Subscribe to Updates
Get the latest creative news from FooBar about art, design and business.
- ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ
- ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ
- ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ
- ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!
- ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.
- ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ
- ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ
- ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು
Author: admin
ಬೆಂಗಳೂರು: ನವರಾತ್ರಿಗೆ ಮೊದಲಿಗೆ ರಾಜ್ಯದ ಜನರಿಗೆ ಕತ್ತಲೆಭಾಗ್ಯ ಖಾತರಿಪಡಿಸಿರುವ ರಾಜ್ಯ ಕಾಂಗ್ರೆಸ್ ಸರಕಾರ ಹೊಸ ವರ್ಷಕ್ಕೆ ಅದನ್ನು ಜಾರಿ ಮಾಡಲು ಹುನ್ನಾರ ನಡೆಸಿದೆ. ಇದು ಆರನೇ ಗ್ಯಾರಂಟಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿ ಕಾರಿದ್ದಾರೆ. ಈ ಬಗ್ಗೆ ಸುದೀರ್ಘ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸರ್ಕಾರದ ದೂರದೃಷ್ಟಿಯ ಕೊರತೆ ಹಾಗೂ ನಿರ್ವಹಣಾ ವೈಫಲ್ಯದಿಂದ ಕರ್ನಾಟಕವನ್ನು ಇತಿಹಾಸದಲ್ಲಿ ಹಿಂದೆಂದೂ ಕಂಡೂ ಕೇಳರಿಯದ ವಿದ್ಯುತ್ ಕ್ಷಾಮಕ್ಕೆ ದೂಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರಕಾರ ಈಗಾಗಲೇ 5 ಅರೆಬರೆ ಗ್ಯಾರಂಟಿಗಳನ್ನು ಕೊಟ್ಟು ಕೈ ತೊಳೆದುಕೊಂಡಿದೆ, ಸರಿ. ಶೀಘ್ರವೇ ಅರೆಬರೆ ಅಲ್ಲದ ಪರಿಪೂರ್ಣವಾದ 6ನೇ ಗ್ಯಾರಂಟಿ (!?) ಕೊಡಲು ಸನ್ನಾಹವನ್ನೂ ನಡೆಸಿದೆ! ಅದರ ಹೆಸರು ಕತ್ತಲೆಭಾಗ್ಯ!! ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಈ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ. ಜನವರಿ; ಅಂದರೆ 2024ರ ಹೊಸ ವರ್ಷಕ್ಕೆ ತಾನು ಕೊಟ್ಟ ಗೃಹಜ್ಯೋತಿಗೆ ಎಳ್ಳುನೀರು ಬಿಟ್ಟು ಕಗ್ಗತ್ತಲ ಕರ್ನಾಟಕದ ಉದಯ ಮಾಡಿಸುವುದು ಗ್ಯಾರಂಟಿ..…
ಬೆಂಗಳೂರು:“ನಾಗರೀಕರ ಧ್ವನಿಯೇ ನಮ್ಮ ಸರ್ಕಾರದ ಧ್ವನಿ. ಹೀಗಾಗಿ ಬ್ರ್ಯಾಂಡ್ ಬೆಂಗಳೂರು ಯೋಜನೆಯಲ್ಲಿ ಬೆಂಗಳೂರಿನ ಅಭಿವೃದ್ಧಿ ಬಗ್ಗೆ ಬೆಂಗಳೂರಿನ ಜನರ ಅಭಿಪ್ರಾಯ ಸಂಗ್ರಹಿಸಿ, ಅವರ ನಿರೀಕ್ಷೆಗೆ ತಕ್ಕಂತೆ ನಾವು ಬೆಂಗಳೂರು ಅಭಿವೃದ್ಧಿಯ ನೀಲನಕ್ಷೆ ಸಿದ್ಧಪಡಿಸುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಬ್ರ್ಯಾಂಡ್ ಬೆಂಗಳೂರು ಚಿಂತನ ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಕುಮಾರ್ ಅವರು ಬೆಂಗಳೂರಿನ ಅಭಿವೃದ್ಧಿಗೆ ತಾವು ಕೈಗೊಳ್ಳಲಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು. “ಬೆಂಗಳೂರಿಗೆ ಅಂಟಿರುವ ಗ್ರಾಬೇಜ್ ಸಿಟಿ, ಟ್ರಾಫಿಕ್ ಸಿಟಿ ಎಂಬ ಕಳಂಕವನ್ನು ನಾವು ತೊಡೆದು ಹಾಕುತ್ತೇವೆ. ಪ್ರತಿ ರಸ್ತೆಯಲ್ಲಿ ಕ್ಯೂಆರ್ ಕೋಡ್ ಹಾಕಿ ಅಲ್ಲಿನ ಕಾಮಗಾರಿ ಬಗ್ಗೆ ಮಾಹಿತಿ ನೀಡುವ ಕೆಲಸ ಮಾಡಲಾಗುವುದು. ಜನರಿಗೆ ಆ ರಸ್ತೆಯ ಕಾಮಗಾರಿ ಕುರಿತು ಜನರಿಗೆ ಮಾಹಿತಿ ನೀಡಿ ಪಾರದರ್ಶಕತೆ ನೀಡಲಾಗುವುದು. ಬಿಬಿಎಂಪಿ ಚುನಾವಣೆಗೆ 225 ವಾರ್ಡ ಮಾಡಲಾಗಿದೆ. ವಾರ್ಡ್ ಸಮಿತಿ ಇಲ್ಲದ ಕಾರಣ ಜನರು ಕೆಲವು ಸಲಹೆ ನೀಡಿದ್ದಾರೆ. ಅದೇನೆಂದರೆ ಪಾರ್ಕ್, ಆಟದ ಮೈದಾನಗಳ…
ಬೆಂಗಳೂರು: ಅರಣ್ಯ, ಪರಿಸರ ಮತ್ತು ವನ್ಯಜೀವಿಗಳನ್ನು ಕಾನೂನಿನಿಂದ ಮಾತ್ರ ಸಂರಕ್ಷಣೆ ಮಾಡಲು ಸಾಧ್ಯವಿಲ್ಲ. ಜನರ ಪಾಲ್ಗೊಳ್ಳುವಿಕೆ ಹಾಗೂ ಜನಜಾಗೃತಿ ಇದಕ್ಕೆ ಅತ್ಯಂತ ಅವಶ್ಯಕ ಎಂದು ಅರಣ್ಯ, ಜೀವಿ ಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯ ಪಟ್ಟಿದ್ದಾರೆ. ಅಕ್ಟೋಬರ್ 2ರಿಂದ 8 ರವರೆಗೆ ನಡೆದ 69ನೇ ವನ್ಯಜೀವಿ ಸಪ್ತಾಹದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡುತ್ತಿದ್ದರು. ಜನರಲ್ಲಿ ಅರಣ್ಯ ವನ್ಯಜೀವಿಗಳ ಮಹತ್ವವನ್ನು ತಿಳಿಸುವ ಅಗತ್ಯವಿದ್ದು, ಶಾಲಾ ಮಕ್ಕಳಿಗೆ ಪಠ್ಯದಲ್ಲಿಯೇ ವನ್ಯಜೀವಿಗಳು ಮತ್ತು ಅರಣ್ಯದ ಮಹತ್ವದ ಬಗ್ಗೆ ತಿಳಿಯ ಹೇಳುವ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು. ಈ ಸಪ್ತಾಹದ ಸಂದರ್ಭದಲ್ಲಿ ಹಳೆಯ ವಾಹನಗಳ ಯಾನ, ವಿವಿಧ ಸ್ಪರ್ಧೆಗಳು, ವನ್ಯಜೀವಿಗಾಗಿ ನಡಿಗೆ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಮೂಲಕ ಜನರಿಗೆ ಅರಿವು ಮೂಡಿಸಲಾಯಿತು ಎಂದರು. ಸಸ್ಯ ಶ್ಯಾಮಲಾ ಕಾರ್ಯಕ್ರಮದಲ್ಲಿ ಈವರೆಗೆ ಐದು ಲಕ್ಷ ಸಸಿಗಳನ್ನು ಸರ್ಕಾರಿ ಶಾಲೆಯ ಆವರಣ ಮತ್ತು ಸುತ್ತಮುತ್ತ ನೆಡಲಾಗಿದೆ. ಮಕ್ಕಳಿಗೆ ಅವುಗಳ ಪೋಷಣೆಯ ಹೊಣೆ…
ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಅವರು ಪಕ್ಷ ಸಂಘಟನೆ ಮತ್ತು ಬಲವರ್ಧನೆ ನಿಟ್ಟಿನಲ್ಲಿ ನಡೆಸುತ್ತಿರುವ ರಾಜ್ಯ ಪ್ರವಾಸವನ್ನು ಮುಂದುವರಿಸಿದ್ದಾರೆ. ಅಕ್ಟೋಬರ್ 12ರಿಂದ ನಾಲ್ಕು ದಿನಗಳ ಕಾಲ ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಿಗೆ ಭೇಟಿ ನೀಡಿ, ಅಲ್ಲಿನ ಮುಖಂಡರ ಜೊತೆ ಮಾತುಕತೆ ನಡೆಸಲಿದ್ದಾರೆ. ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಹಾಗೂ ಆಯ್ದ ಗ್ರಾಮಗಳಲ್ಲಿ ನಡೆಯುವ ಅರಳಿಕಟ್ಟೆ ಸಂವಾದ – ಬನ್ನಿ ಮಾತನಾಡೋಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಗ್ರಾಮಸ್ಥರ ಜೊತೆ ನೇರವಾಗಿ ಮಾತುಕತೆ ನಡೆಸುವ ಮೂಲಕ ಸ್ಥಳೀಯರ ಸಮಸ್ಯೆಗಳನ್ನು, ಭೇಡಿಕೆಗಳನ್ನು ಆಲಿಸಲಿದ್ದಾರೆ. ಜಿಲ್ಲಾ ಭೇಟಿ ವಿವರ: ಅಕ್ಟೋಬರ್ 12, ಗುರುವಾರ, ಕೊಪ್ಪಳ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಪತ್ರಿಕಾ ಗೋಷ್ಠಿ ,ಸ್ಥಳೀಯ ಮುಖಂಡರ ಜೊತೆ ಸಭೆ ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ನವಲಿ ಗ್ರಾಮದಲ್ಲಿ ಬನ್ನಿ ಮಾತನಾಡೋಣ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಅಕ್ಟೋಬರ್ 13, ಶುಕ್ರವಾರ, ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಪತ್ರಿಕಾಗೋಷ್ಠಿ , ಸ್ಥಳೀಯ ಮುಖಂಡರ ಜೊತೆ ಸಭೆ ಹಾಗೂ…
ಬಿಸಿಯೂಟ ನೌಕರರಿಂದ ಇಂದು ಬೆಂಗಳೂರು ಚಲೋ ನಡೆಯಲಿದೆ. ಫ್ರೀಡಮ್ ಪಾರ್ಕ್ ನಲ್ಲಿ ಅನಿರ್ಧಿಷ್ಟ ಧರಣಿ ಆರಂಭಿಸಲಾಗುತ್ತದೆ ಎಂದು ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಜಿಲ್ಲಾ ಅಧ್ಯಕ್ಷ ಪ್ರಭುದೇವ್ ಯಳಸಂಗಿ ಹೇಳಿದ್ದಾರೆ. ಅನಿರ್ಧಿಷ್ಟ ಧರಣಿಯಲ್ಲಿ ಜಿಲ್ಲೆಯಿಂದ ಸುಮಾರು 150 ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಬಿಸಿಯೂಟ ತಯಾರಕರು ಪಾಲ್ಗೊಳ್ಳುವರು ಎಂದರು
ಬೆಂಗಳೂರು: ಯಲಹಂಕ ತಾಲೂಕಿನ, ಜಾಲ ಹೋಬಳಿ, ಕಟ್ಟಿಗೇನಹಳ್ಳಿ ಗ್ರಾಮದ ಸರ್ವೆ ನಂ. 28 ರಲ್ಲಿ ಖಾಸಗಿಯವರಿಂದ ಒತ್ತುವರಿಯಾಗಿದ್ದ ಸುಮಾರು 70 ಕೋಟಿ ರೂ. ಮೌಲ್ಯದ 6. 05 ಎಕರೆ ಸರ್ಕಾರಿ ಜಮೀನನ್ನು ಸೋಮವಾರ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಳೆದ ಮೂರು ವಾರದಲ್ಲಿ ಕಂದಾಯ ಇಲಾಖೆ ನಡೆಸುತ್ತಿರುವ ನಾಲ್ಕನೇ ಒತ್ತುವರಿ ಕಾರ್ಯಾಚರಣೆ ಇದಾಗಿದೆ. ಈ ಮೂಲಕ ಭೂ ಒತ್ತುವರಿದಾರರು ಹಾಗೂ ಭೂ ಮಾಫಿಯಾಗೆ ಸರ್ಕಾರ ಬಿಸಿ ಮುಟ್ಟಿಸಿದೆ.
ರಾಮನಗರ: ಡಿ.ಕೆ. ಶಿವಕುಮಾರ್ ಅವರಿಂದಲೇ ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾಗಿದ್ದು ಎಂದು ರಾಮನಗರ ಜಿಲ್ಲಾ ಮುಖಂಡರ ಸಭೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಪತನವಾಗು ಗ್ಯಾರಂಟಿ, ಡಿ.ಕೆ. ಶಿವಕುಮಾರ್ ತಿಹಾರ್ ಜೈಲಿಗೆ ಹೋಗೋದು ಖಚಿತ. ನಮ್ಮ ಹಾಸನಕ್ಕೆ ಕಳಿಸಬಹುದು, ಅವರು ತಿಹಾರ್ಗೆ ಓಡುವ ಕಾಲ ಹತ್ತಿರವಿದೆ. ಡಿ.ಕೆ.ಶಿವಕುಮಾರ್ ಒಮ್ಮೆ ತಿಹಾರ್ ಜೈಲು ನೋಡಿಕೊಂಡು ಬಂದಿದ್ದಾರೆ. ಅವರು ಶಾಶ್ವತವಾಗಿ ತಿಹಾರ್ಗೆ ಹೋದರೂ ಅಚ್ಚರಿ ಅಲ್ಲ. ನನ್ನ ಕೈಯನ್ನು ಮೇಲೆ ಎತ್ತಿ ಜೋಡೆತ್ತು ಎಂದಿದ್ದನ್ನು ಕೇಳಿ ಮೋಸ ಹೋದೆ. ನನ್ನನ್ನು ನಡುರಸ್ತೆಯಲ್ಲಿ ಕೈಬಿಟ್ಟು ಎತ್ತು ಗಾಡಿಯೊಂದಿಗೆ ಪಲಾಯನ ಮಾಡಿದರು ಎಂದು ಹೇಳಿದರು.
ಬೆಂಗಳೂರು: ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ರದ್ದು ಉತ್ತರನ ಪೌರುಷ. ಸೋನಿಯಾ ನಮ್ಮ ತಾಯಿ, ಪ್ರಿಯಾಂಕಾ ನನ್ನ ಸಹೋದರಿ ಎಂದರು. ಒಂದು ಬಾರಿ ಅಧಿಕಾರ ಕೊಡಿ ಎಂದಿದ್ದರು. ಆದರೆ ನೀವು ಸಿಎಂ ಆದ್ರಾ? ಎಂದು ಶಾಸಕ ಜಿ.ಟಿ.ದೇವೇಗೌಡ ವಾಗ್ದಾಳಿಮಾಡಿದ್ದಾರೆ. ಎರಡೂವರೆ ವರ್ಷದ ಬಳಿಕ ಸಿಎಂ ಅಂತಾ ಹೇಳುವ ತಾಕತ್ತು ಇಲ್ವಾ? ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಇರುವ ಎದೆಗಾರಿಕೆ ನಿಮಗೆ ಇಲ್ವಲ್ಲಾ. ಉತ್ತರನ ಪೌರುಷ ನಿಮ್ಮದು ಅಂತ ಜನ ಮಾತನಾಡುತ್ತಿದ್ದಾರೆ. ಮೈತ್ರಿ ಸರ್ಕಾರ ಯಾರು ತೆಗೆದರು ಅಂತ ಕುಮಾರಸ್ವಾಮಿಗೆ ಗೊತ್ತಿದೆ. ಈಗ ರಾಜ್ಯದ ಜನರಿಗೆ ಸತ್ಯ ಹೇಳಬೇಕು ಎಂದು ಡಿ.ಕೆ. ಶಿವಕುಮಾರ್ ವಿರುದ್ಧ ಶಾಸಕ ಜಿ.ಟಿ.ದೇವೇಗೌಡ ವಾಗ್ದಾಳಿ ಮಾಡಿದರು.
ಡಿಸಿಎಂ ಡಿಕೆ ಶಿವಕುಮಾರ್ ಅವರು ಮತ್ತೆ ಜೈಲಿಗೆ ಹೋಗುತ್ತಾರೆ ಎಂಬ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಸಂಸದ ಡಿ.ಕೆ ಸುರೇಶ್, ಡಿಕೆಶಿನಾ ಜೈಲಿಗೆ ಕಳುಹಿಸಿ ಅಂತಾ ಇವರೇ ಮನವಿ ಮಾಡಿರಬೇಕು. ಬಹುಶಃ ಅಮಿತ್ ಶಾಗೆ ಹೆಚ್.ಡಿ. ಕುಮಾರಸ್ವಾಮಿ ಮನವಿ ಮಾಡಿ ಬಂದಿರಬೇಕು ಎಂದಿದ್ದಾರೆ. ಕುಮಾರಸ್ವಾಮಿ ಗೊಡ್ಡು ಬೆದರಿಕೆಗೆ ಹೆದರುವ ಜಾಯಮಾನ ನಮ್ಮದಲ್ಲ. ಇವರು ದಾಖಲೆಗಳನ್ನು ಬಿಚ್ಚಿಡುವ ಸಮಯ ಬಂದರೆ ನಾವೂ ಸಿದ್ಧ. ಇವರ ಕನಸು ನನಸಾಗುವುದಿಲ್ಲ, ಕನಸು ಕನಸಾಗಿಯೇ ಉಳಿಯುತ್ತೆ. JDS ನಾಯಕರು ಎಲ್ಲೋ ಒಂದು ಕಡೆ ಮಾನಸಿಕವಾಗಿ ಕುಗ್ಗಿದ್ದಾರೆ. ಅವರ ಆಲೋಚನೆಗಳೆಲ್ಲ ಒಂದು ಕಡೆ ಕೇಂದ್ರಿಕೃತ ಆದಂತೆ ಕಾಣುತ್ತಿದೆ. ಕಾರ್ಯಕರ್ತರು ಇವರ ನಡೆನುಡಿ ನೋಡಿ ತಮ್ಮ ದಾರಿ ನೋಡಿಕೊಳ್ಳುತ್ತಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಹೇಳುವುದು ಸುಳ್ಳಿನ ಮಹಾ ಭಾಗ ಎಂದರು.
ಮಂಡ್ಯ: ಕಾವೇರಿ ನೀರಿನ ವಿಚಾರವಾಗಿ ಕೇಂದ್ರ ಸರ್ಕಾರ ಮಧ್ಯೆಪ್ರವೇಶ ಮಾಡಬೇಕು ಎಂಬ ಆಗ್ರಹ ಕೇಳಿ ಬರುತ್ತಿರುವ ವಿಚಾರವಾಗಿ ಸಂಸದೆ ಸುಮಲತಾ ಅಂಬರೀಶ್ ಮಾತನಾಡಿ ಕಾವೇರಿ ವಿಚಾರವಾಗಿ ಪ್ರತ್ಯೇಕವಾದ ಎರಡು ಬೋರ್ಡ್ ಇದೆ. ಇದರಲ್ಲಿ ಸುಪ್ರಿಂ ಕೋರ್ಟ್ ಸಹ ಮಧ್ಯಪ್ರವೇಶ ಮಾಡಲು ಆಗುವುದಿಲ್ಲ. ಅಧಿಕಾರಿಗಳು ಏನು ನಿರ್ಣಯ ಮಾಡುತ್ತಾರೆ ಅದೇ ಅಂತಿಮ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇಂತಹದರಲ್ಲಿ ಯಾರು ಮಧ್ಯ ಪ್ರವೇಶಿಸಬೇಕು. ತಮಿಳುನಾಡು, ಕರ್ನಾಟಕ ನಿರ್ಧಾರ ಮಾಡುವುದು ಅಲ್ಲ ಎಂದು ಹೇಳಿದರು.