Subscribe to Updates
Get the latest creative news from FooBar about art, design and business.
- ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
- ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ: ನಗನಗದು ದೋಚಿ ಪರಾರಿ
- ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
- ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
- ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
- ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
- ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
- ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Author: admin
ಬೆಂಗಳೂರು ನಗರದಲ್ಲಿ ಡಾ. ಟಿ. ಆರ್. ಚಂದ್ರಶೇಖರ್ ಅವರ ‘ನಿರುದ್ಯೋಗ’ ಕೃತಿ ಲೋಕಾರ್ಪಣೆ ಹಾಗೂ ವಿಶೇಷ ಉಪನ್ಯಾಸದಲ್ಲಿ ಕಾರ್ಯಕ್ರಮ ಜರುಗಿತು. ನವದೆಹಲಿಯ ಅರ್ಥಶಾಸ್ತ್ರಜ್ಞ ಪ್ರೊ. ಪ್ರಭಾತ್ ಪಟ್ನಾಯಿಕ್ ಮಾತನಾಡಿ, ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರವು ಅಸ್ತಿತ್ವಕ್ಕೆ ಬಂದ ಮೇಲೆ ಉದ್ಯೋಗ ಆಧಾರಿತ ಅಭಿವೃದ್ಧಿಗೆ ಆದ್ಯತೆ ಸಿಗುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು. ಬಂಡವಾಳ ಶಾಹಿಗಳಿಗೆ ಪೂರಕವಾದ ನೀತಿಗಳನ್ನು ಜಾರಿಗೆ ತರಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ದುಡಿಯುವ ಕೈಗೆಗಳಿಗೆ ಕೆಲಸ ನೀಡಲು ಜಾರಿಗೆ ತಂದಿದ್ದ ಮಹಾತ್ಮ ಗಾಂಧಿ ಉದ್ಯೋಗ ಖಾತ್ರೆ ಯೋಜನೆಯನ್ನು ಇನ್ನೂ ಸಮಗ್ರವಾಗಿ ಜಾರಿಗೆ ತರಬೇಕಿತ್ತು. ಆದರೆ, ಕೆಲಸವನ್ನು ಕೇಂದ್ರ ಮಾಡಲಿಲ್ಲ. ನಗರ ಕೇಂದ್ರಿತ ಉದ್ಯೋಗಕ್ಕೆ ಆದ್ಯತೆ ನೀಡಬೇಕಿತ್ತು’ ಎಂದು ಹೇಳಿದರು. ‘ಕೇಂದ್ರವು ನವ ಉದಾರೀಕರಣ ನೀತಿಯನ್ನು ಅತ್ಯಂತ ವೇಗವಾಗಿ ಜಾರಿಗೆ ತಂದಿದ್ದರ ಪರಿಣಾಮ ಭಾರತದಲ್ಲಿ ನಿರುದ್ಯೋಗ ಸಮಸ್ಯೆ ತೀವ್ರಗೊಂಡಿದೆ’ ಎಂದು ಬೇಸರ ವ್ಯಕ್ತಪಡಿಸಿದರು. ನಿರುದ್ಯೋಗ ಸಮಸ್ಯೆಯಿಂದ ದೇಶದ ಅಭಿವೃದ್ಧಿಯೂ ಕುಂಠಿತಗೊಳ್ಳಲಿದೆ. ಜನರಲ್ಲಿ ಖರೀದಿಸುವ ಸಾಮರ್ಥ್ಯ ಹೆಚ್ಚಿಸಬೇಕಿತ್ತು. ಅದನ್ನೂ ಮಾಡಿಲ್ಲ. ಬರೀ ಬಂಡವಾಳಶಾ ಹಿಗಳನ್ನೇ…
ಕೃತಿಸ್ವಾಮ್ಯ ಉಲ್ಲಂಘನೆ ಆರೋಪದಡಿ ತಮ್ಮ ವಿರುದ್ಧ ಯಶವಂತಪುರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ವಜಾ ಮಾಡುವಂತೆ ಕೋರಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಇತರ ನಾಯಕರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಕಾಂಗ್ರೆಸ್ ಮುಖಂಡರಾದ ಜೈರಾಮ್ ರಮೇಶ್, ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಸುಪ್ರಿಯಾ ಶ್ರೀನಾಥ್ ಅವರ ವಿರುದ್ಧದ ಎಫ್‌ಐಆರ್ ರದ್ದುಪಡಿಸಲು ನ್ಯಾ. ಎಂ. ನಾಗಪ್ರಸನ್ನ ಅವರ ನೇತೃತ್ವದ ಪೀಠ ನಿರಾಕರಿಸಿತು. ಅಲ್ಲದೆ, “ಅರ್ಜಿದಾರರು ಅನುಮತಿ ಪಡೆಯದೇ ಸೋರ್ಸ್ ಕೋಡ್ ತಿರುಚಿದ್ದು (ಟ್ಯಾಂಪರ್), ಅದನ್ನು ಬಳಕೆ ಮಾಡಿರುವುದು ಅನುಮಾನರಹಿತವಾಗಿ ದೂರುದಾರರ ಕೃತಿಸ್ವಾಮ್ಯದ ಉಲ್ಲಂಘನೆಗೆ ಸಮನಾಗಿದೆ. ಅರ್ಜಿದಾರರು ದೂರುದಾರರ ಕೃತಿಸ್ವಾಮ್ಯವನ್ನು ಲಘುವಾದ ರೀತಿಯಲ್ಲಿ ಬಳಕೆ ಮಾಡಿದ್ದು, ಇದು ಮೇಲ್ನೋಟಕ್ಕೆ ಸಾಕ್ಷ್ಯ ಪರಿಶೀಲಿಸಬೇಕಾದ ಪ್ರಕರಣವಾಗಿದ್ದು, ತನಿಖೆಯಿಂದ ಹೊರಬರಬೇಕಿದೆ. ಹೀಗಾಗಿ, ಅರ್ಜಿ ವಜಾ ಮಾಡಲಾಗಿದೆ” ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ. ದೇಶದಾದ್ಯಂತ ಭಾರತ್ ಜೋಡೋ ಯಾತ್ರೆಯ ಪ್ರಚಾರ ವಿಡಿಯೋಗೆ ಕೆಜಿಎಫ್-2 ಕನ್ನಡ ಸಿನಿಮಾದ ಮುದ್ರಿತ ಸಂಗೀತವನ್ನು ಬಳಕೆ ಮಾಡುವ ಮೂಲಕ ಕೃತಿಚೌರ್ಯ ಎಸಗಲಾಗಿದೆ…
ತುಮಕೂರು: ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮುಸ್ಲಿಂ ಬಾಂಧವರ ಬಹುಪಾಲು ಮತ ವಿಚಾರಕ್ಕೇ ಸಂಬಂಧಪಟ್ಟಂತೆ ಎಲ್ಲೋ ಒಂದುಕಡೆ ಮುಸ್ಲಿಂರಿಗೆ ಹಿಂದಿನ ಸರ್ಕಾರದಿಂದ ಆತಂಕ ಇತ್ತು, ಭಯದ ವಾತಾವರಣ ಇತ್ತು. ಅದೆಲ್ಲವನ್ನೂ ಬಿಟ್ಟು ಕಾಂಗ್ರೆಸ್ ಗೆ ಮತಹಾಕಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ . ತುಮಕೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಜಾತ್ಯತೀತವಾದ ಪಕ್ಷ, ಹಾಗಾಗಿ ಅವರು ನಮ್ಮ ಜೊತೆ ನಿಂತಿದ್ದಾರೆ, ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆ. ಅಭಿವೃದ್ಧಿ ಜೊತೆಗೆ ಶಾಂತಿ ಕಾಪಡಬೇಕಿದೆ ಎಂದು ತಿಳಿಸಿದರು. ಗೃಹ ಸಚಿವನಾಗಿ ಶಾಂತಿ ಕಾಪಾಡುವ ಕೆಲಸ ಮಾಡುತ್ತೇನೆ. ದ್ವೇಷ ಸಾಧಿಸಲು ಹೋಗೋದಿಲ್ಲ.ಶಾಂತಿ ಕಾಪಾಡುತ್ತೇನೆ, ಭಾರತ ಶಾಂತಿ ನಂಬಿದ ದೇಶ, ಸಂವಿಧಾನದಲ್ಲೇ ಅದನ್ನು ಅಳವಡಿಸಿಕೊಂಡಿದ್ದೇವೆ ಎಂದರು. ಅಕ್ಕಿ ಬದಲು ದುಡ್ಡು ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ದುಡ್ಡು ಕೊಡೋದನ್ನು ಕೆಲವರು ಮಾತ್ರ ವಿರೋಧಿಸುತ್ತಾರೆ. ನಾವು ಅಕ್ಕಿ ಕೊಡಲೇಬೇಕು ಎಂದು ತೀರ್ಮಾನ ಮಾಡಿದ್ದೇವೆ. ಕೊಟ್ಟೇ ಕೊಡ್ತಿವಿ, ಅದರಲ್ಲಿ ಎರಡು ಮಾತಿಲ್ಲ ಎಂದರು.…
ತುಮಕೂರು: ಮುಸ್ಲಿಂ ಸಮುದಾಯದವರು ಜಿಲ್ಲೆಯಲ್ಲಿ ಇಂದು ಶ್ರದ್ಧಾಭಕ್ತಿಯಿಂದ ಬಕ್ರೀದ್ ಆಚರಿಸಿದರು. ಇನ್ನು ಕೊರಟಗೆರೆ ಪಟ್ಟಣದಲ್ಲಿ ಇರುವ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭಾಗಿಯಾದರು. ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಸ್ಲಿಂ ಮುಖಂಡರ ನಮಾಝ್ ನಲ್ಲಿ ಪರಮೇಶ್ವರ್ ಪಾಲ್ಗೊಂಡರು. ಕಪ್ಪು ಟೋಪಿ ಧರಿಸಿ ಪ್ರಾರ್ಥನೆಯಲ್ಲಿ ಭಾಗಿಯಾದ ಪರಮೇಶ್ವರ್ ಅವರೊಂದಿಗೆ ನೂರಾರು ಮುಸ್ಲಿಂ ಭಾಂದವರು ಹಾಜರಿದ್ದರು. ಈದ್ಗಾ ಮೈದಾನದಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಪ್ರಪ್ರಥಮವಾಗಿ ಅಲ್ಲಾಗೆ ನಾನು ನಮನ ಸಲ್ಲಿಸ್ತಿನಿ. ಇಡೀ ವಿಶ್ವಕ್ಕೆ ಸಂದೇಶ ಕೊಡುವ ಬಕ್ರಿದ್ ಹಬ್ಬ ಇದು. ನಾನು ಎಲ್ಲರಿಗೂ ನಮನಗಳನ್ನ ಹೇಳ್ತಿನಿ ಎಂದರು. ಅಲ್ಲಾ ಎಲ್ಲರಿಗೂ ಅನೇಕ ರೀತಿ ಪರೀಕ್ಷೆ ಮಾಡ್ತಾನೆ. ಅದರಲ್ಲೂ ಮನುಷ್ಯರಿಗೆ ಹೆಚ್ಚು ಪರೀಕ್ಷೆ ಮಾಡ್ತಾನೆ. ಮಹಮ್ಮದ್ ಇಬ್ರಾಹಿಂ ಇಡೀ ವಿಶ್ವಕ್ಕೆ ಸಂದೇಶ ಕೊಟ್ಟಿದ್ದಾರೆ ಎಂದರು. ಇದು ಪವಿತ್ರವಾದ ಹಬ್ಬ. ನಾನು ಬಹಳ ಸಂತೋಷವಾಗಿ ನಿಮ್ಮೊಟ್ಟಿಗೆ ಭಾಗಿಯಾಗಿದ್ದೇನೆ. ಚುನಾವಣಾ ಸಂದರ್ಭದಲ್ಲಿ ನಿಮ್ಮ ಬಳಿ ಬಂದು ನಿಮ್ಮ ಅಶಿರ್ವಾದ…
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ವೇನಲ್ಲಿ ಸಂಭವಿಸುತ್ತಿರುವ ಅಪಘಾತಗಳು ಮತ್ತು ಸಾವುಗಳನ್ನು ಖಂಡಿಸಿ ಆಮ್ ಆದ್ಮ ಪಕ್ಷದ (ಎಎಪಿ) ಕರ್ನಾಟಕ ಘಟಕವು ‘ರೋಡ್ ಟು ಡೆತ್’ ಎಂಬ ಅಭಿಯಾನವನ್ನು ಕೈಗೆತ್ತಿಕೊಂಡಿದೆ. ಕಳೆದ 9 ತಿಂಗಳಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ 158 ಜನರು ಸಾವಿಗೀಡಾಗಿದ್ದಾರೆ. ಸರ್ಕಾರಗಳ ಅವೈಜ್ಞಾನಿಕ ಮತ್ತು ಭ್ರಷ್ಟ ಯೋಜನೆಗಳಿಗೆ ಅಮಾಯಕರು ಬಲಿಯಾಗುತ್ತಿರುವುದು ದುರಂತ ಎಂದು ಆಮ್ ಆದ್ಮ ಪಕ್ಷದ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಹೇಳಿದ್ದಾರೆ. ಸರ್ಕಾರಗಳ ತಪ್ಪು ಕ್ರಮಗಳಿಂದ ಅಮಾಯಕರು ಸಾವಿಗೀಡಾಗುತ್ತಿರುವುದನ್ನು ಖಂಡಿಸಿ ಆಮ್ ಆದ್ಮ ಪಕ್ಷವು ‘ರೋಡ್ ಟು ಡೆತ್’ ಅಭಿಯಾನವನ್ನು ಕೈಗೆತ್ತಿಕೊಂಡಿದೆ ಎಂದರು. ಈ ಅಭಿಯಾನದ ಮೂಲಕ ಅಮಾಯಕ ಪ್ರಯಾಣಿಕರ ಜೀವ ಉಳಿಸಲು ಜನಜಾಗೃತಿ ಮೂಡಿಸಲು ನಿರ್ಧರಿಸಲಾಗಿದೆ. ಶುಕ್ರವಾರ (ಜೂನ್ 30) ಮೈಸೂರು ರಸ್ತೆಯ ಕಣಿಮಾನಿಕೆ ಟೋಲ್ ಪ್ಲಾಜಾ ಬಳಿ ಪಕ್ಷದ ನೂರಾರು ಕಾರ್ಯಕರ್ತರು ಭಾಗವಹಿಸುತ್ತಿದ್ದಾರೆ ಎಂದು ಮೋಹನ್ ದಾಸರಿ ತಿಳಿಸಿದರು. ಇಂತಹ ಅಭಿಯಾನಗಳ ಮೂಲಕ ಅಮಾಯಕ ಪ್ರಯಾಣಿಕರ ಜೀವ ಉಳಿಸುವುದು ಆಮ್ ಆದ್ಮ ಪಕ್ಷದ ಉದ್ದೇಶವಾಗಿದ್ದು,…
ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಜಾಮೀನಿನ ಮೇಲೆ ಕಾರಾಗೃಹದಿಂದ ಬಿಡುಗಡೆಯಾಗಿರುವ ಸಂಘ ಪರಿವಾರದ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿ ಶೀಟ್ ತೆರೆಯಲು ಚಾಮರಾಜಪೇಟೆ ಠಾಣಾ ಪೊಲೀಸರು ಪ್ರಕ್ರಿಯೆ ಆರಂಭಿಸಿದ್ದಾರೆ. ಇಲ್ಲಿನ ಚಾಮರಾಜಪೇಟೆ, ರಾಮನಗರ ಹಾಗೂ ವಿಜಯನಗರ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಗಲಭೆ, ದೊಂಬಿ, ಕೊಲೆ ಬೆದರಿಕೆ ಹಾಗೂ ಹಲ್ಲೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಹಿನ್ನೆಲೆಯಲ್ಲಿ ಆತನ ವಿರುದ್ಧ ರೌಡಿಶೀಟ್ ತೆರೆಯಲು ವರದಿ ಸಲ್ಲಿಸಲಾಗಿದೆ. ಈ ಸಂಬಂಧ ಚಿಕ್ಕಪೇಟೆ ಉಪವಿಭಾಗ ಎಸಿಪಿ ಕೆರೆಹಳ್ಳಿಗೆ ನೊಟೀಸ್ ಜಾರಿ ಮಾಡಿದ್ದಾರೆ. ದೊಂಬಿ, ಕೊಲೆ, ಹಲ್ಲೆ, ಜೀವ ಬೆದರಿಕೆ ಹಾಗೂ ಇನ್ನಿತರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿರುವ ನಿಮ್ಮ ವಿರುದ್ಧ ಏಕೆ ರೌಡಿಪಟ್ಟಿ ತೆರೆಯಬಾರದು ಎಂಬುದಕ್ಕೆ ಕೂಡಲೇ ವಿವರಣೆ ಸಲ್ಲಿಸಬಹುದು. ವಿವರಣ ನೀಡದಿದ್ದಲ್ಲಿ ಏನು ಇಲ್ಲವೆಂದು ಪರಿಗಣಿಸಿ ರೌಡಿಪಟ್ಟಿ ತೆರೆಯಲಾಗುವುದು ಎಂದು ಪುನೀತ್‌ಗೆ ನೋಟಿಸ್ ಜಾರಿ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಬೆಂಗಳೂರು: ಕಾಂಗ್ರೆಸ್ ಚುನಾವಣಾಪೂರ್ವ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ಅಕ್ಕಿ ವಿತರಣೆಗೆ ತೊಡಕಾಗಿರುವುದರಿಂದ ಐದು ಕೆಜಿ ಅಕ್ಕಿ ಬದಲಿಗೆ ಹಣ ನೀಡಲು ಕರ್ನಾಟಕ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಬಿಪಿಎಲ್ ಪಡಿತರ ಕಾರ್ಡ್ ದಾರರಿಗೆ ಮಾಸಿಕ ತಲಾ 170 ರೂ. ನೀಡುತ್ತೇವೆ ಎಂದು ಆಹಾರ ಸಚಿವ ಮುನಿಯಪ್ಪ ಮಾಹಿತಿ ನೀಡಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರಾದ ಎಚ್ಕೆ ಪಾಟೀಲ್ ಹಾಗೂ ಕೆಎಚ್ ಮುನಿಯಪ್ಪ ಸಂಪುಟ ಸಭೆಯ ನಿರ್ಧಾರಗಳನ್ನು ಪ್ರಕಟಿಸಿದರು. ಇದರೊಂದಿಗೆ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ದಾರರಿಗೆ 5 ಕೆಜಿ ಅಕ್ಕಿ ಹಾಗೂ ಇನ್ನುಳಿದ 5ಕೆಜಿ ಅಕ್ಕಿಯ ಬದಲು ಹಣ ದೊರೆಯಲಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe…
ತುರುವೇಕೆರೆ: ತಾನು ಸಾಕಿದ್ದ ಹಸು ತೀರಿಕೊಂಡಾಗ ಅದನ್ನು ಮನುಷ್ಯರಂತೆ ಅಂತ್ಯಸಂಸ್ಕಾರ ನೆರವೇರಿಸಿ ಬಡ ರೈತ ಕೋಳಘಟ್ಟ ಗ್ರಾಮದ ಕಂಚಿ ರಾಯಪ್ಪ ಮತ್ತು ಲಕ್ಷ್ಮೀದೇವಮ್ಮ ಎಂಬ ದಂಪತಿಗಳು ಮಾನವೀಯತೆ ಮೆರೆದಿದ್ದಾರೆ. ಈ ರೈತ ದಂಪತಿಗಳು ಸಾಕಿದ್ದ ಹಸು ವಯಸ್ಸಾಗಿ ತೀರಿಕೊಂಡಿದ್ದರಿಂದ ಹಂಚಿರಾಯಪ್ಪ ದಂಪತಿಗಳು ತಮ್ಮ ಹಸುವಿಗೆ ಮನುಷ್ಯರಿಗೆ ಹೇಗೆ ಅಂತ್ಯಸಂಸ್ಕಾರ ನಡೆಸುತ್ತಾರೋ ಅದೇ ರೀತಿಯಲ್ಲಿ ನಡೆಸಿ ಎಲ್ಲಾ ಕಾರ್ಯಗಳನ್ನು ನಡೆಸಿ ಸಂಸ್ಕಾರ ಮಾಡಿದ್ದಾರೆ. ಈ ದಂಪತಿ ಹಸುವಿಗೆ ಅಂತ್ಯಸಂಸ್ಕಾರ ನೆರವೇರಿಸಿ ಊರಿನ ಜನರೊಂದಿಗೆ ಸೇರಿ ಅದಕ್ಕೆ ಹಾಲು ತುಪ್ಪ ಹಾಕಿ ದುಃಖದಿಂದ ರೋಧಿಸುತ್ತಿದ್ದ ದೃಶ್ಯ ಮನ ಕಲಕುವಂತಿತ್ತು. ಮನೆಯ ಸದಸ್ಯರನ್ನು ಅಗಲಿದಾಗ ಹೇಗೆ ದುಃಖಿಸುತ್ತಾರೋ ಅದರಂತೆಯೇ ಈ ದಂಪತಿ ಹಸುವಿಗಾಗಿ ಕಣ್ಣೀರು ಹಾಕಿದರು. ಹಸುವಿಗೆ ತಿಥಿ ಕಾರ್ಯ ಕಾರ್ಯವನ್ನು ಸಹ ನೆರವೇರಿಸಿ ತಮ್ಮ ಬಂಧು ಮತ್ತು ಮಿತ್ರರಿಗೆ ಹಾಗೂ ಗ್ರಾಮಸ್ಥರುಗಳಿಗೆ ಊಟವನ್ನು ಹಾಕಿಸಿದ್ದಾರೆ. ಇವರು ಬರೋಬ್ಬರಿ 15ಕ್ಕೂ ಹೆಚ್ಚು ಹಸುಗಳನ್ನು ಸಾಕಿದ್ದಾರೆ. ಮೂಕ ಪ್ರಾಣಿಗಳ ಮೇಲಿನ ಇವರ ಪ್ರೀತಿ ಮೆಚ್ಚುವಂತಹದ್ದು. ವರದಿ: ಸುರೇಶ್…
ಉತ್ತರ ಪ್ರದೇಶದ ಸಹರಾನ್ ಪುರದಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಸಹರಾನ್ ಪುರದ ದಿಯೋಬಂದ್ ನಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಈ ಗುಂಡು ಹಾರಿಸಲಾಗಿದೆ. ಈ ಗುಂಡಿನ ದಾಳಿಯಲ್ಲಿ ಚಂದ್ರಶೇಖರ್ ಆಜಾದ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಒಂದು ಬುಲೆಟ್ ಚಂದ್ರಶೇಖರ್ ಆಜಾದ್ ಅವರ ಸೊಂಟಕ್ಕೆ ಒರೆಸಿಕೊಂಡು ಹೋಗಿದೆ. ಇದರಿಂದಾಗಿ ಅವರಿಗೆ ಗಾಯವಾಗಿದೆ. ಆದರೆ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ಪಕ್ಷದ ಚಟುವಟಿಕೆಯಿಂದ ಯಾರೂ ಅಂತರ ಕಾಯ್ದುಕೊಳ್ಳಬೇಡಿ ಎಂದು ಕರ್ನಾಟಕದ ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸೂಚಿಸಿದ್ದಾರೆ. ವಾರದಲ್ಲಿ 1 ದಿನ ಒಬ್ಬ ಸಚಿವರು ಪಕ್ಷದ ಕಚೇರಿಗೆ ಭೇಟಿ ನೀಡಿ ಪಕ್ಷದ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಸಮಸ್ಯೆ ಆಲಿಸಿ. ಪಕ್ಷ ಸಂಘಟನೆ ದೃಷ್ಟಿಯಿಂದ ಸಚಿವರು ಪಕ್ಷದ ಕಚೇರಿಗೆ ಭೇಟಿ ಅಗತ್ಯವಾಗಿದೆ ಎಂದು ಹೇಳಿದ್ದಾರೆ. ಹೀಗಾಗಿ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಇಂದು ಸಂಜೆ ಕೆಪಿಸಿಸಿ ಕಚೇರಿಗೆ ಭೇಟಿ ನೀಡಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy