Subscribe to Updates
Get the latest creative news from FooBar about art, design and business.
- ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
- ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ: ನಗನಗದು ದೋಚಿ ಪರಾರಿ
- ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
- ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
- ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
- ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
- ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
- ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Author: admin
ರಾಜ್ಯದಲ್ಲಿ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯ ಉಚಿತ ಪ್ರಯಾಣ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಜೂನ್ 11ರಿಂದ ಆರಂಭಗೊಂಡ ಯೋಜನೆಯಡಿ ಬರೋಬ್ಬರಿ 9,46, 35, 508 ಮಂದಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಶಕ್ತಿ ಯೋಜನೆ ಆರಂಭವಾದಂತ ಜೂನ್. 11ರಿಂದ ಇಲ್ಲಿಯವರೆಗೆ ಕೆಎಸ್ ಆರ್ ಟಿಸಿ ಬಸ್ಸುಗಳಲ್ಲಿ 2, 77, 78, 007, ಬಿಎಂಟಿಸಿ 3, 12, 41, 235, ವಾಕರಸಾ ಸಂಸ್ಥೆಯ ಬಸ್ಸುಗಳಲ್ಲಿ 2,29,36, 330 ಹಾಗೂ ಕೆಕೆ ಆರ್ ಟಿಸಿ ಬಸ್ಸುಗಳಲ್ಲಿ 1, 26, 79, 936 ಮಂದಿ ಮಹಿಳಾ ಪ್ರಯಾಣಿಕರು ಸೇರಿದಂತೆ ಒಟ್ಟು 9, 46, 35, 508 ಮಹಿಳೆಯರು ಉಚಿತವಾಗಿ ಸಂಚರಿಸಿದ್ದಾರೆ. ಅಂದ ಹಾಗೇ ಈವರೆಗೆ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ ರೂ. 222, 00, 79, 232 ಆಗಿದೆ ಎಂದು ಮಾಹಿತಿ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ಬಿಜೆಪಿ ಮುಖಂಡರ ವಿರುದ್ಧ ಕಿಡಿಕಾರುತ್ತಿರುವ ಮಾಜಿ ಸಚಿವ ರೇಣುಕಾಚಾರ್ಯ ಅವರಿಗೆ ಪಕ್ಷದ ವಿರೋಧಿ ಹೇಳಿಕೆಗಳ ಆರೋಪದ ಹಿನ್ನೆಲೆಯಲ್ಲಿ ಕಾರಣ ಕೇಳಿ ನೊಟೀಸ್ ಜಾರಿ ಮಾಡಲಾಗಿದೆ. ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ನೊಟೀಸ್ ಜಾರಿ ಮಾಡಿದ್ದಾರೆ. ಈ ನೋಟಿಸ್‌ನಲ್ಲಿ ” ಪಕ್ಷದ ವಿರೋಧಿ 11 ಹೇಳಿಕೆ ನೀಡಿರುವ ಕಾರಣ ತಮ್ಮ ವಿರುದ್ಧ ಯಾಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂಬುದಕ್ಕೆ ಒಂದು ವಾರದೊಳಗಾಗಿ ಲಿಖಿತ ಉತ್ತರ ನೀಡಬೇಕು ” ಎಂದು ಸೂಚಿಸಲಾಗಿದೆ. ಪಕ್ಷವು ಹಲವು ಬಾರಿ ತಿಳಿ ಹೇಳಿದರೂ ಸಹ ಪದೇ ಪದೇ ರಾಜ್ಯ ಮತ್ತು ರಾಷ್ಟ್ರೀಯ ನಾಯಕರುಗಳ ವಿರುದ್ಧ ಮಾಧ್ಯಮಗಳ ಮುಂದೆ ಪಕ್ಷಕ್ಕೆ ಮುಜುಗರವಾಗುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಶಿಸ್ತು ಸಮಿತಿ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಯಾವ ಕಾರಣಕ್ಕಾಗಿ ತಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬಾರದು ಎಂಬುದಕ್ಕೆ ಕಾರಣ ನೀಡುವಂತೆ ” ನೊಟೀಸ್‌ನಲ್ಲಿ ತಿಳಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಮೆಟ್ರೊ ಪಿಲ್ಲರ್ ಕಬ್ಬಿಣದ ಚೌಕಟ್ಟು ಉರುಳಿಬಿದ್ದು ತಾಯಿ-ಮಗು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಆರ್ ಸಿಎಲ್ ಹಾಗೂ ಎನ್ ಸಿಸಿ ಅಧಿಕಾರಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಜ. 10ರಂದು ನಡೆದಿದ್ದ ಘಟನೆಯಲ್ಲಿ ತೇಜಸ್ವಿನಿ ಸುಲಾಖೆ (28) ಹಾಗೂ ಎರಡೂವರೆ ವರ್ಷದ ಮಗ ವಿಹಾನ್ ಮೃತಪಟ್ಟಿದ್ದರು. ಪ್ರಕರಣದ ತನಿಖೆ ನಡೆಸಿದ ಗೋವಿಂದಪುರ ಠಾಣೆ ಪೊಲೀಸರು ಅಧಿಕಾರಿಗಳ ವಿರುದ್ಧ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ‘ಬಿಎಂಆರ್ ಸಿಎಲ್ ಮುಖ್ಯ ಎಂಜಿನಿಯರ್ ಸಿ.ಎಂ. ರಂಗನಾಥ್, ಉಪ ಮುಖ್ಯ ಎಂಜಿನಿಯರ್ ಡಿ. ವೆಂಕಟೇಶ್ ಶೆಟ್ಟಿ, ಕಾರ್ಯನಿರ್ವಾಹಕ ಮುಖ್ಯ ಎಂಜಿನಿಯರ್ ಮಹೇಶ್, ಸೆಕ್ಷನ್ ಎಂಜಿನಿಯರ್ ಜಾಫರ್ ಸಾದಿಕ್, ಸಹಾಯಕ ಎಂಜಿನಿಯರ್ ಜೀವನ್‌ಕುಮಾರ್ ಹಾಗೂ ನಾಗಾರ್ಜುನ್ ಕನ್‌ಸ್ಟ್ರಕ್ಷನ್‌ನ (ಎನ್‌ಸಿಸಿ) ಯೋಜನಾ ವ್ಯವಸ್ಥಾಪಕ ವಿಕಾಸ್ ಕುಮಾ ಸಿಂಗ್, ಹಿರಿಯ ಯೋಜನಾ ವ್ಯವಸ್ಥಾಪಕ ಎ. ಮಾತಯ್ಯ, ಸಹಾಯಕ ಎಂಜಿನಿಯರ್ ಪ್ರಭಾಕರ್ ಮಾಳಿ, ಸುರಕ್ಷತಾ ಮೇಲ್ವಿಚಾರಕ ಭರತೇಶ್ ಸತ್ತಿಗೇರಿ ಹಾಗೂ ಮೇಲ್ವಿಚಾರಕ ಕೆ. ಲಕ್ಷ್ಮಿಪತಿ ರಾಜು ವಿರುದ್ಧ ದೋಷಾರೋಪ ಪಟ್ಟಿ…
ವಿವಿಧ ಅನಾರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆಗಳಿಂದ ವಾಸಿ ಮಾಡಲಾಗದ ನೋವುಗಳ ಶಮನಕ್ಕೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ‘ನೋವು ನಿರ್ವಹಣಾ ಕ್ಲಿನಿಕ್’ ಪ್ರಾರಂಭಿಸಲಾಗುತ್ತಿದೆ. ಸರ್ಕಾರಿ ವ್ಯವಸ್ಥೆಯಡಿ ನಗರದಲ್ಲಿ ಪ್ರಾರಂಭವಾಗುತ್ತಿರುವ ಪ್ರಥಮ ಕ್ಲಿನಿಕ್ ಇದಾಗಲಿದೆ. ಈ ಕ್ಲಿನಿಕ್ ನಲ್ಲಿ ಸೇವೆ ನೀಡುವ ಸಂಬಂಧ ಈಗಾಗಲೇ ಅರಿವಳಿಕೆ ತಜ್ಞರು ತರಬೇತಿ ಪಡೆದಿದ್ದಾರೆ. ಕ್ಯಾನ್ಸರ್, ಸಂಧಿವಾತ ಸೇರಿ ವಿವಿಧ ಅನಾರೋಗ್ಯ ಸಮಸ್ಯೆಗಳಿಗೆ ತಜ್ಞ ವೈದ್ಯರ ಚಿಕಿತ್ಸೆಯ ನಂತರವೂ ನೋವು ಕಡಿಮೆಯಾಗದಿದ್ದಲ್ಲಿ ಈ ಕ್ಲಿನಿಕ್ ಗೆ ಶಿಫಾರಸು ಮಾಡಲಾಗುತ್ತದೆ. ಎಲ್ಲ ವಯೋಮಾನದವರಿಗೂ ಈ ಕ್ಲಿನಿಕ್ ನಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ನೋವು ಶಮನ ಮಾಡಲು ಇದು ಅಂತಿಮ ಆಯ್ಕೆಯಾಗಿದ್ದು, ಈಗಾಗಲೇ ಆಸ್ಪತ್ರೆಯ ಮಾಸ್ಟರ್ ಪ್ಲಾನ್ ಬಿಲ್ಡಿಂಗ್‌ನಲ್ಲಿ ಕೇಂದ್ರವನ್ನು ರೂಪಿಸಲಾಗಿದೆ. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್‌ಐ) ಅಡಿ ವಿಕ್ಟೋರಿಯಾ, ವಾಣಿವಿಲಾಸ, ಮಿಂಟೊ, ಟ್ರಾಮಾ ಕೇರ್ ಕೇಂದ್ರ, ನೆಫ್ರ-ಯೂರಾಲಜಿ ಸಂಸ್ಥೆ, ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ (ಪಿಎಂಎಸ್‌ಎಸ್‌ವೈ) ಆಸ್ಪತ್ರೆ ಹಾಗೂ ಇನ್‌ಸ್ಟಿಟ್ಯೂಟ್ ಆಫ್ ಗ್ಯಾಸ್ಟೋಎಂಟ್ರಾಲಜಿ ಸೈನ್ಸಸ್ ಆ್ಯಂಡ್ ಆರ್ಗನ್ ಟ್ರಾನ್ಸ್‌ಪ್ಲಾಂಟ್ ಆಸ್ಪತ್ರೆಗಳು…
ವಕೀಲರ ಮೇಲಿನ ದೌರ್ಜನ್ಯ ತಡೆಗಟ್ಟುವ ದಿಸೆಯಲ್ಲಿ ಜುಲೈ 3ರಿಂದ ಆರಂಭವಾಗಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ‘ಕರ್ನಾಟಕ ವಕೀಲರ ರಕ್ಷಣಾ ಕಾಯ್ದೆ’ಯನ್ನು ಮಂಡಿಸಿ ಅನುಮೋದನೆ ಪಡೆಯಲಾಗುವುದು ಎಂದು ಬೆಂಗಳೂರು ವಕೀಲರ ಸಂಘಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಅವರ ನೇತೃತ್ವದಲ್ಲಿ ವಕೀಲರ ನಿಯೋಗವು ಗುರುವಾರ ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕರ್ನಾಟಕ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿ ಮಾಡುವಂತೆ ಕೋರಿ ಮನವಿ ಮತ್ರ ಸಲ್ಲಿಸಿತು. ಈ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಕಾಯ್ದೆಯನ್ನು ಮಂಡಿಸಿ ಉಭಯ ಸದನಗಳಲ್ಲಿ ಅನುಮೋದನೆ ಪಡೆಯಲಾಗುವುದು. ವಕೀಲರ ವಿಮಾ ಯೋಜನೆ ಜಾರಿ ವಿಚಾರವನ್ನು ಪರಿಗಣಿಸಲಾಗುವುದು. ಈ ಸಂಬಂಧ ಕಾನೂನು ಸಚಿವ ಎಚ್. ಕೆ. ಪಾಟೀಲ್ ಮತ್ತು ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಭೇಟಿ ಮಾಡಿ ಚರ್ಚಿಸುವಂತೆ ವಕೀಲರ ನಿಯೋಗಕ್ಕೆ ಸಲಹೆ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ…
ಬೆಳಗಾವಿ: ಬೆಳಗಾವಿಯ ಗ್ರೇಡ್ 2 ತಹಶೀಲ್ದಾರ್ ಸಾವು ಪ್ರಕರಣಕ್ಕೆ ಅಶೋಕ್ ಮಣ್ಣೀಕೇರಿ ಸಾವಿಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಈ ಸಂಬಂಧ ಕುಟುಂಬಸ್ಥರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಬೆಳಗಾವಿ ಎಸಿ ಕಚೇರಿಯ ಗ್ರೇಡ್ 2 ತಹಶೀಲ್ದಾರ್ ಅಶೋಕ್ ಮಣ್ಣಿಕೇರಿ ಅನುಮಾನಾಸ್ಪದ ಸಾವನ್ನಪ್ಪಿದ್ದು, ಅಶೋಕ್ ಮಣ್ಣಿಕೇರಿ ಪತ್ನಿ ಭೂಮಿ, ಸಹೋದರ ಸ್ಯಾಮ್ಯುಯೆಲ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಬೆಳಗಾವಿಯ ಕಾಳಿ ಅಂಬ್ರಾಯದಲ್ಲಿ ಅಪಾರ್ಟ್‌ಮೆಂಟ್‌ನಲ್ಲಿ ಅಶೋಕ್ ಮಣ್ಣಿಕೇರಿ ಕುಟುಂಬಸ್ಥರು ವಾಸವಿದ್ದರು. ತಡರಾತ್ರಿ ಹೃದಯಾಘಾತವಾಗಿದೆ ಎಂದು ಆತನ ಪತ್ನಿ ಮತ್ತು ಸಹೋದರ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು.ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅಶೋಕ್ ಮಣ್ಣಿಕೇರಿ ಮೃತಪಟ್ಟಿದ್ದರು. ಅಶೋಕ್ ಮಣ್ಣಿಕೇರಿ ಸಾವಿನ ಬಗ್ಗೆ ಕುಟುಂಬಸ್ಥರು ತನಿಖೆಗೆ ಒತ್ತಾಯಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬೆಳಗಾವಿ: ರಾಜ್ಯದ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಒಂದು ರೂಪಾಯಿಯೂ ಖರ್ಚು ಮಾಡುವುದು ಬೇಡ. ಅರ್ಜಿ ಸಲ್ಲಿಕೆ ವೇಳೆ ಇರುವ 20 ರೂ. ಹಣವನ್ನು ಸರ್ಕಾರವೇ ಭರಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ರಾಜ್ಯದ ಹಲವೆಡೆ ಗೃಹಲಕ್ಷ್ಮಿ ಯೋಜನೆಯ ನಕಲಿ ಅರ್ಜಿಗೆ 150 ರೂ. ಶುಲ್ಕ ವಸೂಲಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಹೆಬ್ಬಾಳ್ಕರ್, ಬಳ್ಳಾರಿಯಲ್ಲಿ ಈ ರೀತಿ ಪ್ರಕರಣ ನಡೆದಿರುವುದು ನನಗೂ ಬೆಳಗ್ಗೆಯೇ ಮಾಹಿತಿ ಬಂದಿದೆ. ನನ್ನ ಎಲ್ಲ ಇಲಾಖೆಯ ಸಿಬ್ಬಂದಿಗೂ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಹೇಳಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸೇವಾ ಕೇಂದ್ರಗಳಿಗೆ 20 ರೂ. ಹಣ ನೀಡುವ ನಿರ್ಧಾರ ತೆಗೆದುಕೊಂಡಿದ್ದೇವೆ. ಸೇವಾ ಸಿಂಧು, ಗ್ರಾಂ ಒನ್, ನಾಡಕಚೇರಿ, ಬಾಪುಜಿ ಸೇವಾ ಕೇಂದ್ರಗಳಿಗೆ ನಾವೇ ಹಣ ಭರಿಸುತ್ತೇವೆ. ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ನನ್ನ ಇಲಾಖೆಯಿಂದಲೇ ಪ್ರತಿ ಅರ್ಜಿಗೆ 20 ರೂ. ಹಣವನ್ನು ಸೇವಾ ಕೇಂದ್ರಗಳಿಗೆ ನೀಡುತ್ತೇವೆ.…
ಬೆಂಗಳೂರು: ಭ್ರಷ್ಟಾಚಾರದ ಪಿತಾಮಹ ಎಂದರೆ ಕಾಂಗ್ರೆಸ್. 60 ಪರ್ಸೆಂಟ್ ಕಮಿಷನ್ ಎಂದು ಗುತ್ತಿಗೆದಾರರೇ ಹೇಳುತ್ತಿದ್ದಾರೆ. ಕಮಿಷನ್ ಪಡೆಯಲು ಅಧಿಕಾರಿಗಳ ಜತೆ ಸುರ್ಜೇವಾಲ ಸಭೆ ನಡೆಸಿದ್ದಾರೆ ಎಂದು ಆರೋಪಿಸಿದರು. ಕೋಲಾರದಲ್ಲಿ ನಿಷ್ಟಾವಂತರಾಗಿ ಡಿಸಿ, ಸಿಇಒ ಕೆಲಸ ಮಾಡುತ್ತಿದ್ದರು. ಈಗ ನಿಷ್ಟಾವಂತ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ. ಒಂದು ಸ್ಥಾನಕ್ಕೆ ನಾಲ್ಕು ಜನರ ಹೆಸರನ್ನು ಪ್ರಸ್ತಾಪಿಸುತ್ತಿದ್ದಾರೆ ಎಂದು ಸಂಸದ ಮುನಿಸ್ವಾಮಿ ವಾಗ್ದಾಳಿ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಮಂಡ್ಯ: ಅಕ್ಕಿ ಬದಲು ಹಣ ನೀಡಿದರೆ ಕುಟುಂಬಗಳಲ್ಲಿ ಗೊಂದಲ ಮೂಡಲಿದೆ ಎಂದು ಸರ್ಕಾರಕ್ಕೆ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಕೃಷ್ಣಪ್ಪ ಕಿವಿಮಾತು ಹೇಳಿದ್ದಾರೆ. ಪ್ರಣಾಳಿಕೆಯಲ್ಲಿ ದುಡ್ಡು ಕೊಡುತ್ತೇವೆ ಎಂದು ಹೇಳಿಲ್ಲ. ಹೇಳಿದಂತೆ ಆಹಾರ ಪದಾರ್ಥಗಳನ್ನೆ ನೀಡಿ. ಅಕ್ಕಿ ಕೊಡಲಾಗದಿದ್ದರೆ ಸಕ್ಕರೆ, ಕಾಳುಗಳನ್ನ ಕೊಡಿ. ದುಡ್ಡು ಕೊಡುವುದರಿಂದ ಮನೆಗಳಲ್ಲಿ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಲಿದೆ ಎಂದಿದ್ದಾರೆ. ಕುಟುಂಬಗಳಲ್ಲಿ ಹಣದ ಕುರಿತು ಮನಸ್ಥಾನ ಉಂಟಾಗುವ ಸಾದ್ಯತೆಯಿದೆ. ಎರಡು ರಾಜ್ಯಗಳಲ್ಲಿ ಈ ರೀತಿ ಹಣ ನೀಡಿದಾಗ ಯೋಜನೆ ಪಲಕಾರಿಯಾಗಿಲ್ಲ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ಬಿಜೆಪಿಯವರದ್ದು ಮನೆಯೊಂದು ನೂರು ಬಾಗಿಲು ಆಗಿದೆ. ಬಿಜೆಪಿ ಪಕ್ಷ ಛಿದ್ರ ಛಿದ್ರ ಆಗಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಅಂತಿಮ ಘಟ್ಟ ತಲುಪಿದೆ. ಎಷ್ಟೇ ಫೆವಿಕಾಲ್ ಹಾಕಿದರೂ ಕೂಡ ಬಿಜೆಪಿ ಜೋಡಿಸಲು ಆಗುವುದಿಲ್ಲ. ಪಾಪ ನಮ್ಮ ಗ್ಯಾರಂಟಿಗಳಿಂದ ತೊಂದರೆ ಆಗುತ್ತಿದೆ ಅವರಿಗೆ. ಉರಿದುಕೊಂಡಿದ್ದಾರೆ ಉರಿದುಕೊಳ್ಳಲಿ. ಬಿಜೆಪಿಯವರು ಒಂದೊಂದು ತರ ಮಾತಾಡುತ್ತಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA