Subscribe to Updates
Get the latest creative news from FooBar about art, design and business.
- ಕನ್ನಡ ಸಾಹಿತ್ಯ ಸಮ್ಮೇಳನ ಕರುನಾಡ ಬೆಳವಣಿಗೆಗೆ ದಿಕ್ಸೂಚಿ: ಸಚಿವ ಡಾ.ಜಿ. ಪರಮೇಶ್ವರ್
- ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ
- ಎತ್ತಿನಹೊಳೆ ಯೋಜನೆ ಬಗ್ಗೆ ಅಸೂಯೆ: ಕೇಂದ್ರ ಸರ್ಕಾರದಿಂದ ಅಡ್ಡಿ: ಮುರಳೀಧರ ಹಾಲಪ್ಪ ಕಿಡಿ
- ತುರುವೇಕೆರೆ | ಕುಡಿಯುವ ನೀರಿಗಾಗಿ ಗ್ರಾಪಂ ಎದುರು ಪ್ರತಿಭಟನೆ
- ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ಖಂಡಿಸಿ ಅಂಬೇಡ್ಕರ್ ಸೇನೆ ಪ್ರತಿಭಟನೆ
- ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಬಾಳಲ್ಲಿ ದುರಂತ!
- ತುರುವೇಕೆರೆ ಪೊಲೀಸ್ ಠಾಣೆಗೆ ದಕ್ಷ IPS ಅಧಿಕಾರಿ ದಿ.ಡಾ.ಕೆ.ಮಧುಕರ್ ಶೆಟ್ಟಿ ಭಾವ ಚಿತ್ರ ಕೊಡುಗೆ
- ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಆಕ್ರೋಶ: ತುರುವೇಕೆರೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ತಡೆದು ಪ್ರತಿಭಟನೆ
Author: admin
ಸರಗೂರು: ಉತ್ತಮ ಸಮಾಜಕ್ಕಾಗಿ ಯಾವ ಮಗುವು ಶಿಕ್ಷಣದಿಂದ ವಂಚಿತರಾಗಬಾರದು. ಪಾಲಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು ಗೆಜ್ಜೆಗಾರ ಸಮಿತಿ ರಾಜ್ಯ ಕಾರ್ಯದರ್ಶಿ ಗೋಳೂರು ಸ್ನೇಕ್ ಬಸವರಾಜು ಎಂದರು. ತಾಲೂಕಿನ ಹಾದನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಂಗಳವಾರ ದಂದು ರಾಜ್ಯ ಗೆಜ್ಜೆಗಾರ ರಕ್ಷಣಾ ಸಮಿತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳಿಗೆ ಶಾಲೆಯ ಧ್ವನಿವರ್ಧಕ ಮತ್ತು ಕಲಿಕಾ ಸಾಮಗ್ರಿ ವಿತರಿಸಿ ಮಾತನಾಡಿದರು. ಅಭಿವೃದ್ಧಿಗಾಗಿ ಸರ್ಕಾರಿ ಶಾಲೆಗಳ ಬಲವರ್ಧನೆ ಮುಖ್ಯವಾದುದು. ಖಾಸಗಿ ಶಾಲೆಗಳಲ್ಲಿ ದೊರೆಯುವ ಎಲ್ಲಾ ಸೌಲಭ್ಯಗಳು ಸರ್ಕಾರಿ ಶಾಲೆಗಳಲ್ಲಿ ದೊರೆಯುವಂತಾಗಬೇಕು. ಇದರಿಂದ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಹೇಳಿದರು. ಗೆಜ್ಜೆಗಾರ ಸಮುದಾಯ ಆರ್ಥಿಕವಾಗಿ ಶೈಕ್ಷಣಿಕವಾಗಿ ರಾಜಕೀಯವಾಗಿ ತೀರಾ ಹಿಂದುಳಿದಿದ್ದರೂ, ಸಮಾಜ ಸೇವೆಯಲ್ಲಿ ತೊಡಗಿಕೊಳ್ಳಬೇಕು. ಈಗಿನ ಸಾಮಾಜಿಕ ಪಿಡುಗು ಮೂಢನಂಬಿಕೆ ಇದಕ್ಕೆಲ್ಲ ಮೂಲ ಕಾರಣ ಶಿಕ್ಷಣ ದೊರೆತರೆ ಎಲ್ಲಾ ದೊರೆತಂತೆ ಎಂದರು. ಉತ್ತಮ ಸಮಾಜಕ್ಕಾಗಿ ಯಾವ ಮಗುವು ಶಿಕ್ಷಣದಿಂದ ವಂಚಿತರಾಗಬಾರದು. ಪಾಲಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು…
ನವದೆಹಲಿ: ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಹೆಚ್ಚುವರಿಯಾಗಿ 423 ಎಕ್ರೆ ಅರಣ್ಯ ಬಳಕೆಗೆ ಅನುಮೋದನೆ ನೀಡಬೇಕೆಂಬ ಕರ್ನಾಟಕ ಸರ್ಕಾರದ ಕೇಂದ್ರ ಅರಣ್ಯ, ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಅನುಮತಿ ನೀಡಲು ನಿರಾಕರಿಸಿದೆ. ಗುರುತ್ವಾಕರ್ಷಣೆ ಕಾಲುವೆ ನಿರ್ಮಾಣಕ್ಕೆ ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ 432 ಎಕ್ರೆ ಅರಣ್ಯ ಬಳಕೆಗೆ ಒಪ್ಪಿಗೆ ನೀಡುವಂತೆ ಕೋರಿ ರಾಜ್ಯ ಸರ್ಕಾರವು ಪರಿಸರ ಸಚಿವಾಲಯಕ್ಕೆ ಮಾರ್ಚ್‌ನಲ್ಲಿ ಪ್ರಸ್ತಾವನೆ ಸಲ್ಲಿಸಿತ್ತು. ಸಚಿವಾಲಯದ ಡಿಐಜಿಎಫ್ ಪ್ರಣಿತಾ ಪೌಲ್ ನೇತೃತ್ವದ ಅಧಿಕಾರಿಗಳ ತಂಡವು ಯೋಜನಾ ಸ್ಥಳದಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿತ್ತು. ರಾಜ್ಯ ಸರ್ಕಾರವು ಲೋಪಗಳನ್ನು ಸರಿಪಡಿಸಿ ಸೂಕ್ತ ಸಮಜಾಯಿಷಿ ನೀಡಿದ ಬಳಿಕವೇ ಹೆಚ್ಚುವರಿ ಅರಣ್ಯ ಬಳಕೆಗೆ ಅನುಮೋದನೆ ನೀಡಬಹುದು ಎಂದು ಸಮಿತಿ ಶಿಫಾರಸು ಮಾಡಿತ್ತು. ನವದೆಹಲಿಯಲ್ಲಿ ಜೂನ್ 26ರಂದು ನಡೆದ ಸಲಹಾ ಸಮಿತಿಯ ಸಭೆಯಲ್ಲಿ ಈ ಯೋಜನೆಗೆ ಹೆಚ್ಚುವರಿ ಅರಣ್ಯ ಭೂಮಿ ನೀಡುವ ಬಗ್ಗೆ ಚರ್ಚೆ ನಡೆಯಿತು. ‘ಕೇಂದ್ರದಿಂದ ಅನುಮೋದನೆ ಪಡೆಯುವ ಮುನ್ನವೇ ಈ ಯೋಜನೆಗಾಗಿ ಅರಣ್ಯ ಭೂಮಿಯನ್ನು ಬಳಕೆ…
ಬೆಂಗಳೂರು: ಇಂದು ರಾಜ್ಯದಲ್ಲಿ ನಡೆದ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾವೇರಿಯಲ್ಲಿ ಲಾರಿ ಚಾಲಕ ಹೃದಯಾಘಾತಕ್ಕೆ ಬಲಿಯಾಗಿದ್ದರೆ, ಮಂಗಳೂರಿನಲ್ಲಿ ವಿದ್ಯಾರ್ಥಿ ಹೃದಘಾತಕ್ಕೆ ಬಲಿಯಾಗಿದ್ದಾನೆ. ಲಾರಿ ಚಾಲಕ ಬಲಿ: ಹಾವೇರಿ: ಏಕಾಏಕಿ ಎದೆನೋವು ಕಾಣಿಸಿಕೊಂಡು, ಲಾರಿ ಚಾಲಕ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಹಾವೇರಿಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಗ್ರಾಮದ ಬಳಿ ನಡೆದಿದೆ. ಬಾಬುರಾವ್ ಖಮ್ಮಟ್ (50) ಮೃತಪಟ್ಟ ಲಾರಿ ಚಾಲಕನಾಗಿದ್ದಾನೆ. ಚಾಲಕಮಹಾರಾಷ್ಟ್ರದ ಉಮ್ರಾವತಿ ಗ್ರಾಮದ ನಿವಾಸಿಯಾಗಿದ್ದಾನೆ. ಮಹಾರಾಷ್ಟ್ರದಿಂದ ಬೆಂಗಳೂರಿಗೆ ಗೂಡ್ಸ್ ಲಾರಿಯಲ್ಲಿ ಹೋಗುತ್ತಿದ್ದ ವೇಳೆ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಚಾಲಕನನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯ ರವಾನೆಗೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಲಾರಿ ಚಾಲಕ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿ ಬಲಿ: ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್ ನ ಕೃಷ್ಣಾಪುರ ಹಿಲ್‌ಸೈಡ್ ಬಳಿ ಸೋಮವಾರ…
ಬೀದರ್: ಲೋಕಸಭಾ ವ್ಯಾಪ್ತಿಯೊಳಗಿನ ನಗರ ಪ್ರದೇಶಗಳಲ್ಲಿ ವಾಸ ವಿರುವ ವಸತಿ ರಹಿತ ಅಥವಾ ನಿವೇಶನ ರಹಿತ ಕುಟುಂಬಗಳಿಂದ ಪ್ರಧಾನಮಂತ್ರಿ ಆವಾಸ ಯೋಜನೆ (ನಗರ) 2.0 ಯೋಜನೆ ಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದು ಕೊಳ್ಳಬೇಕು ಎಂದು ಸಂಸದ ಸಾಗರ್ ಖಂಡ್ರೆ ತಿಳಿಸಿದ್ದಾರೆ ಮನೆ ಎಂಬುದು ಪ್ರತಿಯೊಬ್ಬನೂ ಕನಸು ಕಾಣುವ ಮೂಲಭೂತ ಅಗತ್ಯ ಪಿಎಂಎವೈ (ನಗರ) 2.0 ಯೋಜನೆಯ ಮೂಲಕ ವಸತಿ ರಹಿತ ಕುಟುಂಬಗಳಿಗೆ ಶಾಶ್ವತ ಮನೆ ನೀಡುವ ಗುರಿ ಹೊಂದಲಾಗಿದ್ದು, ಬೀದರ್ ಲೋಕಸಭಾ ಕ್ಷೇತ್ರದ ಅರ್ಹರು ಈ ಯೋಜನೆಯ ಲಾಭವನ್ನು ಪಡೆಯಬೇಕು ಆಶಯವಾಗಿದೆ. ಯೋಜನೆಯ ಲಾಭ ಪಡೆಯಲು ಅರ್ಜಿದಾರರು ಈಗಾಗಲೇ ಯಾವುದೇ ರಾಜ್ಯ ಅಥವಾ ಕೇಂದ್ರ ಸರಕಾರದ ವಸತಿ ಯೋಜನೆಯಡಿ ಮನೆ ಸಹಾಯಧನ ಪಡೆದುಕೊಂಡಿರಬಾರದು. ಕುಟುಂಬದ ವಾರ್ಷಿಕ ಆದಾಯ 3 ಲಕ್ಷಕ್ಕಿಂತ ಕಡಿಮೆ ಇರಬೇಕು ಅರ್ಜಿ ಸಲ್ಲಿಕೆಗೆ ಜು.15 ಕೊನೆಯ ದಿನವಾಗಿದೆ. ಆಸಕ್ತರು ತಮ್ಮ ಸ್ಥಳೀಯ ನಗರ ಪಂಚಾಯಿತಿ/ ಮುನ್ಸಿಪಲ್ ಕಛೇರಿಯಲ್ಲಿ ಅರ್ಜಿ…
ಬೀದರ್ : ಮಾಂಜ್ರಾ ನದಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಮೃತಪಟ್ಟ ರೈತನ ಮನೆಗೆ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಪರಿಹಾರ ವಿತರಣೆ ಮಾಡಿದರು. ಮೃತನ ಕುಟುಂಬದ ಭೇಟಿ ಮಾಡಿದ ಅವರು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಕುಟುಂಬಸ್ಥರಿಗೆ ಸರಕಾರದಿಂದ ಅನುಮೋದಿಸಲಾದ 5 ಲಕ್ಷ ರೂ. ಪರಿಹಾರ ಧನದ ಚೆಕ್ ಹಸ್ತಾಂತರಿಸಿದರು. ಭಾಲ್ಕಿ ತಾಲ್ಲೂಕಿನ ಭಾಟಸಾಂಗವಿ ಗ್ರಾಮದ ರೈತ ನಾಮದೇವ್ ಝಳಕೆ (65) ಅವರು ಜು.3 ರಂದು ಮಾಂಜ್ರಾ ನದಿ ದಾಟುವಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದರು. ಜು. 5 ರಂದು ಅವರ ಮೃತದೇಹ ಪತ್ತೆಹಚ್ಚಲಾಗಿತ್ತು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಪುಣೆ: ನಗರದ ರೈಲ್ವೆ ನಿಲ್ದಾಣದಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅಪವಿತ್ರಗೊಳಿಸಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತ ಮಾನಸಿಕ ಅಸ್ವಸ್ಥ ಎಂದು ಶಂಕಿಸಲಾಗಿದೆ. ಘಟನೆಯ ನಂತರ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿದ್ದಾರೆ ಎನ್ನಲಾಗಿದೆ. ಆರೋಪಿಯನ್ನು ಸೂರಜ್ ಶುಕ್ಲಾ ಎಂದು ಗುರುತಿಸಲಾಗಿದ್ದು, ಆತ ಉತ್ತರ ಪ್ರದೇಶದ ವಾರಣಾಸಿ ಮೂಲದವನೆಂದು ಉಪ ಪೊಲೀಸ್ ಆಯುಕ್ತ (ವಲಯ 2) ಮಿಲಿಂದ್ ಮೋಹಿತೆ ತಿಳಿಸಿದ್ದಾರೆ. ವ್ಯಕ್ತಿಯ ಚೀಲದಲ್ಲಿ ಕೆಲವು ಧಾರ್ಮಿಕ ಪುಸ್ತಕಗಳು ಮತ್ತು ಕೈಯಲ್ಲಿ ಬಿಲ್‌ಹುಕ್ ಇತ್ತು ಮತ್ತು ಹರಿತವಾದ ಆಯುಧವನ್ನು ಬಳಸಿ ಪ್ರತಿಮೆಯನ್ನು ಅಪವಿತ್ರಗೊಳಿಸಲು ಪ್ರಯತ್ನಿಸುತ್ತಿದ್ದ. ಆದರೆ, ಸುತ್ತಮುತ್ತಲಿನ ಜನರು ಅವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಆರೋಪಿಯು ಪುಣೆಯ ವಿಶ್ರಾಂತವಾಡಿ ಪ್ರದೇಶದಲ್ಲಿ ವಾಸಿಸುತ್ತಿದ್ದು, ‘ರುದ್ರಾಕ್ಷ’ ಮಾರಾಟ ಮಾಡುತ್ತಿದ್ದ. ಸತಾರಾ ಜಿಲ್ಲೆಯ ವಾಯ್ ನಿಂದ ಹರಿತವಾದ ಆಯುಧವನ್ನು ಖರೀದಿಸಿದ ಬಳಿಕ ಕೃತ್ಯ ನಡೆಸಿದ್ದ ಅಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಶಿವಮೊಗ್ಗ: ಸಿದ್ದರಾಮಯ್ಯ ಅವರ ಆಡಳಿತ ವೈಖರಿಯ ಬಗ್ಗೆ ಆಡಳಿತ ಪಕ್ಷದ ಶಾಸಕರಿಗೇ ವಿಶ್ವಾಸವಿಲ್ಲದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 15 ಬಾರಿ ಬಜೆಟ್ ಮಂಡಿಸಿದ ಅನುಭವವಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಹಣಕಾಸು ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಅಭಿವೃದ್ಧಿ ಮಾತು ದೂರವಾಗಿದೆ. ಜೊತೆಗೆ ಮುಖ್ಯಮಂತ್ರಿ ಬದಲಾವಣೆಯ ಮಾತುಗಳೂ ಕೇಳಿ ಬಂದಿವೆ ಎಂದಿದ್ದಾರೆ. ಕಾನೂನು ಸುವ್ಯವಸ್ಥೆ ಕುಸಿದಿದೆ. ಮಂಗಳೂರು, ಶಿವಮೊಗ್ಗ ಸೇರಿದಂತೆ ಹಲವು ಕಡೆ ಅಹಿತಕರ ಘಟನೆಗಳು ನಡೆಯುತ್ತಿದ್ದರೂ, ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸುವುದಾಗಿ ಅವರು ಹೇಳಿದ್ದಾರೆ. ಹಾಸನ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಹೃದಯಾಘಾತದಿಂದ ಸಾವು ಸಂಭವಿಸುತ್ತಿದ್ದರೂ, ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡದಿರುವುದು ಖಂಡನಾರ್ಹ. ಇಂತಹ ಸೂಕ್ಷ್ಮ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ಜವಾಬ್ದಾರಿಯುತವಾಗಿ ವರ್ತಿಸಬೇಕಾಗಿದೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಬೀದರ್ : ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ ಎಲ್ಲಾ ನ್ಯಾಯಾಲಯಗಳಲ್ಲಿ ಡಾ.ಅಂಬೇಡ್ಕರ್ ಅವರ ಫೋಟೋ ಅಳವಡಿಸಬೇಕು ಎಂದು ಭಾರತೀಯ ದಲಿತ್ ಪ್ಯಾಂಥರ್ ಮನವಿ ಮಾಡಿದೆ. ಹುಮನಾಬಾದ್ ತಹಶೀಲ್ದಾರ್ ಅವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಕರ್ನಾಟಕ ಉಚ್ಚ ನ್ಯಾಯಾಲಯವು ಡಾ.ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವುದಕ್ಕಾಗಿ ಎಲ್ಲಾ ನ್ಯಾಯಾಲಯಗಳಲ್ಲಿ ಡಾ.ಅಂಬೇಡ್ಕರ್ ಅವರ ಫೋಟೋ ಅಳವಡಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೆ ಕೆಲವೊಂದು ನ್ಯಾಯಾಲಯಗಳಲ್ಲಿ ಡಾ.ಅಂಬೇಡ್ಕರ್ ಅವರ ಫೋಟೋ ಹಾಕಿರುವುದಿಲ್ಲ ಎಂದು ಆರೋಪಿಸಲಾಗಿದೆ. ಉಚ್ಚ ನ್ಯಾಯಾಲಯದ ಆದೇಶದಂತೆ ಡಾ.ಅಂಬೇಡ್ಕರ್ ಅವರ ಫೋಟೋ ಎಲ್ಲಾ ನ್ಯಾಯಾಲಯಗಳ ಜೊತೆಗೆ ಹುಮನಾಬಾದ್ ನ್ಯಾಯಾಲಯದಲ್ಲಿಯೂ ಕೂಡ ಹಾಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ. ಈ ಸಂದರ್ಭದಲ್ಲಿ ಭಾರತೀಯ ದಲಿತ್ ಪ್ಯಾಂಥರ್ ನ ತಾಲೂಕು ಅಧ್ಯಕ್ಷ ಗಣಪತಿ ಅಷ್ಟೂರೆ, ಉಪಾಧ್ಯಕ್ಷ ಸಿದ್ದಾರ್ಥ್ ಜಾನವೀರ್, ಸುನಿಲಕುಮಾರ್ ಭೋಲಾ, ವಿಶಾಲ್ ಸಿಂಧನಕೇರಾ, ಗೌತಮ್ ಜಾನವೀರ್, ಅನಂತ್ ಮಾಳಗೆ, ವಿಠಲ್ ಶಿವನಾಯಕ್, ಆಕಾಶ್, ದಶರಥ್ ದಾಂಡೇಕರ್, ರಾಹುಲ್, ಗೌತಮ್ ಮೊಳಕೇರಾ, ಮಾಣಿಕ್ ಮೇಟಿ ಹಾಗೂ ಸಾಗರ್ ಸೇರಿದಂತೆ…
ರಾಯಚೂರು: ಮೊಹರಂ ಆಚರಣೆ ವೇಳೆ ಅಗ್ನಿ ಕುಂಡದಲ್ಲಿ ಬಿದ್ದ ಯುವಕನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನಲ್ಲಿ ನಡೆದಿದೆ. ಹನುಮಂತ ಯರಗಂಟಿ (33) ಗಾಯಗೊಂಡ ಯುವಕನಾಗಿದ್ದು, ದರ್ಗಾದ ಮುಂದೆ ಕೆಂಡ ಹಾಯಲು ಸಿದ್ಧಪಡಿಸಲಾದ ಅಗ್ನಿ ಕುಂಡದಲ್ಲಿ ಕಟ್ಟಿಗೆಗಳನ್ನು ಹಾಕಿ ಬೆಂಕಿ ಹಚ್ಚಲಾಗಿತ್ತು. ಈ ವೇಳೆ ಹನುಮಂತ ಬೆಂಕಿಗೆ ಬಿದ್ದಿದ್ದಾನೆ. ಪರಿಣಾಮವಾಗಿ ಬೆಂಕಿಯಿಂದ ದೇಹ ಸುಟ್ಟು ಹೋಗಿದೆ. ತಕ್ಷಣ ಸ್ಥಳದಲ್ಲಿದ್ದವರು ಆತನ ನೆರವಿಗೆ ಧಾವಿಸಿದ್ದು, ರಕ್ಷಿಸಲು ಹರಸಾಹಸ ಪಟ್ಟಿದ್ದಾರೆ. ಬಳಿಕ ಗಾಯಾಳುವನ್ನು ಲಿಂಗಸೂಗೂರು ತಾಲೂಕ್ ಆಸ್ಪತ್ರೆಗೆ, ತದನಂತರ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆತ ಸಾವು- ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ ಎಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಮಂಡ್ಯ: ವಿಶ್ವೇಶ್ವರಯ್ಯ ಕಾಲುವೆಯ ಸೇತುವೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ. ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಮಧ್ಯಾಹ್ನ 2.30ರ ಸುಮಾರಿಗೆ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಬೈಕ್ ನಲ್ಲಿ ಇಬ್ಬರು ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದರು. ಸೇತುವೆ ದಾಟುವಾಗ ಸವಾರನ ನಿಯಂತ್ರಣ ತಪ್ಪಿ ಬೈಕ್ ರೇಲಿಂಗ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಇಬ್ಬರೂ ಕಾಲುವೆಗೆ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC