Subscribe to Updates
Get the latest creative news from FooBar about art, design and business.
- ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
- ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ: ನಗನಗದು ದೋಚಿ ಪರಾರಿ
- ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
- ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
- ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
- ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
- ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
- ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Author: admin
ಉಡುಪಿ: ಬಿಪಿಎಲ್ ಕಾರ್ಡ್‌ದಾರರಿಗೆ 5 ಕೆಜಿ ಅಕ್ಕಿ ಬದಲು ಹಣ ಕೊಡಲು ರಾಜ್ಯ ಸರ್ಕಾರದ ನಿರ್ಧಾರ ವಿಚಾರವಾಗಿ ಮಾತನಾಡಿದ ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಕೇಂದ್ರ ಸರಕಾರ ಬಿಪಿಎಲ್ ಇರುವವರಿಗೆ ಪ್ರತಿಯೊಬ್ಬರಿಗೂ ಐದು ಕೆಜಿ ಅಕ್ಕಿ ನೀಡುತ್ತಿದೆ. ಒಂದು ತಿಂಗಳಿಗೆ ಕೇಂದ್ರ ಸರಕಾರಕ್ಕೆ 18ರಿಂದ 19 ಸಾವಿರ ಕೋಟಿ ಖರ್ಚಾಗುತ್ತದೆ. ತೆಲಂಗಾಣದಲ್ಲಿ ಕೇಂದ್ರ ಸರಕಾರದ ಅಕ್ಕಿ ಎಂದು ರಶೀದಿ ನೀಡುತ್ತಿದ್ದಾರೆ. ಆದರೆ ಸಿದ್ದರಾಮಯ್ಯನವರು ಇದನ್ನು ನಮ್ಮ ಅಕ್ಕಿ ನಮ್ಮ ಅಕ್ಕಿ ಅಂತ ಹೇಳುತ್ತಿದ್ದಾರೆ. ಆಹಾರ ಭದ್ರತಾ ಕಾಯ್ದೆಗೆ ಸ್ಪಷ್ಟ ರೂಪಕೊಟ್ಟು ಅನುಷ್ಠಾನ ಮಾಡಿದ್ದು ನರೇಂದ್ರ ಮೋದಿಯವರು. ನೀವು ಈಗ ಅಕ್ಕಿ ಸಿಕ್ಕಿಲ್ಲ ಹಣ ಕೊಡುತ್ತಿದ್ದೇವೆ ಎನ್ನುತ್ತಿದ್ದೀರಿ. ನೀವು 10 ಕೆಜಿ ಅಕ್ಕಿ ಕೊಡುತ್ತೇವೆ ಅಂತ ಹೇಳುವಾಗ ಕೇಂದ್ರದ 5 ಕೆ.ಜಿ ಅಕ್ಕಿ ಸೇರಿ ಅಂತ ಹೇಳಿದ್ದೀರಾ ? ಹಾಗಾದರೆ ಕೇಂದ್ರ ನೀಡುವ ಅಕ್ಕಿಗೆ ರಾಜ್ಯದಿಂದ ಹಣ ನೀಡುತ್ತಿದ್ದೀರಾ? ಜನರಿಗೆ ತಪ್ಪು ಮಾಹಿತಿ ಒದಗಿಸಬೇಡಿ ಎಂದರು. ನೀವು ಹೇಳಿದ್ದು 10 ಕೆಜಿ…
ಸಿದ್ದರಾಮಯ್ಯ ಸರ್ಕಾರದ ಯೋಜನೆಗಳಲ್ಲಿ ಯಾವ ಸ್ಪಷ್ಟತೆ ಇಲ್ಲ ಎಂದು ಮಾಜಿ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಮಡಿಕೇರಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ನಿರ್ಧಾರದಿಂದ ಜನರು ಗೊಂದಲದಲ್ಲಿದ್ದಾರೆ. ಮೋದಿ ತೆಗಳುವುದರ ಮೂಲಕ ವಿಷಯಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿದ್ರು… ಬೆಲೆ ಏರಿಕೆಗೂ ಪ್ರಧಾನಿ ನರೇಂದ್ರ ಮೋದಿಯನ್ನು ಕೇಳಿ ಅಂತಾರೆ. ಮೋದಿ ಟೊಮ್ಯಾಟೋ ಬೆಲೆ ಏರಿಕೆ ಮಾಡಿದ್ದಾರಾ? ಬೆಲೆ ಏರಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಕಾರಣ. ಸರ್ಕಾರದ ವಿರುದ್ಧ ನಾವು ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಕೇರಳ ಮೂಲದ ಉದ್ಯಮಿಯನ್ನು ಹನಿಟ್ರ್ಯಾಪ್ ಗೆ ಕೆಡವಿದ ಯುವತಿ ಸಹಿತ ಎಂಟು ಮಂದಿಯನ್ನು ಮಂಗಳೂರು ಸಿಸಿಬಿ ಮತ್ತು ಕಾವೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು ಮೂಡುಬಿದಿರೆ ಮೂಲದ ಯುವತಿ ಮತ್ತು ಪ್ರೀತಮ್, ಮೂಡುಶೆಡ್ಡೆ ಪರಿಸರದ ಕಿಶೋರ್, ಮುರಳಿ, ಸುಶಾಂತ್, ಅಭಿ ಎಂದು ಗುರುತಿಸಲಾಗಿದೆ. ಕೇರಳ ಮೂಲದ ಉದ್ಯಮಿ ಮೊಯ್ದಿನ್ ಕುಂಞಿ ತಮ್ಮ ಸಂಪರ್ಕಕ್ಕೆ ಬಂದಿದ್ದ ಮೂಡುಬಿದಿರೆ ಮೂಲದ ಯುವತಿಯೊಂದಿಗೆ ಫೆಬ್ರವರಿ 16ರಂದು ವಾಮಂಜೂರು ಸಮೀಪದ ಮೂಡುಶೆಡ್ಡೆಯಲ್ಲಿರುವ ರೆಸಾರ್ಟ್‌ವೊಂದಕ್ಕೆ ತೆರಳಿದ್ದರು ಎನ್ನಲಾಗಿದೆ. ರಾತ್ರಿ ವೇಳೆ ಅವರು ರೆಸಾರ್ಟ್‌ನಲ್ಲಿದ್ದಾಗಲೇ ತಂಡವೊಂದು ಕೊಠಡಿಗೆ ಏಕಾಏಕಿ ಪ್ರವೇಶಿಸಿ ಅಲ್ಲಿನ ದೃಶ್ಯಗಳನ್ನು ಸೆರೆ ಹಿಡಿದು ಹಲ್ಲೆಗೈದು ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಹೇಳಲಾಗಿದೆ. ಉದ್ಯಮಿಯು ತನ್ನಲ್ಲಿದ್ದ ಹಣ ನೀಡಿ ಅಲ್ಲಿಂದ ಪಾರಾಗಿ ಬಂದಿದ್ದರೂ ಕೂಡ ಕರೆ ಮಾಡಿ ಮತ್ತೆ ಹಣಕ್ಕಾಗಿ ಪೀಡಿಸಿದ್ದಾರೆ. ಕಳೆದ ತಿಂಗಳಲ್ಲಿ ಹತ್ತು ಲಕ್ಷಕ್ಕೂ ಅಧಿಕ ಹಣವನ್ನು ಕಳೆದುಕೊಂಡ ಮೊಯ್ದಿನ್ ಕುಂಞಿ ಹನಿಟ್ರ್ಯಾಪ್ ತಂಡದ ಒತ್ತಡ ತಾಳಲಾರದೆ ಕಾವೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರಂತೆ…
ಮಧುಗಿರಿ: ಪಟ್ಟಣದ ಹೊರವಲಯದಲ್ಲಿರುವ ಈದ್ಗಾ ಮೈದಾನದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ತಾಲೂಕಿನ ಜಾಮ್ಯ ಮಸೀದಿ ವತಿಯಿಂದ ಸಾಮೂಹಿಕ ಪ್ರಾರ್ಥನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣನವರು ಸಾಮೂಹಿಕ ಪ್ರಾರ್ಥನೆಯಲ್ಲಿ ನಮಾಜ್ ಟೋಪಿ ಧರಿಸಿ ಪ್ರಾರ್ಥನೆಯಲ್ಲಿ ಭಾಗಿಯಾದರು. ನಮಾಜ್ ಬಳಿಕ ಮಾತನಾಡಿದ ಸಚಿವರು, ಅಲ್ಪಸಂಖ್ಯಾತರ ಸಮುದಾಯದ ಆಶೀರ್ವಾದದಿಂದ ರಾಜ್ಯದಲ್ಲಿ ರಾಜಕೀಯ ಬದಲಾವಣೆಗೆ ಸಾಧ್ಯವಾಯಿತು. ಮುಂದಿನ ದಿನಗಳಲ್ಲಿ ನಾವು ಸಹ ಎಲ್ಲರೂ ಸದಾಕಾಲ ನಿಮ್ಮ ಜೊತೆ ಇರುತ್ತೇವೆ, ನಿಮ್ಮ ಮೇಲೆ ಯಾವುದೇ ದಬ್ಬಾಳಿಕೆ, ತೊಂದರೆಯಾಗದಂತೆ ನಿಮ್ಮ ಜೊತೆಯಲ್ಲಿ ಇದ್ದು, ನೀವು ಎಲ್ಲರೂ ಕೂಡ ಸುಖ-ಶಾಂತಿಯಿಂದ ಇರುವ ನಿಟ್ಟಿನಲ್ಲಿ ನಾವು ಪ್ರಯತ್ನ ಮಾಡುತ್ತೇವೆ ಎಂದರು. ಈ ಸಾಮೂಹಿಕ ಪ್ರಾರ್ಥನೆಯಲ್ಲಿ ನನಗೂ ಪ್ರಾರ್ಥನೆ ಮಾಡಲು ಅನುವು ಮಾಡಿಕೊಟ್ಟ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದ ಅವರು ಬಕ್ರೀದ್ ಹಬ್ಬದ ಶುಭಾಶಯಗಳನ್ನು ಕೋರಿದರು. ಧರ್ಮ ಗುರುಗಳಾದ ಯಾಸಿರ್ ಅರ್ಫತ್ ಹಬ್ಬದ ಸಂದೇಶ ಸಾರಿದರು. ಪ್ರಾರ್ಥನೆಯ ಬಳಿಕ ಮುಸ್ಲಿಂ ಭಾಂದವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಈ ಸಂದರ್ಭದಲ್ಲಿ…
ನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸುರಂಗ ಮಾರ್ಗಕ್ಕೆ 150 ಸಾವಿರ ಕೋಟಿ ವೆಚ್ಚವಾಗುವ ಅಂದಾಜಿದ್ದು, ನಗರದ ಪ್ರಮುಖ ಐದು ಆರ್ಟಿರಿಯಲ್ ರಸ್ತೆಗಳನ್ನು 20 ನಿಮಿಷದಲ್ಲಿ ಸಂಪರ್ಕಿಸಬಹುದಾಗಿದೆ. ತುಮಕೂರು ರಸ್ತೆ, ಬಳ್ಳಾರಿ ರಸ್ತೆ ಮತ್ತು ಹಳೇ ಮದ್ರಾಸ್ ರಸ್ತೆಗಳನ್ನು ಸಂಪರ್ಕಿಸುವ ಮೈಸೂರು ರಸ್ತೆ ಮತ್ತು ಹೊಸೂರು ರಸ್ತೆಯ 30 ಕಿ. ಮೀ. ಉದ್ದದ ಸುರಂಗ ಮಾರ್ಗದ ಯೋಜನೆಯ ರೂಪುರೇಷೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಐ) ಸಿದ್ಧಪಡಿಸುತ್ತಿದೆ. ಈ ಐದು ಆರ್ಟಿರಿಯಲ್ ರಸ್ತೆಗಳು ಹೊರ ವರ್ತುಲ ರಸ್ತೆ ಮೂಲಕ ಸಂಪರ್ಕಿಸಲಿದ್ದು, ನಗರದ ಪ್ರಮುಖ ಸಂಚಾರ ದಟ್ಟಣೆಯನ್ನುನಿವಾರಿಸಲಿದೆ. ಬೆಂಗಳೂರಿನಲ್ಲಿ ಸಂಚಾರದಟ್ಟಣೆಯನ್ನು ನಿಯಂತ್ರಿಸಲು ಸುರಂಗ ಮಾರ್ಗ ನಿರ್ಮಿಸುವುದೇ ಏಕೈಕ ಪರಿಹಾರವಾಗಿದೆ. ಮೇಲ್ಸ್ತುವೆ, ಮೆಟ್ರೊ, ಧಾರ್ಮಿಕ ಕಟ್ಟಡಗಳು ರಸ್ತೆಗಳಲ್ಲಿದ್ದು, ಅವುಗಳ ನಡುವೆ ಹೊಸ ನಿರ್ಮಾಣ ಸಾಧ್ಯವಾಗುವುದಿಲ್ಲ’ ಎಂದು ಎಚ್‌ಎಚ್‌ಎಐನ ಬೆಂಗಳೂರು ಪ್ರಾದೇಶಿಕ ಅಧಿಕಾರಿ ವಿವೇಕ್ ಜೈಸ್ವಾಲ್ ತಿಳಿಸಿದರು. ‘ಯೋಜನೆಗೆ ಸುಮಾರು 150 ಸಾವಿರ ಕೋಟಿ ವೆಚ್ಚವಾಗಲಿದ್ದು, ರಾಜ್ಯಸರ್ಕಾರ ಇದಕ್ಕೆ ಹಣ ಭರಿಸಬೇಕಿದೆ. ಇದು ನಿರ್ಮಾಣ, ನಿರ್ವಹಣೆ ಮತ್ತು ವರ್ಗಾವಣೆ (ಬಿಒಟಿ)…
ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರ ನೀಡಿರುವ ಮೊಬೈಲ್‌ಗಳನ್ನು ಜುಲೈ 10ರಂದು ವಾಪಸ್ ಮಾಡುವ ಮೂಲಕ ರಾಜ್ಯದಾದ್ಯಂತ ಪ್ರತಿಭಟನೆ ಮಾಡಲಾಗುವುದು’ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್. ವರಲಕ್ಷ್ಮಿ ತಿಳಿಸಿದರು. ಮಂಗಳವಾರ ನಡೆದ ಅಂಗನವಾಡಿ ನೌಕರರ ಕೌನ್ಸಿಲ್ ಸಭೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ‘ಸರ್ಕಾರ ನೀಡಿರುವ ಮೊಬೈಲ್‌ಗಳಲ್ಲಿ ನೆಟ್‌ವರ್ಕ್, ರಾಮ್, ಸ್ಟೋರೇಜ್ ಸಮಸ್ಯೆ ಇದೆ. ಹೊಸ ಆ್ಯಪ್‌ಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶವಿಲ್ಲ’ ಎಂದು ದೂರಿದರು. ಪೋಷಣ್ ಅಭಿಯಾನ ಯೋಜನೆ ಅಡಿಯಲ್ಲಿ ಪೋಷಣ್ ಟ್ರ್ಯಾಕರ್‌ನಲ್ಲಿ ಪ್ರತಿನಿತ್ಯ ಮಕ್ಕಳ, ಪೋಷಕರ ಹಾಜರಾತಿ, ಆಹಾರ ವಿತರಣೆ, ಶಾಲಾಪೂರ್ವ ಶಿಕ್ಷಣ ಚಟುವಟಿಕೆಗಳನ್ನು ಅಪ್‌ಲೋಡ್ ಮಾಡುವುದಕ್ಕೆ ಸಮಸ್ಯೆಯಾಗುತ್ತಿದೆ’ ಎಂದು ಹೇಳಿದರು. ಈಗಾಗಲೇ ನಾಲ್ಕು ವರ್ಷಗಳ ಹಿಂದೆ ನೀಡಿರುವ ಮೊಬೈಲ್ ಗಳು ಹಾಳಾಗಿವೆ. ಆದ್ದರಿಂದ, ಆರೋಗ್ಯ ಸಮೀಕ್ಷೆ ಕೈಗೊಳ್ಳಲು ಹೊಸ ಮೊಬೈಲ್ ಗಳನ್ನು ನೀಡಬೇಕು. ಇಲ್ಲವಾದರೆ, ಕೈಪಿಡಿಯಲ್ಲಿ ದಾಖಲಿಸಲು ಅವಕಾಶ ನೀಡಬೇಕು. ಹಿಂದಿನ ಬಜೆಟ್‌ನಲ್ಲಿ ಘೋಷಿಸಿರುವ 11 ಸಾವಿರ ಗೌರವಧನವನ್ನು ಕೂಡಲೇ ಪಾವತಿ ಮಾಡಬೇಕು. ರಾಜ್ಯ ಸರ್ಕಾರ…
ಸಂಚಾರ ದಟ್ಟಣೆ ನಿಯಂತ್ರಣ ಕರ್ತವ್ಯದ ನಡುವೆಯೂ ಕೆಲವು ಸಂಚಾರ ಪೊಲೀಸರು ಮಾನವೀಯ ಕೆಲಸಗಳಿಗಾಗಿ ಆಗಾಗ್ಗೆ ಸುದ್ದಿಯಾಗುತ್ತಾರೆ. ಮಳೆನೀರು ತೆರವು, ಸಂಚಾರಕ್ಕೆ ಅಡ್ಡಿಯಾದ ಜಲ್ಲಿಕಲ್ಲು ತೆರವು ಮಾಡುವುದು, ಬಿಸಿಲೆನ್ನದೆ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಾ ಸಾರ್ವಜನಿಕರ ಸೇವೆ ಮಾಡುತ್ತಾರೆ. ಆದರೆ ಇಲ್ಲೋರ್ವ ಟ್ರಾಫಿಕ್ ಕಾನ್ಸ್‌ಟೇಬಲ್ ಲಕ್ಷಾಂತರ ವಾಹನ ಸಂಚರಿಸುವ ರಸ್ತೆಯಲ್ಲಿ ಸಾಗುತ್ತಿದ್ದ ಮಾರುದ್ದದ ಕೆರೆ ಹಾವು ಹಿಡಿದು, ರಕ್ಷಿಸಿದ್ದಾರೆ. ಟ್ರಾಫಿಕ್ ಜಂಜಾಟದ ನಡುವೆ ಸದಾಶಿವನಗರ ಟ್ರಾಫಿಕ್ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ರಾಕೇಶ್ ರಸ್ತೆಯಲ್ಲಿ ಸಾಗುತ್ತಿದ್ದ ಹಾವು ಹಿಡಿದು ರಕ್ಷಿಸಿ ಅದನ್ನು ಸುರಕ್ಷಿತ ಸ್ಥಳಕ್ಕೆ ಬಿಟ್ಟರು. ಇಂದು ಮಧ್ಯಾಹ್ನ ಎಂ. ಎಸ್. ರಾಮಯ್ಯ ವೃತ್ತದ ಬಳಿ ಕರ್ತವ್ಯಕ್ಕೆ ತೆರಳುವಾಗ ದಿಢೀರ್ ಹಾವು ಪ್ರತ್ಯಕ್ಷವಾಗಿದೆ. ಇದನ್ನು ಕಂಡ ಪಾದಚಾರಿಗಳು ಅರೆಕ್ಷಣ ಹೌಹಾರಿದ್ದಾರೆ. ಇದನ್ನು ಗಮನಿಸಿದ ರಾಕೇಶ್, ಕೂಡಲೇ ಅಲ್ಲೇ ಬಿದ್ದಿದ್ದ ಕೋಲಿನ ಸಹಾಯದಿಂದ ಹಾವು ಹಿಡಿದರು. ಕಾನ್ಸೆಬಲ್ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ರಾಜ್ಯದ ಕೆಲವು ಸರ್ಕಾರಿ ಸಂಸ್ಥೆಗಳ ಖಾಲಿ ಇರುವ ಹುದ್ದೆಗಳನ್ನು ತುಂಬಲು ನೇರ ನೇಮಕಾತಿಗೆ ವಿಧಿಸಿದ್ದ ಅರ್ಜಿ ಶುಲ್ಕವನ್ನು ಕಡಿಮೆ ಮಾಡಿದೆ. ಕೆಇಎ ವತಿಯಿಂದ ಈ ಮುಂಚೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಸಂಸ್ಥೆಗಳಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿ ಸಂಬಂಧದ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಈ ಪರಿಷ್ಕೃತ ಶುಲ್ಕ ಅನ್ವಯವಾಗುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಪ್ರಕಟಣೆಯಲ್ಲಿ ಬುಧವಾರ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC…
ಬೋರಿಂಗ್ ಆಸ್ಪತ್ರೆಗೆ ಬಡ ಮಹಿಳೆಯನ್ನು ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಿ ಕಾಂಗ್ರೆಸ್ ಶಾಸಕ ಡಾ. ಹೆಚ್. ಡಿ ರಂಗನಾಥ್ ಕರ್ತವ್ಯ ಮೆರೆದಿದ್ದಾರೆ. ಕುಣಿಗಲ್ ತಾಲೂಕಿನ ಕುಂದೂರು ಗ್ರಾಮದ ನಿವಾಸಿಯಾದ ಆಶಾ ಎಂಬ ಮಹಿಳೆಯ ಕೀಲು ಡಿಸ್ ಲೋಕೆಟ್ ಆಗಿತ್ತು. ಇದನ್ನು ಶಸ್ತ್ರಚಿಕಿತ್ಸೆ ಮೂಲಕ ಸರಿಪಡಿಸಲು 5 ಲಕ್ಷ ರೂಪಾಯಿಗಳು ವೆಚ್ಚವಾಗುತ್ತಿತ್ತು. ಮಹಿಳೆಯು ಆರ್ಥಿಕವಾಗಿ ಸಂಕಷ್ಟದಲ್ಲಿದ್ದರು. ಹೀಗಾಗಿ ಆ ಮಹಿಳೆಯನ್ನು ಬೋರಿಂಗ್ ಆಸ್ಪತ್ರೆಗೆ ದಾಖಲಿಸಿ ಶಾಸಕ ಡಾ. ರಂಗನಾಥ್ ಅವರು ಉಚಿತವಾಗಿ ಬರೋಬ್ಬರಿ 4 ತಾಸು ತಾವೇ ಆಪರೇಷನ್ ಮಾಡಿದ್ದಾರೆ. ಡಾ. ರಂಗನಾಥ್ ಅವರು ಮೂಲತಹ ಆರ್ಥೋಪೆಡಿಕ್ ಡಾಕ್ಟರ್ ಆಗಿದ್ದಾರೆ. ಸದ್ಯ ಕ್ಷೇತ್ರದಲ್ಲಿ ಶಾಸಕರ ಈ ಸೇವೆಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆಶಾ ಅವರು ಕಳೆದ 10 ವರ್ಷದ ಹಿಂದೆ ಯಶಸ್ವಿನಿ ಯೋಜನೆಯಡಿ ಕೀಲು ಆಪರೇಷನ್ ಮಾಡಿಸಿಕೊಂಡಿದ್ದರು. ಈಗ ಅದು ಮತ್ತೆ ಡಿಸ್ ಲೋಕೆಟ್ ಆಗಿತ್ತು. ಇದರಿಂದ ಸರ್ಕಾರದ ಯೋಜನೆಯಾದ ಯಶಸ್ವಿನಿಯಡಿ 2 ಬಾರಿ ಸರ್ಜರಿಗೆ ಅವಕಾಶ ಇರಲಿಲ್ಲ. ಮತ್ತೆ ಸರ್ಜರಿ ಮಾಡಿಸಬೇಕು ಎಂದರೆ…
ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲ ಇಲಾಖೆಯಲ್ಲೂ ವರ್ಗಾವಣೆ ದಂಧೆ ಶುರುವಾಗಿದೆ ಎಂದು ಮಾಜಿ ಸಚಿವ ಅಶ್ವತ್ಥ ನಾರಾಯಣ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಲ್ಲಿಂದು ಮಾತನಾಡಿದ ಅವರು, ಶಿಫಾರಸು ಪತ್ರ ಎಲ್ಲೂ ಕೊಡ್ತಾರೆ, ಆದ್ರೆ ಈ ಸರ್ಕಾರದಲ್ಲಿ ಶಿಫಾರಸು ಪತ್ರ ಆಧರಿಸಿ ವರ್ಗಾವಣೆ ನಡೆಯುತ್ತಿಲ್ಲ. ಇದರ ಬದಲು ಹಣದ ಆಧಾರದಲ್ಲಿ ವರ್ಗಾವಣೆ ನಡೀತಿದೆ. ಸತ್ಯಹರಿಶ್ಚಂದ್ರ ಥರ ಮಾತಾಡ್ತಾರೆ ಇವರು. ಆದರೆ ಹಣ ಪಡೆದೇ ವರ್ಗಾವಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಸಿದ್ದರಾಮಯ್ಯ ಸರ್ಕಾರದಲ್ಲಿ ವರ್ಗ ಆಗಿರೋರು ಸರ್ಟಿಫೈಡ್ ಅಧಿಕಾರಿಗಳಾ?. ಇವರ್ಯಾರೂ ಭ್ರಷ್ಟಾಚಾರಿಗಳಲ್ಲ, ಭ್ರಷ್ಟಾಚಾರ ಮಾಡಲ್ಲ ಅಂತ ಸರ್ಟಿಫಿಕೇಟ್ ಕೊಟ್ಟಿದ್ದಾರಾ?. ಈ ಸರ್ಕಾರ ಮೊದಲ ದಿನದಿಂದಲೇ ಭ್ರಷ್ಟಾಚಾರ ಮತ್ತು ವರ್ಗಾವಣೆ ದಂಧೆ ನಡೆಸ್ತಿದ್ದಾರೆ. ಇದು ಮೋಸದ ಸರ್ಕಾರ, ಜನತೆಗೆ ಮೋಸ ಮಾಡಿ ಬಂದ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ಸರ್ಕಾರದಿಂದ ತನಿಖಾಸ್ತ್ರ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ನಮ್ಮ ಕಾಲದ ಅಕ್ರಮ ಆರೋಪಗಳ ಬಗ್ಗೆ ಎಸ್‌ಐಟಿ ತನಿಖೆ ಮಾಡ್ತೀವಿ ಅಂದಿದ್ದಾರೆ. ತನಿಖೆ ಮಾಡಲಿ. ಆದ್ರೆ ನ್ಯಾಯಾಯಲಯ ಮಾನಿಟರ್‌ನಲ್ಲಿ ಎಸ್‌ಐಟಿ ರಚಿಸಲಿ.…