Subscribe to Updates
Get the latest creative news from FooBar about art, design and business.
- ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ
- ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ
- ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ
- ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!
- ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.
- ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ
- ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ
- ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು
Author: admin
ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರು ಯಾರು ಪ್ಲೆಕ್ಸ್, ಬ್ಯಾನರ್ ಹಾಕದಂತೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ. ಪ್ಲೆಕ್ಸ್, ಬ್ಯಾನರ್ ವಿಷಯವಾಗಿ ಬೆಂಗಳೂರು ಪದೇ ಪದೆ ಹೈಕೋರ್ಟ್ ಕೆಂಗಣ್ಣಿಗೆ ಗುರಿಯಾಗುತ್ತಿದ್ದು, ಈ ಮುಂಚೆ ಹೇಳಿದಂತೆ ಫೆಕ್ಸ್, ಬ್ಯಾನರ್ ಹಾಕಿದವವರಿಗೆ 50 ಸಾವಿರ ದಂಡ ವಿಧಿಸಲಾಗುವುದು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದೆ, ನಾವೇ ತಪ್ಪು ಸಂದೇಶ ರವಾನಿಸುವುದು ಬೇಡ. ಬೆಂಗಳೂರಿನ ಘನತೆ, ಗೌರವ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಡಿಕೆಶಿ ಹೇಳಿದರು.
ಬೆಂಗಳೂರು: ಖಾಸಗಿ ಬ್ಯಾಂಕೊಂದರಲ್ಲಿ ನಕಲಿ ಚಿನ್ನವನ್ನಿಟ್ಟು ಬರೋಬ್ಬರಿ 39 ಲಕ್ಷ ರೂ. ಸಾಲ ಪಡೆದು ವಂಚಿಸಿರುವ ಆರೋಪಿಗಾಗಿ ಅಶೋಕ ನಗರ ಠಾಣೆ ಪೊಲೀಸರು ಶೋಧ ಕೈಗೊಂಡಿದ್ದಾರೆ. ವ್ಯಕ್ತಿಯೊಬ್ಬ 3 ಪದರಗಳ ಒಂದು ಕೆಜಿ ಚಿನ್ನ ಲೇಪನದ ಒಡವೆ ಅಡವಿಟ್ಟು ಸಾಲ ಪಡೆದಿದ್ದ. ವಂಚಕ ಸಾಲ ಪಡೆದು ಎರಡು ತಿಂಗಳಾದರೂ ಬ್ಯಾಂಕ್ ಕಡೆ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಬ್ಯಾಂಕ್ ಸಿಬ್ಬಂದಿ ಒಡವೆ ಪರೀಕ್ಷಿಸಿದಾಗ ಆತ ಅಡವಿಟ್ಟಿರುವುದು ನಕಲಿ ಚಿನ್ನ ಎಂಬುವುದು ಗೊತ್ತಾಗಿದೆ.
ಬೆಂಗಳೂರು: ಮಾಜಿ ಪ್ರಿಯತಮೆಯ ಕಾಟಕ್ಕೆ ಬೇಸತ್ತ ಯುವಕನೊಬ್ಬ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ರಾಮಮೂರ್ತಿ ನಗರದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸಂತೋಷ್ ದೊಡ್ಡಮನಿ (28) ಆತ್ಮಹತ್ಯೆ ಮಾಡಿಕೊಂಡವನು. ಆತನ ಸಹೋದರ ಸುಭಾಷ್ ನೀಡಿದ ದೂರಿನನ್ವಯ ಇಬ್ಬರು ಯುವತಿಯ ವಿರುದ್ಧ ರಾಮಮೂರ್ತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರು-ಆರೋಗ್ಯ ಇಲಾಖೆಯಿಂದ ಹೊಸ ಕ್ಯೂ ಆರ್ ಕೋಡ್ ಬಿಡುಗಡೆಯಾಗಿದೆ. ಕ್ಯೂ ಆರ್ ಕೋಡ್ ಬಳಸಿ ಅಂಗಾಂಗ ದಾನ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ. ಅಂಗಾಂಗ ದಾನ ಮಾಡುವವರಿಗೆ ನೋಂದಣಿ ಇನ್ನಷ್ಟೂ ಸುಲಭವಾಗಿದೆ. ಹೊಸ ಆಲೋಚನೆಯೊಂದಿಗೆ ಇಲಾಖೆಯಿಂದ ಹೊಸ ಪ್ಲಾನ್ ನಡೆದಿದೆ. ಇನ್ಮುಂದೆ ಅಂಗಾಂಗ ದಾನ ಮಾಡಲು ಇಚ್ಚಿಸುವವರು ಆಸ್ಪತ್ರೆಗಳಿಗೆ ಸುತ್ತೋ ಹಾಗಿಲ್ಲ. ಕ್ಯೂ ಆರ್ ಕೋಡ್ ಮೂಲಕವೇ ದಾನಿಗಳಿಗೆ ನೋಂದಣಿಗೆ ಅವಕಾಶ ನೀಡಲಾಗಿದೆ. ನೋಟೊ ಗೆ ಲಿಂಕ್ ಆಗಿರುವ ಕ್ಯೂ ಆರ್ ಇಲಾಖೆ ಬಿಡುಗಡೆ ಮಾಡಿದೆ.
ಲಕ್ನೋ: ಆಟವಾಡುತ್ತಿದ್ದ ಬಾಲಕಿಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ನಡೆಸಿದ ವೃದ್ಧನೋರ್ವ ಪೊಲೀಸರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಫರೀದ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, 60 ವರ್ಷ ವಯಸ್ಸಿನ ಶೇಕ್ ಮೊಹಮ್ಮದ್ ಎಂಬಾತ ಕೃತ್ಯ ಎಸಗಿದ ವ್ಯಕ್ತಿಯಾಗಿದ್ದಾನೆ. ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕಿ ನಾಪತ್ತೆಯಾಗಿದ್ದು, ಹೀಗಾಗಿ ಆತಂಕಗೊಂಡ ಪೋಷಕರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮೊಹಮ್ಮದ್ ನ ಮನೆಯಲ್ಲಿ ಬಾಲಕಿಯನ್ನು ಬಲವಂತವಾಗಿ ಆರೋಪಿ ಅತ್ಯಾಚಾರ ಎಸಗುತ್ತಿರುವುದು ಕಂಡು ಬಂದಿದೆ. ಬಾಲಕಿಯು ರಕ್ತಸಿಕ್ತ ಸ್ಥಿತಿಯಲ್ಲಿರುವ ದೃಶ್ಯ ಪೋಷಕರನ್ನು ಬೆಚ್ಚಿಬೀಳಿಸಿದೆ. ಬಾಲಕಿಯ ಪೋಷಕರನ್ನು ಕಂಡ ಆರೋಪಿ ಸ್ಥಳದಿಂದ ಪರಾರಿಯಾಗಿದ್ದನು. ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಪೋಷಕರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಬಳಿಕ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಆರೋಪಿಗಾಗಿ ಶೋಧ ನಡೆಸಿದ ವೇಳೆ ಆರೋಪಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರ ಭೀತಿ ಅಥವಾ ತಾನು ಮಾಡಿದ ಕೃತ್ಯದ…
ಬೆಂಗಳೂರು: ನಮ್ಮದು ಮಹಿಳಾಪ್ರಿಯ ಸರ್ಕಾರ. ಕಾಂಗ್ರೆಸ್ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಮದ್ಯದಂಗಡಿಗಳಿಗೆ ಹೆಚ್ಚುವರಿ ಅನುಮತಿ ಕೊಡಲ್ಲ ಎಂಬ ಸಿಎಂ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರಿಗೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹೆಚ್ಚು ಅನುಮತಿ ಕೊಡುವುದಕ್ಕೆ ನಮ್ಮ ವಿರೋಧ ಇದೆ. ಮಹಿಳಾ ಸಬಲೀಕರಣಕ್ಕೆ ಇಷ್ಟೆಲ್ಲಾ ಒತ್ತು ಕೊಟ್ಟು ಇದರ ಮಧ್ಯೆ ಜನಸಂಖ್ಯೆ ಆಧಾರಿತವಾಗಿ ಮದ್ಯದಂಗಡಿ ಹೆಚ್ಚಳಕ್ಕೆ ಸರ್ಕಾರದ ಭಾಗವಾದರೂ ನಾನು ವಿರೋಧ ಇದ್ದೇನೆ ಎಂದರು. ಮಹಿಳೆಯರು ಕೂಡ ಇದನ್ನ ಇಷ್ಟಪಡಲ್ಲ. ನಮ್ಮದು ಮಹಿಳಾಪ್ರಿಯ ಸರ್ಕಾರ. ಕಾಂಗ್ರೆಸ್ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತದೆ. ಇಂತಹ ನಿರ್ಧಾರಕ್ಕೆ ನಮ್ಮ ವಿರೋಧ ಇದೆ. ಸಿಎಂ ನಿರ್ಧಾರಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಚಿತ್ರದುರ್ಗ: ಪ್ರೀತಿ ತಿರಸ್ಕರಿಸಿದ್ದಕ್ಕೆ ಪಾಗಲ್ ಪ್ರೇಮಿ ತನ್ನ ಪ್ರೇಯಸಿಯ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಚಿತ್ರದುರ್ಗ ತಾಲೂಕಿನ ಹುಲ್ಲೂರು ನಿವಾಸಿ ಅರ್ಪಿತಾ(19) ಹತ್ಯೆಯಾದ ಯುವತಿ. ಆರೋಪಿ ಅಜಯ್ ಅಕ್ಟೋಬರ್ 3ರಂದು ಆಟೋದಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಹಲ್ಲೆ ನಡೆಸಿ ಬಳಿಕ ಆಸ್ಪತ್ರೆಗೆ ಅಡ್ಮಿಟ್ ಮಾಡಿ ಎಸ್ಕೇಪ್ ಆಗಿದ್ದ. ತಲೆಗೆ ಪೆಟ್ಟು ಹಿನ್ನೆಲೆ ಬ್ರೈನ್ ಡೆಡ್‌ನಿಂದಾಗಿ ಯುವತಿ ಮೃತಪಟ್ಟಿದ್ದಾರೆ. ಚಿಕಿತ್ಸೆ ಫಲಿಸದೆ ನಿನ್ನೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಯುವತಿ ಕೊನೆಯುಸಿರೆಳಿದಿದ್ದಾಳೆ. ಹುಲ್ಲೂರು ಗ್ರಾಮದ ಚಾಲಕ ಅಜಯ್ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ. ಆರೋಪಿ ಅಜಯ್ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಪ್ರೀತಿಯನ್ನು ನಿರಾಕರಿಸಿದ್ದಳು. ಇದರಿಂದ ಕೋಪಗೊಂಡ ಅಜಯ್ ಯುವತಿಯನ್ನು ಅಪಹರಿಸಿ, ಗ್ರಾಮದ ಹೊರವಲಯಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಹಲ್ಲೆ ಮಾಡಿ ಬಳಿಕ ಆಸ್ಪತ್ರೆಗೆ ದಾಖಲಿಸಿದ್ದಾನೆ ಎನ್ನಲಾಗಿದೆ. ಯುವತಿ ಮೃತಪಟ್ಟಿದ್ದು ಯುವತಿ ಪೋಷಕರು ಚಿತ್ರದುರ್ಗ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಆರೋಪಿ ಅಜಯ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಸಿದ್ದರಾಮಯ್ಯ ಸರ್ಕಾರದಲ್ಲಿ ಯಾವ ಸಮುದಾಯಕ್ಕೂ ಅನ್ಯಾಯವಾಗಿಲ್ಲ ಎಂದು ಮೈಸೂರಿನ ಕಲಾಮಂದಿರದಲ್ಲಿ ನಡೆದ ಬಸವಜಯಂತಿ ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು. ನಮ್ಮ ಸರ್ಕಾರದಲ್ಲಿ ಯಾವ ಸಮುದಾಯದ ಕಡೆಗಣನೆಯೂ ಆಗಿಲ್ಲ. ಸಮುದಾಯವನ್ನು ಕಡೆಗಣಿಸುವುದಕ್ಕೆ ಸಿಎಂ ಅವಕಾಶವೂ ಕೊಡಲ್ಲ. ಈ ಮಾತನ್ನು ಎಲ್ಲರೂ ಸೂಕ್ಷ್ಮವಾಗಿ ಅರ್ಥ ಮಾಡಿಕೊಳ್ಳಿ. ಎಲ್ಲಾ ಯೋಜನೆಗಳು ಜಾತಿರಹಿತ ಸಮಾಜ ನಿರ್ಮಾಣಕ್ಕೆ ಪೂರಕವಾಗಿವೆ. ಸಿದ್ದರಾಮಯ್ಯ ಬಸವಣ್ಣನ ತತ್ವ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದಾರೆ.ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರವನ್ನು ಕಡ್ಡಾಯಗೊಳಿಸಿದ್ದಾರೆ ಎಂದರು.
ರಾಜ್ಯದಲ್ಲಿ ಹೊಸದಾಗಿ ಮದ್ಯದಂಗಡಿಗೆ ಅವಕಾಶವಿಲ್ಲ. ಡಿ.ಕೆ. ಶಿವಕುಮಾರ್ ಅವರದ್ದು ಅಭಿಪ್ರಾಯ ಅಷ್ಟೇ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಹೊಸ ಬಾರ್ ಲೈಸೆನ್ಸ್ ಕೊಡುವ ವಿಚಾರ ಸರ್ಕಾರದ ಮುಂದೆ ಸದ್ಯಕ್ಕೆ ಇಲ್ಲ. ಡಿ.ಕೆ ಶಿವಕುಮಾರ್ ಎಲ್ಲೂ ಕೂಡ ಹೊಸ ಲೈಸೆನ್ಸ್ ಕೊಡುತ್ತೇವೆ ಎಂದು ಹೇಳಿಲ್ಲ. ಸದ್ಯಕ್ಕೆ ಆ ವಿಚಾರದಲ್ಲಿ ಯಾವ ಚರ್ಚೆಗಳು ಬೇಡ. ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ ಹೊಸ ಲೈಸೆನ್ಸ್ ಇಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.
ಕಾಫಿನಾಡ ಕಳಸದಲ್ಲಿ ಅಪರೂಪದ ಬ್ಯಾಂಬೋ ಪಿಟ್ ವೈಫರ್ ಹಾವಿನ ಸೆರೆ ಹಿಡಿಯಲಾಗಿದೆ. ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಇದು ಕಂಡುಬರಲಿದ್ದು ಅಳಿವಿನಂಚಿನಲ್ಲಿದೆ. ತಲೆ ಮೇಲೆ ಬಿದ್ದ ನೀರನ್ನ ಹಾಗೇ ಹೀರಿಕೊಳ್ಳುವ ಅಪರೂಪದ ಉರಗ ಇದು. ಕಳಸ ತಾಲೂಕಿನ ಕಳಸೇಶ್ವರ ದೇವಸ್ಥಾನದ ಪಕ್ಕದ ಚಂದ್ರು ಭಟ್ ಮನೆಯ ಅಂಗಳದಲ್ಲಿ ಬ್ಯಾಂಬೋ ಪಿಟ್ ವೈಫರ್ ಕಂಡು ಬಂದಿದೆ. ಈ ಹಾವು ಕಡಿದರೆ ಸಾಯುವುದಿಲ್ಲ, ಮತ್ತಿನಲ್ಲಿದ್ದು, ಜ್ಞಾನ ತಪ್ಪುತ್ತಾರೆ.