೀಲ ಅವರಿಗೆ ಜೆ. ಪಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ. ಎಲ್. ಶಂಕರ್ ಅಧ್ಯಕ್ಷತೆ ವಹಿಸಿದ್ದರು. ಚಿತ್ರ ನಿರ್ದೇಶಕ ಟಿ. ಎನ್. ಸೀತಾರಾಂ ಇತರರಿದ್ದರು.
ಬೆಂಗಳೂರು: ಪ್ರೇಯಸಿಯ ಖಾಸಗಿ ಫೋಟೊಗಳನ್ನು ಅಪ್‌ಲೋಡ್ ಮಾಡಲು ‘ಆ್ಯಪ್’ ಸೃಷ್ಟಿಸಿದ್ದ ಆರೋಪಿಯನ್ನು ಆಗ್ನೇಯ ವಿಭಾಗದ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಸಂಜಯ್ ಕುಮಾರ್(26) ಬಂಧಿತ ಆರೋಪಿ. ಆರೋಪಿಯಿಂದ ಪೆನ್ ಡ್ರೈವ್, ಲ್ಯಾಪ್ ಟಾಪ್, ಎರಡು ಮೊಬೈಲ್ ಜಪ್ತಿ ಮಾಡಿಕೊಳ್ಳಲಾಗಿದೆ. ಆರೋಪಿ ಜತೆಗೆ ಕೃತ್ಯದಲ್ಲಿ ಇನ್ನೂ 12 ಮಂದಿ ಭಾಗಿಯಾಗಿರುವ ಶಂಕೆಯಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿ ಹಾಗೂ ತಮಿಳುನಾಡಿನ ಯುವತಿ ಸಹಜೀವನ ನಡೆಸುತ್ತಿದ್ದರು ಎನ್ನಲಾಗಿದೆ.
ಬೆಂಗಳೂರು: ಮಣಿಪಾಲ ಆಸ್ಪತ್ರೆಗಳ ಸಮೂಹವು ‘ಹೃದಯದ ರಕ್ಷಕ 2. 0’ ಅಭಿಯಾನವನ್ನು ಹಮ್ಮಿಕೊಂಡಿದ್ದು, ಈ ಅಭಿಯಾನದಡಿ ನಗರದ ಆಯ್ದ 40 ಸಂಚಾರ ಪೊಲೀಸರಿಗೆ ಹೃದಯ ಮತ್ತು ಶ್ವಾಸಕೋಶ ಕಾಯಿಲೆಗೆ ಸಂಬಂಧಿಸಿದ ತರಬೇತಿ (ಸಿಪಿಆರ್) ನೀಡಲಾಯಿತು. ತರಬೇತಿಗೆ ಸಂಚಾರ ವಿಭಾಗದ ಜಂಟಿ ಕಮಿಷನರ್ ಎಂ. ಎನ್. ಅನುಚೇತ್ ಚಾಲನೆ ನೀಡಿ ಮಾತನಾಡಿದರು. ಹೃದಯಾಘಾತಕ್ಕೆ ಒಳಗಾದವರಿಗೆ ಸಿಪಿಆರ್ ವಿಧಾನದಿಂದ ಹೃದಯವನ್ನು ಪುನರುಜ್ಜೀವನಗೊಳಿಸಿ, ವ್ಯಕ್ತಿಯ ಜೀವ ಉಳಿಸಬಹುದಾಗಿದೆ ಎಂದರು.
ಕರ್ನಾಟಕ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ನಾಡದೇವಿ ಭುವನೇಶ್ವರಿ ಪ್ರತಿಮೆಯನ್ನು ಕನ್ನಡ ಭವನದ ಆವರಣದ ಬದಲು ವಿಧಾನಸೌಧ ಎದುರು ಸ್ಥಾಪಿಸಲು ಸರ್ಕಾರ ಆಲೋಚಿಸಿದೆ. ಪ್ರತಿಮೆ ನಿರ್ಮಾಣ ಕುರಿತು ಸರ್ಕಾರ ಘೋಷಣೆ ಮಾಡಿದ್ದ ಸಂದರ್ಭದಲ್ಲಿ ಕನ್ನಡ ಭವನದ ಆವರಣದಲ್ಲಿ ಸುಮಾರು 25 ಅಡಿ ಎತ್ತರದ ಪ್ರತಿಮೆ ಸ್ಥಾಪಿಸಲು ನಿರ್ಧರಿಸಲಾಗಿತ್ತು. ಆದರೆ ಪ್ರತಿಮೆಯನ್ನು ವಿಧಾನಸೌಧದ ಸಮೀಪ ಸ್ಥಾಪಿಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದು, ಸ್ಥಳ ಪರಿಶೀಲಿಸಲಾಗುತ್ತಿದೆ.
ಬೆಂಗಳೂರು: ತಹಸೀಲ್ದಾರ್ ಹಾಗೂ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಬೆಂಗಳೂರಿನ ಹಲವು ಕಡೆ ಪಟಾಕಿ ಗೋದಾಮೀನ ಮೇಲೆ ದಾಳಿ ನಡೆಸಿದ್ದು, ಸುಮಾರು 25 ಲಕ್ಷಕ್ಕೂ ಹೆಚ್ಚು ಮೌಲ್ಯದ ಅಕ್ರಮ ಪಟಾಕಿಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಅಕ್ರಮವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ಮೌಲ್ಯದ ಪಟಾಕಿಗಳನ್ನು ಜಪ್ತಿಮಾಡಿಕೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ವಿಜಯಪುರ ಚನ್ನರಾಯಪಟ್ಟಣದಲ್ಲಿ ಅಕ್ರಮ ಪಟಾಕಿಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ತನ್ನ ಪ್ರಿಯತಮೆಯ ಖಾಸಗಿ ಫೋಟೋವನ್ನು ತಾನೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಬಳಿಕ ಆಕೆಯ ಜೊತೆಯೇ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದ ಯುವಕನನ್ನು ಆಗ್ನೇಯ ವಿಭಾಗದ ಸೆನ್ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಅಂಜಯ್ (26) ಬಂಧಿತ ಆರೋಪಿ. ಈತ ಪ್ರಿಯತಮೆಯ ಫೋಟೊ ಹಾಕಿ ಅದರಿಂದ ಬರುವ ಅಶ್ಲೀಲ ಕಮೆಂಟ್ ನೋಡಿ ಖುಷಿ ಪಡುತ್ತಿದ್ದ. ಆರೋಪಿ ವಿಚಾರಣೆ ವೇಳೆ ಆತನ ಮತ್ತಷ್ಟು ಕಾಮಕೃತ್ಯ ಬಯಲಾಗಿದ್ದು, ಸದ್ಯ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಲಾಗಿದೆ.
ಬ್ಯಾಂಕ್ ಹಾಗೂ ಎಟಿಎಂ ಕೇಂದ್ರಗಳಿಗೆ ಹೋಗದೇ ಕೇವಲ ಆಧಾರ್ ಬಳಸಿಕೊಂಡು ಹಣ ಪಡೆಯಲು ದೇಶದಲ್ಲಿ ಎಇಪಿಎಸ್ (ಆಧಾರ್ ಆಧಾರಿತ ಹಣ ಪಾವತಿ ವ್ಯವಸ್ಥೆ) ಜಾರಿಗೆ ತರಲಾಗಿದ್ದು, ಈ ವ್ಯವಸ್ಥೆಯನ್ನು ದುರುಪಯೋಗ ಮಾಡಿಕೊಂಡಿರುವ ಸೈಬರ್ ವಂಚಕರು ಜನರ ಖಾತೆಗಳಲ್ಲಿರುವ ಹಣ ದೋಚುತ್ತಿದ್ದಾರೆ. ಉಪ ನೋಂದಣಾಧಿಕಾರಿ ಕಚೇರಿ ಸೇರಿದಂತೆ ಹಲವು ಕಡೆಯ ಕೆಲಸಗಳಿಗಾಗಿ ಆಧಾರ್ ಬಯೋಮೆಟ್ರಿಕ್ (ಬೆರಳಚ್ಚು) ಮಾಹಿತಿ ಹಂಚಿಕೊಳ್ಳುತ್ತಿರುವ ಜನರ ಖಾತೆಯಲ್ಲಿರುವ ಹಣ ಇವರ ಅರಿವಿಗೆ ಬಾರದಂತೆ ಕಡಿತವಾಗುತ್ತಿದೆ
ಶಾಹಿ ಈದ್ಗಾ ಮಸೀದಿಯ ವಿವಾದಿತ ಭೂಮಿಯನ್ನು ಹಿಂದೂಗಳ ಪಾಲಿಗೆ ಹಸ್ತಾಂತರಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಅಲಹಾಬಾದ್ ಹೈಕೋರ್ಟ್ ಬುಧವಾರ ತಿರಸ್ಕರಿಸಿದೆ. ವಿವಾದಿತ ನಿವೇಶನದ ಮಾಲೀಕತ್ವವನ್ನು ಹಿಂದೂಗಳಿಗೆ ನೀಡಬೇಕು ಎಂದು ಅರ್ಜಿದಾರರು ಆಗ್ರಹಿಸಿದ್ದಾರೆ. ಇಂದು ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನ್ಯಾಯಾಲಯದ ತೀರ್ಪು ಬಂದಿದೆ. ಮುಖ್ಯ ನ್ಯಾಯಮೂರ್ತಿ ಪ್ರಿತಿಂಕರ್ ದಿವಾಕರ್ ಮತ್ತು ನ್ಯಾಯಮೂರ್ತಿ ಅಶುತೋಷ್ ಶ್ರೀವಾಸ್ತವ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ಪ್ರಕಟಿಸಿದೆ. ಈ ಪ್ರಕರಣದಲ್ಲಿ ಎರಡೂ ಕಡೆಯವರು ತಮ್ಮ ತಮ್ಮ ವಾದ ಮಂಡಿಸಿ, ವಿಚಾರಣೆ ಪೂರ್ಣಗೊಂಡ ಬಳಿಕ ನ್ಯಾಯಾಲಯ ತನ್ನ ತೀರ್ಪನ್ನು ಸೆಪ್ಟೆಂಬರ್ 4ರಂದು ಕಾಯ್ದಿರಿಸಿತ್ತು. ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಕೀಲ ಮೆಹಕ್ ಮಹೇಶ್ವರಿ ಅವರು 2020ರಲ್ಲಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥವಾಗುವವರೆಗೆ ಹಿಂದೂಗಳು ವಿವಾದಿತ ಸ್ಥಳದಲ್ಲಿ ಪೂಜೆ ಸಲ್ಲಿಸಬೇಕು. PIL ಅದರ ಪ್ರಸ್ತುತ ರೂಪದಲ್ಲಿ ವಿವಾದಿತ ಆವರಣದ ವೈಜ್ಞಾನಿಕ ತನಿಖೆಯನ್ನು ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ (ASI) ಒತ್ತಾಯಿಸಿದೆ.…
ಬೆಂಗಳೂರು: ಜ್ಯುವೆಲರಿ ಅಂಗಡಿಯಲ್ಲಿ ಕೆಲಸಗಾರನಾಗಿ ಸೇರಿ ಕಳ್ಳತನ ಮಾಡಿದ್ದ 1 ಕೆ.ಜಿ 262 ಗ್ರಾಂ ಚಿನ್ನದ ಆಭರಣಗಳನ್ನು ಅಂತರ್ ರಾಜ್ಯ ಕಳ್ಳರ ಬಂಧನವಾಗಿದೆ. ಅಂಗಡಿಯಲ್ಲಿ ಸೇಲ್ಸ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಆಗಸ್ಟ್ 28 ದ ರಂದು ಆಂದ್ರದ ನೆಲ್ಲೂರಿನ ಮಹೇಶ್ ಮತ್ತು ಶಕ್ತಿ ಗೋಲ್ಡ್ ಇವರ ಅಂಗಡಿಯ ಮಾಲೀಕರಿಗೆ ಒಟ್ಟು 1 ಕೆಜಿ 2620 ತಂದ ಚಿನ್ನದ ಆಭರಣಗಳನ್ನು ಕೊಟ್ಟು ಬರಲು ಕಳುಹಿಸಿಕೊಟ್ಟಿರುತ್ತಾನೆ. ಸೆಲ್ಸ್ ಮ್ಯಾನ್ ಆಗಿ ನೆಲ್ಲೂರಿಗೆ ಹೋಗಿದ್ದಲ್ಲದೇ ಮೊಬೈಲ್ ಮೂಲಕ ಅಂಗಡಿ ಮಾಲೀಕರಿಗೆ ನೆಲ್ಲೂರಿನಲ್ಲಿ ತನ್ನನ್ನು ಯಾರೋ ಅಪರಿಚಿತರು ಅಡ್ಡಗಟ್ಟಿ ತನ್ನ ಕೈಯಲ್ಲಿದ್ದ ಚಿನ್ನದಿಂದ ಕೂಡಿದ್ದ ಬ್ಯಾಗ್ ನ್ನು ದೋಚಿರುತ್ತಾರೆ ಎಂದಿರುತ್ತಾನೆ. ಅಲ್ಲಿ ದೂರನ್ನು ದಾಖಲಿಸಿದ್ದಾನೆ. ಈ ಸಂಬಂಧ ಅಂಗಡಿ ಮಾಲೀಕರಿಂದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ. ತನಿಖೆ ಕೈಗೊಂಡ ಪೊಲೀಸ್ ಅಧಿಕಾರಿಗಳು ಸುದೀರ್ಘವಾಗಿ ವಿಚಾರಣೆ ಕೈಗೊಂಡು, ಸೇಲ್ಸ್‌ಮ್ಯಾನ್ ನಿಂದ ನಿಜವಾಗಿ ನಡೆದ ಘಟನೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿರುತ್ತಾರೆ. ನಂತರ ಸೆಲ್ಸ್‌ಮ್ಯಾನ್ ಆರೋಪಿಯನ್ನು 10…
ಬೆಂಗಳೂರು: ಕಾಡು/ ಕಾಡಂಚಿನ ಅರಣ್ಯಾಧಾರಿತ ಆದಿವಾಸಿ ಬುಡಕಟ್ಟುಗಳ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕೊಡಗು, ಚಾಮರಾಜನಗರ, ಮೈಸೂರು, ಹಾಸನ, ಚಿಕ್ಕಮಗಳೂರು, ದಕ್ಶಿಣ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿ.ಪಂ ಸಿಇಒ ಹಾಗೂ ಬುಡಕಟ್ಟು ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕ ರಾಜ್ಯದ, ಕಾಡು, ಕಾಡಂಚಿನ ಅರಣ್ಯಾಧಾರಿತ ಆದಿವಾಸಿ ಬುಡಕಟ್ಟುಗಳ ಒಕ್ಕೂಟದ ನಿಯೋಗವು ಇಂದು ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮಾತನಾಡಿದರು. ರಾಜ್ಯದಲ್ಲಿ 51 ಆದಿವಾಸಿ ಜನಾಂಗಗಳಿದ್ದು, ಸೋಲಿಗ , ಜೇನುಕುರುಬ ಸೇರಿದಂತೆ 12 ಬುಡಕಟ್ಟು ಜನಾಂಗಗಳು ಸೌಲಭ್ಯ ವಂಚಿತವಾಗಿವೆ. ಅವರಲ್ಲಿ ಹಲವರಿಗೆ ಯೋಜನೆಗಳ ಸೌಲಭ್ಯ ಪಡೆಯಲು ಅಗತ್ಯವಿರುವ ದಾಖಲೆಗಳು ಕೂಡ ಇಲ್ಲದ ಪರಿಸ್ಥಿತಿ ಇದೆ. ಶಿಬಿರಗಳನ್ನು ಆಯೋಜಿಸಿ ಆಧಾರ್ ಮುಂತಾದ ದಾಖಲೆಗಳನ್ನು ನೀಡುವ ವ್ಯವಸ್ಥೆ ಕಲ್ಪಿಸಬೇಕು ಎಂದು ನಿಯೋಗವು ಮನವಿ ಮಾಡಿತು. ಎಎನ್ಎ ಮ್, ನರ್ಸಿಂಗ್, ಮುಂತಾದ ಶಿಕ್ಷಣ ಪಡೆದಿರುವ ಬುಡಕಟ್ಟು ಜನಾಂಗಗಳ ಮೊದಲ ಪೀಳಿಗೆಗೆ ಆರೋಗ್ಯ ಇಲಾಖೆಯಲ್ಲಿ ಕೆಲಸ ನೀಡುವ ಬಗ್ಗೆ ಹಾಗೂ ಪ್ರಸ್ತುತ ಅರಣ್ಯ ಇಲಾಖೆಯ ಅರಣ್ಯ…