Subscribe to Updates
Get the latest creative news from FooBar about art, design and business.
- ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ
- ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ
- ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ
- ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!
- ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.
- ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ
- ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ
- ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು
Author: admin
ಶನಿವಾರ ಹಮಾಸ್ ಉಗ್ರರು ಇಸ್ರೇಲ್ ಮೇಲೆ ದಾಳಿ ನಡೆಸಿರುವುದು ಗೊತ್ತೇ ಇದೆ. ಇಸ್ರೇಲ್ ನಲ್ಲಿ ಇವರು ನಡೆಸಿದ ದೌರ್ಜನ್ಯಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಹಮಾಸ್ ಭಯೋತ್ಪಾದಕರು ಗಾಜಾ ಬಳಿಯ ಕಿಬ್ಬತ್ ಗೆ ನುಗ್ಗಿ 100 ಜನರನ್ನು ಕೊಂಡಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರು ಮಹಿಳೆಯರು ಜೀವ ಭಯದಿಂದ ಕಾರಿನ ಹಿಂದೆ ಅಡಗಿಕೊಂಡಿದ್ದು, ಅವರನ್ನು ಭಯೋತ್ಪಾದಕರು ನಿರ್ದಯವಾಗಿ ಗುಂಡಿಕ್ಕಿ ಕೊಂದಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಯುಪಿಯ ಲಕ್ನೋದಲ್ಲಿ ನಡೆದ ದೌರ್ಜನ್ಯ ಬೆಳಕಿಗೆ ಬಂದಿದೆ. 8ನೇ ತರಗತಿ ಓದುತ್ತಿರುವ 12 ವರ್ಷದ ಬಾಲಕಿಯ ಮೇಲೆ ಆಟೋ ಚಾಲಕನೊಬ್ಬ ಅತ್ಯಾಚಾರ ಎಸಗಿದ್ದಾನೆ. ಏಳು ದಿನಗಳ ಕಾಲ ಆಕೆಯ ಮೇಲೆ ಅತ್ಯಾಚಾರ ನಡೆಸಿದ ನಂತರ, ಹುಡುಗಿ ಅನಾರೋಗ್ಯಕ್ಕೆ ಒಳಗಾದಳು. ಬಾಲಕಿಯನ್ನು ಆಕೆಯ ತಾಯಿ ವೈದ್ಯರ ಬಳಿ ಕರೆದುಕೊಂಡು ಹೋದಾಗ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಬಾಲಕಿಯ ತಾಯಿ ಇತ್ತೀಚೆಗೆ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ದೇಶಿ ಷೇರುಪೇಟೆ ಸೂಚ್ಯಂಕ ಬುಧವಾರ ಲಾಭದೊಂದಿಗೆ ಆರಂಭಗೊಂಡಿದ್ದು, ಸೆನ್ಸೆಕ್ಸ್ 257.25 ಅಂಕ ಏರಿಕೆಯೊಂದಿಗೆ 66,336ಕ್ಕೆ ವಹಿವಾಟು ನಡೆಸುತ್ತಿದೆ. ನಿಫ್ಟಿ 79.80 ಅಂಕ ಏರಿಕೆಯೊಂದಿಗೆ 19,769.60 ರಲ್ಲಿ ವಹಿವಾಟು ನಡೆಸುತ್ತಿದೆ. ಬೆಳಗಿನ ಅವಧಿಯಲ್ಲಿ ಎಚ್ ಡಿಎಫ್ ಸಿ ಬ್ಯಾಂಕ್, ಟಿಸಿಎಸ್, ಎಲ್ ಆಂಡ್ ಟಿ, ಎಸ್ ಬಿಐ, ಮಹೀಂದ್ರಾ ಮತ್ತು ಮಹೀಂದ್ರಾ ಟಾಪ್ ಗೇನರ್ ಎನಿಸಿಕೊಂಡಿವೆ. ಟಿಸಿಎಸ್, ಡೆಲ್ಟಾ ಕಾರ್ಪ್ & ಇತರ ಕಂಪನಿ ಈ ಹಣಕಾಸು ವರ್ಷದ 2ನೇ ತ್ರೈಮಾಸಿಕ ಗಳಿಕೆ ಪ್ರಕಟಿಸುವ ಸಾಧ್ಯತೆ ಇದೆ.
ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಸಮರ ಐದನೇ ದಿನಕ್ಕೆ ಕಾಲಿಟ್ಟಿದೆ. ಇಲ್ಲಿಯವರೆಗೆ ಎರಡೂ ಕಡೆಗಳಲ್ಲಿ 3,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಇಸ್ರೇಲ್ ನಲ್ಲಿ ಸಾವು ನೋವುಗಳು ಹೆಚ್ಚು ಎಂದು ವರದಿಯಾಗಿದೆ. ತಮ್ಮ ದೇಶದಲ್ಲಿ ಹಮಾಸ್ ಭಯೋತ್ಪಾದಕರು ನಡೆಸಿದ ದಾಳಿಗೆ ಪ್ರತಿಯಾಗಿ ಇಸ್ರೇಲ್ ಗಾಜಾವನ್ನು ಹತ್ತಿಕ್ಕುತ್ತಿದೆ. ಕ್ಷಿಪಣಿ ದಾಳಿಯಿಂದ ಗಾಜಾದಲ್ಲಿ ಹೆಚ್ಚಿನ ಸಂಖ್ಯೆಯ ಕಟ್ಟಡಗಳು ನೆಲಸಮವಾಗುತ್ತಿವೆ. ಗಾಜಾದಲ್ಲಿ ಆಹಾರ, ನೀರು ಮತ್ತು ವಿದ್ಯುತ್ ಅನ್ನು ಕಡಿತಗೊಳಿಸಲಾಗಿದೆ.
ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ಭಾರತ ಇಸ್ರೇಲ್ ಜೊತೆ ನಿಂತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪುನರುಚ್ಚರಿಸಿದ್ದಾರೆ. ಪ್ರಧಾನಿ ಮೋದಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ದೂರವಾಣಿ ಮೂಲಕ ತಿಳಿಸಿದ್ದಾರೆ. ಭಾರತವು ಎಲ್ಲಾ ರೀತಿಯ ಭಯೋತ್ಪಾದನೆಯನ್ನು ಬಲವಾಗಿ ವಿರೋಧಿಸುತ್ತದೆ. ಎಲ್ಲಾ ರೀತಿಯ ಭಯೋತ್ಪಾದನೆಯನ್ನು ಭಾರತ ತೀವ್ರವಾಗಿ ಖಂಡಿಸುತ್ತದೆ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ತಿಳಿಸಿರುವುದಾಗಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಸ್ತುತ ಭಾರತೀಯರು ಯಾವುದೇ ಭದ್ರತಾ ಸವಾಲುಗಳನ್ನು ಎದುರಿಸುತ್ತಿಲ್ಲ. ಭಾರತೀಯ ರಾಯಭಾರ ಕಚೇರಿಯಲ್ಲಿ ಮಾಹಿತಿ ಸಂಗ್ರಹಣೆಯನ್ನು ಬಲಪಡಿಸಲಾಗುವುದು. ಅಸ್ವಸ್ಥ ನಾಗರಿಕರನ್ನು ದೇಶಕ್ಕೆ ಕರೆತರುವ ಪ್ರಸ್ತಾವನೆಯನ್ನೂ ಚರ್ಚಿಸಲಾಯಿತು. ಅದೇ ಸಮಯದಲ್ಲಿ, ಇಸ್ರೇಲ್ ಗಾಜಾದ ಮೇಲೆ ತನ್ನ ದಾಳಿಯನ್ನು ತೀವ್ರಗೊಳಿಸಿತು. ಹಮಾಸ್ ಆಳ್ವಿಕೆಯ ಗಾಜಾದಲ್ಲಿ ಇಸ್ರೇಲಿ ಪಡೆಗಳು ನಡೆಸಿದ ದಾಳಿಯಲ್ಲಿ ಹಣಕಾಸು ಸಚಿವಾಲಯ ಮತ್ತು ಬ್ಯಾಂಕ್ ಧ್ವಂಸಗೊಂಡಿದೆ. ಹಮಾಸ್‌ನ ಉನ್ನತ ನಾಯಕ ಮತ್ತು ಹಣಕಾಸು ಸಚಿವರನ್ನು ಕೊಂದಿರುವುದಾಗಿ ಇಸ್ರೇಲ್ ಸೇನೆ…
ಬೆಂಗಳೂರು: ಇಂಜೆಕ್ಷನ್ ರಿಯಾಕ್ಷನ್ ಆಗಿ 11 ವರ್ಷದ ಪ್ರೀತಮ್ ನಾಯಕ್ ಸಾವನಪ್ಪಿದ್ದಾನೆ. ಕಳೆದ ನಾಲ್ಕು ದಿನದ ಹಿಂದೆ ಅನಾರೋಗ್ಯದ ಸಮಸ್ಯೆ ಎಂದು ಕೋಣನಕುಂಟೆಯ ರಾಜನಂದಿನಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಇಂಜೆಕ್ಷನ್ ಕೊಟ್ಟ ಮರುದಿನವೇ ಕಾಲು ಊತ ಬಂದಿತ್ತು. ಕೂಡಲೇ ಆಪರೇಷನ್ ಮಾಡಿಸಿದ್ದರೂ ಪ್ರೀತಮ್ ಸಾವನಪ್ಪಿದ್ದಾನೆ. ತನ್ನ ಮಗನ ಸಾವಿಗೆ ರಾಜನಂದಿನಿ ಆಸ್ಪತ್ರೆಯ ಡಾಕ್ಟರ್ ನಿರ್ಲಕ್ಷ್ಯವೇ ಕಾರಣ ಎಂದು ತಂದೆ ಪ್ರಿಯ ನಾಯಕ್, ತಾಯಿ ಕೃಷ್ಣ ಬಾಯಿ ಆರೋಪ ಮಾಡಿದ್ದಾರೆ.
ಬಿರಿಯಾನಿ ಹೋಟೆಲ್ ಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ. ಹೊಸಕೋಟೆ ಬಳಿಯ ಹಲವು ಬಿರಿಯಾನಿ ಹೋಟೆಲ್ ಗಳ ಮೇಲೆ 50ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ಏಕಕಾಲದಲ್ಲಿ ದಾಳಿ ನಡೆಸಿದೆ. ಹೋಟೆಲ್ ಮಾಲಿಕರ ವಿರುದ್ಧ ಜಿಎಸ್ ಟಿ ವಂಚನೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ಬಿಜೆಪಿ ಟಿಕೆಟ್ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಮಂಗಳೂರಿನ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ನೋಟಿಸ್ ನೀಡಿದ್ದಾರೆ. ಪ್ರಕರಣದ ತನಿಖಾಧಿಕಾರಿಯಾಗಿರುವ ಎಸಿಪಿ ರೀನಾ ಸುವರ್ಣ ಅವರು ಸ್ವಾಮೀಜಿಗೆ ನೋಟಿಸ್ ಪ್ರತಿ ಕಳುಹಿಸಿದ್ದಾರೆ. ‘ನೋಟಿಸ್ ತಲುಪಿದ ನಂತರ ಮೂರು ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ. ನಿಗದಿತ ದಿನದಂದು ವಿಚಾರಣೆಗೆ ಹಾಜರಾಗಬೇಕು. ಇಲ್ಲದಿದ್ದರೆ, ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿವೆ.
ಕಾವೇರಿ ನೀರು ಬಿಡಬೇಡಿ ಎಂದು ಒತ್ತಾಯಿಸಿ ನಗರದ ರಾಜ್ಯಭವನಕ್ಕೆ ವಾಟಾಳ್ ನಾಗರಾಜ್ ಮುತ್ತಿಗೆ ಹಾಕಲಿದ್ದಾರೆ. ತಮಿಳುನಾಡಿಗೆ ಹರಿಸುತ್ತಿರುವ ನೀರು ತುರ್ತಾಗಿ ನಿಲ್ಲಿಸಬೇಕು. ಕರ್ನಾಟಕದಲ್ಲಿ ತುರ್ತಾಗಿ ಶಾಸನ ಸಭೆ ಕರೆಯಬೇಕೆಂದು ವಾಟಾಳ್ ಒತ್ತಾಯಿಸಿದ್ದು, ಇಂದು ಮದ್ಯಾನ 12 ಗಂಟೆಗೆ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ರಿಂದ ಮುತ್ತಿಗೆ ಹಾಕಲಾಗುತ್ತೆ. ಪ್ರತಿಭಟನೆಯಲ್ಲಿ ಸಾರಾ ಗೋವಿಂದ್ ಸೇರಿ ಹಲವು ಕನ್ನಡ ಪರ ಹೋರಾಟಗಾರರು ಬಾಗಿಯಾಗಲಿದ್ದಾರೆ.
ಬೆಂಗಳೂರು :ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ನಿರ್ಮಿಸಲಾಗುತ್ತಿರುವ 2.30 ಲಕ್ಷ ಮನೆಗಳನ್ನು ಪೂರ್ಣ ಗೊಳಿಸುವ ನಿಟ್ಟಿನಲ್ಲಿ ಅಗತ್ಯ ಆರ್ಥಿಕ ನೆರವು ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಮಂಗಳವಾರ ಗೃಹ ಕಚೇರಿ ಕೃಷ್ಣಾ ದಲ್ಲಿ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಭೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಎ ಮಹತ್ವದ ತೀರ್ಮಾನದಿಂದ ಕಳೆದ ಹತ್ತು ವರ್ಷ ಗಳಿಂದ ನೆನೆಗುದಿಗೆ ಬಿದ್ದಿದ್ದ ವಸತಿ ಯೋಜನೆ ಒಂದು ವರ್ಷ ದೊಳಗೆ ಪೂರ್ಣ ಗೊಳಿಸಿ ಹಂಚಿಕೆ ಮಾಡಲು ಸಹಕಾರಿ ಆಗಲಿದೆ ಎಂದು ಹೇಳಿದರು. 2013 ರಿಂದ 2018 ರವರೆಗೆ ಮಂಜೂರು ಮಾಡಲಾಗಿರುವ ಮನೆಗಳ ಕಾಮಗಾರಿ ವಿವಿಧ ಹಂತಗಳಲ್ಲಿದ್ದು ಇದುವರೆಗೂ ಒಂದು ಮನೆ ಕೊಡಲು ಸಾಧ್ಯವಾಗಿಲ್ಲ. ಬಿಜೆಪಿ ಅವಧಿಯಲ್ಲಿ ಈ ಕುರಿತು ಗಮನ ಹರಿಸಿಲ್ಲ. ಜತೆಗೆ ಒಂದೇ ಒಂದು ಹೊಸ ಮನೆ ಸಹ ಕೊಟ್ಟಿಲ್ಲ. ಇದೀಗ…