Author: admin

ಕೆ. ಆರ್. ಪುರ ತಹಶೀಲ್ದಾರ್ ಹುದ್ದೆಯಲ್ಲಿದ್ದ ಕೆಎಎಸ್ ಅಧಿಕಾರಿ ಅಜಿತ್ ಕುಮಾರ್ ರೈ ಮನೆ ಮತ್ತು ಅವರ ನಿಕಟವರ್ತಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ಶೋಧ ನಡೆಸಿದರು. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಪೊಲೀಸರು ಅಜಿತ್ ಕುಮಾರ್ ರೈ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ. ಲೋಕಾಯುಕ್ತ ಎಸ್ ಪಿ ಕೆ. ವಿ. ಅಶೋಕ್ ನೇತೃತ್ವದಲ್ಲಿ ಅಜಿತ್ ಅವರ ಮನೆ ಹಾಗೂ ಇತರ ಹತ್ತು ಸ್ಥಳಗಳ ಮೇಲೆ ಬುಧವಾರ ಬೆಳಿಗ್ಗೆ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ಅಜಿತ್ ಕುಮಾರ್ ಅವರ ಮನೆಯಲ್ಲಿ ಬೃಹತ್ ಪ್ರಮಾಣದ ನಗದು ಪತ್ತೆಯಾಗಿದೆ. ಅದನ್ನು ವಶಕ್ಕೆ ಪಡೆಯಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಸಿಲಿಕಾನ್ ಸಿಟಿ ಜನತೆಗೆ ಇಂದು ಪವರ್ ಕಟ್ ಶಾಕ್ ಹೊಡೆಯಲಿದೆ. ಬೆಸ್ಕಾಂ ಕಾಮಗಾರಿ ನಡೆಸುತ್ತಿರುವ ಕಾರಣ ವಿದ್ಯುತ್ ವ್ಯತ್ಯಯ ಆಗಲಿದೆ. ಬೆಳ್ಳಗ್ಗೆ 10 ರಿಂದ ಸಂಜೆ 5 ರವರೆಗೆ ಕರೆಂಟ್ ಕಟ್ ಆಗಲಿದೆ. ಎಲ್ಲೆಲ್ಲಿ ಪವರ್ ಕಟ್? ವಿಶ್ವಪ್ರಿಯ ಲೇಔಟ್, ಬೇಗೂರು ಕೊಪ್ಪ ರಸ್ತೆ, ದೇವರಚಿಕ್ಕನಹಳ್ಳಿ, ಅಕ್ಷಯನಗರ, ಪ್ರೆಸ್ಟೀಜ್ ಸಾಂಗ್ ಆಫ್ ಸೌತ್, ತೇಜಸ್ವಿನಿ ನಗರ, ಹಿರಾನಂದನಿ ಅಪಾರ್ಟ್‌ಮೆಂಟ್, ಎಲಿಟಾ ಪ್ರೊಮೆನೇಡ್ ಅಪಾರ್ಟ್‌ಮೆಂಟ್‌ಗಳು, ಕೆಆರ್ ಲೇಔಟ್, ಶಾರದ ನಗರ, ಚುಂಚುಘಟ್ಟ ಮತ್ತು ಉಪ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳು, ಮತ್ತು ಸುತ್ತಮುತ್ತಲಿನ ಪ್ರದೇಶಗಳು ಕುನ್ನೂರು, ಹುಕುಂದ, ಕೋಡಿಹಳ್ಳಿ, ಬಿಜ್ಜಹಳ್ಳಿ, ಹುಣಸೇನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದಲ್ಲಿ ಮೇಕೆ ನುಂಗಲು ಸಾಧ್ಯವಾಗದೇ ಮೇಕೆಯನ್ನು ಬಿಟ್ಟು ಹೆಬ್ಭಾವು ತೆರಳಿದ ಘಟನೆ ನಡೆದಿದೆ. ಆಹಾರ ಅರಸಿ ನಾಡಿಗೆ ಬಂದಿದ್ದ ಭಾರೀ ಗಾತ್ರದ ಹೆಬ್ಬಾವು ಬ್ರಾಂತಿಕಟ್ಟೆ ಕೊಡೆಂಕಿರಿ ಎಂಬಲ್ಲಿ ಮೇಕೆಯೊಂದನ್ನು  ಬೇಟೆಯಾಡಿದ್ದು ಹಿಡಿದ ಮೇಕೆಯನ್ನು ನುಂಗಲು‌ ಸುಮಾರು ಒಂದು ತಾಸು ಸೆಣಸಾಡಿ ವಿಫಲವಾಗಿ, ನುಂಗಲು ಸಾಧ್ಯವಾಗದೆ ತೆರಳಿದೆ. ಜಾರ್ಜ್ ಕುಟ್ಟಿ ಎಂಬವರಿಗೆ ಸೇರಿದ ಸುಮಾರು 45 ಕೆಜಿ ತೂಕದ ಗಂಡು ಮೇಕೆ ಹೆಬ್ಬಾವಿನ ಉರುಳಿಗೆ ಸಿಕ್ಕಿ ಉಸಿರುಗಟ್ಟಿ ಪ್ರಾಣ ಬಿಟ್ಟಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಅಂಗನವಾಡಿ ಕಾರ್ಯಕರ್ತರ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಆರೋಗ್ಯ ಇಲಾಖೆಯ ಇ-ಸರ್ವೇ ಕೆಲಸದಿಂದ ಕೈಬಿಡುವುದು ಸೇರಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ನಿಯೋಗ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಇದೇ ವೇಳೆ ಮಾತನಾಡಿದ ಸಚಿವರು, ಈ ಕುರಿತು ಆರೋಗ್ಯ ಸಚಿವರೊಂದಿಗೆ ಮಾತುಕತೆ ನಡೆಸುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು. ಸಮಸ್ಯೆಗೆ ಶೀಘ್ರವೇ ಪರಿಹಾರ ನೀಡಲಾಗುವುದು ಎಂದರು. ಇದೇ ವೇಳೆ ಅಂಗನವಾಡಿ ಕಾರ್ಯಕರ್ತೆಯರ ರಾಜ್ಯಾಧ್ಯಕ್ಷರಾದ ಅಮ್ಜದ್, ಪ್ರಧಾನ ಕಾರ್ಯದರ್ಶಿ ಜಯಮ್ಮ, ಬೆಂಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರಿಜ ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ವಿಚಾರವಾಗಿ ಹಾಸನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಐದೂವರೆ ಲಕ್ಷ ಹುದ್ದೆಗಳನ್ನು ಒಂದೇ ಬಾರಿ ಭರ್ತಿ ಮಾಡಲು ಸಾಧ್ಯವಿಲ್ಲ. ಹಂತ ಹಂತವಾಗಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. 5 ಗ್ಯಾರಂಟಿ ಅನುಷ್ಠಾನಕ್ಕೆ ವರ್ಷಕ್ಕೆ 59 ಸಾವಿರ ಕೋಟಿ ಹಣ ಬೇಕು. ಆದ್ದರಿಂದ ಈ ವರ್ಷ ಸರ್ಕಾರದ ಮೇಲೆ ಹೆಚ್ಚಿನ ಹೊರೆ ಬೀಳಲಿದೆ. ವಿಪಕ್ಷದವರು ಏನೇ ಹೇಳಿದರೂ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

2023 ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಿಜೆಪಿ ಈಗ ಸೋಲಿನ ವಿಮರ್ಶೆ ಮಾಡಲು ಕಾರ್ಯಕರ್ತರೊಂದಿಗೆ ಹಿರಿಯ ನಾಯಕರು ಸಭೆ ನಡೆಸಿದ್ದಾರೆ. ಸಭೆಗಳಲ್ಲಿ ಕಾರ್ಯಕರ್ತರು ಆಕ್ರೋಶವನ್ನು ನಾಯಕರ ಎದುರುಗಡೆ ವ್ಯಕ್ತಪಡಿಸುತ್ತಿದ್ದು,  ಕಾರ್ಯಕರ್ತರ ಸಮಸ್ಯೆ ಒಂದು ಕಡೆ ಆದರೆ, ಇನ್ನೊಂದು ಕಡೆ ನಾಯಕರಗಳ ಒಳ ಜಗಳದಿಂದಾಗಿ ಹಲವು ಕ್ಷೇತ್ರಗಳನ್ನು ಕಳೆದುಕೊಂಡಿದ್ದೇವೆ ಎಂದು ನಾಯಕರಗಳು ವೇದಿಕೆಯ ಮೇಲೆ ಒಬ್ಬರು ಇನ್ನೊಬ್ಬರಿಗೆ ಟಾಂಗ್ ನೀಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೌಹಾರ್ದತ್ತ ಭೇಟಿ ಕುರಿತು, ಪಕ್ಷದ ಫೈಯರ್ ಬ್ರಾಂಡ್ ನಾಯಕ ಎಂದು ಗುರುತಿಸಿಕೊಂಡಿರುವ ವಿಜಯಪುರದ ಶಾಸಕ ಬಸವರಾಜ ಯತ್ನಾಳ ಅವರು ಬೆಳಗಾವಿಯಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಬಹಿರಂಗವಾಗಿಯೇ ವಿಷಯವನ್ನು ಪ್ರಸ್ತಾಪಿಸಿ ಬಸವರಾಜ್ ಬೊಮ್ಮಾಯಿ ಅವರಿಗೆ ಮುಜುಗರವನ್ನುಂಟು ಮಾಡಿದರು. ಅಲ್ಲದೆ, ಮಾಜಿ ಸಚಿವ ಮುರುಗೇಶ್ ನಿರಾಣಿ ಪರೋಕ್ಷವಾಗಿ ನನ್ನನ್ನು ಸೋಲಿಸಲು ಪ್ರಯತ್ನದಲ್ಲಿದ್ದರೆಂದು ಮಾಜಿ ಸಚಿವರ ಹೆಸರು ಹೇಳದೆ ಪ್ರಸ್ತಾಪಿಸಿ ಸಂಪೂರ್ಣ ಸಭೆಯಲ್ಲಿ ಯತ್ನಾಳ್ ಕೇಂದ್ರ ಬಿಂದುವಾಗಿ ಬಿಟ್ಟರು. ಇದಕ್ಕೆ ಬೆಳಗಾವಿ ಮಾತ್ರ ಸಾಕ್ಷಿಯಾಗಲಿಲ್ಲ.…

Read More

ತುಮಕೂರು: ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು ಕಾಗದಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ. ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ಮನೆ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ಕೃಷಿ ಇಲಾಖೆ ಜೆ.ಡಿ.ರವಿ ಮನೆ ಹಾಗೂ ಫಾರಂ ಹೌಸ್ ನಲ್ಲಿ ಮೊಕ್ಕಂ ಹೂಡಿದ್ದಾರೆ. ತುಮಕೂರು ಕೃಷಿ ಇಲಾಖೆಯಲ್ಲಿ ಜೆಡಿ ಆಗಿ ಕೆಲಸ ನಿರ್ವಹಿಸುತ್ತಿರುವ ರವಿ ಇತ್ತೀಚೆಗಷ್ಟೇ ಹಾಸನದಿಂದ ತುಮಕೂರಿಗೆ ವರ್ಗಾವಣೆಯಾಗಿದ್ದರು. ತುಮಕೂರು ನಗರದ ಶಂಕರಪುರದಲ್ಲಿ ಇರುವ ನಿವಾಸ  ಹಾಗೂ ರಾಮನಗರದ ಫಾರಂ ಹೌಸ್ ಮೇಲೆ ದಾಳಿ ಮಾಡಿದ್ದಾರೆ. ದಾಖಲಾತಿಗಳನ್ನು ಪರಿಶೀಲಿಸುತ್ತಿರುವ ಲೋಕಾಯುಕ್ತ ಅಧಿಕಾರಿಗಳು ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನೊಂದೆಡೆ ತುಮಕೂರಿನ ಶಿರಾದ ಪಂಚಾಯರ್ ರಾಜ್ ಎಇ ಪುಟ್ಟರಾಜು ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು ಶಿರಾ ತಾಲೂಕಿನ ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರಿಂಗ್ ವಿಭಾಗದಲ್ಲಿ ಅಸಿಸ್ಟೆಂಟ್ ಇಂಜಿನಿಯರ್ ಆಗಿದ್ದು ಅವರ ತುಮಕೂರು ನಗರದ ಅಶೋಕ ನಗರದ 9ನೇ ಕ್ರಾಸ್ ನಲ್ಲಿರುವ ಮನೆ…

Read More

ಟೊಮೇಟೋ ಬೆಲೆ 100 ರೂಪಾಯಿ ಗಡಿದಾಟಿದ್ದು, ಜನರು ಬೆಲೆ ಏರಿಕೆಯ ಶಾಕ್ ನಲ್ಲಿರುವಾಗಲೇ ಕೇಂದ್ರ ಸರ್ಕಾರದ ಉನ್ನತ ಅಧಿಕಾರಿಯೊಬ್ಬರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಟೊಮೆಟೊ ಬೆಲೆ ಏರಿಕೆಯು ತಾತ್ಕಾಲಿಕ ವಿದ್ಯಮಾನ. ಶೀಘ್ರದಲ್ಲೇ ದರ ಇಳಿಕೆಯಾಗಲಿದೆ  ಎಂದು ತಿಳಿಸಿದ್ದಾರೆ. ಇದು ಹೆಚ್ಚು ಹಾಳಾಗುವ ವಸ್ತುವಾಗಿದೆ. ಹಠಾತ್ ಮಳೆ ಬೀಳುವ ಪ್ರದೇಶಗಳಲ್ಲಿ ಟೊಮೇಟೊ ಸಾಗಾಟದ ಮೇಲೆ ಪರಿಣಾಮ ಬೀರುತ್ತದೆ. ಇದು ತಾತ್ಕಾಲಿಕ ಸಮಸ್ಯೆ. ಶೀಘ್ರದಲ್ಲೇ ಟೊಮೆಟೊ ಬೆಲೆ ಇಳಿಕೆಯಾಗಲಿದೆ. ಈ ಸಮಯದಲ್ಲಿ ಪ್ರತಿ ವರ್ಷ ಟೊಮೆಟೊ ಬೆಲೆ ಏರಿಕೆಯಾಗುತ್ತದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಟೊಮ್ಯಾಟೋ ಬೆಲೆ ನೂರು ರೂಪಾಯಿ ಮುಟ್ಟಿದೆ. ಕಳೆದ ವಾರ 40-50 ರೂಪಾಯಿ ಆಸುಪಾಸಿನಲ್ಲಿದ್ದ ಟೊಮ್ಯಾಟೊ ಬೆಲೆ ಒಂದೇ ವಾರದಲ್ಲಿ ದುಪ್ಪಟ್ಟಾಗಿದೆ. ದೇಶದ ನಾಲ್ಕು ಮಹಾನಗರಗಳಾದ, ದೆಹಲಿಯಲ್ಲಿ ಟೊಮೆಟೊ ಬೆಲೆ ಕೆಜಿಗೆ 60 ರೂ., ಮುಂಬೈ ಕೆಜಿಗೆ 42 ರೂ., ಕೋಲ್ಕತ್ತಾ ಕೆಜಿಗೆ 75 ರೂ. ಮತ್ತು…

Read More

ತುರುವೇಕೆರೆ: ನಾಡಪ್ರಭು ಕೆಂಪೇಗೌಡರ 514ನೇ ಜಯಂತ್ಯೋತ್ಸವವನ್ನು ತಾಲೂಕು ಒಕ್ಕಲಿಗರ ಸಂಘ ಮತ್ತು ತಾಲೂಕು ನೌಕರರ ಸಂಘ ಹಾಗೂ ಶ್ರೀ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ಸಂಘ ಶ್ರೀ ಕೆಂಪೇಗೌಡ ಯುವ ಸೇನೆ ವತಿಯಿಂದ ಬಹಳ ಅದ್ದೂರಿಯಾಗಿ ಪಟ್ಟಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಎಂ.ಟಿ.ಕೃಷ್ಣಪ್ಪನವರು ಮಾತನಾಡಿ, ನಾಡಪ್ರಭು ಕೆಂಪೇಗೌಡರ 514ನೇ ಜಯಂತಿಯನ್ನು ನಾವುಗಳೆಲ್ಲರೂ ಬಹಳ ಸಂಭ್ರಮದಿಂದ ಆಚರಿಸುತ್ತಿದ್ದೇವೆ . ಶ್ರೀ ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಲ್ಪತರು ಆಶೀರ್ವಾದ ಸ್ವಾಮೀಜಿಯವರಾದ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ನಮಗೆ ಆಶೀರ್ವಚನವನ್ನು ಮಾಡಿದ್ದಾರೆ ಎಂದರು. ಈ ಸಮಾರಂಭದ ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದ ಪ್ರೊಫೆಸರ್ ಚಂದ್ರಶೇಖರ್ ರವರು  ಬಹಳ ಸೊಗಸಾಗಿ ಕೆಂಪೇಗೌಡರ ಬಗ್ಗೆ ಸವಿಸ್ತಾರವಾಗಿ ತಿಳಿಸಿಕೊಟ್ಟಿದ್ದಾರೆ ಅವರಿಗೆ ನನ್ನ ಕೃತಜ್ಞತೆಗಳು ಪ್ರೊಫೆಸರ್ ಪುಟ್ಟರಂಗಪ್ಪನವರು ಚಂದ್ರಶೇಖರ್ ಅವರ ಹೆಸರನ್ನು ಶಿಫಾರಸು ಮಾಡಿ ಬಹಳ ಒಳ್ಳೆಯ ಕೆಲಸವನ್ನು ಮಾಡಿದ್ದಾರೆ ಅವರಿಗೆ ಧನ್ಯವಾದಗಳು ಎಂದು ನುಡಿದರು. ನಿರೀಕ್ಷಿತ ಮಟ್ಟದಲ್ಲಿ ಜನ ಸೇರದ್ದಕ್ಕೆ ಬಹಳ ನಿರಾಸೆಯಾಗಿದೆ ನಮ್ಮಗಳಿಗೆ ಇಂತಹ ವಿಚಾರದಲ್ಲಿ ಆಸಕ್ತಿ ಕಡಿಮೆಯಾಗಿರುವುದೇ…

Read More

ಕೊರಟಗೆರೆ: ತಾಲೂಕಿನ ಕಾಲೋನಿ, ನಾಗೇನಹಳ್ಳಿ ಸೇರಿದಂತೆ ಭೈರೇನಹಳ್ಳಿ ಕ್ರಾಸ್ ಬಳಿ ಸರಣಿ ಕಳ್ಳತನ ನಡೆದಿದ್ದು, ರಸ್ತೆ ಬದಿಯ ಅಂಗಡಿಗಳಲ್ಲಿ ಕಳ್ಳರು ಕಳ್ಳತನ ನಡೆಸಿರುವುದಲ್ಲದೇ ಬೆಳಗ್ಗಿನ ವೇಳೆ ವೃದ್ದೆಯ ಕೊರಳಲ್ಲಿದ್ದ ಚೈನ್ ಕಸಿದು ಪರಾರಿಯಾದ ಘಟನೆ ಕೂಡ ನಡೆದಿದೆ. ಕಾಲೋನಿಯಿಂದ ಕೊರಟಗೆರೆಗೆ ಬರುವ ಮಾರ್ಗ ಮಧ್ಯದ ರಸ್ತೆ ಬದಿಯ ಐದು ಅಂಗಡಿಗಳಲ್ಲಿ ತಡ ರಾತ್ರಿ ಕಳ್ಳತನ ನಡೆಸಲಾಗಿದ್ದು, ಸಿಲಿಂಡರ್,ಗುಟ್ಕಾ, ಸಿಗರೇಟ್, ನಗದು ಕಳವು ಮಾಡಿ ಕಳ್ಳರು ಪರಾರಿಯಾಗಿದ್ದಾರೆ. ಕಳ್ಳತನ ಮಾಡಿರುವ ಪ್ರತಿಯೊಂದು ಅಂಗಡಿಗಳಲ್ಲಿ ಬೆಲೆ ಬಾಳುವ ವಸ್ತುಗಳಾದ 4 ಸಿಲಿಂಡರ್, ಸಿಗರೇಟ್, ಗುಟ್ಕಾ, 40 ಸಾವಿರ ಹೆಚ್ಚು ನಗದು ಕಳವು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಕೋಳಾಲ ಹಾಗೂ ಕೊರಟಗೆರೆ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ವೃದ್ಧೆಯ ಸರಗಳ್ಳತನ: ಜಮೀನಿಗೆ ತೆರಳುತ್ತಿದ್ದ ಒಂಟಿ ವೃದ್ದೆಯ ಕೊರಳಿನಲ್ಲಿದ್ದ 2 ಲಕ್ಷ ಮೌಲ್ಯದ 30 ಗ್ರಾಂ ಮಾಂಗಲ್ಯ ಸರವನ್ನು ಸರಗಳ್ಳರು ದೋಚಿ ಪರಾರಿಯಾದ ಘಟನೆ ನಡೆದಿದೆ.…

Read More