Subscribe to Updates
Get the latest creative news from FooBar about art, design and business.
- ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ
- ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ
- ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ
- ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!
- ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.
- ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ
- ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ
- ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು
Author: admin
ರಾಜಸ್ಥಾನದಲ್ಲಿ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶನಿವಾರ ಪ್ರತಾಪ್ ಗಢದಲ್ಲಿ ಇಬ್ಬರು ಅಪ್ರಾಪ್ತ ಸಹೋದರಿಯರಿಗೆ ವಿಷಪ್ರಾಶನ ಮಾಡಲಾಗಿದೆ. ಮಕ್ಕಳ ಆತ್ಮಹತ್ಯೆಗೆ ಸಹಪಾಠಿಯ ಕಿರುಕುಳವೇ ಕಾರಣ ಎಂದು ಕುಟುಂಬದವರು ಹೇಳುತ್ತಾರೆ. ಅಪ್ರಾಪ್ತ ವಯಸ್ಕ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಬಾಲಕಿಯರು ಪೀಪಲ್ ಖೂನ್ ನಲ್ಲಿರುವ ಹಾಸ್ಟೆಲ್ ನಲ್ಲಿ ಉಳಿದುಕೊಂಡು ಓದುತ್ತಿದ್ದರು. ಸಹಪಾಠಿ ಮತ್ತು ಇಬ್ಬರು ಸ್ನೇಹಿತರು ಸೇರಿದಂತೆ ಮೂವರು ತಮ್ಮ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಬಾಲಕಿಯ ತಂದೆ ಪೊಲೀಸ್ ದೂರಿನಲ್ಲಿ ಆರೋಪಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವನ್ನು ನೇಮಿಸಲಾಗಿದೆ ಎಂದು ಬನ್ಸ್‌ವಾರ ಐಜಿ ಪರಿಮಳಾ ತಿಳಿಸಿದ್ದಾರೆ. ಇದೇ ವೇಳೆ ಅಶೋಕ್ ಗೆಹ್ಲೋಟ್ ರಾಜ್ಯದಲ್ಲಿ ಹೆಣ್ಣು ಮಕ್ಕಳು ಸುರಕ್ಷಿತವಾಗಿಲ್ಲ ಎಂದು ವಿರೋಧ ಪಕ್ಷದ ನಾಯಕ ರಾಜೇಂದ್ರ ರಾಥೋಡ್ ಆರೋಪಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ 16 ವರ್ಷದ ಯುವತಿಯೊಬ್ಬಳು ತನ್ನ ಪ್ರಿಯಕರನನ್ನು ನೋಡಲು ನಿಷೇಧಿಸಿದ ತಾಯಿಗೆ ವಿಷ ನೀಡಲು ಯತ್ನಿಸಿದ್ದಾಳೆ. ವಿಷ ಬೆರೆಸಿದ ಟೀ ಕುಡಿದು ತಾಯಿ ಪ್ರಜ್ಞೆ ತಪ್ಪಿದ ಹಿನ್ನೆಲೆಯಲ್ಲಿ ಗಾಬರಿಗೊಂಡ ಬಾಲಕಿ ಅಕ್ಕಪಕ್ಕದ ಮನೆಯವರ ಸಹಾಯ ಕೇಳಿದಾಗ ಮಾಹಿತಿ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಈ ಘಟನೆ ನಡೆದಿದೆ. ಆಕೆಯ ತಾಯಿ ತನ್ನ ಗೆಳೆಯ ಹಿಮಾಂಶು ಕುಮಾರ್ ಅವರನ್ನು ಭೇಟಿ ಮಾಡಬೇಡಿ ಎಂದು ಹೇಳಿದ್ದು ಮಗುವಿಗೆ ಕೋಪ ತರಿಸಿತ್ತು. ಪ್ರಿಯಕರನನ್ನು ಭೇಟಿಯಾಗದಂತೆ ಮಗಳಿಗೆ ತಾಯಿ ಎಚ್ಚರಿಕೆ ನೀಡಿದ್ದು, ಒಪ್ಪದಿದ್ದರೆ ಮನೆಗೆ ಬೀಗ ಹಾಕುವುದಾಗಿ ತಿಳಿಸಿದ್ದಾರೆ. ನಂತರ ಹುಡುಗಿ ತನ್ನ ತಾಯಿಯನ್ನು ಕೊಲ್ಲಲು ನಿರ್ಧರಿಸಿದಳು. ಪೊಲೀಸರ ಪ್ರಕಾರ, ಹುಡುಗಿಯ ಕೋರಿಕೆಯಂತೆ 18 ವರ್ಷದ ಗೆಳೆಯ ವಿಷವನ್ನು ನೀಡಿದ್ದಾನೆ. ಆತ ತಲೆಮರೆಸಿಕೊಂಡಿದ್ದಾನೆ. ಘಟನೆ ಸಂಬಂಧ ಯುವತಿ ಹಾಗೂ ಆಕೆಯ ಪ್ರಿಯಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯವು ಕಸ್ಟಮ್ಸ್ ಅಧಿಕಾರಿಗೆ 4ವರ್ಷ ಶಿಕ್ಷೆ ವಿಧಿಸಿದೆ ಹಾಗೂ 2 ಲಕ್ಷ ರೂ ದಂಡ ವಿಧಿಸಿದೆ. ನ್ಯಾಯಾಧೀಶ ಮೋಹನ್ ಅವರಿದ್ದ ನ್ಯಾಯಾಲಯ ಕಸ್ಟಮ್ಸ್ ಅಧಿಕಾರಿ ಮೊಹಮದ್ ಶಫಿವುಲ್ಲಾ ವಿರುದ್ಧದ ಆರೋಪ ದೃಢವಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿದೆ. ಅಪರಾಧಿ 8.25 ಲಕ್ಷ ರಷ್ಟು ಅಕ್ರಮ ಆಸ್ತಿ ಹೊಂದಿದ್ದ ಹಿನ್ನೆಲೆಯಲ್ಲಿ ಅದನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
ಇಸ್ರೇಲ್ ಮೇಲೆ ಪ್ಯಾಲೇಸ್ತೀನ್ ನ ಹಮಾಸ್ ಉಗ್ರರು ಭೀಕರ ರಾಕೆಟ್ ದಾಳಿ ನಡೆಸಿದ್ದರಿಂದ ಇಸ್ರೇಲ್ ಯುದ್ಧ ಘೋಷಿಸಿದೆ. ಇದರಿಂದ ಇಸ್ರೇಲ್ ನಲ್ಲಿ ನೆಲೆಸಿರುವ ಕನ್ನಡಿಗರು ಸೇರಿ ಸಾವಿರಾರು ಭಾರತೀಯರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಅಲ್ಲಿನ ಕನ್ನಡಿಗರ ನೆರವಿಗಾಗಿ ರಾಜ್ಯ ಸರ್ಕಾರ ಸಹಾಯವಾಣಿ ತೆರೆದಿದೆ. ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜತೆ ನಿಕಟ ಸಂಪರ್ಕದಲ್ಲಿದ್ದೇವೆ. ಕೇಂದ್ರದ ಸಹಾಯವಾಣಿ 080 22340676, 080 22253707 ಸಂಪರ್ಕಿಸಬಹುದು ಎಂದು ಸಿಎಂ ತಿಳಿಸಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧ ರೌಡಿಪಟ್ಟಿ ತೆರೆದಿರುವುದಕ್ಕೆ ರಾಜ್ಯ ಸರ್ಕಾರ ಸ್ಪಷ್ಟಿಕರಣ ನೀಡುವವರೆಗೂ ಉಪವಾಸ ಸತ್ಯಾಗ್ರಹ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದಿರುವ ಹಿಂದೂ ಪರ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಆತ್ಮಹತ್ಯೆ ಯತ್ನದ ಆರೋಪದಡಿ ಉಪ್ಪಾರಪೇಟೆ ಠಾಣೆಯ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ನಡೆಸುತ್ತಿರುವ ಮಾರ್ಚ್ 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಮಾತ್ರ ಖಾಸಗಿ ಅಭ್ಯರ್ಥಿಯಾಗಿ ನೊಂದಾಯಿಸಿಕೊಂಡು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡಲಾಗಿದೆ. ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದ ಹತ್ತಿರ ಇರುವ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಮಾತ್ರ ಖಾಸಗಿ ಅಭ್ಯರ್ಥಿಗಳಾಗಿ ನೊಂದಾಯಿಸಿಕೊಳ್ಳಲು ಸೂಚಿಸಿದೆ.
ಬೆಂಗಳೂರಿನಲ್ಲಿ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ ಶಂಕರ್ ನಾಗ್ ಬಸ್ ನಿಲ್ದಾಣದ ಆಟದ ಮೈದಾನದಲ್ಲಿ ನೃತ್ಯ ತರಗತಿಯಿಂದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಶಾಸಕ ಕೆ ಗೋಪಾಲಯ್ಯ ಪ್ರಮಾಣ ಪತ್ರ ವಿತರಿಸಿದರು. ಇದೇ ವೇಳೆ ಬಿ. ಡಿ. ಶ್ರೀನಿವಾಸ್, ನಿಸರ್ಗ ಜಗದೀಶ್, ಜಯಸಿಂಹ, ಸಿಮೆಂಟ್ ಶ್ರೀನಿವಾಸ್, ಅಕಾಡೆಮಿಯ ಶಿಕ್ಷಕ ಕೆ. ಎಂ. ಮಹೇಶ್ ಉಪಸ್ಥಿತರಿದ್ದರು.
ಹಮಾಸ್-ಇಸ್ರೇಲ್ ಯುದ್ಧದ ಮಧ್ಯೆ ಭಾರತೀಯ ಯಾತ್ರಿ ಗುಂಪನ್ನು ಮರಳಿ ಕರೆತರುವ ಪ್ರಯತ್ನಗಳು ಯಾತ್ರಿಗಳು ಸೇರಿದಂತೆ ಜನರನ್ನು ಕೈರೋಗೆ ಕರೆತರಲು ಪ್ರಯತ್ನಿಸುತ್ತಿದೆ. ಅವರನ್ನು ಈಜಿಪ್ಟ್ ನ ಗಡಿಯಾದ ತಬಾ ಮೂಲಕ ರಸ್ತೆಯ ಮೂಲಕ ಕೈರೋಗೆ ತರಲಾಗುತ್ತದೆ. ಇಸ್ರೇಲಿ ಪಡೆಗಳ ಬೆಂಗಾವಲಿನ ಅಡಿಯಲ್ಲಿ ಭಾರತೀಯ ಯಾತ್ರಿಕರ ಹಲವಾರು ಗುಂಪುಗಳು ತಬಾ ಗಡಿಯನ್ನು ದಾಟಿದವು. ತಬಾದಿಂದ ಕೈರೋ ತಲುಪಲು ಆರು ಗಂಟೆ ತೆಗೆದುಕೊಳ್ಳುತ್ತದೆ. ಪೆರುಂಬವೂರು ಮೂಲದ ಸಿಎಂ ಮೌಲವಿ ನೇತೃತ್ವದ 45 ಸದಸ್ಯರ ಗುಂಪು ಮೊದಲ ಬಾರಿಗೆ ಥಾಬಾ ಗಡಿ ದಾಟಿದೆ. ಮುಂಬೈನ 38 ಸದಸ್ಯರ ತಂಡವೂ ಥಾಬಾ ಗಡಿಯಿಂದ ಕೈರೋಗೆ ತೆರಳಿದೆ. ಇಸ್ರೇಲ್ ನಿಂದ ಭಾರತೀಯ ವಿದ್ಯಾರ್ಥಿಗಳು ಮತ್ತು ಪ್ರವಾಸಿಗರನ್ನು ಸುರಕ್ಷಿತವಾಗಿ ವಾಪಸ್ ಕರೆತರಲು ಭಾರತ ಪ್ರಯತ್ನಗಳನ್ನು ಆರಂಭಿಸಿದೆ. ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆದ ಪರಿಶೀಲನಾ ಸಭೆಯ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ. ಭಾರತೀಯ ವಾಯುಪಡೆಯ ವಿಮಾನಗಳನ್ನು ಬಳಸಿಕೊಂಡು ಅವರ ವಾಪಸಾತಿಯನ್ನು ಸಕ್ರಿಯಗೊಳಿಸಲು ಈ ಕ್ರಮವಾಗಿದೆ. ಇಂದು ಈ ಕುರಿತು ಮಹತ್ವದ ಚರ್ಚೆಗಳು ನಡೆಯಲಿವೆ. ಇಸ್ರೇಲ್…
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದ್ರೆಯ ನಡಿಗುಡ್ಡೆ ದರ್ಖಾಸ್ತು ಮನೆ ಕೆಸರ್ ಗದ್ದೆಯ, ಬೆಳುವಾಯಿ ಪಂಚಾಯತ್ ಮಂಗಳೂರು ತಾಲೂಕಿನ ಮನೆಯೊಂದರಲ್ಲಿ ವೃದ್ಧ ಹಾಗೂ ಅವರ ಪುತ್ರಿ ಸಂಕಷ್ಟದ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿರುವ ಬಗ್ಗೆ ನಮ್ಮತುಮಕೂರು ವಾಹಿನಿ ವರದಿ ಮಾಡಿದ ಬೆನ್ನಲ್ಲೇ ದಲಿತಪರ ಸಂಘಟನೆ ನೊಂದ ಕುಟುಂಬಸ್ಥರನ್ನ ಭೇಟಿ ಮಾಡಿ ಕುಟುಂಬಕ್ಕೆ ಧೈರ್ಯ ತುಂಬಿ, ಆರ್ಥಿಕ ಸಹಕಾರ ನೀಡಿದ್ದಾರೆ. ಈ ಕುಟುಂಬದ ಬಗ್ಗೆ ನಮ್ಮತುಮಕೂರು ಮಾಧ್ಯಮ ವರದಿ ಮಾಡಿದ ಬೆನ್ನಲ್ಲೇ ಸ್ಥಳೀಯ ಅಧಿಕಾರಿಗಳು ನೊಂದ ಕುಟುಂಬದ ಮನೆಗೆ ತೆರಳಿ ಸಮಸ್ಯೆ ಬಗೆ ಹರಿಸುವ ಭರವಸೆ ನೀಡಿದ್ದಾರೆ. ಆದರೆ ಈವರೆಗೆ ಯಾವುದೇ ಪರಿಹಾರ ಕ್ರಮಗಳು ಆಗಿಲ್ಲ. ಇನ್ನೊಂದೆಡೆ ನಮ್ಮತುಮಕೂರು ಪ್ರಸಾರ ಮಾಡಿದ ವರದಿ ಗಮನಿಸಿದ ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಮೂಡಬಿದ್ರಿ ತಾಲೂಕ್ ಸಮಿತಿ ನಡಿಗುಡ್ಡೆಗೆ ತೆರಳಿ ಸಂಕಷ್ಟದ ಸ್ಥಿತಿಯಲ್ಲಿರುವ ಸೋಮಯ್ಯ ಅವರ ಪುತ್ರಿ ಯಶೋಧ ಅವರನ್ನ ಭೇಟಿ ಮಾಡಿ ಧೈರ್ಯ ತುಂಬಿದ್ದು, ಆರ್ಥಿಕ ಸಹಾಯಹಸ್ತ ನೀಡಿದೆ. ಜೊತೆಗೆ ಕುಟುಂಬಕ್ಕೆ ಇನ್ನಷ್ಟು ನೆರವು…
ಏಕದಿನ ವಿಶ್ವಕಪ್ನ 5ನೇ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಿವೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಡೆಂಗಿ ಜ್ವರದಿಂದ ಬಳಲುತ್ತಿರುವ ಶುಭ್ ಮನ್ ಗಿಲ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಏಕದಿನ ಕ್ರಿಕೆಟ್ ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಇದುವರೆಗೆ 149 ಪಂದ್ಯಗಳನ್ನಾಡಿದೆ. ಈ ವೇಳೆ ಟೀಮ್ ಇಂಡಿಯಾ 56 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಆಸ್ಟ್ರೇಲಿಯಾ 83 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನು 10 ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿದೆ. ಅಂದರೆ ಒಟ್ಟಾರೆ ಅಂಕಿ ಅಂಶಗಳ ಪ್ರಕಾರ ಇಲ್ಲಿ ಆಸ್ಟ್ರೇಲಿಯಾ ತಂಡ ಮೇಲುಗೈ ಹೊಂದಿರುವುದು ಸ್ಪಷ್ಟ. ಇನ್ನು ಕೊನೆಯ 6 ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ಮೂರು ಪಂದ್ಯಗಳನ್ನು ಗೆದ್ದುಕೊಂಡಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಎರಡೂ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.