Author: admin

ಜ್ಞಾನ ಭಾರತಿ ಆವರಣದಲ್ಲಿ ನಡೆದಿದ್ದ ಅಪಘಾತದಲ್ಲಿ ಮೃತಪಟ್ಟ ಸ್ನಾತಕೋತ್ತರ ವಿದ್ಯಾರ್ಥಿನಿ ಕುಟುಂಬಕ್ಕೆ  4 ಲಕ್ಷ ಪರಿಹಾರ ನೀಡಲು ಬೆಂಗಳೂರು ವಿಶ್ವವಿದ್ಯಾಲಯ ನಿರ್ಧರಿಸಿದೆ. ವಿದ್ಯಾರ್ಥಿನಿ ಶಿಲ್ಪಾಶ್ರೀ (22) ಕಳೆದ ಅಕ್ಟೋಬರ್‌ ನಲ್ಲಿ ತರಗತಿಗೆ ಹೋಗುವಾಗ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಗಾಯಗೊಂಡು, ನಂತರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ವಿದ್ಯಾರ್ಥಿನಿಯ ವೈದ್ಯಕೀಯ ವೆಚ್ಚವನ್ನು ಭರಿಸಿದ್ದ ವಿಶ್ವವಿದ್ಯಾನಿಲಯ, ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು. ಜೂನ್ 12ರಂದು ನಡೆದ ಸಿಂಡಿಕೇಟ್ ಸಭೆಯಲ್ಲಿ ಶಿಲ್ಪಾಶ್ರೀ ಕುಟುಂಬಕ್ಕೆ ಪರಿಹಾರ ನೀಡಲು ಒಪ್ಪಿಗೆ ಪಡೆದಿದೆ. ಘಟನೆಯ ನಂತರ ವಿಶ್ವವಿದ್ಯಾನಿಲಯ 2023-24ರ ಬಜೆಟ್‌ನಲ್ಲಿ ವಿದ್ಯಾರ್ಥಿಗಳ ಅಪಘಾತ ವೆಚ್ಚಕ್ಕಾಗಿ 7 5 ಲಕ್ಷ ಮೀಸಲಿಟ್ಟಿದೆ. ಅಪಘಾತದಂತಹ ಪ್ರಕರಣಗಳು ನಡೆದರೆ ತಕ್ಷಣದ ಚಿಕಿತ್ಸೆಗೆ ಮೀಸಲಿಟ್ಟಿರುವ ಹಣ ಬಳಸಲು ಅನುಮತಿ ನೀಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೊಳೆಗೇರಿಗಳಲ್ಲಿ ವಾಸಿಸುವ ಕುಟುಂಬಗಳಿಗೆ ಶಾಶ್ವತ ವಸತಿ ಕಲ್ಪಿಸಲು ಯೋಜನೆ ರೂಪಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಇಂದಿಲ್ಲಿ ಭರವಸೆ ನೀಡಿದರು. ಕೊಳೆಗೇರಿ ಅಭಿವೃದ್ಧಿ ಮಂಡಳಿಯಲ್ಲಿ ಶುಕ್ರವಾರ ಕೊಳೆಗೇರಿ ವಾಸಿಗಳು, ಕೊಳೆಗೇರಿ ನಿವಾಸಿಗಳ ಪರವಾದ ಸಂಘ- ಸಂಸ್ಥೆಗಳಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು. ಕೊಳೆಗೇರಿ ಪ್ರದೇಶಗಳಲ್ಲಿ ಹಲವು ಜನರಿಗೆ ಸೂರಿಲ್ಲ. ಹತ್ತಾರು ವರ್ಷಗಳಿಂದ ಗುಡಿಸಲು ಹಾಗೂ ಕಚ್ಛಾ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಕೆರೆಯಂಗಳ, ಮಳೆ ನೀರು ಹರಿಯುವ ಕಾಲುವೆ, ವಿದ್ಯುತ್ ಮಾರ್ಗ, ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಮನೆ ಕಟ್ಟಿಕೊಡಲು ಸಾಧ್ಯವಾಗಿಲ್ಲ. ಹಾಗಾಗಿ, ಅವರಿಗೆಲ್ಲ ಪ್ರತ್ಯೇಕ ಸ್ಥಳದಲ್ಲಿ ಶಾಶ್ವತ ನೆಲೆ ಕಲ್ಪಿಸಲಾಗುವುದು ಎಂದರು. ಕೆ. ಆರ್. ಪುರ ಹೋಬಳಿ ಬಿದರಹಳ್ಳಿಯಲ್ಲಿ ಎಂಟು ಎಕರೆ ಗುರುತಿಸಲಾಗಿದೆ. ಕಂದಾಯ ಸಚಿವರ ಜತೆ ಚರ್ಚಿಸಿ, ಭೂಮಿ ಪಡೆದು ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ ವಸತಿ ಸಮುಚ್ಚಯ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು. ಕೊಳೆಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ವೆಂಕಟೇಶ್, ಪ್ರಧಾನ ಎಂಜಿನಿಯರ್ ಬಾಲರಾಜು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ರಾಜ್ಯದಲ್ಲಿ ನಕಲಿ ನೋಟುಗಳ ಹಾವಳಿ ಮತ್ತೆ ಆರಂಭವಾಗಿದೆ. ಕಳೆದ ಎರಡು ದಿನಗಳ ಅಂತರದಲ್ಲಿ 100 ರೂಪಾಯಿ ಬೆಲೆಯ ಒಟ್ಟು 30 ನೋಟುಗಳು ಪತ್ತೆಯಾಗಿವೆ. ಈ ಬಗ್ಗೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ನಾಲ್ಕು ಎಫ್‌ಐಆರ್ ದಾಖಲಾಗಿದೆ. ಆರ್ ಬಿಐ ಬ್ಯಾಂಕ್ ಬ್ಯಾಂಕ್ ಆಫ್ ಬರೋಡಾ, ಕೆನರಾ, ಯುಬಿಐ ಬ್ಯಾಂಕ್ ಮ್ಯಾನೇಜರ್ ಗಳು ಪ್ರತ್ಯೇಕವಾಗಿ ದೂರು ನೀಡಿದ್ದಾರೆ. ಉಡುಪಿ, ಮಣಿಪಾಲ, ಹುಬ್ಬಳ್ಳಿ ಹಾಗೂ ಮಲ್ಲೇಶ್ವರ ಬ್ರಾಂಚ್ ನ ಬ್ಯಾಂಕ್ ಗಳಲ್ಲಿ ನಕಲಿ ನೋಟು ಪತ್ತೆಯಾಗಿದ್ದವು. ಆರ್ ಬಿ ಐ ಗೆ ರಿಮೀಟ್ ಮಾಡುವ ಸಂದರ್ಭದಲ್ಲಿ ನಕಲಿ ನೋಟು ಪತ್ತೆಯಾಗಿವೆ. ಪ್ರಕರಣ ದಾಖಲಿಸಿಕೊಂಡಿರುವ ಹಲಸೂರು ಗೇಟ್ ಪೊಲೀಸರು ನಕಲಿ ನೋಟಿನ ಜಾಲದ ಹಿಂದೆ ಬಿದ್ದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ ನಗರದ ಕಣಬರ್ಗಿ ರಸ್ತೆಯ ಸಂಕಲ್ಪ ಗಾರ್ಡನ್ ನಲ್ಲಿ ರಾಮತೀರ್ಥ ನಗರ ರಹವಾಸಿಗಳ ಸಂಘ (ರಿ) ಹಾಗೂ ಇನ್ನುಳಿದ ಸಂಘಟನೆಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಶುಕ್ರವಾರ ಸಂಜೆ ಸನ್ಮಾನಿಸಿದರು. ನಗರ ಸೇವಕ ಹನಮಂತ ಕೊಂಗಾಲಿ, ಮಾಜಿ ಮಹಾಪೌರ ಎನ್ ಬಿ ನಿರ್ವಾಣಿ, ಕಾರ್ಪೋರೇಟರ್ ಹನುಮಂತ ದುಗ್ಗಾನಿ, ಮಾಜಿ ಕಾರ್ಪೋರೇಟರ್ ಪುಷ್ಪ ಪರ್ವತರಾವ್, ವಿ ಎ ಗಣಾಚಾರಿ, ವೈ ಪಿ ಗಡಿನಾಯ್ಕರ್, ಎಂ ಎ ಕೂರಿಶೆಟ್ಟಿ, ಎಮ್ ಟಿ ಪಾಟೀಲ ಮುಂತಾದವರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನಮ್ಮತುಮಕೂರು/ವಿಶೇಷ ವರದಿ: ಮಾರುಕಟ್ಟೆಯಲ್ಲಿ ಕೊಬ್ಬರಿ ಬೆಲೆ ಗಣನೀಯ ಪ್ರಮಾಣದಲ್ಲಿ ಕುಸಿದು ಹೋಗಿದ್ದು ಇದರಿಂದ ನಲುಗಿ ಹೋಗಿರುವ ಬೆಳೆಗಾರರಿಗೆ ಇದೀಗ ಬೆಂಬಲ ಬೆಲೆ ಖರೀದಿ ಮಾಡುತ್ತಿರುವ ಸಂದರ್ಭದಲ್ಲಿಯೂ ಗುಣಮಟ್ಟ ಪರೀಕ್ಷೆ ಎಂಬ ನೆಪದಲ್ಲಿ ಕೊಬ್ಬರಿ ದಾಸ್ತಾನನ್ನು ತಿರಸ್ಕಾರ ಮಾಡುತ್ತಿರುವುದು ಬೆಳೆಗಾರರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಹೌದು..! ಜಿಲ್ಲೆಯ ತಿಪಟೂರು ಹಾಗೂ ತುರುವೇಕೆರೆ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನಫೇಡ್ ನಲ್ಲಿ ಕೊಬ್ಬರಿ ಖರೀದಿ ವೇಳೆ ಗುಣಮಟ್ಟದಿಂದ ಕೂಡಿಲ್ಲ ಎಂದು ಸಾಕಷ್ಟು ಕೊಬ್ಬರಿಯನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಇದರಿಂದ ಕಂಗಾಲಾಗಿರುವ ಬೆಳೆಗಾರರು ಮಾರುಕಟ್ಟೆಯಲ್ಲಿ ಹೊರಗಡೆ  ಕನಿಷ್ಠ ಬೆಲೆಗೆ ಮಾರಾಟ ಮಾಡುತ್ತಿರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನ್ಯಾಫೆಡ್ ಖರೀದಿಸುತ್ತಿರುವ ಅದರ ಮಾನದಂಡ ಪ್ರಕಾರ ಕೊಬ್ಬರಿಯು ಸ್ಪಷ್ಟವಾದ ಗಾತ್ರದಲ್ಲಿರಬೇಕು ಹೀಗಿದ್ದರೆ ಮಾತ್ರ ಅದನ್ನು ಖರೀದಿಸಲಾಗುವುದು ಅಲ್ಲದೆ ಉಷ್ಣಾಂಶ (ಮಾಯಿಶ್ಚರೈಸರ್) ಇರುವಂತಹ ಕೊಬ್ಬರಿಯನ್ನು ಖರೀದಿಸಲು ನೆಫೆಡ್ ಹಿಂದೆಟು ಹಾಕುತ್ತಿದೆ. ಇದು ಕೊಬ್ಬರಿ ಬೆಳೆಗಾರರಿಗೆ ಸಾಕಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ. ಕೆಡಿಪಿ ಸಭೆಯಲ್ಲಿ ಪ್ರಾತ್ಯಕ್ಷಿತೆ ನೀಡಿರುವ ಕೊಬ್ಬರಿ ಖರೀದಿಯಲ್ಲಿ ಆಗುತ್ತಿರುವ ಅನ್ಯಾಯ ವಿವರಿಸಿದ ಶಾಸಕ ಎಂ…

Read More

ತುಮಕೂರು: ಮುಕ್ತ—ಸಂವಾದ ವೇದಿಕೆ ಕರ್ನಾಟಕ ಇದರ ಎರಡನೇ ವರ್ಷದ ವಾರ್ಷಿಕೋತ್ಸವ ಹಾಗೂ ಬುದ್ಧ ಬೆಳದಿಂಗಳು ಕಾರ್ಯಕ್ರಮವನ್ನು ಜುಲೈ 2ರಂದು  ತುಮಕೂರಿನ ಗೆದ್ದಲಹಳ್ಳಿಯ ಧಮ್ಮ ಲೋಕ ಬುದ್ಧ ವಿಹಾರದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಚಾಮರಾಜನಗರ ಉದ್ದೇಶಿತ ನಳಂದ ಬೌದ್ಧ ವಿಶ್ವವಿದ್ಯಾಲಯದ ಪೂಜ್ಯ ಬೋಧಿದತ್ತ ಥೇರ ಬಂತೇಜಿ ಧಮ್ಮ ಜ್ಯೋತಿ ಮತ್ತು ಧಮ್ಮನುಡಿಗಳನ್ನಾಡಲಿದ್ದಾರೆ. ತುಮಕೂರು ಧಮ್ಮಲೋಕ ಬುದ್ಧವಿಹಾರದ ಅಧ್ಯಕ್ಷರಾದ ಹನುವಂತರಾಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಧ್ಯಾಪಕ ಸುಭಾಷ್ ಚಂದ್ರ ಅವರು ಸ್ವಾಗತಿಸಲಿದ್ದಾರೆ. ಮಂಡ್ಯ ಮುಕ್ತ ಸಂವಾದ ವೇದಿಕೆ ಆಯೋಜಕರಾದ ಚೌಡೇಶ್ ಅವರು ಸಂವಿಧಾನದ ಪೀಠಿಕೆ ಓದಲಿದ್ದಾರೆ. ಮುಖ್ಯ ಅತಿಥಿಗಳಾಗಿ ತುಮಕೂರು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾ ಕುಮಾರಿ, ತುಮಕೂರು ಮಹಾನಗರ ಪಾಲಿಕೆಯ ಮಹಾ ಪೌರರಾದ ಪ್ರಭಾವತಿ ಸುದೇಶ್, ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಕೆ.ಸಿ.ನರಸಿಂಹಮೂರ್ತಿ, ತುಮಕೂರು ಮುಕ್ತ ಸಂವಾದ ವೇದಿಕೆಯ ಅಧ್ಯಕ್ಷರಾದ ಎಸ್.ಆರ್.ಚಿಕ್ಕಣ್ಣ, ಬಾನುಲಿ ಪತ್ರಿಕೆ ಸಂಪಾದಕರು ಮತ್ತು ಸಾಮಾಜಿಕ ಹೋರಾಟಗಾರರಾದ ಭಾನುಪ್ರಕಾಶ್ ಭಾಗವಹಿಸಲಿದ್ದಾರೆ. ಉಪನ್ಯಾಸ ಕಾರ್ಯಕ್ರಮ: ಶಿಕ್ಷಕರಾದ ಜಿತೇಂದ್ರ ತಳವಾರ್ ಡಾ.ಬಿ,ಆರ್,ಅಂಬೇಡ್ಕರ್ ಅವರ…

Read More

ಇಂಪಾಲ: ಹಿಂಸಾಪೀಡಿತ ಮಣಿಪುರದಲ್ಲಿ ಗಲಭೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಬಿರೇನ್‌ ಸಿಂಗ್‌ ಅವರು ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂಬ ವರದಿಗಳು ಪ್ರಕಟವಾಗಿತ್ತು. ಈ ಕುರಿತಾಗಿ ಸ್ಪಷ್ಟನೆ ನೀಡಿರುವ ಮಣಿಪುರ ಸರ್ಕಾರದ ವಕ್ತಾರರು ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ರಾಜೀನಾಮೆ ಸಲ್ಲಿಸಲು ಬಿರೇನ್ ಸಿಂಗ್ ಸಿಂಗ್ ಅವರು ರಾಜ್ಯಪಾಲರನ್ನು ಭೇಟಿಯಾಗಲು ತೆರಳಿದ್ದರು. ಆ ಸಮಯದಲ್ಲಿ ಅವರ ರಾಜೀನಾಮೆ ಪತ್ರವನ್ನು ಬೆಂಬಲಿಗರು ಹರಿದುಹಾಕಿದ್ದಾರೆ.ಮುಖ್ಯಮಂತ್ರಿಯವರು  ಅಧಿಕಾರದಿಂದ ಕೆಳಗಿಳಿಯಬಾರದು ಎಂದು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿರೇನ್‌ ಸಿಂಗ್‌ ರಾಜೀನಾಮೆ ಸಲ್ಲಿಸದೇ ಇರಲು ನಿರ್ಧಾರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಲೀಮಾಖೋಂಗ್ ಪ್ರದೇಶದಲ್ಲಿ ನಡೆದ ಗುಂಡಿನ ದಾಳಿಯ ಹಿನ್ನಲೆಯಲ್ಲಿ ನಿನ್ನೆ ಸಂಜೆ ಮೈತೆಯ್ ಬುಡಕಟ್ಟು ಸಮುದಾಯಕ್ಕೆಸೇರಿದ ವ್ಯಕ್ತಿಯ ಶವವನ್ನು ಇಂಫಾಲ್‌ಗೆ ಕರೆತರಲಾಯಿತು.ಈ ವೇಳೆ ಮೃತದೇಹಕ್ಕೆ ಗೌರವ ಸಲ್ಲಿಸಲು ನೆರೆದಿದ್ದ ಜನರು ಪ್ರತಿಭಟಿಸಿದ್ದು ಆ ಸಮಯದಲ್ಲಿ ಸಿಂಗ್ ಅವರ ರಾಜೀನಾಮೆಗೆ ಒತ್ತಾಯಿಸಿದರು. ಈ ವೇಳೆ, ಪ್ರತಿಭಟನಾಕಾರರು ಮೇಲೆ ಮಣಿಪುರ ಪೊಲೀಸರು ಅಶ್ರುವಾಯು ಪ್ರಯೋಗಿಸಿ ಜನರನ್ನು ಚದುರಿಸಿದರು. ‘ನಿನ್ನೆಯ ಘಟನೆಯ…

Read More

ಜೈಪುರ: ಕಳೆದ ವರ್ಷ ಜೂನ್‌ 28ರಂದು ಇಸ್ಲಾಂ ಧರ್ಮಕ್ಕೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ಕನ್ಹಯ್ಯ ಲಾಲ್‌ ಅವರನ್ನುಅವರದ್ದೇ ಅಂಗಡಿಯಲ್ಲಿ ಶಿರಚ್ಛೇದ ಮಾಡಿ ಹತ್ಯೆ ಮಾಡಲಾಗಿತ್ತು ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. ಕನ್ಹಯ್ಯ ಲಾಲ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ವಿಶೇಷ ನ್ಯಾಯಾಲಯ ರಚನೆ ಮಾಡಿದ್ದರೆ ಈ ವೇಳೆಗೆ ಆರೋಪಿಗಳನ್ನು ಬಂಧಿಸಿ ನೇಣಿಗೆ ಹಾಕಬಹುದಾಗಿತ್ತು ಎಂದು ಅವರು ಹೇಳಿದರು. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಾಧನೆಗಳ ಅನಾವರಣ ಉದ್ದೇಶದಿಂದ ಉದಯಪುರದಲ್ಲಿ ಆಯೋಜಿಸಿದ್ದ ರ್ಯಾಲಿಯಲ್ಲಿ ಮಾತನಾಡಿದ ಶಾ, ‘ರಾಜಸ್ಥಾನ ಸರ್ಕಾರ ವಿಶೇಷ ನ್ಯಾಯಾಲಯ ರಚನೆ ಮಾಡಲಿಲ್ಲ. ಇಲ್ಲದಿದ್ದರೆ, ಇಷ್ಟೊತ್ತಿಗೆ ಕೊಲೆಗಾರರು ಗಲ್ಲಿಗೇರುತ್ತಿದ್ದರು’ ಎಂದು ಅವರು ಹೇಳಿದರು. ಜನರು ತಮಗೆ ನೀಡುತ್ತಿರುವ ಬೆಂಬಲವನ್ನು ನೋಡಿದರೆ 2024ರಲ್ಲಿ 300 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿ, ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಜನಾಂಗೀಯ ಹಿಂಸಾಚಾರದಲ್ಲಿ ಹೊತ್ತಿ ಉರಿಯುತ್ತಿರುವ ಮಣಿಪುರಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭೇಟಿ ನೀಡಿದ್ದು ಚುರಚಂದಪುರ ನಿರಾಶ್ರಿತರ ಶಿಬಿರಕ್ಕೆತೆರಳಿ ಅಲ್ಲಿನ ಮಕ್ಕಳೊಂದಿಗೆ ಊಟವನ್ನು ಮಾಡಿ ಕೆಲಕಾಲ ಅವರೊಂದಿಗೆ ಕಳೆದಿದ್ದಾರೆ. ರಾಹುಲ್ ಗಾಂಧಿಯವರು ಎರಡು ದಿನಗಳ ಪ್ರವಾಸ ಕೈಗೊಂಡಿದ್ದು ಇಂದು ಮೊಯಿರಾಂಗ್‌ ಗೆ ತೆರಳಿದ ಅವರು, ಹಿಂಸಾಚಾರದಿಂದ ತೊಂದರೆಗೀಡಾದ ಸಂತ್ರಸ್ತರನ್ನು ಭೇಟಿ ಮಾಡಿ ಅವರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಜನಾಂಗೀಯ ಹಿಂಸೆ ಹೆಚ್ಚಾಗುತ್ತಿದ್ದಂತೆ ಆ ಬಗ್ಗೆ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ ಅವರು, ಸದ್ಯ ಮಣಿಪುರಕ್ಕೆ ಚಿಕಿತ್ಸೆ ಬೇಕಿದೆ. ಅಲ್ಲಿ ಹಿಂಸೆ, ಹೋರಾಟಕ್ಕೆ ಬದಲಾಗಿ ಶಾಂತಿಗೆ ಮಾತ್ರ ಆದ್ಯತೆ ನೀಡಬೇಕಿದೆ ಎಂದು ಹೇಳಿದ್ದರು.ಇದೀಗ ಮಣಿಪುರದ ನನ್ನ ಎಲ್ಲಾ ಸಹೋದರ ಸಹೋದರಿಯರ ಅಳಲು ಕೇಳಲು ಬಂದಿದ್ದೇನೆ. ಎಲ್ಲ ಸಮುದಾಯಗಳ ಜನರು ಮನಃಸ್ಪೂರ್ವಕವಾಗಿ ಸ್ವಾಗತಿಸಿದ್ದಾರೆ, ಪ್ರೀತಿ ತೋರುತ್ತಿದ್ದಾರೆ. ಇಂತಹ ಸನ್ನಿವೇಶದಲ್ಲಿ ನನ್ನ ಭೇಟಿ ತಡೆಯಲು ಯತ್ನಿಸುತ್ತಿರುವ ಸರ್ಕಾರ ನಡೆ ವಿಷಾಧನೀಯ ಎಂದು ರಾಹುಲ್ ಗಾಂದಿ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

2020-22 ನೇ ಸಾಲಿನಲ್ಲಿ ಪ್ರಕಟಗೊಂಡಿರುವ ಅತ್ಯುತ್ತಮ ಸಾಹಿತ್ಯ ಕೃತಿಗಳಿಗೆ ಶ್ರೀಮತಿ ಗಂಗಮ್ಮಾ ಸೋಮಪ್ಪಾ ಬೊಮ್ಮಾಯಿ ಪ್ರಶಸ್ತಿ ಪ್ರಕಟಿಸಲಾಗಿದೆ. ಶ್ರೀಮತಿ ಗಂಗಮ್ಮ ಸೋಮಪ್ಪಾ ಬೊಮ್ಮಾಯಿ ಎಜುಕೇಶನಲ್ ಅಂಡ್ ವೆಲ್ ಫೇರ್ ಫೌಂಡೇಶನ್ ವತಿಯಿಂದ ನೀಡುವ ಪ್ರಶ್ನೆಗಳನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಅಕ್ಕ ಪ್ರಶಸ್ತಿಗೆ ಡಾ. ಹೇಮಾ ಪಟ್ಟಣಶೆಟ್ಟಿ ಅವರ ಅಕ್ಕರದ ಸುಯಿಧಾನ ಕೃತಿ, ಜಾನಪದ ಸಿರಿ ಪ್ರಶಸ್ತಿಗೆ ಹೊರೆಯಾಲ ದೊರೆಸ್ವಾಮಿ ಅವರ ಜಾನಪದ ನಡೆನುಡಿ ಕೃತಿ ಆಯ್ಕೆಯಾಗಿದೆ. ಅರಳು ಮೊಗ್ಗು ಪ್ರಶಸ್ತಿಗೆ ಕುಮಾರಿ ನೇಹಾ ರಾಮಪುರ್ ಅವರ ಮ್ಯಾಜಿಕ್ ಪೆನ್ಸಿಲ್ ಕೃತಿ ಆಯ್ಕೆಯಾಗಿದೆ. ಪ್ರಶಸ್ತಿಗೆ ಆಯ್ಕೆಯಾದ ಪ್ರತಿಯೊಂದು ಕೃತಿಗಳಿಗೆ ತಲಾ 25000 ರೂ ನಗದು ಬಹುಮಾನ, ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ:…

Read More